Author: editor.udayarashmi@gmail.com

ಆಲಮೇಲ: ಪಟ್ಟಣದ ಐ.ಕೆರಾಯಲ್ ಪ್ರಾಥಮಿಕ ಶಾಲೆಯಲ್ಲಿ ೭೮ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ದ್ವಜಾರೋಹಣವನ್ನು ಸಂಸ್ಥೆಯ ಉಪಾಧ್ಯಕ್ಷ ಶೌಕತಲಿ ಸುಂಬಡ ನೆರವೇರಿಸಿದರು.ಮುಖ್ಯಅತಿಥಿಗಳಾಗಿ ಡಾ.ರಮೇಶ ಕತ್ತಿ ಮಾತನಾಡಿ, ‘ಐಕ್ಯತೆ ಮತ್ತು ಸರ್ವಧರ್ಮಿಯರ ಸಮಾನತೆಯ ಬದುಕನ್ನು ಕಟ್ಟಿಕೊಳ್ಳಲು ಜಗತ್ತಿನ ಮುಂಚೂಣಿ ರಾಷ್ಟ್ರಗಳಲ್ಲಿ ಭಾರತವು ಮುಂದಿದೆ ಎಂದರು.ಅತಿಥಿಗಳಾಗಿ ಪತ್ರಕರ್ತ ಅಬ್ದುಲಗನಿ ದೇವರಮನಿ, ಪಾಲಕ ಪ್ರತಿನಿಧಿ ಶಂಕರಗೌಡ ಪಾಟೀಲ, ಕಾಸೀರಾಯ ಬಿರಾದಾರ ಮೊದಲಾದವರು ವೇದಿಕೆಯಲ್ಲಿದ್ದರು.ಮುಖ್ಯಗುರುಗಳಾದ ಸಂತೋಷ ಚೆಂಗಟ್ಟಿ ಅಧ್ಯಕ್ಷತೆ ವಹಿಸಿಕೊಂಡಿದ್ದರು. ಶಿಕ್ಷಕಿ ಸಂಜನಾ ಬೇನೂರ, ಮೇಧಾರಾಣಿ, ರಕ್ಷಿತಾ ಅಂಬೂರೆ, ಚೆನ್ನಬಸಮ್ಮ ಮೊದಲಾದವರು ಉಪಸ್ಥಿತರಿದ್ದರು.ಕು.ವಿದ್ಯಾ ಬಿರಾದಾರ ನಿರೂಪಿಸಿದರು. ಕು.ಸುಷ್ಮಿತಾ ಕರಂಡೆ ಸ್ವಾಗತಿಸಿದರು.ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

Read More

ವಿಜಯಪುರ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜನ್ಮದಿನ ಆಚರಣೆಯನ್ನು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಆಚರಿಸಲಾಯಿತು.ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಂಡಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜನ್ಮದಿನ ಆಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಗೌರವ ಸಲ್ಲಿಸಿದರು.ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ,ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬದ್ರೂದ್ಧಿನ ಸೌದಾಗರ್, ಆಹಾರ ಇಲಾಖೆಯ ಉಪ ನಿರ್ದೇಶಕ ವಿನಯಕುಮಾರ ಪಾಟೀಲ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ ಸೇರಿದಂತೆ ಜಿಲ್ಲಾಧಿಕಾರಿಗಳ ಕಚೇರಿ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಇದ್ದರು.

