Author: editor.udayarashmi@gmail.com

ಆಲಮಟ್ಟಿ: ಆಲಮಟ್ಟಿ ಜಲಾಶಯದ ಗೇಟ್ ಗಳು ಸೇರಿದಂತೆ ಜಲಾಶಯಕ್ಕೆ ಯಾವುದೇ ರೀತಿಯ ತೊಂದರೆಯಿಲ್ಲ, ಎಲ್ಲವೂ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿವೆ ಎಂದುಕೃಷ್ಣಾ ಭಾಗ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ಮೋಹನರಾಜು ತಿಳಿಸಿದರು.ಆಲಮಟ್ಟಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಸ್ವಾತ್ರಂತ್ರೋತ್ಸವದ ಅಂಗವಾಗಿ ಬುಧವಾರ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ನಿಗಮದ ನೌಕರರಿಗಾಗಿ ಏರ್ಪಡಿಸಿದ್ದ ಕ್ರಿಕೆಟ್ ಪಂದ್ಯಾವಳಿ ಉದ್ಘಾಟಿಸಿದ ನಂತರ ಅವರು ಈ ವಿಷಯ ತಿಳಿಸಿದರು.ಈಗಾಗಲೇ ಆಲಮಟ್ಟಿ ಜಲಾಶಯದ ಗೇಟ್ ಗಳ ಮೇಲ್ವಿಚಾರಣೆ ಮುಂಗಾರು ಹಂಗಾಮಿಗೂ ಮೊದಲು ನಡೆಸಲಾಗಿದೆ, ಆದರೆ ಈಗ ಜಲಸಂಪನ್ಮೂಲ ಸಚಿವರು ಹಾಗೂ ಜಲಸಂಪನ್ಮೂಲ ಇಲಾಖೆಯ ಕಾರ್ಯದರ್ಶಿಗಳು ಮತ್ತೊಮ್ಮೆ ಜಲಾಶಯವನ್ನು ಪರೀಕ್ಷಿಸಿ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ. ಆ ಪ್ರಕಾರ ಎರಡು ದಿನಗಳಲ್ಲಿ ಮತ್ತೊಮ್ಮೆ ವಿವರವಾಗಿ ಪರಿಶೀಲನೆ ನಡೆಸಿ ವರದಿ ಸಲ್ಲಿಸಲಾಗುವುದು ಎಂದು ಅವರು ತಿಳಿಸಿದರು.ಆಲಮಟ್ಟಿ ಜಲಾಶಯದ ಕಾಲುವೆಗಳಿಗೆ ನೀರು ಹರಿಸಿ ಅದರ ಮೂಲಕ ಜಿಲ್ಲೆಯ 100 ಕ್ಕೂ ಅಧಿಕ ಕೆರೆಗಳ ಭರ್ತಿಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು.ಜಲಾಶಯ ಭರ್ತಿಯತ್ತ ಸಾಗಿದ್ದು ಖುಷಿ…

