Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಇವರ ಸಹಯೋಗದಲ್ಲಿ ನಗರದಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ-೨೦೨೬ ಕುರಿತು ಬೃಹತ್ ಸೈಕಲ್ ಜಾಥಾ ಆಯೋಜನೆ ಮಾಡುವ ಮೂಲಕ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಜಾಗೃತಿ ಜಾಥಾಕ್ಕೆ ಜಿಲ್ಲಾ ಪಂಚಾಯತಿಯ ಮುಖ್ಯ ಲೆಕ್ಕಾಧಿಕಾರಿಗಳಾದ ರಾಮಣ್ಣ ಅಥಣಿ ಹಾಗೂ ಯೋಜನಾ ನಿರ್ದೇಶಕರಾದ ಅಶೋಕ ಕಲಘಟಗಿ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಜಿಲ್ಲಾ ಪಂಚಾಯತಿ ಕಾರ್ಯಾಲಯದಿಂದ ಜಾಥಾಕ್ಕೆ ಚಾಲನೆ ನೀಡಿದರು.ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಆಗಮಿಸಿದ ಜಾಥಾವನ್ನು ಉದ್ದೇಶಿಸಿ ಅಪರ ಜಿಲ್ಲಾಧಿಕಾರಿಗಳಾದ ಡಾ.ಔದ್ರಾಮ ಅವರು ಮಾತನಾಡಿ ಯಾವುದೇ ಅರ್ಹ ಮತದಾರರು ಮತದಾನ ಹಕ್ಕಿನಿಂದ ವಂಚಿತರಾಗಬಾರದು ಹಿನ್ನೆಲೆಯಲ್ಲಿ ದಿನಾಂಕ ೦೧-೦೧-೨೦೨೬ಕ್ಕೆ ೧೮ ವರ್ಷ ಪೂರ್ಣಗೊಳ್ಳುವ ಎಲ್ಲಾ ಅರ್ಹ ಯುವಕ-ಯುವತಿಯರು ಮತದಾರರ ಪಟ್ಟಿಗೆ ತಮ್ಮಹೆಸರು ಸೇರ್ಪಡೆ ಮಾಡುವುದು, ಮೃತಪಟ್ಟ, ಸ್ಥಳಾಂತರಗೊಂಡ ಮತದಾರರ ಹೆಸರು ತೆಗೆದು ಹಾಕುವುದು ಮತ್ತು ವಿಳಾಸ, ಇತರೆ ತಿದ್ದುಪಡಿಗಳನ್ನು ಮಾಡುವುದು. ಈ ವಿಶೇಷ ಪರಿಷ್ಕರಣೆಯ ಮುಖ್ಯ ಉದ್ದೇಶವಾಗಿದೆ ಎಂದರು. ಪ್ರಜಾಪ್ರಭುತ್ವದ ಯಶಸ್ಸು ಪ್ರತಿಯೊಬ್ಬ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಹಿರಿಯ ಪತ್ರಕರ್ತ ಶರಣಬಸಪ್ಪ ಮಸಳಿ ಅವರನ್ನು ರಾಷ್ಟ್ರೀಯ ಮಂಡಳಿ ಸದಸ್ಯರಾಗಿ ನಾಮನಿರ್ದೇಶನ ಮಾಡಿ ಆದೇಶ ಹೊರಡಿಸಲಾಗಿದೆ.