Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿಜಯಪುರ: ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಅವರ ಜಯಂತಿಯನ್ನು ನಗರದ ಬಿ.ಎಲ್.ಡಿ.ಇ. ಸಂಸ್ಥೆಯಲ್ಲಿ ಮಂಗಳವಾರ ಆಚರಿಸಲಾಯಿತು.ಸಂಸ್ಥೆಯ ಆವರಣದಲ್ಲಿರುವ ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಸಂಶೋಧನ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ, ಕುಲಪತಿ ಡಾ. ಆರ್. ಎಸ್. ಮುಧೋಳ, ಬಿ.ಎಲ್.ಡಿ.ಇ ಸಂಸ್ಥೆಯ ಮುಖ್ಯ ಸಲಹೆಗಾರ ಮತ್ತು ರಜಿಸ್ಟ್ರಾರ್ ಡಾ. ಆರ್. ವಿ. ಕುಲಕರ್ಣಿ, ಆಡಳಿತಾಧಿಕಾರಿ ಡಾ. ಆರ್. ಬಿ. ಕೊಟ್ನಾಳ, ಸಂಶೋಧನೆ ಕೇಂದ್ರದ ಸಂಯೋಜನಾಧಿಕಾರಿ ವಿ. ಡಿ. ಐಹೊಳ್ಳಿ ಅವರು ಹಳಕಟ್ಟಿಯವರ ಸಮಾಧಿಗೆ ಪೂಜೆ ಸಲ್ಲಿಸಿದರು. ಅಲ್ಲದೇ, ಹಳಕಟ್ಟಿ ಅವರ ಭಾವಚಿತ್ರ ಮತ್ತು ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.ಈ ಸಂದರ್ಭದಲ್ಲಿ ಹಳಕಟ್ಟಿಯವರ ಮರಿಮೊಮ್ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಬಿ.ಎಲ್.ಡಿ.ಇ. ಸಂಸ್ಥೆಯ ವತಿಯಿಂದ ಹಳಕಟ್ಟಿಯವರ ಕುಟುಂಬಸ್ಥರಿಗೆ ಗೌರವಧನದ ಚೆಕ್ ವಿತರಿಸಿದರು. ಹಳಕಟ್ಟಿಯವರ ಮೊಮ್ಮಗ ಗಿರೀಶ ಹಳಕಟ್ಟಿ, ಅವರ ಪತ್ನಿ ಸುಜಾತಾ ಹಳಕಟ್ಟಿ ಮತ್ತು ಮರಿಮೊಮ್ಮಗ ಗುರುಪುತ್ರ ಹಳಕಟ್ಟಿ ಚೆಕ್ ಸ್ವೀಕರಿಸಿದರು.ಈ ಸಂದರ್ಭದಲ್ಲಿ…
ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದ ಎನ್ನೆಸ್ಸೆಸ್ ಶಿಬಿರ ವಿಜಯಪುರ: ವಿದ್ಯಾರ್ಥಿಗಳಿಗೆ ತಮ್ಮ ವ್ಯಕ್ತಿತ್ವ ವಿಕಸನ, ಶಿಸ್ತು, ಸ್ವಚ್ಛತೆ ಬಗ್ಗೆ ಜಾಗೃತಿ ಅಲ್ಲದೆ ನಿಮ್ಮ ಬದುಕು ಬದ್ಧತೆಯಿಂದ ಇರುವುದಾದರೆ ಇಂತಹ ಶಿಬಿರದ ಮೂಲಕದ ಸಾದ್ಯ. ಜೊತೆಗೆ ಜಾಗೃತಿ ಮೂಡಿಸುವುದು ಅವಶ್ಯಕವಾಗಿದೆ ಎಂದು ರಾಮಕೃಷ್ಣ ವಿವೇಕಾನಂದ ಆಶ್ರಮದ ಶ್ರೀ ನರೇಶಾನಂದ ಸ್ವಾಮೀಜಿ ಹೇಳಿದರು.ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯ ಹಾಗೂ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿ, ರಾಷ್ಟ್ರೀಯ ಸೇವಾ ಯೋಜನೆಯ ಅಮೃತ ಸಮುದಾಯ ಅಭಿವೃದ್ಧಿ ಯೋಜನೆಯಡಿ ನಗರದ ಶ್ರೀ ರಾಮಕೃಷ್ಣ ವಿವೇಕಾನಂದ ಆಶ್ರಮದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಚವಾಗಿಟ್ಟುಕೊಳ್ಳಲು ನಾವೆಲ್ಲರೂ ಶ್ರಮಿಸಬೇಕಾಗಿದೆ. ಮಹಾತ್ಮ ಗಾಂಧೀಜಿಯವರ ಕನಸಿನಂತೆ ಗ್ರಾಮಸ್ವರಾಜ್ಯದ ಪರಿಕಲ್ಪನೆಯನ್ನು ನಾವು ಸ್ಮರಿಸಬಹದು. ಅವರು ಹಾಕಿಕೊಟ್ಟ ಸನ್ಮಾರ್ಗವನ್ನು ನಾವೆಲ್ಲರೂ ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾಗಿದೆ. ಅದರಂತೆ ವಿದ್ಯಾರ್ಥಿಗಳು ಇಂತಹ ೭ ದಿನಗಳ ಕ್ಯಾಂಪ್‌ಗಳು ಕೇವಲ…
ವಿಜಯಪುರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ | ಜಿಲ್ಲಾಧ್ಯಕ್ಷ ಶ್ರೀಶೈಲ ಮುಳಜಿ ಆಗ್ರಹ ವಿಜಯಪುರ: ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮತ್ತು ಬೆಂಗಳೂರಿನಲ್ಲಿ ಫ್ರೀಡಂ ಪಾರ್ಕ್ ಮುಂಭಾಗ ಕರ್ನಾಟಕ ರಕ್ಷಣಾ ವೇದಿಕೆಯು ಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ ಉದ್ಯೋಗ ನೀಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಶ್ರೀಶೈಲ ಮುಳಜಿ ಹೇಳಿದರು.