Read More

ಬೆಳಗಾವಿಯಲ್ಲಿ ನಡೆಸಿರುವುದು ಬಂಡಾಯಗಾರರ ಸಭೆಯಲ್ಲ | ವರಿಷ್ಠರ ಅನುಮತಿಯೊಂದಿಗೆ ಪಾದಯಾತ್ರೆ | ಸಿಂಹ ಸ್ಪಷ್ಟನೆ ಮೈಸೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಹಗರಣವನ್ನು ಖಂಡಿಸಿ ಸೆ.17ರಿಂದ ಪಾದಯಾತ್ರೆಗೆ ನಿರ್ಧರಿಸಿದ್ದೇವೆ. ಪಕ್ಷದ ನೇತಾರ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ ನೇತೃತ್ವದಲ್ಲಿ ನಾವು ಬೆಳಗಾವಿಯಲ್ಲಿ ನಡೆಸಿರುವುದು ಬಿಜೆಪಿ ಅತೃಪ್ತರ ಅಥವಾ ಬಂಡಾಯಗಾರರ ಸಭೆಯಲ್ಲ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.ಮೈಸೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮೈಸೂರು ಚಲೋ ಪಾದಯಾತ್ರೆಯ ಅನುಭವವನ್ನು ನಾನು ಅಲ್ಲಿ ಹಂಚಿಕೊಂಡೆ. ವಾಲ್ಮೀಕಿ ನಿಗಮದ ಹಗರಣದ ವಿರುದ್ದ ಸರಿಯಾದ ಹೋರಾಟ ನಡೆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಖುರ್ಚಿ ಅಲುಗಾಡುತ್ತದೆ. ಯತ್ನಾಳ್ ಅವರಂಥ ದೊಡ್ಡ ನಾಯಕ ಕರೆದ ಕಾರಣ ನಾನು ಸಭೆಗೆ ಹೋಗಿದ್ದೆ ಎಂದಿದ್ದಾರೆ.“ನಮ್ಮ ಪಾದಯಾತ್ರೆಗೆ ಹೈಕಮಾಂಡ್ ಅನುಮತಿ ಕೊಡುತ್ತದೆ. ವರಿಷ್ಠರ ಅನುಮತಿಯೊಂದಿಗೇ ನಾವು ನಡೆಸುತ್ತೇವೆ. ಯಾರನ್ನೋ ಓಲೈಸಲು ಅಥವಾ ಮೆಚ್ಚಿಸಲು ರಾಜಕಾರಣ ಮಾಡುವುದಿಲ್ಲ. ಯಾರ ಮನೆಯ ಬಾಗಿಲನ್ನೂ ತಟ್ಟುವುದಿಲ್ಲ. ನನಗೆ ಟಿಕೆಟ್ ಕೊಟ್ಟಿದ್ದು ಬಿಜೆಪಿ ಅಲ್ಲ;…

Read More

ಮುದ್ದೇಬಿಹಾಳ: ಶರಣರ ವಚನಗಳಲ್ಲಿ ಬದುಕಿನ ಮೌಲ್ಯಗಳು ಅಡಕವಾಗಿವೆ. ವಚನಗಳನ್ನು ನಿತ್ಯ ಪಠಣಮಾಡಿ, ಅವುಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ಬದುಕು ಬಂಗಾರವಾಗುತ್ತದೆ ಎಂದು ಹಿರಿಯ ಸಾಹಿತಿ ಅಶೋಕ ಮಣಿ ಅಭಿಪ್ರಾಯ ಪಟ್ಟರು.ಪಟ್ಟಣದ ಮಾರುತಿ ನಗರದ ಸಿದ್ದಣ್ಣ ರೇವಡಿ ಅವರ ಮನೆಯಲ್ಲಿ ಬಸವ ಮಹಾಮನೆ ಸಮೀತಿ ಹಾಗೂ ಶರಣ ಸಾಹಿತ್ಯ ಪರಿಷತ್ತು ಶರಣ ಶ್ರಾವಣದ ಅಂಗವಾಗಿ ಹಮ್ಮಿಕೊಂಡ ಮನೆಯಂಗಳದಿಂದ ಮನದಂಗಳಕ್ಕೆ ಶರಣರ ಸಂದೇಶ ೩ನೇ ದಿನದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.೧೨ ನೇ ಶತಮಾನದಲ್ಲಿ ಬಸವಾದಿ ಪ್ರಮಥರು ರಚಿಸಿರವ ವಚನಗಳು ತ್ರಿಕಾಲ ಸತ್ಯ. ವಚನಗಳಲ್ಲಿಯ ತಿರುಳನ್ನು ಪಚನಮಾಡಿಕೊಂಡಾಗ ಮಾತ್ರ ಬದುಕು ಹಸನಾಗಿ ಮನಸ್ಸಿಗೆ ಶಾಂತಿ ಹಾಗೂ ನೆಮ್ಮದಿ ಸಿಗಲು ಸಾಧ್ಯ. ಪಾಲಕರಾದವರು ಮಕ್ಕಳನ್ನು ಮೊಬೈಲ್ ಗೀಳಿನಿಂದ ಹೊರತಂದು ಶರಣರ ವಚನಗಳ ಪರಿಚಯವನ್ನು ಮಾಡಿಕೊಡುವುದು ಅತ್ಯವಶ್ಯ. ದಾರಿ ತಪ್ಪುವವರನ್ನು ಸರಿದಾರಿಗೆ ತರುವಲ್ಲಿ ವಚನಗಳು ದಾರಿ ದೀಪವಾಗಬಲ್ಲವು ಎಂದರು.ಚಿತ್ತರಗಿ -ಇಲಕಲ್ಲ ಮಠದ ಶ್ರೀ ವಿಜಯಮಹಾಂತ ಮಹಾಸ್ವಾಮಿಗಳ ಜೀವನ ಕುರಿತು ಬಸವ ಮಹಾಮನೆ ಸಮಿತಿಯ ಅಧ್ಯಕ್ಷ…

