Author: editor.udayarashmi@gmail.com

ಸಿಂದಗಿ: ಚುನಾವಣಾ ಸಾಕ್ಷರತಾ ಕ್ಲಬ್ ಆಸಕ್ತಿದಾಯಕ ಚಟುವಟಿಕೆಗಳ ಮೂಲಕ ಶಾಲಾ ವಿದ್ಯಾರ್ಥಿಗಳನ್ನು ತೊಡಗಿಸಿಕೊಳ್ಳುವ ವೇದಿಕೆಯಾಗಿದೆ. ಮತ್ತು ಚುನಾವಣಾ ಹಕ್ಕುಗಳ ಬಗ್ಗೆ ಅವರಿಗೆ ಅರಿವು ಮೂಡಿಸಲು, ನೋಂದಣಿ ಮತ್ತು ಮತದಾನದ ಪ್ರಕ್ರಿಯೆಯೊಂದಿಗೆ ಪರಿಚಿತರಾಗಲು ಅನುಭವವನ್ನು ನೀಡುತ್ತದೆ. ಇಎಲ್‌ಸಿಗಳು ಕಾಲೇಜು ಮತ್ತು ಗ್ರಾಮೀಣ ಸಮುದಾಯಗಳಲ್ಲಿಯೂ ಇವೆ ಎಂದು ಪ್ರಾಚಾರ್ಯ ಭೀಮನಗೌಡ ಸಿಂಗನಳ್ಳಿ ಹೇಳಿದರು.ಪಟ್ಟಣದ ಶ್ರೀ ಪ.ವಿ.ವ.ಸಂಸ್ಥೆಯ ಆರ್.ಡಿ.ಪಾಟೀಲ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಚುನಾವಣಾ ಸಾಕ್ಷರತಾ ಕ್ಲಬ್ ಸಹಯೋಗದೊಂದಿಗೆ ಹಮ್ಮಿಕೊಂಡ ಮತದಾನದ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಎಲ್‌ಸಿ ಮೂಲಕ ಭಾರತದ ಚುನಾವಣಾ ಆಯೋಗ, ಯುವ ಮತ್ತು ಭವಿಷ್ಯದ ಮತದಾರರಲ್ಲಿ ಚುನಾವಣಾ ಭಾಗವಹಿಸುವಿಕೆಯ ಸಂಸ್ಕೃತಿಯನ್ನು ಬಲಪಡಿಸುವ ಗುರಿಯನ್ನು ಹೊಂದಿದೆ ಎಂದರು.ಈ ವೇಳೆ ಪಿ.ಎಂ.ಮಹಲಿನಮಠ ಮಾತನಾಡಿ, ಭಾರತದ ಚುನಾವಣಾ ಆಯೋಗವು ಶಾಲೆ ಮತ್ತು ಕಾಲೇಜುಗಳಲ್ಲಿ ಚುನಾವಣಾ ಸಾಕ್ಷರತೆಯನ್ನು ಮುಖ್ಯವಾಹಿನಿಗೆ ತೆಗೆದುಕೊಂಡು ಬರಲು ತನ್ನ ಮಹತ್ವಾಕಾಂಕ್ಷೆಯ ಯೋಜನೆಯಾದ ಚುನಾವಣಾ ಸಾಕ್ಷರತಾ ಕ್ಲಬ್‌ಗಳನ್ನು ಈಗ ಹೊರತರುತ್ತಿದೆ. ಎಲ್ಲಾ ವಿದ್ಯಾರ್ಥಿಗಳು ಸಂಘಕ್ಕೆ ನೋಂದಣಿಯಾಗಬೇಕು. ಈ…