ಸೋಮವಾರ ನಗರದಲ್ಲಿ ಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ ಉದ್ಯೋಗ ಸಂಬಂಧ ಕಾಯ್ದೆಯನ್ನು ರೂಪಿಸಿ ಜಾರಿಗೊಳಿಸಲು ಒತ್ತಾಯಿಸಿ ತಮ್ಮ ನೇತೃತ್ವದಲ್ಲಿಕರವೇ ವಿಜಯಪುರ ಜಿಲ್ಲಾ ಘಟಕದಿಂದ ಹಮ್ಮಿಕೊಂಡ ಸಿದ್ಧೇಶ್ವರ ದೇವಸ್ಥಾನದಿಂದ ಪ್ರತಿಭಟನಾ ಮೆರವಣಿಗೆ ಮೂಲಕ ಆಗಮಿಸಿ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಅವರು ಮಾತನಾಡಿದರು.ನಮ್ಮ ತಾಯಿನಾಡು ಕರ್ನಾಟಕ ದೇಶದಲ್ಲೇ ಅತಿಹೆಚ್ಚು ಭೌಗೋಳಿಕ ಸಂಪನ್ಮೂಲಗಳನ್ನು ಹೊಂದಿರುವ ರಾಜ್ಯ. ಪ್ರಕೃತಿ ಸೌಂದರ್ಯಕ್ಕೆ, ಅತ್ಯುತ್ತಮ ಹವಾಗುಣಕ್ಕೆ ಹೆಸರಾದ ರಾಜ್ಯ. ಕನ್ನಡಿಗರು ಶಾಂತಿಪ್ರಿಯರು, ಹೃದಯ ಶ್ರೀಮಂತರು. ಕನ್ನಡಿಗರು ದೇಶದಲ್ಲೇ ಮೊದಲು ಜನಸಂಖ್ಯಾ ನಿಯಂತ್ರಣಕ್ಕೆ ಕಡಿವಾಣ ಹಾಕಿದವರು. ಕನ್ನಡ ನಾಡು ಸಾಂಸ್ಕೃತಿಕವಾಗಿ, ಸಾಹಿತ್ಯಿಕವಾಗಿ, ಚಾರಿತ್ರಿಕವಾಗಿ ವೈಭವದ…
ನಾಯಕತ್ವ ಬದಲಾವಣೆ ಕುರಿತು ಸಿಎಂ ಉವಾಚ | ಇದು ಸಾರ್ವಜನಿಕವಾಗಿ ಚರ್ಚಿಸಬೇಕಾದ ವಿಷಯವಲ್ಲ | ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿಎಂ ಬೆಂಗಳೂರು: ಆಡಳಿತಾರೂಢ ಕಾಂಗ್ರೆಸ್ ನಲ್ಲಿ ರಾಜಕೀಯ ಜಿದ್ದಾಜಿದ್ದಿನ ನಡುವೆಯೇ ನಾಯಕತ್ವ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಹೇಳಿದ್ದಾರೆ.ಕಳೆದ ವಾರ ಒಕ್ಕಲಿಗ ಮಠದ ಚಂದ್ರಶೇಖರ ಸ್ವಾಮೀಜಿ, ಸಿದ್ದರಾಮಯ್ಯ ಸಿಎಂ ಸ್ಥಾನದಿಂದ ಕೆಳಗಿಳಿದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ದಾರಿ ಸುಗಮ ಮಾಡಿಕೊಡುವಂತೆ ಸಾರ್ವಜನಿಕವಾಗಿ ಮನವಿ ಮಾಡಿದ್ದರು.ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠಾಧೀಶ ಚಂದ್ರಶೇಖರ ಸ್ವಾಮಿಗಳ ಮನವಿ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ಇದು ಸಾರ್ವಜನಿಕವಾಗಿ ಚರ್ಚಿಸಬೇಕಾದ ವಿಷಯವಲ್ಲ. ಹೈಕಮಾಂಡ್ ಯಾವುದೇ ನಿರ್ಧಾರ ಕೈಗೊಂಡರೂ ಅದಕ್ಕೆ ತಕ್ಕಂತೆ ನಡೆದುಕೊಳ್ಳುತ್ತೇವೆ. ಸ್ವಾಮೀಜಿ ಏನು ಹೇಳಿದ್ದಾರೆ ಎಂಬುದರ ಬಗ್ಗೆ ಪ್ರತಿಕ್ರಿಯಿಸಲು ಬಯಸುವುದಿಲ್ಲ. ನಮ್ಮದು ರಾಷ್ಟ್ರೀಯ ಪಕ್ಷ. ಹೈಕಮಾಂಡ್ ಇದೆ ಎಂದು ಮುಖ್ಯಮಂತ್ರಿ ಹೇಳಿದರು.ಸಿದ್ದರಾಮಯ್ಯ ಆಪ್ತ ಸಚಿವರು ಹೆಚ್ಚಿನ ಉಪ ಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸಿ ಲಿಂಗಾಯತ, ಎಸ್‌ಸಿ,…
ಬಸವನಬಾಗೇವಾಡಿ: ಮನುಷ್ಯನಿಗೆ ಆರೋಗ್ಯವೇ ಭಾಗ್ಯ ಎಂಬ ಮಾತು ಸರ್ವಕಾಲಿಕವಾಗುವ ಜೊತೆಗೆ ಸತ್ಯವಾಗಿದೆ.ಆರೋಗ್ಯವನ್ನು ರಕ್ಷಿಸುವುದು, ಅನಾರೋಗ್ಯಕ್ಕೆ ಔಷಧಿ ನೀಡಿ ಗುಣ ಪಡಿಸುವುದು ವೈದ್ಯರ ಕರ್ತವ್ಯವಾಗಿದೆ ಎಂದು ತಾಲೂಕು ಸರ್ಕಾರಿ ಆಸ್ಪತ್ರೆಯ ಪ್ರಭಾರಿ ಆಡಳಿತ ವೈದ್ಯಾಧಿಕಾರಿ ಡಾ.ಮನೋಹರ ಸಿಂಹಾಸನ ಹೇಳಿದರು.ಪಟ್ಟಣದ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಆಸ್ಪತ್ರೆಯ ಸಿಬ್ಬಂದಿ ಸೋಮವಾರ ಹಮ್ಮಿಕೊಂಡಿದ್ದ ವೈದ್ಯ ದಿನಾಚರಣೆಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅನಾರೋಗ್ಯಕ್ಕೆ ತುತ್ತಾದ ಪ್ರತಿಯೊಬ್ಬ ರೋಗಿಗೆ ಸರಿಯಾಗಿ ಚಿಕಿತ್ಸೆ ನೀಡುವ ಮೂಲಕ ಗುಣಪಡಿಸುವುದು ವೈದ್ಯರ ಕಾಯಕ. ನಮ್ಮ ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವಲ್ಲಿ ವೈದ್ಯರೊಂದಿಗೆ ಉಳಿದ ಸಿಬ್ಬಂದಿಗಳ ಪಾತ್ರವೂ ಬಹುಮುಖ್ಯವಾಗಿದೆ. ಎಲ್ಲರ ಸಹಕಾರದೊಂದಿಗೆ ಜನರಿಗೆ ಉತ್ತಮ ಸೇವೆ ನೀಡುವುದು ತುಂಬಾ ಅಗತ್ಯವಿದೆ. ಸರ್ಕಾರ ನಮಗೆ ಒದಗಿಸುವ ಸೌಲಭ್ಯಗಳು ಜನರಿಗೆ ತಲುಪಿಸುವಲ್ಲಿ ಎಲ್ಲರೂ ಕಾರ್ಯನಿರ್ವಹಿಸಬೇಕೆಂದರು.ಆಸ್ಪ್ರತ್ರೆಯ ಡಾ.ಶಾಕೀರ ಪಟೇಲ ಹಾಗೂ ಡಾ.ಬಸವರಾಜ ಮುತ್ತತ್ತಿ ಅವರು ಮಾತನಾಡಿ, ಪಶ್ಚಿಮ ಬಂಗಾಳದ ಎರಡನೇ ಮುಖ್ಯಮಂತ್ರಿಗಳಾಗಿದ್ದ ಡಾ.ಬಿ.ಸಿ.ರಾಯ್ ಅವರ ಸ್ಮರಣೆಯಲ್ಲಿ ಪ್ರತಿವರ್ಷ ಜುಲೈ ೧ ರಂದು ರಾಷ್ಟ್ರೀಯ…
