Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿಜಯಪುರ: ಜ್ಞಾನ ಅಸೀಮವಾದುದು. ಜ್ಞಾನವೇ ನಿಜವಾದ ಪ್ರಕಾಶ. ಜೀವನ ಪೂರ್ತಿ ವಿದ್ಯೆ ಸಂಗ್ರಹಿಸಿ ಸಮಾಜದ ಒಳಿತಿಗೆ ಬಳಸಬೇಕು. ನಿಜವಾದ ವಿದ್ಯೆಯಿಂದ ಬದುಕು ಪರಿವರ್ತನೆ ಆಗಲು ಸಾಧ್ಯ ಎಂದು ಕಾತ್ರಾಳ-ಬಾಲಗಾಂವ ಗುರುದೇವಾಶ್ರಮದ ಅಮೃತಾನಂದ ಸ್ವಾಮೀಜಿ ಹೇಳಿದರು.ಅವರು ಇಟ್ಟಂಗಿಹಾಳ ರಸ್ತೆಯಲ್ಲಿರುವ ಏಕ್ಸಲೆಂಟ್ ಶಾಲೆಯಲ್ಲಿ ರವಿವಾರದಂದು ಭಾರತೀಯ ಶಿಕ್ಷಣ ಮಂಡಲ ಕರ್ನಾಟಕ ಉತ್ತರ ಪ್ರಾಂತ ಹಾಗೂ ಏಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಯ ಸಹಯೋಗದಲ್ಲಿ ಜರುಗಿದ ವಿದ್ಯಾಲಯ ಶಿಕ್ಷಣ ಮತ್ತು ಉನ್ನತ ಶಿಕ್ಷಣ ಗತಿವಿಧಿ, ಪ್ರಾಂತ ಮಟ್ಟದ ಶಿಕ್ಷಕ ಸ್ವಾಧ್ಯಾಯ ಸಮಾರೋಪ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು.ಶಿಕ್ಷಕರು ಪ್ರಸನ್ನತೆಯಿಂದ ಮಕ್ಕಳಲ್ಲಿ ಹೃದಯವೈಶ್ಯಾಲ್ಯತೆ ಬೆಳೆಸಿ,ಅವರಿಗೆ ಮೌಲ್ಯಾಧಾರಿತ ಶಿಕ್ಷಣ ನೀಡಲು ಮುಂದಾಗಬೇಕು ಎಂದು ಹೇಳಿದರು. ನಾಗಪುರದ ಭಾರತೀಯ ಶಿಕ್ಷಣ ಮಂಡಲದ ಅಖಿಲ ಭಾರತೀಯ ಸಂಘಟನಾ ಮಂತ್ರಿ ಬಿ ಆರ್ ಶಂಕರಾನಂದಮಾತನಾಡಿ, ದೇಶದ ಪ್ರಗತಿಯ ಗುಣಮಟ್ಟ ನಿರ್ಧರಿಸಲು ಶಿಕ್ಷಣ ಅವಶ್ಯ. ಶಿಕ್ಷಕ ಆಚಾರ್ಯರಾಗಿ, ಋಷಿಯಾಗಿ ಮಕ್ಕಳ ಬದುಕನ್ನು ಕಟ್ಟಲು ಸಜ್ಜಾಗಬೇಕು. ಶಿಕ್ಷಕರು ದೇಶದ ಭವಿಷ್ಯ ಬರೆಯಬಲ್ಲರು.ಹಾಗಾಗಿ ಗುರುವಿಗೆ ಮಹತ್ತರ ಸ್ಥಾನವಿದೆಎಂದು ಹೇಳಿದರು.ಅಕ್ಕಮಹಾದೇವಿ…
ವಿಜಯಪುರದಲ್ಲಿ ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ ವಿಜಯಪುರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ವಿಜಯಪುರ ಜಿಲ್ಲಾ ಘಟಕದಿಂದ ಜಿಲ್ಲೆಯ ಪತ್ರಕರ್ತರ ಪ್ರತಿಭಾವಂತ ಮಕ್ಕಳಿಗೆ ಹೃದಯಸ್ಪರ್ಷಿಯಾಗಿ ಸನ್ಮಾನಿಸಿ ಗೌರವಿಸಲಾಯಿತು.