Author: editor.udayarashmi@gmail.com

ವಿಜಯಪುರ ವಿಜಯಪುರ ಜಿಲ್ಲೆಯ ಹುಲ್ಲೂರು ( ಜೆಟ್ಟಗಿ ) ಉಪಕೇಂದ್ರದಲ್ಲಿ ಹೊಸದಾಗಿ ನಿರ್ಮಿಸಲಾಗುತ್ತಿರುವ ೧೧೦ ಕೆ.ವಿ ಬ.ಬಾಗೇವಾಡಿ-ಮುದ್ದೇಬಿಹಾಳ ಮಾರ್ಗದ ಗೋಪುರದಲ್ಲಿ ಜಂಪ ಅಳವಡಿಸುವ ಸಲುವಾಗಿ ದಿನಾಂಕ ೨೯-೦೭-೨೦೨೪ ಬೆಳಿಗ್ಗೆ ೦೭:೦೦ ಘಂಟೆಯಿಂದ ೦೯:೩೦ ಘಂಟೆಯವರೆಗೆ ಮಾರ್ಗ ಮುಕ್ತತೆಯ ಅವಶ್ಯಕತೆ ಇರುವುದರಿಂದ ೧೧೦ ಕೆ.ವಿ ಉಪಕೇಂದ್ರ ಹಿರೇಮುರಾಳ, ೧೧೦ಕೆ.ವಿ ಕೆ.ಎನ್ ಸೋಲಾರ್ ಮುದ್ದೇಬಿಹಾಳ, ೧೧೦ಕೆ.ವಿ ಕೋಳೂರು, ೧೧೦ಕೆ.ವಿ ಬಾಲಾಜಿ ಶರ‍್ಸ ಹಾಗೂ ೧೧೦ ಕೆ.ವಿ ಮುದ್ದೇಬಿಹಾಳ ಉಪಕೇಂದ್ರದಿಂದ ಹೊರಹೋಗುವ ೩೩ ಕೆ.ವಿ ಉಪಕೇಂದ್ರಗಳ (ಢವಳಗಿ, ತಂಗಡಗಿ & ನಾಲತವಾಡ) ಮಾರ್ಗಗಳಲ್ಲಿ ಮತ್ತು ಸದರಿ ಎಲ್ಲಾ ಉಪಕೇಂದ್ರಗಳಿಂದ ಹೊರಹೋಗುವ ಎಲ್ಲ ೧೧ ಕೆ.ವಿ ಮಾರ್ಗಗಳಿಗೆ ನಿರಂತರ ಜ್ಯೋತಿ ಮಾರ್ಗಗಳು, ನೀರು ಸರಬರಾಜು ಮಾರ್ಗಗಳು, ಕೃಷಿ ನೀರಾವರಿ ಮಾರ್ಗಗಳು, ಹಾಗೂ ಗ್ರಾಮಗಳಿಗೆ ವಿದ್ಯುತ್ ಪೂರೈಕೆ ವ್ಯತ್ಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಬಸವನಬಾಗೇವಾಡಿ ಹೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರು ಕೋರಿದ್ದಾರೆ.

Read More

ವಿಜಯಪುರ: ಐತಿಹಾಸಿಕ ವಿಜಯಪುರ ನಗರವನ್ನು ಅಂತರರಾಷ್ಟ್ರೀಯ ಮಟ್ಟದ ಪ್ರವಾಸಿ ತಾಣವಾಗಿ ಅಭಿವೃದ್ದಿಪಡಿಸುವ ನಿಟ್ಟಿನಲ್ಲಿ ತಾಜಬಾವಡಿ ಸುತ್ತಲಿನ ಪ್ರದೇಶದ ಅತಿಕ್ರಮಣವನ್ನು ಮಹಾನಗರ ಪಾಲಿಕೆ ವತಿಯಿಂದ ತೆರವುಗೊಳಿಸಲಾಯಿತು.ಐತಿಹಾಸಿಕ ತಾಜಬಾವಡಿ ಹತ್ತಿರದ ಸುತ್ತಮುತ್ತಲಿನ ಸಾರ್ವಜನಿಕ ರಸ್ತೆ, ಸರ್ಕಾರಿ ಜಾಗೆ ಮೆಲೆ ಅನಧಿಕೃತವಾಗಿ ಒತ್ತು ಮಾಡಿ ನಿರ್ಮಿಸಿದ ಕಟ್ಟಡಗಳ ಭಾಗ- ರಚನೆಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ಮಹಾನಗರ ಪಾಲಿಕೆ ವತಿಯಿಂದ ಶುಕ್ರವಾರ ಕೈಗೊಳ್ಳಲಾಯಿತು. ಅನಧಿಕೃತವಾಗಿ ಒತ್ತುವರಿ ಮಾಡಿ ನಿರ್ಮಿಸಿದ ಕಟ್ಟಡಗಳ ಭಾಗ-ರಚನೆಗಳನ್ನು ತೆರವುಗೊಳಿಸಿ ಸಾರ್ವಜನಿಕ ಹಿತದೃಷ್ಟಿಯಿಂದ ರಸ್ತೆ ಉನ್ನತೀಕರಿಸುವ ಕಾರ್ಯ ಕೈಗೊಳ್ಳುವುದು ಅವಶ್ಯಕವಿದ್ದ ಕಾರಣ ಈಗಾಗಲೇ ರಸ್ತೆ ಅತಿಕ್ರಮಣ ಮಾಡಿ ಕಟ್ಟಡ ನಿರ್ಮಿಸಿದ ಭಾಗಗಳನ್ನು ತೆರವುಗೊಳಿಸುವಂತೆ ನೋಟಿಸ್ ನೀಡಿ ಸೂಚನೆ ಸಹ ನೀಡಲಾಗಿತ್ತು.ಈ ಸಂದರ್ಭದಲ್ಲಿ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ತೆರವು ಕಾರ್ಯಾಚರಣೆ ಪರಿಶೀಲನೆ ನಡೆಸಿ, ಐತಿಹಾಸಿಕ ತಾಜ್‌ಬಾವಡಿ ಹಾಗೂ ಸುತ್ತಮುತ್ತಲಿನ ಪ್ರದೇಶವನ್ನು ಸಂರಕ್ಷಣೆ ಮಾಡಲು ವರ್ಲ್ಡ ಮಾನುಮೆಂಟ್ ಫಂಡ್ ಇಂಡಿಯಾ ಅಸೋಸಿಯೇಶನ್ ಸಂಸ್ಥೆ ನಿರ್ಧರಿಸಿದ್ದು, ಈ ಕಾರ್ಯಕ್ಕೆ ಟಿಸಿಎಸ್ ಫೌಂಡೇಶನ್ ಸಂಸ್ಥೆ ಸಿ.ಎಸ್.ಆರ್. ನಿಧಿಯಡಿ ಅಭಿವೃದ್ದಿಗೊಳಿಸಲು ಉದ್ದೇಶಿಸಲಾಗಿದೆಮುಂಬರುವ…

