Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಪಿಒಪಿ ಗಣೇಶ ವಿಗ್ರಹ ಬಳಕೆ ಮಾಡದಂತೆ ಸೂಚನೆ ವಿಜಯಪುರ: ಸರ್ಕಾರ ಪ್ಲಾಸ್ಟರ್ ಆಫ್ ಪ್ಯಾರಿಸ್‌ನಿಂದ ತಯಾರಿಸಿದ ಹಾಗೂ ರಾಸಾಯನಿಕ ಬಣ್ಣ ಗಣಪತಿ ವಿಗ್ರಹಗಳನ್ನು ಮಾರಾಟ ಮಾಡುವುದನ್ನು ಮತ್ತು ಯಾವುದೇ ಜಲಮೂಲಗಳಲ್ಲಿ ನದಿ, ಕಾಲುವೆ, ಭಾವಿಗಳಲ್ಲಿ ವಿಸರ್ಜಿಸುವುದು ಸಂಪೂರ್ಣವಾಗಿ ನಿಷೇಧಿಸಿದೆ.ವಿಜಯಪುರ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಸಹ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲು ಕೃತಕ ಹೊಂಡಗಳನ್ನು ಹಾಗೂ ಸಂಚಾರ ಗಣೇಶ ವಿಸರ್ಜನಾ ವಾಹನಗಳ ಸೇವೆಯನ್ನು ಒದಗಿಸಲಾಗುತ್ತಿದ್ದು, ಕೇವಲ ಪರಿಸರ ಸ್ನೇಹಿ ಗಣಪತಿ ವಿಗ್ರಹಗಳನ್ನು ಮಾತ್ರ ಬಳಸುವಂತೆ ಮನವಿ ಮಾಡಿಕೊಳ್ಳಲಾಗಿದೆ.ನಗರದ ಸಾರ್ವಜನಿಕರು ಯಾವುದೇ ವಿಗ್ರಹಗಳನ್ನು ನದಿ-ಕಾಲುವೆ-ಭಾವಿಗಳಲ್ಲಿ ವಿಸರ್ಜಿಸದೇ, ಪಾಲಿಕೆ ವತಿಯಿಂದ ನಿರ್ಮಿಸಲಾದ ಕೃತಕ ಹೊಂಡಗಳು ಮತ್ತು ಸಂಚಾರಿ ಗಣೇಶ ವಿಸರ್ಜನಾ ವಾಹನಗಳಲ್ಲಿ ಗಣೇಸ ವಿಸರ್ಜನೆ ಮಾಡಬೇಕು. ಒಂದು ವೇಳೆ ನಿಷೇಧಿತ ಪ್ಲಾಸ್ಟರ್ ಆಫ್ ಪ್ಯಾರಿನಿಂದ ಹಾಗೂ ರಾಸಾಯನಿಕ ಬಣ್ಣ ಲೇಪಿತ ವಿಗ್ರಹಗಳನ್ನು ತಯಾರಿಸುವುದು ಕಂಡು ಬಂದಲ್ಲಿ ಕಾನೂನುರಿತ್ಯ ಕ್ರಮ ವಹಿಸಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರ: ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮೀಣ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸಬೇಕು. ಎಲ್ಲ ಗ್ರಾಮಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾ.ಪಂ ಅಧ್ಯಕ್ಷರು, ಸರ್ವಸದಸ್ಯರು ಶ್ರಮ ವಹಿಸಬೇಕು ಎಂದು ವಿಜಯಪುರ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಸೂಚಿಸಿದ್ದಾರೆ.ಕೊಲ್ಹಾರ ತಾಲ್ಲೂಕಿನ ಕೂಡಗಿ, ಗ್ರಾಮ ಪಂಚಾಯಿತಿಗೆ ಆ.