ನಗರದ ಪತ್ರಿಕಾ ಭವನದಲ್ಲಿ ಜಿಲ್ಲಾಧ್ಯಕ್ಷ ಅಶೋಕ ಯಡಳ್ಳಿ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಪದಾಧಿಕಾರಿಗಳ ಸಭೆಯಲ್ಲಿ ರಾಷ್ಟ್ರೀಯ ಮಂಡಳಿ ಸದಸ್ಯರಾಗಿ ಹಿರಿಯ ಪತ್ರಕರ್ತ ಶರಣಬಸಪ್ಪ ಮಸಳಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಂದುಶೇಖರ ಮಣೂರ ತಿಳಿಸಿದ್ದಾರೆ.ಹಲವು ದಶಕಗಳಿಂದ ವಿವಿಧ ವಿದ್ಯುನ್ಮಾನ ಮಾಧ್ಯಮ ಸಂಸ್ಥೆಗಳಲ್ಲಿ ಹಾಗೂ ಮುದ್ರಣ ಮಾಧ್ಯಮದಲ್ಲಿ ಸೇವೆ ಸಲ್ಲಿಸುತ್ತಿರುವ ಶರಣಬಸಪ್ಪ ಮಸಳಿಯವರು ಈ ಹಿಂದೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಿಜಯಪುರ ಜಿಲ್ಲಾ ಘಟಕದ ಜಿಲ್ಲಾ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಅಧ್ಯಕ್ಷರಾಗಿದ್ದ ಅಲ್ಪ ಅವಧಿಯಲ್ಲೇ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸಂಘದ ಏಳಿಗೆಗಾಗಿ ಸಾಕಷ್ಟು ಶ್ರಮಿಸಿ, ಎಲ್ಲ ಪತ್ರಕರ್ತರ ಪ್ರಶಂಸೆಗೆ ಪಾತ್ರರಾಗಿದ್ದರು.

Read More

ಚಿಮ್ಮಡ ಗ್ರಾಮದ ಸರಕಾರಿ ಪಪೂ ವಿದ್ಯಾಲಯ | ಉಪನ್ಯಾಸಕರ ಕೊರತೆಯಿಂದ ಬಳಲುತ್ತಿರುವ ಕಾಲೇಜು ಉದಯರಶ್ಮಿ ದಿನಪತ್ರಿಕೆ ವರದಿ: ಇಲಾಹಿ ಇ. ಜಮಖಂಡಿಚಿಮ್ಮಡ: ಗ್ರಾಮದ ಸರಕಾರಿ ಪದವಿಪೂರ್ವ ವಿದ್ಯಾಲಯಕ್ಕೆ ಪ್ರಾಚಾರ್ಯರು, ಉಪನ್ಯಾಸಕರೂ ಹಾಗೂ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಬಳಲುತಿದ್ದು, ವಿದ್ಯಾಲಯದ ಕಟ್ಟಡ ಹಾಗೂ ಸಮರ್ಪಕ ಸಿಬ್ಬಂದಿಗಳಿಲ್ಲದೆ ಉತ್ತಮ ಶಿಕ್ಷಣದಿಂದ ವಿದ್ಯಾರ್ಥಿಗಳು ವಂಚಿತರಾಗುತಿದ್ದಾರೆ.ರಬಕವಿ-ಬನಹಟ್ಟಿ ತಾಲೂಕಿನಲ್ಲಿಯೇ ದೊಡ್ಡ ಗ್ರಾಮವಾಗಿರುವ ಚಿಮ್ಮಡ ಗ್ರಾಮಕ್ಕೆ ಕಳೆದ ಐದು ವರ್ಷಗಳ ಹಿಂದೆ ಹಾವೇರಿ ಜಿಲ್ಲೆಯ ಹಿರೇಕೆರೂರ ತಾಲೂಕಿನ ನೇಸ್ವಿ ಗ್ರಾಮದಿಂದ ಸ್ಥಳಾಂತರಗೊಂಡ ಈ ಸರಕಾರಿ ಪದವಿಪೂರ್ವ ವಿದ್ಯಾಲಯಕ್ಕೆ ಇದುವರೆಗೆ ಸಮರ್ಪಕ ಉಪನ್ಯಾಸಕರ ನೇಮಕವಾಗಿಲ್ಲ, ಈ ವಿದ್ಯಾಲಯಕ್ಕೆ ಮಂಜೂರಾಗಿರುವ ಪ್ರಾಚಾರ್ಯ, ಇಂಗ್ಲಿಷ್, ಅರ್ಥಶಾಸ್ತ್ರ, ಸಮಾಜಶಾಸ್ತ, ರಾಜ್ಯಶಾಸ್ತ್ರ, ಹಾಗೂ “ಡಿ”ದರ್ಜೆಯ ಹುದ್ದೆಗಳಲ್ಲಿ ಕೇವಲ ಒಬ್ಬ ಉಪನ್ಯಾಸಕರು, ಹಾಗೂ ಓರ್ವ “ಡಿ”ದರ್ಜೆಯ ನೌಕರರು ಮಾತ್ರ ಕಾರ್ಯ ನಿರ್ವಹಿಸುತಿದ್ದು, ಉಳಿದಂತೆ ಮೂವರು ಅತಿಥಿ ಉಪನ್ಯಾಸಕರು ನೇಮಕಗೊಂಡಿದ್ದಾರೆ. ವಿದ್ಯಾಲಯಕ್ಕೆ ಅತೀ ಅವಶ್ಯವಿರುವ ಪ್ರಾಚಾರ್ಯ ಹುದ್ದೆ ಹಾಗೂ ಪ್ರಥಮ ಅಥವಾ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳು ಖಾಲಿ ಇರುವುದರಿಂದ…

Read More

ಮೂಕಿಹಾಳ ಗ್ರಾಪಂ ವ್ಯಾಪ್ತಿಯಲ್ಲಿ ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆಯ ಆರೋಪ ಉದಯರಶ್ಮಿ ದಿನಪತ್ರಿಕೆ ತಾಳಿಕೋಟಿ: ತಾಲ್ಲೂಕಿನ ಮೂಕಿಹಾಳ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ರೈತರಿಗೆ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ಸನ್ ೨೦೧೯-೨೦೨೬ರವರೆಗೆ ಬೆಳೆವಿಮೆ ತುಂಬಿದ ರೈತರಿಗೆ ವಿಮೆ ಹಣ ದೊರೆಯದಂತೆ ಅಧಿಕಾರಿಗಳು ವ್ಯವಸ್ಥಿತವಾಗಿ ವಂಚನೆ ಮಾಡಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಆರೋಪಿಸಿದರು.ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಮಂಗಳವಾರ ತಾಲ್ಲೂಕು ಮೂಕಿಹಾಳ ಗ್ರಾಪಂ ಸಮೀಪದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.