ರವಿವಾರ ಸಂಜೆ ನಗರದ ಪೊಲೀಸ್ ಕವಾಯತು ಮೈದಾನದ ಎದುರಿಗಿರುವ ಪೊಲೀಸ್ ಸಮುದಾಯ ಭವನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಪತ್ರಿಕಾ ದಿನಾಚರಣೆ, ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಸಾಧಕರಿಗೆ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.ಈ ಭವ್ಯ ಸಮಾರಂಭದಲ್ಲಿ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 80 ಕ್ಕಿಂತ ಹೆಚ್ಚು ಅಂಕ ಪಡೆದ 20 ಜನ ಪತ್ರಕರ್ತರ (ಸಂಘದ ಸದಸ್ಯರ) ಮಕ್ಕಳಿಗೆ ಶಾಲು ಹೊದಿಸಿ ಪ್ರಮಾಣ ಪತ್ರ, ಸ್ಮರಣಿಕೆ, ಪ್ರತಿಭಾ ಪುರಸ್ಕಾರ ನೀಡಿ ಪ್ರೋತ್ಸಾಹಿಸಲಾಯಿತು.ಸಸಿಗೆ ನೀರೆರೆಯುವ ಮೂಲಕ ಸಮಾರಂಭವನ್ನು ಉದ್ಘಾಟಿಸಿದ ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲ ಸೌಕರ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ…
ವಿಜಯಪುರದಲ್ಲಿ ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ ವಿಜಯಪುರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ವಿಜಯಪುರ ಜಿಲ್ಲಾ ಘಟಕದಿಂದ ಜಿಲ್ಲೆಯ ಪತ್ರಕರ್ತರ ಪ್ರತಿಭಾವಂತ ಮಕ್ಕಳಿಗೆ ಹೃದಯಸ್ಪರ್ಷಿಯಾಗಿ ಸನ್ಮಾನಿಸಿ ಗೌರವಿಸಲಾಯಿತು.ರವಿವಾರ ಸಂಜೆ ನಗರದ ಪೊಲೀಸ್ ಕವಾಯತು ಮೈದಾನದ ಎದುರಿಗಿರುವ ಪೊಲೀಸ್ ಸಮುದಾಯ ಭವನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಪತ್ರಿಕಾ ದಿನಾಚರಣೆ, ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಸಾಧಕರಿಗೆ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.ಈ ಭವ್ಯ ಸಮಾರಂಭದಲ್ಲಿ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 80 ಕ್ಕಿಂತ ಹೆಚ್ಚು ಅಂಕ ಪಡೆದ 20 ಜನ ಪತ್ರಕರ್ತರ (ಸಂಘದ ಸದಸ್ಯರ) ಮಕ್ಕಳಿಗೆ ಶಾಲು ಹೊದಿಸಿ ಪ್ರಮಾಣ ಪತ್ರ, ಸ್ಮರಣಿಕೆ, ಪ್ರತಿಭಾ ಪುರಸ್ಕಾರ ನೀಡಿ ಪ್ರೋತ್ಸಾಹಿಸಲಾಯಿತು.ಸಸಿಗೆ ನೀರೆರೆಯುವ ಮೂಲಕ ಸಮಾರಂಭವನ್ನು ಉದ್ಘಾಟಿಸಿದ ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲ ಸೌಕರ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ…
