Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಬಿ.ಎಲ್.ಡಿ.ಇ. ಡೀಮ್ಡ್ ವಿವಿ ಸಮಕುಲಾಧಿಪತಿ ಡಾ. ವೈ. ಎಮ್.ಜಯರಾಜ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ವಚನ ಪಿತಾಮಹ ಶ್ರೀ ಡಾ. ಫ. ಗು. ಹಳಕಟ್ಟಿ ಅವರ ಜನ್ಮದಿನವನ್ನು ಗುರುವಾರ ಶ್ರದ್ಧೆ ಮತ್ತು ಭಕ್ತಿಯಿಂದ ಆಚರಿಸಲಾಯಿತು.ಈ ಕಾರ್ಯಕ್ರಮದ ಅಂಗವಾಗಿ ಡಾ. ಫ. ಗು. ಹಳಕಟ್ಟಿ ಅವರ ಭಾವಚಿತ್ರಕ್ಕೆ ಗಣ್ಯರು ಪೂಜೆ ಸಲ್ಲಿಸಿ ಪುಷ್ಪ ನಮನ ಅರ್ಪಿಸಿದರು.ಈ ಸಂಧರ್ಭದಲ್ಲಿ ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದ ಸಮಕುಲಾಧಿಪತಿ ಡಾ. ವೈ. ಎಮ್. ಜಯರಾಜ ಅವರು ಮಾತನಾಡಿ, ಡಾ. ಫ. ಗು. ಹಳಕಟ್ಟಿ ಅವರು ಬಿ.ಎಲ್.ಡಿ.ಇ ಸಂಸ್ಥೆಯನ್ನು ಸ್ಥಾಪಿಸಿ, ಈ ಭಾಗದ ಜನರಿಗೆ ಶೈಕ್ಷಣಿಕ ಸೌಲಭ್ಯ ಕಲ್ಪಿಸಿದರು. ಅಷ್ಟೇ ಅಲ್ಲ ವಚನ ಸಾಹಿತ್ಯಗಳನ್ನು ಸಂರಕ್ಷಿಸಿ ವಚನಪಿತಾಮಹ ಎಂದು ಖ್ಯಾತರಾಗಿದ್ದಾರೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡು ಸಮಾಜದ ಪ್ರಗತಿಗೆ ಕಾರಣರಾಗಿದ್ದಾರೆ. ಅವರು ನೀಡಿರುವ ಸಾಮಾಜಿಕ ಕೊಡುಗೆ ನಮಗೆಲ್ಲರಿಗೂ ಆದರ್ಶಪ್ರಾಯವಾಗಿದೆ ಎಂದು ಅವರು ಹೇಳಿದರು.ಈ ಸಂದರ್ಭದಲ್ಲಿ ಪರೀಕ್ಷೆ ನಿಯಂತ್ರಣಾಧಿಕಾರಿ ಡಾ. ಎಸ್. ಎಸ್. ದೇವರಮನಿ, ಡೀನ್…
ಬಿ.ಎಲ್.ಡಿ.ಇ ಸಂಸ್ಥೆ, ಅಕ್ಷಯಕಲ್ಪ ಮತ್ತು ಕೃಷಿಕಲ್ಪ ಸಹಯೋಗದ ಕ್ಷೀರ ಯೋಜನೆಯ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರಕ್ಕೆ ಚಾಲನೆ ನೀಡಿದ ಸಿದ್ಧಲಿಂಗ ಶ್ರೀ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಮಾಜದಲ್ಲಿ ಇಂದು ನಾವು ಅಭಿವೃದ್ಧಿ, ಶಿಕ್ಷಣ ಮತ್ತು ಎಲ್ಲ ಸವಲತ್ತುಗಳನ್ನು ಅನುಭವಿಸುತ್ತಿರುವದು ವಚನಪಿತಾಮಹ ಡಾ.ಫ.ಗು.ಹಳಕಟ್ಟಿಯವರ ತ್ಯಾಗ ಮತ್ತು ಶ್ರಮದಿಂದ ಬಂದಿದ್ದಾಗಿದೆ. ಅಂತಹ ಹಳಕಟ್ಟಿಯವರನ್ನು ಸದಾ ಸ್ಮರಿಸುತ್ತಿರುವ ಬಿ.