ಮುದ್ದೇಬಿಹಾಳ: ಮನುಷ್ಯನಿಗೆ ಆರೋಗ್ಯವೇ ಭಾಗ್ಯ ಎಂಬುದು ಸರ್ವಕಾಲಿಕ ಮಾತು. ಅನಾರೋಗ್ಯಕ್ಕೆ ತುತ್ತಾದ ಪ್ರತಿಯೋಬ್ಬ ರೋಗಿಯನ್ನು ಸರಿಯಾದ ಚಿಕಿತ್ಸೆ ನೀಡುವ ಮೂಲಕ ಗುಣಪಡಿಸಿ ಪುನರ್ಜನ್ಮ ನೀಡುವುದು ಪ್ರತಿಯೊಬ್ಬ ವೈದ್ಯರ ಕಾಯಕವಾದರೆ. ವೈದ್ಯೋ ನಾರಾಯಾಣ ಹರಿ ಎನ್ನುವುದು ಅದಕ್ಕೆ ಸಾಕ್ಷಿಯಾಗಿದೆ ಎಂದು ಜೆಓಸಿಸಿ ಬ್ಯಾಂಕ್ ನಿರ್ದೇಶಕ ಆನಂದಗೌಡ ಬಿರಾದಾರ ಹೇಳಿದರು.ಪಟ್ಟಣದ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಲೈನ್ಸ್ ಕ್ಲಬ್ ನ ಸಹಯೋಗದಲ್ಲಿ ತಾಲೂಕು ಆರೋಗ್ಯ ಸಿಬ್ಬಂದಿಗಳು ಏರ್ಪಡಿಸಲಾಗಿದ್ದ ವೈದ್ಯರ ದಿನಾಚರಣೆಯಲ್ಲಿ ಅವರು ಮಾತನಾಡಿದರು.ಶ್ರೇಷ್ಠ ವೈದ್ಯ ಬಿ.ಸಿ.ರಾಯ್ ಅವರ ವೈದ್ಯಕೀಯ ಸೇವೆಗೆ ನೀಡಿದ ಅವರ ಸ್ಮರಣಾರ್ಥ ಹಾಗೂ ಅವರ ಅಪಾರ ಕೊಡುಗೆ ಸ್ಮರಿಸಿ ಪ್ರತಿ ವರ್ಷ ಜುಲೈ ೧ ರಂದು ರಾಷ್ಟ್ರೀಯ ವೈದ್ಯರ ದಿನವನ್ನ ಆಚರಿಸುವ ಮೂಲಕ ವೈದ್ಯರಿಗೆ ವಿಶೇಷ ಗೌರವ ನೀಡಲಾಗುತ್ತದೆ ಎಂದರು.ಈ ವೇಳೆ ತಾಲೂಕ ಆರೋಗ್ಯ ಅಧಿಕಾರಿ ಡಾ.ಸತೀಶ್ ತಿವಾರಿ, ತಾಲೂಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಅನಿಲಕುಮಾರ್ ಶೇಗುಣಶಿ, ತಜ್ಞ ವೈದ್ಯರಾದ ಡಾ. ಮಹಮ್ಮದಅಸ್ಪಕ್, ಡಾ. ಹಸನ್ ಬೀಳಗಿ ಡಾ. ಬಸವರಾಜ್ ಅಲಗೂರ, ದಂತ…
ಆಲಮೇಲದಲ್ಲಿ ವಾಲ್ಮೀಕಿ ನಿಗಮದ ಅವ್ಯವಹಾರ ಮತ್ತು ಬೆಲೆ ಏರಿಕೆ ಖಂಡಿಸಿ ಪ್ರತಿಭಟಿಸಿ ಆಲಮೇಲ: ರಾಜ್ಯ ಕಾಂಗ್ರೆಸ್ ಸರ್ಕಾರ ಯಾವುದೆ ಅಭಿವೃದ್ದಿ ಕೆಲಸಗಳು ಮಾಡದೆ ಭ್ರಷ್ಟಾಚಾರದಲ್ಲಿ ಮುಳಗಿಹೋಗಿದೆ, ಬೆಲೆ ಏರಿಕೆಯಿಂದ ಸಾಮಾನ್ಯ ಜನರನ್ನು ಸುಲಿಗೆ ಮಾಡುತ್ತಿದೆ. ಇಂತಹ ದುರಾಡಳಿತ ಕಾಂಗೆಸ್ ಸರ್ಕಾರ ತೊಲಗುವವರೆಗೂ ಹೋರಾಟ ಮಾಡಬೇಕಾಗಿದೆ ಎಂದು ಮಾಜಿ ಶಾಸಕ ರಮೇಶ ಭೂಸನೂರ ಹೇಳಿದರು.