Author: editor.udayarashmi@gmail.com

ಬಸವನಬಾಗೇವಾಡಿ: ಪಟ್ಟಣದ ಮಿನಿವಿಧಾನಸೌಧದ ಆವರಣದಲ್ಲಿ ಮೆಗಾಮಾರುಕಟ್ಟೆಯ ಕೊಲ್ಹಾರ ಮುಖ್ಯರಸ್ತೆಯಲ್ಲಿದ್ದ ಆವರಣ ಗೋಡೆಗೆ ಹೊಂದಿಕೊಂಡು ವ್ಯಾಪಾರ ಮಾಡುತ್ತಿದ್ದ ಬೀದಿ ಬದಿ ವ್ಯಾಪಾರಸ್ಥರು ಕಳೆದ ಮೂರು ದಿನಗಳಿಂದ ಅಹೋರಾತ್ರಿ ಧರಣಿಯನ್ನು ಭಾನುವಾರ ತಡರಾತ್ರಿ ಅಽಕಾರಿಗಳು ನೀಡಿದ ಭರವಸೆ ಮೇರೆಗೆ ತಮ್ಮ ಅಹೋರಾತ್ರಿ ಧರಣಿಯನ್ನು ಹಿಂಪಡೆದುಕೊಂಡರು.ಧರಣಿ ಸ್ಥಳಕ್ಕೆ ಭಾನುವಾರ ರಾತ್ರಿ ೧೦ ಗಂಟೆ ಸುಮಾರಿಗೆ ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ, ಡಿವೈಎಸ್ಪಿ ಬಲ್ಲಪ್ಪ ನಂದಗಾವಿ, ಪಿಐ ವಿಜಯ ಮುರಗುಂಡಿ, ಪುರಸಭೆ ಮುಖ್ಯಾಧಿಕಾರಿ ಎಚ್.ಎಸ್.ಚಿತ್ತರಗಿ ಭೇಟಿ ನೀಡಿ ಪಟ್ಟಣದ ವಿವಿಧ ಸ್ಥಳಗಳಲ್ಲಿ ತಮಗೆ ವ್ಯಾಪಾರ ಮಾಡಿಕೊಳ್ಳಲು ಸ್ಥಳವಕಾಶ ನೀಡಲಾಗುವುದು ಎಂದು ಭರವಸೆ ನೀಡಿದರು. ಅಧಿಕಾರಿಗಳು ಕೆಲ ವ್ಯಾಪಾರಿಗಳಿಗೆ ರಾತ್ರಿಯೇ ಸ್ಥಳ ಸೂಚಿಸಿದ ಮೇರೆಗೆ ಧರಣಿ ನಿರತರು ತಮ್ಮ ಧರಣಿಯನ್ನು ಹಿಂಪಡೆದುಕೊಂಡರು.ಪಟ್ಟಣದಲ್ಲಿ ಸೋಮವಾರ ಸಂತೆ ದಿನ ಇರುವದರಿಂದ ಮೆಗಾಮಾರುಕಟ್ಟೆಯ ಆವರಣಗೋಡೆ ತೆರವುಗೊಳಿಸಿದ ಜಾಗೆಯಲ್ಲಿ ಕೆಲ ಬೀದಿ ವ್ಯಾಪಾಸ್ಥರು ತಮ್ಮ ವ್ಯಾಪಾರ ಮಾಡುತ್ತಿರುವದು ಕಂಡುಬಂದಿತ್ತು.ಬೀದಿ ವ್ಯಾಪಾರಸ್ಥರ ಪಟ್ಟಣ ಸಮಿತಿ ಸದಸ್ಯ ಜಾಕೀರ ನದಾಫ್ ಅವರು, ಪಟ್ಟಣದ ಮೆಗಾಮಾರುಕಟ್ಟೆಯ ಆವರಣಗೋಡೆಗೆ ಹೊಂದಿಕೊಂಡು ಬಳೆ ಅಂಗಡಿ,…