Read More

ಬಸವನಬಾಗೇವಾಡಿ: ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಿ ಉತ್ತಮ ಜ್ಞಾನ ಪಡೆದುಕೊಂಡು ಸಮಾಜದ ಪ್ರಬುದ್ಧ ನಾಗರಿಕರಾಗಿ ಹೊರಹೊಮ್ಮುವಂತಾಗಬೇಕೆಂದು ಸ್ಥಳೀಯ ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ ಹೇಳಿದರು.ಪಟ್ಟಣದ ಬಿಎಲ್ಡಿಇ ಸಂಸ್ಥೆಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ೨೦೨೩-೨೪ ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಒಕ್ಕೂಟ, ಎನ್ಎನ್ಎಸ್, ಸ್ಕೌಟ್ಸ್-ಗೈಡ್ಸ್, ರೆಡ್ಕ್ರಾಸ್ ಹಾಗೂ ಕ್ರೀಡಾ ಚಟುವಟಿಕೆಗಳ ಮುಕ್ತಾಯ ಸಮಾರಂಭ ಹಾಗೂ ಬಿಎ.ಬಿಕಾಂ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದ ಸಾನಿಧ್ಯ ವಹಿಸಿ ಮಾತನಾಡಿದ ಅವರು, ಮೊಬೈಲ್ ಹೆಚ್ಚು ಬಳಕೆ ಮಾಡುವವರನ್ನು ಸೋಮಾರಿಯನ್ನಾಗಿಸುತ್ತದೆ. ಮೊಬೈಲ್ ಬಳಕೆಯಿಂದ ನರದೌರ್ಬಲ್ಯವು ಉಂಟಾಗುತ್ತದೆ. ಇದರಿಂದ ವಿದ್ಯಾರ್ಥಿಗಳು ಆದಷ್ಟು ದೂರವಿದ್ದು ಪಠ್ಯ-ಪಠ್ಯೇತರ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡರೆ ಉತ್ತಮ ವ್ಯಕ್ತಿತ್ವ ತಮ್ಮದಾಗಿಸಿಕೊಳ್ಳಬಹುದು. ಬಸವ ನೆಲದಲ್ಲಿರುವ ಈ ಮಹಾವಿದ್ಯಾಲಯದಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಶರಣರ ಸನ್ಮಾರ್ಗದಲ್ಲಿ ನಡೆಯುವಂತಾಗಬೇಕೆಂದರು.ಬಿಎಲ್ಡಿಇ ಸಂಸ್ಥೆಯ ಜಮಖಂಡಿಯ ಆಡಳಿತಾಧಿಕಾರಿ ಪ್ರೊ.ಎಸ್.ಎಚ್.ಲಗಳಿ ಮಾತನಾಡಿ, ಬಹುತೇತ ಪ್ರತಿಭಾನ್ವಿತರು ಗ್ರಾಮೀಣ ಪ್ರದೇಶದಿಂದ ಬಂದವರೇ ಆಗಿರುವುದನ್ನು ಕಾಣುತ್ತೇವೆ. ಸ್ಪರ್ಧಾತ್ಮಕ ಜ್ಞಾನ, ಸಂವಹನ ಕೌಶಲ್ಯ, ನಿರಂತರ ಅಧ್ಯಯನದಲ್ಲಿ ವಿದ್ಯಾರ್ಥಿಗಳು ತೊಡಗಿಕೊಂಡರೆ…

Read More

ಬಸವನಬಾಗೇವಾಡಿ: ನಂದಿಹಾಳ ಗ್ರಾಮದ ಸರ್ಕಾರಿ ಶಾಲೆಗೆ ಎರಡು ಎಕರೆ ಜಮೀನು ಇರುವದರಿಂದ ಈ ಜಾಗೆಯಲ್ಲಿ ಮುಂಬರುವ ದಿನಗಳಲ್ಲಿ ಗ್ರಾಮದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಪ್ರೌಢಶಾಲೆಯನ್ನು ಮಂಜೂರ ಮಾಡಿಸಲಾಗುವುದು ಎಂದು ಸಕ್ಕರೆ ಮತ್ತು ಕಬ್ಬು ಅಭಿವೃದ್ಧಿ, ಕೃಷಿ ಮಾರುಕಟ್ಟೆ ಮತ್ತು ಜವಳಿ ಸಚಿವ ಶಿವಾನಂದ ಪಾಟೀಲ ಭರವಸೆ ನೀಡಿದರು.ತಾಲೂಕಿನ ನಂದಿಹಾಳ ಪಿಯು ಗ್ರಾಮದಲ್ಲಿ ೨೦೨೨-೨೩ ನೇ ಸಾಲಿನ ರಾಜ್ಯ ಮುಂದುವರಿದ ವಿವೇಕ ಯೋಜನೆಯಡಿಯಲ್ಲಿ ರೂ. ೨೭.೮೦ ಲಕ್ಷ ಅನುದಾನದಲ್ಲಿ ಸರ್ಕಾರಿ ಕನ್ನಡ ಗಂಡು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯ ಎರಡು ಕೊಠಡಿಯ ನಿರ್ಮಾಣ ಕಾಮಗಾರಿಗೆ ಮಂಗಳವಾರ ಭೂಮಿಪೂಜೆ ನೆರವೇರಿಸಿದ ನಂತರ ಮಾತನಾಡಿದ ಅವರು, ಈ ಶಾಲೆಗೆ ಎರಡು ಸುಸಜ್ಜಿತ ಕೊಠಡಿಗಳನ್ನು ನಿರ್ಮಾಣ ಮಾಡಿಕೊಡಲಾಗುವುದು. ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿಯಾಗುವಂತೆ ಗಮನ ಹರಿಸಬೇಕು. ಈ ಗ್ರಾಮದಲ್ಲಿರುವ ಸಿದ್ದೇಶ್ವರ ಸ್ವಾಮೀಜಿಯವರು ಜನಿಸಿದ ಮನೆಯನ್ನು ಮಾದರಿ ಗ್ರಂಥಾಲಯವನ್ನಾಗಿ ಮಾಡಬೇಕಾದರೆ ಕಡಿಮೆ ಜಾಗೆಯನ್ನು ಹೊಂದಿದೆ. ಇದರ ಸುತ್ತಮುತ್ತವಿರುವ ನಿವಾಸಿಗಳು ಸಹಕಾರ ನೀಡಿದರೆ ಮುಂಬರುವ ದಿನಗಳಲ್ಲಿ ಈ ಜಾಗೆಯಲ್ಲಿ ಜಿಲ್ಲೆಯಲ್ಲಿಯೇ ಮಾದರಿ…

