Subscribe to Updates
Get the latest creative news from FooBar about art, design and business.
Author: editor.udayarashmi@gmail.com
ದೇವರಹಿಪ್ಪರಗಿ: ಬಂಜಾರಾ ಸಮುದಾಯದ ಪ್ರಮುಖರು ಕೆಸರಟ್ಟಿ ಶಂಕರಲಿಂಗಮಠದ ಸೋಮಲಿಂಗ ಮಹಾರಾಜ್‌ರ ೪೧ನೇ ಜನ್ಮದಿನದ ಪ್ರಯುಕ್ತ ಅವರನ್ನು ಸನ್ಮಾನಿಸಿ ಗೌರವಿಸಿದರು.ಈ ಸಂದರ್ಭದಲ್ಲಿ ಸುಭಾಸ ಜಾಧವ, ಬಾಳು ರಾಠೋಡ, ವಿಕ್ರಮ ರಾಠೋಡ, ವಸಂತ ರಾಠೋಡ, ಉಪೇಂದ್ರ ಚವ್ಹಾಣ, ಧರ್ಮು ರಾಠೋಡ, ಅಶೋಕ ರಾಠೋಡ ಇದ್ದರು.
ದೇವರಹಿಪ್ಪರಗಿ: ಸಾಮಾಜಿಕ ಅರಣ್ಯ ಇಲಾಖೆ ಹಾಗೂ ತಾಲ್ಲೂಕು ಪಂಚಾಯಿತಿ ಇವರ ಸಹಯೋಗದಲ್ಲಿ ಪರಿಸರ ದಿನಾಚರಣೆ ಅಂಗವಾಗಿ “ತಾಯಿ ಹೆಸರಿನಲ್ಲಿ ಒಂದು ವೃಕ್ಷ ಅಭಿಯಾನ” ಜರುಗಿತು.ಪಟ್ಟಣದ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಗುರುವಾರ ಅಭಿಯಾನಕ್ಕೆ ಚಾಲನೆ ನೀಡಲಾಯಿತು.ಈ ಸಂದರ್ಭದಲ್ಲಿ ಸಾಮಾಜಿಕ ವಲಯ ಅರಣ್ಯ ಅಧಿಕಾರಿ ಎಂ.ವೈ.ಮಲಕ್ಕನ್ನವರ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ ಪ್ರತಿಯೊಬ್ಬ ನಾಗರಿಕ ಕೂಡ ತನ್ನ ತಾಯಿ ಹೆಸರಿನಲ್ಲಿ ಒಂದು ಸಸಿಯನ್ನು ನೆಟ್ಟು ಅದನ್ನು ಪೋಷಿಸಿ, ಬೆಳೆಸುವ ಕಾರ್ಯ ಮಾಡಬೇಕು. ಜಿಲ್ಲೆಯಾದ್ಯಂತ ವ್ಯಾಪಕವಾಗಿ ಅರಣ್ಯದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಹಾಗೂ ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ ಎಂಬುದನ್ನು ಅರಿತುಕೊಳ್ಳುವ ಉದ್ದೇಶದಿಂದ ಈ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದರು.ಈ ಸಂದರ್ಭದಲ್ಲಿ ಉಪವಲಯ ಅರಣ್ಯ ಅಧಿಕಾರಿ ಆರ್.ಎಚ್.ಬಿರಾದಾರ, ಐಇಸಿ ಸಂಯೋಜಕ ಸಿದ್ದು ಕಾಂಬಳೆ, ಜಿ.ಎಸ್.ರೋಡಗಿ, ಕಿರಣ ಪಾಟೀಲ, ಆನಂದ ಮುದೋಡಗಿ, ಪರಶುರಾಮ ಗುಬ್ಬೇವಾಡ, ಭೀಮರಾಯ ಭಾವಿಕಟ್ಟಿ, ಭಾರತಿ ಕೋಳಿ, ಭಾರತಿ ಸೇರಿದಂತೆ ಅರಣ್ಯ ಇಲಾಖೆ ಹಾಗೂ ತಾಲ್ಲೂಕು ಪಂಚಾಯಿತಿ ಸಿಬ್ಬಂದಿ ಹಾಜರಿದ್ದರು.
