Author: editor.udayarashmi@gmail.com

ವಿಜಯಪುರ, ಜೂ.೨೦ (ಕರ್ನಾಟಕ ವಾರ್ತೆ): ಗುರುವಾರ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆ-೨ರ ವಿಜ್ಞಾನ ವಿಷಯದಲ್ಲಿ ಜಿಲ್ಲೆಯ ಒಟ್ಟು ೫,೯೨೧ ವಿದ್ಯಾರ್ಥಿಗಳು ನೋಂದಾಯಿಸಿಕೊAಡಿದ್ದು, ಈ ಪೈಕಿ ೫,೦೮೦ ವಿದ್ಯಾರ್ಥಿಗಳು ಪರೀಕೆಗೆ ಹಾಜರಾಗಿ ೮೪೧ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು ಎಂದು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇಂದು ಅಂತರರಾಷ್ಟ್ರೀಯ ಯೋಗ ದಿನಾಚರಣೆ ವಿಜಯಪುರ: ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಜೂನ್. ೨೧ರಂದು ಬೆಳಿಗ್ಗೆ ೬ ಗಂಟೆಗೆ ೧೦ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಕಾರ್ಯಕ್ರಮದಲ್ಲಿ ವಿವಿಧ ಗಣ್ಯ ವ್ಯಕ್ತಿಗಳು, ಶಾಲಾ-ಕಾಲೇಜ್ ವಿದ್ಯಾರ್ಥಿ-ವಿದ್ಯಾರ್ಥಿನಿಯರು, ಅಧಿಕಾರಿಗಳು ಸಿಬ್ಬಂದಿಗಳು ಸೇರಿದಂತೆ ವಿವಿಧ ಸಂಘ ಸಂಸ್ಥೆಗಳು ಭಾಗವಹಿಸಲಿವೆ ಎಂದು ಜಿಲ್ಲಾ ಆಯುಷ್ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಇಂದು ಅಂತರರಾಷ್ಟ್ರೀಯ ಯೋಗ ದಿನಾಚರಣೆ ವಿಜಯಪುರ: ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಜೂನ್. ೨೧ರಂದು ಬೆಳಿಗ್ಗೆ ೬ ಗಂಟೆಗೆ ೧೦ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಕಾರ್ಯಕ್ರಮದಲ್ಲಿ ವಿವಿಧ ಗಣ್ಯ ವ್ಯಕ್ತಿಗಳು, ಶಾಲಾ-ಕಾಲೇಜ್ ವಿದ್ಯಾರ್ಥಿ-ವಿದ್ಯಾರ್ಥಿನಿಯರು, ಅಧಿಕಾರಿಗಳು ಸಿಬ್ಬಂದಿಗಳು ಸೇರಿದಂತೆ ವಿವಿಧ ಸಂಘ ಸಂಸ್ಥೆಗಳು ಭಾಗವಹಿಸಲಿವೆ ಎಂದು ಜಿಲ್ಲಾ ಆಯುಷ್ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿಜಯಪುರ: ಪ್ರಧಾನಮಂತ್ರಿ ಮುದ್ರಾ ಯೋಜನೆಯಡಿ ಜಿಲ್ಲೆಯ ಕೈಮಗ್ಗ ನೇಕಾರರಿಗೆ ೨೦೨೪-೨೫ನೇ ಸಾಲಿಗೆ ರಾಷ್ಟ್ರೀಕೃತ ಬ್ಯಾಂಕುಗಳಿಂದ ಸಾಲ ಸೌಲಭ್ಯ ಒದಗಿಸಲಾಗುತ್ತಿದ್ದು, ಆಸಕ್ತ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.ಸಾಲ ಸೌಲಭ್ಯ ಪಡೆಯಲಿಚ್ಛಿಸುವ ಕೈಮಗ್ಗ ನೇಕಾರರು ಅರ್ಜಿಗಳನ್ನು ಕೈಮಗ್ಗ ಮತ್ತು ಜವಳಿ ಇಲಾಖೆ ವಿಜಯಪುರ ಕಚೇರಿ ಪಡೆದು, ಭರ್ತಿ ಮಾಡಿ ಅರ್ಜಿಯೊಂದಿಗೆ ಕೇಂದ್ರ ಸರ್ಕಾರ ನೀಡಿರುವ ನೇಕಾರರ ಪೆಹಚಾನ್ ಕಾರ್ಡ್, ಚುನಾವಣಾ ಗುರುತಿನ ಚೀಟಿ, ರೇಷನ್ ಕಾರ್ಡ್, ಆಧಾರ ಕಾರ್ಡ್, ಆಧಾರ ನಂಬರ್ ಸೀಡ್ ಇರುವ ಬ್ಯಾಂಕ್ ಪಾಸ್ ಬುಕ್, ಭಾವಚಿತ್ರದಂತಹ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಜೂನ್.೨೯ರೊಳಗೆ ಸಲ್ಲಿಸಬೇಕು.ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಕೈಮಗ್ಗ ಮತ್ತು ಜವಳಿ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಕಟ್ಟಡ, ಶಿಕಾರಖಾನಾ, ಸ್ಟೇಶನ್ ಬ್ಯಾಕ್ ರೋಡ, ವಿಜಯಪುರ ಮೊ: ೯೬೨೦೩೦೪೦೨೧ ಸಂಖ್ಯೆಗೆ ಸಂಪರ್ಕಿಸುವಂತೆ ಕೈಮಗ್ಗ ಮತ್ತು ಜವಳಿ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿಜಯಪುರ: ದೇವರಹಿಪ್ಪರಗಿ, ಅಥರ್ಗಾ ಹಾಗೂ ಹಿರೇಮಸಳಿ ೧೧೦ಕೆವ್ಹಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳುವುದರಿಂದ ಸದರಿ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎಲ್ಲ ೧೧ ಕೆವ್ಹಿ ಮಾರ್ಗಗಳಿಗೆ ಜೂ.೨೪ರಂದು ಬೆಳಿಗ್ಗೆ ೮ ರಿಂದ ಸಂಜೆ ೪ ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಸದರಿ ಮಾರ್ಗಗಳ ಮೇಲೆ ಬರುವ ಗ್ರಾಹಕರು ಹಾಗೂ ಸಾರ್ವಜನಿಕರು ಸಹಕರಿಸುವಂತೆ ಇಂಡಿ ಹೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರು ಕೋರಿದ್ದಾರೆ.