Read More

ಟೆಂಪೋ ಪಲ್ಟಿ: ೩೦ಕ್ಕೂ ಅಧಿಕ ಜನರಿಗೆ ಗಾಯ ಸಿಂದಗಿ: ತಾಲೂಕಿನ ಮನ್ನಾಪುರ ಗ್ರಾಮದ ಬಳಿ ವಾಹನ ಚಾಲಕನ ನಿರ್ಲಕ್ಷತನದಿಂದ ಟೆಂಪೋ ಪಲ್ಟಿಯಾದ ಪರಿಣಾಮ ಮಹಿಳೆಯರು, ಮಕ್ಕಳು ಸೇರಿದಂತೆ ೩೦ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಮೂವರ ಸ್ಥಿತಿ ಚಿಂತಾಜನಕವಾಗಿದೆ. ಅದೃಷ್ಟವಶಾತ್ ಅಪಘಾತದಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ.ತಾಲೂಕಿನ ಹಿಕ್ಕಣಗುತ್ತಿ ಗ್ರಾಮಸ್ಥರು ಗೋಲಗೇರಿ ಗೊಲ್ಲಾಳೇಶ್ವರ ದೇವಸ್ಥಾನಕ್ಕೆ ಜವಳ ಕಾರ್ಯಕ್ರಮಕ್ಕೆ ಹೊರಟಿರುವ ಸಂದರ್ಭದಲ್ಲಿ ಸಿಂದಗಿ ಶಹಾಪೂರ ಹೆದ್ದಾರಿಯ ಮಾರ್ಗದಲ್ಲಿ ಬರುವ ಮನ್ನಾಪುರ ಗ್ರಾಮದ ಹತ್ತಿರ ಈ ಅಪಘಾತ ಸಂಭವಿಸಿದೆ. ತಕ್ಷಣದಲ್ಲಿ ಗಾಯಾಳುಗಳನ್ನು ಪ್ರಥಮ ಚಿಕಿತ್ಸೆಗೆ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಥಮ ಚಿಕಿತ್ಸೆ ನೀಡಲಾಗಿದೆ.ಈ ಅಪಘಾತದ ವಿಷಯ ತಿಳಿಯುತ್ತಿದ್ದಂತೆ ಶಾಸಕ ಅಶೋಕ ಮನಗೂಳಿ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯವನ್ನು ವಿಚಾರಿಸಿ ಗಂಭೀರ ಸ್ಥಿತಿಯಲ್ಲಿದ್ದವರಿಗೆ ಜಿಲ್ಲಾಸ್ಪತ್ರೆಗೆ ರವಾನಿಸುವಂತೆ ಸೂಚಿಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಪಘಾತದಲ್ಲಿ ಗಾಯವಾದ ಜನರಿಗೆ ಸೂಕ್ತ ರೀತಿಯ ಚಿಕಿತ್ಸೆ ನೀಡುವಂತೆ ಸ್ಥಳೀಯ ವೈದ್ಯರಿಗೆ ಸೂಚಿಸಿದ್ದೇನೆ. ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ದಾಖಲಿಸಲು ಹೋಗಲು…

