Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿಜಯಪುರ: ನಗರದ ಸರಕಾರಿ ನೌಕರರ ಸಹಕಾರಿ ಬ್ಯಾಂಕಿನ ಆವರಣದಲ್ಲಿ ೭೮ನೇ ಸ್ವಾತಂತ್ರ್ಯ ದಿನಾಚರಣೆಯ ರಾಷ್ಟ್ರ ಧ್ವಜಾರೋಹಣವನ್ನು ಅಧ್ಯಕ್ಷ ಅರ್ಜುನ ಲಮಾಣಿ ನೆರವೇರಿಸಿ,ಮಾತನಾಡುತ್ತಾ, ದೇಶದ ಸ್ವಾತಂತ್ರ್ಯ ಪಡೆಯುವಲ್ಲಿ ವೀರ ನಾಯಕರ ಪಾತ್ರ ಹಿರಿದಾಗಿದೆ. ಇಡೀ ಜಗತ್ತಿಗೆ ಭಾರತ ಸಂಸ್ಕೃತಿ, ಸಂಸ್ಕಾರದಲ್ಲಿ ಶ್ರೇಷ್ಠತೆಯನ್ನು ಹೊಂದಿದೆ. ಹಿರಿಯರು ದೊರಕಿಸಿಕೊಟ್ಟ ಭವ್ಯ ಭಾರತವನ್ನು ಉಳಿಸಿ ಬೆಳೆಸೋಣ ಎಂದರು.ಜಿಓಸಿಸಿ ಬ್ಯಾಂಕಿನ ನಿರ್ದೇಶಕರಾದ ಸುರೇಶ ಶೇಡಶಾಳ, ಹಣಮಂತ ಕೊಣದಿ, ಚಂದ್ರಶೇಖರ ಜಿತ್ತಿ, ಪ್ರಧಾನ ವ್ಯವಸ್ಥಾಪಕರಾದ ಎಮ್ ವ್ಹಿ ಪರ್ವತಿ, ವ್ಯವಸ್ಥಾಪಕರಾದ ಎಮ್ ಕೆ ಜೋಶಿ ಸೇರಿದಂತೆ ಬ್ಯಾಂಕಿನ ನಿರ್ದೇಶಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.ಪ್ರತಿಭಾ ಪುರಸ್ಕಾರ:ವಿಜಯಪುರ-ಬಾಗಲಕೋಟ ಅವಳಿ ಜಿಲ್ಲೆಯ ಸರಕಾರಿ ನೌಕರರ ಸದಸ್ಯರು ಹಾಗೂ ಸಿಬ್ಬಂದಿಯವರ ಮಕ್ಕಳಿಗಾಗಿ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ.೨೦೨೩-೨೪ ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿಯಲ್ಲಿ ೮೦% ಅಂಕಗಳು ಹಾಗೂ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಅರ್ಹತೆ ಆಧಾರದ ಮೇಲೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಪ್ರಧಾನ ಶಾಖೆ ಅಥವಾ ಶಾಖಾ ಕಚೇರಿಗಳನ್ನು ಸಂಪರ್ಕಿಸಲು ಕೋರಲಾಗಿದೆ. ಆ. ೧೬ರಿಂದ…
