Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಮುದ್ದೇಬಿಹಾಳ: ದೈಹಿಕ ಶಿಕ್ಷಕರನ್ನು ಸಹ ಶಿಕ್ಷಕರನ್ನಾಗಿ ಪರಿಗಣಿಸುವವೆರಗೂ ನಮ್ಮ ಹೋರಾಟ ನಿರಂತರವಾಗಿರಲಿದೆ ಎಂದು ದೈಹಿಕ ಶಿಕ್ಷಕ ಜಿ.ಎಂ.ಸಾಲಿಮಠ ಆಕ್ರೋಶ ಹೊರಹಾಕಿದರು.ಪಟ್ಟಣದ ಹುಡ್ಕೋ ಬಡಾವಣೆಯಲ್ಲಿರುವ ಚಿನ್ಮಯ ಜೆ.ಸಿ.ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಹಮ್ಮಿಕೊಳ್ಳಲಾದ ಪಶ್ಚಿಮ ವಲಯಮಟ್ಟದ ಪ್ರೌಢ ಶಾಲೆಗಳ ಕ್ರೀಡಾಕೂಟದಲ್ಲಿ ಮಾಧ್ಯಮದವರ ಎದುರು ತಮ್ಮ ಆಕ್ರೋಷವನ್ನು ಹೊರಹಾಕಿದರು.ಸತತ ೧೫ ವರ್ಷಗಳಿಂದ ದೈಹಿಕ ಶಿಕ್ಷಕರನ್ನು ಸಹ ಶಿಕ್ಷಕರನ್ನಾಗಿ ಪರಿಗಣಿಸಬೇಕು ಮತ್ತು ಸಹ ಶಿಕ್ಷಕರಿಗೆ ನೀಡಲಾದ ಎಲ್ಲ ಸೌಲಭ್ಯಗಳನ್ನು ದೈಹಿಕ ಶಿಕ್ಷಕರಿಗೂ ನೀಡಬೇಕು ಎಂದು ಹೋರಾಟಗಳು ನಡೆಯುತ್ತಿದ್ದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ನಮ್ಮ ಬೇಡಿಕೆಗಳು ಈಡೇರುವವರೆಗೂ ರಾಜ್ಯದಾದ್ಯಂತ ನಮ್ಮ ಹೋರಾಟ ನಿಲ್ಲದು ಎಂದರು.ಮತ್ತೋರ್ವ ದೈಹಿಕ ಶಿಕ್ಷಕ ಎ.ಸಿ.ಕೆರೂರ ಮಾತನಾಡಿ, ಸೇವೆಗೆ ಬಂದಾಗಿನಿಂದ ನಮ್ಮನ್ನ ದುಡಿಸಿಕೊಂಡು ದುಡಿಮೆಗೆ ತಕ್ಕ ಫಲ ಕೊಡುತ್ತಿಲ್ಲ. ಸಹ ಶಿಕ್ಷಕರು ಮತ್ತು ದೈಹಿಕ ಶಿಕ್ಷಕರ ದಿನನಿತ್ಯದ ಪರಿಶ್ರಮ ಸಮನಾಗಿದೆ. ಆದರೆ ಸೌಲಭ್ಯಗಳನ್ನು ನೀಡುವಲ್ಲಿ ನಮಗೆ ಕಡೆಗಣಿಸಲಾಗಿದೆ. ಈ ಧೋರಣೆ ಒಂದು ಕಣ್ಣಿಗೆ ಬೆಣ್ಣೆ ಇನ್ನೊಂದು ಕಣ್ಣಿಗೆ ಸುಣ್ಣ ಎಂಬಂತಾಗಿದೆ. ಈ ಬಗ್ಗೆ ಸಾಕಷ್ಟು ಬಾರಿ…
ಬಸವನಬಾಗೇವಾಡಿ: ಬಸವಕಲ್ಯಾಣ ಅನುಭವ ಮಂಟಪಕ್ಕೆ ಅನುದಾನ ನೀಡಿದಂತೆ ಬಸವ ಜನ್ಮ ಸ್ಥಳ ಬಸವನಬಾಗೇವಾಡಿಯ ಅಭಿವೃದ್ಧಿಗಾಗಿ ಕೇಂದ್ರದಿಂದ ಅನುದಾನ ನೀಡುವಂತೆ ಸಂಸತ್ತಿನಲ್ಲಿ ಧ್ವನಿ ಎತ್ತುವೆ ಎಂದು ಬೀದರ್ ಸಂಸದ ಸಾಗರ ಈಶ್ವರ ಖಂಡ್ರೆ ಹೇಳಿದರು.