ಎಲ್.ಡಿ.ಇ ಕಾರ್ಯ ಅನುಪಮವಾದುದು ಎಂದು ನಿಡೋಣಿ ವಿರಕ್ತ ಮಠದ ಪ.ಪೂ ಸಿದ್ಧಲಿಂಗ ಶ್ರೀಗಳು ಹೇಳಿದರು.ಬಬಲೇಶ್ವರ ತಾಲೂಕಿನ ನಿಡೋಣಿ ಗ್ರಾಮದ ದಾಶ್ಯಾಳ ರಸ್ತೆಯ ವಿರಕ್ತ ಮಠಕ್ಕೆ ಸೇರಿದ 11 ಎಕರೆ ಜಮೀನಿನಲ್ಲಿ ವಚನಪಿತಾಮಹ ಡಾಫ.ಗು.ಹಳಕಟ್ಟಿ ಅವರ ಜನ್ಮದಿನದಂದು ಬಿ.ಎಲ್.ಡಿ.ಇ ಸಂಸ್ಥೆ, ಅಕ್ಷಯಕಲ್ಪ ಮತ್ತು ಕೃಷಿಕಲ್ಪ ಸಹಯೋಗದಲ್ಲಿ ಕೈಗೊಂಡಿರುವ ಕ್ಷೀರ ಯೋಜನೆಯ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಧಾರವಾಡದಿಂದ ಬಂದ ಹಳಕಟ್ಟಿ ಅವರು ವಿಜಯಪುರದಲ್ಲಿ ಅದ್ಬುತ ಕಾರ್ಯ ಮಾಡಿದ್ದಾರೆ. ಅವರ ನಂತರದ ತಲೆಮಾರುಗಳು ಕೂಡ ಅವರನ್ನು ಸ್ಮರಿಸುವ ಕಾರ್ಯಕ್ಕೆ ಮುಂದಾಗಿರುವುದು ನನಗೆ ಅತೀವ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದಲ್ಲಿರುವ ನಗರ ಆರೋಗ್ಯ ಕೇಂದ್ರ ಮತ್ತು ಹೈಟೆಕ್ ಆಯುರ್ವೇದ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಸಂಜಯ ಕಡ್ಲಿಮಟ್ಟಿ ಅವರಿಗೆ ಅತ್ಯುತ್ತಮ ಆಯುರ್ವೇದ ವೈದ್ಯ ಪ್ರಶಸ್ತಿ ಲಭಿಸಿದೆ.ಮೈಸೂರಿನಲ್ಲಿ ಬುಧವಾರ ರಾಷ್ಟ್ರೀಯ ವೈದ್ಯರ ದಿನಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಜೆ.ಎಸ್.ಎಸ್ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಈ ಪ್ರಶಸ್ತಿ ನೀಡಿ ಗೌರವಿಸಿದೆ.ಆಯುರ್ವೇದ ವೈದ್ಯಕೀಯ ಕ್ಷೇತ್ರದಲ್ಲಿ ಸಲ್ಲಿಸಿರುವ ಅತ್ಯುತ್ತಮ ಸೇವೆಗಾಗಿ ಈ ಪ್ರಶಸ್ತಿಯನ್ನು ಜೆ.ಎಸ್.ಎಸ್ ಮಹಾವಿದ್ಯಾಪೀಠದ ನಿರ್ದೇಶಕ ಆರ್. ಮಹೇಶ ಪ್ರದಾನ ಮಾಡಿದರು.ಈ ಸಂದರ್ಭದಲ್ಲಿ ಆಯುರ್ವೇದ ಕಾಲೇಜಿನ ಪ್ರಾಚಾರ್ಯ ಡಾ. ಸರಬೇಶ್ವರ ಕರ್, ಉಪಪ್ರಾಚಾರ್ಯ ಡಾ. ಶಿವಪ್ರಸಾದ ಹುಡೇದ, ಡಾ. ಶ್ರೀಹರಿ ಮುಂತಾದವರು ಉಪಸ್ಥಿತರಿದ್ದರು.