Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಸೇತುವೆ ತಡೆಗೋಡೆ ಮುರಿದು ಕೃಷ್ಣಾ ನದಿಗೆ ಬಿದ್ದ ಟಿಪ್ಪರ್ ವಾಹನವನ್ನು ಮೇಲಕ್ಕೆತ್ತುವ ಕಾರ್ಯಾಚರಣೆ ವಿಫಲವಾಗಿದೆ.ಬೃಹತ್ ಗಾತ್ರದ ಎರಡು ಕ್ರೇನ್‌ಗಳನ್ನು ಬಳಸಿ ಟಿಪ್ಪರ್ ಅನ್ನು ಮೇಲಕ್ಕೆತ್ತಲು ಪ್ರಯತ್ನಿಸಿದರೂ, ಗಾಳಿಯ ರಭಸದಿಂದ ವಾಹನಕ್ಕೆ ಸಮತೋಲನ ಸಿಗದೆ ಕಾರ್ಯಾಚರಣೆ ಕಷ್ಟಸಾಧ್ಯವಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.ಕೊಲ್ಹಾರ ಹಾಗೂ ಬೀಳಗಿ ಪೊಲೀಸ್ ಠಾಣೆಗಳ ಅಧಿಕಾರಿಗಳು, ಸಿಬ್ಬಂದಿ ಮತ್ತು ಅಗ್ನಿಶಾಮಕ ಸಿಬ್ಬಂದಿಗಳು ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅಧಿಕಾರಿಗಳ ಸಮ್ಮುಖದಲ್ಲಿ ರಕ್ಷಣಾ ಕಾರ್ಯ ನಡೆಯಿತು.ಇದರಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಮಾರು ನಾಲ್ಕು ಗಂಟೆಗಳ ಕಾಲ ಭಾರೀ ಟ್ರಾಫಿಕ್ ಸಮಸ್ಯೆ ಉಂಟಾಗಿ, ಪ್ರಯಾಣಿಕರು ಹಾಗೂ ವಾಹನ ಚಾಲಕರು ಸಂಕಷ್ಟ ಅನುಭವಿಸಿದರು. ಪರ್ಯಾಯ ಮಾರ್ಗದ ಬಗ್ಗೆ ಮುಂಚಿತ ಮಾಹಿತಿ ನೀಡದಿರುವುದು ಸಾರ್ವಜನಿಕರಲ್ಲಿ ಅಸಮಾಧಾನಕ್ಕೆ ಕಾರಣವಾಯಿತು.ಟಿಪ್ಪರ್ ಜೊತೆ ನದಿಗೆ ಬಿದ್ದ ಚಾಲಕನ ಸ್ಥಿತಿ ಇನ್ನೂ ತಿಳಿದುಬಂದಿಲ್ಲ.

Read More

ಪಿಯು ಉಪನ್ಯಾಸಕರನ್ನು ಪ್ರೌಢಶಾಲೆಗಳಿಗೆ ನಿಯೋಜಿಸುವ ನಿಯಮ ವಿರೋಧಿಸಿ ಪಪೂ ಕಾಲೇಜ್ ಉಪನ್ಯಾಸಕರ ಸಂಘ ಸಚಿವರಿಗೆ ಮನವಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪ್ರೌಢಶಾಲೆಗಳ 9 ಮತ್ತು 10ನೇ ತರಗತಿಗಳಿಗೆ ಪದವಿಪೂರ್ವ ಕಾಲೇಜು ಉಪನ್ಯಾಸಕರನ್ನು ನಿಯೋಜಿಸಲು ರಾಜ್ಯ ಸರ್ಕಾರ ಹೊರಡಿಸಿರುವ ಕರಡು ನಿಯಮಕ್ಕೆ ಕರ್ನಾಟಕ ರಾಜ್ಯ ಪದವಿಪೂರ್ವ ಕಾಲೇಜು ಉಪನ್ಯಾಸಕರ ಸಂಘ (ರಿ) ವಿಜಯಪುರ ಜಿಲ್ಲಾ ಘಟಕ ತೀವ್ರ ವಿರೋಧ ವ್ಯಕ್ತಪಡಿಸಿದೆ.