ಪಟ್ಟಣಕ್ಕೆ ಶುಕ್ರವಾರ ಪ್ರಥಮ ಬಾರಿಗೆ ಆಗಮಿಸಿದ ಅವರು ಮೂಲನಂದೀಶ್ವರ(ಬಸವೇಶ್ವರ) ದೇವಸ್ಥಾನ, ಬಸವಜನ್ಮ ಸ್ಮಾರಕಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದುಕೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕ್ಷೇತ್ರದ ಶಾಸಕ, ಸಚಿವ ಶಿವಾನಂದ ಪಾಟೀಲ ಅವರೊಂದಿಗೆ ಸಮಾಲೋಚನೆ ಮಾಡಿ ಇಲ್ಲಿ ಕೈಗೊಳ್ಳಬೇಕಾದ ಕಾರ್ಯಗಳಿಗೆ ಬೇಕಾದ ಅನುದಾನ ಕುರಿತು ಚರ್ಚಿಸಿ ಸಂಸತ್ತಿನಲ್ಲಿ ಇದರ ಬಗ್ಗೆ ಚರ್ಚಿಸುತ್ತೇನೆ ಎಂದರು.ಈ ಸಂದರ್ಭದಲ್ಲಿ ನಂದಿ ಸಕ್ಕರೆ ಕಾರ್ಖಾನೆಯ ನಿರ್ದೇಶಕ ಸತ್ಯಜೀತ ಪಾಟೀಲ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಹಾರಿವಾಳ, ಪ್ರಧಾನ ಕಾರ್ಯದರ್ಶಿ ರವಿ ರಾಠೋಡ, ರಾಷ್ಟ್ರೀಯ ಬಸವಸೈನ್ಯ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ, ಎಪಿಎಂಸಿ ಮಾಜಿ ಅಧ್ಯಕ್ಷ ಶೇಖರ ಗೊಳಸಂಗಿ, ಬಸವರಾಜ ಹಾರಿವಾಳ, ಬಸವರಾಜ ರಾಯಗೊಂಡ, ಸಂಗಮೇಶ ಓಲೇಕಾರ, ಜಟ್ಟಿಂಗರಾಯ ಮಾಲಗಾರ, ಪಿಂಟುಗೌಡ ಪಾಟೀಲ,…
ವಿಜಯಪುರ: ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಹಯೋಗದಲ್ಲಿ ಸೆಪ್ಟೆಂಬರ್ ೧೧ ಮತ್ತು ೧೨ರಂದು ಗ್ರಾಮೀಣ ಪತ್ರಕರ್ತರಿಗೆ ಮಕ್ಕಳ ವಿಷಯಗಳ ವರದಿಗಾರಿಕೆ ಕುರಿತು ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲು ಉದ್ದೇಶಿಸಿದೆ.ಈ ಕಾರ್ಯಾಗಾರದಲ್ಲಿ ಹಿರಿಯ ಪತ್ರಕರ್ತರು, ಮಕ್ಕಳ ತಜ್ಞರು, ಯುನಿಸೆಫ್ ಅಧಿಕಾರಿಗಳು ಮತ್ತು ಮಾಧ್ಯಮ ತಜ್ಞರು, ಮಾಧ್ಯಮ ಅಧ್ಯಯನ ವಿಭಾಗಗಳ ಅಧ್ಯಾಪಕರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ. ಈ ಕಾರ್ಯಾಗಾರದಲ್ಲಿ ವಿಜಯಪುರ, ಬಾಗಲಕೋಟೆ, ಬೆಳಗಾವಿ, ಕೊಪ್ಪಳ, ಕಲಬುರಗಿ ಮತ್ತಿತರ ಜಿಲ್ಲೆಗಳ ಪತ್ರಕರ್ತರು ಭಾಗವಹಿಸಬಹುದಾಗಿದೆ. ಆಸಕ್ತ ಪತ್ರಕರ್ತರು ತಮ್ಮ ಹೆಸರು, ಪತ್ರಿಕೆಯ ಹೆಸರು, ಪತ್ರಕರ್ತರಾಗಿ ಎಷ್ಟು ವರ್ಷಗಳ ಅನುಭವ, ಊರು, ಈಮೇಲ್ ವಿಳಾಸ ಹಾಗೂ ಮೊಬೈಲ್ ಸಂಖ್ಯೆ ಇಷ್ಟು ವಿವರಗಳನ್ನು ವಾಟ್ಸಾಪ್ ಮೂಲಕ ೯೪೮೧೩೬೪೫೨೬ ನಂಬರ್‌ಗೆ ಕಳುಹಿಸಬಹುದು ಎಂದು ವಿವಿ ಪ್ರಕಟಣೆ ತಿಳಿಸಿದೆ.ಹೈದ್ರಾಬಾದಿನ ಯುನಿಸೆಫ್ ಅಧಿಕಾರಿಗಳು ಈ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸುವವರ ಆಯ್ಕೆಯನ್ನು ಮಾಡಲಿದ್ದಾರೆ. ಆಯ್ಕೆಯಾದ ಪತ್ರಕರ್ತರಿಗೆ ವಿಜಯಪುರಕ್ಕೆ ಬಂದು ಹೋಗುವ ಬಸ್ ಚಾರ್ಜ್ ಮರುಪಾವತಿಸಲಾಗುವುದು. ಉಚಿತ ಊಟ ಮತ್ತು ವಸತಿ ವ್ಯವಸ್ಥೆ ಇರುತ್ತದೆ. ಆಯ್ಕೆಯಾದ ಪತ್ರಕರ್ತರಿಗೆ…