Read More

ವಿಜಯಪುರ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿಯಲ್ಲಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ-ಕಾಲೇಜ್ ಹಾಗೂ ಮೌಲಾನಾ ಆಝಾದ್ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕ-ಶಿಕ್ಷಕರ ಹುದ್ದೆಗಳಿಗೆ ಆಸಕ್ತ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ದಿನಾಂಕ : ೩೧-೦೭-೨೦೨೪ ಕೊನೆಯ ದಿನಾಂಕವಾಗಿದ್ದು, ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಆಯಾ ಶಾಲೆಗಳ ಪ್ರಾಂಶುಪಾಲರನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯಪುರ: ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಅವರು ಜು.೨೯ ಹಾಗೂ ೩೦ರಂದು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.ಜು.೨೯ರಂದು ಬೆಳಿಗ್ಗೆ ೧೦ ರಿಂದ ಸಂಜೆ ೫ ಗಂಟೆವರೆಗೆ ವಸತಿ ಶಾಲೆ-ನಿಲಯ, ಜಿಲ್ಲಾ ಆಸ್ಪತ್ರೆ, ಅಂಗನವಾಡಿ ಮಕ್ಕಳ ಪಾಲನಾ ಸಂಸ್ಥೆ ಹಾಗೂ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ವಿಜಯಪುರದಲ್ಲಿ ವಾಸ್ತವ್ಯ ಮಾಡಲಿದ್ದಾರೆ.ಜು.೩೦ರಂದು ಬೆಳಿಗ್ಗೆ ೧೦-೩೦ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ ೧೨-೩೦ರಿಂದ ಸಂಜೆ ೫ ಗಂಟೆಯವರೆಗೆ ವಿವಿಧ ವಸತಿ ಶಾಲೆಗಳಿಗೆ, ಅಂಗನವಾಡಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Read More