೨೮ರಂದು ಭೇಟಿ ನೀಡಿ ಎನ್‌ಟಿಪಿಸಿ ಯೋಜನೆಯಡಿಯಲ್ಲಿ ಕೈಗೊಳ್ಳಲಾಗಿರುವ ಕಾಮಗಾರಿಗಳನ್ನು ಪರಿಶೀಲನೆ ನಡೆಸಿ ಮಾತನಾಡಿದ ಅವರು, ಕೂಡಗಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಎನ್‌ಟಿಪಿಸಿ ಯೋಜನೆಗಳ ಸಮರ್ಪಕ ಅನುಷ್ಠಾನಗೊಳಿಸಬೇಕು. ಸರ್ಕಾರಿ ಶಾಲಾ ಕಟ್ಟಡ, ಚರಂಡಿ ನಿರ್ಮಾಣ, ಸಿ.ಸಿ.ರಸ್ತೆ, ಹೈಟೆಕ್ ಶೌಚಾಲಯ, ಆಟದ ಮೈದಾನ ಕಾಮಗಾರಿಗಳು ಸೇರಿದಂತೆ ಎಲ್ಲ ಕಾಮಗಾರಿಗಳು ಉತ್ತಮ ಗುಣಮಟ್ಟದಿಂದ ಕೂಡಿರಬೇಕು ಹಾಗೂ ತ್ವರಿತಗತಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸುವಲ್ಲಿ ಅಧಿಕಾರಿಗಳು ಗ್ರಾಮ ಪಂಚಾಯಿತಿ ಸರ್ವಸದಸ್ಯರು ಹೆಚ್ಚಿನ ಗಮನಹರಿಸುವಂತೆ ಅವರು ಹೇಳಿದರು.ಕೂಡಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೂಡಗಿ ತಾಂಡಾದ ವಾರ್ಡ್ ನಂ ೫ ರಲ್ಲಿರುವ ಸರ್ಕಾರಿ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ,…
ವಿಜಯಪುರ: ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಇ-ಆಡಳಿತದ ಸರ್ಕಾರದ ಕಾರ್ಯದರ್ಶಿಗಳಾದ ವಿಜಯಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಜ್ವಲ್‌ಕುಮಾರ್ ಘೋಷ ಅವರು ಆಗಸ್ಟ್ ೩೦ ಹಾಗೂ ೩೧ರಂದು ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.ಆ.೩೦ರಂದು ವಿಜಯಪುರಕ್ಕೆ ಆಗಮಿಸಿ ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಇಲಾಖೆಗಳ ವಸತಿ ನಿಲಯಗಳಿಗೆ ಭೇಟಿ ನೀಡುವರು. ಶಾಲೆ, ಕಾಲೇಜು ಹಾಗೂ ಐಟಿಐಗಳಿಗೆ ಭೇಟಿ ನೀಡಲಿದ್ದಾರೆ. ಜಿಲ್ಲೆಯಲ್ಲಿನ ಹಾಸ್ಟೇಲ್‌ಗಳು, ಆಸ್ಪತ್ರೆಗಳಿಗೆ, ಜಿಲ್ಲಾಧಿಕಾರಿ ಹಾಗೂ ಸಹಾಯಕ ಆಯುಕ್ತರ ಕಚೇರಿಗಳಿಗೆ ಭೇಟಿ ನೀಡಿ, ನಂತರ ಮುಂಗಾರು ಋತುವಿನ ವಿಪತ್ತು ನಿರ್ವಹಣಾ ಯೋಜನೆಯ ಪರಿಶೀಲನೆ ಹಾಗೂ ಇತರೆ ವಿಷಯಗಳ ಕುರಿತು ಚರ್ಚೆ ನಡೆಸಲಿದ್ದಾರೆ.ಆ.