Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಚಡಚಣ: ವಿದ್ಯಾಥಿಗಳಿಗೆ ಪಾಠ ಎಷ್ಟು ಮುಖ್ಯವೋ, ಆಟೋಟ್ ಸಹ ಅಷ್ಟೆ ಪ್ರಾಮುಖ್ಯವಾದದ್ದು. ಕ್ರೀಡೆಯಿಂದ ವಿದ್ಯಾರ್ಥಿಗಳು ಮಾನಸಿಕ ಹಾಗೂ ದೈಹಿಕವಾಗಿ ಸದೃಢವಾಗಲು ಕ್ರೀಡೆ ಸಹಕಾರಿಯಾಗುತ್ತದೆ. ಎಲ್ಲ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಎಸ್.ಕೆ ಪಾಟೀಲ್ ಶಿಕ್ಷಣ ಸಂಸ್ಥೆಯ ನಿರ್ದೇಶಕ ಎಸ್ ಕೆ ಪಾಟೀಲ್ ಅವರು ಹೇಳಿದರು.ಚಡಚಣ ತಾಲೂಕಿನ ಶ್ರೀ ಸಿದ್ಧೇಶ್ವರ ಪದವಿ ಪೂರ್ವ ಮಹಾವಿದ್ಯಾಲಯ ಆವರಣದಲ್ಲಿ ಆಯೋಜಿಸಿದ್ದ 2024-25 ನೇ ಸಾಲಿನ ಚಡಚಣ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ, ಅವರು ಪ್ರತಿಯೊಬ್ಬರು ಉತ್ತಮ ಆರೋಗ್ಯದ ಕಡೆ ಗಮನ ಹರಿಸಿದಾಗ ಮಾತ್ರ ದೈಹಿಕವಾಗಿ, ಮಾನಸೀಕವಾಗಿ ಸದೃಡರಾಗಲು ಸಾಧ್ಯ ಎಂದರು.ಈ ಕ್ರೀಡಾಕೂಟದಲ್ಲಿ ಲೋಣಿ, ಬರಡೋಲ, ಚಡಚಣ, ದೇವರನಿಂಬರಗಿ, ಹಲಸಂಗಿ ಕೇರೂರ, ಧೂಳಖೇಡ, ಮರಗೂರ, ಜಿಗಜೇವಣಿ ಪದವಿ ಪೂರ್ವ ಕಾಲೇಜು ಬಾಲಕ ಮತ್ತು ಬಾಲಕಿ ವಿದ್ಯಾರ್ಥಿಗಳು ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿದರು.ಈ ಸಂದರ್ಭದಲ್ಲಿ ಎಸ್.ಕೆ ಪಾಟೀಲ್ ಮಹಾವಿದ್ಯಾಲಯ ಪ್ರಾಚಾರ್ಯ ಆರ್.ಕೆ ಪಾಟೀಲ್, ದೈಹಿಕ ಉಪನ್ಯಾಸಕ ಮಂಜುನಾಥ ಝಲ್ಪಿ, ಉಪನ್ಯಾಸಕರಾದ…
ವಿಜಯಪುರ: ನಗರದ ಸೈನಿಕ ಶಾಲೆ ಪ್ರತಿಭಾವಂತ ವಿದ್ಯಾರ್ಥಿಗಳ ಕಣಜವಾಗಿದ್ದು ದೇಶ ಕಟ್ಟುವಲ್ಲಿ ಇಲ್ಲಿ ಓದಿರುವ ವಿದ್ಯಾರ್ಥಿಗಳ ಪಾತ್ರ ಅನನ್ಯವಾದದ್ದು, ಇಲ್ಲಿ ಓದಿರುವ ವಿದ್ಯಾರ್ಥಿಗಳು ರಾಷ್ಟ್ರ ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡು ಸೈನಿಕ ಶಾಲೆಯ ಗೌರವವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಿಸಿದ್ದಾರೆ ಎಂದು ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.