Read More

ಸಿಂದಗಿ: ಪಟ್ಟಣದ ಸಾತವೀರೇಶ್ವರ ಸಭಾಭವನದಲ್ಲಿ ಜು.೩೦ರಂದು ಬೆಳಿಗ್ಗೆ ೧೦ಗಂಟೆಗೆ ಶ್ರೀ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯ ಅಂಗ ಸಂಸ್ಥೆಯಾದ ಆರ್.ಡಿ.ಪಾಟೀಲ, ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪದವಿ ಪೂರ್ವ ಕಾಲೇಜಿನ ಪಠ್ಯಪೂರಕ ಚಟುವಟಿಕೆ, ರೋವರ್ ಮತ್ತು ರೇಂಜರ್, ಭಾರತ ಸೇವಾದಳ, ಎನ್.ಎಸ್.ಎಸ್. ಘಟಕಗಳ ಉದ್ಘಾಟನೆ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರಿಕ್ಷೇಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಪ್ರಾಚಾರ್ಯ ಬಿ.ಎಂ.ಸಿಂಗನಳ್ಳಿ ತಿಳಿಸಿದ್ದಾರೆ.ಕಾರ್ಯಕ್ರಮದ ಸಾನಿಧ್ಯವನ್ನು ಸಾರಂಗಮಠದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ವಹಿಸುವರು. ಉದ್ಘಾಟಕರಾಗಿ ಧಾರವಾಡದ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಅಧ್ಯಕ್ಷ ಡಿ.ಎಂ.ಹಿರೇಮಠ ಆಗಮಿಸುವರು.ಮುಖ್ಯ ಅತಿಥಿಗಳಾಗಿ ಧಾರವಾಡದ ಚಲನಚಿತ್ರ ಮತ್ತು ಕಿರುತೆರೆ ಕಲಾವಿದರು ಅನಚಿತ ದೇಶಪಾಂಡೆ, ಸಂಸ್ಥೆಯ ಸಹಕಾರ್ಯದರ್ಶಿ ಅಶೋಕ ವಾರದ, ನಿರ್ದೇಶಕ ಎಚ್.ಎಂ.ಪೂಜಾರ ಇರಲಿದ್ದಾರೆ. ಅಧ್ಯಕ್ಷತೆಯನ್ನು ಪ್ರಾಚಾರ್ಯ ಬಿ.ಎಂ ಸಿಂಗನಳ್ಳಿ ವಹಿಸುವರು, ಕಾರ್ಯಕ್ರಮದಲ್ಲಿ ನಿವೃತ್ತರಾದ ವ್ಹಿ.ಡಿ.ಪಾಟೀಲ ಹಾಗೂ ಶಿವಸಿಂಪಗೇರ ಅವರನ್ನು ಸನ್ಮಾನಿಸಲಾಗುವುದು ಎಂದು ಉಪನ್ಯಾಸಕ, ಚರ್ಚಾಕೂಟ ವಿಭಾಗದ ಕಾರ್ಯಾಧ್ಯಕ್ಷ ಎಸ್.ಜಿ.ಮಾರ್ಸನಳ್ಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಸಿದ್ದಾರೆ.

