Subscribe to Updates
Get the latest creative news from FooBar about art, design and business.
Author: editor.udayarashmi@gmail.com
ದೇವರಹಿಪ್ಪರಗಿ: ಕುಟುಂಬಗಳಿಗೆ ಆಕಸ್ಮಿಕ ಘಟನೆಗಳಿಂದ ಉಂಟಾದ ನಷ್ಟವನ್ನು ವಿಮೆ ಹಣ ನೆರವು ನೀಡಬಲ್ಲದಾಗಿದೆ ಎಂದು ಕರ್ನಾಟಕ ಬ್ಯಾಂಕ್ ಕಲಬುರ್ಗಿ ವಿಭಾಗೀಯ ಮುಖ್ಯಸ್ಥ ಸೋಮಶೇಖರ ಜಿ. ಹೇಳಿದರು.ಪಟ್ಟಣದ ಕರ್ನಾಟಕ ಬ್ಯಾಂಕ್‌ನಲ್ಲಿ ಶುಕ್ರವಾರ ಪಟ್ಟಣದಲ್ಲಿ ಸಂಭವಿಸಿದ ಅಕಾಲಿಕ ಅಪಘಾತಗಳಲ್ಲಿ ಆದ ಜೀವಹಾನಿಗಳ ಸಂಬಂಧಿಗಳಿಗೆ ಚೆಕ್ ವಿತರಿಸಿ ಮಾತನಾಡಿದರು. ವನಿತಾ ಚವ್ಹಾಣ ಇವರಿಗೆ ಕೆಬಿಎಲ್ ಸುರಕ್ಷಾ ವಿಮೆ ಅಡಿಯಲ್ಲಿ ೧೦ ಲಕ್ಷ ಹಾಗೂ ಭಾಗ್ಯಶ್ರೀ ಪತ್ತಾರವರಿಗೆ ನಾಲ್ಕು ಲಕ್ಷ ರೂ.ಗಳ ಮೊತ್ತದ ವಿಮೆ ಚೆಕ್‌ಗಳನ್ನು ವಿತರಿಸಿ, ಅಕಾಲಿಕ ಅಪಘಾತಗಳಿಂದ ಕುಟುಂಬಗಳಿಗೆ ಆದ ನಷ್ಟವನ್ನು ಯಾವುದರಿಂದಲೂ ತುಂಬಲು ಸಾಧ್ಯವಿಲ್ಲ. ಆದರೆ ವಿಮೆಹಣ ಕುಟುಂಬದ ಭವಿಷ್ಯಕ್ಕೆ ತುಂಬಾ ಸಹಕಾರಿ ಆಗಬಲ್ಲದು. ಆದ್ದರಿಂದ ವಿಮೆಹಣವನ್ನು ಕುಟುಂಬಗಳು ಸದುಪಯೋಗ ಪಡಿಸಿಕೊಂಡು ದು:ಖದಿಂದ ಹೊರಬರುವಂತೆ ಸಾಂತ್ವನ ಹೇಳಿದರು.ಶಾಖಾ ವ್ಯವಸ್ಥಾಪಕ ಅಯ್ಯಪ್ಪಸ್ವಾಮಿ ಮಠಪತಿ, ಮನೋಜ ಅರ್ಕಸಾಲಿ(ಸಿಂದಗಿ ಶಾಖೆ), ಅತೀಶ ಪಾಟೀಲ, ದೈವೇನಕುಮಾರ, ಮಲ್ಲಿಕಾರ್ಜುನ ಸುಂಕದ, ಫಿರೋಜ್ ಮಕಾಂದಾರ, ಸಿದ್ದು ಬಡಕುರಿ, ರೂಪಾ ಕಂಬಾರ ಗ್ರಾಹಕರಾದ ಸಿದ್ಧನಗೌಡ ಪಾಟೀಲ, ಅಶೋಕ ನಾಡಗೌಡ, ನಾನಾಗೌಡ ಪಾಟೀಲ, ಗುರು…
ಸಮುದಾಯ ಭವನಗಳ ನಿರ್ಮಾಣಕ್ಕೆ ರೂ.೫೦ ಲಕ್ಷ ಮಂಜೂರು :ಯತ್ನಾಳ ವಿಜಯಪುರ: ೨೦೨೪-೨೫ನೇ ಸಾಲಿಗೆ ನಗರ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಡಿ ನಗರ ಮತಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಸಮುದಾಯ ಭವನಗಳ ನಿರ್ಮಾಣಕ್ಕೆ ರೂ.೫೦ ಲಕ್ಷ ಅನುದಾನ ಮಂಜೂರು ಮಾಡಲಾಗಿದೆ ಎಂದು ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರು ತಿಳಿಸಿದ್ದಾರೆ.