Read More

ಮಹಾರಾಷ್ಟ್ರ ಪಶ್ಚಿಮ ಘಟ್ಟಗಳಲ್ಲಿ ನಿರಂತರ ಮಳೆ | ಆಲಮಟ್ಟಿ ಡ್ಯಾಂನಿಂದ ನದಿಪಾತ್ರಕ್ಕೆ ನೀರು | ಅಧಿಕಾರಿಗಳಿಗೆ ಡಿಸಿ ಟಿ.ಭೂಬಾಲನ್ ಸೂಚನೆ ವಿಜಯಪುರ: ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಆಲಮಟ್ಟಿ ಜಲಾಶಯ ಪೂರ್ಣಗೊಳ್ಳುವ ಹಂತದಲ್ಲಿದ್ದು, ನದಿಪಾತ್ರಕ್ಕೆ ನೀರು ಹರಿಸುವುದರಿಂದ ಮುನ್ನೆಚ್ಚರಿಕೆಯಾಗಿ ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಸನ್ನದ್ಧರಾಗಿರುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ ನೀಡಿದರು.ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಪರೆನ್ಸ್ ಕೆಸ್ವಾನ ಸಭೆಯಲ್ಲಿ ಮಾತನಾಡಿ, ಜಲಾಶಯದಿಂದ ಹೆಚ್ಚುವರಿ ನೀರು ಹರಿಸುವುದರಿಂದ ಮುನ್ನೆಚ್ಚರಿಕೆಯಾಗಿ ಸಂಬಂಧಿಸಿದ ತಹಶೀಲ್ದಾರರು ತಮ್ಮ ವ್ಯಾಪ್ತಿಯಲ್ಲಿ ಅಪಾಯಕ್ಕೊಳಗಾಗುವ ಪ್ರದೇಶವನ್ನು ಗುರುತಿಸಿಕೊಂಡು ಯಾವುದೇ ಹಾನಿ ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಂಡು ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸಲು ಪೂರ್ವ ತಯಾರಿ ಮಾಡಿಕೊಳ್ಳಬೇಕು. ಪ್ರವಾಹ ಪರಿಸ್ಥಿತಿ ಉಂಟಾದಲ್ಲಿ ಜನ-ಜಾನುವಾರುಗಳಿಗೆ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವುದು ಸೇರಿದಂತೆ ಸೂಕ್ತ ಸ್ಥಳಗಳಲ್ಲಿ ಕಾಳಜಿ ಕೇಂದ್ರದ ವ್ಯವಸ್ಥೆಗೆ ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.ಮುದ್ದೇಬಿಹಾಳ, ನಿಡಗುಂದಿ, ಕೋಲಾರ ತಾಲೂಕಿನ ಆಯಾ ತಹಶೀಲ್ದಾರ್‌ಗಳು ಕೆಬಿಜೆಎನ್‌ಎಲ್ ಅಧಿಕಾರಿಗಳೊಂದಿಗೆ…