Read More

ಸ್ವಾತಂತ್ರ‍್ಯ ದಿನಾಚರಣೆಯಲ್ಲಿ ಜಿ.ಪಂ ಸಿಇಓ ರಿಷಿ ಆನಂದ ಸಲಹೆ ವಿಜಯಪುರ: ಸ್ವಾತಂತ್ರ‍್ಯೋತ್ಸವದ ದಿನಾಚರಣೆ ಅಂಗವಾಗಿ ಗುರುವಾರ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಧ್ವಜಾರೋಹಣ ನೆರವೇರಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಮ್ಮ ದೇಶದ ಇತಿಹಾಸದಲ್ಲಿ ಆಗಷ್ಟ್ ೧೫ರ ಇಂದಿನ ದಿನ ಮಹತ್ವದ್ದಾಗಿದೆ. ನಮ್ಮ ದೇಶಕ್ಕೆ ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತಂತ್ರ‍್ಯ ಸಿಕ್ಕಿದ ದಿನ ಮತ್ತು ಅಂದಿನ ಸ್ವಾತಂತ್ರ‍್ಯ ಹೋರಾಟದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ, ನಮ್ಮ ಭಾರತದ ಸಂವಿಧಾನದ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್, ಸುಭಾಷ್ ಚಂದ್ರ ಬೋಸ್, ಲಾಲ್ ಬಹದ್ದೂರ್ ಶಾಸ್ತ್ರಿ, ಭಗತ್ ಸಿಂಗ್ ಸೇರಿದಂತೆ ವಿವಿಧ ಮಹನೀಯರ ತ್ಯಾಗ ಬಲಿದಾನದಿಂದ ಸ್ವಾತಂತ್ರ್ಯ ಲಭಿಸಿದ್ದು, ಭಾರತೀಯರಾದ ನಾವು ಹೆಮ್ಮೆಯಿಂದ ನೆನೆಯಬೇಕಿದೆ ಎಂದು ಅವರು ಹೇಳಿದರು.ಸ್ವಾತಂತ್ರ‍್ಯಕ್ಕಾಗಿ ಹೋರಾಡಿದ, ಪ್ರಾಣತೆತ್ತ, ಬಲಿದಾನವಾದ ಎಲ್ಲ ವೀರರನ್ನು ನೆನೆದು, ಅವರಿಗೆ ನಮನ ಸಲ್ಲಿಸಬೇಕಿದೆ. ಪ್ರತಿ ವರ್ಷ ಆಗಸ್ಟ್ ೧೫ ರಂದು ದೇಶಭಕ್ತಿಯ ಉತ್ಸಾಹ, ಧ್ವಜಾರೋಹಣ, ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಸ್ವಾತಂತ್ರ್ಯ…

Read More

ವಿಜಯಪುರದಲ್ಲಿ ಸ್ವಾತಂತ್ರ‍್ಯ ದಿನಾಚರಣೆ | ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಸಚಿವ ಡಾ. ಎಂ.ಬಿ.ಪಾಟೀಲ ಅಭಿಮತ ವಿಜಯಪುರ: ಸಾಮಾಜಿಕ ನ್ಯಾಯ, ಶೈಕ್ಷಣಿಕ ಅಭಿವೃದ್ಧಿ ಮತ್ತು ಮಹಿಳಾ ಸಬಲೀಕರಣ ಒಳಗೊಂಡಂತೆ ರಾಜ್ಯದ ಸಮಗ್ರ ಅಭಿವೃದ್ಧಿಗೆ ಕಂಕಣಬದ್ಧವಾಗಿರುವ ನಮ್ಮ ಸರ್ಕಾರವು ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಜನಪರ ಕಾಳಜಿಯೊಂದಿಗೆ ಕಾರ್ಯನಿರ್ವಹಿಸುತ್ತಿದೆ. ದೇಶದಾದ್ಯಂತ ಸಂಚಲನ ಉಂಟುಮಾಡಿರುವ ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳು ಫಲಾನುಭವಿಗಳ ಬದುಕಿನಲ್ಲಿ ಬೆಳಕು ಮತ್ತು ಭರವಸೆ ತುಂಬುವಲ್ಲಿ ಸಫಲವಾಗಿವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಹೇಳಿದರು.ಗುರುವಾರ ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ‍್ಯ ದಿನಾಚರಣೆ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ, ನಾಡಿನ- ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಜಿಲ್ಲೆ ಸೇರಿದಂತೆ ರಾಷ್ಟ್ರದ ವಿವಿಧ ಮಹನೀಯರನ್ನು ಸ್ಮರಿಸಿ ಸಂದೇಶ ನೀಡಿ, ಮಾತನಾಡಿದ ಅವರು, ವಿಜಯಪುರ ನಗರದಲ್ಲಿ ಜಿಲ್ಲಾ ಕಚೇರಿಗಳ ಸಂಕೀರ್ಣ ಅನುಮೋದನೆಯಾಗಿದ್ದು, ಸರ್ಕಾರದಿಂದ ರೂ.೪೯ ಕೋಟಿ ಅನುದಾನಕ್ಕೆ…

Read More

ವಿಜಯಪುರ: ಸ್ವಾತಂತ್ರ‍್ಯ ದಿನಾಚರಣೆ ಅಂಗವಾಗಿ ನಗರದ ಜಿಲ್ಲಾ ಪಂಚಾಯತಿಯ ರಸ್ತೆಯಲ್ಲಿರುವ ಗಾಂಧಿ ಭವನದಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರ‍್ಯೋತ್ಸವದ ಶುಭಾಶಯ ಕೋರಿದರು.ಈ ಸಂದರ್ಭದಲ್ಲಿ ವಾರ್ತಾಧಿಕಾರಿ ಅಮರೇಶ ದೊಡಮನಿ, ವಾರ್ತಾ ಇಲಾಖೆಯ ಸುರೇಶ ಅಂಬಿಗೇರ ಶ್ರೀಮತಿ ಮಂಜುಳಾ, ಜೆ.ಬಿ ತಾಟೆ, ಗಾಂಧಿ ಭವನದ ನಿರ್ವಹಣಾ ಸಮಿತಿ ಸದಸ್ಯರಾದ ಪೀಟರ್ ಅಲೆಕ್ಸಾಂಡರ್, ನೇತಾಜಿ ಗಾಂಧಿ, ಬಾಪುಗೌಡ ಪಾಟೀಲ ಶೇಗುಣಸಿ ಸೇರಿದಂತೆ ವಿದ್ಯಾರ್ಥಿಗಳು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Read More

ದೇವರಹಿಪ್ಪರಗಿ: ಯೋಧರ ಹಾಗೂ ಶೈಕ್ಷಣಿಕ ರಂಗದ ಸಾಧಕರ ಸನ್ಮಾನ ಮಕ್ಕಳ ಸ್ಪೂರ್ತಿಗೆ ಕಾರಣವಾಗಬಲ್ಲದು ಎಂದು ಶಾಸಕ ರಾಜುಗೌಡ ಪಾಟೀಲ(ಕುದರಿ ಸಾಲವಾಡಗಿ) ಹೇಳಿದರು.ಪಟ್ಟಣದ ಶಾಸಕರ ಮಾದರಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಜರುಗಿದ ಸ್ವಾತಂತ್ರೋತ್ಸವ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.ಸ್ವಾತಂತ್ರ್ಯ ದಿನಾಚರಣೆ ನಮ್ಮೆಲ್ಲರ ರಾಷ್ಟ್ರೀಯ ಹಬ್ಬ ಇದರಲ್ಲಿ ಪ್ರತಿಯೊಬ್ಬರು ಪಾಲ್ಗೊಳ್ಳುವುದು ಅಗತ್ಯ. ನಮ್ಮ ದೇಶದ ಗಡಿಕಾಯುವ ಯೋಧರು ಹಾಗೂ ಶಿಕ್ಷಣದಲ್ಲಿ ಸಾಧನೆ ಮಾಡಿದ ಪ್ರತಿಯೊಬ್ಬರು ನಮಗೆ ಹಾಗೂ ಮುಂದಿನ ಪೀಳಿಗೆಗೆ ಆದರ್ಶವಾಗಬಲ್ಲರು ಎಂದರು.ತಹಶೀಲ್ದಾರ ಪ್ರಕಾಶ ಸಿಂದಗಿ ಪ್ರಸ್ತಾವಿಕವಾಗಿ ಮಾತನಾಡಿ, ಸ್ವಾತಂತ್ರ್ಯ ದಿನಾಚರಣೆಯ ಈ ಶುಭ ಸಂದರ್ಭದಲ್ಲಿ ತ್ಯಾಗ ಬಲಿದಾನಗೈದ ಸ್ವಾತಂತ್ರ್ಯವೀರರನ್ನು ನೆನೆಯೋಣ ಎಂದರು.ಇದೇ ಸಂದರ್ಭದಲ್ಲಿ ತಾಲ್ಲೂಕಿನ ವಿವಿಧ ಗ್ರಾಮಗಳ ನಿವೃತ್ತ ಯೋಧರು ಹಾಗೂ ತಾಲ್ಲೂಕಿನಲ್ಲಿ ಎಸ್.ಎಸ್.ಎಲ್.ಸಿ, ಪಿಯುಸಿ, ಪದವಿ ಪರೀಕ್ಷೆಗಳಲ್ಲಿ ಹೆಚ್ಚು ಅಂಕಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ನಂತರ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.ಪಟ್ಟಣ ಪಂಚಾಯಿತಿ ಧ್ವಜಾರೋಹಣ ಹಾಗೂ ತಾಲ್ಲೂಕಾಡಳಿತದ ಕಾರ್ಯಕ್ರಮದ ವೇದಿಕೆಯಲ್ಲಿ ಪಟ್ಟಣ ಪಂಚಾಯಿತಿಗೆ ಆಯ್ಕೆಯಾದ ಒಬ್ಬ ಮಹಿಳಾ ಅಭ್ಯರ್ಥಿಯ ಹೊರತಾಗಿ ಯಾವ…

