Author: editor.udayarashmi@gmail.com

ವಿಜಯಪುರ: ಜಿಲ್ಲಾ ಕೃಷಿ ತರಬೇತಿ ಕೇಂದ್ರದ ವತಿಯಿಂದ ಜುಲೈ ೮ ರಂದು ಮುದ್ದೇಬಿಹಾಳ ಹಾಗೂ ಜುಲೈ ೯ ರಂದು ಸಿಂದಗಿಯಲ್ಲಿ ‘ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿಯಲ್ಲಿ ಸೂಕ್ಷ್ಮ ನೀರಾವರಿ ಘಟಕದ ಅಳವಡಿಕೆ ಹಾಗೂ ನಿರ್ವಹಣೆ’ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಆಸಕ್ತ ರೈತರು ಭಾಗವಹಿಸಿ ತರಬೇತಿಯ ಸಂಪೂರ್ಣ ಮಾಹಿತಿ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ವಿಜಯಪುರ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಕೃಷಿ ಅಧಿಕಾರಿಗಳಾದ ಗೀತಾ ಭಜಂತ್ರಿ (ಮೋ: ೮೨೭೭೯೩೦೬೧೯) ಅವರನ್ನು ಸಂಪರ್ಕಿಸಬೇಕು ಎಂದು ವಿಜಯಪುರ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಉಪ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿಜಯಪುರ: ೨೦೨೪-೨೫ನೇ ಯ ಸಾಲಿನಲ್ಲಿ ನ್ಯಾಯಾಂಗ ಆಡಳಿತದಲ್ಲಿ ಕಾನೂನು ಪದವೀಧರರಿಗೆ ತರಬೇತಿಗಾಗಿ ಆಯ್ಕೆ ಮಾಡುವ ಸಲುವಾಗಿ ಹಿಂದುಳಿದ ವರ್ಗಗಳಿಗೆ ( ಪ್ರವರ್ಗ ೧, ೨(ಎ), ೩ (ಎ), ಹಾಗೂ ೩ (ಬಿ) ) ಸೇರಿದ ಕಾನೂನು ಪದವೀಧರರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಯ್ಕೆಗೊಂಡ ಅಭ್ಯರ್ಥಿಗಳಿಗೆ ಮಾಸಿಕ ೪,೦೦೦ ರೂ ಭತ್ಯಯನ್ನು ನೀಡಲಾಗುವುದು.ಅರ್ಜಿ ಸಲ್ಲಿಸಲು ಆಗಸ್ಟ ೧ ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಚೇರಿಯ ಉಪನಿರ್ದಶಕರು ಹಾಗೂ ಜಿಲ್ಲಾ ಮಟ್ಟದ ಕಾನೂನು ಪದವೀಧರರ ಆಯ್ಕೆ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿಜಯಪುರ: ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಜಿಲ್ಲೆಯ ಸಿಂದಗಿ ತಾಲೂಕ ಆಡಳಿತ ಭವನದಲ್ಲಿ ಜುಲೈ ೧೦ ರಂದು ಬೆಳಗ್ಗೆ ೧೧ ಗಂಟೆಯಿಂದ ಸಾರ್ವಜನಿಕ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.ಲೋಕಾಯುಕ್ತ ಪೊಲೀಸ್ ಅಧೀಕ್ಷಕರು (೯೩೬೪೦೬೨೫೨೮) ಉಪಾಧೀಕ್ಷಕರ (ಮೊ:೯೩೬೪೦೬೨೫೫೭), ಪೊಲೀಸ್ ಇನ್‌ಸ್ಪೆಕ್ಟರ್-೧ (ಮೊ:೯೩೬೪೦೬೨೬೪೦), ಪೊಲೀಸ್ ಇನ್‌ಸ್ಪೆಕ್ಟರ್-೨ (ಮೊ:೯೩೬೪೦೬೨೬೩೯) ಇವರು ಅಂದು ಬೆಳಿಗ್ಗೆ ೧೧ ಗಂಟೆಯಿಂದ ಸಾರ್ವಜನಿಕ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.ಅಹವಾಲು ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಭರ್ತಿ ಮಾಡಿದ ಮತ್ತು ನೋಟರಿಯಿಂದ ಅಫಿಡವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತವಾಗಿ ಕೆಲಸಗಳನ್ನು ಮಾಡಿಕೊಡುವಲ್ಲಿ ವಿಳಂಬ ಹಾಗೂ ಲಂಚದ ಬೇಡಿಕೆ ಇನ್ನಿತರೆ ತೊಂದರೆ ನೀಡುತ್ತಿರುವ ಅಧಿಕಾರಿ-ಸಿಬ್ಬಂದಿಗಳ ವಿರುದ್ದ ಸಾರ್ವಜನಿಕರು ದೂರುಗಳನ್ನು ನೀಡಬಹುದಾಗಿದೆ. ಸ್ಥಳದಲ್ಲಿ ಪರಿಹಾರ ಕಂಡುಕೊಳ್ಳಬಹುದಾದ ದೂರುಗಳನ್ನು ಅಲ್ಲಿನ ಸ್ಥಳೀಯ ಅಧಿಕಾರಿಗಳ ಸಹಯೋಗದಲ್ಲಿ ಇತ್ಯರ್ಥಪಡಿಸಲು ಪ್ರಯತ್ನಿಸಲಾಗುವುದು ಹಾಗೂ ಸರಕಾರಿ ಅಧಿಕಾರಿಗಳು ಅಕ್ರಮ ಆಸ್ತಿ ಸಂಪಾದನೆ, ಸರಕಾರಿ ಹಣದ ದುರುಪಯೋಗ, ಕಳಪೆ ಕಾಮಗಾರಿ ಹಾಗೂ ಇತರೆ ಯಾವುದೇ ರೀತಿಯ ದೂರುಗಳಿಗಾಗಿ ಕಚೇರಿ ದೂರವಾಣಿ: ೦೮೩೫೨-೨೫೫೩೩೩, ೨೫೭೭೮೬, ೨೯೫೦೭೪ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ಲೋಕಾಯುಕ್ತ…

