Subscribe to Updates
Get the latest creative news from FooBar about art, design and business.
Author: editor.udayarashmi@gmail.com
ದೇವರಹಿಪ್ಪರಗಿ: ಪಟ್ಟಣದ ಎರೆಜಮೀನುಗಳಿಗೆ ಸಂಪರ್ಕ ಕಲ್ಪಿಸುವ ತಾಂಡಾ ಮೂಲಕ ಹಾದು ಹೋಗುವ ಬಮ್ಮನಳ್ಳಿ ರಸ್ತೆಯನ್ನು ಜಾಲಿಗಿಡಗಂಟಿಗಳಿಂದ ಮುಕ್ತಗೊಳಿಸಿ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸುವಂತೆ ರೈತರು ಆಗ್ರಹಿಸಿದ್ದಾರೆ.ಪಟ್ಟಣದ ತಾಂಡಾ ಮೂಲಕ ಬಮನಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಸೇರಿದ ರೈತರು ಮುಳ್ಳಿನ ಗಿಡಗಂಟಿಗಳ ತೆರವುಗೊಳಿಸಲು ಆಗ್ರಹಿಸಿದರು.ಈ ಸಂದರ್ಭದಲ್ಲಿ ರೈತಸಂಘ ಹಾಗೂ ಹಸಿರುಸೇನೆಯ ಜಿಲ್ಲಾ ಉಪಾಧ್ಯಕ್ಷ ಸಂಪತ್ ಜಮಾದಾರ ಮಾತನಾಡಿ, ಪಟ್ಟಣ ಹಾಗೂ ತಾಂಡಾ ರೈತರ ಎರೆ ಜಮೀನುಗಳಿಗೆ ತೆರಳುವ ಡಾಂಬರ್ ರಸ್ತೆ ಉತ್ತಮವಾಗಿದ್ದು, ಆದರೆ ರಸ್ತೆಯ ಎಡ ಬಲಗಳಲ್ಲಿ ಜಾಲಿಗಿಡಗಳು ಬೃಹದಾಕಾರವಾಗಿ ಬೆಳೆದ ರಸ್ತೆಯನ್ನು ಕಿರಿದಾಗಿಸಿವೆ.ರಸ್ತೆಯ ಮೂಲಕ ಚಕ್ಕಡಿ ಹಾಗೂ ಬೈಕ್‌ಗಳಲ್ಲಿ ತೆರಳಬೇಕೆಂದರು ಪ್ರಯಾಣದಲ್ಲಿ ಮುಳ್ಳು ಚುಚ್ಚಿ ಗಾಯಗಳಾಗುತ್ತಿವೆ. ಇನ್ನೂ ಜಾಲಿಗಿಡಗಳ ಟೊಂಗೆಗಳು ಉದ್ದಾಗಿ ಬೆಳೆದು ರಸ್ತೆಯನ್ನು ಅತೀಕ್ರಮಿಸಿ ಅಪಘಾತಗಳಿಗೆ ಕಾರಣವಾಗುತ್ತಿವೆ. ಕೆಲವು ದಿನಗಳ ಹಿಂದೆ ಮುಳ್ಳು ಗಿಡದ ಕಾರಣವಾಗಿ ರೈತರು ಬೈಕ್ ಅಪಘಾತದಿಂದ ಗಾಯಗೊಂಡಿದ್ದಾರೆ. ಆದ್ದರಿಂದ ರಸ್ತೆಯ ಎಡಬಲಗಳಲ್ಲಿಯ ಮುಳ್ಳಿನ ಗಿಡಗಳನ್ನು ತೆಗೆದು ರೈತ ಸಮುದಾಯಕ್ಕೆ ಅನುಕೂಲ ಕಲ್ಪಿಸುವುದು ಅಗತ್ಯವಾಗಿದೆ. ಈ…