ಈ ಸಂಬಂಧ ಸಂಘವು ಸಿದ್ಧಪಡಿಸಿರುವ 20 ಪುಟಗಳ ಸವಿಸ್ತಾರ ಆಕ್ಷೇಪಣಾ ಮನವಿಯನ್ನು ಜಿಲ್ಲೆಯ ಹಿರಿಯ ಮುಖಂಡರು ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಎಂ .ಬಿ .ಪಾಟೀಲ್ ಅವರಿಗೆ ಸಲ್ಲಿಸಿ, ಸರ್ಕಾರದ ಮಟ್ಟದಲ್ಲಿ ತಕ್ಷಣ ಮಧ್ಯಪ್ರವೇಶಿಸಿ ಕರಡು ಅಧಿಸೂಚನೆಯನ್ನು ಹಿಂಪಡೆಯುವಂತೆ ಮನವಿ ಮಾಡಿದೆ.ಸಂಘದ ಪದಾಧಿಕಾರಿಗಳ ಪ್ರಕಾರ, ಪಿಯು ಉಪನ್ಯಾಸಕರನ್ನು ಪ್ರೌಢಶಾಲೆಗಳಿಗೆ ನಿಯೋಜಿಸುವುದರಿಂದ ಪದವಿಪೂರ್ವ ಶಿಕ್ಷಣದ ಗುಣಮಟ್ಟಕ್ಕೆ ಧಕ್ಕೆಯಾಗಲಿದ್ದು, ರಾಷ್ಟ್ರೀಯ ಶಿಕ್ಷಣ ನೀತಿ (NEP-2020) ಆಶಯಕ್ಕೂ ವಿರುದ್ಧವಾಗಲಿದೆ. ಜೊತೆಗೆ ನೀಟ್ , ಜೆಇಇ ಹಾಗೂ ಸಿಇಟಿ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳಿಗೆ ಅಗತ್ಯವಾದ…

Read More

ಕರಡಿ ಸೆರೆ: ನಿಟ್ಟುಸಿರು ಬಿಟ್ಟ ಚಾಕಹಳ್ಳಿ, ಚಕ್ಕೋಡನಹಳ್ಳಿ ಗ್ರಾಮಸ್ಥರು ಉದಯರಶ್ಮಿ ದಿನಪತ್ರಿಕೆ ಎಚ್ ಡಿ ಕೋಟೆ: ವೀರನಹೊಸಹಳ್ಳಿ ಅರಣ್ಯ ವಲಯ ವ್ಯಾಪ್ತಿಯಲ್ಲಿ ಕರಡಿಯೊಂದು ಇಬ್ಬರ ಮೇಲೆ ದಾಳಿ ನಡೆಸಿ ಗಾಯಗೊಳಿಸಿರುವ ಘಟನೆ ಗುರುವಾರ ನಡೆದಿದೆ. ಗಾಯಾಳುಗಳನ್ನು ಚಾಕಹಳ್ಳಿ ಗ್ರಾಮದ ನಿವಾಸಿ ನಾರಾಯಣ್ ನಾಯಕ್ (60) ಹಾಗೂ ಚಕ್ಕೋಡನಹಳ್ಳಿ ಗ್ರಾಮದ ಮರಿಗೌಡ (ಶಿವಪ್ಪ) ಎಂದು ಗುರುತಿಸಲಾಗಿದ್ದು, ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.ತಾಲೂಕಿನ ಚಾಕಹಳ್ಳಿ ಗ್ರಾಮದ ಹುಚ್ಚನಾಯಕ ಪುತ್ರ ನಾರಾಯಣ ನಾಯಕ್ ಎಂಬುವವರು, ತಮ್ಮ ಮೊಮ್ಮಗನ ಜೊತೆ ಗುರುವಾರ ಮುಂಜಾನೆ 6.30ರ ಸುಮಾರಿಗೆ ಬಹಿರ್ದೆಸೆಗೆ ತೆರಳುತ್ತಿದ್ದಾಗ, ಮೇಟಿಕುಪ್ಪೆ ಅರಣ್ಯ ವಲಯದಿಂದ ಬಂದ ಕರಡಿ ದಾಳಿ ಮಾಡಿದೆ. ಕೈಗೆ ಕಚ್ಚಿ ಗಾಯಗೊಳಿಸಿದೆ. ತಕ್ಷಣವೇ ಅರಣ್ಯ ಅಧಿಕಾರಿಗಳು ನಾರಾಯಣ ನಾಯಕ್ ಅವರನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಮೊಮ್ಮಗ ಕರಡಿ ದಾಳಿಯಿಂದ ಬಚಾವ್ ಆಗಿದ್ದಾನೆ. ಬಳಿಕ ಹೆಚ್ ಡಿ ಕೋಟೆ ವಲಯ ಅರಣ್ಯಾಧಿಕಾರಿ ರಾಮಾಂಜುನೇಯಲು ನೇತೃತ್ವದಲ್ಲಿ ಅರಣ್ಯ ಸಿಬ್ಬಂದಿ ಮೇಟಿಕುಪ್ಪೆ ಅರಣ್ಯ ವಲಯದಿಂದ ಬೋನ್…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಲೋಕಾಯುಕ್ತ ಅಧಿಕಾರಿಗಳ ಭ್ರಷ್ಟಾಚಾರ ನಿಗ್ರಹ ದಳವು ಇಂಡಿ ನಗರದ ಉಪನೋಂದಣಾಧಿಕಾರಿ (ಸಬ್ ರಿಜಿಸ್ಟ್ರಾರ್) ಮತ್ತು ವಿವಾಹ ನೋಂದಣಾಧಿಕಾರಿಗಳ ಕಚೇರಿಯ ಮೇಲೆ ಬುಧವಾರ ದಿಢೀರ್ ದಾಳಿ ನಡೆಸಿ, ಅಕ್ರಮವಾಗಿ ಇಟ್ಟುಕೊಂಡಿದ್ದ ೫೦,೦೦೦ ರೂಪಾಯಿಗಳಿಗೂ ಅಧಿಕ ನಗದು ಹಾಗೂ ಕಚೇರಿಗೆ ಸಂಬಂಧಿಸದ ೫ ಜನರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.ಕಚೇರಿಯಲ್ಲಿದ್ದ ೫೦,೦೦೦ ರೂ.ಗಿಂತಲೂ ಹೆಚ್ಚಿನ ನಗದನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ದಾಳಿಯ ವೇಳೆ ಕಚೇರಿಯಲ್ಲಿದ್ದ ಬಾಂಡ್ ರೈಟರ್ಸ್ ಹಾಗೂ ಏಜೆಂಟರಾಗಿ ಕೆಲಸ ಮಾಡುತ್ತಿದ್ದ ಖಾಸಗಿ ವ್ಯಕ್ತಿಗಳು ಸಿಕ್ಕಿಬಿದ್ದಿದ್ದಾರೆ.ಪರಿಶೀಲನೆ: ಕಚೇರಿಯಲ್ಲಿದ್ದ ಪ್ರಮುಖ ಕಡತಗಳು (ಫೈಲ್ಸ್) ಹಾಗೂ ಏಜೆಂಟ್‌ಗಳ ವ್ಯವಹಾರಗಳ ದಾಖಲೆಗಳನ್ನು ಅಧಿಕಾರಿಗಳು ತೀವ್ರ ಪರಿಶೀಲನೆಗೆ ಒಳಪಡಿಸಿದ್ದಾರೆ. ಕಾರ್ಯಾಚರಣೆ ನಡೆಸಿದ ತಂಡಲೋಕಾಯುಕ್ತ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಈ ಭ್ರಷ್ಟಾಚಾರ ವಿರೋಧಿ ಜಂಟಿ ದಾಳಿಯನ್ನು ನಡೆಸಲಾಗಿದೆ:ಲೋಕಾಯುಕ್ತ ಎಸ್.ಪಿ ಟಿ. ಮಲ್ಲೇಶಿ, ಡಿವೈಎಸ್‌ಪಿ ಮಲ್ಲಿಕಾರ್ಜುನ ತುಳಸಿಗೇರಿ, ಸಿಪಿಐ ಆನಂದ ಠಕ್ಕಣ್ಣನವರ, ಆನಂದ ಡೋಣಿ, ಸಾರ್ವಜನಿಕರಿಂದ ಬಂದ ದೂರುಗಳು ಹಾಗೂ ಕಚೇರಿಯಲ್ಲಿ ನಡೆಯುತ್ತಿದ್ದ ಲಂಚಾವತಾರದ ಖಚಿತ ಮಾಹಿತಿ…

Read More