ಶುಕ್ರವಾರ ಪ್ರತಿಷ್ಠಿತ ಸೈನಿಕ ಶಾಲೆಗೆ ಭೇಟಿ ನೀಡಿ ಶೈಕ್ಷಣಿಕ ವ್ಯವಸ್ಥೆಯನ್ನು ಪರಿಶೀಲಿಸಿದ ಅವರು, ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು, .ಹಲವಾರು ಸಾಧಕರ ಸಾಧನೆಗಳನ್ನ ಮಕ್ಕಳಿಗೆ ವಿವರಿಸಿ ಹೇಳಿ ಅವರಲ್ಲಿ ಸ್ಪೂರ್ತಿ ತುಂಬಿದರು.ಸೈನಿಕ ಶಾಲೆಗೆ ಆಗಮಿಸಿದ ಸಂಗಮೇಶ ಬಬಲೇಶ್ವರ ಅವರನ್ನು ಪ್ರಾಚಾರ್ಯರಾದ ಕ್ಯಾಪ್ಟನ್ ಪ್ರತಿಭಾ ಬಿಸ್ಟ್ ಹಾಗೂ ಸಿಬ್ಬಂದಿ ವರ್ಗ ಸ್ವಾಗತಿಸಿ ಸನ್ಮಾನಿಸಿದರು.ಕರ್ನಾಟಕ ಸರಕಾರದ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳುವಂತೆ ಸೂಚಿಸಿದ ಸಂಗಮೇಶ ಬಬಲೇಶ್ವರ ವಿದ್ಯಾರ್ಥಿಗಳಿಗೆ ಶಿಸ್ತಿನ ಜೊತೆಗೆ ಸಂಸ್ಕಾರವನ್ನು ಕಲಿಸುವುದು ಇಂದಿನ ತುರ್ತು ಅಗತ್ಯವಾಗಿದೆ, ಕರ್ನಾಟಕ ಬಾಲವಿಕಾಸ ಅಕಾಡೆಮಿಯು ಸೈನಿಕ ಶಾಲೆಯ ಮಕ್ಕಳಿಗಾಗಿ ಹಮ್ಮಿಕೊಳ್ಳಲಿರುವ ಕಾರ್ಯಕ್ರಮಗಳ ಕುರಿತು ಪ್ರಾಚಾರ್ಯರೊಂದಿಗೆ ಚರ್ಚಿಸಿದರು.ಈ…
ವಿಜಯಪುರ: ೨೦೨೪-೨೫ನೇ ಸಾಲಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಉದ್ಯೋಗಿನಿ, ಚೇತನಾ, ಧನಶ್ರೀ, ಲಿಂಗತ್ವ ಅಲ್ಪ ಸಂಖ್ಯಾತರ ಪುನರ್ವಸತಿ ಯೋಜನೆ ಹಾಗೂ ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆಗಳಿಗಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆ.೨೧ಕೊನೆಯ ದಿನವಾಗಿದೆ.ಅರ್ಜಿಯನ್ನು ಹತ್ತಿರದ ಬಾಪೂಜಿ ಸೇವಾ ಕೇಂದ್ರ,ಗ್ರಾಮ ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ಅಭಿವೃದ್ಧಿ ನಿರೀಕ್ಷಕರು,ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ,ಉಪ ನಿರ್ದೇಶಕರ ಕಚೇರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ ೦೮೩೫೨-೨೯೫೩೫೩ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಪ್ರಕರಣಗಳ ವಿಲೇವಾರಿ ಸಭೆಯಲ್ಲಿ ಉಪ ಲೋಕಾಯುಕ್ತ ನ್ಯಾ.ಕೆ.ಎನ್. ಫಣೀಂದ್ರ ಸ್ಪಷ್ಟನೆ ವಿಜಯಪುರ: ಕರ್ನಾಟಕ ಉಪ ಲೋಕಾಯುಕ್ತರಾದ ನ್ಯಾ.ಕೆ.