ವಿಜಯಪುರ: ಯುವ ಸಬಲಿಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆ ತೋರಿದ ಕ್ರೀಡಾಪಟುಗಳಿಂದ ಏಕಲವ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಿದೆ.ನಿಗದಿತ ಅರ್ಜಿ ನಮೂನೆಯನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವಿಜಯಪುರ ಕಚೇರಿಯಿಂದ ಪಡೆದು, ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ದಿನಾಂಕ : ೧೮-೦೯-೨೦೨೪ರೊಳಗೆ ಸಲ್ಲಿಸಬೇಕು.ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ: ೦೮೩೫೨-೨೫೧೦೮೫,ಮೊ: ೯೪೮೦೮೮೬೫೫೫ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ವಿಜಯಪುರ: ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಅಧಿಕೃತ ರಾಷ್ಟ್ರೀಯ ಸಂಸ್ಥೆಗಳು ಆಯೋಜಿಸುವ ರಾಷ್ಟçಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ಪಡೆದ ಮತ್ತು ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಿಗೆ ಭಾರತ ಸರ್ಕಾರದಿಂದ ನಿಯೋಜಿಸಲ್ಪಟ್ಟ ತಂಡದಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡಿದ ರಾಜ್ಯದ ಕ್ರೀಡಾಪಟುಗಳಿಗೆ ಶೈಕ್ಷಣಿಕ ಶುಲ್ಕವನ್ನು ಮರುಪಾವತಿಸುವ ಯೋಜನೆಯನ್ನು ಅನುಷ್ಠಾನಗೊಳಿಸಲು ಅರ್ಹ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಹ ಕ್ರೀಡಾಪಟುಗಳು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಅರ್ಜಿ ನಮೂನೆಯನ್ನು ಪಡೆದು, ದಿನಾಂಕ : ೧೮-೦೯-೨೦೨೪ರೊಳಗಾಗಿ ಭರ್ತಿ ಮಾಡಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕಚೇರಿಗೆ ಸಲ್ಲಿಸಬೇಕು.ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ: ೦೮೩೫೨-೨೫೧೦೮೫,ಮೊ: ೯೪೮೦೮೮೬೫೫೫ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ವಿಜಯಪುರ: ಆಲಮಟ್ಟಿಯ ಜವಾಹರ ನವೋದಯ ವಿದ್ಯಾಲಯಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಬುಧವಾರ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿಗಳ ಕುರಿತು ಪರಿಶೀಲನೆ ನಡೆಸಿ ಅಗತ್ಯ sಸಲಹೆ ಸೂಚನೆಗಳನ್ನು ನೀಡಿದರು.ವಿದ್ಯಾಲಯದ ಬೋಧನಾ ಗುಣಮಟ್ಟವನ್ನು ಹೆಚ್ಚಿಸಿ ಫಲಿತಾಂಶ ಹೆಚ್ಚಳಕ್ಕೆ ಕ್ರಮ ವಹಿಸಬೇಕು. ಮಕ್ಕಳ ಸರ್ವಾಂಗೀಣ ವ್ಯಕ್ತಿತ್ವ ಬೆಳವಣಿಗೆ ದೃಷ್ಟಿಯಿಂದ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೆ ಆದ್ಯತೆ ನೀಡಿ, ಮಕ್ಕಳ ಕೌಶಲ್ಯತೆಯನ್ನು ಹೆಚ್ಚಿಸಲು ಕ್ರಿಯಾತ್ಮಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು.ಪಾಠ ಮಾಡಿ ಮಕ್ಕಳಿಗೆ ಪ್ರೇರಣೆಯಾದ ಡಿಸಿ ಹಾಗೂ ಸಿಇಒ : ಈ ಸಂದರ್ಭದಲ್ಲಿ ೧೦ನೇ ತರಗತಿಯ ಕೊಠಡಿಗೆ ತೆರಳಿ ವಿದ್ಯಾರ್ಥಿ ಗಳಿಗೆ ಭೂಗೋಳ, ಗಣಿತ,ಸಮಾಜ ವಿಜ್ಞಾನ ಸೇರಿದಂತೆ ಸಾಮಾನ್ಯ ಜ್ಞಾನದ ವಿಷಯದ ಬಗ್ಗೆ ಹಾಗೂ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರಿಷಿ ಆನಂದ ಅವರು ರೇಖಾಗಣಿತ ಹಾಗೂ ಇಂಗ್ಲೀಷ ವ್ಯಾಕರಣದ ಕುರಿತು ತಿಳಿಸಿಕೊಟ್ಟರು.ವಿದ್ಯಾರ್ಥಿ ಜೀವನವನ್ನು ಸುಂದರವಾಗಿಸಿಕೊಳ್ಳಿ, ಜ್ಞಾನಾರ್ಜನೆ ಪಡೆದುಕೊಳ್ಳಲು ಅಧ್ಯಯನಶೀಲತೆ ರೂಢಿಸಿಕೊಳ್ಳಬೇಕು. ಪ್ರತಿನಿತ್ಯದ ಪಾಠಗಳನ್ನು ಶ್ರವಣ ಮಾಡುವ ಮೂಲಕ ಮನನ ಮಾಡಿಕೊಳ್ಳಬೇಕು. ಜೀವನ ಸುಂದರಗೊಳಿಸಿಕೊಂಡು ಕಲಿತ ಶಾಲೆ ತಮ್ಮ ಊರಿಗೆ…
ಸಾರ್ವಜನಿಕ ಅಹವಾಲು ಸ್ವೀಕಾರ & ಪ್ರಕರಣಗಳ ವಿಲೇವಾರಿ ಸಭೆಯಲ್ಲಿ ಅಧಿಕಾರಿಗಳಿಗೆ ಉಪ ಲೋಕಾಯುಕ್ತ ನ್ಯಾ.ಕೆ.ಎನ್.ಫಣೀಂದ್ರ ಸೂಚನೆ ವಿಜಯಪುರ: ಸಾರ್ವಜನಿಕ ಸಮಸ್ಯೆಗಳನ್ನು ಪರಿಹಾರ ಮಾಡುವುದು ಸರಕಾರಿ ನೌಕರರ ಆದ್ಯತೆಯಾಗಬೇಕು. ಸಮಸ್ಯೆಗಳು ಉದ್ಭವವಾಗದಂತೆ ತಮಗೆ ವಹಿಸಿದ ಕಾರ್ಯದ ವ್ಯಾಪ್ತಿ, ಜವಾಬ್ದಾರಿ ಅರಿತುಕೊಂಡು ಕಾರ್ಯ ನಿರ್ವಹಿಸಬೇಕು. ಅಧಿಕಾರಿಗಳು ಸಾರ್ವಜನಿಕರೊಂದಿಗೆ ತಾಳ್ಮೆ ಹಾಗೂ ಸೌಜನ್ಯದಿಂದ ವರ್ತಿಸಿ, ಅವರ ಸಮಸ್ಯೆ ಆಲಿಸಿ ಪರಿಹಾರ ಒದಗಿಸುವ ಮೂಲಕ ಸಾರ್ವಜನಿಕ ಆಡಳಿತ ಗುಣಮಟ್ಟ ಹೆಚ್ಚಿಸಬೇಕು ಎಂದು ಕರ್ನಾಟಕ ಉಪ ಲೋಕಾಯುಕ್ತರಾದ ನ್ಯಾ.ಕೆ.ಎನ್. ಫಣೀಂದ್ರ ಹೇಳಿದರು.ಗುರುವಾರ ನಗರದ ಶ್ರೀ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ನಡೆದ ಸಾರ್ವಜನಿಕ ಅಹವಾಲು, ಕುಂದುಕೊರತೆ, ದೂರು ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಯಾವುದೇ ಆಮಿಷಕ್ಕೆ ಒಳಗಾಗದೇ ಸಂದರ್ಭಾನುಸಾರ ಕಾನೂನು ನಿಯಮಾವಳಿಗಳ ಪ್ರಕಾರ ಭ್ರಷ್ಟಾಚಾರರಹಿತ ಸೇವೆ ಸಲ್ಲಿಸುವುದು ಪ್ರತಿಯೊಬ್ಬ ನೌಕರರ ಕರ್ತವ್ಯವಾಗಿದ್ದು, ಅರ್ಹ ಫಲಾನುಭವಿಗಳಿಗೆ ದೊರೆಯಬೇಕಾದ ಸೇವೆಯಲ್ಲಿ ಯಾವುದೇ ವಿಳಂಬವಾಗದಂತೆ ಕಾರ್ಯ ನಿರ್ವಹಿಸಿ, ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಬೇಕು ಎಂದರು.ಸಾರ್ವಜನಿಕರ ಹಕ್ಕುಗಳ ಉಲ್ಲಂಘನೆಯಾಗದಂತೆ ನೋಡಿಕೊಂಡು…
ದೇವರಹಿಪ್ಪರಗಿ: ಗ್ರಾಮದಲ್ಲಿ ಸುರಿದ ಮಳೆ ಶಾಲಾ ಆವರಣ ಹಾಗೂ ಕೊಠಡಿಗಳಲ್ಲಿ ನಿಂತು ಮಕ್ಕಳ ಆಟಪಾಠ ಸೇರಿದಂತೆ ಎಲ್ಲ ಚಟುವಟಿಕೆಗಳಿಗೆ ಅಡ್ಡಿಯಾಯಿತು.ತಾಲ್ಲೂಕಿನ ಕಡ್ಲೇವಾಡ ಪಿಸಿಎಚ್‌ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲಾ ಆವರಣ ಬುಧವಾರ ಸುರಿದ ಮಳೆಯ ನೀರಿನಿಂದ ತುಂಬಿದ್ದು, ಮಕ್ಕಳ ಶಾಲಾ ಪ್ರವೇಶ, ಪ್ರಾರ್ಥನೆ ಹಾಗೂ ತರಗತಿಗಳಿಗೆ ತೊಂದರೆಯಾಯಿತು. ಮಳೆ ನೀರು ಆವರಣದಲ್ಲಿ ನಿಂತ ಪರಿಣಾಮ ಮಕ್ಕಳು ಶಾಲಾ ಕೋಣೆಗಳಿಗೆ ಪ್ರವೇಶಿಸದಂತಾಗಿತ್ತು. ಜೊತೆಗೆ ಬೆಳಿಗ್ಗೆ ಆರಂಭದಲ್ಲಿ ಮಕ್ಕಳು ಪ್ರಾರ್ಥನೆ ಹಾಗೂ ರಾಷ್ಟ್ರಗೀತೆ ಹೇಳಲು ಅವಕಾಶ ಇಲ್ಲದಂತಾಯಿತು. ಇನ್ನೂ ನಾಲ್ಕು ಕೊಠಡಿಗಳು ಸಹ ಮಳೆ ನೀರಿನಿಂದ ಸೋರಿಕೆಯಾಗಿ ಪಾಠಗಳು ನಡೆಯದಂತಾದವು. ಇದರಿಂದ ಶಿಕ್ಷಕರು ಸಹ ಅಸಹಾಯಕರಾಗಿ ಮಕ್ಕಳೊಂದಿಗೆ ಸೇರಿ ಆವರಣದ ನೀರು ಖಾಲಿಮಾಡಲು ಹರಸಾಹಸ ಪಟ್ಟರು.ಶಾಲಾ ಆವರಣದಲ್ಲಿ ಮಳೆ ನೀರು ನಿಲ್ಲವುದು ಹಾಗೂ ಕೋಣೆಗಳ ಸೋರುವಿಕೆ ಕುರಿತಂತೆ ಗ್ರಾಮ ಪಂಚಾಯಿತಿಗೆ ಹಲವು ಬಾರಿ ಮನವಿ ಮಾಡಿದ್ದರು ಸಹ ಗ್ರಾಮವನ್ನು ಪ್ರತಿನಿಧಿಸುವ ಐವರು ಗ್ರಾಮ ಪಂಚಾಯಿತಿ ಸದಸ್ಯರು ಯಾವುದೇ ಕ್ರಮಕ್ಕೆ ಮುಂದಾಗದೇ ಇರುವುದು ಪ್ರತಿವರ್ಷ ಮಳೆಗಾಲದಲ್ಲಿ…