Read More

ಸಿಂದಗಿ: ಪಟ್ಟಣದ ಶ್ರೀಪದ್ಮರಾಜ ಮಹಿಳಾ ಪದವಿ ಮಹಾವಿದ್ಯಾಲಯದಲ್ಲಿ ಜು.೩೦ರಂದು ಬೆಳಿಗ್ಗೆ ೯ಗಂಟೆಗೆ ಸಿಂದಗಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಮಹಿಳಾ ಮತ್ತು ಅಭಿವೃದ್ಧಿ ಇಲಾಖೆ ಹಾಗೂ ಶ್ರೀಪದ್ಮರಾಜ ಮಹಿಳಾ ಪದವಿ ಮಹಾವಿದ್ಯಾಲಯದ ಸಹಯೋಗದೊಂದಿಗೆ ಮಾನವ ಕಳ್ಳ ಸಾಗಾಣಿಕೆ ವಿರೋಧಿ ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಉಪನ್ಯಾಸಕ, ಪತ್ರಿಕಾ ಪ್ರತಿನಿಧಿ ಮಹಾಂತೇಶ ನೂಲಾನವರ ತಿಳಸಿದ್ದಾರೆ.ಕಾರ್ಯಕ್ರಮದ ಸಾನಿಧ್ಯವನ್ನು ಸಾರಂಗಮಠದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಪಾವನ ಸಾನಿಧ್ಯವನ್ನು ವಹಿಸಿಕೊಳ್ಳಲಿದ್ದಾರೆ. ಸಿಂದಗಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ನಾಗೇಶ ಮೊಗೇರ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಎಸ್.ಎಮ್.ಪೂಜಾರಿ ವಹಿಸುವರು. ಮುಖ್ಯಅತಿಥಿಗಳಾಗಿ ವಕೀಲರ ಸಂಘದ ಅಧ್ಯಕ್ಷ ಎಸ್.ಬಿ.ಪಾಟೀಲ, ಅಪರ ಸರಕಾರಿ ವಕೀಲ ಭೀ.ಜಿ.ನೆಲ್ಲಗಿ, ಸಿಡಿಪಿಒ ಶಂಭುಲಿಂಗ ಹಿರೇಮಠ, ಸಹಾಯಕ ಸರಕಾರಿ ವಕೀಲ ಆನಚಿದ ರಾಠೋಡ ಇರುವರು. ಉಪನ್ಯಾಸವನ್ನು ಎಸಿಡಿಪಿಒ ಎಸ್.ಎನ್.ಕೋರವಾರ ಮಾಡಲಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಸಿಂದಗಿ: ಪಟ್ಟಣದ ಶ್ರೀಪದ್ಮರಾಜ ಮಹಿಳಾ ಪದವಿ ಮಹಾವಿದ್ಯಾಲಯದಲ್ಲಿ ಜು.೩೦ರಂದು ಬೆಳಿಗ್ಗೆ ೯ಗಂಟೆಗೆ ಸಿಂದಗಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಮಹಿಳಾ ಮತ್ತು ಅಭಿವೃದ್ಧಿ ಇಲಾಖೆ ಹಾಗೂ ಶ್ರೀಪದ್ಮರಾಜ ಮಹಿಳಾ ಪದವಿ ಮಹಾವಿದ್ಯಾಲಯದ ಸಹಯೋಗದೊಂದಿಗೆ ಮಾನವ ಕಳ್ಳ ಸಾಗಾಣಿಕೆ ವಿರೋಧಿ ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಉಪನ್ಯಾಸಕ, ಪತ್ರಿಕಾ ಪ್ರತಿನಿಧಿ ಮಹಾಂತೇಶ ನೂಲಾನವರ ತಿಳಸಿದ್ದಾರೆ.ಕಾರ್ಯಕ್ರಮದ ಸಾನಿಧ್ಯವನ್ನು ಸಾರಂಗಮಠದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಪಾವನ ಸಾನಿಧ್ಯವನ್ನು ವಹಿಸಿಕೊಳ್ಳಲಿದ್ದಾರೆ. ಸಿಂದಗಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ನಾಗೇಶ ಮೊಗೇರ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಎಸ್.ಎಮ್.ಪೂಜಾರಿ ವಹಿಸುವರು. ಮುಖ್ಯಅತಿಥಿಗಳಾಗಿ ವಕೀಲರ ಸಂಘದ ಅಧ್ಯಕ್ಷ ಎಸ್.ಬಿ.ಪಾಟೀಲ, ಅಪರ ಸರಕಾರಿ ವಕೀಲ ಭೀ.ಜಿ.ನೆಲ್ಲಗಿ, ಸಿಡಿಪಿಒ ಶಂಭುಲಿಂಗ ಹಿರೇಮಠ, ಸಹಾಯಕ ಸರಕಾರಿ ವಕೀಲ ಆನಚಿದ ರಾಠೋಡ ಇರುವರು. ಉಪನ್ಯಾಸವನ್ನು ಎಸಿಡಿಪಿಒ ಎಸ್.ಎನ್.ಕೋರವಾರ ಮಾಡಲಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಸಿಂದಗಿಯಲ್ಲಿ ವಿದ್ಯಾಚೇತನ ಪ್ರಕಾಶನದಿಂದ ರಾಜ್ಯಮಟ್ಟದ ಬಾಲಸಾಹಿತ್ಯ ಪ್ರಶಸ್ತಿ ಪ್ರದಾನ ಸಿಂದಗಿ: ಪಟ್ಟಣದ ಸಂಗಮೇಶ್ವರ ಲೇಔಟ್‌ನಲ್ಲಿ ಬಾಲವನಕ್ಕಾಗಿ ಕಾಯ್ದಿಸಿರುವ ನಿವೇಶನದಲ್ಲಿ ಎರಡು ತಿಂಗಳಲ್ಲಿ ಬಾಲವನ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಗುವುದು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಪಟ್ಟಣದ ಸಾರಂಗಮಠದಲ್ಲಿ ವಿದ್ಯಾಚೇತನ ಪ್ರಕಾಶನದ ವತಿಯಿಂದ ಹಮ್ಮಿಕೊಂಡ ರಾಜ್ಯಮಟ್ಟದ ಬಾಲಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.ಮಕ್ಕಳ ಸಾಹಿತ್ಯ ಅಧ್ಯಯನದಿಂದ ಮಕ್ಕಳಲ್ಲಿ ಸಂಸ್ಕಾರ ಜಾಗೃತಗೊಳ್ಳುತ್ತದೆ. ನಾನು ಶಾಸಕನಾದ ನಂತರ ನನ್ನ ವಿದ್ಯಾಗುರುಗಳಾದ ಹ.ಮ. ಪೂಜಾರ ಅವರು ನನ್ನನ್ನು ಕರೆದು ಕ್ಷೇತ್ರದ ಜನತೆ ನಿನಗೆ ಆಶಿರ್ವಾದ ಮಾಡಿ ಅಧಿಕಾರ ನೀಡಿದ್ದಾರೆ. ಕ್ಷೇತ್ರದ ಅಭಿವೃದ್ಧಿ ಮಾಡುವ ಜೊತೆಗೆ ಮಕ್ಕಳ ಅಭಿವೃದ್ಧಿಗಾಗಿ ಸಿಂದಗಿ ಪಟ್ಟಣದಲ್ಲಿ ಬಾಲಭವನ, ಬಾಲವನ ನಿರ್ಮಾಣ ಮಾಡಬೇಕು ಎಂದು ಮನವಿ ಮಾಡಿದ್ದಾರೆ. ಅವರ ಆಸೆ ಈಡೇರಿಸುತ್ತೇನೆ. ಅವರು ವರ್ಷದಲ್ಲಿ ನಾಲ್ಕು ವಿವಿಧ ಕಾರ್ಯಕ್ರಮ ಆಯೋಜಿಸುವ ಮೂಲಕ ಮಕ್ಕಳ ವ್ಯಕ್ತಿತ್ವ ರೂಪಿಸುವ ಕಾರ್ಯವನ್ನು ಮಾಡುತ್ತಿರುವ ಈ ಭಾಗದಲ್ಲಿ ಮಾಡುತ್ತಿದ್ದಾರೆ ಎಂದರು.ಸಾನ್ನಿಧ್ಯ ವಹಿಸಿದ್ದ ಡಾ.ಪ್ರಭುಸಾರಂಗದೇವ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ,…