ಸಿಂದಗಿ: ತಾಲೂಕಿನ ಬೋರಗಿ ಗ್ರಾಮದ ತತ್ವಪದ ಹಾಗೂ ಜಾನಪದ ಹಾಡುಗಾರ್ತಿ ಇಮಾಂಬಿ ದೊಡಮನಿ ಅವರನ್ನು ಕೆ.ಆರ್.ಲಿಂಗಪ್ಪ ಜಾನಪದ ದತ್ತಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು,(ರಿ) ಮೈಸೂರು ಹಾಗೂ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಯಾದಗಿರಿ ಇವರ ಸಹಯೋಗದಲ್ಲಿ ಯಾದಗಿರಿ ಜಿಲ್ಲಾ ಕಸಾಪ ಸಭಾಂಗಣದಲ್ಲಿ ಜು.೨೪ರಂದು ಬುಧವಾರ ಬೆಳಿಗ್ಗೆ ೧೧:೩೦ ನಡೆಯಲಿರುವ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ಹಿರಿಯ ಸಾಹಿತಿಗಳಾದ ಗೊ.ರು.ಚನ್ನಬಸಪ್ಪ ಅವರು ಪ್ರದಾನ ಮಾಡಲಿದ್ದಾರೆ ಎಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು, (ರಿ) ಮೈಸೂರು ಪ್ರಕಟಣೆಯಲ್ಲಿ ತಿಳಿಸಿದೆ.
ಸ್ವಚ್ಚತೆ ಇಲ್ಲಿ ಮರೀಚಿಕೆ | ಜಾಣ ಮೌನಕ್ಕೆ ಜಾರಿದ ಅಧಿಕಾರಿಗಳು | ಗಮನ ಹರಿಸದ ಜನಪ್ರತಿನಿಧಿಗಳು – ರಶ್ಮಿ ನೂಲಾನವರಸಿಂದಗಿ: ರಾಜ್ಯದಲ್ಲಿರುವ ಸರಕಾರಿ ವಸತಿ ಶಾಲೆಗಳು, ವಸತಿ ನಿಲಯಗಳು ಸೇರಿದಂತೆ ಸರಕಾರಿ ಶಾಲೆಗಳ ಅವ್ಯವಸ್ಥೆ ಆಗರವಾಗಿವೆ. ಬಹಳಷ್ಟು ಸರಕಾರಿ ಶಾಲೆ, ವಸತಿ ನಿಲಯಗಳಲ್ಲಿ ಸ್ವಚ್ಚತೆ ಎಂಬುದು ಮರೀಚಿಕೆಯಾಗುತ್ತಿದೆ. ಆದರೆ ಮುಂಬರುವ ದಿನಮಾನಗಳಲ್ಲಿ ಸುಧಾರಣೆ ಮಾಡುತ್ತೇವೆ ಎನ್ನುವು ವಾಗ್ದಾನದೊಂದಿಗೆ ಅಧಿಕಾರ ಹಿಡಿಯುವ ಎಲ್ಲ ಸರಕಾರಗಳು ಮಾತ್ರ ಜಾಣ ಕುರುಡುತನದಿಂದ ವಿದ್ಯಾರ್ಥಿಗಳು ಸಂಕಷ್ಟ ಎದುರಿಸಬೇಕಾಗಿದೆ.ಪಟ್ಟಣದ ಗೋಲಗೇರಿ ರಸ್ತೆಯಲ್ಲಿರುವ ಶ್ರೀ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ ಅವ್ಯವಸ್ಥೆಯ ಆಗರವಾಗಿದೆ. ಅಶುಚಿತ್ವ ಶೌಚಾಲಯ, ಸೋಳ್ಳೆಗಳ ಕಾಟ, ಪ್ಯಾನ್ ಇಲ್ಲ, ಶೌಚಾಲಯಕ್ಕೆ ನೀರು ಸರಬರಾಜಿಲ್ಲ ಹೀಗೆ ಇಲ್ಲಗಳ ದೊಡ್ಡ ಪಟ್ಟಿಯನ್ನೇ ತೆರದಿಟ್ಟಿರುವ ಡಿವೈಎಫ್‌ಐ ರಾಜ್ಯ ಸಮಿತಿ ಸದಸ್ಯ ರಮೇಶ ಸಾಸಾಬಾಲ ಅವರು ಸರಕಾರ ಮತ್ತು ಅಧಿಕಾರಿಗಳ ಜಾಣ ಮೌನಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಅಶುಚಿತ್ವ ಶೌಚಾಲಯ: ವಿದ್ಯಾರ್ಥಿ ನಿಲಯವನ್ನು ಒಂದು ಸುತ್ತು ಬಂದರೆ ಇಲ್ಲಿ…