ದೇವರಹಿಪ್ಪರಗಿ: ಮಕ್ಕಳ ಶೈಕ್ಷಣಿಕ ಪ್ರಗತಿ ಹಾಗೂ ಸಾಂಸ್ಕೃತಿಕ ಕಲೆಗಳ ಅನಾವರಣಕ್ಕೆ ಪ್ರತಿಭಾ ಕಲೋತ್ಸವ ಸಹಕಾರಿಯಾಗಬಲ್ಲದು ಎಂದು ತಹಶೀಲ್ದಾರ ಪ್ರಕಾಶ ಸಿಂದಗಿ ಹೇಳಿದರು.ಪಟ್ಟಣದ ಸರ್ಕಾರಿ ಉರ್ದು ಮಾದರಿ ಪ್ರಾಥಮಿಕ ಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಸಿಂದಗಿ ಹಾಗೂ ಸಮೂಹ ಸಂಪನ್ಮೂಲ ಕೇಂದ್ರ ದೇ.ಹಿಪ್ಪರಗಿ ಅಡಿಯಲ್ಲಿ ಬುಧವಾರ ಜರುಗಿದ ದೇವರಹಿಪ್ಪರಗಿ ಉರ್ದು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದರು. ಮಕ್ಕಳಿಗೆ ಪಠ್ಯಗಳ ಕಲಿಕೆಯ ಜೊತೆಗೆ ಹೊಸದಾದ ಜೀವನ ಕೌಶಲ್ಯಗಳನ್ನು ಹೊಂದಲು ಇದು ಉತ್ತಮ ವೇದಿಕೆಯಾಗಿದೆ ಎಂದರು.ಖ್ಯಾತ ವಕೀಲ ಎ.ಎಮ್.ತಾಂಬೋಳಿ ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರತರಲು ಪ್ರತಿಭಾ ಕಲೋತ್ಸವ ಅವಕಾಶ ಒದಗಿಸುತ್ತದೆ. ಜೊತೆಗೆ ಮಕ್ಕಳ ವ್ಯಕ್ತಿತ್ವ ರೂಪಿಸಲು ಶಿಕ್ಷಕರಿಗೆ ಹಾಗೂ ಪಾಲಕರಿಗೆ ಅವಕಾಶ ಕಲ್ಪಿಸಿ ಪ್ರೋತ್ಸಾಹಿಸುತ್ತದೆ ಎಂದರು.ಮಹಿಳಾ ಪಿಎಸ್‌ಐ ಪಿ.ಎಸ್.ಚೌರ ಮಾತನಾಡಿ, ಸರ್ಕಾರದ ಈ ಕಾರ್ಯಕ್ರಮ ಉತ್ತಮವಾಗಿದ್ದು, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಉತ್ತಮ ವೇದಿಕೆಯಾಗುತ್ತವೆ ಎಂದರು. ನಂತರ…
ವಿಶ್ವ ಛಾಯಾಗ್ರಹಣ ದಿನಾಚರಣೆ | ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಅಭಿಮತ ವಿಜಯಪುರ: ನಮ್ಮ ಪರಂಪರೆ, ವಿಶ್ವದ ಐತಿಹಾಸಿಕ ಕ್ಷಣಗಳ ಇತಿಹಾಸ, ತಲೆ ತಲೆ ಮಾರುಗಳ ದಾಖಲಿಕರಣವನ್ನು ತಮ್ಮ ಕ್ಯಾಮರಾಗಳ ಮುಖಾಂತರ ಸೆರೆ ಹಿಡಿದು ಇಡಿ ಜಗತ್ತಿಗೆ ತೋರಿಸುವಲ್ಲಿ ಛಾಯಾಗ್ರಾಹಕರು ಸಾಕ್ಷಿಯಾಗಿಸಿದ್ದಾರೆ. ಇವರೆಲ್ಲ ನಮ್ಮ ಸಾಂಸ್ಕೃತಿಕ ರಾಯಭಾರಿಗಳೆಂದರೆ ತಪ್ಪಲ್ಲ ಎಂದು ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಅಭಿಪ್ರಾಯಪಟ್ಟರು.