Read More

ಸಿಂದಗಿ: ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ತಾಲೂಕಿನ ಬನ್ನೆಟ್ಟಿ ಪಿ ಗ್ರಾಮದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಪರಿಣಾಮ ೧೦ನೆಯ ತರಗತಿಯ ವಿದ್ಯಾರ್ಥಿ ಮೃತಪಟ್ಟ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ.ಮೃತ ದುರ್ದೈವಿ ವಿದ್ಯಾರ್ಥಿ ಸಂದೀಪ ಶಿವಾನಂದ ಗಿಡ್ಡಯಲ್ಲಪ್ಪಗೋಳ ಎಂದು ತಿಳಿದು ಬಂದಿದೆ.ಈ ವಿದ್ಯಾರ್ಥಿಯು ಸಿಂದಗಿಯ ಎಚ್.ಜಿ.ಶಾಲೆಗೆ ಹೋಗುವ ಸಲುವಾಗಿ ಗ್ರಾಮದ ಬಸ್ ನಿಲ್ದಾಣದಲ್ಲಿ ಬಸ್ಸಿಗಾಗಿ ಕಾಯುತ್ತಿರುವ ಸಮಯದಲ್ಲಿ ಕಲಕೇರಿ ಸಿಂದಗಿ ಬಸ್ ಚಾಲಕನ ನಿರ್ಲಕ್ಷ್ಯತನ ಹಾಗೂ ವೇಗದಿಂದ ಬಸ್ ಬಂದು ವಿದ್ಯಾರ್ಥಿಗೆ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ.ತೀವ್ರವಾಗಿ ಗಾಯಗೊಂಡ ವಿದ್ಯಾರ್ಥಿಯನ್ನು ತಕ್ಷಣದಲ್ಲಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ವಿದ್ಯಾರ್ಥಿ ಮೃತಪಟ್ಟಿದ್ದಾನೆ ಎಂದು ಕುಟುಂದ ಮೂಲಗಳಿಂದ ತಿಳಿದು ಬಂದಿದೆ. ಈ ಪ್ರಕರಣವು ದೇವರ ಹಿಪ್ಪರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಈ ಘಟನೆಯನ್ನು ಖಂಡಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿ ಚಾಲಕನ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

