Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಕಲಕೇರಿ: ಸಮೀಪದ ಕೆರುಟಗಿ ತಾಂಡಾ ಮೂಲಕ ತಿಳಗೂಳ ಪ್ರೌಢಶಾಲೆಗೆ ಹೋಗುವ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಶಾಲೆಯ ಸಮಯಕ್ಕೆ ಸರಿಯಾಗಿ ಬಸ್ಸಿನ ವ್ಯವಸ್ಥೆ ಮಾಡುವಂತೆ ಆಗ್ರಹಿಸಿ ಸಿಂದಗಿ ಘಟಕದ ವ್ಯವಸ್ಥಾಪಕರಿಗೆ ದಲಿತ ವಿದ್ಯಾರ್ಥಿ ಪರಿಷತ್ ವತಿಯಿಂದ ಮನವಿ ಸಲ್ಲಿಸಲಾಯಿತು.ಕೆರುಟಗಿ ತಾಂಡಾದಿಂದ ತಿಳಗೂಳ ಶಾಲೆಗೆ ಪ್ರತಿನಿತ್ಯ ಸುಮಾರು ೪೦ ರಿಂದ ೪೫ ವಿದ್ಯಾರ್ಥಿ ವಿದ್ಯಾರ್ಥಿನಿಯರು ಹೋಗುತ್ತಿದ್ದು, ಸುಮಾರು ೫ ಕಿಲೋಮೀಟರ್ ವರೆಗೆ ನಡೆದುಕೊಂಡು ಹೋಗುತ್ತಿರುವುದರಿಂದ ಮಳೆಗಾಲದಲ್ಲಿ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದು, ಕೂಡಲೇ ಸೂಕ್ತ ಸಮಯಕ್ಕೆ ಬಸ್ ವ್ಯವಸ್ಥೆ ಮಾಡಿಕೊಡಬೇಕೆಂದು ದಲಿತ ವಿದ್ಯಾರ್ಥಿ ಪರಿಷತ್ ಸದಸ್ಯರು ಮತ್ತು ವಿದ್ಯಾರ್ಥಿಗಳು ಆಗ್ರಹ ಮಾಡಿದರುಈ ಸಂಧರ್ಭದಲ್ಲಿ ಸಾಮಾಜಿಕ ಕಾರ್ಯಕರ್ತ ಹರ್ಷವರ್ಧನ್ ಪೂಜಾರಿ, ವಿದ್ಯಾರ್ಥಿ ಪರಿಷತ್ ತಾಲೂಕ ಅಧ್ಯಕ್ಷ ಕಾಶಿನಾಥ್, ಮುತ್ತು ಕಲಕೇರಿ ಭಾಗಪ್ಪ ಮತ್ತು ಸಂಘಟನೆಯ ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಇಂಡಿ: ತಾಲೂಕಿನ ಲಚ್ಯಾಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ 4ನೇ ವಾರ್ಡಿನಲ್ಲಿ ಚರಂಡಿ ತುಂಬಿ ಮನೆಗಳಿಗೆ ನುಗ್ಗುತ್ತಿದ್ದರೂ ಸಂಬಂಧಿಸಿದ ಗ್ರಾಮ ಪಂಚಾಯಿತಿ ಅಧಿಕಾರಿಗಳು ಸಮಸ್ಯೆ ಬಗೆಹರಿಸುತ್ತಿಲ್ಲ ಎಂದು ಗ್ರಾಮದ ಗೌರಿಶಂಕರ ಲೋಣಿಕರ ಪ್ರಕಟಣೆಯಲ್ಲಿ ಆರೋಪಿಸಿದ್ದಾರೆ.