ಡಾ. ಸಂಜಯ ಕಡ್ಲಿಮಟ್ಟಿ ಅವರಿಗೆ ಪ್ರಶಸ್ತಿ ಲಭಿಸಿರುವುದಕ್ಕೆ ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ ಮತ್ತು ಸಚಿವ ಎಂ. ಬಿ. ಪಾಟೀಲ, ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ, ರಜಿಸ್ಟ್ರಾರ್ ಡಾ. ಆರ್. ವಿ. ಕುಲಕರ್ಣಿ,…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕೇಂದ್ರ ಸಹಕಾರ ಸಚಿವಾಲಯ ಸ್ಥಾಪನೆಯಾಗಿ 05 ವರ್ಷಗಳನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ‘ಸಹಕಾರದಿಂದ ಸಮೃದ್ಧಿ’ ಎಂಬ ಧ್ಯೇಯ ವಾಕ್ಯದೊಂದಿಗೆ, ಜೂ.01 ರಂದು ʼಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ., ಬೆಂಗಳೂರು, ವಿಜಯಪುರ ಸೌಹಾರ್ದ ಸಹಕಾರಿಗಳ ಒಕ್ಕೂಟ ನಿ., ವಿಜಯಪುರ ಹಾಗೂ ಶಾಂತಿನಿಕೇತನ ಶಿಕ್ಷಣ ಸಂಸ್ಥೆ, ವಿಜಯಪುರʼ ಇವರುಗಳ ಸಹಯೋಗದೊಂದಿಗೆ “ಸಹಕಾರ ವಿಚಾರ ಸಂಕೀರ್ಣ” ಕಾರ್ಯಕ್ರಮವನ್ನು ಶಾಂತಿನಿಕೇತನ ಕಾಲೇಜು ಭವನದಲ್ಲಿ ಆಯೋಜಿಸಲಾಗಿತ್ತು.ಕಾರ್ಯಕ್ರಮದ ಉದ್ಘಾಟನೆಯನ್ನು ಸುರೇಶ ಬಿರಾದಾರ, ಅಧ್ಯಕ್ಷರು ಶಾಂತಿನಿಕೇತನ ಶಿಕ್ಷಣ ಸಂಸ್ಥೆ ಇವರು ನೆರವೇರಿಸಿದರು. ಅಧ್ಯಕ್ಷತೆಯನ್ನು ಸಂಯುಕ್ತ ಸಹಕಾರಿಯ ನಿರ್ದೇಶಕ ಸಂಜಯ ಪಾಟೀಲ ವಹಿಸಿದ್ದರು.ಅತಿಥಿಗಳಾಗಿ ವಿಜಯಪುರ ಸೌಹಾರ್ದ ಸಹಕಾರಿಗಳ ಒಕ್ಕೂಟ ನಿ. ಉಪಾಧ್ಯಕ್ಷ ಚಂದ್ರಶೇಖರ ಕವಟಗಿ, ಹಾಗೂ ಒಕ್ಕೂಟದ ನಿರ್ದೇಶಕರಾದ ಸಿದ್ಧು ಮಲ್ಲಿಕಾರ್ಜುನ ಮಠ, ಅರುಣ ಎಸ್. ಮಠ, ಅರುಣ ಆರ್. ವಾರದ ಉಪಸ್ಥಿತರಿದ್ದರು.ʼಸಹಕಾರ ಕ್ಷೇತ್ರದ ಪರಿಚಯ ಮತ್ತು ಕಾರ್ಯವೈಖರಿಗಳುʼ* ವಿಷಯದ ಕುರಿತು ಸಂಪನ್ಮೂಲ ವ್ಯಕ್ತಿ ಆರ್.ಎಮ್. ಬಣಕಾರ, ನಿವೃತ್ತ ಉಪಪ್ರಧಾನ ವ್ಯವಸ್ಥಾಪಕರು, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್…