ನಗರದ ಸರಕಾರಿ ಆರ್ಟ್ ಗ್ಯಾಲರಿಯಲ್ಲಿ ಬುಧವಾರ ವಿಜಯಪುರ ಜಿಲ್ಲಾ ನೂತನ ಛಾಯಾಗ್ರಾಹಕರ ಸಂಘ ಹಾಗೂ ಕರ್ನಾಟಕ ಛಾಯಾಚಿತ್ರಗ್ರಾಹಕರ ಸಂಘ ಬೆಂಗಳೂರು ಇವರ ಸಹಯೋಗದಲ್ಲಿ “ವಿಶ್ವ ಛಾಯಾಗ್ರಹಣ ದಿನಾಚರಣೆಯ” ಅಂಗವಾಗಿ ಹಮ್ಮಿಕೊಂಡ ಛಾಯಾಗ್ರಹಣ ಕ್ಷೇತ್ರದ ಹಿರಿಯರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ ಮತ್ತು ಛಾಯಾಚಿತ್ರಗಳ ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಈ ಪ್ರದರ್ಶನದಲ್ಲಿ ಹಲವಾರು ವಿಭಿನ್ನ ವಿಷಯಗಳ ಅದ್ಬುತ ದೃಶ್ಯಕಾವ್ಯವನ್ನು ಛಾಯಾಗ್ರಾಹಕರು ಸೆರೆಹಿಡಿದಿದ್ದಾರೆ. ಸರಕಾರ ಛಾಯಾಗ್ರಾಹಕರಿಗೆ ಎಲ್ಲ ರೀತಿಯ ಆರ್ಥಿಕ ಸೌಲಭ್ಯ ನೀಡಿ ಅವರಿಗೂ ನೆಮ್ಮದಿಯ ಜೀವನ ಸಾಗಿಸುವ ಹಾಗೆ ಮಾಡಬೇಕು. ಸರಕಾರದಿಂದ…
“ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ”- ವಿವೇಕಾನಂದ. ಎಚ್. ಕೆ, ಬೆಂಗಳೂರು ಹೀಗೊಂದು ಪುಸ್ತಕ ಈಗ ರಾಜ್ಯಾದ್ಯಂತ ಸುದ್ದಿ ಮಾಡುತ್ತಿದೆ. ಪರ ವಿರೋಧದ ಚರ್ಚೆಗಳನ್ನು ಹುಟ್ಟುಹಾಕಿದೆ.. ಈ ವಚನ ದರ್ಶನ ಪುಸ್ತಕ ವಚನಗಳನ್ನು ಸನಾತನ ಧರ್ಮದ ವೇದ ಉಪನಿಷತ್ತುಗಳು, ಮನಸ್ಮೃತಿಗಳು, ಸಂಪ್ರದಾಯಗಳು, ಆಚರಣೆಗಳ ಆಧಾರದ ಮೇಲೆ ಮತ್ತೆ ಪುನರ್ ಅರ್ಥೈಸಿ, ಪರೋಕ್ಷವಾಗಿ ಭಕ್ತಿ ಪಂಥದ ಮುಂದುವರಿದ ಭಾಗವಾಗಿ ಚಿತ್ರಿಸಲಾಗಿದೆ. ಇದು ಬಸವ ತತ್ವದ ಅಥವಾ ವಚನ ಸಾಹಿತ್ಯದ ಮೂಲ ಆಶಯಕ್ಕೆ ಸಂಪೂರ್ಣ ವಿರುದ್ಧವಾಗಿದೆ. ಇದನ್ನು ಒಂದು ಹಿಡನ್ ಅಜೆಂಡಾ ಆಗಿ ಶರಣ ಸಂಸ್ಕೃತಿಗೆ ಧಕ್ಕೆ ತರಲು, ಅಪಚಾರವೆಸಗಲು, ಅದನ್ನು ಗೊಂದಲಗೊಳಿಸಿ ಜನರಲ್ಲಿ ಅದರ ಬಗ್ಗೆ ನಿರಾಸಕ್ತಿ ಮೂಡಿಸಲು ಈ ಪುಸ್ತಕವನ್ನು ಉದ್ದೇಶಪೂರ್ವಕವಾಗಿಯೇ ರಚಿಸಲಾಗಿದೆ. ಇದು ಬಲಪಂಥೀಯ ಚಳವಳಿಯ ಒಂದು ಭಾಗ ಎಂಬುದಾಗಿ ಕೆಲವರು ಆರೋಪ ಮಾಡುತ್ತಿದ್ದಾರೆ.. ಹಾಗೆಯೇ,ವಚನ ಸಾಹಿತ್ಯವನ್ನು, ಬಸವ ತತ್ವವನ್ನು, ಶ್ರಮ ಸಂಸ್ಕೃತಿಯನ್ನು, ಲಿಂಗಾಯತ ಧರ್ಮವನ್ನು ಗುತ್ತಿಗೆ ಪಡೆದಂತೆ ಆಡುತ್ತಿರುವ ಕೆಲವರು, ಬಸವಣ್ಣನವರ ನಿಜವಾದ ಆಶಯಗಳನ್ನು ಮರೆಮಾಚಿ ತಮ್ಮ ಹಠಮಾರಿ ಧೋರಣೆಗೆ…