ವಿಜಯಪುರ: ನಗರ ಶಾಸಕರು ಹಾಗೂ ಸಿದ್ಧಸಿರಿ ಸೌಹಾರ್ದ ಸಹಕಾರಿಯ ಅಧ್ಯಕ್ಷ ಬಸನಗೌಡ ಪಾಟೀಲ್ ಯತ್ನಾಳ ರವರು ಹಾಗೂ ಸಿದ್ಧಸಿರಿಯ ಆಡಳಿತ ಮಂಡಳಿಯ ನಿರ್ಣಯದಂತೆ, ವಿಜಯಪುರ ನಗರ ವಿಧಾನಸಭಾ ಕ್ಷೇತ್ರದಲ್ಲಿ ಗಿಡಗಳನ್ನು ಬೆಳೆಸುವುದು ಹಾಗೂ ಸಂರಕ್ಷಣೆಗಾಗಿ ಸಿದ್ಧಸಿರಿ ಸೌಹಾರ್ದ ಸಹಕಾರಿಯಿಂದ ರೂ.೧೦ ಲಕ್ಷ ದೇಣಿಗೆಯನ್ನು ಜಿಲ್ಲಾಧಿಕಾರಿಗಳಾದ ಟಿ.ಭೂಬಾಲನ್ ಅವರಿಗೆ ಬುಧವಾರ ನೀಡಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಜಂಟಿ ವ್ಯವಸ್ಥಾಪಕ ನಿರ್ದೇಶಕ ರಾಘವ ಅಣ್ಣಿಗೇರಿ, ಸಿದ್ದಸಿರಿ ಸೌಹಾರ್ದ ಸಹಕಾರಿಯು ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳರ ನೇತೃತ್ವದಲ್ಲಿ ನಿರಂತರವಾಗಿ ಒಂದಿಲ್ಲೊಂದು ಸಾಮಾಜಿಕ ಕಾರ್ಯಗಳು ಮಾಡುತ್ತ ಬರಲಾಗುತ್ತಿದೆ. ಕೋವಿಡ್ ಸಂದರ್ಭದಲ್ಲಿ ಜಿಲ್ಲಾಡಳಿತದೊಂದಿಗೆ ಕೈಜೋಡಿಸಿ, ಲಸಿಕಾ ಕಾರ್ಯದಲ್ಲಿ ತೊಡಗಿಸಿಕೊಂಡು ನಗರದ ವಿವಿಧ ಬಡಾವಣೆಗಳಲ್ಲಿ ಮನೆ ಮನೆಗೆ ಭೇಟಿ ನೀಡಿ, ಕೋವಿಡ್ ಲಸಿಕೆಯನ್ನು ಕಡ್ಡಾಯವಾಗಿ ತೆಗೆದುಕೊಳ್ಳಲು ಜಾಗೃತಿ ಮೂಡಿಸಲಾಗಿತ್ತು ಎಂದರು.ಪರಿಸರ ಸಂರಕ್ಷಣೆಗಾಗಿ ಕಳೆದ ಬಾರಿಯೂ ಟ್ರೀ ಗಾರ್ಡ್ ವ್ಯವಸ್ಥೆ ಕಲ್ಪಿಸಲು ರೂ.೧೦ ಲಕ್ಷ ನೀಡಲಾಗಿತ್ತು. ಅದೇ ರೀತಿ ವೃಕ್ಷೋಥಾನ ಅಭಿಯಾನಕ್ಕೆ ರೂ.೧೦ ಲಕ್ಷ ದೇಣಿಗೆ ನೀಡಲಾಗಿತ್ತು. ಇದೀಗ ನಗರದಲ್ಲಿ ಗಿಡಗಳನ್ನು…
ಕೆಯುಡಬ್ಲೂಜೆ ವಿಜಯಪುರ ಜಿಲ್ಲಾ ಘಟಕದ ವಾರ್ಷಿಕ ಪ್ರಶಸ್ತಿ ಪ್ರಕಟ ವಿಜಯಪುರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ವತಿಯಿಂದ ನೀಡಲಾಗುವ ೨೦೨೪ನೇ ಸಾಲಿನ ಸಂಘದ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ.ಮಾಧ್ಯಮ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಸ್ಥಾನಿಕ ಸಂಪಾದಕರು, ಜಿಲ್ಲಾ, ತಾಲೂಕು ವರದಿಗಾರರು, ಕ್ಯಾಮೆರಾಮನ್‌ಗಳು ಹಾಗೂ ಪತ್ರಿಕಾ ವಿತರಕರು ಸೇರಿದಂತೆ ಒಟ್ಟು ೩೧ ಜನರಿಗೆ ವಾರ್ಷಿಕ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುವುದು.ಜು. ೨೮ರಂದು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ನಗರದ ಪೊಲೀಸ್ ಸಮುದಾಯ ಭವನದಲ್ಲಿ ನಡೆಯಲಿರುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಕೈಗಾರಿಕೆ ಮತ್ತು ಮೂಲಸೌಲಭ್ಯ ಸೌಕರ್ಯ ಸಚಿವ ಎಂ.ಬಿ. ಪಾಟೀಲ, ಸಕ್ಕರೆ ಮತ್ತು ಎಪಿಎಂಸಿ ಸಚಿವ ಶಿವಾನಂದ ಪಾಟೀಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್, ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ, ಸಂಸದ ರಮೇಶ ಜಿಗಜಿಣಗಿ ಹಾಗೂ ಜಿಲ್ಲೆಯ ಎಲ್ಲ ಶಾಸಕರು ಪ್ರಶಸ್ತಿ ಪುರಸ್ಕೃತರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.ಪ್ರಶಸ್ತಿ ಪುರಸ್ಕೃತರ ಪಟ್ಟಿ…
ಕೆಯುಡಬ್ಲೂಜೆ ವಿಜಯಪುರ ಜಿಲ್ಲಾ ಘಟಕದ ವಾರ್ಷಿಕ ಪ್ರಶಸ್ತಿ ಪ್ರಕಟ ವಿಜಯಪುರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ವತಿಯಿಂದ ನೀಡಲಾಗುವ ೨೦೨೪ನೇ ಸಾಲಿನ ಸಂಘದ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ.ಮಾಧ್ಯಮ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಸ್ಥಾನಿಕ ಸಂಪಾದಕರು, ಜಿಲ್ಲಾ, ತಾಲೂಕು ವರದಿಗಾರರು, ಕ್ಯಾಮೆರಾಮನ್‌ಗಳು ಹಾಗೂ ಪತ್ರಿಕಾ ವಿತರಕರು ಸೇರಿದಂತೆ ಒಟ್ಟು ೩೧ ಜನರಿಗೆ ವಾರ್ಷಿಕ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುವುದು.ಜು. ೨೮ರಂದು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ನಗರದ ಪೊಲೀಸ್ ಸಮುದಾಯ ಭವನದಲ್ಲಿ ನಡೆಯಲಿರುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಕೈಗಾರಿಕೆ ಮತ್ತು ಮೂಲಸೌಲಭ್ಯ ಸೌಕರ್ಯ ಸಚಿವ ಎಂ.