ಎನ್. ಫಣೀಂದ್ರ ಅವರ ಅಧ್ಯಕ್ಷತೆಯಲ್ಲಿ ನಗರದ ಶ್ರೀ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಎರಡನೇ ದಿನ ನಡೆದ ಸಾರ್ವಜನಿಕ ಅಹವಾಲು, ಕುಂದುಕೊರತೆ, ದೂರು ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿ ಸಭೆಯಲ್ಲಿ ಸಾರ್ವಜನಿಕರಿಂದ ಹಲವು ಅರ್ಜಿಗಳನ್ನು ಸ್ವೀಕರಿಸಲಾಯಿತು.ಉಪ ಲೋಕಾಯುಕ್ತ ನ್ಯಾ.ಕೆ.ಎನ್. ಫಣೀಂದ್ರ ಅವರು ಮಾತನಾಡಿ, ಎಲ್ಲಾ ಅರ್ಜಿದಾರರ ದೂರನ್ನು ಆಲಿಸಲಾಗುವುದು. ಸಲ್ಲಿಕೆಯಾಗುವ ದೂರು, ಅಹವಾಲುಗಳನ್ನು ಸಂಬಂಧಿಸಿದ ಇಲಾಖೆಗೆ ವರ್ಗಾಯಿಸಿ ಪರಿಹಾರ ಕಲ್ಪಿಸಲು ಆದ್ಯತೆ ನೀಡಲಾಗುವುದು ಎಂದು ಹೇಳಿದರು.ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ಮಾತನಾಡಿ, ಸಾರ್ವಜನಿಕ ಆಡಳಿತವನ್ನು ಉತ್ತಮಗೊಳಿಸುವಲ್ಲಿ ಕರ್ನಾಟಕ ಲೋಕಾಯುಕ್ತ ಸಂಸ್ಥೆ ಮಾದರಿಯಾಗಿದೆ. ಸಾರ್ವಜನಿಕರ ಸಮಸ್ಯೆಗೆ ಪ್ರತಿಯಾಗಿ ಅಧಿಕಾರಿ, ಸಿಬ್ಬಂದಿಗಳು ಕಾರ್ಯನಿರ್ವಹಿಸಿ, ತಮ್ಮ ಹಂತದಲ್ಲಿಯೇ ಸಲ್ಲಿಕೆಯಾಗುವ ಸಮಸ್ಯೆಗಳಿಗೆ ಪರಿಹಾರ ದೊರಕಿಸಿಕೊಡುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು.ತಪ್ಪಿದಲ್ಲಿ ಅಧಿಕಾರಿಗಳನ್ನು ಹೊಣೆಗಾರರನ್ನಾಗಿಸಿ, ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕಾಧಿಕಾರಿ ರಿಷಿ ಆನಂದ ಮಾತನಾಡಿ, ಅತ್ಯಂತ ಜವಾಬ್ದಾರಿಯಿಂದ ಜನಹಿತಕ್ಕಾಗಿ, ಜನ…
ಕೆಎಎಸ್ ಪರೀಕ್ಷೆ ಪೂರ್ವಭಾವಿ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿ ಟಿ.ಭೂಬಾಲನ್ ಸೂಚನೆ ವಿಜಯಪುರ: ಮುಂದಿನ ಆಡಳಿದ ಅಧಿಕಾರಿಗಳು ರೂಪುಗೊಳ್ಳುವ ಪರೀಕ್ಷೆ ಇದಾಗಿದ್ದು, ಅತ್ಯಂತ ಎಚ್ಚರಿಕೆ, ಸೂಕ್ಷ್ಮವಾಗಿ ಪಾರದರ್ಶಕತೆಯಿಂದ ಪರೀಕ್ಷೆ ನಡೆಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳಿಗೆ ಸೂಚಿಸಿದರು.ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ೨೦೨೩-೨೪ನೇ ಸಾಲಿನ ಗೆಜೆಟೆಡ್ ಪ್ರೊಬ್ರೇಷನರ್ ಗ್ರೂಪ್ ಎ ಹಾಗೂ ವೃಂದ ಪರಿಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಆ.೨೬ರ ಮಂಗಳವಾರ ಕೆಎಎಸ್ ಪರಿಕ್ಷೆ ನಡೆಯಲಿದೆ. ಪ್ರತಿ ೪-೫ ಪರೀಕ್ಷಾ ಕೇಂದ್ರಗಳಿಗೆ ಉಪಕೇಂದ್ರಗಳ ಮೇಲ್ವಿಚಾರಣೆಗೆ ಓರ್ವ ಎ ಹಾಗೂ ಬಿ ದರ್ಜೆಯ ಅಧಿಕಾರಿಯನ್ನು ನೇಮಿಸಿವುದು ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆ ಕೊಂಡೊಯ್ಯಲು ಮಾರ್ಗಾಧಿಕಾರಿಯನ್ನು ನೇಮಿಸಿ ಅವರಿಗೆ ಬೆಂಗಾವಲು ಕಾರ್ಯಕ್ಕಾಗಿ ಓರ್ವ ಸಶಸ್ತ್ರ ಪೊಲೀಸ್ ಸಿಬ್ಬಂದಿ, ಗ್ರೂಪ್-ಡಿ ಸಿಬ್ಬಂದಿ, ವಾಹನದ ವ್ಯವಸ್ಥೆಗೆ ಅವರು ಸೂಚನೆ ನೀಡಿದರು.ಅಭ್ಯರ್ಥಿಗಳನ್ನು ಕಟ್ಟುನಿಟ್ಟಾಗಿ ತಪಾಸಣೆಗೊಳಪಡಿಸಬೇಕು. ಅಭ್ಯರ್ಥಿಗಳ ಯಾವುದೇ ಎಲೆಕ್ಟ್ರಾನಿಕ್ ಡಿವೈಸ್, ಮೈಕ್ರೋಪೂನ್ ಇನ್ನಿತರ ಉಪಕರಣ ಬಳಸದಿರುವ ಬಗ್ಗೆ ತಪಾಸಣೆ ನಡೆಸಬೇಕು. ಪರೀಕ್ಷಾ…
ಸಂವಾದ ಕಾರ್ಯಕ್ರಮದಲ್ಲಿ ಉಪ ಲೋಕಾಯುಕ್ತ ನ್ಯಾ.ಕೆ.ಎನ್.ಫಣೀಂದ್ರ ಕಿವಿಮಾತು ವಿಜಯಪುರ: ದುರ್ಬಲರಿಗೆ, ಅನ್ಯಾಯಕ್ಕೊಳಗಾದವರಿಗೆ ಕಾನೂನು ರಕ್ಷಣೆ ನಿಡುವ ಮೂಲಕ ಅವರಿಗೆ ನ್ಯಾಯ ದೊರಕಿಸುವ ಉತ್ಕೃಷ್ಟ ಜವಾಬ್ದಾರಿ ವಕೀಲರ ಮೇಲಿದ್ದು, ವಕೀಲರು ಕಾನೂನಿನ ಸಂಪೂರ್ಣ ಅರಿವು ಹೊಂದುವ ಮೂಲಕ ನ್ಯಾಯ ದೊರಕಿಸಲು ಮುಂದಾಗಬೇಕು ಎಂದು ಕರ್ನಾಟಕ ಉಪ ಲೋಕಾಯುಕ್ತರಾದ ನ್ಯಾ.ಕೆ.ಎನ್. ಫಣೀಂದ್ರ ಕಿವಿ ಮಾತು ಹೇಳಿದರು.ಶುಕ್ರವಾರ ನಗರದ ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣದ ಜಿಲ್ಲಾ ವಕೀಲರ ಸಂಘದ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಂಗ ಘಟಕ ಹಾಗೂ ವಕೀಲರ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಸಾರ್ವಜನಿಕ ಆಡಳಿತ ಮತ್ತು ಉತ್ತಮ ಆಡಳಿತದಲ್ಲಿ ವಕೀಲರ ಪಾತ್ರ ಕುರಿತ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಮಹತ್ವದ ಕಾನೂನು ರಚನೆ ಹಾಗೂ ತಿದ್ದುಪಡಿಯಲ್ಲಿ ವಕೀಲರ ಪಾತ್ರ ಪ್ರಮುಖವಾಗಿದೆ. ವಕೀಲರು ಸಮಾಜಕ್ಕೆ ಹತ್ತಿರವಿರುವ ಲೋಕಾಯುಕ್ತ ಕಾನೂನಿನ ಬಗ್ಗೆ ತಿಳಿದುಕೊಂಡು ಸಮಾಜಕ್ಕೆ ಎಲ್ಲರಿಗೂ ಸಹಾಯ ಮಾಡಲು ಅವಕಾಶವಿದೆ.