Read More

ವಿಜಯಪುರ: ಜಿಲ್ಲಾಡಳಿತದ ವತಿಯಿಂದ ತಾಲೂಕಾ ಮಟ್ಟದ ಜನಸ್ಪಂದನ ಕಾರ್ಯಕ್ರಮ ಚಡಚಣದ ಗೋಡಿಹಾಳ ರಸ್ತೆಯ ಗುರುಕೃಪಾ ಮಂಗಲ ಕಾರ್ಯಾಲಯದಲ್ಲಿ ಇದೇ ಜೂ.೨೫ರಂದು ಬೆಳಿಗ್ಗೆ ೧೦ ಗಂಟೆಗೆ ಆಯೋಜಿಸಲಾಗಿದ್ದು, ಈ ಜನಸ್ಪಂದನ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಭಾಗವಹಿಸಲಿದ್ದು, ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Read More

ಬಸವನಬಾಗೇವಾಡಿ: ಶಿಕ್ಷಣವು ಸಾರ್ವತ್ರಿಕರಣಗೊಂಡಿದ್ದರೂ ಸಹ ಮಹಿಳೆಯು ಸಾಮಾಜಿಕ ಸಮಸ್ಯೆಗಳಿಂದ ಮುಕ್ತಗೊಂಡಿಲ್ಲ. ಇಂದು ಬಾಲ್ಯ ವಿವಾಹ, ವರದಕ್ಷಿಣೆ ಕಿರುಕುಳ, ಲೈಂಗಿಕ ದೌರ್ಜನ್ಯದಂತಹ ಅನೇಕ ಉಸಿರು ಗಟ್ಟಿಸುವಂತಹ ಸಮಸ್ಯೆಗಳು ಸಮಾಜದಲ್ಲಿ ಅವ್ಯಾಹತವಾಗಿ ನಡೆಯುತ್ತಿರುವದನ್ನು ನೋಡಿದಾಗ ಮಹಿಳೆಯರಿಗೆ ಸ್ವಾತಂತ್ರ್ಯವೇ ಸಿಕ್ಕಿಲ್ಲವೆಂಬ ಭಾವನೆ ಬಂದರೂ ತಪ್ಪಾಗಲಾರದು ಎಂದು ಡಾ.ಗೀತಾ ಬೆಳ್ಳುಂಡಿ ಅಭಿಪ್ರಾಯ ಪಟ್ಟರು.ಪಟ್ಟಣದ ಬಿಎಲ್ಡಿಇ ಸಂಸ್ಥೆಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಐಕ್ಯೂಎಸಿ ಮತ್ತು ಮಹಿಳಾ ವೇದಿಕೆಯ ಸಹಯೋಗದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಮಹಿಳೆಯ ಸಾಮಾಜಿಕ ಸಮಸ್ಯೆ ಮತ್ತು ಪರಿಹಾರ ವಿಷಯದ ಕುರಿತು ಹಮ್ಮಿಕೊಂಡಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಹಾತ್ಮಾ ಗಾಂಧೀಜಿಯವರ ರಾಮರಾಜ್ಯದ ಕನಸು ಇನ್ನೂ ಕನಸಾಗಿಯೇ ಉಳಿದುಕೊಂಡಿದೆ. ಅವರ ಕನಸು ನನಸಾಗಬೇಕಾದರೆ ಇಂದು ಮಹಿಳೆಯರು ಕಿತ್ತೂರು ರಾಣಿ ಚನ್ನಮ್ಮ, ಬೆಳವಡಿ ಮಲ್ಲಮ್ಮ, ಒನಕೆ ಒಬವ್ವ, ಝಾನ್ಸಿ ರಾಣಿ ಲಕ್ಷ್ಮೀಬಾಯಿ ಅವರ ಧೈರ್ಯ, ತತ್ವ, ವಿಚಾರಗಳನ್ನು ಅಳವಡಿಸಿಕೊಂಡು ಸಮಾಜ ವಿರೋಧಿಗಳನ್ನು ಮಟ್ಟ ಹಾಕಿದಾಗ ಮಾತ್ರ ಮಹಿಳೆಯರು ಸಮಾಜದಲ್ಲಿ ಘನತೆ, ಗೌರವ, ಸ್ವಾಭಿಮಾನದ ಬದುಕನ್ನು ಕಟ್ಟಿಕೊಳ್ಳಲು ಸಾಧ್ಯವಾಗುತ್ತದೆ…