ಸನ್ ೨೦೧೯-೨೦-೨೦೨೦-೨೧-೨೦೨೧-೨೨ ಮುಂಗಾರು ಹಂಗಾಮು, ೨೦೨೨-೨೩ರ ಹಿಂಗಾರು ಹಂಗಾಮು,೨೦೨೪-೨೫ರಲ್ಲಿ ಹಿಂಗಾರು ಹಂಗಾಮಿನಲ್ಲಿ ರೈತರಿಗೆ ಬೆಳೆವಿಮೆ ಪರಿಹಾರ ಬಂದಿಲ್ಲವೆಂದು ಅಧಿಕಾರಿಗಳೇ ಮಾಹಿತಿ ನೀಡುತ್ತಿದ್ದಾರೆ. ಬೆಳೆವಿಮೆಗೆ ಕಂತು ಪಾವತಿಸಿದ ರೈತರ ಜಮೀನುಗಳಿಗೆ ಹೋಗಬೇಕಾದ ಅಧಿಕಾರಿಗಳು ಎಲ್ಲೋ ಕೂತು ಬೆಳೆ ಸರ್ವೆ ಮಾಡುತ್ತಾರೆ. ಇದರಲ್ಲಿ ದೊಡ್ಡ ವ್ಯವಸ್ಥಿತ ಮೋಸ ಅಡಗಿದೆ.…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಬಿಜೆಪಿ ಮಂಡಲದ ಹಿಂದುಳಿದ ವರ್ಗಗಳ ಕಾರ್ಯಕರ್ತರು ಪಕ್ಷದ ನಿಷ್ಠಾವಂತ ಸದಸ್ಯರಾಗಿದ್ದಾರೆ ಎಂದು ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದು ಬುಳ್ಳಾ ಹೇಳಿದರು.ಪಟ್ಟಣದ ಪ್ರವಾಸಿಮಂದಿರದಲ್ಲಿ ಬುಧವಾರ ಜರುಗಿದ ಬಿಜೆಪಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.ನಮ್ಮ ಪಕ್ಷ ಅಧಿಕಾರದಲ್ಲಿರಲಿ, ಇಲ್ಲದಿರಲಿ ಹಿಂದುಳಿದ ವರ್ಗಗಳ ಬಹುತೇಕ ಎಲ್ಲ ಕಾರ್ಯಕರ್ತರು ಮಾತ್ರ ಪಕ್ಷಕ್ಕೆ ನಿಷ್ಠರಾಗಿ ಪಕ್ಷ ವಹಿಸಿದ ಕಾರ್ಯವನ್ನು ನಿರ್ವಹಿಸುತ್ತಿದ್ದಾರೆ. ಆದರೆ ಇದನ್ನು ನಾಯಕರು ಅರ್ಥ ಮಾಡಿಕೊಳ್ಳಬೇಕು. ಅಧಿಕಾರವಿದ್ದಾಗ ಲಾಭ ಪಡೆಯುವವರು ಒಬ್ಬರು, ಇಲ್ಲದಿರುವಾಗ ದುಡಿಯುವವರು ಇನ್ನೊಬ್ಬರು ಎನ್ನುವಂತಾಗಬಾರದು. ಏನೇ ಆಗಲಿ ಜಿಲ್ಲೆಯ ಹಾಗೂ ಮತಕ್ಷೇತ್ರದ ನಾಯಕರ ಗಮನಕ್ಕೆ ತಂದು ಪಕ್ಷವನ್ನು ಬಲಪಡಿಸಿ ಅಧಿಕಾರಕ್ಕೆ ತರೋಣ ಎಂದರು.ಶ್ರೀಮಂತ ತಳವಾರ, ಪ್ರಕಾಶ ದೊಡಮನಿ, ಶರಣು ದಳವಾಯಿ, ಗುರುನಾಥ ಮುರುಡಿ, ಮುತ್ತು ಹಾಲಿಹಾಳ, ಸದ್ದಾಂ ಮಕ್ಕುಬಾಯಿ, ಶಿವರಾಜ ತಳವಾರ, ಪಿಂಟೂ ಭಾಸುತ್ಕರ್, ರಮೇಶ ಈಳಗೇರ ಮಾತನಾಡಿ, ಪಕ್ಷದಲ್ಲಿ ನಾವು ಆಟಕ್ಕೂಂಟು ಲೆಕ್ಕಕ್ಕಿಲ್ಲ ಎನ್ನುವಂತಾಗಿದೆ. ನಾವು ಪಕ್ಷದ ಕಾರ್ಯಕರ್ತರು. ಇಂದಿನಿಂದಲೇ ಪಕ್ಷಕ್ಕೆ ಬಲ ತುಂಬುವ ಕಾರ್ಯ…

Read More