ವಿಜಯಪುರ ನಗರ ಮತಕ್ಷೇತ್ರ ವ್ಯಾಪ್ತಿಯ ವಾರ್ಡ ನಂ.೨ರ ಗೋಂದಳಿ ಗಲ್ಲಿಯ ಜೈ ಅಂಬಾಭವಾನಿ ಮಂದಿರ ಹತ್ತಿರ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ರೂ.೪ ಲಕ್ಷ, ಆಶ್ರಯ ಕಾಲೊನಿಯ ಶಂಕರಲಿಂಗ ಗುಡಿ ರಸ್ತೆಯ ವಾರಿ ಮಾರುತಿ ದೇವಸ್ಥಾನ ಹತ್ತಿರ ಸಮುದಾಯ ಭವನ ನಿರ್ಮಾಣಕ್ಕೆ ರೂ.೧೦ ಲಕ್ಷ, ಅಡವಿ ಶಂಕರಲಿಂಗ ದೇವಸ್ಥಾನದ ಹತ್ತಿರ ಸಮುದಾಯ ಭವನ ನಿರ್ಮಾಣಕ್ಕೆ ರೂ.೧೦ ಲಕ್ಷ, ವಾರ್ಡ ನಂ.೨೧ ರ ವಿವೇಕ ನಗರ (ಪಶ್ಚಿಮ)ದ ಜಾಗೃತ ಹನುಮಾನ ದೇವಸ್ಥಾನ ಹತ್ತಿರ ಸಮುದಾಯ ಭವನ ನಿರ್ಮಾಣಕ್ಕೆ ರೂ.೧೦ ಲಕ್ಷ, ವಾರ್ಡ ನಂ.೨೬ರ ದೇಸಾಯಿ ಕಾಲೊನಿ (ಸರ್ ದೇಶಪಾಂಡೆ ಕಾಲೊನಿ)ಯ ಮಹಾಲಕ್ಷ್ಮಿ ದೇವಸ್ಥಾನದ ಹತ್ತಿರ…
ಇಂಡಿ: ಎಬಿವಿಪಿ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣಗಳನ್ನು ಬೆಳೆಸುವುದರೊಂದಿಗೆ ರಾಷ್ಟ್ರಪ್ರೇಮವನ್ನು ಹೆಚ್ಚಿಸುತ್ತದೆ ಎಂದು ಎಬಿವಿಪಿ ರಾಜ್ಯ ಕಾರ್ಯದರ್ಶಿ ಸಚಿನ ಕುಳಗೇರಿ ಹೇಳಿದರು.ಪಟ್ಟಣದ ಶ್ರೀ ಶಾಂತೇಶ್ವರ ಮಂಗಲ ಕಾರ್ಯದಲ್ಲಿ ಇಂಡಿ ಶಾಖೆಯಿಂದ ಹಮ್ಮಿಕೊಂಡ ನಗರ ಸಮ್ಮೇಳನದಲ್ಲಿ ವಿಧ್ಯಾರ್ಥಿ ಪರಿಷತ್ತನ್ನು ಉದ್ದೇಶಿಸಿ ಮಾತನಾಡಿದರು.ವಿದ್ಯಾರ್ಥಿ ಪರಿಷತ್ತು ದೇಶದ ಸಂಸ್ಕೃತಿಯ ಸಂರಕ್ಷಣೆಗಾಗಿ ಮತ್ತು ವಿದ್ಯಾರ್ಥಿಗಳ ಸಮಸ್ಯೆಗಳ ಪರಿಹಾರಕ್ಕಾಗಿ ‘ರಾಷ್ಟ್ರ ಮೊದಲು’ ಎಂಬ ಕಲ್ಪನೆಯೊಂದಿಗೆ ಹಲವಾರು ರಾಜಿಯಾಗದ ರಾಷ್ಟ್ರೀಯ ಪ್ರಯೋಜನಕಾರಿ ಚಟುವಟಿಕೆಗಳನ್ನು ನಡೆಸಿದೆ . ಈ ಚಳುವಳಿಗಳನ್ನು ನಿರ್ವಹಿಸುವಾಗ ಮತ್ತು ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಇದು ಹೆಚ್ಚಿನ ಅನುಭವವನ್ನು ಪಡೆದುಕೊಂಡಿದೆ ಮತ್ತು ಹಲವಾರು ಯಶಸ್ಸನ್ನು ಸಾಧಿಸಿದೆ. ಎಡಪಂಥೀಯರ ವಿಭಜಕ ಸಿದ್ಧಾಂತಕ್ಕೆ ವ್ಯತಿರಿಕ್ತವಾಗಿ , ಭಾರತೀಯ ಸಾಂಸ್ಕೃತಿಕ ಮತ್ತು ತಾತ್ವಿಕ ಬೋಧನೆಗಳ ಮಾಧ್ಯಮದ ಮೂಲಕ ಎಬಿವಿಪಿ ಯಿಂದ ಒಗ್ಗಟ್ಟಿನ, ಸಹಕಾರ ಮತ್ತು ಸಾಂಘಿಕ ಕಾರ್ಯದ ಮೌಲ್ಯಗಳನ್ನು ಯುವಕರಿಗೆ ಕಲಿಸಲಾಯಿತು. ವಿದ್ಯಾರ್ಥಿಗಳು ಪರಿಣಾಮವಾಗಿ ವಿದ್ಯಾರ್ಥಿ ಪರಿಷತ್‌ನ ಅಭಿಪ್ರಾಯಗಳನ್ನು ಹೃದಯಕ್ಕೆ ತೆಗೆದುಕೊಂಡರು.