೩೧ರಂದು ಬೆಳಿಗ್ಗೆ ೧೦-೩೦ ರಿಂದ ೧-೩೦ರವರೆಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ, ವಿಜಯಪುರದಿಂದ ಹುಬ್ಬಳ್ಳಿ ಮೂಲಕ ಬೆಂಗಳೂರಿಗೆ ಮರು ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ವಿಜಯಪುರ: ನಗರದ ಬಿ. ಎಲ್. ಡಿ. ಈ ಡೀಮ್ಡ್ ವಿಶ್ವವಿದ್ಯಾನಿಲಯದ ಶ್ರೀ. ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜಿನ ಮಕ್ಕಳ ವೈದ್ಯ ಡಾ. ಎಂ. ಎಂ. ಪಾಟೀಲ ಮತ್ತು ಅವರ ತಂಡ ಬರೆದ “ತೊಳೆಯದ ದ್ರಾಕ್ಷಿ ಸೇವನೆಯಿಂದ ಉಂಟಾದ ವಿಷಪ್ರಭಾವ” ಎಂಬ ಮಹತ್ವದ ಲೇಖನ ವಿಶ್ವದ ಮಟ್ಟದಲ್ಲಿ ಪ್ರಸಿದ್ಧವಾದ ಬ್ರಿಟಿಷ್ ಮೆಡಿಕಲ್ ಜರ್ನಲ್ ಗ್ಲೋಬಲ್ ಹೆಲ್ತ್ ಕೇಸ್ ರಿಪೋರ್ಟ್ ನಲ್ಲಿ ಪ್ರಕಟವಾಗಿದೆ.ಈ ಲೇಖನವು ಗ್ರಾಮೀಣ ಪ್ರದೇಶಗಳಲ್ಲಿ ಕಂಡುಬರುವ ಒಂದು ಮುಖ್ಯ ಸಮಸ್ಯೆಯನ್ನು ಅತ್ಯಂತ ಪರಿಣಾಮಕಾರಿಯಾಗಿ ಬೆಳಕಿಗೆ ತಂದಿದೆ. ದ್ರಾಕ್ಷಿಯನ್ನು ತಿನ್ನುವ ಮುನ್ನ ಅದನ್ನು ಸ್ವಚ್ಛಗೊಳಿಸದೆ ಇರುವುದರಿಂದ ಉಂಟಾಗುವ ಸಮಸ್ಯೆಗಳು ವಿಶೇಷವಾಗಿ ರಾಸಾಯನಿಕ ಕೀಟನಾಶಕಗಳಿಂದ ಎದುರಾಗುವ ಅಪಾಯಗಳ ಕುರಿತು ಈ ಲೇಖನ ಸಂಪೂರ್ಣ ಮಾಹಿತಿ ಹೊಂದಿದೆ. ಗ್ರಾಮೀಣ ಭಾಗದ ಮಕ್ಕಳು ಎದುರಿಸುವ ಹಾನಿಕಾರ ಸಮಸ್ಯೆಗಳಿಗೆ ಒಳಗಾಗುವುದನ್ನು ಹೇಗೆ ತಪ್ಪಿಸಬಹುದು ಎಂಬುದರ ಕುರಿತು ಕೂಡ ಈ ಲೇಖನದಲ್ಲಿ ಮಾಹಿತಿ ನೀಡಲಾಗಿದೆ.ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ಶಿಕ್ಷಣದ ಕೊರತೆ ಎಷ್ಟು ಗಂಭೀರವಾಗಿದೆ ಎಂಬುದನ್ನು ಈ ಲೇಖನದಲ್ಲಿ ಎತ್ತಿ…
ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎವಿಎಸ್ ಆಯುರ್ವೇದ ಕಾಲೇಜಿನ ವಿದ್ಯಾರ್ಥಿನಿಯರು ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ನಡೆದ ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಕಲಬುರಗಿ ವಲಯ ಮಟ್ಟದ ಚೆಸ್ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನ ಗಳಿಸುವ ಮೂಲಕ ಕಾಲೇಜಿಗೆ ಹಾಗೂ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.