ಸೋಮವಾರ ಆಲಮೇಲ ತಾಲೂಕಿನ ಬಿಜೆಪಿ ಮುಖಂಡರು, ಕಾರ್ಯಕರ್ತರು ರಾಜ್ಯ ಕಾಂಗ್ರೆಸ್ ಸರ್ಕಾರ ವಾಲ್ಮೀಕಿ ನಿಗಮದ ಅವ್ಯವಹಾರ ಮತ್ತು ಬೆಲೆ ಏರಿಕೆ ಖಂಡಿಸಿ ನಡೆಸಿದ ಪ್ರತಿಭಟನೆಯಲ್ಲಿ ಮಾತನಾಡಿ ಅವರು.ಹಿಂದುಳಿದ ದಲಿತರಿಗೆ ಮಿಸಲಿದ್ದ ವಾಲ್ಮೀಕಿ ನಿಗಮದಲ್ಲಿನ ೧೭೫ ಕೋಟಿ ಅನುದಾನ ತೆಲಂಗಾಣದ ಚುನಾವಣೆಗೆ ಬಳಕೆ ಮಾಡಿಕೊಂಡು ಭ್ರಷ್ಠಾಚಾರ ಮಾಡಿದೆ. ಇದರಿಂದ ಮನನೊಂದ ಅಧಿಕಾರಿ ಚಂದ್ರಶೇಕರ ಆತ್ಮಹತ್ಯ ಮಾಡಿಕೊಂಡಿದ್ದಾರೆ ಅದಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರವೆ ಹೊಣೆ ಹೊತ್ತು ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ ಸಾವಿಗೆ ನ್ಯಾಯ ಒದಗಿಸಬೇಕಾಗಿದೆ ಎಂದರು.ರಾಜ್ಯ ಕಾಂಗ್ರೆಸ್ ಸರ್ಕಾರ ವಾಲ್ಮೀಕಿ ನಿಗಮದ ೧೭೫ ಕೊಟಿ ಬಹುದೊಡ್ಡ ಹಗರಣ ಮಾಡುವ ಮೂಲಕ ಭ್ರಷ್ಠಾಚಾರವೆ…
ನೀರಿನ ಮಟ್ಟ ಪರೀಕ್ಷೆ ಅಭಿಯಾನ | ಪಿಡಿಒಗಳಿಗೆ ಫೀಲ್ಡ್ ಟೆಸ್ಟ್ ಕುರಿತು ತರಬೇತಿ ಇಂಡಿ: ಗ್ರಾಮೀಣ ಪ್ರದೇಶದಲ್ಲಿ ಕಲುಷಿತ ನೀರು ಸೇವನೆಯಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಪ್ರಮಾಣಗಳು ಕಂಡು ಬಂದಿದ್ದು ಇಂತಹ ಪ್ರಕರಣಗಳು ಪುನರಾವರ್ತನೆ ಯಾಗದಂತೆ ಮುನ್ನಚ್ಛರಿಕೆ ವಹಿಸಬೇಕು ಎಂದು ಎಇಇ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಎಸ್.ಆರ್.ರುದ್ರವಾಡಿ ಹೇಳಿದರು.ಪಟ್ಟಣದ ತಾ.ಪಂ ಸಬಾಭವನದಲ್ಲಿ ತಾ.