Read More

ಚಡಚಣ: ಪಟ್ಟಣದ ಚೌಡೇಶ್ವರಿ ದೇವಾಸ್ಥಾನದಲ್ಲಿ ಹೊನ್ನುಗ್ಗಿ ನಿಮಿತ್ಯ ನೂರಕ್ಕೂ ಅಧಿಕ ಸುಮಂಗಲೆಯರ ಉಡಿತುಂಬುವುದು ಹಾಗೂ ಹಟಗಾರ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಅದ್ದೂರಿಯಾಗಿ ಜರುಗಿತು.ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ ವಿರಕ್ತ ಮಠದ ಷಡಕ್ಷರಿ ಸ್ವಾಮೀಜಿ ಮಾತನಾಡಿ, ಪಟ್ಟಣದಲ್ಲಿ ಬಹುಸಂಖ್ಯಾತರಾಗಿದ್ದ ಹಟಗಾರ ಸಮುದಾಯ ಸರಳ ಸಜ್ಜನೆಕೆಗೆ ಹೆಸರಾಗಿದ್ದಾರೆ. ಪ್ರತಿ ವರ್ಷ ಹೊನ್ನುಗ್ಗಿ ನಿಮಿತ್ಯ ಸಮುದಾಯದ ಎಲ್ಲ ಸುಮಂಗಲೆಯರನ್ನು ದೇವಾಸ್ಥಾನಕ್ಕೆ ಕರೆತಂದು ಉಡಿತುಂಬಿ ತಾಯಿ ಚೌಡೇಶ್ವರಿ ದೇವಿ ಆಯುಷ್ಯ ಆರೋಗ್ಯ ಕಲ್ಪಿಸುವಂತೆ ಆಶಿರ್ವಾದ ಪಡೆದುಕೊಳ್ಳುವದರ ಜೊತೆಗೆ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ ಅವರನ್ನು ಪ್ರತಿಬಾ ಪುರಸ್ಕಾರ ಮಾಡಿ ಗೌರವಿಸುವ ಕಾರ್ಯ ಮಾಡುತ್ತಾ ಬಂದಿರುವುದು ಶ್ಲಾಘನನೀಯ ಕಾರ್ಯ ಎಂದರು.ಸಮಾಜದ ಅಧ್ಯಕ್ಷ ಬಸವರಾಜ ಯಂಕಂಚಿ ಮಾತನಾಡಿ, ಪಟ್ಟಣದಲ್ಲಿ ಸುಮಾರು 500ಕ್ಕೂ ಹೆಚ್ಚು ಕುಟುಂಬವಿರುವ ನಮ್ಮ ಸಮುದಾಯ ಒಗ್ಗಟ್ಟಿನಿಂದ ಕೂಡಿದೆ. ಎಲ್ಲರ ಶ್ರಮವಹಿಸಿ ನೂತನ ಬೃಹುತ್‌ ಮಂಗಲಕಾರ್ಯಾಲಯ ಮುಗಿಸುವ ಮಹತ್ತರ ಜವಾಬ್ದಾರಿ ನಮ್ಮ ನಿಮ್ಮೆಲ್ಲರ ಮೇಲಿದೆ ಎಂದರು.ಈ ಕಾರ್ಯಕ್ರಮದಲ್ಲಿ ಗುರುದೇವಾಶ್ರನದ ಯೋಗಾನಂದ ಸ್ವಾಮೀಜಿ, ಮೈಂದರಿಗಿಯ…

Read More