ವಿಜಯಪುರ: ಭಾರತದ ಸ್ವಾತಂತ್ರ್ಯಕ್ಕಾಗಿ ಲಕ್ಷಾಂತರ ದೇಶ ಭಕ್ತರು, ಹೋರಾಟಗಾರರು ತಮ್ಮ ಪ್ರಾಣ ತ್ಯಾಗ ಮಾಡಿದ್ದಾರೆ. ಪೂರ್ವಜರಲ್ಲಿದ್ದ ಸ್ವದೇಶಾಭಿಮಾನದ ಕಿಚ್ಚು ಹಾಗೂ ಶ್ರದ್ಧೆಯ ಹೋರಾಟದ ಫಲವಾಗಿ ನಮಗೆ ಸ್ವಾತಂತ್ರ್ಯ ದೊರಕಿದ್ದು ಅದನ್ನು ಮುಂದಿನ ಪೀಳಿಗೆಗೂ ತಿಳಿಸಿ ಕೊಡುವ ಪ್ರಯತ್ನ ನಮ್ಮಿಂದ ನಡೆಯಬೇಕಿದೆ ಎಂದು ಜಿಲ್ಲಾ ಬಂಜಾರಾ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಿ.ಎಲ್.ಚವ್ಹಾಣ ಹೇಳಿದರು.ನಗರದ ಬಂಜಾರ ಶಿಕ್ಷಣ ಸಂಸ್ಥೆಯಲ್ಲಿ ಧ್ವಜಾರೋಹಣ ನೇರವೇರಿಸಿ ಮಾತನಾಡಿದ ಅವರು, ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿ ಕೊಡುವಲ್ಲಿ ಹೋರಾಡಿದ ಮಹನೀಯರನ್ನು ಸ್ಮರಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ. ದೇಶದ ಪ್ರಗತಿ ಮತ್ತು ಉನ್ನತಿಗೆ ನಾವೆಲ್ಲರೂ ನಮ್ಮಿಂದ ಸಾಧ್ಯವಾಗುವಷ್ಟು ರೀತಿಯಲ್ಲಿ ಸಹಕರಿಸುವಂತಾಗಬೇಕು.ಇದು ಸ್ವಾತಂತ್ರೋತ್ಸವಕ್ಕೆ ನೀಡುವ ಕೊಡುಗೆಯಾಗಲಿದೆ ಎಂದರು.ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಎಸ್ ಬಿ ಪವಾರ ಮಾತನಾಡಿ,ಆಗಸ್ಟ್ 15, ಬ್ರಿಟಿಷರ ಕಪಿಮುಷ್ಠಿಯಿಂದ ನಮಗೆ ಸ್ವಾತಂತ್ರ್ಯ ದೊರೆತ ದಿನ.ಹೋರಾಟಗಾರರ ನೆತ್ತರ ಹನಿಗಳಿಂದಾಗಿ ನಾವಿಂದು ನೆಮ್ಮದಿಯಾಗಿ ಉಸಿರಾಡುವಂತಾಗಿದೆ. ೨೦೦ ವರ್ಷಗಳ ಬ್ರಿಟಿಷ್ ಆಳ್ವಿಕೆಯಿಂದ ಮುಕ್ತವಾದ ಭಾರತ ಪ್ರಜಾಸತ್ತಾತ್ಮಕ ಸಾರ್ವಭೌಮ ರಾಷ್ಟ್ರವಾಯಿತು ಎಂದರು.ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು.ಬಂಜಾರ ಪ್ರಾಥಮಿಕ ಶಾಲೆಯ…
ತಿಕೋಟಾ: ತಾಲೂಕಿನ ಹೊನವಾಡ ಗ್ರಾಮದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಅಭಿವೃದ್ಧಿಪಡಿಸಲಾದ ಅಮೃತ ಸರೋವರದಲ್ಲಿ ಹಮ್ಮಿಕೊಂಡ ಸ್ವಾತಂತ್ರ್ಯ ದಿನಾಚರಣೆಯಲ್ಲಿ ತಾಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಐನಾಪುರ ಅವರು ಮಾತನಾಡುತ್ತಾ, ನಮ್ಮ ದೇಶ ಸ್ವಾತಂತ್ರ್ಯ ಹೊಂದಲು ಹಲವಾರು ಮಹನೀಯರು ತಮ್ಮ ಜೀವನವನ್ನು ಬಲಿದಾನ ಮಾಡಿದ್ದಾರೆ.