ಲೇಖನ- ಡಾ. ರಾಜಶೇಖರ ನಾಗೂರಸಂಚಾಲಕರುನಮ್ಮ ಕಥಾ ಅರಮನೆ ಉದಯರಶ್ಮಿ ದಿನಪತ್ರಿಕೆ ಪ್ರೀತಿ ಎಂದರೆ ಒಬ್ಬರ ಬದುಕಿಗೆ ಬೆಳಕಾಗಬೇಕಾದ ಭಾವನೆ. ಆದರೆ ಇತ್ತೀಚಿನ ಕೆಲವು ಘಟನೆಗಳು ಉದಾಹರಣೆಗೆ ಪುಣೆಯ ಲೋಹಗಡದಲ್ಲಿ ಕೆತನ್ ಪ್ರಕರಣವಾಗಲಿ, ಉತ್ತರ ಭಾರತದ ರಾಜಾ ರಘುವಂಶಿ–ಸೋನಂ ಪ್ರಕರಣವಾಗಲಿ, ಆ ಬೆಳಕನ್ನೇ ಕತ್ತಲೆಯಾಗಿ ಮಾರ್ಪಡಿಸಿವೆ. ಪ್ರೀತಿಯ ಹೆಸರಿನಲ್ಲಿ ಕೈ ಹಿಡಿದವರು, ಮದುವೆಯ ಕನಸು ತೋರಿಸಿದವರು, ಕೊನೆಗೆ ಅದೇ ನಂಬಿಕೆಯನ್ನು ಆಯುಧವನ್ನಾಗಿ ಬಳಸಿದ್ದಾರೆ ಎಂಬ ಆರೋಪಗಳಿರುವ ಪ್ರಕರಣಗಳು ಸಮಾಜವನ್ನು ತೀವ್ರವಾಗಿ ನೋಯಿಸಿವೆ. ಇಂತಹ ಪ್ರಕರಣಗಳಲ್ಲಿ ನ್ಯಾಯಾಲಯದ ಅಂತಿಮ ತೀರ್ಪು ಬರುವವರೆಗೆ ಆರೋಪಗಳನ್ನು ಸತ್ಯವೆಂದು ಪರಿಗಣಿಸಲಾಗುವುದಿಲ್ಲ. ಆದರೂ ಅವು ಸಂಬಂಧಗಳಲ್ಲಿ ನಂಬಿಕೆ, ಪ್ರಾಮಾಣಿಕತೆ ಮತ್ತು ಸುರಕ್ಷತೆ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎಬ್ಬಿಸುತ್ತವೆ.ಒಬ್ಬ ವ್ಯಕ್ತಿ ತನ್ನ ಹೃದಯವನ್ನು ಯಾರಿಗಾದರೂ ಸಂಪೂರ್ಣವಾಗಿ ಪ್ರೀತಿಯಲ್ಲಿ ಮಾತ್ರ ಒಪ್ಪಿಸುತ್ತಾನೆ. ತನ್ನ ಕನಸುಗಳನ್ನು, ತನ್ನ ಭವಿಷ್ಯವನ್ನು, ತನ್ನ ನಾಳೆಯನ್ನು ಆ ವ್ಯಕ್ತಿಯ ಕೈಗೆ ಕೊಡುತ್ತಾನೆ. ಆದರೆ ಅದೇ ಕೈಗಳು ಮೋಸದ ಬಲೆಯಾಗಿದ್ದರೆ, ಸಾಯುವುದು ಕೇವಲ ಒಂದು ದೇಹವಲ್ಲ, ಒಂದು ತಾಯಿಯ ನಗು,…
ನೂತನ ಅಧ್ಯಕ್ಷ ವೆಂಕಟೇಶ್ ವಿಶ್ವಾಸ, ಶಾಸಕ ಅನಿಲ್ ಚಿಕ್ಕಮಾದು ವಿರುದ್ಧ ವಾಗ್ದಾಳಿ ಉದಯರಶ್ಮಿ ದಿನಪತ್ರಿಕೆ ಎಚ್ ಡಿ ಕೋಟೆ: 2028 ವಿಧಾನಸಭೆ ಚುನಾವಣೆಯಲ್ಲಿ ಹೆಚ್ ಡಿ ಕೋಟೆ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಅಭ್ಯರ್ಥಿ ಕಣಕ್ಕಿಳಿಯೋದು ಪಕ್ಕಾ, ಶಾಸಕರಾಗೋದು ಅಷ್ಟೇ ಸತ್ಯ, ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ತಾಲೂಕು ಬಿಜೆಪಿ ಮಂಡಲದ ನೂತನ ಅಧ್ಯಕ್ಷ ವೆಂಕಟೇಶ್ ಹೇಳಿದರು.