ಬಬಲೇಶ್ವರ: ನಿರುದ್ಯೋಗಿ ಯುವಕ ಯುವತಿಯರು ಉದ್ಯೋಗ ಮೇಳದಲ್ಲಿ ಭಾಗವಹಿಸಿ ಉದ್ಯೋಗ ಮೇಳದ ಪ್ರಯೋಜನ ಪಡೆಯಬೇಕೆಂದು ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಕೆ.ಬಿ.ಕುಲಕರ್ಣಿ ಸಲಹೆ ನೀಡಿದರು.ತಾಲ್ಲೂಕಿನ ಮಮದಾಪುರ ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಳೆಯ ವಿದ್ಯಾರ್ಥಿ ಸಂಘ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಹಯೋಗದೊಂದಿಗೆ ನಡೆದ ಉದ್ಯೋಗ ಮೇಳದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಗ್ರಾಮೀಣ ಭಾಗದಲ್ಲಿ ಅಪರೂಪಕ್ಕೆ ನಡೆಯುವಂತಹ ಇಂತಹ ಉದ್ಯೋಗ ಮೇಳದಲ್ಲಿ ಸುತ್ತಮುತ್ತಲಿನ ಗ್ರಾಮಗಳ ಯುವಕ ಯುವತಿಯರು ಭಾಗವಹಿಸಬೇಕು ಎಂದರು.ಸಾನ್ನಿಧ್ಯ ವಹಿಸಿ ಮಾತನಾಡಿದ ಅಭಿನವ ಮುರುಗೇಂದ್ರ ಮಹಾಸ್ವಾಮೀಜಿ, ಗ್ರಾಮ ಪಂಚಾಯತಿ ಅಧ್ಯಕ್ಷ ಮಲ್ಲಿಕಾರ್ಜುನ ಗಂಗೂರ, ಲಕ್ಷ್ಮಣ ತೇಲಿ, ಸದಾಶಿವ ಕಾಖಂಡಕಿಮಠ, ಕೆ. ಡಿ. ತೇಲಿ, ರಾಮು ನಾಯಕ, ಲಕ್ಷ್ಮಣ ಭಜಂತ್ರಿ, ಶಾಂತಾಬಾಯಿ ಹವಾಲ್ದಾರ ಇದ್ದರು.ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಸಿ.ಬಿ ಕುಂಬಾರ ಮಾತನಾಡಿ ವಿದ್ಯಾರ್ಥಿಗಳು ಉದ್ಯೋಗ ಕೌಶಲಗಳನ್ನು ಬೆಳೆಸಿಕೊಳ್ಳಲು ಸಲಹೆ ನೀಡಿದರು.ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಗುರುಪಾದಯ್ಯ ಹಿರೇಮಠ ಮಾತನಾಡಿ ಪ್ರತಿವರ್ಷ ಪದವಿ ಪಡೆಯುತ್ತಿರುವವರ ಸಂಖ್ಯೆ…
ಕಾರ್ಯನಿರತ ಪತ್ರಕರ್ತರ ಸಂಘ, ವಿಜಯಪುರ ಜಿಲ್ಲಾ ಘಟಕದಿಂದ ಆಯೋಜನೆ ವಿಜಯಪುರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಪತ್ರಿಕಾ ದಿನಾಚರಣೆ, ಪ್ರತಿಭಾ ಪುರಸ್ಕಾರ ಹಾಗೂ ಪತ್ರಕರ್ತರಿಗೆ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಜು. ೨೮ರಂದು ಮಧ್ಯಾಹ್ನ ೩ ಗಂಟೆಗೆ ನಗರದ ಪೊಲೀಸ್ ಕವಾಯತು ಮೈದಾನ ಎದುರಿಗಿರುವ ಪೊಲೀಸ್ ಸಮುದಾಯ ಭವನದಲ್ಲಿ ನಡೆಯಲಿದೆ.