ಕೆಲವರು ತಮ್ಮ ಅಮೂಲ್ಯವಾದ ದಿನಗಳನ್ನು ದೇಶಕ್ಕಾಗಿ ಸೆರೆಮನೆಯಲ್ಲಿ ಕಳೆದಿದ್ದಾರೆ. ಅಂತಹ ಮಹಾನ ನಾಯಕರನ್ನು ಸ್ಮರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಇಂದಿನ ಸಂಪತ್ತನ್ನು ಸಂರಕ್ಷಣೆ ಮಾಡಿ ಮುಂದಿನ ಪೀಳಿಗೆಗೆ ನೀಡುವುದು ಸಹ ನಮ್ಮ ಆದ್ಯ ಕರ್ತವ್ಯವಾಗಬೇಕು. ನಮ್ಮ ದೇಶದ ಜೊತೆಗೆ ಅನೇಕ ದೇಶಗಳು ಸ್ವಾತಂತ್ರ್ಯ ಪಡೆದುಕೊಂಡರೂ ಸಹಿತ ಬೇರೆ ಯಾವ ದೇಶವು ಭಾರತದಷ್ಟು ಅಭಿವೃದ್ಧಿ ಹೊಂದಿರುವುದಿಲ್ಲ. ವಿಶ್ವದ ಅತ್ಯಂತ ಬಲಿಷ್ಠ ಸಂವಿಧಾನ ಹೊಂದಿದ ನಮ್ಮ ಭಾರತ, ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಕೂಡಾ ಸಾಮಾಜಿಕ ನ್ಯಾಯ ದೊರಕಿಸಿಕೊಟ್ಟಿದೆ. ಅವುಗಳನ್ನು ಸದುಪಯೋಗ ಪಡಿಸಿಕೊಂಡು ನಾವೆಲ್ಲರೂ ಸಂವಿಧಾನದ ಆಶಯದಂತೆ ಬದುಕಬೇಕು. ಬಲಿದಾನಗೈದ ಮಹಾನ ನಾಯಕರು ಹಾಕಿ ಕೊಟ್ಟ ಆದರ್ಶ ಮಾರ್ಗದಲ್ಲಿ ನಡೆಯುವ…
ವಿಜಯಪುರ: ಸ್ವಾತಂತ್ರ್ಯ ಹೋರಾಟಗಾರರು ದೇಶದ ಆಸ್ತಿ. ಅವರನ್ನು ಯಾವುದೇ ಜಾತಿ ಮತ್ತು ಸಮುದಾಯಕ್ಕೆ ಸೀಮಿತಗೊಳಿಸಬಾರದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಗುರುವಾರ ಬಬಲೇಶ್ವರ ತಾಲೂಕಿನ ದದಾಮಟ್ಟಿಯಲ್ಲಿ ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿ ಉದ್ಘಾಟಿಸಿ ಅವರು ಮಾತನಾಡಿದರು.ಸಂಗೊಳ್ಳಿ ರಾಯಣ್ಣ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಕಿತ್ತೂರು ಸಂಸ್ಥಾನ ಉಳಿವಿಗಾಗಿ ರಾಣಿ ಚನ್ನಮ್ಮರ ಜೊತೆ ಹೋರಾಟ ಮಾಡಿದ್ದಾರೆ. ದೇಶದ ಸ್ವಾತಂತ್ತಯ ಹೋರಾಟದಲ್ಲಿ ಅವರ ಪಾತ್ರ ಬಹಳಷ್ಟಿದೆ. ಸ್ವಾತಂತ್ರ್ಯ ದಿನಾಚರಣೆ ದಿನದಂದೇ ರಾಯಣ್ಣರ ಜನ್ಮದಿನ ಇರುವುದು ಅರ್ಥಪೂರ್ಣವಾಗಿದೆ. ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಸೇರಿದಂತೆ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ ಮಹನೀಯರು ದೇಶ ಆಸ್ತಿಯಾಗಿದ್ದಾರೆ. ಅವರ ಸೇವೆ ಸದಾ ಸ್ಮರಣೀಯವಾಗಿದೆ ಎಂದು ಅವರು ಹೇಳಿದರು.ಜುಮನಾಳ, ತೊನಶ್ಯಾಳ, ಹೊನಗನಹಳ್ಳಿ ಭಾಗಕ್ಕೆ ಶ್ರೀ ರೇವಣಸಿದ್ಧೇಶ್ವರ ಏತ ನೀರಾವರಿ ಯೋಜನೆಯಡಿ ನೀರಾವರಿ ಸೌಲಭ್ಯ ಒದಗಿಸಲಾಗುವುದು. ಈ ಕಾಮಗಾರಿ ಪ್ರಗತಿಯಲ್ಲಿದ್ದು, ಈ ಯೋಜನೆಯಿಂದ ಈ ಭಾಗದಲ್ಲಿ ಮತ್ತಷ್ಟು…
ವಿಜಯಪುರ: ಭಾರತೀಯ ಜನತಾ ಪಾರ್ಟಿ ವಿಜಯಪುರ ಜಿಲ್ಲಾ ಕಾರ್ಯಾಲಯ ಆಯೋಜಿಸಿದ್ದ 78 ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸುವ ಮೂಲಕ ಆಚರಿಸಲಾಯಿತು.ಜಿಲ್ಲಾ ಅಧ್ಯಕ್ಷ ಆರ್ ಎಸ್ ಪಾಟೀಲ್ ಕುಚಬಾಳ, ಸಂಸದ ರಮೇಶ್ ಜಿಗಜಿಣಿಗಿ, ಮಾಜಿ ವಿಧಾನ ಪರಿಷತ್ತಿನ ಸದಸ್ಯ ಅರುಣ ಶಹಾಪುರ, ಬಿಜೆಪಿ ಮುಖಂಡರಾದ ಚಂದ್ರಶೇಖರ್ ಕವಟಿಗಿ, ಪ್ರಕಾಶ ಅಕ್ಕಲಕೋಟ, ವಿಜುಗೌಡ ಪಾಟೀಲ್, ಜಿಲ್ಲೆಯ ಪ್ರಧಾನ ಕಾರ್ಯದರ್ಶಿಗಳಾದ ಮಲಗೌಡ ಪಾಟೀಲ್ ಈರಣ್ಣ ರಾವೂರ, ಉಮೇಶ್ ಕೊಳಕರ, ಸಂಜಯ ಪಾಟೀಲ್ ಕನಮಡಿ, ಚಿದಾನಂದ ಚಲವಾದಿ ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಕರೆ ವಿಜಯಪುರ: ಬಾಲ ಮಂದಿರದಲ್ಲಿರುವ ಪ್ರತಿಭಾವಂತ ಮಕ್ಕಳನ್ನು ಸಮಾಜದ ಮುಖ್ಯ ವಾಹಿನಿಗೆ ತರುವುದು ನಾಗರಿಕ ಸಮಾಜದ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು ಕರ್ನಾಟಕ ಬಾಲ ವಿಕಾಸ ಅಕಾಡೆಮಿಯು ನಾಡಿನ ಮಕ್ಕಳ ಶ್ರೇಯೋಭಿವೃದ್ಧಿಯ ಜೊತೆಗೆ ಬಾಲ ಮಂದಿರ ಮಕ್ಕಳಿಗಾಗಿ ವಿಶೇಷ ಯೋಜನೆಗಳನ್ನು ಕೈಗೊಳ್ಳಲಿದೆ. ಆ ಮೂಲಕ ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬುವ ಕೆಲಸವನ್ನು ಮಾಡಲಿದ್ದೇನೆ ಎಂದು ಕರ್ನಾಟಕ ಬಾಲ ವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.