ಇನ್ನೋರ್ವ ಅತಿಥಿ ವಿಭಾಗಿಯ ಸಂಘಟನಾ ಕಾರ್ಯದರ್ಶಿ ಹರ್ಷ ನಾಯ್ಕ ಅವರು, ವಿದ್ಯಾರ್ಥಿ ಪರಿಷತ್ತು…
ಬಂಜಾರಾ ಪ್ರೌಢ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿಜಯಪುರ: ಶಿಕ್ಷಣ ಮತ್ತು ಭೌತಿಕ ಸಂಪತ್ತುಗಳನ್ನು ಪಡೆಯುವುದರ ಜತೆಯಲ್ಲಿ ಸಂಸ್ಕಾರ, ಸಂಸ್ಕೃತಿಗಳ ಮೌಲ್ಯಗಳನ್ನು ಅರಿತು ಜೀವನದಲ್ಲಿ ರೂಢಿಸಲು ಪ್ರಯತ್ನಿಸಿದಲ್ಲಿ ಜೀವನಪರಮ ಪಾವನವಾಗುತ್ತದೆ ಎಂದು ಜಿಲ್ಲಾ ಬಂಜಾರಾ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಿ.ಎಲ್.ಚವ್ಹಾಣ್‌ರವರು ಹೇಳಿದರು.ಶುಕ್ರವಾರದಂದು ಬಂಜಾರಾ ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡಿದ್ದ ೮ ನೇ ತರಗತಿಯ ವಿದ್ಯಾರ್ಥಿಗಳಿಗೆ ಸ್ವಾಗತ, ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ, ಶಾಲಾ ಸಂಸತ್ತಿನ ಚುನಾಯಿತ ವಿದ್ಯಾರ್ಥಿಗಳ ಪ್ರಮಾಣ ವಚನ ಬೋಧನೆ ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ, ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು. ಪೋಷಕರು ತಮ್ಮ ಮಕ್ಕಳ ಅಂಕ, ರ‍್ಯಾಂಕ್, ಸ್ಥಾನಮಾನ, ಬಿರುದು ಸನ್ಮಾನಗಳ ಕಡೆಗೆತಮ್ಮ ಶ್ರದ್ಧೆಯನ್ನು ಕೇಂದ್ರೀಕರಿಸಿ ಒತ್ತಡದ ಬದುಕಿಗೆ ಅವರನ್ನು ತಳ್ಳಿ ಬಿಡುತ್ತಾರೆ. ಶಿಕ್ಷಣ ಸ್ಥಾನಮಾನಗಳ ಜತೆಯಲ್ಲೇ ಮೌಲ್ಯಯುತ ಸಂಸ್ಕಾರಗಳನ್ನು ರೂಢಿಸಲು ಕಲಿಸಿದಲ್ಲಿ ಮಕ್ಕಳಲ್ಲಿ ವ್ಯಕ್ತಿತ್ವದ ಹೊಳಪು ಕಾಣಬಹುದು ಎಂದು ಹೇಳಿದರು.ಶಾಲೆಯ ಮುಖ್ಯ ಶಿಕ್ಷಕ…