Read More

ವಿಜಯಪುರದಲ್ಲಿ ನೇತಾಜಿ ಪುತ್ಥಳಿ ಅನಾವರಣಗೊಳಿಸಿದ ಶಾಸಕ ಯತ್ನಾಳ ಭರವಸೆ ವಿಜಯಪುರ: ನಗರದ ಮನಗೂಳಿ ಅಗಸಿ ಬಳಿ ದಲಿತ ಸಮುದಾಯವರು ನೂರಾರು ವರ್ಷಗಳಿಂದ ವಾಸಿಸುತ್ತಿರುವ ಮನೆಗಳ ಹತ್ತಿರದ ಕಂದಾಯ ಇಲಾಖೆಯ ಏಳು ಎಕರೆ ಆಸ್ತಿಯನ್ನು ವಕ್ಫ್ ಆಸ್ತಿಯಾಗಿ ಮಾಡಿಕೊಂಡಿರುವುದನ್ನು, ಕರ್ನಾಟಕ ಸ್ಲಂ ಬೋರ್ಡ ಅಂತ ಉತಾರೆ ಮಾಡಿಕೊಡಿ, ಅಲ್ಲಿ ದಲಿತರಿಗಾಗಿ ೨೦೦ ಆಶ್ರಯ ಮನೆಗಳನ್ನು ನಿರ್ಮಿಸುವುದಾಗಿ ಜಿಲ್ಲಾಧಿಕಾರಿಗಳಿಗೆ ತಿಳಿಸಿರುವೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.ನಗರದ ವಾರ್ಡ ನಂ.೩೫ ರಲ್ಲಿ ಬರುವ ನೇತಾಜಿ ಸುಭಾಷ್ ಚಂದ್ರ ಬೋಸ್ ಮಾರ್ಗದಲ್ಲಿ ನೂತನವಾಗಿ ನಿರ್ಮಿಸಲಾದ ನೇತಾಜಿ ಸುಭಾಷ್ ಚಂದ್ರ ಬೋಸ್ ವೃತ್ತದಲ್ಲಿ ನೇತಾಜಿ ಪುತ್ಥಳಿ ಅನಾವರಣಗೊಳಿಸುವ ಮೂಲಕ ವೃತ್ತ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಜಗತ್ತಿನ ಯಾವ ಶಕ್ತಿ ಅಡ್ಡ ಬಂದರೂ ಮನಗೂಳಿ ಅಗಸಿ, ಬಳಿ ದಲಿತರಿಗಾಗಿ ಮನೆಗಳನ್ನು ಕಟ್ಟುವೆ. ಅದಕ್ಕೆ ಡಾ.ಅಂಬೇಡ್ಕರ್ ನಗರ ಅಂತ ಹೆಸರನ್ನೇ ಇಡುವೆ ಎಂದು ಭರವಸೆ ನೀಡಿದರು.ಭಾರತೀಯ ಸೇನೆ, ರೈಲ್ವೆ ಬಿಟ್ಟರೇ ಅತೀ ಹೆಚ್ಚು ಆಸ್ತಿ ಇರುವುದು ವಕ್ಫ್ದು.…