ಲಚ್ಯಾಣ ಗ್ರಾಮದ ವಾರ್ಡ 4 ರಲ್ಲಿ ಚರಂಡಿ ಹಾಗೂ ಬಟ್ಟೆ ತೊಳೆದ ನೀರು ರಸ್ತೆಯ ಮೇಲೆ ಹರಿಯುತ್ತಿದ್ದು, ನೀರು ಹೆಚ್ಚಾದಂತೆ ಮನೆಯ ಗೋಡೆಗೆ ಅಂಟಿಕೊಂಡು ನಿಲ್ಲುತ್ತಿರುವುದರಿಂದ ಮನೆಯ ಗೊಡೆ ತೇವಾಂಶ ಹಿಡಿದು ಬಿಳುವ ಪರಿಸ್ಥಿತಿ ಇದೆ. ಈ ಕುರಿತು ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳಿಗೆ ಮನವಿ ಕೊಟ್ಟು ವರ್ಷವಾಗಿದೆ. ಪ್ರತಿನಿತ್ಯ ಭೇಟಿಯಾಗಿ ಮೌಖಿಕವಾಗಿ ಸಮಸ್ಯೆ ಬಗೆ ಹರಿಸಲು ಮನವಿ ಮಾಡಿಕೊಂಡರು ಸಮಸ್ಯೆ ಬಗೆಹರಿಸುತ್ತಿಲ್ಲ. ಹೀಗಾಗಿ ರಾತ್ರಿಯಾದರೆ ಸೊಳ್ಳೆಗಳು ಹೆಚ್ಚಾಗಿ ತೊಂದರೆ ಉಂಟಾಗಿದೆ. ಚರಂಡಿ ನೀರಿನ ರಭಸದಿಂದ ಮನೆವೊಳಗೆ ನುಗ್ಗುತ್ತಿದೆ.ಕೂಡಲೆ ಸಂಬಂಧಿಸಿದ ಇಲಾಖೆ ಮೇಲಾಧಿಕಾರಿಗಳು ಚರಂಡಿ ನಿರ್ಮಿಸಿ ಚರಂಡಿ ನೀರು ಹೋಗುವಂತೆ ಮಾಡಬೇಕು.ಇಲ್ಲವಾದರೆ ಕುಟುಂಬ ಸಮೇತ ಗ್ರಾಮ ಪಂಚಾಯಿತಿ ಮುಂದೆ ಧರಣಿ ಕುಳಿತುಕೊಳ್ಳಬೇಕಾಗುತ್ತದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಂಡಿ: ತಾಲೂಕಿನ ನಂದರಗಿ ಗ್ರಾಮದ ರೈತ ಕನ್ನಪ್ಪ ಕುಪಿಂದ್ರಾಯ ಪೂಜಾರಿ ಇವರು 4.00 ಎಕರೆ ಕೃಷಿ ಭೂಮಿಯನ್ನು ಹೊಂದಿರುತ್ತಾರೆ. ಒಣಬೇಸಾಯದಲ್ಲಿ ತೊಗರಿ, ಸಜ್ಜೆ, ಹೆಸರು ಇತ್ಯಾದಿ ಬೆಳೆಗಳನ್ನು ಬೆಳೆದು ತೇವಾಂಶದ ಕೊರತೆಯಿಂದಾಗಿ ಬೆಳೆಗಳು ಒಣಗಿ ಕಡಿಮೆ ಇಳುವರಿ ಬರುತ್ತಿತ್ತು. ಇದರಿಂದ ಕೃಷಿಯಲ್ಲಿ ಎಷ್ಟೆ ಕಷ್ಟಪಟ್ಟರೂ ನಿಗದಿತ ಲಾಭ ಆಗುತ್ತಿರಲಿಲ್ಲ. ಆದ್ದರಿಂದ ಸದರಿ ರೈತರು ಬೇಸತ್ತು ಕೃಷಿ ಇಲಾಖೆಗೆ ಭೇಟಿ ನೀಡಿ ತಮ್ಮ ನೋವನ್ನು ಹೇಳಿಕೊಂಡರು. ಈ ಸಮಯದಲ್ಲಿ ಕೃಷಿ ಇಲಾಖೆಗೆ ಕರ್ನಾಟಕ ಸರ್ಕಾರದಿಂದ ಕೃಷಿ ಭಾಗ್ಯ ಯೋಜನೆ ಬಂದಿತ್ತು. ಇದರ ಸವಲತ್ತನ್ನು ಪಡೆದು ಕೃಷಿ ಇಲಾಖೆಯಿಂದ ಕೃಷಿ ಭಾಗ್ಯ ಯೋಜನೆಯಡಿಯಲ್ಲಿ ಕೃಷಿ ಹೊಂಡವನ್ನು ನಿರ್ಮಿಸಿಕೊಂಡರು. ಕಳೆದ ವರ್ಷ ಬರಗಾಲದಿಂದಾಗಿ ಬಸವಳಿದಿದ್ದ ರೈತರಿಗೆ ಈ ವರ್ಷ ಮುಂಗಾರು ಮಳೆ ಉತಮ್ಮವಾಗಿ ಆಗಿದ್ದರಿಂದ ಕೃಷಿ ಹೊಂಡದಲ್ಲಿ ನೀರು ತುಂಬಿಕೊಳ್ಳಲು ಅನುಕೂಲವಾಯಿತು. ಇದರಿಂದ ರೈತರು ಹರ್ಷಗೊಂಡು ಬೆಳೆಗಳ ಬದಲಾವಣೆ ಮಾಡಿಕೊಂಡು ಹತ್ತಿ, ಮೆಕ್ಕೆಜೋಳ ಬಿತ್ತನೆ ಮಾಡಿರುತ್ತಾನೆ. ಕೃಷಿ ಹೊಂಡದಲ್ಲಿ ಸಂಗ್ರಹವಾದ ಮಳೆ ನೀರನ್ನು ಹತ್ತಿ ಬೆಳೆಗೆ…