ಸಮಾಜದಲ್ಲಿ ಎಲ್ಲರೂ ಗೌರವಯುತವಾಗಿ ಜೀವನ ನಡೆಸಲು ಸಂವಿಧಾನ ಅವಕಾಶ ಕಲ್ಪಿಸಿದೆ. ಸಂವಿಧಾನದ ಆಶಯವೂ ಇದಾಗಿದೆ.…
ವಿಜಯಪುರ: ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿರುವ ತನಿಖೆ-ವಿಚಾರಣೆಗೆ ಬಾಕಿ ಇರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರುದಾರರು ಹಾಗೂ ಎದುರುದಾರರ ಸಮ್ಮುಖದಲ್ಲಿ ವಿಚಾರಣೆ ನಡೆಸಿದ ಕರ್ನಾಟಕ ಉಪ ಲೋಕಾಯುಕ್ತರಾದ ನ್ಯಾ.ಕೆ.ಎನ್. ಫಣೀಂದ್ರ ಅವರು ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.ಬಸವನಬಾಗೇವಾಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಅನುಕಂಪದ ಆಧಾರದ ನೇಮಕಾತಿ ಮಾಡಿಕೊಳ್ಳುವ ಬಗ್ಗೆ ವಿರುಪಾಕ್ಷಪ್ಪ ಮೋಟಗೇರಿ ಇವರು ಸಲ್ಲಿಸಿದ ದೂರಿನ ವಿಚಾರಣೆ ಕೈಗೆತ್ತಿಕೊಂಡು, ಅಧಿಕಾರಿಗಳಿಂದ ವಿವರ ಪಡೆದುಕೊಂಡರು. ನೇಮಕಾತಿ ವಿಷಯಗಳು ಲೋಕಾಯುಕ್ತ ಕಾಯ್ದೆಯಡಿ ಬರುವುದಿಲ್ಲ, ತಾವು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವನ್ನು ಸಂಪರ್ಕಿಸಿ, ಉಚ್ಛ ನ್ಯಾಯಾಲಯಕ್ಕೆ ರಿಟ್ ಅರ್ಜಿ ಸಲ್ಲಿಸುವ ಹಕ್ಕನ್ನು ಕಾಯ್ದಿರಿಸಿ ಕರ್ನಾಟಕ ಲೋಕಾಯುಕ್ತ ಕಾಯ್ದೆಯಡಿ ಪ್ರಕರಣವನ್ನು ಮುಕ್ತಾಯಗೊಳಿಸಿದರು.ನಿವೃತ್ತಿ ವೇತನ ಹಾಗೂ ನಿವೃತ್ತಿ ನಂತರದ ಸೌಲಭ್ಯಗಳನ್ನು ಒದಗಿಸಲು ಕೋರಿ ರಾಜೇಶ್ವರಿ ಇವರು ಸಲ್ಲಿಸಿದ ದೂರಿಗೆ ಸಂಬಂಧಿಸಿದಂತೆ, ಈ ಪ್ರಕರಣದಲ್ಲಿ ಕರ್ನಾಟಕ ರಾಜ್ಯ ಕೆಎಟಿ ಮುಂದೆ ಅರ್ಜಿ ಸಲ್ಲಿಸಿದ್ದು, ಅಲ್ಲಿ ಸಾಕಷ್ಟು ಆದೇಶಗಳನ್ನು ಸಹ ಹೊರಡಿಸಲಾಗಿದೆ.…