ಪಂ ಮತ್ತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಸಹಯೋಗದಲ್ಲಿ ಆಯೋಜಿಸಿದ ನೀರಿನ ಗುಣಮಟ್ಟ ಪರೀಕ್ಷೆ ಸಂಬಂಧ ಒಂದು ದಿನದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.ಕಲುಷಿತ ನೀರು ಎಂದು ಕಂಡು ಬಂದಿರುವ ನೀರಿನ ಮೂಲಗಳಿಂದ ಕುಡಿಯಲು ನೀರನ್ನು ಸರಬರಾಜು ಮಾಡದೇ ಅಂತಹ ಮೂಲಗಳ ಹತ್ತಿರ ಈ ನೀರು ಕುಡಿಯಲು ಯೋಗ್ಯವಾಗಿಲ್ಲ ಎಂಬ ನಾಮಫಲಕವನ್ನು ಅಳವಡಿಸಿ ಇಂತಹ ನೀರಿನ ಮೂಲಗಳ ವಿವರಗಳನ್ನು ಹಾಗೂ ಪರೀಕ್ಷಿಸುವ ಎಲ್ಲ ನೀರಿನ ಮೂಲಗಳ ಪರೀಕ್ಷಾ ವರದಿಗಳನ್ನು ಜಲಜೀವನ ಮಿಷನ್ ಡಬ್ಲೂಕ್ಯೂಎಂಇಎಸ್ ನಲ್ಲಿ ಟ್ಯಾಗಿಂಗ ಮಾಡಲು ಸೂಚಿಸಿದರು.ತಾ.ಪಂ ಸಹಾಯಕ…
ವಿಜಯಪುರ: ಜಿಲ್ಲೆಯ ಪ್ರಾಥಮಿಕ ಶಾಲಾ ವಿಜ್ಞಾನ ಶಿಕ್ಷಕರಿಗೆ ವರ್ಗಾವಣೆಯಲ್ಲಾಗುವ ಅನ್ಯಾಯವನ್ನು ಸರಿಪಡಿಸುವಂತೆ ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕ ಎನ್.ಎಚ್.ನಾಗೂರ ಅವರಿಗೆ ಪ್ರಾಥಮಿಕ ಶಾಲಾ ವಿಜ್ಞಾನ ಶಿಕ್ಷಕರಿಂದ ಮನವಿಯನ್ನು ಸಲ್ಲಿಸಲಾಯಿತು.ವಿಜ್ಞಾನ ಶಿಕ್ಷಕರಾದ ಬಸವರಾಜ ಗಿರಿನಿವಾಸ ಮಾತನಾಡಿ, ಪ್ರತಿ ವರ್ಷ ವರ್ಗಾವಣೆಯಲ್ಲಿ ವಿಜ್ಞಾನ ಶಿಕ್ಷಕರಿಗಾಗಿ ಮೀಸಲಿರುವಂತಹ ಹುದ್ದೆಗಳನ್ನ ಪ್ರಾಥಮಿಕ ಶಾಲೆಯ ಕನ್ನಡ ಹಾಗೂ ಇತರೆ ಶಿಕ್ಷಕರಿಗೂ ಕೊಡುತ್ತಿದ್ದು ವಿಜ್ಞಾನ ಶಿಕ್ಷಕರಿಗೆ ಅನ್ಯಾಯವಾಗುತ್ತಿದೆ. ಸಾಮಾನ್ಯ ಶಿಕ್ಷಕರಿಗೆ ಕೊಡುವುದನ್ನು ನಿಲ್ಲಿಸಬೇಕು, ಇಲ್ಲವೆ ಕನ್ನಡ ಹುದ್ದೆಗಳನ್ನೂ ವಿಜ್ಞಾನ ಶಿಕ್ಷಕರಿಗೆ ವರ್ಗಾವಣೆಯಲ್ಲಿ ತೆಗೆದುಕೊಳ್ಳಲು ಅವಕಾಶ ಕಲ್ಪಿಸಬೇಕು.ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ ಎರಡನೇ ಹುದ್ದೆ ವಿಜ್ಞಾನವಾದ್ದರಿಂದ ಪ್ರತಿ ಶಾಲೆಗೆ ವಿಜ್ಞಾನ ಶಿಕ್ಷಕರ ಹುದ್ದೆಗಳನ್ನು ಸೃಜಿಸಿ ವಿಜ್ಞಾನ ಶಿಕ್ಷಕರಿಗಾಗಿಯೇ ಮೀಸಲಿಡುವಂತೆ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ವರ್ಗಾವಣೆಯಲ್ಲಿ ಅನುಕೂಲ ಮಾಡಿಕೊಡಬೇಕೆಂದು ಒತ್ತಾಯಿಸಿದರು.