ದೇವರಹಿಪ್ಪರಗಿ: ಪಟ್ಟಣದ ಯೋಗ ಉತ್ಸವದಲ್ಲಿ ಸುಮಾರು ಐದು ಸಾವಿರ ಜನ ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ಅನುಗ್ರಹ ಕಣ್ಣಿನ ಆಸ್ಪತ್ರೆ ಮುಖ್ಯಸ್ಥ ಪ್ರಭುಗೌಡ ಬಿ.ಎಲ್.(ಚಬನೂರ) ತಿಳಿಸಿದರು.ಪಟ್ಟಣದ ಬಿಎಲ್‌ಡಿಇ ಸಂಸ್ಥೆಯ ಎ.ಬಿ.ಸಾಲಕ್ಕಿ ಪದವಿಪೂರ್ವ ಕಾಲೇಜಿನ ಆವರಣಕ್ಕೆ ಗುರುವಾರ ಸಾಯಂಕಾಲ ಭೇಟಿ ನೀಡಿ ಪೂರ್ವತಯಾರಿ ವೀಕ್ಷಿಸಿದರು. ಶುಕ್ರವಾರ ಬೆಳಿಗ್ಗೆ ೬ ಗಂಟೆಗೆ ಆರಂಭಗೊಳ್ಳುವ ಯೋಗ ಉತ್ಸವದಲ್ಲಿ ಅಂತರಾಷ್ಟ್ರೀಯ ಯೋಗಾಚಾರ್ಯರಾದ ಬಾಲಗಾಂವ ಗುರುದೇವ ಆಶ್ರಮದ ಅಮೃತಾನಂದ ಸ್ವಾಮೀಜಿ ಪಾಲ್ಗೊಂಡು, ಯೋಗದ ಮಹತ್ವ ತಿಳಿಸಲಿದ್ದಾರೆ.ಈ ಕಾರ್ಯಕ್ರಮದಲ್ಲಿ ಮಠಾಧೀಶರು, ಗಣ್ಯರು, ಯೋಗಪಟುಗಳು, ಜನಪ್ರತಿನಿಧಿಗಳು, ರಾಜಕೀಯ ಮುಖಂಡರು, ಶಿಕ್ಷಣ ಇಲಾಖೆ ಸಾವಿರಾರು ವಿದ್ಯಾರ್ಥಿಗಳು, ವಿವಿಧ ಸಂಘಟನೆ ಪದಾಧಿಕಾರಿಗಳು, ಸಾರ್ವಜನಿಕರು ಪಾಲ್ಗೊಳಲಿದ್ದಾರೆ. ಇದೊಂದು ಐತಿಹಾಸಿಕ ಕಾರ್ಯಕ್ರಮವಾಗಲಿದೆ ಎಂದರು.ನಿವೃತ್ತ ನೌಕರರ ಸಂಘದ ಅಧ್ಯಕ್ಷ ಸಿ.ಕೆ.ಕುದರಿ,ಎಸ್.ಎನ್.ಬಸವರಡ್ಡಿ, ರಮೇಶ ಮಸಬಿನಾಳ, ಕೆ.ಎ.ಸಾಲಕ್ಕಿ, ಕೆ.ಎಸ್.ಕೋರಿ, ಬಸವರಾಜ ತಾಳಿಕೋಟಿ, ಪ್ರವೀಣ ಹುಗ್ಗಿ, ಆಯೂಷ್ ವೈದ್ಯರಾದ ಎಸ್.ಎನ್.ಬಿರಾದಾರ, ಸುರೇಶ ಸಜ್ಜನ, ಆಯ್.ಎಸ್.ಹಿರೇಮಠ, ಗುರುರಾಜ್ ಗಡೇದ, ಕಾಶೀನಾಥ ಯಾಳಗಿ, ಅರವಿಂದ ರಾಠೋಡ, ಕಸಾಪ ತಾಲ್ಲೂಕು ಅಧ್ಯಕ್ಷ ಜಿ.ಪಿ.ಬಿರಾದಾರ, ಸಂಗನಗೌಡ ಬಿರಾದಾರ, ಪ್ರಕಾಶ ಮಲ್ಲಾರಿ,…