ವಿಜಯಪುರ: ಸಹಕಾರ ಸಂಘಗಳು ಕೃಷಿ ಕ್ಷೇತ್ರ ಹಾಗೂ ಜನ ಸಾಮಾನ್ಯರಿಗೆ ಅತ್ಯಂತ ಉಪಯುಕ್ತವಾಗಿದ್ದು, ಆರ್ಥಿಕ ಅಭಿವೃದ್ಧಿಯಲ್ಲಿ ಮಹತ್ತರ ಪಾತ್ರವನ್ನು ವಹಿಸುತ್ತವೆ ಎಂದು ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ವಿದ್ಯಾರ್ಥಿನಿ ಕ್ಷೇಮಪಾಲನ ನಿರ್ದೇಶನಾಲಯ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಇವರ ಸಹಯೋಹಗದಲ್ಲಿ ಗುರುವಾರ ಆಯೋಜಿಸಿದ್ದ ಸಹಕಾರ ತತ್ವದ ಕುರಿತ ಸ್ನಾತಕ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿನಿಯರಿಗೆ ಅಂತರ್ ಕಾಲೇಜು ಮಟ್ಟದ ಚರ್ಚಾ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಿ ಅವರು ಮಾತನಾಡಿದರು.ಗ್ರಾಮೀಣ ಜನರ ಅನೇಕ ಸಮಸ್ಯೆಗಳನ್ನು ನಿವಾರಿಸುವಲ್ಲಿ ಹಾಗೂ ಅವರ ಜೀವನ ಮಟ್ಟವನ್ನು ಅಭಿವೃದ್ಧಿಪಡಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಗಣನೀಯವಾಗಿದೆ ಎಂದರು.ಈ ಚರ್ಚಾ ಸ್ಪರ್ಧೆಯಲ್ಲಿ ಮುಧೋಳದ ದಾನಮ್ಮದೇವಿ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಿಳಾ ಮಹಾವಿದ್ಯಾಲಯದ ಸ್ನಾತಕ ವಿಭಾಗದ ವಿದ್ಯಾರ್ಥಿನಿ ದಾನೇಶ್ವರಿ ಅರಗಂಜಿ (ಪ್ರಥಮ ಸ್ಥಾನ), ಕಲಬುರ್ಗಿಯ ಶರಣೇಶ್ವರಿ ರೇಷ್ಮಿ ಮಹಿಳಾ ಮಹಾವಿದ್ಯಾಲಯ ಅನಿತಾ (ದ್ವಿತೀಯ ಸ್ಥಾನ) ಹಾಗೂ ಮಹಿಳಾ ವಿವಿಯ ಸ್ನಾತಕ ವಿಭಾಗದ…
ಬ್ರಹ್ಮದೇವನಮಡು: ಸಿಂದಗಿ ತಾಲೂಕಿನ ಸುಕ್ಷೇತ್ರ ಕರವಿನಾಳ ಗ್ರಾಮದಲ್ಲಿ ಗ್ರಾಮದೇವತೆ ಶ್ರೀದೇವಿ ಜಾತ್ರೆ ಶುಕ್ರವಾರ ಸಂಭ್ರಮದಿಂದ ನಡೆಯಿತು. ಬೆಳಗ್ಗೆ ಕುಂಭ ಮೆರವಣಿಗೆಯೊಂದಿಗೆ ಶ್ರೀದೇವಿಗೆ ಉಡಿ ತುಂಬುವ ಕಾಯ೯ಕ್ರಮ ಹಾಗೂ ರಥೋತ್ಸವ ಜರುಗಿತು.