ಆಗಷ್ಟ 25 ರಂದು ರವಿವಾರ ಜಮಖಂಡಿಯ ಬಿ.ಎಲ್.ಡಿ.ಇ ಸಂಸ್ಥೆಯ ನರ್ಸಿಂಗ್ ಕಾಲೇಜಿನಲ್ಲಿ ಕಲಬುರಗಿ ವಲಯ ಮಟ್ಟದ ಚೆಸ್ ಪಂದ್ಯಾವಳಿ ಆಯೋಜಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯದ ವಿದ್ಯಾರ್ಥಿನಿಯರಾದ ಲಾವಣ್ಯ ತೊಗರಿ, ದೀಪ್ತಿ ಮಂಗಳಗಿ, ಗೀತಾಂಜಲಿ ಮೂದನೂರ, ಸಾನಿಕಾ ದೇಶಪಾಂಡೆ ದ್ವಿತಿಯ ಸ್ಥಾನ ಗಳಸಿದ್ದಾರೆ.ವಿದ್ಯಾರ್ಥಿನಿಯರ ಸಾಧನೆಗೆ ಕಾಲೇಜಿನ ಪ್ರಾಚಾರ್ಯರಾದ ಡಾ. ಸಂಜಯ ಕಡ್ಲಿಮಟ್ಟಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ. ಬಿ. ಎಂ. ಪಾಟೀಲ್ ನರ್ಸಿಂಗ್ ಕಾಲೇಜಿನಲ್ಲಿ ಆಗಷ್ಟ 30 ಮತ್ತು ಆಗಷ್ಟ 31 ರಂದು ರಾಜೀವ್ ಗಾಂಧಿ ಆರೋಗ್ಯ ವಿಶ್ವವಿಧ್ಯಾಲಯದ ಕಲಬುರಗಿ ವಲಯ ಮಟ್ಟದ ಬಾಲಕರ ಕಬ್ಬಡ್ಡಿ ಪಂದ್ಯಾವಳಿ ನಡೆಯಲಿದೆ.ಆಗಷ್ಟ 30 ರಂದು ಬೆಳಿಗ್ಗೆ 9.30 ಗಂಟೆಗೆ ಪ್ರಾರಂಭವಾಗಲಿರುವ ಪಂದ್ಯಾವಳಿಗೆ ಬಿ.ಎಲ್.ಡಿ.ಇ ಸಂಸ್ಥೆಯ ಮುಖ್ಯ ಸಲಹೆಗಾರ ಮತ್ತು ಡೀಮ್ಡ್ ವಿಶ್ವವಿದ್ಯಾಲಯದ ರಜಿಸ್ಟ್ರಾರ್ ಡಾ. ಆರ್. ವಿ. ಕುಲಕರ್ಣಿ ಚಾಲನೆ ನೀಡಲಿದ್ದಾರೆ.ಆಗಷ್ಟ್ 31 ರಂದು ಸಂಜೆ 4 ಗಂಟೆಗೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಬಿ.ಎಲ್.ಡಿ.ಇ ಸಂಸ್ಥೆಯ ಆಡಳಿತಾಧಿಕಾರಿ ಐ. ಎಸ್. ಕಾಳಪ್ಪನವರ ಬಹುಮಾನ ವಿತರಿಸಲಿದ್ದಾರೆ.ರಾಜೀವ್ ಗಾಂಧಿ ಆರೋಗ್ಯ ವಿಶ್ವವಿಧ್ಯಾಲಯದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕಾಲೇಜುಗಳ ಕಬಡ್ಡಿ ತಂಡಗಳು ಈ ಪಂದ್ಯಾವಳಿಯಲ್ಲಿ ಪಾಲ್ಗೋಳ್ಳಲಿವೆ ಎಂದು ಕಾಲೇಜಿನ ಪ್ರಾಚಾರ್ಯ ಡಾ. ಶಾಲ್ಮೋನ್ ಚೋಪಡೆ ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ. ಬಿ. ಎಂ. ಪಾಟೀಲ್ ನರ್ಸಿಂಗ್ ಕಾಲೇಜಿನಲ್ಲಿ ಆಗಷ್ಟ 30 ಮತ್ತು ಆಗಷ್ಟ 31 ರಂದು ರಾಜೀವ್ ಗಾಂಧಿ ಆರೋಗ್ಯ ವಿಶ್ವವಿಧ್ಯಾಲಯದ ಕಲಬುರಗಿ ವಲಯ ಮಟ್ಟದ ಬಾಲಕರ ಕಬ್ಬಡ್ಡಿ ಪಂದ್ಯಾವಳಿ ನಡೆಯಲಿದೆ.