Read More

ಶಿಕ್ಷಕರ ವರ್ಗಾವಣೆ ಕೌನ್ಸಲಿಂಗ್ ಪರಿಶೀಲಿಸಿದ ಜಿ.ಪಂ.ಸಿಇಓ ರಿಷಿ ಆನಂದ ಕಿವಿಮಾತು ವಿಜಯಪುರ: ಕೌನ್ಸಲಿಂಗ್ ಪ್ರಕ್ರಿಯೆ ಮೂಲಕ ವಿವಿಧ ಪ್ರಾಧಾನ್ಯತೆಗಳಡಿಯಲ್ಲಿ ತಮಗೆ ಅನುಕೂಲವಾಗುವ ಸ್ಥಳಗಳಲ್ಲಿ ವರ್ಗಾವಣೆ ಪಡೆಯುವ ಶಿಕ್ಷಕರು ಸಂತೃಪ್ತಿಯಿಂದ ಬೋಧನಾ ಕಾರ್ಯವನ್ನು ನಿರ್ವಹಿಸಿ ಇಲಾಖೆಯ ಗುರಿ ಉದ್ದೇಶಗಳ ಸಫಲತೆಗೆ ಹೆಚ್ಚು ಪರಿಶ್ರಮವಹಿಸಬೇಕೆಂದು ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಿಷಿ ಆನಂದ ಹೇಳಿದರು.ಅವರು ಗುರುವಾರ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಕಚೇರಿಯಲ್ಲಿ ನಡೆಯುತ್ತಿರುವ ೨೦೨೪-೨೫ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶಿಕ್ಷಕರ ವರ್ಗಾವಣೆ ಕೌನ್ಸಿಲಿಂಗ್‌ನಲ್ಲಿ ಭಾಗವಹಿಸಿರುವ ಶಿಕ್ಷಕರು ಆನ್-ಲೈನ್ ಪ್ರಕ್ರಿಯೆ ಮೂಲಕ ಸ್ಥಳ ಆಯ್ಕೆ ಮಾಡಿಕೊಳ್ಳುವ ಪ್ರಕ್ರಿಯೆಯಲ್ಲಿ ಖುದ್ದಾಗಿ ವೀಕ್ಷಿಸಿ ಮಾತನಾಡಿದರು.ಶಿಕ್ಷಕರ ಪಾತ್ರ ಅನನ್ಯವಾಗಿದೆ. ವಿಜಯಪುರ ಜಿಲ್ಲೆಯ ಎಲ್ಲ ಶಾಲಾ ಶಿಕ್ಷಕರು ವೃತ್ತಿಪರ ಕೌಶಲ್ಯಗಳನ್ನು ಬಳಸಿಕೊಂಡು ಜಿಲ್ಲೆಯ ಶಾಲಾ ಶಿಕ್ಷಣ ವ್ಯವಸ್ಥೆಯ ಗುಣಮಟ್ಟವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಶ್ರಮಿಸಬೇಕು೨೦೨೪-೨೫ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶಿಕ್ಷಕರ ವರ್ಗಾವಣೆ ಕೌನ್ಸಿಲಿಂಗ್‌ನಲ್ಲಿ ಭಾಗವಹಿಸಿರುವ ಶಿಕ್ಷಕರು ಆನ್-ಲೈನ್ ಪ್ರಕ್ರಿಯೆ ಮೂಲಕ ಸ್ಥಳ ಆಯ್ಕೆ ಮಾಡಿಕೊಳ್ಳುವ…

Read More

ತಿಕೋಟಾ ತಾಲೂಕಿನ ತೊರವಿ ಗ್ರಾಪಂ ಗೆ ಭೇಟಿ ನೀಡಿದ ಜಿ.ಪಂ ಸಿ.ಇ.ಓ ರಿಷಿ ಆನಂದ್ ಅಭಿಮತ ವಿಜಯಪುರ: ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರು ತಿಕೋಟಾ ತಾಲೂಕಿನ ತೊರವಿ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ವಿವಿಧ ಯೋಜನೆಗಳ ಕಾಮಗಾರಿ ಪರಿಶೀಲನೆ ನಡೆಸಿದರು.ತೊರವಿ ಗ್ರಾಮದ ಕೂಸಿನ ಮನೆಗೆ ಭೇಟಿ ನೀಡಿ, ಮಕ್ಕಳ ಆಟಿಕೆ ಸಾಮಗ್ರಿಗಳು ಹಾಗೂ ಇತರೆ ಪರಿಕರಗಳ ವ್ಯವಸ್ಥೆ ಕುರಿತು ಪ್ರಶಂಸಿದ ಅವರು, ಕೂಸಿನ ಮನೆಗೆ ಅಗತ್ಯ ಇರುವ ಆಟಿಕೆ ಸಾಮಾನುಗಳು, ಅಡುಗೆ ಕೋಣೆ ಸಾಮಗ್ರಿಗಳು, ರೆಫ್ರಿಜರೇಟರ್ ಹಾಗೂ ಕೇಂದ್ರದ ಮಕ್ಕಳ ಆರೈಕೆದಾರರ ಹಾಜರಾತಿ, ಮಕ್ಕಳ ಹಾಜರಾತಿ, ಮಕ್ಕಳ ದಾಖಲಾತಿ, ದಾಸ್ತಾನು ವಹಿ ಹಾಗೂ ಇತರೆ ವಿವಿಧ ದಾಖಲಾತಿ ಸೇರಿ ಎಲ್ಲವನ್ನು ಅಚ್ಚುಕಟ್ಟಾಗಿ ನಿರ್ವಹಿಸಲಾಗಿದೆ. ಈ ಕೂಸಿನ ಮನೆಯು ಜಿಲ್ಲೆಯ ಮಾದರಿಯಾಗಿದೆ ಎಂದು ಹೇಳಿದರು.ಬಳಿಕ ಗ್ರಾಮದ ಸರ್ಕಾರಿ ಗ್ರಂಥಾಲಯಕ್ಕೆ ಭೇಟಿ ನೀಡಿ, ಅಲ್ಲಿನ ವಾಚಕರೊಡನೆ ಸಮಾಲೋಚನೆ ನಡೆಸಿದರು.ಈ ಗ್ರಂಥಾಲಯದಲ್ಲಿ ಎಲ್ಲ ವ್ಯವಸ್ಥೆ ಕಲ್ಪಿಸಲಾಗಿದೆ ತುಂಬಾ ಅನುಕೂಲವಾಗಿದೆ ಎಂದು…