ಗ್ರಾಮದ ಶ್ರೀದೇವಿಯ ದೇವಸ್ಥಾನದಿಂದ ಗಂಗಾ ಸ್ಥಳಕ್ಕೆ ತೆರಳಿ ನಂತರ ಪ್ರಮುಖ ಬೀದಿಯಲ್ಲಿ ಡೊಳ್ಳಿನ ವಾಲಗ,ಕುಂಭ ಮೆರವಣಿಗೆ ಮೂಲ ದೇವಸ್ಥಾನಕ್ಕೆ ಬಂದು ತಲುಪಿತು. ಸಾವಿರಾರು ಭಕ್ತರು ಶ್ರೀದೇವಿ ಆಶೀ೯ವಾದ ಪಡೆದು ಪುನೀತರಾದರು. ಪ್ರಧಾನ ಅಚ೯ಕರಾದ ಈರಣ್ಣ ವಿಶ್ವಕಮ೯,ಮಾನಪ್ಪ ವಿಶ್ವಕಮ೯,ವಾಸುದೇವ ವಿಶ್ವಕಮ೯ ಇದ್ದರು. ಸಾವಿರಾರು ಭಕ್ತರಿಗೆ ಅನ್ನಪ್ರಸಾದದ ವ್ಶವಸ್ಥೆ ಮಾಡಲಾಗಿತ್ತು.ಜಾತ್ರೆಯಲ್ಲಿ ಸುತ್ತಮುತ್ತಲಿನ ಹಳ್ಳಿಗಳ ಭಕ್ತರು ಪಾಲ್ಗೊಂಡಿದ್ದರು.
ವಿಜಯಪುರ: ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ವತಿಯಿಂದ ಜಿಲ್ಲೆಯ ಆಹಾರ ಉತ್ಪಾದಕರು, ತಯಾರಕರು, ವಿತರಕರಿಗೆ ಪರವಾನಿಗೆ ಅಥವಾ ನೊಂದಣಿ (ರಜಿಸ್ಟೇಶನ್) ಅಭಿಯಾನ ೩೧ ರಂದು ಹಮ್ಮಿಕೊಳ್ಳಲಾಗಿದೆ.ಆಹಾರ ಉತ್ಪಾದಕರು, ವಿತರಕರು ಹಾಗೂ ಮಾರಾಟಗಾರರು ನಿರಂತರವಾಗಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯಿಂದ ಪರವಾನಿಗೆ ಅಥವಾ ನೊಂದಣಿ ಪಡೆಯುವುದು ಕಡ್ಡಾಯವಾಗಿದ್ದು, ಜಿಲ್ಲೆಯಾದ್ಯಂತ ಬೃಹತ್ ಸಂಖ್ಯೆ ಆಹಾರ ಉತ್ಪಾದಕರಿಗೆ ಪರವಾನಿ-ನೊಂದಣಿ ಮಾಡುವ ಉದ್ದೇಶದಿಂದ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಪರವಾನಿಗೆಗಾಗಿ ಆಧಾರ ಕಾರ್ಡ, ಫೊಟೋ, ವಿದ್ಯುತ್ ಬಿಲ್ಲ, ಜಿ.ಎಸ್.ಟಿ., ನಗರಸಭೆ ಪರವಾನಿಗೆ, ಪ್ಯಾನ ಕಾರ್ಡ, ಲ್ಯಾಬ ರಿಪೋರ್ಟ್ ಸೀಲು, ಹಾಗೂ ನೊಂದಣಿಗೆ ಆಧಾರ ಕಾರ್ಡ, ಫೋಟೋ, ವಿದ್ಯುತ್ ಬಿಲ್ಲ ಅಥವಾ ಬಾಡಿಗೆ ಒಪ್ಪಂದ ಪತ್ರ- ಉತಾರಿ ದಾಖಲೆಗಳೊಂದಿಗೆ ನೊಂದಣಿ ಮಾಡಿಸಿಕೊಳ್ಳಬಹುದಾಗಿದೆ.ಜಿಲ್ಲೆಯ ಆಹಾರ ಉತ್ಪಾದಕರು, ವಿತರಕರು ಹಾಗೂ ಮಾರಾಟಗಾರರು ಆನ್‌ಲೈನ್ ಮೂಲಕ ಅಥವಾ ಕಚೇರಿಗೆ ಭೇಟಿ ನೀಡುವ ಮೂಲಕ ಅಭಿಯಾನದ ಸದುಪಯೋಗ ಪಡೆದುಕೊಳ್ಳಬೇಕು. ಕಲಬೆರಕೆ ಆಹಾರ ಪದಾರ್ಥ ಮಾರಾಟ ಮಾಡುವವರ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು. ಈ ಕುರಿತಂತೆ…