ಲೇಖನ- ಸಂತೋಷ್ ರಾವ್ ಪೆರ್ಮುಡಪೆರ್ಮುಡ ಮನೆಪಟ್ರಮೆ ಗ್ರಾಮ ಮತ್ತು ಅಂಚೆಬೆಳ್ತಂಗಡಿ ತಾಲೂಕುದ.ಕ ಜಿಲ್ಲೆ-೫೭೪೧೯೮ದೂ:೯೭೪೨೮೮೪೧೬೦ ಉದಯರಶ್ಮಿ ದಿನಪತ್ರಿಕೆ ಧನಂಜಯನು ತನ್ನ ಮೂರು ವರ್ಷ ವಯಸ್ಸಿನ ಮಗಳು ಮಿಥಾಲಿ ಮತ್ತು ಒಂದು ವರ್ಷ ವಯಸ್ಸಿನ ಮಗ ಧನ್ಯತ್‌ರನ್ನು ಕರೆದುಕೊಂಡು ಲೋಕಲ್ ರೈಲಿನಲ್ಲಿ ಬೆಂಗಳೂರಿನಿಂದ ಮಂಡ್ಯದ ಕಡೆಗೆ ಪ್ರಯಾಣಿಸುತ್ತಿದ್ದನು. ರೈಲು ಕಿಕ್ಕಿರಿದು ತುಂಬಿದ್ದು, ಒಂದಷ್ಟು ಮಂದಿ ತಮ್ಮ ಮೊಬೈಲ್‌ನಲ್ಲಿ ಹರಟುತ್ತಿದ್ದರೆ, ಇನ್ನೊಂದಷ್ಟು ಮಂದಿ ತಮ್ಮ ಸಹ ಪ್ರಯಾಣಿಕರ ಜೊತೆಗೆ ಕಷ್ಟ ಸುಖ ಮಾತನಾಡುತ್ತಿದ್ದರು. ಧನಂಜಯನ ಇಬ್ಬರು ಮಕ್ಕಳಾದ ಮಿಥಾಲಿ ಮತ್ತು ಧನ್ಯತ್ ಒಂದೇ ಸಮನೆ ಜೋರಾಗಿ ಅಳುತ್ತಾ ತನ್ನ ಮಡಿಲಲ್ಲಿ ಕುಳಿತಿದ್ದರು. ಆದರೆ ಇದ್ಯಾವುದರ ಪರಿವೆಯೂ ಇಲ್ಲದೇ ಧನಂಜಯನು ಸೀಟಿನ ಪಕ್ಕದ ಕಿಟಕಿಗೆ ತನ್ನ ತಲೆಯನ್ನು ಇಟ್ಟು ಏನನ್ನೋ ಗಾಢವಾಗಿ ಚಿಂತಿಸುತ್ತಾ ಕುಳಿತಿದ್ದನು. ತನ್ನ ಮಕ್ಕಳು ತೀರಾ ದೊಡ್ಡದಾಗಿ ಅಳುತ್ತಿದ್ದರೂ ಧನಂಜಯನಿಗೆ ಇದ್ಯಾವುದರ ಪರಿವೆಯೇ ಇರಲಿಲ್ಲ. ಮಕ್ಕಳ ಜೋರಾದ ಕಿರುಚಾಟದ ಅಳುವಿನಿಂದಾಗಿ ಕಿರಿಕಿರಿ ಆಗಲಾರಂಭಿಸಿತು. ಅಕ್ಕಪಕ್ಕದಲ್ಲಿ ಕುಳಿತಿದ್ದವರು, ಈ ಮಕ್ಕಳು ಇಷ್ಟು ಜೋರಾಗಿ ಅಳುತ್ತಿರುವುದರಿಂದ ಇತರ…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಭಾರತ ಸೇವಾದಳವು ನಿಸ್ವಾರ್ಥ ಸೇವೆಗೆ ಹೆಸರಾಗಿದ್ದು, ದೇಶದ ಅಭಿವದ್ಧಿ ಕಾರ್ಯಗಳಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದು, ಅದು ಶಿಸ್ತು, ಸಂಯಮ ಕಲಿಸುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್ ಆರ್ ನಡುಗಡ್ಡಿ ಹೇಳಿದರು.