ಸಚಿವ ಈಶ್ವರ್ ಖಂಡ್ರೆ ಖಡಕ್ ಎಚ್ಚರಿಕೆ | ಜಿಲ್ಲಾಡಳಿತಗಳಿಗೆ ಸೂಚನೆ | ಜಲಮೂಲ ಕಲುಷಿತಗೊಳಿಸಿದರೆ ಕ್ರಿಮಿನಲ್ ಮೊಕದ್ದಮೆ ಬೆಂಗಳೂರು: ಈ ಬಾರಿ ಗೌರಿ ಗಣೇಶ ಹಬ್ಬದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ಬಳಕೆ ಮತ್ತು ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಮೂರ್ತಿಗಳ ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್ ಬಿ ಖಂಡ್ರೆ ಗುರುವಾರ ಎಲ್ಲಾ ಜಿಲ್ಲಾಡಳಿತಗಳಿಗೆ ಸೂಚಿಸಿದ್ದಾರೆ.ಆದೇಶವನ್ನು ಉಲ್ಲಂಘಿಸುವ ಮತ್ತು ಜಲಮೂಲಗಳನ್ನು ಕಲುಷಿತಗೊಳಿಸುವವರ ವಿರುದ್ಧ ವಾಯು ಮತ್ತು ಜಲ ಕಾಯ್ದೆಯಡಿ ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸಲಾಗುವುದು ಎಂದು ಅವರು ಹೇಳಿದರು. ಇಲ್ಲಿಯವರೆಗೆ ಕೇವಲ ನಿರ್ದೇಶನಗಳನ್ನು ನೀಡಲಾಗುತ್ತಿದೆ ಎಂದು ಹೇಳಿದರು. ಆದರೆ ಈಗ ಸಾಕಷ್ಟು ಮುಂಚಿತವಾಗಿಯೇ ಸರ್ಕಾರಿ ಆದೇಶ ಹೊರಡಿಸಲಾಗಿದೆ. ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರೊಂದಿಗೆ ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿದ ಖಂಡ್ರೆ, ಪರಿಸರ ಸ್ನೇಹಿ ವಿಗ್ರಹಗಳನ್ನು ಉತ್ತೇಜಿಸಲು ಮತ್ತು ಹಸಿರು ಪಟಾಕಿಗಳ ಬಳಕೆಯನ್ನು ಉತ್ತೇಜಿಸಲು ಜಿಲ್ಲಾಧಿಕಾರಿಗಳ ಅಡಿಯಲ್ಲಿ ಸಮಿತಿಗಳನ್ನು ರಚಿಸಿ ಆದೇಶ ಹೊರಡಿಸಿದ್ದಾರೆ.ಇತ್ತೀಚೆಗೆ ಶಿರೂರು ಮತ್ತು ವಯನಾಡಿನಲ್ಲಿ…
ನೀರಿನ ದರ ಶೇ.20-30 ರಷ್ಟು ಏರಿಕೆ | ಡಿಸಿಎಂ ಡಿಕೆ ಶಿವಕುಮಾರ್ ಘೋಷಣೆ ಬೆಂಗಳೂರು: ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು (ಬಿಡಬ್ಲ್ಯೂಎಸ್‌ಎಸ್‌ಬಿ) ಮಂಡಳಿಯು ಪ್ರಸ್ತುತ ಎದುರಿಸುತ್ತಿರುವ ಆರ್ಥಿಕ ನಷ್ಟವನ್ನು ಪರಿಹರಿಸಲು ಬೆಂಗಳೂರಿನಲ್ಲಿ ನೀರಿನ ದರವನ್ನು ಹೆಚ್ಚಿಸಲು ನಿರ್ಧರಿಸಿದೆ. “ನೀರು ಉಪಯುಕ್ತತೆಯ ಉಳಿವಿಗಾಗಿ 20-30% ರಷ್ಟು ಬೆಲೆಗಳನ್ನು ಹೆಚ್ಚಿಸುವುದನ್ನು ಬಿಟ್ಟು ಬೇರೆ ದಾರಿಯಿಲ್ಲ” ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.