Read More

ಸರ್ಕಾರಿ ಶಾಲೆ ಆಟದ ಮೈದಾನ ಅಭಿವೃದ್ಧಿ-ಮಳೆ ನೀರು ಕೊಯ್ಲು ಘಟಕ- ಪೌಷ್ಟಿಕ ಕೈತೋಟ ವಿಜಯಪುರ: ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರು ಬುಧವಾರ ಕೊಲ್ಹಾರ ತಾಲೂಕಿನ ತೆಲಗಿ, ರೋಣಿಹಾಳ ಹಾಗೂ ಮುಳವಾಡ ಗ್ರಾಮ ಪಂಚಾಯತಿಗಳಿಗೆ ಭೇಟಿ ನೀಡಿ ವಿವಿಧ ಯೋಜನೆಗಳ ಕಾಮಗಾರಿಗಳ ಪರಿಶೀಲನೆ ನಡೆಸಿದರು.ತೆಲಗಿಗೆ ಭೇಟಿ ನೀಡಿದ ಅವರು, ಕೂಸಿನ ಮನೆ ಕೇಂದ್ರಕ್ಕೆ ಮಕ್ಕಳ ನೋಂದಣಿ, ಮಕ್ಕಳ ಹಾಜರಾತಿ, ಪೌಷ್ಟಿಕ ಆಹಾರ, ಆಟದ ಸಾಮಗ್ರಿಗಳನ್ನು ವೀಕ್ಷಿಸಿ, ಮಕ್ಕಳ ನೋಂದಣಿ ಸಂಖ್ಯೆ ಹೆಚ್ಚಿಸಲು ಜನರಲ್ಲಿ ತಿಳುವಳಿಕೆ ಮೂಡಿಸಿ, ಮತ್ತು ಕೂಸಿನ ಮನೆ ಕೇಂದ್ರದ ಮಕ್ಕಳ ಆರೈಕೆದಾರರು ಮಕ್ಕಳನ್ನು ಕಾಳಜಿವಹಿಸಬೇಕು. ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸಬೇಕು. ಸ್ವಚ್ಛತೆ ಕಾಪಾಡಿಕೊಂಡು ಜವಾಬ್ದಾರಿಯಿಂದ ನಿರ್ವಹಣೆ ಮಾಡಬೇಕು ಎಂದು ಗ್ರಾಪಂ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮತ್ತು ಮಕ್ಕಳ ಆರೈಕೆದಾರರಿಗೆ ಸೂಚಿಸಿದರು.ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ನಿರ್ಮಾಣವಾದ ಫಲಾನುಭವಿ ಮನೆಗೆ ಭೇಟಿ ನೀಡಿ ಫಲಾನುಭವಿಯೊಂದಿಗೆ ಚರ್ಚಿಸಿದರು.ತೆಲಗಿ ಗ್ರಾಮದಲ್ಲಿ ನಿರ್ಮಾಣಗೊಂಡ ಸರ್ಕಾರಿ ಗ್ರಂಥಾಲಯಕ್ಕೆ ಭೇಟಿ ನೀಡಿ ಅಲ್ಲಿ ಕಲ್ಪಿಸಿರುವ…