Read More

ಸಿಂದಗಿ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್‌ಗಳಲ್ಲಿ ಬೇಕಾಬಿಟ್ಟಿಯಾಗಿ ವಸೂಲಿ ಮಾಡುತ್ತಿರುವ ಟೋಲ್ ಏಜೆನ್ಸಿಗೆ ಕಡಿವಾಣ ಹಾಕಲು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರ ಮನೆಯಿಂದ ೬೦ಕಿ.ಮೀ ದೂರದೊಳಗೆ ಯಾವುದೇ ಟೋಲ್ ಕೇಂದ್ರ ಇದ್ದರೂ ಶುಲ್ಕ ಕಟ್ಟುವಂತಿಲ್ಲ ಎಂದು ಲೋಕಸಭೆಯ ಸದನದಲ್ಲಿ ಹೇಳಿರುವ ಹೇಳಿಕೆಗೆ ಸಿಂದಗಿ ಬಿಜೆಪಿ ಮಂಡಲ ಕೋಶಾಧ್ಯಕ್ಷ ಶ್ರೀಶೈಲಗೌಡ ಬಿರಾದಾರ ಅಭಿನಂದಿಸಿದ್ದಾರೆ. ಟೋಲ್ ನಾಕಾದಿಂದ ೬೦ಕಿ.ಮಿ ಒಳಗೆ ಮನೆ ಇರುವವರು ಆಧಾರ್ ಕಾರ್ಡ್ ತೋರಿಸಿ ಪಾಸ್ ಮಾಡಿಸಿಕೊಂಡು ಓಡಾಡಬಹುದು. ಇದರಿಂದ ಸಾರ್ವಜನಿಕರಿಗೆ ಅನುಕೂಲವಾಗಲಿದೆ. ಈ ನಿರ್ಣಯವನ್ನು ಕೈಗೊಂಡಿರುವ ಕೇಂದ್ರ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರಿಗೆ ಜಿಲ್ಲೆಯ ಹಾಗೂ ತಾಲೂಕಿನ ಎಲ್ಲಾ ಜನತೆಯ ಪರವಾಗಿ ಅಭಿನಂದನೆ ಸಲ್ಲಿಸಿದ್ದಾರೆ.