ವಿಜಯಪುರ: ಜಿಲ್ಲೆಯ ಇಂಡಿ ತಾಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲು ಅರ್ಹ ವಕೀಲರಿಂದ ಅರ್ಜಿ ಆಹ್ವಾನಿಸಲಾಗಿದೆ.ಕರ್ನಾಟಕ ಕಾನೂನು ಅಧಿಕಾರಿಗಳ (ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳು ೧೯೭೭ ರ ನಿಯಮ೫ ಮತ್ತು ೨೬(೨) ಹಾಗೂ ೧೨(ಎ) (ಬಿ) ಮತ್ತು (ಸಿ) ರನ್ವಯ ೭ ವರ್ಷಗಳ ಕಾಲ ವಕೀಲ ವೃತ್ತಿಯನ್ನು ಪೂರೈಸಿದ ಅರ್ಹ ವಕೀಲರು ಸೆ.೦೬ ರೊಳಗೆ ಅವಶ್ಯಕ ಮಾಹಿತಿಯೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ವಿಜಯಪುರ: ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲು ಅರ್ಹ ವಕೀಲರಿಂದ ಅರ್ಜಿ ಆಹ್ವಾನಿಸಲಾಗಿದೆ.ಕರ್ನಾಟಕ ಕಾನೂನು ಅಧಿಕಾರಿಗಳ (ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳು ೧೯೭೭ ರ ನಿಯಮ೫ ಮತ್ತು ೨೬(೨) ಹಾಗೂ ೧೨(ಎ) (ಬಿ) ಮತ್ತು (ಸಿ) ರನ್ವಯ ೭ ವರ್ಷಗಳ ಕಾಲ ವಕೀಲ ವೃತ್ತಿಯನ್ನು ಪೂರೈಸಿದ ಅರ್ಹ ವಕೀಲರು ದಿನಾಂಕ : ೦೬-೦೯-೨೦೨೪ ರೊಳಗೆ ಅವಶ್ಯಕ ಮಾಹಿತಿಯೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ವಿವಿಧ ಗ್ರಾ.ಪಂ.ಗಳಿಗೆ ಭೇಟಿ ನೀಡಿದ ಜಿಪಂ ಸಿಇಓ ರಿಷಿ ಆನಂದ ಕಟ್ಟುನಿಟ್ಟಿನ ಸೂಚನೆ ವಿಜಯಪುರ: ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ರವರು ವಿಜಯಪುರ ತಾಲೂಕಿನ ಹೆಗಡಿಹಾಳ ಮತ್ತು ಹಿಟ್ಟಿನಹಳ್ಳಿ ಗ್ರಾಮ ಪಂಚಾಯತಿಗಳಿಗೆ ಭೇಟಿ ನೀಡಿ ವಿವಿಧ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು.ಶುಕ್ರವಾರ ಹೆಗಡಿಹಾಳ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಉಕುಮನಾಳ ಗ್ರಾಮದಲ್ಲಿ ಹೊಸ ಕಟ್ಟಡದ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಮಕ್ಕಳಿಗೆ ನಿಯಮಿತವಾಗಿ ಪೌಷ್ಠಿಕ ಆಹಾರ ಮತ್ತು ಪೀಠೋಪಕರಣ ಒದಗಿಸುವಂತೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಸೂಚಿಸಿದರು.ಹೆಗಡಿಹಾಳ ಗ್ರಾಮದ ಎಚ್.ಪಿ.