Read More

ಪೆಟ್ರೋಲ್-ಡೀಸೆಲ್ ದರ ಏರಿಕೆ ಖಂಡಿಸಿ ಹೆದ್ದಾರಿ ತಡೆದು ಪ್ರತಿಭಟನೆ ದೇವರಹಿಪ್ಪರಗಿ: ಬಿಜೆಪಿ ಮಂಡಲ ವತಿಯಿಂದ ಮಾಜಿ ಶಾಸಕ ಸೋಮನಗೌಡ ಪಾಟೀಲ (ಸಾಸನೂರ) ನೇತೃತ್ವದಲ್ಲಿ ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ, ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನಾ ಮೆರವಣಿಗೆ, ಹೆದ್ದಾರಿ ತಡೆ ಕೈಗೊಂಡು ತಹಶೀಲ್ದಾರರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.ಪಟ್ಟಣದ ಮೊಹರೆ ಹಣಮಂತ್ರಾಯ ವೃತ್ತದಲ್ಲಿ ಗುರುವಾರ ಸೇರಿದ ಬಿಜೆಪಿ ಮಂಡಲ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಅಂಬೇಡ್ಕರ್ ವೃತ್ತದಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ ಕೈಗೊಂಡರು.ಈ ಸಂದರ್ಭದಲ್ಲಿ ಮಾಜಿಶಾಸಕ ಸೋಮನಗೌಡ ಪಾಟೀಲ(ಸಾಸನೂರ) ಮಾತನಾಡಿ, ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ ಮಾಡಿ ಲೀಟರ್‌ಗೆ ತಲಾ ೩ ರಿಂದ ೩.೫೦ ರೂ.ಏರಿಕೆ ಮಾಡಿರುವುದರಿಂದ ರಾಜ್ಯದ ಜನತೆಗೆ ಬರೆ ಎಳೆದಂತಾಗಿದೆ. ಜೊತೆಗೆ ವಾಲ್ಮಿಕಿ ನಿಗಮದ ೧೮೭ ಕೋಟಿಗಳ ಭ್ರಷ್ಟಾಚಾರ ಹಾಗೂ ಬಾಂಡ್ ಪೇಪರ್, ಮದ್ಯದ ಬೆಲೆಗಳ ಹೆಚ್ಚಳ, ಹದಗೆಟ್ಟ ಕಾನೂನು ವ್ಯವಸ್ಥೆಗಳು ಆರ್ಥಿಕ ತಜ್ಞರೆಂದೇ ಬಿಂಬಿಸಿಕೊಳ್ಳುವ ಸಿದ್ಧರಾಮಯ್ಯ ಸರ್ಕಾರದ ಆಡಳಿತ ವೈಖರಿಗೆ…