ಬಿ. ಪಾಟೀಲ, ಸಕ್ಕರೆ ಮತ್ತು ಎಪಿಎಂಸಿ ಸಚಿವ ಶಿವಾನಂದ ಪಾಟೀಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್, ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ, ಸಂಸದ ರಮೇಶ ಜಿಗಜಿಣಗಿ ಹಾಗೂ ಜಿಲ್ಲೆಯ ಎಲ್ಲ ಶಾಸಕರು ಪ್ರಶಸ್ತಿ ಪುರಸ್ಕೃತರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.ಪ್ರಶಸ್ತಿ ಪುರಸ್ಕೃತರ ಪಟ್ಟಿ…
ಬ್ರಹ್ಮದೇವನಮಡು: ಸಿಂದಗಿ ತಾಲೂಕಿನ ಹೊನ್ನಳ್ಳಿ – ಬ್ರಹ್ಮದೇವನಮಡು ನಡುವೆ ಬರುವ ಕಲ್ಶಾಣದೇಶ್ವರ ಕತೃ೯ ಗದ್ದುಗೆಯಲ್ಲಿ ಜು.೨೪ರಂದು ಲಿಂ.ಶ್ರೀ ವೀರಘಂಟಯ್ಶಾ ಕಲ್ಶಾಣದಯ್ಶಾ ಮಹಾಸ್ವಾಮಿಗಳ ೫ನೇ ಪುಣ್ಶಾರಾಧನೆ ಮಹೋತ್ಸವ ಆಚರಿಸಲಾಗುತ್ತಿದೆ.ಭಕ್ತರು ಹೆಚ್ಚಿನ ಸಂಖ್ಶೆಯಲ್ಲಿ ಪಾಲ್ಗೊಂಡು ಶ್ರೀಗಳ ದಶ೯ನ ಪಡೆಯಲು ಮಠದ ಪೀಠಾಧಿಪತಿ ವೆ.ಮೂತಿ೯ ಕಲ್ಶಾಣದಯ್ಶಾ ಗದ್ದುಗೆಮಠ ಸ್ವಾಮೀಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Udayarashmi kannada daily newspaper Udayarashmi kannada daily newspaper
ವಿಜಯಪುರ: ಜಿಲ್ಲಾ ತಳವಾರ ಸಮಾಜದ ಪ್ರತಿಭಾ ಪುರಸ್ಕಾರ ಸಮಿತಿ ಹಾಗೂ ಜ್ಞಾನಗಂಗಾ ವಿವಿಧೋದ್ದೇಶ ಸಹಕಾರಿ ವಿಜಯಪುರ ಇವರ ಸಹಯೋಗದಲ್ಲಿ ಜು.೨೭ರಂದು ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ೬ನೇ ವರ್ಷದ ಪ್ರತಿಭಾ ಪುರಸ್ಕಾರ ಹಾಗೂ ಸೇವಾ ನಿವೃತ್ತ ನೌಕರರಿಗೆ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ.ಅಂದು ಬೆಳಿಗ್ಗೆ ೧೦ ಗಂಟೆಗೆ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ.ಪಾಟೀಲ ಉದ್ಘಾಟಿಸಲಿದಾರೆ. ಪ್ರತಿಭಾ ಪುರಸ್ಕಾರ ಸಮಿತಿ ಗೌರವ ಅಧ್ಯಕ್ಷರೂ ಆದ ಜ್ಞಾನಗಂಗಾ ವಿವಿಧೋದ್ಧೇಶ ಸಹಕಾರಿ ಸಂಘದ ಅಧ್ಯಕ್ಷ ಡಾ.