ಗುರುವಾರ ಅವರು ನಗರದ ಬಾಲಕರ ಬಾಲ ಮಂದಿರದಲ್ಲಿ 78ನೆಯ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.”ನಾನು ಕರ್ನಾಟಕ ಬಾಲ ವಿಕಾಸ ಅಕಾಡೆಮಿಯ ಕೇಂದ್ರ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸದೆ ಅಲ್ಲಿಯ ಅಧಿಕಾರಿಗಳಿಗೆ ಕೇಂದ್ರ ಕಚೇರಿಯ ದ್ವಜಾರೋಹಣ ನೆರವೇರಿಸುವಂತೆ ತಿಳಿಸಿ, ಬಾಲ ಮಂದಿರದ ಮಕ್ಕಳೊಂದಿಗೆ ಸ್ವಾತಂತ್ರ್ಯೋತ್ಸವ ಆಚರಿಸಲು ನಿರ್ಧರಿಸಿದ್ದೆ. ಈ ಮಕ್ಕಳಲ್ಲಿರುವ ಶಿಸ್ತು ಅವರ ಕಣ್ಣುಗಳಲ್ಲಿರುವ ಹೊಳಪನ್ನು ನೋಡಿದಾಗ ತುಂಬಾ ಸಂತೋಷವಾಗಿದೆ. ಬಾಲ ಮಂದಿರದ ಮಕ್ಕಳಿಗೆ ಆತ್ಮ ವಿಶ್ವಾಸವನ್ನು ತುಂಬಿ, ಪ್ರೀತಿ-ಕಕ್ಕುಲತೆ ಕಾಳಜಿಯನ್ನು ತೋರಿದರೆ…
ವಿಜಯಪುರ: ಆಗಸ್ಟ್ 15, 1947, ಅದೆಷ್ಟೋ ಕೆಚ್ಚೆದೆಯ ವೀರರು, ರಾಷ್ಟ್ರ ಪ್ರೇಮಿಗಳು, ಹೋರಾಟಗಾರರು ಕಂಡ ಕನಸು ನನಸಾದ ದಿನ. ಈ ದಿನಕ್ಕಾಗಿ ಅದೆಷ್ಟೋ ಮಂದಿ ಜೀವ ಕಳೆದುಕೊಂಡಿದ್ದಾರೆ. ಇವರೆಲ್ಲಾ ತಮ್ಮ ಬದುಕನ್ನೇ ತೇಯ್ದು ಸ್ವಾತಂತ್ರ್ಯದ ಕನಸನ್ನು ಕಂಡಿದ್ದರು. ಈ ಕನಸು ನನಸಾದ ಕ್ಷಣಕ್ಕೆ ಈಗ 78ನೇ ವರ್ಷ. ಇದು ಸ್ವಾತಂತ್ರ್ಯ ವೀರರನ್ನು ಗೌರವಿಸುವ, ಹೋರಾಟಗಾರರ ತ್ಯಾಗವನ್ನು ಸ್ಮರಿಸುವ, ದೇಶ ರಕ್ಷಣೆಗೆ ಕಟಿಬದ್ಧರಾಗಿರುವ ಪ್ರತಿಜ್ಞೆ ತೊಡುವ ಕ್ಷಣ. ಈ 78 ನೇ ಸ್ವಾತಂತ್ರೋತ್ಸವ ದಿನದ ನಿಮಿತ್ತ ತಾಲೂಕಿನ ನಾಗಠಾಣ ಗ್ರಾಮದ ಕರ್ನಾಟಕ ಪಬ್ಲಿಕ್ ಪ್ರಾಥಮಿಕ ಶಾಲೆಯಲ್ಲಿ ಜರುಗಿದ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಯುಕೆಜಿ ವಿದ್ಯಾರ್ಥಿನಿ ಶ್ರೀನಿಧಿ ಬಂಡೆ ಭಾಷಣ ಮಾಡುತ್ತಿರುವದು. ವೇದಿಕೆಯಲ್ಲಿ ಅನೇಕ ಅತಿಥಿಗಳು ಉಪಸ್ಥಿತರಿದ್ದರು.