“ನೀರು ಬರದಿದ್ದಾಗ ನಾಗರಿಕರು ನಮ್ಮನ್ನು ಬೈಯುತ್ತಾರೆ, ವಾಟ್ಸಾಪ್ ಸಂದೇಶಗಳು ಮತ್ತು ಕರೆಗಳಿಂದ ನಮ್ಮನ್ನು ಬೇಟೆಯಾಡುತ್ತಾರೆ. ನನ್ನನ್ನು ಯಾರಾದರೂ ಟೀಕಿಸಲಿ, ನಾನು ಬೆಂಗಳೂರಿನಲ್ಲಿ ನೀರಿನ ದರವನ್ನು ಹೆಚ್ಚಿಸುತ್ತೇನೆ, ಇಲ್ಲದಿದ್ದರೆ ನಾವು ಬದುಕುವುದಿಲ್ಲ” ಎಂದು ಶಿವಕುಮಾರ್ ಹೇಳಿದರು.“ಕಳೆದ 12-13 ವರ್ಷಗಳಲ್ಲಿ ನೀರಿನ ದರ ಏರಿಕೆಯಾಗಿಲ್ಲ. ಬಿಡಬ್ಲ್ಯೂಎಸ್‌ಎಸ್‌ಬಿ ತನ್ನ ಹಣಕಾಸು ನಿರ್ವಹಣೆಯನ್ನು ಬಹಳ ಕಷ್ಟದಿಂದ ನಿರ್ವಹಿಸುತ್ತಿದೆ. ನೀರಿನ ದರ ಏರಿಕೆ ಅನಿವಾರ್ಯವಾಗಿದೆ ಮತ್ತು ಇದಕ್ಕೆ ಯಾವುದೇ ವಿರೋಧವನ್ನು ಲೆಕ್ಕಿಸದೆ ಮಾಡಲಾಗುವುದು” ಎಂದು ‘ಕಾವೇರಿ ನೀರು ನಿಮ್ಮ ಮನೆ ಬಾಗಿಲಿಗೆ’ ಅಭಿಯಾನವನ್ನು ಉದ್ಘಾಟಿಸಿದ ನಂತರ ಉಪ ಮುಖ್ಯಮಂತ್ರಿಗಳು…
ಇಂಡಿ: ೨೧ ನೇ ರಾಷ್ಟ್ರೀಯ ಜಾನುವಾರು ಗಣತಿಗೆ ಸಿದ್ದತೆ ಆರಂಭವಾಗಿದೆ. ಸೆ.೧ ರಂದು ಜಾನುವಾರು ಗಣತಿ ಕಾರ್ಯಕ್ಕೆ ಇಂಡಿ ತಾಲೂಕಿನಲ್ಲಿ ಚಾಲನೆ ಸಿಗಲಿದೆ. ಇದಕ್ಕಾಗಿ ಪಶುಪಾಲನಾ ಇಲಾಖೆಯ ಅಗತ್ಯ ಸಿದ್ದತೆಗೆ ಮುಂದಾಗಿದೆ. ಇಲಾಖೆ ಅವರಿಗೆ ಜಾನುವಾರು ಗಣತಿ ಬಗ್ಗೆ ತಿಳಿಸುವ ಕೆಲಸ ಮಾಡುತ್ತಿದೆ ಎಂದು ಹಿರಿಯ ಪಶು ವೈದ್ಯಾಧಿಕಾರಿ ಡಾ. ರಾಜಕುಮಾರ ಅಡಕಿ ತಿಳಿಸಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ತಾಲೂಕಿನಲ್ಲಿ ಹೈನುಗಾರಿಕೆ ಪಶುಪಾಲನೆ ಪ್ರಮುಖ ವೃತ್ತಿಯಾಗಿದೆ. ಆದರೆ ವರ್ಷದಿಂದ ವರ್ಷಕ್ಕೆ ಈ ಪ್ರಮಾಣ ಗಣನೀಯವಾಗಿ ಕುಸಿತ ಕಾಣುತ್ತಿದೆ. ೧೯ ನೇ ಜಾನುವಾರು ಗಣತಿಗೆ ಹೋಲಿಸಿದರೆ ೨೦ ರಲ್ಲಿ ಈ ಪ್ರಮಾಣ ಕಡಿಮೆಯಾಗಿದೆ. ನಂತರ ಕೂಡ ವರ್ಷದಿಂದ ವರ್ಷಕ್ಕೆ ಇಳಿಕೆ ಕಂಡು ಬಂದಿದೆ. ಪ್ರತಿ ೫ ವರ್ಷಕ್ಕೊಮ್ಮೆ ನಡೆಸಲಾಗುವ ಜಾನುವಾರು ಗಣತಿಯಲ್ಲಿ ಜಾನುವಾರುಗಳ ಪ್ರಮಾಣ, ವಯಸ್ಸು, ಲಿಂಗ ಸಂಯೋಜನೆ, ಕೋಳಿ ಸಾಗಾಣಿಕೆ, ಕುರಿ ಮೇಕೆ ಸಾಕಾಣಿಕೆಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ.ತಾಲೂಕಿನಲ್ಲಿ ೨೧ ನೇ ಜಾನುವಾರು ಗಣತಿ ಸಲುವಾಗಿ ಇಲಾಖೆಯು ಅಗತ್ಯ ಸಿದ್ದತೆಯಲ್ಲಿ ತೊಡಗಿದೆ. ತಂಡಗಳ…