Read More

ಬಸವನಬಾಗೇವಾಡಿ: ಮತಕ್ಷೇತ್ರದ ಶಾಸಕ, ಸಚಿವ ಶಿವಾನಂದ ಪಾಟೀಲರು ಪಟ್ಟಣದಲ್ಲಿ ಪುರಸಭೆಯಿಂದ ಕೈಗೊಂಡಿರುವ ಮೆಗಾಮಾರುಕಟ್ಟೆ, ಬಸವ ಭವನ, ಪುರಸಭೆ ನೂತನ ಕಟ್ಟಡ, ಜಿ ಪ್ಲಸ್ ಒನ್ ಮನೆಗಳು ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಇತರೆಡೆ ಮಾದರಿಯಾಗುವಂತೆ ಕೈಗೊಳ್ಳಲಾಗಿದೆ ಎಂದು ಕಾಮಗಾರಿಗಳ ಬಗ್ಗೆ ಪೌರಾಡಳಿತ ಸಚಿವ ಮತ್ತು ಹಜ್ ಮುಖ್ಯಸ್ಥ ರಹೀಂ ಖಾನ್ ಮೆಚ್ಚುಗೆ ವ್ಯಕ್ತಪಡಿಸಿದರು.ಬಸವ ಜನ್ಮಸ್ಥಳ ಬಸವನಬಾಗೇವಾಡಿಗೆ ಪ್ರಥಮ ಬಾರಿಗೆ ಪೌರಾಡಳಿತ ಸಚಿವ ಮತ್ತು ಹಜ್ ಮುಖ್ಯಸ್ಥ ರಹೀಂ ಖಾನ್ ಅವರು ಮಂಗಳವಾರ ಸಂಜೆ ಆಗಮಿಸಿ ಮತಕ್ಷೇತ್ರದ ಶಾಸಕ, ಸಕ್ಕರೆ ಮತ್ತು ಕಬ್ಬು ನಿರ್ದೇಶನಾಲಯ, ಕೃಷಿ ಮಾರುಕಟ್ಟೆ ಹಾಗೂ ಜವಳಿ ಸಚಿವ ಶಿವಾನಂದ ಪಾಟೀಲ ಅವರು ಪುರಸಭೆಯಿಂದ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳನ್ನು ಸಚಿವ ಶಿವಾನಂದ ಪಾಟೀಲರೊಂದಿಗೆ ವೀಕ್ಷಿಸಿದ ನಂತರ ಪುರಸಭೆಯ ಸಭಾಂಗಣದಲ್ಲಿ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪುರಸಭೆಯಿಂದ ಈ ರೀತಿಯ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದು ಶ್ಲಾಘನೀಯ. ಇದರ ಬಗ್ಗೆ ಸಿಎಂ ಸಿದ್ದರಾಮಯ್ಯನವರ ಗಮನಕ್ಕೆ ತಂದು ಅವರಿಂದ ಈ ಕಾಮಗಾರಿಗಳನ್ನು…