ಆಗಷ್ಟ 30 ರಂದು ಬೆಳಿಗ್ಗೆ 9.30 ಗಂಟೆಗೆ ಪ್ರಾರಂಭವಾಗಲಿರುವ ಪಂದ್ಯಾವಳಿಗೆ ಬಿ.ಎಲ್.ಡಿ.ಇ ಸಂಸ್ಥೆಯ ಮುಖ್ಯ ಸಲಹೆಗಾರ ಮತ್ತು ಡೀಮ್ಡ್ ವಿಶ್ವವಿದ್ಯಾಲಯದ ರಜಿಸ್ಟ್ರಾರ್ ಡಾ. ಆರ್. ವಿ. ಕುಲಕರ್ಣಿ ಚಾಲನೆ ನೀಡಲಿದ್ದಾರೆ.ಆಗಷ್ಟ್ 31 ರಂದು ಸಂಜೆ 4 ಗಂಟೆಗೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಬಿ.ಎಲ್.ಡಿ.ಇ ಸಂಸ್ಥೆಯ ಆಡಳಿತಾಧಿಕಾರಿ ಐ. ಎಸ್. ಕಾಳಪ್ಪನವರ ಬಹುಮಾನ ವಿತರಿಸಲಿದ್ದಾರೆ.ರಾಜೀವ್ ಗಾಂಧಿ ಆರೋಗ್ಯ ವಿಶ್ವವಿಧ್ಯಾಲಯದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕಾಲೇಜುಗಳ ಕಬಡ್ಡಿ ತಂಡಗಳು ಈ ಪಂದ್ಯಾವಳಿಯಲ್ಲಿ ಪಾಲ್ಗೋಳ್ಳಲಿವೆ ಎಂದು ಕಾಲೇಜಿನ ಪ್ರಾಚಾರ್ಯ ಡಾ. ಶಾಲ್ಮೋನ್ ಚೋಪಡೆ ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎವಿಎಸ್ ಆಯುರ್ವೇದ ಕಾಲೇಜಿನ ವಿದ್ಯಾರ್ಥಿನಿಯರು ಕಲಬುರಗಿಯಲ್ಲಿ ನಡೆದ ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಕಲಬುರಗಿ ವಲಯ ಮಟ್ಟದ ಮಹಿಳಾ ಟೇಬಲ್ ಟೆನಿಸ್ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನ ಗಳಿಸುವ ಮೂಲಕ ಕಾಲೇಜು ಮತ್ತು ಜಿಲ್ಲೆಗೆ ಕೀರ್ತಿ ತಂದಿದ್ದಾರೆ.ಆಗಷ್ಟ 27 ರಂದು ಮಂಗಳವಾರ ಕಲಬುರಗಿಯ ಟಿಪ್ಪು ಸುಲ್ತಾನ ಯುನಾನಿ ಮೆಡಿಕಲ್ ಕಾಲೇಜಿನಲ್ಲಿ ನಡೆದ ಈ ಪಂದ್ಯಾವಳಿಯಲ್ಲಿ ಬಿ.ಎಲ್.ಡಿ.ಇ ಸಂಸ್ಥೆಯ ಎವಿಎಸ್ ಆಯುರ್ವೇದ ಕಾಲೇಜಿನ ವಿದ್ಯಾರ್ಥಿನಿಯರಾದ ಪೃಥ್ವಿ ಸಿದರೆಡ್ಡಿ, ಶ್ರೇಯಾ ರೆಡ್ಡಿ, ಅರ್ಪಿತಾ ದೇಶಪಾಂಡೆ ದ್ವಿತಿಯ ಸ್ಥಾನ ಗಳಸಿದ್ದಾರೆ.ವಿದ್ಯಾರ್ಥಿಗಳ ಈ ಸಾಧನೆಯನ್ನು ಕಾಲೇಜಿನ ಪ್ರಾಚಾರ್ಯ ಡಾ. ಸಂಜಯ ಕಡ್ಲಿಮಟ್ಟಿ, ದೈಹಿಕ ನಿರ್ದೇಶಕ ಹಣಮಂತ ಪವಾರ, ಬೋಧಕ, ಬೋಧಕರ ಹೊರತಾದ ಸಿಬ್ಬಂದಿ ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.