ವಿಜಯಪುರ: ೧೧೦ ಕೆವಿ ಝಳಕಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕಂಟ್ರೋಲ್ ರೂಂ ವಿಸ್ತರಣೆ ಮಾಡುವ ಜಾಗದಲ್ಲಿ ಕಂಟ್ರೋಲ್ ಕೇಬಲ್ ಇದ್ದಿದ್ದರಿಂದ ಕಂಟ್ರೋಲ್ ಕೇಬಲ್ ಸ್ಥಳಾಂತರಿಸುವ ಕಾಮಗಾರಿ ಕೈಗೊಂಡಿರುವದರಿಂದ ಜುಲೈ ೨೭ ರಂದು ಮಧ್ಯಾಹ್ನ ೧೨ ಗಂಟೆಯಿಂದ ಸಂಜೆ ೬ ರವರಿಗೆ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಆಗುವ ಎಲ್ಲ ೧೧ ಕೆವಿ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಸದರಿ ಮಾರ್ಗಗಳ ಮೇಲೆ ಬರುವ ಗ್ರಾಹಕರು ಸಾರ್ವಜನಿಕರು ಸಹಕರಿಸಬೇಕು ಎಂದು ಇಂಡಿ ಹೆಸ್ಕಾಂ ಕಾರ್ಯ ಮತ್ತು ಪಾಲನಾ ವಿಭಾಗದ ಕಾರ್ಯ ನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿಜಯಪುರ: ವಿಜಯಪುರ ನಗರಕ್ಕೆ ಕೋಲ್ಹಾರ ಪಟ್ಟಣದ ಹತ್ತಿರ ಇರುವ ಕೃಷ್ಣಾ ನದಿಯಿಂದ ಸಗಟು ಕುಡಿಯುವ ನೀರು ಸರಬರಾಜು ಮಾಡುವ ವ್ಯವಸ್ಥೆ ಕಲ್ಪಿಸಲಾಗಿದೆ. ಕೋಲ್ಹಾರ ಮೂಲ ಸ್ಥಾವರದÀಲ್ಲಿ ನೀರು ಶುದ್ಧೀಕರಣ ಘಟಕಇದ್ದು, ಘಟಕದಲ್ಲಿ ಪಿ.ಎ.ಸಿ ಪೌಡರ ಮತ್ತು ಬ್ಲಿಚಿಂಗ್ ರಾಸಾಯನಿಕಗಳನ್ನು ಅಗತ್ಯಗನುಗುಣವಾಗಿ ನೀರಿನಲ್ಲಿ ಸೇರಿಸಿ ಶುದ್ಧೀಕರಿಸಿ, ಶುದ್ಧೀಕರಿಸಿದ ನೀರಿಗೆ ಲಿಕ್ವಿಡ್ ಕ್ಲೋರಿನ್ ಗ್ಯಾಸ ಅಗತ್ಯಗನುಗುಣವಾಗಿ ಸೇರಿಸಿ ಜೈವಿಕತ್ವಗಳನ್ನು ನಾಶಪಡಿಸಿ ವಿಜಯಪುರ ನಗರದ ಸಾರ್ವಜನಿಕರಿಗೆ ಕುಡಿಯಲು ಸರಬರಾಜು ಮಾಡಲಾಗುತ್ತಿದೆ.ಪ್ರಸ್ತುತ, ವಿಜಯಪುರ ನಗರಕ್ಕೆ ನೀರು ಸರಬರಾಜು ಮಾಡುವ ಆಲಮಟ್ಟಿ ಹಿನ್ನೀರಿಗೆ ಜಲಾಶಯದ ಜಲಾನಯನ ಪ್ರದೇಶದಲ್ಲಿ ಮಳೆಯಾಗಿದ್ದು, ಹೊಸ ನೀರು ಸೇರ್ಪಡೆಗೊಂಡಿರುವ ಕಾರಣ ವಿಜಯಪುರ ನಗರದ ಸಾರ್ವಜನಿಕರು ನೀರನ್ನು ಕಾಯಿಸಿ ಕುಡಿಯಬೇಕು ಎಂದು ಕರ್ನಾಟಕ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರ ಪ್ರಕಟಣೆ ತಿಳಿಸಿದೆ.

Read More

ವಿಜಯಪುರ: ಜಿಲ್ಲಾ ಕೃಷಿ ತರಬೇತಿ ಕೇಂದ್ರದ ವತಿಯಿಂದ ಜುಲೈ ೩೦ ರಂದು ತಾಳಿಕೋಟೆ ಹಾಗೂ ವಿಜಯಪುರ ತಾಲೂಕಿನ ರೈತರಿಗೆ ‘ವಿವಿಧ ಬೆಳೆಗಳಲ್ಲಿ ಸೂಕ್ಷ್ಮ ನೀರಾವರಿ ಘಟಕದ ಉಪಯೋಗಗಳು ಅಳವಡಿಕೆ ಹಾಗೂ ನಿರ್ವಹಣೆ’ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಆಸಕ್ತ ರೈತರು ಭಾಗವಹಿಸಿ ತರಬೇತಿಯ ಸಂಪೂರ್ಣ ಮಾಹಿತಿ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ವಿಜಯಪುರ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಕೃಷಿ ಅಧಿಕಾರಿಗಳಾದ ಗೀತಾ ಭಜಂತ್ರಿ (ಮೋ: ೮೨೭೭೯೩೦೬೧೯) ಅವರನ್ನು ಸಮರ್ಕಿಸಬೇಕು ಎಂದು ವಿಜಯಪುರ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಉಪ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯಪುರ: ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರರು (ಸಂಪುಟ ದರ್ಜೆ) ಜು.೨೮ ರಂದು ಸಂಜೆ ೪ ಗಂಟೆಗೆ ವಿಜಯಪುರಕ್ಕೆ ಆಗಮಿಸಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಸಹಯೋಗದಲ್ಲಿ ನಗರದ ಪೊಲೀಸ್ ಸಮುದಾಯ ಭವನದಲ್ಲಿ ಹಮ್ಮಿಕೊಂಡ ಪತ್ರಿಕಾ ದಿನಾಚರಣೆ, ಪ್ರತಿಭಾ ಪುರಸ್ಕಾರ ಹಾಗೂ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಸಂಜೆ ೬ ಗಂಟೆಗೆ ಕಲ್ಬುರ್ಗಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Read More