ಬುಧವಾರ ಪಟ್ಟಣದ ಸರಕಾರಿ ನೌಕರರ ಸಂಘದ ಸಭಾಭವನದಲ್ಲಿ ಭಾರತ ಸೇವಾದಳ ಜಿಲ್ಲಾ ಸಮಿತಿ, ತಾಲೂಕ ಸಮಿತಿ, ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಇಂಡಿ ವತಿಯಿಂದ ಹಮ್ಮಿಕೊಂಡ ‘ತಾಲೂಕ ಮಟ್ಟದ ಪುನಶ್ಚೇತನ ಶಿಬಿರ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಸೇವಾದಳದ ಶಿಕ್ಷಕರು ಮಕ್ಕಳಲ್ಲಿ ರಾಷ್ಟ್ರಭಕ್ತಿ, ಶಿಸ್ತು, ದೇಶಪ್ರೇಮ, ಸೇವಾಮನೋಭಾವ ಮತ್ತು ನಾಯಕತ್ವ ಗುಣ ಬೆಳೆಸುವ ಮೂಲಕ ದೇಶವನ್ನು ಅಭಿವೃದ್ದಿ ಪಡಿಸಬೇಕು ಎಂದು ಹೇಳಿದರು.ಶಿಕ್ಷಕ ಸಂತೋಷ ಬಂಡೆ ಮಾತನಾಡಿ, ಭಾರತ ಸೇವಾದಳ ಸ್ವಾತಂತ್ರ್ಯ ಹೋರಾಟಗಾರರು,ದೇಶಭಕ್ತರನ್ನು ಹುಟ್ಟು ಹಾಕಿದ ಸಂಸ್ಥೆ. ಸ್ವಾತಂತ್ರ್ಯ ಚಳುವಳಿಯಲ್ಲಿ ಮಹಾತ್ಮ ಗಾಂಧೀಜಿಯವರಿಗೆ ಸಾತ್‌ ಕೊಟ್ಟ ಏಕೈಕ ಸಂಸ್ಥೆ. ಜಾತಿ, ಧರ್ಮ, ಭಾಷೆಯ ಭೇದಭಾವವಿಲ್ಲದೆ ಎಲ್ಲರನ್ನು ಒಂದಾಗಿ ಕಾಣುತ್ತಾ, ಭಾವೈಕ್ಯತೆಯನ್ನು ಪ್ರೋತ್ಸಾಹಿಸುವ ಸಂಸ್ಥೆ ಇದಾಗಿದೆ ಎಂದು ಹೇಳಿದರು.ಜಿಲ್ಲಾ ಸಮಿತಿ ಸದಸ್ಯ…

Read More

ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ‌ ಸಲಹೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಾಜ್ಯಾದ್ಯಂತ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆಯ(SIR) ಪ್ರಾರಂಭವಾಗಿದ್ದು, ಇಂದು‌ ಬುಧವಾರ ತಮ್ಮ‌ ಗೃಹ ಕಚೇರಿಗೆ ಆಗಮಿಸಿದ ಬಿ.ಎಲ್.ಓ ಗಳಿಗೆ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ‌ ಅವರು ತಮ್ಮ ಮತ್ತು ತಮ್ಮ ಕುಟುಂಬ ಸದಸ್ಯರ ಅಗತ್ಯ ದಾಖಲೆ ಮತ್ತು ಮಾಹಿತಿ ನೀಡಿ ನೋಂದಣಿ ಪ್ರಕ್ರಿಯೆಯಲ್ಲಿ ಭಾಗಿಯಾದರು.ಬಳಿಕ ಮಾತನಾಡಿದ ಅವರು, ಅರ್ಹ‌ ಯಾವೊಬ್ಬ ಮತದಾರರು ಮತದಾರರ ಪಟ್ಟಿಯಿಂದ ಹೊರಗೆ ಉಳಿಯಬಾರದು.