ವಿಜಯಪುರ: ಬಿ.ಎಲ್.ಡಿ.ಇ ಸಂಸ್ಥೆಯ ಎವಿಎಸ್ ಆಯುರ್ವೇದ ಕಾಲೇಜಿನ ವಿದ್ಯಾರ್ಥಿಗಳು ಆಗಷ್ಟ 27 ರಂದು ಮಂಗಳವಾರ ಕಲಬುರಗಿಯಲ್ಲಿ ನಡೆದ ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಕಲಬುರಗಿ ವಲಯ ಮಟ್ಟದ ಪುರುಷರ ಟೇಬಲ್ ಟೆನಿಸ್ ಪಂದ್ಯಾವಳಿಯಲ್ಲಿ ತೃತಿಯ ಸ್ಥಾನ ಗಳಿಸಿದ್ದಾರೆ.ಕಲಬುರಗಿಯ ಸುಲ್ತಾನ ಯುನಾನಿ ಮೆಡಿಕಲ್ ಕಾಲೇಜಿನಲ್ಲಿ ನಡೆದ ಈ ಪಂದ್ಯಾವಳಿಯಲ್ಲಿ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಕಾಲೇಜಿನ ವಿದ್ಯಾರ್ಥಿಗಳಾದ ಪ್ರಜ್ವಲ ಖುಣೆ, ಸುಮಿತ ದಾಯಗೊಂಡೆ, ಅಜಯಸಿಂಗ್ ರಾಠೋಡ ತೃತಿಯ ಸ್ಥಾನ ಗಳಸಿದ್ದಾರೆ.ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಪ್ರಾಚಾರ್ಯ ಡಾ.ಸಂಜಯ ಕಡ್ಲಿಮಟ್ಟಿ, ದೈಹಿಕ ನಿರ್ದೇಶಕ ಹಣಮಂತ ಪವಾರ, ಬೋಧಕ, ಬೋಧಕರ ಹೊರತಾದ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.
ವಿಜಯಪುರ: ನಗರದ ದರ್ಬಾರ ಆಟದ ಮೈದಾನದಲ್ಲಿ ಬುಧವಾರದಂದು ನಡೆದ ಸಿದ್ದೇಶ್ವರ ‘ಬಿ’ ವಲಯ ಮಟ್ಟದ ಪ್ರೌಢ ಶಾಲಾ ಗುಂಪು ಆಟಗಳ ಕ್ರೀಡಾಕೂಟದಲ್ಲಿ ಬಂಜಾರಾ ಪ್ರೌಢ ಶಾಲಾ ವಿದ್ಯಾರ್ಥಿಗಳು ಬಾಲಕರ ಖೋ ಖೋ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದುಕೊಂಡು ತಾಲೂಕಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಡಿ.ಎಲ್.ಚವ್ಹಾಣ್, ಕಾರ್ಯಾಧ್ಯಕ್ಷರಾದ ಕೆ.ಜಿ.ರಾಠೋಡ, ಕಾರ್ಯದರ್ಶಿಗಳಾದ ರಾಜಶೇಖರ ಚವ್ಹಾಣ್, ಶಾಲೆಯ ಮುಖ್ಯ ಗುರುಗಳಾದ ಇ.ಡಿ.ಲಮಾಣಿ, ದೈಹಿಕ ಶಿಕ್ಷಕರಾದ ಎಸ್.ಎಲ್.ದೊಡಮನಿ, ತಂಡದ ಮ್ಯಾನೇಜರ್ ಆರ್.ವಿ.ಭುಜಂಗನವರ, ರೇಖಾ ರಜಪೂತ ಸೇರಿದಂತೆ ಶಾಲಾ ಶಿಕ್ಷಕ ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಹರ್ಷವ್ಯಕ್ತಪಡಿಸಿದ್ದಾರೆ.