ಮತದಾರರಿಗೆ ಎನ್ಯೂಮರೇಷನ್ ಫಾರ್ಮ್ ಎರಡು ಪ್ರತಿಗಳಲ್ಲಿ ವಿತರಣೆ :ತಹಶೀಲ್ದಾರ್ ಬೆಳ್ಳಿ B* ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಸಿಂದಗಿ ವಿಧಾನಸಭಾ ಮತಕ್ಷೇತ್ರದ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ-೨೦೨೬ (ಎಸ್‌ಐಆರ್) ಕಾರ್ಯ ಆರಂಭಗೊಂಡಿದ್ದು, ಜೂ.೩೦ ರಿಂದ ಜುಲೈ ೨೯ರವರೆಗೆ ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಮತದಾರರಿಗೆ ಎನ್ಯೂಮರೇಷನ್ ಫಾರ್ಮ್ಅನ್ನು ಎರಡು ಪ್ರತಿಗಳಲ್ಲಿ ವಿತರಿಸುತ್ತಿದ್ದಾರೆ. ಸಿಂದಗಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರಸ್ತುತ ಒಟ್ಟು ೨,೫೦,೭೬೧ ಮತದಾರರು ಇದ್ದು, ಇವರಲ್ಲಿ ೧,೨೭,೩೮೭ ಪುರುಷರು, ೧,೨೩,೩೪೦ ಮಹಿಳೆಯರು ಹಾಗೂ ೩೪ ತೃತೀಯ ಲಿಂಗದ ಮತದಾರರು ಸೇರಿದ್ದಾರೆ. ಮತಗಟ್ಟೆ ಮಟ್ಟದ ಅಧಿಕಾರಿಗಳು ವಿತರಿಸುವ ಎನ್ಯೂಮರೇಷನ್ ಫಾರ್ಮ್ಗಳನ್ನು ಮತದಾರರು ಸಂಪೂರ್ಣವಾಗಿ ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಸಂಬAಧಿಸಿದ ಃಐಔಗಳಿಗೆ ನಿಗದಿತ ಅವಧಿಯೊಳಗೆ ಹಿಂದಿರುಗಿಸುವಂತೆ ಸಹಾಯಕ ಮತದಾರರ ನೋಂದಣಾಧಿಕಾರಿ ಹಾಗೂ ತಹಶೀಲ್ದಾರ್ ಕರೆಪ್ಪ ಬೆಳ್ಳಿ ಮನವಿ ಮಾಡಿದ್ದಾರೆ.ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ-೨೦೨೬ ಕುರಿತು ಹೆಚ್ಚಿನ ಮಾಹಿತಿಯನ್ನು ಗಿoಣeಡಿs Seಡಿviಛಿe Poಡಿಣಚಿಟ, ಮುಖ್ಯ ಚುನಾವಣಾಧಿಕಾರಿಗಳ ಕರ್ನಾಟಕ ವೆಬ್‌ಸೈಟ್ ಹಾಗೂ ವಿಜಯಪುರ ಜಿಲ್ಲಾ…

Read More

ರಾಷ್ಟ್ರೀಯ ವೈದ್ಯರ ದಿನಾಚರಣೆಯಲ್ಲಿ ಐ.ಎಮ್.ಎ ಶಸ್ತ್ರಚಿಕಿತ್ಸಕಿ ಡಾ.ಸಂಧ್ಯಾ ಶಾಂತವೀರ ಮನಗೂಳಿ ಅಭಿಮತ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಸಮಾಜದ ಆರೋಗ್ಯ ಕಾಪಾಡುವಲ್ಲಿ ವೈದ್ಯರ ಸೇವೆ ಅಮೂಲ್ಯವಾಗಿದ್ದು, ಅವರ ತ್ಯಾಗ, ಸಮರ್ಪಣೆ ಮತ್ತು ಮಾನವೀಯ ಸೇವೆಯನ್ನು ಪ್ರತಿಯೊಬ್ಬರೂ ಗೌರವಿಸಬೇಕು ಎಂದು ಮಹಿಳಾ ಪ್ರತಿನಿಧಿ, ಐ.