Read More

ವಿದೇಶಿ ವಿದ್ಯಾಭ್ಯಾಸ ಸಾಲ ಯೋಜನೆಯಡಿ ಆನ್‌ಲೈನ್ ಅರ್ಜಿ ಆಹ್ವಾನ ವಿಜಯಪುರ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದಿಂದ ವಿದೇಶದಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ವಿದೇಶಿ ವಿದ್ಯಾಭ್ಯಾಸ ಸಾಲ ಯೋಜನೆಯಡಿಯಲ್ಲಿ ವಿದ್ಯಾಭ್ಯಾಸ ಸಾಲಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ವಿದೇಶ ವಿಶ್ವವಿದ್ಯಾಲಯದಲ್ಲಿ ಪದವಿ-ಸ್ನಾತಕೋತ್ತರ ಪದವಿ ಮಾಡಬಯಸುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಈ ಯೋಜನೆಯಡಿ ಸಾಲ ಪಡೆಯಲು ಬಯಸುವ ವಿದ್ಯಾರ್ಥಿಗಳು ನಿಗದಮ ವೆಬ್‌ಸೈಟ್ : https://kmdconlin.karnataka.gov.in ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ದಿನಾಂಕ : ೩೧-೦೮-೨೦೨೪ ಕೊನೆಯ ದಿನಾಂಕವಾಗಿದ್ದು, ಅರ್ಜಿ ಸಲ್ಲಿಸಿದ ಅರ್ಜಿಯ ಪ್ರಿಂಟ್‌ಔಟ್‌ನ್ನು ತೆಗೆದುಕೊಂಡು ಇತರೆ ಅವಶ್ಯಕ ದಾಖಲೆಗಳೊಂದಿಗೆ ನಿಗಮದ ಜಿಲ್ಲಾ ಕಚೇರಿ ಸಲ್ಲಿಸಬೇಕು.ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ, ಮೌಲಾನಾ ಆಝಾದ ಭವನ, ಜಿಲ್ಲಾ ಪಂಚಾಯತ್ ರಸ್ತೆ, ಕನಕದಾಸ ಬಡಾವಣೆ, ವಿಜಯಪುರ ದೂ: ೦೮೩೫೨-೨೭೮೩೪೪ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಜಿಲ್ಲಾ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಆದೇಶ ಉಲ್ಲಂಘನೆಗೆ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ :ಜಿಲ್ಲಾಧಿಕಾರಿ ಟಿ.ಭೂಬಾಲನ್ ಎಚ್ಚರಿಕೆ ವಿಜಯಪುರ: ಯಾವುದೇ ಸರ್ಕಾರಿ ಸಮಾರಂಭಗಳಲ್ಲಿ ಹಾರ, ಶಾಲು ಮತ್ತು ತುರಾಯಿ ಇತ್ಯಾದಿ ವಸ್ತುಗಳಿಂದ ಸನ್ಮಾನ ಮಾಡುವುದನ್ನು ಕಡ್ಡಾಯವಾಗಿ ನಿಷೇಧಿಸಿರುವುದರಿಂದ ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಈ ಆದೇಶ ಉಲ್ಲಂಘಿಸುವ ಅಧಿಕಾರಿಗಳ ಮೇಲೆ ಕೆ.ಸಿ.ಎಸ್.ಆರ್. ೧೯೫೭ರನ್ವಯ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ತಿಳಿಸಿದ್ದಾರೆ.ಜಿಲ್ಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ಅಡಿಯಲ್ಲಿ ಶಾಲಾ ಶೈಕ್ಷಣಿಕ ಕಾರ್ಯಕ್ರಮಗಳಲ್ಲಿ ಮತ್ತು ಇತರೆ ಸರ್ಕಾರಿ ಸಮಾರಂಭಗಳಲ್ಲಿ ಅನಗತ್ಯವಾಗಿ ಹಣ ಖರ್ಚು ಮಾಡಿ ಹಾರ, ಶಾಲು, ನೆನಪಿನ ಕಾಣಿಕೆಗಳನ್ನು ಕೊಟ್ಟು ಸನ್ಮಾನಿಸುವುದರಿಂದ ಸಮಯದ ವ್ಯರ್ಥ ಹಾಗೂ ಅನಗತ್ಯ ಖರ್ಚಾಗಲಿರುವುದರಿಂದ ಅದರ ಬದಲಾಗಿ ಕಾಣಿಕೆಗಳಿಗೆ ತಗಲುವ ಮೊತ್ತದಲ್ಲಿ ಸರ್ಕಾರಿ ಶಾಲೆಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಕಲಿಕೆಗೆ ಪೂರಕ ಶೈಕ್ಷಣಿಕ ವಸ್ತುಗಳನ್ನು ನೀಡುವುದು ಸೂಕ್ತವೆಂದು ಜಿಲ್ಲಾ ಉಸ್ತುವಾರಿ ಸಚಿವರು ನಿರ್ದೇಶನ ನೀಡಿರುವ ಹಿನ್ನಲೆಯಲ್ಲಿ ಮೇಲಾಧಿಕಾರಿಗಳು ತಮ್ಮ ಅಧೀನ ಕಚೇರಿಗಳಿಗೆ ಭೇಟಿ ನಿಡಿದಾಗ ಅಥವಾ ಅಧಿಕಾರಿ-ನೌಕರರು ಮೇಲಾಧಿಕಾರಿಗಳನ್ನು ಭೇಟಿಯಾಗಲು ಕಚೇರಿಗೆ…

Read More

ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಸಮಾಜ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಡಾ.ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಪ್ರಯುಕ್ತ ವ್ಯಸನ ಮುಕ್ತ ದಿನಾಚರಣೆಯನ್ನು ಆ. ೧ರಂದು ನಗರದ ಶ್ರೀ ಕಂದಗಲ್ ಹನಮಂತರಾಯ ರಂಗಮಂದಿರದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು.ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ, ಅಂದು ಬೆಳಗ್ಗೆ ೯ ಗಂಟೆಗೆ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಜನ ಜಾಗೃತಿ ಜಾಥಾಕ್ಕೆ ಚಾಲನೆಗೊಳ್ಳಲಿದೆ. ಜಾಥಾವು ನಗರದ ಗಾಂಧಿ ವೃತ್ತ ಮಾರ್ಗವಾಗಿ, ಬಸವೇಶ್ವರ ವೃತ್ತ, ಡಾ.ಬಿ.ಆರ್. ಅಂಬೇಡ್ಕರ ವೃತ್ತ, ಕನಕದಾಸ ವೃತ್ತದ ಮೂಲಕ ಕಂದಗಲ್ ಹನುಮಂತರಾಯ ರಂಗ ಮಂದಿರಕ್ಕೆ ತಲುಪಲಿದೆ. ರಂಗ ಮಂದಿರದಲ್ಲಿ ಬೆಳಿಗ್ಗೆ ೧೦.೩೦ಕ್ಕೆ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಮಾದಕ ವಸ್ತು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ. ಶಾಲಾ, ಕಾಲೇಜು ವಿದ್ಯಾರ್ಥಿಗಳು,…

Read More

ವಿಜಯಪುರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಕಾರ್ಯಕಾರಿಣಿ ಸಮಿತಿಗೆ ಇಬ್ಬರು ಹಿರಿಯ ಪತ್ರಕರ್ತರನ್ನು ನಾಮನಿರ್ದೇಶನ ಸದಸ್ಯರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.ಹೊಸ ಪತ್ರಿಕಾ ಭವನದಲ್ಲಿ ಸಂಗಮೇಶ ಚೂರಿ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಟಿವಿ೯ ವರದಿಗಾರ ಅಶೋಕ ಯಡಳ್ಳಿ ಮತ್ತು ಗುಮ್ಮಟನಗರಿ ಪ್ರಾದೇಶಿಕ ಕನ್ನಡ ದಿನಪತ್ರಿಕೆಯ ವ್ಯವಸ್ಥಾಪಕ ಸಂಪಾದಕ ಮಹಮ್ಮದ ಇರ್ಫಾನ್ ಮು. ಶೇಖ್ ಅವರನ್ನು ಕಾರ್ಯಕಾರಿ ಸಮಿತಿಗೆ ನಾಮನಿರ್ದೇಶಿತ ಸದಸ್ಯರನ್ನಾಗಿ ಒಕ್ಕೊರಲಿನಿಂದ ಆಯ್ಕೆ ಮಾಡಲಾಗಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಮೋಹನ ಪಿ. ಕುಲಕರ್ಣಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