ಎಸ್ ಶಾಲೆಗೆ ಭೇಟಿ ನೀಡಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಅನುಷ್ಠಾನಗೊಳಿಸಿದ ಕಾಮಗಾರಿಗಳ ಪರಿಶೀಲನೆ ನಡೆಸಿದರು.ಬಳಿಕ ಗ್ರಂಥಾಲಯ, ಅಂಗನವಾಡಿ ಕೇಂದ್ರ ಹಾಗೂ ಶಿಶು ಪಾಲನಾ ಕೇಂದ್ರಗಳಿಗೆ ಭೇಟಿ ನೀಡಿ, ಸ್ವಚ್ಛತೆ ಕಾಪಾಡಲು ಕಟ್ಟುನಿಟ್ಟಿನ ಸೂಚನೆ ನೀಡಿದರು.ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ಆಸ್ಪತ್ರೆಯಲ್ಲಿನ ವಿವಿಧ ದಾಖಲೆಗಳನ್ನು ಪರಿಶೀಲನೆ ನಡೆಸಿದರು.ಹಿಟ್ಟಿನಹಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಬರುವ ಸ್ಮಶಾನ…
ವಿಜಯಪುರ: ಪ್ರಸಕ್ತ ೨೦೨೪-೨೫ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಎನಿವೇರ್ ನೊಂದಣಿ ವ್ಯವಸ್ಥೆ ರಾಜ್ಯದ ಎಲ್ಲ ಜಿಲ್ಲೆಗಳಿಗೂ ವಿಸ್ತರಿಸಲಾಗುವುದೆಂದು ಸರ್ಕಾರದಿಂದ ಘೋಷಿಸಲಾಗಿದ್ದು, ಎನಿವೇರ್ ನೊಂದಣಿಯನ್ನು ವಿಜಯಪುರ ಜಿಲ್ಲೆಯ ಉಪ ನೊಂದಣಿ ಕಚೇರಿಗಳಿಗೂ ವಿಸ್ತರಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ತಿಳಿಸಿದ್ದಾರೆ.ಪ್ರಸ್ತುತ ಸಾರ್ವಜನಿಕರು ಸ್ಥಿರಾಸ್ತಿ ಇರುವ ವ್ಯಾಪ್ತಿಯ ಉಪ ನೋಂದಣಿ ಕಚೇರಿಯಲ್ಲಿ ಮಾತ್ರ ದಸ್ತಾವೇಜ್‌ನ್ನು ನೊಂದಣಿ ಮಾಡಲು ಅವಕಾಶವಿದು, ಅನಿವೇರ್ ವ್ಯವಸ್ಥೆಯಲ್ಲಿ ದಸ್ತಾವೇಜನ್ನು ಸ್ಥಿರಾಸ್ತಿ ಇರುವ ಜಿಲ್ಲೆಯ ಯಾವುದಾದರೂ ಉಪ ನೋಂದಣಿ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ.ಉದಾಹರಣೆಗಾಗಿ ವಿಜಯಪುರ ನಗರದ ಆಸ್ತಿಯನ್ನು ಮಾರಾಟ ಅಥವಾ ಖರೀದಿ ಮಾಡಲು ಜಿಲ್ಲೆಯ ಉಪ ನೋಂದಣಿ ಕಚೇರಿಗಳಾದ ವಿಜಯಪುರ, ಬಸವನಬಾಗೇವಾಡಿ, ಇಂಡಿ, ಸಿಂದಗಿ, ಮುದ್ದೇಬಿಹಾಳ ಮತ್ತು ತಿಕೋಟಾ ಉಪ ನೊಂದಣಿ ಕಚೇರಿಗಳ ಪೈಕಿ ಯಾವುದೇ ಉಪ ನೋಂದಣಿ ಕಚೇರಿಗಳಲ್ಲಿ ಆಸ್ತಿ ನೊಂದಣಿ ಪ್ರಕ್ರಿಯೆ ಮಾಡಿಕೊಳ್ಳಬಹುದಾಗಿರುತ್ತದೆ.ಸಾರ್ವಜನಿಕರು ಎನಿವೇರ್ ನೋಂದಣಿಯ ಸದುಪಯೋಗ ಪಡೆದುಕೊಂಡು ತಮಗೆ ಹತ್ತಿರದ ಅಥವಾ ನೋಂದಣಿಗೆ ಸ್ಲಾಟ್ ಲಭ್ಯವಿರುವಂತಹ ಕಚೇರಿ ಆಯ್ಕೆ ಮಾಡಿಕೊಂಡು ದಸ್ತಾವೇಜ್‌ನ್ನು ನೊಂದಾಯಿಸಿಕೊಳ್ಳುವಂತೆ ತಿಳಿಸಿದೆ ಎಂದು ಜಿಲ್ಲಾ…