ಅಶೋಕ ಸಾಸನೂರ ಅಧ್ಯಕ್ಷತೆ ವಹಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ವಿಜಯಪುರ ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ವಿಧಾನ ಪರಿಷತ್ ಸದಸ್ಯರಾದ ತಿಪ್ಪಣ್ಣಪ್ಪ ಕಮಕನೂರ, ನಿವೃತ್ತ ಉಪನಿರ್ದೇಶಕ ಎಸ್.ವಾಯ್.ಹಳಿಂಗಳಿ, ವಾಣಿಜ್ಯ ತೆರಿಗೆ ಇಲಾಖೆ ಸಹಾಯಕ ಆಯುಕ್ತ ರಾಜಶೇಖರ ಕೊಲ್ಹಾರ, ನಿವೃತ್ತ ಪೊಲೀಸ್ ಉಪ ಅಧೀಕ್ಷಕ ಎಸ್.ಬಿ.ಕೋಲಕಾರ, ಜ್ಞಾನಗಂಗಾ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕ ಮಹಾದೇವಪ್ಪ ಲಗಮಣ್ಣಾ ಸೊನ್ನ, ನಿವೃತ್ತ ಕೃಷಿ ಅಧಿಕಾರಿ ರಾಮಚಂದ್ರ ಕಾಸಣ್ಣ ಅಂಬಿಗೇರ, ಬಳಗಾನೂರ ಕುವೆಂಪು ವಿದ್ಯಾವರ್ಧಕ ಸಂಘದ ಅಧ್ಯಕ್ಷ…
ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ | ಸಿಎಂ ಸಿದ್ದರಾಮಯ್ಯ ಮತ್ತಿತರರ ಹೆಸರು ಹೇಳುವಂತೆ ಒತ್ತಡ | ಸಮಾಜ ಕಲ್ಯಾಣ ಇಲಾಖೆಯ ಎಡಿ ಕಲ್ಲೇಶ್ ದೂರು ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ 187 ಕೋಟಿ ರೂ. ಅವ್ಯವಹಾರ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಹಣಕಾಸು ಇಲಾಖೆಯನ್ನು ಸಿಲುಕಿಸುವಂತೆ ರಾಜ್ಯ ಸರ್ಕಾರಿ ಅಧಿಕಾರಿಯೊಬ್ಬರಿಗೆ ಒತ್ತಡ ಹೇರಿದ ಆರೋಪದ ಮೇರೆಗೆ ಜಾರಿ ನಿರ್ದೇಶನಾಲಯದ ಇಬ್ಬರು ಅಧಿಕಾರಿಗಳ ವಿರುದ್ಧ ಸೋಮವಾರ ಪ್ರಕರಣ ದಾಖಲಾಗಿದೆ.ಸಮಾಜ ಕಲ್ಯಾಣ ಇಲಾಖೆಯ ಹೆಚ್ಚುವರಿ ನಿರ್ದೇಶಕ ಕಲ್ಲೇಶ್ ಬಿ ದೂರು ಆಧರಿಸಿ ಇಬ್ಬರು ಇಡಿ ಅಧಿಕಾರಿಗಳ ವಿರುದ್ಧ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದು ಕ್ರಿಮಿನಲ್ ಬೆದರಿಕೆ ಮತ್ತು ಶಾಂತಿಯನ್ನು ಹದಗೆಡಿಸುವ ಉದ್ದೇಶಕ್ಕೆ ಸಂಬಂಧಿಸಿದ್ದಾಗಿದೆ.ಮುರಳಿ ಕಣ್ಣನ್ ಎಂಬ ಇಡಿ ಅಧಿಕಾರಿ ಮತ್ತು ಮಿತ್ತಲ್ ಎಂಬ ಅಧಿಕಾರಿ ವಿರುದ್ಧ ಕಲ್ಲೇಶ್ ಆರೋಪ ಮಾಡಿದ್ದಾರೆ. ಹೈದರಾಬಾದ್ ಮೂಲದ ಕಂಪನಿಗಳಿಗೆ 88 ರೂಪಾಯಿ ಅಕ್ರಮ ವರ್ಗಾವಣೆ…