ಎಮ್.ಎ ಶಸ್ತ್ರಚಿಕಿತ್ಸಕರಾದ ಡಾ.ಸಂಧ್ಯಾ ಶಾಂತವೀರ ಮನಗೂಳಿ ಹೇಳಿದರು.ಸಿಂದಗಿ ನಗರದ ತಾಲೂಕು ಶಿಕ್ಷಣ ಪ್ರಸಾರಕ ಮಂಡಳಿಯ ಶಾಂತವೀರ ಪಟ್ಟಾಧ್ಯಕ್ಷರ ಕನ್ಯಾ ಪ್ರೌಢಶಾಲೆ ಹಾಗೂ ಭಾರತೀಯ ವೈದ್ಯಕೀಯ ಸಂಘದ ಸಹಯೋಗದಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ವೈದ್ಯರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಭಾರತದ ಖ್ಯಾತ ವೈದ್ಯರು ಹಾಗೂ ಪಶ್ಚಿಮ ಬಂಗಾಳದ ಮಾಜಿ ಸಿಎಂ ಡಾ.ಬಿಧಾನ್ ಚಂದ್ರರಾಯ್ ಅವರ ಜನ್ಮದಿನ ಹಾಗೂ ಪುಣ್ಯತಿಥಿಯ ಸ್ಮರಣಾರ್ಥ ರಾಷ್ಟ್ರೀಯ ವೈದ್ಯರ ದಿನವನ್ನು ಆಚರಿಸಲಾಗುತ್ತದೆ. ವೈದ್ಯಕೀಯ ಕ್ಷೇತ್ರಕ್ಕೆ ಅವರು ನೀಡಿದ ಅಮೂಲ್ಯ ಕೊಡುಗೆಯನ್ನು ಗೌರವಿಸುವ ಸಲುವಾಗಿ ಭಾರತ ಸರ್ಕಾರ ಈ ದಿನವನ್ನು ರಾಷ್ಟ್ರೀಯ ವೈದ್ಯರ ದಿನವಾಗಿ ಘೋಷಿಸಿದೆ. ರೋಗಿಗಳ ಜೀವ ಉಳಿಸುವಲ್ಲಿ ವೈದ್ಯರು ವಹಿಸುವ ಪಾತ್ರ ಅತ್ಯಂತ ಮಹತ್ವದ್ದಾಗಿದೆ.…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಮೂಲಕ ಪ್ರಯಾಣಿಕರ ಅನುಕೂಲಕ್ಕಾಗಿ ಅಹವಾಲು ಮತ್ತು ಕುಂದು-ಕೊರತೆಗಳನ್ನು ಆಲಿಸಲು ಜುಲೈ.೬ರ ಸೋಮವಾರ ಮಧ್ಯಾಹ್ನ ೩.೩೦ ರಿಂದ ೪.೩೦ರವರೆಗೆ ಫೋನ್-ಇನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ದೂರವಾಣಿ ೬೩೬೬೪೨೩೮೮೭ ಸಂಖ್ಯೆಗೆ ಸಾರ್ವಜನಿಕರು ಕರೆ ಮಾಡಿ, ತಮ್ಮ ಕುಂದು-ಕೊರತೆಗಳನ್ನು ಪರಿಹರಿಸಿಕೊಳ್ಳಬಹುದಾಗಿದ್ದು ಸಾರ್ವಜನಿಕರು ಫೋನ್-ಇನ್ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸದುಪಯೋಗ ಪಡೆದುಕೊಳ್ಳಬೇಕೆಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅವಧಿ ಪೂರ್ಣಗೊಂಡ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತಿಗಳಿಗೆ ಗ್ರಾಮ ಪಂಚಾಯತಿಗಳ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಕ್ಷೇತ್ರಕ್ಕೆ ವಿವಿಧ ವರ್ಗಗಳ ಸ್ಥಾನಗಳನ್ನು ಮೀಸಲಿರಿಸಿ ಸರ್ಕಾರ ಅಧಿಸೂಚನೆ ಹೊರಡಿಸಿದೆ.ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ ೧೯೯೩ರ ಪ್ರಕರಣ ೫ ರಂತೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಧೀನಕ್ಕೆ ಒಳಪಡುವ ಪ್ರದೇಶಗಳನ್ನು ಪ್ರಾದೇಶಿಕ ಚುನಾವಣಾ ಕ್ಷೇತ್ರಗಳಾಗಿ ವಿಭಜಿಸಿ, ಕೋಷ್ಟಕ-೧ ಮತ್ತು ಕೋಷ್ಟಕ-೨ರಲ್ಲಿ ಪ್ರಾದೇಶಿಕ ಚುನಾವಣಾ ಕ್ಷೇತ್ರಕ್ಕೆ ವಿವಿಧ ವರ್ಗಗಳ ಸ್ಥಾನಗಳನ್ನು ಮೀಸಲು ನಿಗದಿಪಡಿಸಿದ್ದನ್ನು ರಾಜ್ಯ ಪತ್ರದಲ್ಲಿ ಪ್ರಕಟಿಸಿದೆ.ಈ ವಿಷಯವನ್ನು ಸಂಬಂಧಿಸಿದ ತಾಲೂಕುಗಳ ತಹಶೀಲದಾರ ಕಚೇರಿ, ತಾಲೂಕು, ಗ್ರಾಮ ಪಂಚಾಯತಿಗಳಲ್ಲಿ ಪ್ರಕಟಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Read More

ವಿಜಯಪುರದಲ್ಲಿ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿದ ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೧೨ನೇ ಶತಮಾನದ ಶರಣರ ವಚನ ಸಾಹಿತ್ಯವನ್ನು ಸಂಗ್ರಹಿಸಿ, ಸಂರಕ್ಷಿಸಿ ಮನುಕುಲಕ್ಕೆ ತಲುಪಿಸಿದ ಮಹಾನ್ ದಾರ್ಶನಿಕ ಡಾ. ಫ.ಗು. ಹಳಕಟ್ಟಿ ಅವರ ಸೇವೆ ಕನ್ನಡ ಸಾಹಿತ್ಯ ಲೋಕಕ್ಕೆ ಅನನ್ಯ ಕೊಡುಗೆಯಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಹೇಳಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಗುರುವಾರ ಡಾ. ಫ.ಗು. ಹಳಕಟ್ಟಿ ಅವರ ಜನ್ಮದಿನದ ಅಂಗವಾಗಿ ಹಮ್ಮಿಕೊಂಡಿದ್ದ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ವಚನಗಳು ಕೇವಲ ಸಾಹಿತ್ಯವಲ್ಲ, ಬದುಕಿನ ಮೌಲ್ಯಗಳನ್ನು ಬೋಧಿಸುವ ಅಮೂಲ್ಯ ಸಂದೇಶಗಳಾಗಿವೆ. ಅವು ವಿವಿಧ ಭಾಷೆಗಳಿಗೆ ಭಾಷಾಂತರಗೊಂಡು ಜಗತ್ತಿನಾದ್ಯಂತ ಪಸರಿಸಬೇಕು. ವಚನ ಸಾಹಿತ್ಯವನ್ನು ಸಂಗ್ರಹಿಸಿ ಮುಂದಿನ ಪೀಳಿಗೆಗೆ ಉಳಿಸಿಕೊಟ್ಟ ಡಾ. ಫ.