ಪಟ್ಟಣದ ಪ್ರವಾಸಿಮಂದಿರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಪಕ್ಷ ನನಗೆ ಜವಾಬ್ದಾರಿ ಕೊಟ್ಟಿದ್ದು, ಅದನ್ನು ಸಮರ್ಥವಾಗಿ ನಿಭಾಯಿಸಿಕೊಂಡು ಹೋಗುತ್ತೇನೆ. ತಳಮಟ್ಟದಿಂದ ಪಕ್ಷ ಸಂಘಟಿಸಲು ಪ್ರತಿ ಹಳ್ಳಿ ಹಳ್ಳಿಗೂ ಭೇಟಿ ನೀಡಿ ಕಾರ್ಯಕರ್ತರ ಕುಂದು ಕೊರತೆ ಆಲಿಸಿ, ಅವನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತೇನೆ. ಮುಂಬರುವ ವಿಧಾನಸಭೆ ಚುನಾವಣೆಯ ಗೆಲುವಿನ ಮೆಟ್ಟಿಲು ಆಗಿರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಪಕ್ಷ 50 ಸಾವಿರ ಮತ ಪಡೆದು ಎರಡನೇ ಸ್ಥಾನಕ್ಕೆ ಬಂದಿತ್ತು. ಹೀಗಾಗಿ 2028 ವಿಧಾನಸಭೆ…
ಗುತ್ತಿಗೆದಾರನ ಕರಾಮತ್ತು | ಬಡವರಿಗಿಲ್ಲಾ ಇಂದಿರಾ | ಹೊಟ್ಟೆತುಂಬಾ ಊಟ | ಸ್ವಚ್ಚತೆ ಇಲ್ಲಿ ಮರಿಚಿಕೆ ಉದಯರಶ್ಮಿ ದಿನಪತ್ರಿಕೆ ವರದಿ: ಜಿ.ಪಿ. ಘೋರ್ಪಡೆತಾಳಿಕೋಟೆ: ಬಡವರಿಗೆ ಕೂಲಿ ಕಾರ್ಮಿಕರಿಗೆ ಕೈಗೆಟಕುವ ದರದಲ್ಲಿ ಹೊಟ್ಟೆತುಂಬಾ ಊಟ ಸಿಗಲೆಂಬ ಉದ್ದೇಶದಿಂದ ಮಹತ್ವಾಕಾಂಕ್ಷೀ ಯೋಜನೆಯ ಮೂಲಕ ರಾಜ್ಯದೆಲ್ಲಡೆ ಇಂದಿರಾ ಕ್ಯಾಂಟಿನ್ ಪ್ರಾರಂಬಿಸಿದ್ದರೆ ತಾಳಿಕೋಟೆಯಲ್ಲಿಯ ಇಂದಿರಾ ಕ್ಯಾಂಟಿನ್ ಗುತ್ತಿಗೆದಾರನ ಕರಾಮತ್ತಿನಿಂದ ಬಡವರಿಗೆ ಊಟವೇ ಸಿಗದಂತಹ ಪರಸ್ಥಿತಿ ಎದುರಾಗಿದೆ.ಇಂದು ಕ್ಯಾಂಟಿನ್ ಓಪನ್ ಆಗಿದ್ದರೆ ನಾಳೆ ಬಂದ್ ಆಗಿರುತ್ತದೆ ದಿನಕ್ಕೆ ಕನಿಷ್ಠ ಬೆಳಿಗ್ಗೆ ೩೦೦ ಜನರಿಗೆ ಉಪಹಾರ ಮಧ್ಯಾಹ್ನ ೩೦೦ ಜನರಿಗೆ ಊಟ ಸಂಜೆ ೩೦೦ ಜನರಿಗೆ ಊಟವೆಂಬ ನಿಯಮವಿದ್ದರೂ ಕೂಡಾ ಎಲ್ಲವನ್ನು ಗಾಳಿಗೆ ತೋರಲಾಗಿದ್ದು ಮೊದಲು ಬಂದವರಿಗೆ ಮಾತ್ರ ಆದ್ಯತೆ ಎಂಬಂತಾಗಿದೆ.ಬೆಳಿಗ್ಗೆ ೮ ಗಂಟೆಗೆ ಪ್ರಾರಂಭವಾದರೆ ಅರ್ದಗಂಟೆಯಲ್ಲಿ ಸುಮಾರು ೫೦ ಜನರಿಗೆ ಉಪಹಾರ ಸಿಗುವದೇ ಕಷ್ಟವಾಗಿದೆ ಮದ್ಯಾಹ್ನ ತೆರೆದರೆ ಸಂಜೆ ತೆರೆಯುವದಿಲ್ಲಾ ಸಂಜೆ ತೆರೆದರೆ ಮದ್ಯಾಹ್ನ ತೆರೆಯುವದಿಲ್ಲಾ, ಇದು ಇಂದಿರಾ ಕ್ಯಾಂಟಿನ್‌ಗೆ ಬಂದ ದುರ್ಗತಿಯಾಗಿದೆ.