Read More

ವಿಜಯಪುರ: ೨೦೨೫ನೇ ಸಾಲಿನ ಪದ್ಮಶ್ರೇಣಿಯ ಪ್ರಶಸ್ತಿಗಳಾದ ಪದ್ಮ ವಿಭೂಷಣ, ಪದ್ಮ ಭೂಷಣ ಮತ್ತು ಪದ್ಮಶ್ರೀ ಪ್ರಶಸ್ತಿಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಗೆ ಆಗಸ್ಟ್ ೩೧ ಕೊನೆಯ ದಿನವಾಗಿದೆ.ಸಾಮಾಜಿಕ ಕ್ಷೇತ್ರ, ಕಲೆ, ಸಾಹಿತ್ಯ, ಶಿಕ್ಷಣ, ಕ್ರೀಡೆ, ವೈದ್ಯಕೀಯ, ಸಮಾಜಸೇವೆ, ವಿಜ್ಞಾನ, ಸಾರ್ವಜನಿಕ ವ್ಯವಹಾರಗಳು, ನಾಗರೀಕ ಸೇವೆ, ವ್ಯಾಪಾರ ಮತ್ತು ಕೈಗಾರಿಕೆ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದವರು ಅರ್ಜಿ ಸಲ್ಲಿಸಬಹುದು. ಮಾಹಿತಿಗಾಗಿ http://padmaawards.gov.inವೀಕ್ಷಿಸಬಹುದಾಗಿದೆ.ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣ ಕಚೆರಿಯಿಂದ ಅರ್ಜಿ ನಮೂನೆ ಪಡೆದುಕೊಂಡು ನಿಗದಿತ ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸುವಂತೆಯೂ ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ: ೦೮೩೫೨-೨೫೧೦೮೫, ಮೊ: ೯೪೮೦೮೮೬೫೫೫ನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿಜಯಪುರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಕಲೆ, ಸಾಹಿತ್ಯ, ಸಂಗೀತ, ನೃತ್ಯ, ರಂಗಭೂಮಿ, ಜಾನಪದ, ಯಕ್ಷಗಾನ, ಬಯಲಾಟ, ಶಿಲ್ಪಕಲೆ ಕ್ಷೇತ್ರಗಳಲ್ಲಿ ೨೫ ವರ್ಷಗಳ ಕಾಲ ಗಣನೀಯ ಸೇವೆ ಸಲ್ಲಿಸಿ ಸಂಕಷ್ಟದಲ್ಲಿರುವ ಸಾಹಿತಿ, ಕಲಾವಿದರಿಗೆ ಮಾಶಾಸನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸುವವರು ಕನಿಷ್ಠ ೫೮ ವರ್ಷ ವಯೋಮಾನದವರಾಗಿರಬೇಕು. ವಿಕಲಚೇತನರಾಗಿದ್ದಲ್ಲಿ ೪೦ ವರ್ಷ ವಯೋಮಿತಿ ಹೊಂದಿರಬೇಕು. ಅರ್ಜಿ ಸಲ್ಲಿಸಲು ವಾರ್ಷಿಕ ಆದಾಯ ೧ ಲಕ್ಷ ರೂ. ಮಿತಿಯಿರಬೇಕು. ಅರ್ಜಿದಾರರು ಸರ್ಕಾರದ ಯಾವುದೇ ಇಲಾಖೆಯ ಮಾಶಾಸನ, ಪಿಂಚಣಿ ಯೋಜನೆಗಳ ಫಲಾನುಭವಿಗಳಾಗಿರಬಾರದು.ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದೂ.ಸ:೦೮೩೫೨-೨೫೧೨೬೧ ಸಂಪರ್ಕಿಸಬಹುದು ಅಥವಾ ಸಹಾಯಕ ನಿರ್ದೇಶಕರ ಕಚೇರಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಂದಗಲ್ ಶ್ರೀ ಹಣಮಂತರಾಯ ರಂಗಮಂದಿರ ಸ್ಟೇಶನ್ ರಸ್ತೆ ವಿಜಯಪುರ ಇವರಿಗೆ ಸಂಪರ್ಕಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿಜಯಪೂರ: ಭೂತನಾಳದ ಮೀನುಗಾರಿಕೆ ಸಂಶೋಧನಾ ಮತ್ತು ಮಾಹಿತಿ ಕೇಂದ್ರದಲ್ಲಿ ಜುಲೈ ೫ರಂದು ಕಟ್ಲಾ ಮತ್ತು ರೋಹು ಮೀನುಮರಿಗಳನ್ನು ತಲಾ ೧ ರೂಪಾಯಿಯಂತೆ ಮಾರಾಟ ಮಾಡಲಾಗುವುದು. ರೈತರು ಇದರ ಸದುಪಯೋಗ ಪಡೆದುಕೊಳ್ಳವಂತೆಯೂ, ಹೆಚ್ಚಿನ ಮಾಹಿತಿಗಾಗಿ ೦೮೩೫೨-೨೬೪೫೧೬, ೯೪೮೦೫೧೮೬೭೯, ೯೯೪೫೯೫೯೭೦೪ನ್ನು ಸಂಪರ್ಕಿಸಬಹುದು ಎಂದು ಮೀನುಗಾರಿಕೆ ಸಂಶೋಧನಾ ಮತ್ತು ಮಾಹಿತಿ ಕೇಂದ್ರದ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿಜಯಪುರ: ವಿಜಯಪುರ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಮುಳವಾಡ ಮಧ್ಯಂತರ ಪಂಪಿನ ಮನೆಯಿಂದ ಜಲನಗರ ಪಂಪಿನ ಮನೆಯವರೆಗೆ ಅಳವಡಿಸಿರುವ ೯೦೦ಎಂಎಂ ವ್ಯಾಸದ ಪಿಎಸ್‌ಸಿ ಮುಖ್ಯ ಏರು ಕೊಳವೆ ಮಾರ್ಗದ ಜೈನೇಜ್ ೩೬.೧೩೦ ಕಿ.ಮೀ. ಗುಮರಿ ಹಳ್ಳದ ಹತ್ತಿರ ಕೊಳವೆ ಮಾರ್ಗವು ಬರ್ಸ್ಟ್ ಆಗಿರುವುದರಿಂದ ತುರ್ತು ದುರಸ್ತಿ ಕಾಮಗಾರಿ ಜಲಮಂಡಳಿ ವತಿಯಿಂದ ಕೈಗೊಳ್ಳಲಾಗುತ್ತಿದೆ. ಜುಲೈ ೪ ರಂದು ವಿಜಯಪುರ ನಗರಕ್ಕೆ ಕೊಲ್ಹಾರ ಶುದ್ಧ ಕುಡಿಯುವ ಘಟಕದಿಂದ ನೀರು ಸರಬರಾಜಾಗುವ ಪ್ರದೇಶಗಳಿಗೆ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದ್ದು, ನಗರದ ಸಾರ್ವಜನಿಕರು ಜಲಮಂಡಳಿಯೊಂದಿಗೆ ಸಹಕರಿಸುವಂತೆ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ.