ಗು. ಹಳಕಟ್ಟಿ ಅವರ ಸಾಧನೆ ಯುವಜನರಿಗೆ ಪ್ರೇರಣೆಯಾಗಬೇಕು. ವಿದ್ಯಾರ್ಥಿಗಳು ಇಂತಹ ಮಹನೀಯರ ಆದರ್ಶಗಳನ್ನು ಜೀವನದಲ್ಲಿ…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ತಾಲ್ಲೂಕು ಆಡಳಿತದಿಂದ ವಚನ ಪಿತಾಮಹ ಫ.ಗು.ಹಳಕಟ್ಟಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಜಯಂತಿ ಹಾಗೂ ವಚನ ಸಂರಕ್ಷಣಾ ದಿನ ಆಚರಿಸಲಾಯಿತು.ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ಗುರುವಾರ ಫ.ಗು.ಹಳಕಟ್ಟಿ ಅವರ ಜನ್ಮದಿನವನ್ನು ವಚನ ಸಾಹಿತ್ಯ ಸಂರಕ್ಷಣಾ ದಿನವನ್ನಾಗಿ ಆಚರಿಸಲಾಯಿತು.ಈ ಸಂದರ್ಭದಲ್ಲಿ ತಹಶೀಲ್ದಾರ ನಿಂಗಣ್ಣ ಬಿರಾದಾರ ಅಧ್ಯಕ್ಷತೆ ವಹಿಸಿ, ಪೂಜಾ ಕಾರ್ಯಕ್ರಮ ನೆರವೇರಿಸುವುದರ ಮೂಲಕ ಮಾತನಾಡಿ, ಬಸವಾದಿ ಶರಣರ ವಚನಗಳ ಸಂರಕ್ಷಣೆ ಮಾಡಿ, ಬೇರೆ ಬೇರೆ ಭಾಷೆಗಳಿಗೆ ಅನುವಾದಿಸುವುದರ ಮೂಲಕ ಜನಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ಫ.ಗು.ಹಳಕಟ್ಟಿಯವರ ಕಾರ್ಯ ತುಂಬಾ ಶ್ಲಾಘನೀಯ. ವಚನಗಳ ಮುದ್ರಣಕ್ಕಾಗಿ ತಮ್ಮ ಸ್ವಂತ ಮನೆಯನ್ನೇ ಮಾರಿದ ಹಳಕಟ್ಟಿಯವರ ಸ್ಮರಣೆಗಾಗಿ ವಚನ ಸಂರಕ್ಷಣಾ ದಿನ ಆಚರಿಸುತ್ತಿರುವುದು ಅಭಿನಂದನೀಯ ಸಂಗತಿ ಎಂದರು.ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಮಾಜಿಅಧ್ಯಕ್ಷ ಜಿ.ಪಿ.ಬಿರಾದಾರ ಮಾತನಾಡಿ, ಪತ್ರಿಕಾ ಸಂಪಾದಕರಾಗಿದ್ದು, ೧೯೨೬ ರಲ್ಲಿ ಬಳ್ಳಾರಿಯಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದ ಹಳಕಟ್ಟಿಯವರ ಬಾಲ್ಯಜೀವನ, ಅವರ ವಚನ ಸಂಗ್ರಹಕ್ಕೆ ಪ್ರೇರಣೆ, ಪಟ್ಟ ಕಷ್ಟ ಹಾಗೂ ಅಂದಿನ ರಾಜ್ಯಪಾಲರಾಗಿದ್ದ ಜಯಚಾಮರಾಜೇಂದ್ರ…

Read More