Read More

ಸಿಂದಗಿ: 78ನೇ ಸ್ವಾತಂತ್ರ್ಯೋತ್ಸವದ ಹಿನ್ನಲೆಯಲ್ಲಿ ಹರ್ ಘರ್ ತಿರಂಗಾ ನಡೆಸಲು ಪ್ರಧಾನಿ ಮೋದಿ ಕರೆ ನೀಡಿದ್ದಾರೆ. ಅದರಂತೆ ಪ್ರತಿ ಮನೆ ಮೇಲೂ ರಾಷ್ಟ್ರಧ್ವಜ ಹಾರಿಸಲಾಗುತ್ತಿದೆ. ಬುಧವಾರ ಪಟ್ಟಣದ ತಾಲೂಕು ಆಡಳಿತ ಸೌಧದ ವತಿಯಿಂದ ಸೈಕಲ್ ಜಾಥಾ ನಡೆಸಲಾಯಿತು.ಈ ಜಾಥಾವು ಪಟ್ಟಣದ ಬಸವೇಶ್ವರ ವೃತ್ತದಿಂದ ಪ್ರಾರಂಭಗೊಂಡು ವಿವೇಕಾನಂದ ವೃತ್ತ, ಟಿಪ್ಪು ಸುಲ್ತಾನ್ ವೃತ್ತ, ಅಂಬೇಡ್ಕರ್ ವೃತ್ತ, ಅಂಬಿಗೇರ ಚೌಡಯ್ಯ ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತದಿಂದ ಮಾರ್ಗವಾಗಿ ಸಂಚರಿಸಿ ಮತ್ತೇ ಬಸವೇಶ್ವರ ವೃತ್ತಕ್ಕೆ ಬಂದು ತಲುಪಿ ಮುಕ್ತಾಯಗೊಂಡಿತು.ಸೈಕಲ್ ಹಾಗೂ ಬೈಕ್ ಎರಡಕ್ಕೂ ಅವಕಾಶ ಇದ್ದಿದ್ದರಿಂದ ಎಲ್ಲರೂ ತಮ್ಮ ವಾಹನಗಳಿಗೆ ತ್ರಿವರ್ಣ ಧ್ವಜ ಕಟ್ಟಿಕೊಂಡು ದೇಶದ ಪರ ಘೋಷಣೆ ಕೂಗುತ್ತಾ ಸಾಗಿದರು. ಜಾಥಾದಲ್ಲಿ ಭಾಗವಹಿಸಲೂ ಎಲ್ಲರಿಗೂ ಮುಕ್ತ ಆಹ್ವಾನ ನೀಡಲಾಗಿತ್ತು. ಹೀಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದರು.ಈ ವೇಳೆ ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿ, ಸಾರ್ವಜನಿಕರು ಸೇರಿದಂತೆ ಅನೇಕರು ಭಾಗವಸಿದ್ದರು. ” ಪ್ರತಿಯೊಬ್ಬರಲ್ಲೂ ದೇಶಭಕ್ತಿ, ದೇಶಾಭಿಮಾನವನ್ನು ಮೂಡಿಸಲು ಹರ್ ಘರ್ ತಿರಂಗಾ ಅಭಿಯಾನವನ್ನು ನಡೆಸಲಾಗುತ್ತಿದೆ. ಎಲ್ಲರೂ…

Read More

ಸಿಂದಗಿ: ಹಿಂದಿನ ಸರಕಾರದಲ್ಲಿ ಕಾಮಗಾರಿಗಳು ಕುಂಠಿತಗೊಂಡಿರುವುದು ಪ್ರಸ್ತುತ ಸಿಂದಗಿ ಶಾಸಕ ಅಶೋಕ ಮನಗೂಳಿ ಅವರ ನೇತೃತ್ವದಲ್ಲಿ ಕಾಮಗಾರಿಗಳು ನಡೆಯುತ್ತಿವೆ. ಪಟ್ಟಣಕ್ಕೆ ಸಂಬಂಧಿಸಿದ ವಿಶೇಷ ಅನುದಾನವನ್ನು ಪೌರಾಡಳಿತ ವತಿಯಿಂದ ನೀಡುವೆ ಎಂದು ಸಚಿವ ರಹೀಂ ಖಾನ್ ಹೇಳಿದರು.ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಬಳಿ ನೂತನವಾಗಿ ನಡೆಯುತ್ತಿರುವ ಇಂದಿರಾ ಕ್ಯಾಂಟಿನ್ ಕಾಮಗಾರಿ ವಿಕ್ಷೀಸಿ ಮಾದ್ಯಮದವರೊಡನೆ ಮಾತನಾಡಿದ ಅವರು, ರಾಜ್ಯದಲ್ಲಿ ಐದು ರೂಪಾಯಿಗೆ ಉಪಹಾರ ಹತ್ತು ರೂಪಾಯಿಗೆ ಊಟ ಸಿಗುವ ಯೋಜನೆ ನಮ್ಮ ಕಾಂಗ್ರೇಸ್ ಸರಕಾರದ ಸಿದ್ದರಾಮಯ್ಯ ಅವರು ನೀಡಿದ್ದು, ಬಡವರ ಹೊಟ್ಟೆ ತುಂಬಿಸುತ್ತಿರುವುದು ಬಡ ವರ್ಗಕ್ಕೆ ಸಂತಸ ತಂದಿದೆ. ಹಲವಾರು ವರ್ಷಗಳಿಂದ ಜಿಲ್ಲೆಯಲ್ಲಿಯೇ ಹಿಂದುಳಿದ ಅಭಿವೃದ್ಧಿ ಕಾಣದ ಕ್ಷೇತ್ರವಾಗಿ ಸಿಂದಗಿ ನಗರ ಬಿಂಬಿತವಾಗುತ್ತಿದೆ ಎಂಬ ವರದಿಗಾರರ ಪ್ರಶ್ನೇಗೆ ಉತ್ತರಿಸಿದ ಅವರು ಹಿಂದಿನ ಸರಕಾರ ವೈಫಲ್ಯದಿಂದ ಕ್ಷೇತ್ರ ಅಭಿವೃದ್ದಿಯಲ್ಲಿ ಕುಂಠಿತಗೊಂಡಿದೆ. ಪ್ರಸ್ತುತ ಕೆಲವು ಯೋಜನೆಗಳಲ್ಲಿ ಕಾಮಗಾರಿ ನಡೆಯುತ್ತಿವೆ ಪೌರಾಡಳಿತ ಇಲಾಖೆಯಿಂದ ವಿಶೇಷ ಅನುದಾನ ನೀಡುವೆ ಎಂದು ಭರವಸೆ ನೀಡಿದರು.ಬಳಿಕ ಶಾಸಕ ಅಶೋಕ ಮನಗೂಳಿ ಸಚಿವರನ್ನು ಸ್ವಾಗತಿಸಿ ಮಾತನಾಡಿದ…