ಬೃಹತ್ ಕೈಗಾರಿಕೆ, ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ಕಾರ್ಯಕ್ರಮ ಉದ್ಘಾಟಿಸುವರು. ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಮತ್ತು ಎಪಿಎಂಸಿ ಸಚಿವ ಶಿವಾನಂದ ಪಾಟೀಲ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸುವರು. ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಪತ್ರಕರ್ತರಿಗೆ ವಾರ್ಷಿಕ ಪ್ರಶಸ್ತಿ ಪ್ರದಾನ ಮಾಡುವರು.ಈ ಸಮಾರಂಭಕ್ಕೆ ವಿಶೇಷ ಆಹ್ವಾನಿತರಾಗಿ ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಹಾಗೂ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ಆಗಮಿಸುವರು. ಸಂಘದ ಜಿಲ್ಲಾಧ್ಯಕ್ಷ ಸಂಗಮೇಶ ಟಿ. ಚೂರಿ ಅಧ್ಯಕ್ಷತೆ ವಹಿಸುವರು.ಮುಖ್ಯ…
ಮುದ್ದೇಬಿಹಾಳ: ಪ್ರವಾಹ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಕಾಳಗಿ ಗ್ರಾಮ ಮತ್ತು ಮುದೂರ ಗ್ರಾಮಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಬಲ್ ಭೇಟಿ ನೀಡಿ ಪರಿಶೀಲಿಸಿದರು.ನದಿ ಸಮೀಪ ಗ್ರಾಮಸ್ಥರು ಹೋಗದಂತೆ, ದನಕರುಗಳನ್ನು ಬಿಡದಂತೆ ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಗಂಜೀ ಕೇಂದ್ರಗಳನ್ನು ಶುದ್ಧಗೊಳಿಸುವಂತೆ, ಸೊಳ್ಳೆಗಳ ನಿಯಂತ್ರಣಕ್ಕಾಗಿ ಫಾಗಿಂಗ್ ಮಾಡಿಸುವಂತೆ ಸೂಚಿಸಿದರು.ಈ ವೇಳೆ ಸಿಪಿಓ ನಿಂಗಪ್ಪ ಗೋಟೆ, ತಾಲೂಕು ನೂಡಲ ಶಂಕರಗೌಡ ಸೋಮನಾಳ, ತಹಶೀಲ್ದಾರ ಬಲರಾಮ ಕಟ್ಟೀಮನಿ, ತಾಪಂ ಇಓ ಆರ್.ಎಸ್. ಹಿರೇಗೌಡರ, ಸಹಾಯಕ ನಿರ್ದೇಶಕ ಖೂಬಾಸಿಂಗ್ ಜಾಧವ ಸೇರಿದಂತೆ ಮತ್ತೀತರರು ಇದ್ದರು.
ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದ ‘ಹಸಿರು ಸಿರಿ’ ಉದ್ಘಾಟನೆ ವಿಜಯಪುರ: ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆಯ ಜೊತೆಗೆ ಜವಾಬ್ದಾರಿಯೂ ಆಗಬೇಕು. ಪ್ರಕೃತಿಯನ್ನು ಕಾಪಾಡಿದರೆ ತಾಯಿಯನ್ನು ಕಾಪಾಡಿದಂತೆ, ಅದರಂತೆ ಪರಿಸರವನ್ನು ಸಂರಕ್ಷಿಸಬೇಕೆಂದು ಬಿ.ಎಲ್.ಡಿ.ಇ. ಸಂಸ್ಥೆಯ ಅಧ್ಯಕ್ಷರು ಮತ್ತು ಕರ್ನಾಟಕ ಸರ್ಕಾರ ಬೃಹತ್ ಕೈಗಾರಿಕೆ, ಮೂಲಭೂತ ಸೌಲಭ್ಯ ಅಭಿವೃದ್ಧಿ ಸಚಿವ ಡಾ ಎಂ.ಬಿ. ಪಾಟೀಲ ಹೇಳಿದರು.ನಗರದ ಬಿ.ಎಲ್.ಡಿ.ಇ ಸಂಸ್ಥೆಯ ನೂತನ ಆವರಣದಲ್ಲಿನ ಎಸ್. ಬಿ. ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದ ಆವರಣದಲ್ಲಿ ಮಹಾವಿದ್ಯಾಲಯದ ಐಕ್ಯೂಎಸಿ, ಹಸಿರು ಸಿರಿ ಘಟಕ, ವೃಕ್ಷ ಅಭಿಯಾನ ಪ್ರತಿಷ್ಠಾನ, ಮತ್ತು ಅರಣ್ಯ ಇಲಾಖೆ ಸಹಯೋಗದಲ್ಲಿ ಸಸಿ ನೆಡುವ ಮೂಲಕ ‘ಹಸಿರು ಸಿರಿ’ ಘಟಕ ಉದ್ಘಾಟಿಸಿ ಮಾತನಾಡಿದ ಅವರು, ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ ಅದರಂತೆಯೇ ಪ್ರಕೃತಿಯಿಂದಲೇ ಈ ಪ್ರಕೃತಿ. ಮಾನವನು ತನ್ನ ಪ್ರಕೃತಿಯನ್ನು ಕಾಪಾಡಿಕೊಂಡತೆ ಈ ಪರಿಸರ ಪ್ರಕೃತಿಯನ್ನು ಗಿಡ ನೆಡುವ ಮೂಲಕ ಉಳಿಸಿ ಬೆಳೆಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರು ಒಂದೊಂದು ಗಿಡ…
ಸ್ವಪಕ್ಷದ ವಿರುದ್ದವೇ ಅಸಮಾಧಾನ ಹೊರ ಹಾಕಿದ ಅರವಿಂದ ಲಿಂಬಾವಳಿ | ಬಿಜೆಪಿ ಅಧ್ಯಕ್ಷರು & ವಿಪಕ್ಷ ನಾಯಕರ ನಡುವೆ ಸಾಮರಸ್ಯದ ಕೊರತೆ ಬೆಂಗಳೂರು: ವಿಧಾನಸಭೆಯಲ್ಲಿ ವಿರೋಧ ಪಕ್ಷವಾಗಿ ಬಿಜೆಪಿ ಆಡಳಿತ ಪಕ್ಷವನ್ನು ಎದುರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಸಚಿವ, ಬಿಜೆಪಿಯ ಹಿರಿಯ ನಾಯಕ ಅರವಿಂದ ಲಿಂಬಾವಳಿ ಕಿಡಿಕಾರಿದ್ದಾರೆ.ವಿಧಾನನ ಮಂಡಲದ ಮುಂಗಾರು ಅಧಿವೇಶನ ಮುಕ್ತಾಯಗೊಂಡ ಬೆನ್ನಲ್ಲೇ ಎಕ್ಸ್‌ನಲ್ಲಿ ಸುದೀರ್ಘ ಬರಹ ಬರೆದು ಅಸಮಾಧ ಹೊರಹಾಕಿರುವ ಲಿಂಬಾವಳಿ ಆಡಳಿತ ಪಕ್ಷದ ಜೊತೆ ಬಿಜೆಪಿ ನಾಯಕರು ಕೈ ಜೋಡಿಸಿದ್ದಾರೆ ಎಂದು ಆರೋಪಿಸಿದ್ದಾರೆ.“ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನ ಮುಕ್ತಾಯವಾಗಿದೆ. ರಾಜ್ಯ ಸರ್ಕಾರದ ವೈಫಲ್ಯಗಳನ್ನು ಎತ್ತಿ ಹಿಡಿದು ಜನರ ಧ್ವನಿಯಾಗಬೇಕಿದ್ದ ಬಿಜೆಪಿ ವಿರೋಧ ಪಕ್ಷವಾಗಿ ಅದನ್ನು ಮಾಡುವಲ್ಲಿ ಸಂಪೂರ್ಣ ವಿಫಲವಾಗಿದೆ. ಸದನದಲ್ಲಿ ಸರ್ಕಾರದ ಅವ್ಯವಹಾರ, ದುರಾಡಳಿತ, ವೈಫಲ್ಯಗಳನ್ನು ಎತ್ತಿ ಹಿಡಿಯಲು ಅವಕಾಶವಿದ್ದರೂ ನಮ್ಮ ನಾಯಕರು ಈ ಅವಕಾಶವನ್ನು ಬಳಸಿಕೊಳ್ಳುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ” ಎಂದು ಲಿಂಬಾವಳಿ ಹೇಳಿದ್ದಾರೆ.“ಐಟಿ-ಬಿಟಿ ರಾಜಧಾನಿ ಎಂದೇ ಕರೆಸಿಕೊಳ್ಳುವ, ವಿಜ್ಞಾನ ಕ್ಷೇತ್ರದಲ್ಲಿ ದೇಶಕ್ಕೆ ಮಾದರಿಯಾಗಿರುವ ಬೆಂಗಳೂರು…
ಢವಳಗಿ: ಗ್ರಾಮದ ಸರಕಾರಿ ಶಾಲೆ, ಬಸವ ಬಾಲ ಭಾರತಿ ಶಾಲೆ,ಪ್ರೌಢಶಾಲೆ ಸೇರಿದಂತೆ ಎಲ್ಲಾ ಸಮೀಪದ ಹಳ್ಳೂರ ಗ್ರಾಮದಿಂದ ಸುಮಾರು 50 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಾಲೆಗೆ ಬರುತ್ತಿದ್ದವು. ಆದರೆ ಪ್ರತಿ ಶನಿವಾರದಂದು ಶಾಲೆ ಬಿಡುವ ಸಮಯಕ್ಕೆ ಅನುಗುಣವಾಗಿ ಹಳ್ಳೂರ ಗ್ರಾಮದಿಂದ ಬಂದಂತಹ ವಿದ್ಯಾರ್ಥಿಗಳಿಗೆ ಮರಳಿ ಹೋಗಲು ಬಸ್ ಸೌಲಭ್ಯವಿಲ್ಲದೆ ಸಾಯಂಕಾಲದ ವರೆಗೆ ಕಾಯುವ ಸ್ಥಿತಿ ಉಂಟಾಗಿತ್ತು. ಅದನ್ನು ಅರಿತ ಬಸವ ಬಾಲ ಭಾರತಿ ಶಾಲೆಯ ಮುಖ್ಯ ಗುರು ರಮೇಶ ಮೂಲಿಮನಿ ಅವರು ಎಲ್ಲ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಜೊತೆಗೂಡಿ ಮುದ್ದೇಬಿಹಾಳ ಘಟಕದ ವ್ಯವಸ್ಥಾಪಕರಿಗೆ ಕಳೆದ ಶನಿವಾರದಂದು ಮನವಿ ಮಾಡಿದ್ದರು.ಅದಕ್ಕೆ ಸ್ಪಂದಿಸಿದ ಮುದ್ದೇಬಿಹಾಳ ಘಟಕದ ವ್ಯವಸ್ಥಾಪಕ ಮದಬಾವಿ ಅವರು ಮಕ್ಕಳ ಹಾಗೂ ಶಿಕ್ಷಕರ ಸಮಸ್ಯೆಯನ್ನು ಆಲಿಸಿ ಪ್ರತಿ ಶನಿವಾರದಂದು ಮಧ್ಯಾಹ್ನ 12 ಗಂಟೆಗೆ ಮುದ್ದೇಬಿಹಾಳದಿಂದ ಢವಳಗಿ ಮಾರ್ಗವಾಗಿ ಹಳ್ಳೂರ ಗ್ರಾಮಕ್ಕೆ ಬಸ್ ಬಿಟ್ಟು ವಿದ್ಯಾರ್ಥಿಗಳ ಹಿತ ಕಾಪಾಡುವೆ ಎಂದು ಜುಲೈ 27 ಶನಿವಾರದಿಂದ ಬಸ್ ಸಂಪರ್ಕ ಕಲ್ಪಿಸಿದ ವ್ಯವಸ್ಥಾಪಕರಿಗೆ ಧನ್ಯವಾದಗಳನ್ನು ತಿಳಿಸಿ ಬಸ್…