Read More

ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಕರೆ ವಿಜಯಪುರ: ಬಾಲ ಮಂದಿರದಲ್ಲಿರುವ ಪ್ರತಿಭಾವಂತ ಮಕ್ಕಳನ್ನು ಸಮಾಜದ ಮುಖ್ಯ ವಾಹಿನಿಗೆ ತರುವುದು ನಾಗರಿಕ ಸಮಾಜದ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು ಕರ್ನಾಟಕ ಬಾಲ ವಿಕಾಸ ಅಕಾಡೆಮಿಯು ನಾಡಿನ ಮಕ್ಕಳ ಶ್ರೇಯೋಭಿವೃದ್ಧಿಯ ಜೊತೆಗೆ ಬಾಲ ಮಂದಿರ ಮಕ್ಕಳಿಗಾಗಿ ವಿಶೇಷ ಯೋಜನೆಗಳನ್ನು ಕೈಗೊಳ್ಳಲಿದೆ. ಆ ಮೂಲಕ ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬುವ ಕೆಲಸವನ್ನು ಮಾಡಲಿದ್ದೇನೆ ಎಂದು ಕರ್ನಾಟಕ ಬಾಲ ವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.ಗುರುವಾರ ಅವರು ನಗರದ ಬಾಲಕರ ಬಾಲ ಮಂದಿರದಲ್ಲಿ 78ನೆಯ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.”ನಾನು ಕರ್ನಾಟಕ ಬಾಲ ವಿಕಾಸ ಅಕಾಡೆಮಿಯ ಕೇಂದ್ರ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸದೆ ಅಲ್ಲಿಯ ಅಧಿಕಾರಿಗಳಿಗೆ ಕೇಂದ್ರ ಕಚೇರಿಯ ದ್ವಜಾರೋಹಣ ನೆರವೇರಿಸುವಂತೆ ತಿಳಿಸಿ, ಬಾಲ ಮಂದಿರದ ಮಕ್ಕಳೊಂದಿಗೆ ಸ್ವಾತಂತ್ರ್ಯೋತ್ಸವ ಆಚರಿಸಲು ನಿರ್ಧರಿಸಿದ್ದೆ. ಈ ಮಕ್ಕಳಲ್ಲಿರುವ ಶಿಸ್ತು ಅವರ ಕಣ್ಣುಗಳಲ್ಲಿರುವ ಹೊಳಪನ್ನು ನೋಡಿದಾಗ ತುಂಬಾ ಸಂತೋಷವಾಗಿದೆ. ಬಾಲ ಮಂದಿರದ ಮಕ್ಕಳಿಗೆ ಆತ್ಮ ವಿಶ್ವಾಸವನ್ನು ತುಂಬಿ, ಪ್ರೀತಿ-ಕಕ್ಕುಲತೆ ಕಾಳಜಿಯನ್ನು ತೋರಿದರೆ…

Read More

ಸ್ವಾತಂತ್ರ್ಯ ಹಬ್ಬಕ್ಕೆ ಮೇಘ ಸಿಂಚನ | ಮಳೆಯಲ್ಲೂ ತಿರಂಗಾ ಕಳೆ ಸಂಭ್ರಮ ಚಿಕ್ಕಪಡಸಲಗಿ: ಅಗಸ್ಟ್ 15 ದೇಶವಾಸಿಗಳಿಗೆ ಮಹತ್ವದ ದಿನ. ಬ್ರಿಟಿಷ್‌ ರ ಕಪಿಮುಷ್ಟಿಯಿಂದ ಮುಕ್ತವಾದ ಈ ವಿಶೇಷ ದಿನದಂದು ಭಾರತಕ್ಕೆ ಸ್ವಾತಂತ್ರ್ಯ ಲಭಿಸಿದ ಸುಕ್ಷಣ.ಆ ಹಿನ್ನೆಲೆಯಲ್ಲಿ ದೇಶದಾದ್ಯಂತ ಸ್ವಾತಂತ್ರ್ಯ ದಿನಾಚರಣೆ ಸಡಗರ, ಸಂಭ್ರಮ ! ಅಂತೆಯೇ ಈ ಸವಿದಿನ ಅರ್ಥವೆತ್ತಾಗಿ ಆಚರಿಸುವುದಕ್ಕಾಗಿ ಭಾಗಶಃ ಕಾರ್ಯಕ್ರಮದ ಪೂರ್ವ ತಯಾರಿಗಳೆಲ್ಲ 14 ರಂದೇ ಇಲ್ಲಿನ ಶಾಲಾ,ಕಾಲೇಜುಗಳ ಮುಖ್ಯಸ್ಥರು ಮಾಡಿಕೊಂಡು ಸನ್ನದ್ಧ ಸ್ಥಿತಿಯಲ್ಲಿದ್ದರು. ಆದರೆ 15 ರ ತಡರಾತ್ರಿ ವರುಣದೇವ ಧರೆಗಾಗಮಿಸಿ ಅಸ್ತವ್ಯಸ್ತತೆಗೆ ಕಾರಣವಾಗುವಂತೆ ಆತಂಕ ಸೃಷ್ಟಿಸಿದ.ಇಲ್ಲಿನ ಶಿವಶರಣ ಹರಳಯ್ಯ ಸ್ಮಾರಕ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದ ಮುನ್ನಾದಿನ ಬುಧವಾರ ಶಾಲಾಂಗಳ ಶುಚಿಗೊಳಿಸಿ ಸುಣ್ಣದ ಮಾಕಿ೯ಂಗ್ ಲೇನ್ ಔಟ್ ಹಾಕಲಾಗಿತ್ತು. ಭಾರತ ನಕ್ಷೆ ಚಿತ್ರಕ್ಕೆ ತ್ರಿವರ್ಣ ಬಣ್ಣದ ಹಾಗೂ ಶಾಲಾವರಣದ ರಸ್ತೆ ಅಕ್ಕಪಕ್ಕದಲ್ಲಿ ರಂಗೋಲಿ ಚಿತ್ತಾರ ಮೂಡಿದ್ದವು ಆದರೆ 15 ರ ಮಧ್ಯರಾತ್ರಿ ವ್ಯಾಪಕ ಮಳೆ ಸುರಿದ ಪರಿಣಾಮ ಅವೆಲ್ಲವೂ ನೀರಿಗೆ ಹೋಮವಾದವು. ಬೆಳಿಗ್ಗೆ ಶಾಲಾ…