ಇಂಡಿ: ಕಾನೂನು ಸಮುದ್ರದಷ್ಟೆ ವಿಶಾಲ. ಮೂಲಭೂತದಲ್ಲಿ ನೀರು ಎಷ್ಟು ಮುಖ್ಯವೋ..! ಕಾನೂನು ಅರಿವು ಅಷ್ಟೇ ಮುಖ್ಯ ಎಂದು ಗ್ರಾಮೀಣ ಪೋಲಿಸ್ ಠಾಣಾ ಸಿಪಿಐ ಎಮ್ ಎಮ್ ಡಪ್ಪಿನ ಹೇಳಿದರು.ಪಟ್ಟಣದ ಪ್ರತಿಷ್ಠಿತ ಎಸ್ ಎಸ್ ಪ್ಯಾರಾ ಮೆಡಿಕಲ್ ಕಾಲೇಜು ಆಶ್ರಯದಲ್ಲಿ ಆಯೋಜಿಸಿದ್ದ “ಕಾನೂನು ಅರಿವು- ನೆರವು” ಕಾರ್ಯಕ್ರಮಕ್ಕೆ ಸಸಿ ನೀರು ಹಾಕುವ ಮೂಲಕ ಚಾಲನೆ ನೀಡಿ ಮಾತನಾಡಿದರು.ವಿದ್ಯಾರ್ಥಿಗಳು ದೃಢ ಸಂಕಲ್ಪ ಮಾಡಿ ವಿದ್ಯಾಭ್ಯಾಸ ಮಾಡಬೇಕು ಹಾಗೂ ಕಾನೂನಿನ ಅರಿವು ಹೊಂದಿರಬೇಕು. ಪೋಕ್ಸೊ ಕಾಯ್ದೆ, ಮಾದಕ ವಸ್ತುಗಳ ಸೇವನೆ ಮಾರಾಟ ನಿಯಂತ್ರಣ ನಿಷೇಧ, ಮಕ್ಕಳ ಸಹಾಯವಾಣಿ 1098, ತುರ್ತು ಸಂದರ್ಭದಲ್ಲಿ 112 ಮತ್ತಿತರ ವಿಷಯಗಳ ಕುರಿತು ತಿಳಿಸಿದರು. ನಿತ್ಯ ಜೀವನಕ್ಕೆ ಬೇಕಾದ ಕಾನೂನು ತಿಳಿವಳಿಕೆ ಎಲ್ಲರಿಗೂ ಅಗತ್ಯ. ತಾಯಿ ಗರ್ಭದಿಂದ ಸಾಯುವವರೆಗೂ ಕಾನೂನುಗಳ ಅವಶ್ಯಕತೆ ಇದ್ದು, ಕಾನೂನು-ಕಾಯ್ದೆಗಳ ಬಗ್ಗೆ ಅಸಡ್ಡೆ ತೋರಬಾರದು ಎಂದು ಹೇಳಿದರು. ಕಾನೂನಿನ ಅರಿವು ಇರುವವರು ಶೋಷಣೆಯಿಂದ ತಪ್ಪಿಸಿಕೊಳ್ಳುತ್ತಾರೆ. ಕಾನೂನು ತಿಳಿಯದವರು ಸದಾ ಶೋಷಣೆಗೆ ಒಳಪಡುತ್ತಾರೆ. ಮಹಿಳೆಯರು ಸದಾ ಶೋಷಣೆಗೆ ಒಳಪಡುವ…
ಚಿಮ್ಮಡ: ಗ್ರಾಮದ ಕನಕದಾಸ ವೃತ್ತದಿಂದ ಬಸ್ ನಿಲ್ದಾಣಕ್ಕೆ ತೆರಳುವ ಎಲ್ಲಮ್ಮದೇವಿ ದೇವಸ್ಥಾನದ ಹಿಂದಿನ ಬೈಪಾಸ್ ರಸ್ತೆಯನ್ನು ಕೂಡಲೆ ದುರಸ್ತಿಗೊಳಿಸಬೇಕೆಂದು ಈ ಭಾಗದ ಸಂಚಾರಿಗಳು ಅಧಿಕಾರಿಗಳಿಗೆ ಆಗ್ರಹಿಸಿದ್ದಾರೆ.ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ, ಬಸ್ ನಿಲ್ದಾಣಕ್ಕೆ ತೆರಳಲು ಹಾಗೂ ವಾರದ ಸಂತೆಗಾಗಿ ಅತೀ ಹೆಚ್ಚು ಜನ ಸಂಚರಿಸುವ ಈ ರಸ್ತೆಯು ಸತತ ಮಳೆಯಿಂದಾಗಿ ರಸ್ತೆ ತುಂಬ ಗುಂಡಿಗಳಿಂದ ತುಂಬಿದ್ದು ಕಾಲಿಡಲು ಕೂಡ ಸ್ಥಳವಿಲ್ಲದಷ್ಟು ಗಲೀಜಾಗಿದೆ, ಎಲ್ಲಮ್ಮದೇವಿ ದೇವಸ್ಥಾನ ಹಾಗೂ ಸಾರ್ವಜನಿಕ ಶೌಚಾಲಯಗಳ ನಡುವೆ ಇಕ್ಕಟ್ಟಾಗಿರುವ ಈ ರಸ್ತೆಯಲ್ಲಿ ಸಂಚರಿಸಲು ಸಾರ್ವಜನಿಕರು ಪರದಾಡುವಂತಾಗಿದೆ,ಅಲ್ಲದೇ ಖಾಸಗೀ ವಾಹನಗಳು ಹೆಚ್ಚಾಗಿ ಈ ಮಾರ್ಗವಾಗಿಯೇ ಸಂಚರಿಸುವುದರಿಂದ ಪಾದಚಾರಿಗಳಿಗೆ ನಿತ್ಯ ಕೆಸರಿನ ಸಿಂಚನವಾಗಿ ಅವರ ಪಾಡು ಹೇಳತೀರದಂತಾಗಿದೆ. ಸಂಬಂಧಿಸಿದ ಅಧಿಕಾರಿಗಳು, ಜನಪ್ರತಿನಿಧಿಗಳು ಈ ಕುರಿತು ಗಮನಹರಿಸಿ ಕೂಡಲೆ ಈ ರಸ್ತೆಯನ್ನು ದುರಸ್ತಿಗೊಳಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಆಲಮಟ್ಟಿ: ವಲಯ ಮಟ್ಟದ ಕ್ರೀಡಾಕೂಟಕ್ಕೆ ಪ್ರತಿಭಟನೆ ಬಿಸಿ! ಆಲಮಟ್ಟಿ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ದೈಹಿಕ ಶಿಕ್ಷಣ ಶಿಕ್ಷಕರು ಕಪ್ಪು ಪಟ್ಟಿ ಧರಿಸಿ ಸಮೀಪದ ಮಾರಡಗಿ ಎಲ್ ಟಿ ಗ್ರಾಮದಲ್ಲಿ ಜರುಗಿದ ಆಲಮಟ್ಟಿ ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟದಲ್ಲಿ ಕರ್ತವ್ಯ ನಿರ್ವಹಿಸಿದರು.ರಾಜ್ಯದಲ್ಲಿ ಸುಮಾರು 25 ವರ್ಷಗಳಿಂದ ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿಯಾಗಿಲ್ಲ. ದೈಹಿಕ ಶಿಕ್ಷಣ ಶಿಕ್ಷಕರ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ಬದಲಾವಣೆ ಆಗಿಲ್ಲ ಎಂದು ಪ್ರತಿಭಟನಾಕಾರರು ದೂರಿದರು.ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ನಿಡಗುಂದಿ ತಾಲ್ಲೂಕು ಘಟಕದ ಅಧ್ಯಕ್ಷ ಎಸ್.ಎಂ. ಪಾಟೀಲ, ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಸುರೇಶ ಗಲಗಲಿ ಮಾತನಾಡಿ, ಪ್ರತಿಭಟನೆಯ ಅಂಗವಾಗಿ, ವಿದ್ಯಾರ್ಥಿಗಳಿಗೆ ತೊಂದರೆಯಾಗಬಾರದು ಎನ್ನುವ ಹಿನ್ನಲೆಯಲ್ಲಿ ವಲಯ, ತಾಲ್ಲೂಕು, ಜಿಲ್ಲಾ, ವಿಭಾಗ, ರಾಜ್ಯ ಮಟ್ಟದ ಕ್ರೀಡಾಕೂಟದ್ದುದಕ್ಕೂ ಕೈಗಳಿಗೆ ಕಪ್ಪು ಪಟ್ಟಿ ಕಟ್ಟಿಕೊಂಡೇ ತೀರ್ಪುಗಾರರಾಗಿ ಕರ್ತವ್ಯ ನಿರ್ವಹಿಸಲಾಗುವುದು. ನಂತರ ನೇಮಕಾತಿ ಪ್ರಕ್ರಿಯೆಗಳು ಪಡೆಯುವವರೆಗೂ ರಾಜ್ಯದೆಲ್ಲೆಡೆ ಪ್ರತಿಭಟಿಸಲಾಗುವುದು ಎಂದರು.2023ರ ಜುಲೈ ತಿಂಗಳಲ್ಲಿ ದೈಹಿಕ…
ವಿಜಯಪುರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸುವ ಎಂ.ಬಿ.ಎ ಹಾಗೂ ಎಂ.ಸಿ.ಎ ಪ್ರವೇಶ ಪರೀಕ್ಷೆಗಳನ್ನು ಸುಸೂತ್ರವಾಗಿ ಹಾಗೂ ಸುಗಮವಾಗಿ ಜರುಗಿಸುವಂತೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚನೆ ನೀಡಿದರು.ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಎಂಬಿಎ ಹಾಗೂ ಎಂಸಿಎ ಪ್ರವೇಶ ಪರೀಕ್ಷೆಯ ಪೂರ್ವಭಾವಿ ಸಿದ್ಧತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ನಗರದ ಗಾಂಧಿ ವೃತ್ತದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಆಗಸ್ಟ್ ೪ ರಂದು ಪರೀಕ್ಷೆ ಜರುಗಲಿದ್ದು, ಅಂದು ಬೆಳಿಗ್ಗೆ ೧೦.೩೦ ರಿಂದ ಮಧ್ಯಾಹ್ನ ೧೨ ಗಂಟೆಯವರೆಗೆ ನಡೆಯುವ ಎಂಸಿಎ ಪ್ರವೇಶಾತಿ ಪರೀಕ್ಷೆಗೆ ೩೮೭ ಹಾಗೂ ಮಧ್ಯಾಹ್ನ ೨.೩೦ ರಿಂದ ೪.೩೦ರವರೆಗೆ ನಡೆಯುವ ಎಂಬಿಎ ಪರೀಕ್ಷೆಗೆ ೬೩೭ ಅಭ್ಯರ್ಥಿಗಳು ನೋಂದಾಯಿಸಿಕೊAಡಿದ್ದಾರೆ. ಇಲಾಖೆಯ ಪರೀಕ್ಷಾ ಮಾರ್ಗಸೂಚಿಯಂತೆ ಪರೀಕ್ಷೆ ನಡೆಯುವ ದಿನದಂದು ಎಲ್ಲಾ ಕೊಠಡಿಗಳಲ್ಲಿ ಸಿಸಿಟಿವಿ ಅಳವಡಿಸಬೇಕು. ಪ್ರತಿ ಅಭ್ಯರ್ಥಿಯ ಗುರುತಿನ ಪತ್ರ ಪರಿಶೀಲಿಸಿ ಹಾಜರಾಗಿರುವ ಅಭ್ಯರ್ಥಿಯನ್ನು ತಾಳೆ ಮಾಡಿ ಪರೀಕ್ಷಾ ಕೊಠಡಿಗೆ ಪ್ರವೇಶ ಕಲ್ಪಿಸಬೇಕು. ಸ್ಮಾರ್ಟ್ ವಾಚ್, ಎಲೆಕ್ಟಾçನಿಕ್ ಉಪಕರಣ, ಮೊಬೈಲ್ ಬಳಕೆ ನಿಷೇಧಿಸಿದ್ದು,…
ಕರ್ನಾಟಕ ಅಲೆಮಾರಿ ಅರೆ ಅಲೆಮಾರಿ ಅಭಿವೃದ್ದಿ ನಿಗಮ: ಸಾಲ-ಸೌಲಭ್ಯಕ್ಕೆ ಅರ್ಜಿ ಆಹ್ವಾನ ವಿಜಯಪುರ: ಕರ್ನಾಟಕ ಅಲೆಮಾರಿ ಅರೆ ಅಲೆಮಾರಿ ಅಭಿವೃದ್ದಿ ನಿಗಮದಿಂದ ಅನುಷ್ಠಾನಗೊಳಿಸುವ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯ ಪಡೆಯಲು ಆಸಕ್ತ ಅರ್ಹರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ನಿಗಮದಿಂದ ಅನುಷ್ಠಾನಗೊಳಿಸುತ್ತಿರುವ ಸ್ವಯಂ ಉದ್ಯೊಗ ನೇರ ಸಾಲ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಅರಿವು ಶೈಕ್ಷಣಿಕ ನೇರ ಸಾಲ ಯೋಜನೆ(ಹೊಸದು), ವಿದೇಶ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ನೇರಸಾಲ (ಬ್ಯಾಂಕುಗಳ ಸಹಯೋಗದೊಂದಿಗೆ) ಯೋಜನೆಯಡಿ ಸಾಲ-ಸೌಲಭ್ಯ ಪಡೆಯಲಿಚ್ಚಿಸುವವರು ಸೇವಾ ಸಿಂಧು ಪೋರ್ಟಲ್ https://www.sevasindhu.karnataka.gov.inhttps://www.kaad.karnataka.gov.inಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ದಿನಾಂಕ : ೩೧-೦೮-೨೦೨೪ ಕೊನೆಯ ದಿನಾಂಕವಾಗಿದೆ.ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್https://www.kaad.karnataka.gov.in ಅಥವಾ ಸಹಾಯವಾಣಿ ಸಂಖ್ಯೆ ೦೮೦-೨೨೩೭೪೮೩೨, ೮೦೫೦೭೭೦೦೦೪, ವಿಜಯಪುರ ಜಿಲ್ಲಾ ಕಚೇರಿ ದೂರವಾಣಿ ೦೮೩೫೨-೨೫೮೧೨೮ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ…
ವಿಜಯಪುರ: ಡಿ.ದೇವರಾಜ್ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದಿಂದ ಅನುಷ್ಠಾನಗೊಳಿಸುವ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯ ಪಡೆಯಲು ಹಿಂದುಳಿದ ವರ್ಗದವರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಗಂಗಾ ಕಲ್ಯಾಣ ಯೋಜನೆ, ಅರಿವು ಶೈಕ್ಷಣಿಕ ನೇರ ಸಾಲ ಯೋಜನೆ(ಹೊಸದು), ವಿದೇಶ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ನೇರಸಾಲ (ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವಾತಂತ್ರö್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆ ಹಾಗೂ ಹೊಲಿಗೆ ಯಂತ್ರ ವಿತರಣೆ ಯೋಜನೆಯಡಿ ಸಾಲ-ಸೌಲಭ್ಯ ಪಡೆಯಲಿಚ್ಚಿಸುವವರು ಸೇವಾ ಸಿಂಧು ಪೋರ್ಟಲ್ https://www.sevasindhu.karnataka.gov.in ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ದಿನಾಂಕ : ೩೧-೦೮-೨೦೨೪ ಕೊನೆಯ ದಿನಾಂಕವಾಗಿದೆ.ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ https://www.dbcds.karnataka.gov.in ಅಥವಾ ಸಹಾಯವಾಣಿ ಸಂಖ್ಯೆ ೦೮೦-೨೨೩೭೪೮೩೨, ೮೦೫೦೭೭೦೦೦೪ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