Read More

ಸಿಂದಗಿ: ಇಂದಿನ ದಿನಗಳಲ್ಲಿ ಒಂದು ರಾಷ್ಟ್ರ ಅಭಿವೃದ್ಧಿ ಹೊಂದಬೇಕಾದರೆ ಯುವ ಸಮುದಾಯ ತಂಬಾಕಿನಂತಹ ಹಾನಿಕಾರಕ ವಸ್ತುಗಳ ಸೇವನೆಯಿಂದ ಕ್ಯಾನ್ಸರ್‌ನಂತಹ ಖಾಯಿಲೆಗಳಿಗೆ ತುತ್ತಾಗಿ ಆರ್ಥಿಕವಾಗಿ ರಾಷ್ಟ್ರ ನಿರ್ಮಾಣದಲ್ಲಿ ತೊಂದರೆಯಾಗುತ್ತಿದ್ದು ಇಂತಹ ದುಶ್ಚಟಗಳಿಂದ ದೂರವಿರಬೇಕು ಎಂದು ತಾಪಂ ಇಒ ರಾಮು ಅಗ್ನಿ ಹೇಳಿದರು.ಪಟ್ಟಣದ ತಾಪಂ ಸಬಾಭವನದಲ್ಲಿ ನಶಾ ಮುಕ್ತ ಭಾರತ ಅಭಿಯಾನದಡಿಯಲ್ಲಿ ತಾಲೂಕಿನ ವಿಆರ್‌ಡಬ್ಲೂ ಮತ್ತು ಎಂಆರ್‌ಡಬ್ಲೂ ಅವರಿಂದ ಜರುಗಿದ ವ್ಯಸನ ಮುಕ್ತ ಸಮಾಜ ಪ್ರತಿಜ್ಞಾವಿಧಿ ಕಾರ್ಯಕ್ರಮದಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿ ಮಾತನಾಡಿದ ಅವರು, ನಮ್ಮ ಕುಟುಂಬದ ಸದಸ್ಯರಿಗೂ, ಸ್ನೇಹಿತರಿಗೂ ಇಂತಹ ದುಷ್ಚಟಗಳಿಂದ ಮುಕ್ತಾರಾಗುವಂತೆ ತಿಳುವಳಿಕೆ ನೀಡಬೇಕು ಎಂದು ಸಲಹೆ ನೀಡಿದರು.ಇದೇ ಸಂದರ್ಭದಲ್ಲಿ ನರೇಗಾ ಸಹಾಯಕ ನಿರ್ದೇಶಕರು ನಿತ್ಯಾನಂದ ಯಲಗೋಡ, ಎ.ಎ.ದುರ್ಗದ, ಎಸಿಡಿಪಿಒ ಸಿದ್ದಲಿಂಗಪ್ಪ ಕೊರವಾರ, ನರೇಗಾ ಸಂಯೋಜಕ ಭೀಮರಾಯ ಚೌಧರಿ, ಎಂಆರ್‌ಡಬ್ಲೂ ಮುತ್ತು ಸಾತಿಹಾಳ, ಭುವನೇಶ್ವರಿ ಕೋಟಿ, ಜಕ್ಕು ಪೂಜಾರಿ ಸೇರಿದಂತೆ ಸಿಬ್ಬಂದಿಗಳು ಇದ್ದರು.