ಈ ಸಂದರ್ಭದಲ್ಲಿ ಉಮೇಶ ಕೌಲಗಿ, ಸಂತೋಷ ಬೂದಿಹಾಳ, ರಾಜಕುಮಾರ ಪಾಲಾಯಿ, ಸಂಜೀವ ಕುರಗೊಟಗಿ, ಎಸ್ ಜಿ ಗೌರಗೊಂಡ, ಎ. ಆರ್. ಕನ್ನೂರ, ಆರ್. ಎಸ್. ಜತ್ತಿ, ಸಿ.ಆರ್ .ಕೋರಿ,…
ಸಿಂದಗಿ: ಮಾನವನಿಗೆ ಆರೋಗ್ಯವೇ ಭಾಗ್ಯ ಎಂಬುದು ಸರ್ವಕಾಲಿಕ ಮಾತು ಇದು ಅಷ್ಟೇ ಸತ್ಯವೂ ಕೂಡ ಎಂದು ನಗರದ ಬೆಂಗಳೂರು ದವಾಖಾನೆಯ ವೈದ್ಯೆ ಡಾ.ವಿದ್ಯಾ ಬಡಿಗೇರ ಹೇಳಿದರುಪಟ್ಟಣದ ಜ್ಯೋತಿ ನಗರದ ಲಿಟಲ್ ವಿಂಗ್ಸ್ ಪ್ರಿಸ್ಕೂಲ್ ನಲ್ಲಿ ಹಮ್ಮಿಕೊಂಡ ವಿಶ್ವ ವೈದ್ಯರ ದಿನಾಚರಣೆಯ ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಆರೋಗ್ಯವನ್ನು ರಕ್ಷಿಸುವುದು, ಅನಾರೋಗ್ಯಕ್ಕೆ ಮದ್ದು ನೀಡಿ ಗುಣ ಪಡಿಸುವುದು ವೈದ್ಯರ ಕರ್ತವ್ಯವಾಗಿದೆ. ವೈದ್ಯೋ ನಾರಾಯಣ ಹರಿ ಎನ್ನುವುದು ಅದಕ್ಕೆ ಸಾಕ್ಷಿಯಾಗಿದೆ. ಅದಕ್ಕಾಗಿ ವೈದ್ಯರನ್ನು ದೇವರಿಗೆ ಹೊಲಿಸಲಾಗುತ್ತದೆ. ಈ ಪದ್ಧತಿಯೂ ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ ಎಂದರು.ಈ ವೇಳೆ ಅತಿಥಿಯಾಗಿ ಡಾ.ರವೀಂದ್ರನಾಥ ಗೋಡೆಕರ ಮಾತನಾಡಿ, ಅನಾರೋಗ್ಯಕ್ಕೆ ತುತ್ತಾದ ಪ್ರತಿಯೊಬ್ಬ ರೋಗಿಯನ್ನು ಸರಿಯಾದ ಚಿಕಿತ್ಸೆ ನೀಡುವ ಮೂಲಕ ಗುಣಪಡಿಸಿ, ಅವನಿಗೆ ಪುನರ್ಜನ್ಮ ನೀಡುವುದು ಪ್ರತಿಯೊಬ್ಬ ವೈದ್ಯರ ಕಾಯಕವಾದರೆ. ಅವರಿಗೆ ಗೌರವ ಸಲ್ಲಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಇಂತಹ ಪುನರ್ಜನ್ಮ ನೀಡುವ ವೈದ್ಯರಿಗೆ ವಿಶೇಷ ಗೌರವ ನೀಡುವ ಸಲುವಾಗಿ ಪ್ರತಿ ವರ್ಷ ಜುಲೈ ೧ರಂದು ರಾಷ್ಟ್ರೀಯ…