Read More

ಮುದ್ದೇಬಿಹಾಳ: ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಅರಿಹಂತ ಚಾರಿಟೇಬಲ್ ಟ್ರಸ್ಟ್ ನ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಕಾರ್ಗಿಲ್ ವಿಜಯೋತ್ಸವದ ೨೫ನೇ ವರ್ಷಾಚರಣೆಯನ್ನು ಗೌರವ, ಶ್ರದ್ಧೆ ಮತ್ತು ಹೆಮ್ಮೆಯಿಂದ ಆಚರಿಸಲಾಯಿತು. ಈ ವೇಳೆ ಕಾರ್ಗಿಲ್ ವೀರಯೋಧರ ಸ್ಮಾರಕ ನಿರ್ಮಾಣ ಸಮಿತಿಯ ಸಂಸ್ಥಾಪಕ ಗೌರವಾಧ್ಯಕ್ಷ ಬಸವರಾಜ ನಂದಿಕೇಶ್ವರಮಠ, ಮಾಜಿ ಸೈನಿಕರಾದ ಸಂಗಯ್ಯ ಪತ್ತೆಪೂರಮಠ, ಮತ್ತು ಸೈನಿಕ ನಾಗಲಿಂಗಯ್ಯ ಮಠ, ಕಾಲೇಜಿನ ಅಧ್ಯಕ್ಷ ಮಹಾವೀರ ಸಗರಿ, ಪ್ರಾಚಾರ್ಯ ಪ್ರೊ. ವಿಪುಲ್ ಸಗರಿ, ಐಕ್ಯೂಏಸಿ ಸಂಯೋಜಕ ಪ್ರೊ ಆರ್.ಪಿ.ನಲವಡೆ, ಉಪನ್ಯಾಸಕರಾದ ಜಿ.ಡಿ.ಬಡಿಗೇರ, ಅಶೋಕ ಹಡಪದ, ಹೆಚ್.ಎಸ್.ಗೌಡರ್, ಅಕ್ಷತಾ ಸಗರಿ, ಬಸವರಾಜ ಬಡಿಗೇರ, ಬಸವರಾಜ ಕತ್ತಿ, ರವಿ ಮರೋಳ ಸೇರಿದಂತೆ ವಿದ್ಯಾರ್ಥಿಗಳು ಭಾಗಿಯಾಗಿದ್ದರು.

Read More

ಮುದ್ದೇಬಿಹಾಳ: ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಜು.30 ರಂದು ಬೆಳಿಗ್ಗೆ 10ಗಂಟೆಗೆ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ ಕುರಿತು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ ಹಾಗೂ ಇತರ ಎಲ್ಲ ಸರಕಾರಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ ಈ ಕಾರ್ಯಕ್ರಮವನ್ನು ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷರು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ರವೀಂದ್ರಕುಮಾರ ಕಟ್ಟಿಮನಿ ಉದ್ಘಾಟಿಸುವರು. ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಕಿರಿಯ ಸಿವಿಲ್ ನ್ಯಾಯಾಧೀಶ ಸಂಪತ್ತಕುಮಾರ ಬಳೂಲಗಿಡದ ಉಪಸ್ಥಿತಿಯಲ್ಲಿ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಶಶಿಕಾಂತ ಮಾಲಗತ್ತಿ ಅಧ್ಯಕ್ಷತೆ ವಹಿಸಲಿದ್ದು, ಹಿರಿಯ ಶ್ರೇಣಿ ಸಹಾಯಕ ಸರ್ಕಾರಿ ಅಭಿಯೋಜಕ ನಾಗರಾಜ ಪೂಜಾರ, ಕಿರಿಯ ಶ್ರೇಣಿ ಸಹಾಯಕ ಸರ್ಕಾರಿ ಅಭಿಯೋಜಕ ಬಸವರಾಜ ಆಹೇರಿ, ಅಪರ ಸರ್ಕಾರಿ ವಕೀಲ ಎಚ್.ಎಲ್.ಸರೂರ, ತಹಶೀಲ್ದಾರ ಬಲರಾಮ ಕಟ್ಟಿಮನಿ, ಪ್ರಭಾರ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಆರ್.ಎಸ್.ಹಿರೇಗೌಡರ, ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಸಾವಳಗಿ, ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಶಿಶು ಅಭಿವೃದ್ಧಿ ಯೋಜನಾಧಿಖಾರಿ ಶಿವಮೂರ್ತಿ ಕುಂಬಾರ ಅತಿಥಿಗಳಾಗಿ ಭಾಗಿಯಾಗಲಿದ್ದು, ಮಾನವ…

Read More