Read More

ಸಿಂದಗಿ: ಕೃಷಿ ಅಧಿಕಾರಿಗಳು ಪ್ರತಿ ಹೋಬಳಿ ಮಟ್ಟದಲ್ಲಿ ವರ್ಷಕ್ಕೆ ಎರಡು ಮೂರು ಬಾರಿ ವಿವಿಧ ಬೆಳೆಗಳು ಹಾಗೂ ಅವುಗಳ ಸಂವರ್ಧನೆ ಕುರಿತು ಕೃಷಿ ವಿಚಾರ ಸಂಕೀರ್ಣಗಳನ್ನು ಏರ್ಪಡಿಸುವುದು ಹಾಗೂ ಪ್ರಾತ್ಯಕ್ಷಿಕೆಗಳನ್ನು ಆಯೋಜಿಸುವ ಮೂಲಕ ರೈತರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮಾಡಬೇಕೆಂದು ಶಾಸಕ ಅಶೋಕ ಮನಗೂಳಿ ಹೇಳಿದರು.ತಾಲೂಕಿನ ರಾಂಪುರ ಆರೂಢ ಮಠದಲ್ಲಿ ವಿಜಯಪುರ ಜಿಲ್ಲಾ ಪಂಚಾಯತ್ ಹಾಗೂ ಸಿಂದಗಿ ಕೃಷಿ ಇಲಾಖೆ ವತಿಯಿಂದ ಕಬ್ಬು, ತೊಗರಿ ಹಾಗೂ ಹತ್ತಿ ಬೆಳೆಗಳಲ್ಲಿ ನೂತನ ತಾಂತ್ರಿಕತೆಗಳ ಬಗ್ಗೆ ಹಮ್ಮಿಕೊಂಡ ವಿಚಾರ ಸಂಕೀರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಭಾರತ ದೇಶ ಕೃಷಿ ಪ್ರಧಾನ ದೇಶ. ರೈತ ದೇಶದ ಜೀವನಾಡಿ. ಅನ್ನ ನೀಡುವ ರೈತ ಸಮೃದ್ಧವಾಗಿ ಫಸಲು ಪಡೆದರೆ ಮಾತ್ರ ನಾವು ನೀವೆಲ್ಲರೂ ನೆಮ್ಮದಿಯಿಂದ ಬದುಕಲು ಸಾಧ್ಯ. ದೇಶದ ನಸೀಬನ್ನು ಬದಲಾಯಿಸುವ ಶಕ್ತಿ ಕೃಷಿಕನಿಗೆ ಮಾತ್ರ ಇದೆ ಆದ್ದರಿಂದ ಕೃಷಿ ತಾಂತ್ರಿಕರು ಆತನಿಗೆ ಕಡಿಮೆ ಖರ್ಚಿನಲ್ಲಿ ಭೂಮಿಯ ಆರೋಗ್ಯವನ್ನು ಕಾಪಾಡಿಕೊಂಡು ಅತಿ ಹೆಚ್ಚು ಇಳುವರಿ ಪಡೆಯುವ ತಾಂತ್ರಿಕತೆಯನ್ನು ತಿಳಿಸಿಕೊಟ್ಟು…

Read More