ಕೆಂಭಾವಿ: ಪಟ್ಟಣದ ವಿವಿಧೆಡೆಗಳಲ್ಲಿ, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಭಾರತರತ್ನ ಸಂವಿಧಾನ ಶಿಲ್ಪಿ ಡಾ ಬಾಬಾಸಾಹೇಬ್ ಅಂಬೇಡ್ಕರ್ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿ, ಮಾಲಾರ್ಪಣೆ ಮಾಡಿ, ಪುಷ್ಪಾರ್ಚನೆಯೊಂದಿಗೆ ದೇಶದ 78 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು.ಪುರಸಭೆ ಕಾರ್ಯಾಲಯದಲ್ಲಿ, ಮುಖ್ಯಾಧಿಕಾರಿ ಮಹ್ಮದ್ ಯುಸೂಫ್. ನಾಡ ಕಛೇರಿಯಲ್ಲಿ ಉಪತಹಸೀಲ್ದಾರ್ ಪ್ರವೀಣಕುಮಾರ ಸಜ್ಜನ್. ಪೋಲೀಸ್ ಠಾಣೆಯಲ್ಲಿ ಪಿಎಸ್ಐ ಅಮೋಜ್ ಕಾಂಬಳೆ. ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿ ಡಾ ಗಿರೀಶ್ ಕುಲ್ಕರ್ಣಿ. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಂಶುಪಾಲ ಪ್ರೊ ನಾಗಪ್ಪ ಚಾವಲ್ಕರ್. ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಿನ್ಸಿಪಾಲ್ ವೀರೇಂದ್ರ ಧರಿ. ಸರ್ಕಾರಿ ಬಾಲಕರ ಪ್ರೌಢಶಾಲೆಯಲ್ಲಿ, ಕೆ ಆರ್ ಪಾಟೀಲ್. ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ವಿಠ್ಠಲ ಚೌವ್ಹಾಣ್. ವಿವಿಎಸ್ ಬ್ಯಾಂಕ್ನಲ್ಲಿ, ಅಧ್ಯಕ್ಷ ರಾಮನಗೌಡ ವಂದಗನೂರು ಯಾಳಗಿ. ವಿಪ್ರಾಗ್ರಾಕೃ ಸಹಕಾರಿಯಲಿ ಅಧ್ಯಕ್ಷ ಮುದಿಗೌಡ ಪಾಟೀಲ್. ಕೆಂಭಾವಿ-2 ಸಹಕಾರಿ ಸಂಘದಲ್ಲಿ ಅಧ್ಯಕ್ಷ ಮಡಿವಾಳಪ್ಪಗೌಡ ಪಾಟೀಲ್. ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಸೌಹಾರ್ದ ಸಹಕಾರಿಯಲಿ, ನಿರ್ದೇಶಕ ಎಸ್ ವೈ…
ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯ ವಿಜಯಪುರ: ಜೀವನದಲ್ಲಿ ಸಾಧಿಸಬೇಕಾದರೆ ಓದು ಅವಶ್ಯಕತೆ ಇದೆ ಅದಕ್ಕೆ ಗ್ರಂಥಾಲಯದ ಪೂರಕ ವಿದ್ಯಾರ್ಥಿಗಳು ನಿರಂತರವಾಗಿ ಅಧ್ಯಯನಶೀಲರಾಗಬೇಕು ಎಂದು ಸಹಾಯಕ ಪ್ರಾಧ್ಯಾಪಕರಾದ ಡಾ.ಶ್ರೀನಿವಾಸ ದೊಡ್ಡಮನಿ ಹೇಳಿದರು.ನಗರದ ಎಸ್ ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಐಕ್ಯೂಎಸಿ ಸಂಯೋಜನೆಯಡಿ ಏರ್ಪಡಿಸಿದ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆಯಲ್ಲಿ ಮಾತನಾಡಿದ ಅವರು, ಗ್ರಂಥಾಲಯ ಪಿತಾಮಹರಾದ ಡಾ.ಎಸ್.ಆರ್.