Read More

ಕನ್ನೊಳ್ಳಿ, ಗಬಸಾವಳಗಿ ಗ್ರಾ.ಪಂಗಳಿಗೆ ಭೇಟಿ ನೀಡಿದ ಜಿಪಂ, ಸಿಇಒ ರಿಷಿ ಆನಂದ ಅಧಿಕಾರಿಗಳಿಗೆ ಸೂಚನೆ ವಿಜಯಪುರ: ಗ್ರಾಮಪಂಚಾಯತಿಗಳಿಂದ ಪ್ರಸ್ತುತ ಶೇ.೪ ರಷ್ಟು ಮಾತ್ರ ತೆರಿಗೆ ಸಂಗ್ರಹಣೆಯಾಗಿದ್ದು, ಮುಂದಿನ ಒಂದು ವಾರದಲ್ಲಿ ಶೇ.೧೦ರಷ್ಟು ಗುರಿ ತೆರಿಗೆ ಸಂಗ್ರಹಿಸುವ ಗುರಿ ಸಾಧಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.ಬುಧವಾರ ಸಿಂದಗಿ ತಾಲೂಕಿನ ಕನ್ನೊಳ್ಳಿ ಹಾಗೂ ಆಲಮೇಲ ತಾಲೂಕಿನ ಗಬಸಾವಳಗಿ ಗ್ರಾಮ ಪಂಚಾಯತಿಗಳಿಗೆ ಭೇಟಿ ನೀಡಿ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದ ಅವರು, ಸಂಗ್ರಹವಾದ ತೆರಿಗೆಯಲ್ಲಿ ಶೇ.೬ರಷ್ಟು ಗ್ರಂಥಾಲಯಗಳಿಗೆ ಪುಸ್ತಕಗಳು ಹಾಗೂ ದಿನ ಪತ್ರಿಕೆಳಿಗೆ ಅನುದಾನ ಕಾಯ್ದಿರಿಸಬೇಕು. ಗ್ರಾಮದಲ್ಲಿ ಕುಡಿಯುವ ನೀರು ಇತರೆ ಮೂಲ ಸೌಕರ್ಯಗಳ ಸಮಸ್ಯೆಗಳನ್ನು ಪರಿಹರಿಸಬೇಕು. ತಮ್ಮ ನಿಯೋಜಿತ ಕಾರ್ಯಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ, ವಿವಿಧ ಯೋಜನೆಗಳ ಪ್ರಗತಿಯ ಗುರಿ ಸಾಧಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವಿವಿಧ ಯೋಜನೆಗಳಾದ ಮಹಾತ್ಮಗಾಂಧಿ ನರೇಗಾ ಯೋಜನೆ, ವಸತಿ ಯೋಜನೆ,…

Read More

ವಿಜಯಪುರ: ಜಿಲ್ಲೆಯ ವಿವಿಧ ತಾಲೂಕಾಸ್ಪತ್ರೆಗಳಲ್ಲಿ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ತಜ್ಞವೈಜ್ಞರ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ಒಂದು ವರ್ಷದ ಅವಧಿಗೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ನೇರ ಸಂದರ್ಶನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.ಜನರಲ್ ಮೆಡಿಸನ್ ೪, ಜನರಲ್ ಸರ್ಜನ್ ೧, ಚಿಕ್ಕಮಕ್ಕಳ ತಜ್ಞರು ೫, ಅರೆವಳಿಕೆ ತಜ್ಞರು ೪, ಸ್ತಿçÃರೋಗ ತಜ್ಞರು ೯, ನೇತ್ರ ರೋಗ ತಜ್ಞರು ೧, ಎಲುಬು ಮತ್ತು ಕೀಲು ತಜ್ಞರು ೨, ಕಿವಿ, ಮೂಗು ಮತ್ತು ಗಂಟಲು ತಜ್ಞರು ೨ ಹಾಗೂ ೩ ಚರ್ಮರೋಗ ತಜ್ಞವೈದ್ಯರನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಪ್ರತಿ ಮಾಹೆಯಾನ ೧,೩೦,೦೦೦ರೂ. ಸಂಚಿತ ವೇತನದ ಪಾವತಿಸಲಾಗುವುದು.ಆಸಕ್ತ ಅರ್ಹ ಅಭ್ಯರ್ಥಿಗಳು ಎಲ್ಲಾ ಶೈಕ್ಷಣಿಕ ಮೂಲ ಹಾಗೂ ಒಂದು ಪ್ರತಿ ಜೆರಾಕ್ಸ್ ದಾಖಲಾತಿಗಳೊಂದಿಗೆ ಪ್ರತಿ ಬುಧವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಬಸವರಾಜ…