ಬಸವನಬಾಗೇವಾಡಿ: ಇಂದು ಜನರ ಜೀವನ ಪದ್ಧತಿ, ಆಹಾರ ಪದ್ಧತಿ ಬದಲಾವಣೆಯಾಗಿರುವದರಿಂದಾಗಿ ಬಹುತೇಕರು ಅನಾರೋಗ್ಯಕ್ಕೆ ಒಳಗಾಗುತ್ತಿದ್ದಾರೆ. ಪ್ರತಿಯೊಬ್ಬರೂ ಆರೋಗ್ಯಕರವಾಗಿರಲು ತಮ್ಮ ಜೀವನ ಪದ್ಧತಿ, ಆಹಾರ ಪದ್ಧತಿಯನ್ನು ಉತ್ತಮವಾಗಿಟ್ಟುಕೊಳ್ಳುವ ಮೂಲಕ ಆರೋಗ್ಯಕರ ಜೀವನ ಸಾಗಿಸಬಹುದು ಎಂದು ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಯ ಹೃದಯ ತಜ್ಞ ಡಾ.ಅರುಣಕುಮಾರ ಉಳ್ಳಾಗಡ್ಡಿ ಹೇಳಿದರು.ಪಟ್ಟಣದ ಪುರಸಭೆಯ ಸಭಾಂಗಣದಲ್ಲಿ ಸ್ಥಳೀಯ ಅಮರೇಶ್ವರ ಕ್ಲಿನಿಕ್ ವೈದ್ಯರ ದಿನಾಚರಣೆಯಂಗವಾಗಿ ಶನಿವಾರ ಹಮ್ಮಿಕೊಂಡಿದ್ದ ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದು ಬಹುತೇಕರು ಹೊರಗಿನ ಆಹಾರ ಪದಾರ್ಥಗಳಿಗೆ ಮಾರುಹೋಗುತ್ತಿದ್ದಾರೆ. ಜನರು ಆಹಾರದಲ್ಲಿ ತರಕಾರಿ, ಹಣ್ಣು-ಹಂಪಲು ಕಡಿಮೆ ಬಳಸುತ್ತಿರುವದರಿಂದಾಗಿ ಜನರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ದೈಹಿಕ ಪರಿಶ್ರಮವೂ ಕಡಿಮೆಯಾಗುತ್ತಿದೆ. ಉತ್ತಮ ಆಹಾರ ಪದ್ಧತಿ, ನಿರಂತರ ವ್ಯಾಯಾಮ, ದುಶ್ಚಟಗಳಿಂದ ದೂರ ಈ ಮೂರನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಧೂಮಪಾನ, ಮಧ್ಯಪಾನದಿಂದ ದೂರವಿದ್ದರೆ ಹೃದಯವನ್ನು ಆರೋಗ್ಯಕರವಾಗಿ ಕಾಪಾಡಿಕೊಳ್ಳಬಹುದು ಎಂದರು.ಪಟ್ಟಣದಲ್ಲಿ ಸ್ವಚ್ಛತೆ ಕಾಪಾಡುವ ಮೂಲಕ ಜನರ ಆರೋಗ್ಯಕರ ಜೀವನಕ್ಕೆ ಪೌರಕಾರ್ಮಿಕರ ಸೇವೆ…
ವಿಜಯಪುರ: ಹಲಸಂಗಿ ಗೆಳೆಯರ ಪ್ರತಿಷ್ಠಾನದ ವತಿಯಿಂದ ಇಂಡಿ ತಾಲೂಕಿನ ಝಳಕಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್‌ನಲ್ಲಿ ಶನಿವಾರ ವಿಶೇಷ ಉಪನ್ಯಾಸ ಕಾರ್ಯಕ್ರಮ ಜರುಗಿತು.ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಚಾರ್ಯ ಪ್ರೊ: ವಲ್ಲಭ ಕಬಾಡೆ ಅಧ್ಯಕ್ಷತೆ ವಹಿಸಿದ್ದರು. ಸಿಕ್ಯಾಬ್ ಮಹಿಳಾ ಪದವಿ ಮಹಾವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ.ಮಲ್ಲಿಕಾರ್ಜುನ ಮೇತ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್‌ನ ಉಪನ್ಯಾಸಕರಾದ ಡಾ.ರಮೇಶ ತೇಲಿ ಅವರು ಉಪನ್ಯಾಸ ನೀಡಿ, ಹಲಸಂಗಿ ಗೆಳೆಯರು ೮೦೦ ತ್ರಿಪದಿ ಗರತಿಹಾಡು ಸಂಗ್ರಹಿಸಿ ಅಚ್ಚರಿ ಮೂಡಿಸಿದ್ದು, ತಂದೆ ತಾಯಿಯ ಪ್ರೀತಿ ಹಾಗೂ ದಾಂಪತ್ಯ ಜೀವನದ ಮೌಲ್ಯ ಕುರಿತು ಹಾಗೂ ಹಲಸಂಗಿ ಗೆಳೆಯರು ಸ್ವಾತಂತ್ರ್ಯ ಹೋರಾಟದಲ್ಲಿ ಸಾಹಿತ್ಯದ ಮೂಲಕ ನೀಡಿದ ಕೊಡುಗೆಗಳು, ಮಧುರ ಚೆನ್ನರ ಜೀವನ ಹಾಗೂ ಮಾತಾ ಅರವಿಂದರ ದಾರಿಯ ಬಗ್ಗೆ ಪ್ರೊ: ಡಿ.ಭಿ.ಭಜಂತ್ರಿ ಮಾತನಾಡಿದರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಹಲಸಂಗಿ ಪ್ರತಿಷ್ಠಾನದ ಸದಸ್ಯ ಕಾರ್ಯದರ್ಶಿ ಸಂತೋಷ ಭೋವಿ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಆರ್.ಎನ್.ಶಿಂಪಿ, ಜೆ.ಎಸ್.ಗಲಗಲಿ, ಚಿದಾನಂದ ಗಲಗಲಿ ಇತರರು ಉಪಸ್ಥಿತರಿದ್ದರು. ವಿರೇಶ ವಾಲಿ…
ವಿಜಯಪುರ: ವಿಜಯಪುರದ ಸೋಲಾಪುರ ರಸ್ತೆಯಲ್ಲಿರುವ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವಿವಿಧ ವೃತ್ತಿಗಳಲ್ಲಿ ಖಾಲಿ ಇರುವ ಸ್ಥಾನಗಳಿಗೆ ಪ್ರವೇಶಕ್ಕಾಗಿ ಆಸಕ್ತ ಎಸ್.ಎಸ್.ಎಲ್.ಸಿ. ಪಾಸಾದ ಅರ್ಹ ಅಭ್ಯರ್ಥಿಗಳು ಸಂಸ್ಥೆಗೆ ಭೇಟಿ ನೀಡಿ ಆಫ್‌ಲೈನ್ ಮೂಲಕ ಜುಲೈ೪ರಿಂದ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಪ್ರವೇಶವನ್ನು ಮಾರನೇಯ ದಿನ ಬೆಳಿಗ್ಗೆ ೧೦ ಗಂಟೆಗೆ ಮೆರಿಟ್ ಆಧಾರದಲ್ಲಿ ನೀಡಲಾಗುವುದು. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು, ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ವಿಜಯಪುರ ಮೊ: ೯೯೭೨೬೮೨೧೮೪, ೯೪೪೮೯೮೬೩೮೧ & ೯೦೩೫೪೩೪೩೮೧ ಸಂಖ್ಯೆಗೆ ಸಂಪರ್ಕಿಸುವಂತೆ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲಾ ಮಟ್ಟದ ಡಿಸಿಸಿ ಮತ್ತು ಡಿಎಲ್‌ಆರ್‌ಸಿ ಸಭೆಯಲ್ಲಿ ಸಿಇಓ ರಿಷಿ ಆನಂದ ಸೂಚನೆ ವಿಜಯಪುರ: ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ವಿವಿಧ ಬ್ಯಾಂಕುಗಳಿಂದ ಒಟ್ಟು ೧೭೦೯೩ ಕೋಟಿ ರೂ. ಸಾಲ ಒದಗಿಸಿದ್ದು, ಕಳೆದ ವರ್ಷಕ್ಕಿಂತ ಶೇ.೩.೮೮ ಪ್ರಗತಿ ಸಾಧಿಸಲಾಗಿದೆ. ಕೃಷಿ, ಶಿಕ್ಷಣ, ವ್ಯವಹಾರ ಮನೆ ಸಾಲಗಳ ಮೇಲೆ ಒತ್ತು ನೀಡಿ ಇನ್ನಷ್ಟು ಹೆಚ್ಚಿನ ಪ್ರಗತಿ ಸಾಧಿಸುವಂತೆ ಜಿಲ್ಲಾ ಅಗ್ರಣೀಯ ಬ್ಯಾಂಕ್ ವ್ಯವಸ್ಥಾಪಕರಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಸೂಚನೆ ನೀಡಿದರು.ಶನಿವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಅಗ್ರಣೀಯ ಬ್ಯಾಂಕ್ ವತಿಯಿಂದ ತ್ರೈಮಾಸಿಕ ಜಿಲ್ಲಾ ಸಲಹಾ ಸಮಿತಿ (ಡಿಎಲ್‌ಸಿ) ಸಭೆ ಹಾಗೂ ಜಿಲ್ಲಾ ಮಟ್ಟದ ಪರಿಶೀಲನಾ (ಡಿಎಲ್‌ಆರ್‌ಸಿ) ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜಿಲ್ಲೆಯಲ್ಲಿ ಒಟ್ಟು ರೂ.೧೭೦೯೩ ಕೋಟಿ ರೂ. ಸಾಲ ಒದಗಿಸಿದ್ದು, ರೂ.೧೮೬೭೬ ಕೋಟಿ ಠೇವಣಿ ಇದೆ. ಕಳೆದ ವರ್ಷಕ್ಕಿಂತ ೩.೮೮% ಸಾಲದಲ್ಲಿ ಪ್ರಗತಿ ಸಾಧಿಸಿದ್ದು ಠೇವಣಿಯಲ್ಲಿ ೧೨.೦೨% ಪ್ರಗತಿ ಸಾಧಿಸಲಾಗಿದೆ. ಜೊತೆಗೆ ಪ್ರಸ್ತುತ ೨೦೨೪-೨೫ ಸಾಲಿನಲ್ಲಿ…
ಬಿದರಕುಂದಿ ಗ್ರಾಮದ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ ನಡೆದ ಪ್ರವೇಶ ಪರೀಕ್ಷೆ – ಚೇತನ ಶಿವಶಿಂಪಿಮುದ್ದೇಬಿಹಾಳ: ಪರೀಕ್ಷೆಗಳಲ್ಲಿ ನಡೆಯುವ ಅಕ್ರಮಗಳನ್ನು ತಡೆಯಲು ಶಿಕ್ಷಣ ಇಲಾಖೆ ಹಲವಾರು ಕಟ್ಟು ನಿಟ್ಟಿನ ನಿಯಮಗಳನ್ನು ರೂಪಿಸುವ ಮೂಲಕ ನಾನಾ ಕಸರತ್ತುಗಳನ್ನ ನಡೆಸುತ್ತೆ. ಆದರೆ ಜವಾಬ್ದಾರಿಯುತ ಅಧಿಕಾರಿಗಳು ಮಾತ್ರ ತಮ್ಮ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸದ ಕಾರಣ ಪರೀಕ್ಷಾ ನಿಯಮಗಳು ಕೆಲ ಬಡಪಾಯಿ ವಿದ್ಯಾರ್ಥಿಗಳಿಗೆ ಮಾತ್ರ ಸೀಮಿತ ಅನ್ನೋ ಸಾಮಾಜಿಕ ಹೋರಾಟಗಾರರ ವಾದ ತಳ್ಳಿಹಾಕುವಂತಿಲ್ಲ. ಇದಕ್ಕೆ ಕೈಗನ್ನಡಿಯಾದ ಉದಾಹರಣೆಯೊಂದು ಇಲ್ಲಿದೆ ನೋಡಿ.ಅಲ್ಲಿ ಖಾಲಿ ಇರುವ ಸೀಟುಗಳು ಒಟ್ಟು ೧೯. ಪರೀಕ್ಷೆ ಬರೆಯೋಕೆ ಬಂದ ವಿದ್ಯಾರ್ಥಿಗಳ ಸಂಖ್ಯೆ ಬರೋಬ್ಬರಿ ೩೯೧. ಈ ಎಲ್ಲ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಒಟ್ಟು ೧೮ ಕೊಠಡಿಗಳಲ್ಲಿ. ಅದರಲ್ಲೂ ಒಂದು ಕೊಠಡಿಯಲ್ಲಿ ಕೇವಲ ೪ ವಿದ್ಯಾರ್ಥಿಗಳು ಮಾತ್ರ.ಈ ಅಂಕಿ ಸಂಖ್ಯೆಯನ್ನ ನೋಡಿದರೆ ಒಂದು ಕೊಠಡಿಯಲ್ಲಿ ಅದೆಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆದಿರಬಹುದು ಎಂದು ನೀವೇ ಲೆಕ್ಕಾ ಹಾಕಿ. ಪರೀಕ್ಷೆಗಳ ಪ್ರಶ್ನೆ ಪತ್ರಿಕೆಯಲ್ಲಿ ಸಿರೀಸ್ ಇದ್ದರೆ ಒಂದು ಡೆಸ್ಕ್ ನಲ್ಲಿ…
“ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ”- ವಿವೇಕಾನಂದ. ಎಚ್. ಕೆ. ಬೆಂಗಳೂರು ಇಂದಿನ ಸಂದರ್ಭದ ಅತಿ ಅಗತ್ಯ ವಿಷಯ ಮತ್ತು ನಂಬಿಕೆಗಳ ಪುನರ್ ಸ್ಥಾಪನೆಯ ಪ್ರಯತ್ನ..ಖಾಸಗಿ ಸಂಭಾಷಣೆಗಳ ಧ್ವನಿಮುದ್ರಣ ಸರಿಯೇ? ತಪ್ಪೇ?..ಇದು ತುಂಬಾ ಗಂಭೀರವಾದ ವಿಷಯ. ಅದರಲ್ಲೂ ಇತ್ತೀಚಿನ ಆಧುನಿಕ ತಂತ್ರಜ್ಞಾನದ ದಿನಗಳಲ್ಲಿ ಮಾನವೀಯ ನಂಬಿಕೆಗಳಿಗೇ ಬಹುದೊಡ್ಡ ಸವಾಲು ಎಸೆದಿರುವ ಅಂಶ..ನಾವು ಗೆಳೆಯ/ಗೆಳತಿ ಅಥವಾ ಗೆಳೆಯರಂತಿರುವ ಜೊತೆಗಾರರೊಂದಿಗೆ ಅಥವಾ ಪರಿಚಿತ/ಅಪರಿಚಿತರೊಂದಿಗೆ ಅನೇಕ ರೀತಿಯ ಖಾಸಗಿ ಸಂಭಾಷಣೆ ನಡೆಸುತ್ತೇವೆ. ನಮ್ಮ ಅತ್ಯಂತ ಖಾಸಗಿ ಆರೋಗ್ಯದಿಂದ – ವಿಶ್ವದ ಎಲ್ಲಾ ಆಸಕ್ತಿದಾಯಕ ವಿಷಯಗಳನ್ನೂ ಚರ್ಚಿಸುತ್ತೇವೆ. ನಮ್ಮ ಆರ್ಥಿಕ ಸಂಕಷ್ಟ, ನೈತಿಕ/ಅನೈತಿಕ ಸಂಬಂಧಗಳು, ಇತರರ ಬಗ್ಗೆ ನಮಗಿರುವ ಪ್ರೀತಿ/ದ್ವೇಷ/ಅಸೂಯೆ ಎಲ್ಲವನ್ನೂ ಮಾತನಾಡುತ್ತೇವೆ. ರಾಜಕೀಯ, ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ಎಲ್ಲವೂ ನಮ್ಮ ನಮ್ಮ ಆಸಕ್ತಿಗೆ ಅನುಗುಣವಾಗಿ ಸಂಭಾಷಣೆ ಇರುತ್ತದೆ. ಕೆಲವೊಮ್ಮೆ ಗಾಢ ಸ್ನೇಹ ಇರಬಹುದು ಅಥವಾ ಕೆಲವೊಮ್ಮೆ ದೂರದ ಸ್ನೇಹ/ಪರಿಚಯ ಇರಬಹುದು..ಆದರೆ, ಈ ಗೆಳೆತನದ ಸಮಯದಲ್ಲಿ ನಾವು ಆಡಿದ ಸಹಜ ಲೋಕಾಭಿರಾಮದ ಮಾತುಗಳನ್ನು ನಮಗೆ ತಿಳಿಯದಂತೆ ಜೊತೆಗಾರರಲ್ಲಿ ಒಬ್ಬರು…
ಜಿಲ್ಲಾ ಕಾಂಗ್ರೆಸ್ ಘಟಕದಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಿಗೆ ಸನ್ಮಾನ ವಿಜಯಪುರ: ಜೂ.೨೭ ರಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನೆಗಾಗಿ ವಿಜಯಪುರಕ್ಕೆ ಆಗಮಿಸಿದ್ದ ಸಚಿವ ದಿನೇಶ ಗುಂಡುರಾವ ಅವರು ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯಕ್ಕೆ ಭೇಟಿ ನೀಡಿದರು.ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಲೋಣಿ ರವರು ಹಾಗೂ ಪಕ್ಷದ ಮುಖಂಡರು ಸಚಿವರನ್ನು ಸ್ವಾಗತಿಸಿ ಸನ್ಮಾನಿಸಿದರು.ಸನ್ಮಾನ ಸ್ವೀಕರಿಸಿ ಮಾತನಾಡಿದ ದಿನೇಶ ಗುಂಡುರಾವ ಅವರು, ಪಕ್ಷದ ವತಿಯಿಂದ ಸಚಿವರಾದವರು ತಪ್ಪದೇ ಪಕ್ಷದ ಕಛೇರಿಗೆ ಭೇಟಿ ನೀಡಿ ಕಾರ್ಯಕರ್ತರೊಂದಿಗೆ ಸಮಾಲೋಚನೆ ಮಾಡುವದು ಅತೀ ಅವಶ್ಯ. ಇದರಿಂದ ಕಾರ್ಯಕರ್ತರಿಗೆ ಹುಮ್ಮಸ್ಸು ಬರುತ್ತದೆ. ಅವರ ಕೆಲಸ ಕಾರ್ಯಗಳ ಬಗ್ಗೆ ಸ್ಪಂದಿಸುವದು ಸಚಿವರಾದ ನಮ್ಮ ಕರ್ತವ್ಯ ಎಂದು ಹೇಳಿದರು.ಪಕ್ಷದ ಜಿಲ್ಲಾ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು, ಅಂಗ ಘಟಕಗಳ ಅಧ್ಯಕ್ಷರುಗಳು ಹಾಗೂ ಪಕ್ಷದ ಮುಖಂಡರು ಈ ಸಂದರ್ಭದಲ್ಲಿ ಪಾಲ್ಗೊಂಡಿದ್ದರು.ಈ ಸಂದರ್ಭದಲ್ಲಿ ನಾಗಠಾಣ ಶಾಸಕರಾದ ವಿಠ್ಠಲ ಕಟಕಧೋಂಡ, ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ನಾಯಕ, ಕೆಪಿಸಿಸಿ…