ರಂಗನಾಥ ಅವರನ್ನು ಸ್ಮರಿಸಬೇಕು. ಅದರಂತೆ ವಿದ್ಯಾರ್ಥಿಗಳ ಬದುಕಿಗೆ ಗ್ರಂಥಾಲಯ ಬಹಳಷ್ಟು ಅವಶ್ಯಕತೆ ಇದೆ. ಇಂದಿನ ವಿದ್ಯಾರ್ಥಿಗಳು ಓದುವುದುನ್ನು ಬಿಟ್ಟು ಅನ್ಯ ಚಟುವಟಿಕೆಗಳಲ್ಲಿ ತೊಡಗುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.ಇಂದಿನ ವಿದ್ಯಾರ್ಥಿಗಳು ಜೀವನದಲ್ಲಿ ಸಾಧಿಸಬೇಕಾದರೆ ಓದಿನಿಂದ ಮಾತ್ರ ಸಾಧ್ಯ ಆದ್ದರಿಂದ ಗ್ರಂಥಾಲಯದಲ್ಲಿ ನಿರಂತರವಾಗಿ ಅಧ್ಯಯನಶೀಲರಾಗಬೇಕು. ನಮ್ಮ ಬದುಕಿನಲ್ಲಿ ನಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ಇಂತಹ ಗ್ರಂಥಾಲಯಗಳು ಸಹಾಯಕವಾಗಿವೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಓದಿನ ಅವಶ್ಯಕತೆ ಇದ್ದು, ಇಂತಹ ಗ್ರಂಥಾಲಯವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಹೇಳಿದರು.ಈ ವೇಳೆ ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ.ಆರ್.ಎಂ.ಮಿರ್ದೆ ಮಾತನಾಡಿ, ಕಲಿಕೆಗೆ…
-ಡಾ.ಯಂಕನಗೌಡ ಎಸ್ ಪಾಟೀಲ, ಮಾಲಹಳ್ಳಿ ಉಪನ್ಯಾಸಕರು , ಮೊ:9008370650. ಸ್ವಾತಂತ್ರ್ಯ ಎಂಬ ಪದವು ಮೂಲ ಲ್ಯಾಟಿನ್ ಭಾಷೆಯ “ಲಿಬರ್” ಎಂಬ ಪದದಿಂದ ಬಂದಿದೆ ಲಿಬರ್ ಎಂದರೆ “ಪ್ರೀ” ಬಂಧನದಿಂದ ಮುಕ್ತಿ ಎಂದರ್ಥ ಆಂಗ್ಲ ಭಾಷೆಯ “ಲಿಬರ್ಟಿ” ಕನ್ನಡ ಅನುವಾದವೇ “ಸ್ವಾತಂತ್ರ್ಯ” ಎಂದು ಕರೆಯುತ್ತಾರೆ. ಈ ಪದವನ್ನು ಎರಡು ರೀತಿಯಲ್ಲಿ ಅರ್ಥೈಸಬಹುದು. ಒಂದು ರಾಷ್ಟ್ರದ ಸ್ವಾತಂತ್ರ್ಯ ಇನ್ನೂಂದು ನಾಗರಿಕ ಸ್ವಾತಂತ್ರ್ಯ, ಒಂದು ರಾಷ್ಟ್ರವು ಪ್ರಪಂಚದ ಇತರ ರಾಷ್ಟ್ರಗಳ ಅಧೀನದಲ್ಲಿರದೆ ಸಂಪೂರ್ಣ ಸ್ವಾಯತ್ತತೆ ಹೊಂದಿರುವುದೇ ರಾಷ್ಟ್ರದ ಸ್ವಾತಂತ್ರ್ಯ ಎನ್ನುತ್ತೇವೆ. ನನ್ನಂತೆಯೇ ಎಲ್ಲರೂ ಎನ್ನುವುದೇ ನಾಗರಿಕ ಸ್ವಾತಂತ್ರ್ಯ ಎಂದು ಕರೆಯಲಾಗುತ್ತದೆ.ಸ್ವಾತಂತ್ರ್ಯ ಎಂದರೆ ಜವಾಬ್ದಾರಿ, ಸ್ವಾತಂತ್ರ್ಯ ಎಂದರೆ ಪ್ರಗತಿಯ, ಸಂವರ್ಧನೆ, ಸ್ವಾತಂತ್ರ್ಯ ಎಂದರೆ ಧನಾತ್ಮಕ ಚಿಹ್ನೆ, ಅದೊಂದು ತಿಳಿ ಬೆಳಕು, ಚಿಂತನಾ ಲಹರಿ, ಕಾರ್ಯಕ್ಷಮತೆಯ ಪರಿಧಿ, ಸ್ವಾತಂತ್ರ್ಯ ಎಂದರೆ ಸ್ವೇಚ್ಛೆ ಅಲ್ಲ ಅದೊಂದು ನಾಗರಿಕತೆಯ ಕುರುಹು, ಸಭ್ಯತೆಯ ಸಾರ್ವಕಾಲಿಕ ಸತ್ಯ, ಇತಿಮಿತಿಯ ಸಮಾಜದ ದ್ಯೋತಕ, ವ್ಯವಹಾರ ಕೌಶಲವೂ ಹೌದು. ಪರರಿಗೆ ನೋವುಣಿಸದೆ ಸಹಕಾರ ನೀಡುವ ತತ್ವವು ಹೌದು,…