Read More

ವಿಜಯಪುರ: ಪ್ಲಾಸ್ಟಿಕ್ ಬಳಕೆಯಿಂದ ಆಗುತ್ತಿರುವ ಅಡ್ಡಪರಿಣಾಮಗಳು ಹಾಗೂ ಈ ಬಗ್ಗೆ ಜಾಗೃತಿ ಮೂಡಿಸಲು ಪ್ರತಿ ವರ್ಷ ಜುಲೈ 3 ರಂದು ಅಂತಾರಾಷ್ಟ್ರೀಯ ಪ್ಲಾಸ್ಟಿಕ್ ಚೀಲ ಮುಕ್ತ ದಿನವನ್ನಾಗಿ ಆಚರಿಸಲಾಗುತ್ತಿದೆ.ಈ ನಿಮಿತ್ತ ತಾಲೂಕಿನ ನಾಗಠಾಣ ಗ್ರಾಮದಲ್ಲಿ ಮಕ್ಕಳಾದ ಅನುಶ್ರೀ, ಶ್ರೀನಿಧಿ, ದೀಪಾ, ಸಾಕ್ಷಿ, ಸಮೃದ್ಧಿ, ಪವಿತ್ರಾ, ಸಾನ್ವಿ,ಶಾಂತಮ್ಮ, ಉದಯ, ಭಾಗ್ಯಅವರು ಬಟ್ಟೆಯ ಚೀಲ ಪ್ರದರ್ಶಿಸಿ ಪ್ಲಾಸ್ಟಿಕ್ ಚೀಲ ಮುಕ್ತ ದಿನವನ್ನು ಆಚರಿಸಿ,ಜಾಗೃತಿ ಮೂಡಿಸಿದ್ದು ಗಮನ ಸೆಳೆಯಿತು.ಇಂದು ಮನುಷ್ಯನ ಜೀವನವು ಸಂಪೂರ್ಣ ಪ್ಲಾಸ್ಟಿಕ್ ಮಯವಾಗಿದೆ. ದಿನನಿತ್ಯವು ಒಂದಲ್ಲ ಒಂದು ರೀತಿಯಲ್ಲಿ ಪ್ಲಾಸ್ಟಿಕ್ ವಸ್ತುವಿನ ಬಳಕೆ ಮಾಡುತ್ತಿರುತ್ತೇವೆ.ನಾವು ಬಳಕೆ ಮಾಡಿ ಎಸೆಯುವ ಪ್ಲಾಸ್ಟಿಕ್ ಗಳು ಭೂಮಿಯಲ್ಲಿ ಕೊಳೆಯಲು ನೂರಾರು ವರ್ಷಗಳೇ ಬೇಕು. ಹೀಗಾಗಿ ಮಾಲಿನ್ಯದ ಪ್ರಮುಖ ಮೂಲವೇ ಇದಾಗಿರುವ ಕಾರಣ, ಪ್ರಾಣಿಗಳಿಗೂ ತೊಂದರೆಯೇ ಹೆಚ್ಚು. ಪೇಪರ್ ಬ್ಯಾಗ್​​​ಗಳು, ಮರುಬಳಕೆಯ ಹತ್ತಿ ಚೀಲಗಳ ಬಳಕೆಯ ಅಭ್ಯಾಸವನ್ನು ಪ್ರತಿಯೊಬ್ಬರು ರೂಢಿಸಿಕೊಂಡರೆ, ಪರಿಸರವನ್ನು ಮಾಲಿನ್ಯದಿಂದ ಮುಕ್ತ ಗೊಳಿಸಲು ಸಾಧ್ಯ.ಪ್ಲಾಸ್ಟಿಕ್ ಬಳಕೆ ವಿರುದ್ಧದ ಆಂದೋಲನ ಮೊದಲು ನಮ್ಮ ಮನೆಗಳಿಂದಲೇ ಆರಂಭವಾಗಬೇಕಿದೆ. ಅಂಗಡಿಗಳಿಗೆ…

Read More