ಇಂದಿರಾ ಕ್ಯಾಂಟಿನ್‌ಗೆ ಆಗಮಿಸುವ ಗ್ರಾಹಕರಿಗೆ ಶುದ್ದ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ೨೦೨೬-೨೭ನೇ ಶೈಕ್ಷಣಿಕ ಸಾಲಿನಲ್ಲಿ ವೃತ್ತಿಪರ ಹಾಗೂ ತಾಂತ್ರಿಕ ಕೋರ್ಸುಗಳಿಗೆ ಪ್ರವೇಶ ಪಡೆಯುವ ಅಲ್ಪಸಂಖ್ಯಾತ ಸಮುದಾಯದ ಅರ್ಹ ವಿದ್ಯಾರ್ಥಿಗಳಿಂದ ಶುಲ್ಕ ಮರುಪಾವತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಮೆಟ್ರಿಕ್ ನಂತರದ ಪದವಿ ಪೂರ್ವ, ಪದವಿ, ಸ್ನಾತಕೋತ್ತರ, ವೃತ್ತಿಪರ ಹಾಗೂ ಎಂ.ಫಿಲ್ ಮತ್ತು ಪಿ.ಎಚ್.ಡಿ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಪೋರ್ಟಲ್ (ಎಸ್.ಎಸ್.ಪಿ) ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲಬಹುದಾಗಿದೆ. ಅರ್ಹ ಅಭ್ಯರ್ಥಿಗಳು ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿವೇತನಕ್ಕಾಗಿ ಸೆಪ್ಟೆಂಬರ್೩೦ರೊಳಗಾಗಿ hಣಣಠಿs://ssಠಿ.ಠಿosಣmಚಿಣಡಿiಛಿ.ಞಚಿಡಿಟಿಚಿಣಚಿಞಚಿ.gov.iಟಿ ಜಾಲತಾಣದಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕೃತ ಜಾಲತಾಣ https://dom.karnataka.gov.inಅಥವಾ ಸಮೀಪದ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರಕಟಣೆ ತಿಳಿಸಿದೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಕೃಷಿ ತರಬೇತಿ ಕೇಂದ್ರ (ಡಿಎಟಿಸಿ) ರೈತ ಹಾಗೂ ರೈತ ಮಹಿಳೆಯರಿಗಾಗಿ ಸಾವಯವ ಕೃಷಿ, ಈರುಳ್ಳಿ ಹಾಗೂ ವೀಳ್ಯದೆಲೆ ಬೆಳೆಗಳ ಸುಧಾರಿತ ಬೇಸಾಯ ಪದ್ಧತಿಗಳು ವಿಷಯದ ಕುರಿತು ವಿಶೇಷ ತರಬೇತಿಯು ಜುಲೈ ೨ರಂದು ಬೆಳಿಗ್ಗೆ ೧೦ ಗಂಟೆಗೆ ಕೂಡಗಿ ಪಿಕೆಪಿಎಸ್ ನಲ್ಲಿ ಆಯೋಜಿಸಲಾಗಿದೆ. ತರಬೇತಿ ಕಾರ್ಯಕ್ರಮದಲ್ಲಿ ಸಾವಯವ ಕೃಷಿಯ ಮಹತ್ವ, ಈರುಳ್ಳಿ ಹಾಗೂ ವೀಳ್ಯೆದೆಲೆ ಬೆಳೆಗಳ ವೈಜ್ಞಾನಿಕ ಬೇಸಾಯ ಪದ್ಧತಿಗಳು, ಪೋಷಕಾಂಶಗಳ ಸಮರ್ಪಕ ನಿರ್ವಹಣೆ, ಕೀಟ ಹಾಗೂ ರೋಗಗಳ ಸಮಗ್ರ ನಿರ್ವಹಣೆ ಸೇರಿದಂತೆ ವಿವಿಧ ಕೃಷಿ ತಾಂತ್ರಿಕ ವಿಷಯಗಳ ಕುರಿತು ಕೃಷಿ ತಜ್ಞರು ರೈತರಿಗೆ ಸಮಗ್ರ ಮಾಹಿತಿ ನೀಡಲಿದ್ದಾರೆ. ಕೂಡಗಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಕೃಷಿ ತಜ್ಞರ ಮಾರ್ಗದರ್ಶನ ಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕೃಷಿ ಅಧಿಕಾರಿ ಫಾತೀಮಾ ಬಾನು ಸುತಾರ್ ಮೊ: ೮೨೭೭೯೩೦೬೧೯ ಸಂಪರ್ಕಿಸಬಹುದು ಎಂದು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಉಪ ನಿರ್ದೇಶಕರ ಪ್ರಕಟಣೆ ತಿಳಿಸಿದೆ.
ಗ್ರಾಮೀಣ ಅಭಿವೃದ್ಧಿ ಕಾರ್ಯಗಳ ಪರಿಶೀಲನೆ | ಸ್ವಚ್ಛತೆ-ಮೂಲಸೌಕರ್ಯ ಹಾಗೂ ಉದ್ಯೋಗ ಸೃಜನೆಗೆ ಆದ್ಯತೆ ನೀಡಲು ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜು.೧ರಂದು ಬಸವನ ಬಾಗೇವಾಡಿ ತಾಲೂಕಿನ ಯರನಾಳ ಗ್ರಾಮ ಪಂಚಾಯಿತಿಗೆ ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿಗಳಾದ ಪ್ರಕಾಶ ವಡ್ಡರ ಅವರು ಭೇಟಿ ನೀಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಕಾಮಗಾರಿಗಳನ್ನು ಹಾಗೂ ಸಾರ್ವಜನಿಕ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿದರು.ಗ್ರಾಮದ ಕೃಷಿ ಮಾರುಕಟ್ಟೆಗೆ ತೆರಳಿ ಅಲ್ಲಿನ ಗೋದಾಮು ಹಾಗೂ ಮಳಿಗೆಗಳನ್ನು ವೀಕ್ಷಿಸಿದರು.ಸಾರ್ವಜನಿಕರಿಗೆ ಉತ್ತಮ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ಮಾರುಕಟ್ಟೆ ಪ್ರದೇಶದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವುದು ಅತ್ಯಂತ ಮುಖ್ಯವಾಗಿದ್ದು, ಸ್ವಚ್ಛತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.ಗ್ರಾಮ ಪಂಚಾಯಿತಿ ಕಚೇರಿಗೆ ಭೇಟಿ ನೀಡಿ ಪಂಚಾಯಿತಿಯ ಆಡಳಿತಾತ್ಮಕ ಕಾರ್ಯಗಳ ಪ್ರಗತಿ ಪರಿಶೀಲನೆ ನಡೆಸಿದರು. ಗ್ರಾಮ ಪಂಚಾಯಿತಿಯ ತೆರಿಗೆ ವಸೂಲಾತಿಯನ್ನು ಹೆಚ್ಚಿಸುವ ಮೂಲಕ ಪಂಚಾಯಿತಿಯ ಆದಾಯವನ್ನು ಸದೃಢಗೊಳಿಸಬೇಕು ಎಂದು ಬಿಲ್ ಕಲೆಕ್ಟರ್‌ಗಳಿಗೆ ಸೂಚನೆ ನೀಡಿದರು. ಗ್ರಾಮ ಸ್ವಚ್ಛತೆ, ಕುಡಿಯುವ ನೀರು ಸೇರಿದಂತೆ ಸಾರ್ವಜನಿಕ ಮೂಲಸೌಕರ್ಯಗಳ ನಿರ್ವಹಣೆಗೆ ಹೆಚ್ಚಿನ…