– ವೀಣಾ ಹೇಮಂತ್ ಗೌಡ ಪಾಟೀಲ್, ಮುಂಡರಗಿ-ಗದಗ ಪ್ರಸ್ತುತ ನಾವು ಬದುಕುತ್ತಿರುವ ಸಮಾಜದಲ್ಲಿರಕ್ತದೊತ್ತಡ ಮಧುಮೇಹ ಥೈರಾಯಿಡ್ ಅಜೀರ್ಣ ಸಂಬಂಧಿ ಕಾಯಿಲೆಗಳು ಆಮ್ಲ ಪಿತ್ತ, ಹಾರ್ಮೋನುಗಳ ಅಸಮತೋಲನದಿಂದ ಆಗುವ ತೊಂದರೆಗಳಾದ ಥೈರಾಯಿಡ್, ಪಿಸಿಓಡಿ ಮುಂತಾದ ತೊಂದರೆಗಳಿಂದ ಜನರು ಬಳಲುತ್ತಿರುವುದನ್ನು ಕಾಣುತ್ತೇವೆ. ಪ್ರಸ್ತುತ ದಿನಮಾನಗಳಲ್ಲಿ ಇವೆಲ್ಲವೂ ಸಾಮಾನ್ಯ ಕಾಯಿಲೆಗಳು ಎಂದು ಬಿಂಬಿತವಾಗಿರುವುದನ್ನು ಕೂಡ ನಾವು ಕಾಣುತ್ತಿದ್ದೇವೆ. ನಾವು ನಡೆಸುತ್ತಿರುವ ಜೀವನ ಶೈಲಿ ನಮ್ಮ ಈ ತೊಂದರೆಗಳಿಗೆ ಕಾರಣ ಎಂಬುದು ಬಹುತೇಕರ ವಾದ. ಪರಿಣಾಮವಾಗಿ ಜೀವಮಾನಪೂರ್ತಿ ನಾವು ಔಷಧಿ ಗುಳಿಗೆಗಳ ಮೇಲೆ ಅವಲಂಬಿತರಾಗುತ್ತೇವೆ. ಆದರೆ ಈ ರೀತಿ ಔಷಧಿ ಗುಳಿಗೆಗಳ ಮೇಲೆ ಜೀವನವನ್ನು ನಡೆಸುವುದು ತಪ್ಪು ನಿರ್ಧಾರ ಎಂಬುದು ಜೀವನದ ಯಾವುದೋ ಒಂದು ಘಳಿಗೆಯಲ್ಲಿ ಮನುಷ್ಯನಿಗೆ ಅರಿವಾಗುವ ಹೊತ್ತಿಗೆ ಕಾಲ ಮೀರಿ ಹೋಗಿರುತ್ತದೆ. ಯಾಕೆ ಹೀಗಾಗುತ್ತಿದೆ?? ಎಂಬುದು ಮಿಲಿಯನ್ ಡಾಲರ್ಗಳ ಪ್ರಶ್ನೆ.ಯಾಕೆ ಈ ಆರೋಗ್ಯ ತೊಂದರೆಗಳ ಹಿಂದೆ ಭಾವನಾತ್ಮಕ ಆರೋಗ್ಯದ ಸಮಸ್ಯೆಯನ್ನು ಯಾರೂ ಗುರುತಿಸುತ್ತಿಲ್ಲ. ದೈಹಿಕ ಆರೋಗ್ಯ ಕೆಟ್ಟರೆ ಫಿಜಿಷಿಯನ್ಗಳ ಬಳಿಗೆ ತೆರಳುವ ನಾವು ಮಾನಸಿಕ…

Read More