Read More

ಆಲಮಟ್ಟಿ: ನಾನಾ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕೃಷ್ಣಾ ತೀರ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ಇಲ್ಲಿನ ಕೆಬಿಜೆಎನ್ಎಲ್ ಮುಖ್ಯ ಎಂಜಿನಿಯರ್ ಕಚೇರಿ ಆವರಣದಲ್ಲಿ ಹಮ್ಮಿಕೊಂಡಿರುವ ಅನಿರ್ದಿಷ್ಠಾವಧಿ ಧರಣಿ ಗುರುವಾರವೂ ಮುಂದುವರೆಯಿತು. ಧರಣಿ ನಿರತರು ಅರೆಬೆತ್ತಲೆಯಾಗಿ ಧರಣಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಸಂಘದ ಖಜಾಂಚಿ ಬಸವರಾಜ ದಂಡಿನ, ಅಧ್ಯಕ್ಷ ಎಂ.ಎ.ಮೇಟಿ, ಗೋಪಾಲ ಬಂಡಿವಡ್ಡರ ಮಾತನಾಡಿ, ಕಳೆದ ವರ್ಷ ಕರೆದ ಕಾಮಗಾರಿಗಳ ಬಿಡ್‌ನಲ್ಲಿ ಭಾಗವಹಿಸಿದ ಗುತ್ತಿಗೆದಾರರ ಮಂಗಡ ಹಣ ಆಯಾ ಗುತ್ತಿಗೆದಾರರಿಗೆ ಮರಳಿಸದ ಕಾರಣ ಹಾಗೂ ಒಂದು ವರ್ಷದಿಂದ ಯಾವುದೇ ಕಾಮಗಾರಿ ಕರೆಯದ ಗುತ್ತಿಗೆದಾರರ ಕುಟುಂಬಗಳು ಸಂಕಷ್ಟಕ್ಕೀಡಾಗಿವೆ. ನಮ್ಮ ನ್ಯಾಯಯುತ ನಾನಾ ಬೇಡಿಕೆಗಳನ್ನು ಶೀಘ್ರ ಈಡೇರಿಸುವಂತೆ ಧರಣಿ ನಡೆಸಲಾಗುತ್ತಿದೆ. ಸಂಬಂಧಿತ ಅಧಿಕಾರಿಗಳು, ಸಚಿವರು ಶೀಘ್ರ ಕ್ರಮಕೈಗೊಳ್ಳಬೇಕು. ಜೂ.೨೨ರಿಂದ ಅಹೋರಾತ್ರಿ ಧರಣಿ ಆರಂಭಿಸಲಾಗುತ್ತಿದ್ದು ೨೫ ರಂದು ಆಲಮಟ್ಟಿಯ ಮುಖ್ಯ ಎಂಜಿನಿಯರ್ ರ ಕಚೇರಿಗೆ ಬೀಗ ಜಡಿದು ಪ್ರತಿಭಟಿಸಲಾಗುವುದು ಎಂದರು.ಉಪಾಧ್ಯಕ್ಷ ಶಿವಗೊಂಡಪ್ಪ ಗದಿಗೆಪ್ಪಗೌಡರ, ಪ್ರಧಾನ ಕಾರ್ಯದರ್ಶಿ ಎಚ್.ಬಿ.ಸಂಗಮ, ಬಸವರಾಜ ಬಾದರದಿನ್ನಿ, ರಾಯಪ್ಪ ವಾಲಿಕಾರ, ವಿ.ಎಂ.ಹಿರೇಮಠ, ಹಾಸಿಂಪೀರ ಯಂಡಿಗೇರಿ, ಸಲೀಂ ಮುಲ್ಲಾ, ಕಳಕಪ್ಪ…

Read More