‌‌ ಬೇರೆ ಊರುಗಳಲ್ಲಿ ಉದ್ಯೋಗದಲ್ಲಿರು ಜನರು, ಗುಳೆ ಹೋದವರು ಸೇರಿದಂತೆ ಯಾರ ಹೆಸರನ್ನೂ ಕೈ ಬಿಡಬಾರದು. ನಾವೂ ಕೂಡ ಪಕ್ಷದಿಂದ ಜನಜಾಗೃತಿ ಮೂಡಿಸುತ್ತಿದ್ದೇವೆ. ಅರ್ಹ ಮತದಾರರು ತಮ್ಮ ಮನೆಗೆ ಬರುವ ಬೂತ್ ಮಟ್ಟದ ಅಧಿಕಾರಿಗಳಿಗೆ ಅಗತ್ಯ ದಾಖಲೆ ಮತ್ತು ಮಾಹಿತಿ ನೀಡಿ ಸಹಕರಿಸಬೇಕು. ಮತದಾರರ ಪಟ್ಟಿಯಲ್ಲಿ ವಿವರಗಳು ಪಟ್ಟಿಯಲ್ಲಿ ಸರಿಯಾಗಿ ದಾಖಲಾಗಿರುವ ಕುರಿತು ಖಚಿತಪಡಿಸಿಕೊಳ್ಳಬೇಕು.…

Read More

ಕೇಂದ್ರ ಸಚಿವರಾದ ವೈಷ್ಣವ್, ಸೋಮಣ್ಣಗೆ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಪತ್ರ ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ವಿಜಯಪುರ ಜಿಲ್ಲಾ ಕೇಂದ್ರದಲ್ಲಿ ರೈಲ್ವೆ ಸಂಪರ್ಕ ಬಲವರ್ಧನೆಗಾಗಿ ಕೋಚ್ ಡಿಪೋ ಸ್ಥಾಪಿಸಬೇಕು ಮತ್ತು ರೈಲು ನಿಲ್ದಾಣದಲ್ಲಿ ಇನ್ನೊಂದು ಆಗಮನ ಮತ್ತು ನಿರ್ಗಮನ ದ್ವಾರವನ್ನು ಅಭಿವೃದ್ಧಿ ಪಡಿಸಬೇಕೆಂದು ಕೋರಿ ಕೇಂದ್ರ ರೈಲ್ವೆ ಸಹಾಯಕ ಸಚಿವ ವಿ.ಸೋಮಣ್ಣನವರ ಜತೆ ಚರ್ಚಿಸಲಾಗಿದೆ. ಈ ಸಂಬಂಧವಾಗಿ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರಿಗೂ ಪತ್ರ ಬರೆಯಲಾಗಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.ಈ ಬಗ್ಗೆ ಮಾತನಾಡಿರುವ ಅವರು, `ಈ ವಿಚಾರ ಕುರಿತು ಸೋಮಣ್ಣನವರಿಗೂ ಪತ್ರ ಬರೆಯಲಾಗಿದೆ. ಹಿಂದೆ ವಿಜಯಪುರ ರೈಲು ನಿಲ್ದಾಣದ ಆವರಣದಲ್ಲೇ ಇದ್ದ ಗೂಡ್ಸ್ ಶೆಡ್ಡನ್ನು ಈಗ ಅಲಿಯಾಬಾದಿಗೆ ಸ್ಥಳಾಂತರಿಸಲಾಗಿದೆ. ಹೀಗಾಗಿ ಕೋಚ್ ಡಿಪೋ ಸ್ಥಾಪನೆಗೆ ಜಾಗದ ಕೊರತೆಯೇನೂ ಇಲ್ಲ. ಇಲ್ಲಿ ಕೋಚ್ ಡಿಪೋ ಬಂದರೆ ಇದನ್ನು ನಿರ್ವಹಣಾ ಹಬ್ ಆಗಿ ಬೆಳೆಸಬಹುದು. ಜತೆಗೆ ವಿಜಯಪುರ ಮತ್ತು ಉತ್ತರ ಕರ್ನಾಟಕದ…

Read More