Read More

ಸಿಂದಗಿ: ಎಲ್ಲೆಡೆ ೭೮ನೇ ಸ್ವಾತಂತ್ರ‍್ಯೋತ್ಸವವನ್ನು ಸಂಭ್ರಮ ಸಡಗರದಿಂದ ಆಚರಿಸಲಾಗಿದೆ. ಆದರೆ ಕೆಲವೊಂದು ಕಡೆ ಒಂದಲ್ಲ ಒಂದು ಯಡವಟ್ಟುಗಳು ಆಗುತ್ತವೆ. ಆದರೂ ಅದಕ್ಕೆ ಸಂಬಂಧಿಸಿದವರು ಕೂಡಲೇ ಎಚ್ಚೆತ್ತುಕೊಳ್ಳದೆ ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡುತ್ತಾರೆ. ಅಂತಹದ್ದೆ ಒಂದು ಘಟನೆ ಪಟ್ಟಣದಲ್ಲಿರುವ ಪುರಸಭೆ ಕಚೇರಿ ಮೇಲೆ ನೆರವೇರಿಸಿದ ಧ್ವಜಾರೋಹಣದ ವೇಳೆ ನಡೆದಿದೆ.ಆದರೂ ಅಧಿಕಾರಿಗಳು ಅದನ್ನು ಸರಿಪಡಿಸುವ ಕೆಲಸ ಮಾಡದೆ ಹೋಗಿದ್ದು, ಸಾರ್ವಜನಿಕರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ರಾಷ್ಟ್ರಧ್ವಜವನ್ನು ಉಲ್ಟಾ ಹಾರಿಸಿದ ಘಟನೆ ಸಿಂದಗಿ ಪುರಸಭೆಯಲ್ಲಿ ನಡೆದಿದೆ.೭೮ನೇ ಸ್ವಾತಂತ್ರ‍್ಯ ದಿನಾಚರಣೆ ಹಿನ್ನೆಲೆಯಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಬಾವುಟ ಉಲ್ಟಾ ಹಾರಿಸಲಾಗಿದೆ. ಇದನ್ನು ಅಲ್ಲಿನ ಅಧಿಕಾರಿಗಳು, ಸಿಬ್ಬಂದಿ ಗಮನಿಸದೆ ಹೋಗಿರುವುದು ನಿಜಕ್ಕೂ ವಿಷಾದನೀಯ. “ನನಗೆ ಆಲಮೇಲದ ಚಾರ್ಜ್ ಸಹ ಇದ್ದು, ಇಲ್ಲಿ ಮುಂಜಾನೆ ಧ್ವಜಾರೋಹಣ ಮಾಡುವಾಗ ಸರಿಯಾಗಿಯೇ ಇದೆ. ಈ ಬಗ್ಗೆ ನಮ್ಮಲ್ಲಿ ವಿಡಿಯೋ ಸಹ ಇದೆ. ಆದರೆ, ನಮ್ಮ ಕಚೇರಿ ಸುತ್ತಮುತ್ತ ಅಂಗಡಿಗಳಿದ್ದು, ಮೇಲೆ ಹತ್ತಲು ಅವಕಾಶವಿದೆ. ಯಾರಾದರೂ ಕಿಡಿಗೇಡಿಗಳು ನನಗೆ ಮಸಿ ಬಳಿಯುವ ಸಲುವಾಗಿ…

Read More