Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಪ್ರಕರಣ ಭೇದಿಸಿದ ವಿಜಯಪುರ ಜಿಲ್ಲೆಯ ಬಬಲೇಶ್ವರ ಪೊಲೀಸರು | 8 ಆರೋಪಿಗಳ ಬಂಧನ | ₹11.32 ಕೋಟಿ ವಶ | ವಿಜಯಪುರ ಜಿಲ್ಲೆಯ ಎಸ್ಪಿ ಲಕ್ಷ್ಮಣ ನಿಂಬರಗಿ ಮಾಹಿತಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಂದಿ ಸಕ್ಕರೆ ಕಾರ್ಖಾನೆಯಲ್ಲಿ ಕಬ್ಬಿನ ತೂಕದಲ್ಲಿ ಅಕ್ರಮ ನಡೆಸಿ ಕೋಟ್ಯಂತರ ರೂಪಾಯಿ ಹಣ ದುರುಪಯೋಗ ಮಾಡಿದ ಬಹುಕೋಟಿ ವಂಚನೆ ಪ್ರಕರಣವನ್ನು ಬಬಲೇಶ್ವರ ಪೊಲೀಸರು ಭೇದಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ 8 ಆರೋಪಿಗಳನ್ನು ಬಂಧಿಸಿ ₹11.32 ಕೋಟಿಗೂ ಅಧಿಕ ಹಣವನ್ನು ವಶಪಡಿಸಿಕೊಂಡಿದ್ದಾರೆ.ನಗರದಲ್ಲಿ ಮಂಗಳವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರು ಈ ಪ್ರಕರಣದ ಕುರಿತು ಮಾಹಿತಿ ನೀಡಿದರು.ಬಬಲೇಶ್ವರ ಪೊಲೀಸ್ ಠಾಣೆಯಲ್ಲಿ ಜೂನ್ 12, 2026 ರಂದು ಪ್ರಕರಣ ಸಂಖ್ಯೆ 29/2026ರಡಿ BNS ಕಾಯ್ದೆಯ ಸೆಕ್ಷನ್ 316(2), 316(4), 316(5) ಹಾಗೂ 318(4) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.ನಂದಿ ಸಕ್ಕರೆ ಕಾರ್ಖಾನೆಯ ಪ್ರಧಾನ ವ್ಯವಸ್ಥಾಪಕ ಅಶೋಕ ಸಂಗಪ್ಪ ತಿಪ್ಪರೆಡ್ಡಿ ಅವರು ನೀಡಿದ ದೂರಿನ ಮೇರೆಗೆ, ಕಾರ್ಖಾನೆಯ ಕಬ್ಬು ತೂಕ ವಿಭಾಗದಲ್ಲಿ ಕೆಲಸ…
ದಲಿತ ಹೋರಾಟಗಾರ ಹಾಗೂ ಆರ್‌ಪಿಐ ಪಕ್ಷದ ಮುಖಂಡ ಜಿತೇಂದ್ರ ಕಾಂಬಳೆ ಒತ್ತಾಯ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ನಾಗಠಾಣ ಶಾಸಕ ವಿಠ್ಠಲ ಕಟಕಧೋಂಡ ಅವರಿಗೆ ಸಚಿವ ಸ್ಥಾನ ನೀಡಬೇಕು, ಕಟಕಧೋಂಡ ಮೂಲತ: ಇಂಡಿ ತಾಲೂಕಿನವರಾಗಿದ್ದು ಕಟಕಧೋಂಡ ಅವರಿಗೆ ಸಚಿವ ಸ್ಥಾನ ನೀಡಿದರೆ ದಲಿತ ಬಾಂಧವರಿಗೆ ನ್ಯಾಯ ದೊರಕುತ್ತದೆ ಹಾಗೂ ಇಂಡಿ ಮತಕ್ಷೇತ್ರಕ್ಕೆ ಸಚಿವ ಸ್ಥಾನದ ಬರ ಕಳಚುತ್ತದೆ ಎಂದು ದಲಿತ ಹೋರಾಟಗಾರ ಹಾಗೂ ಆರ್‌ಪಿಐ ಪಕ್ಷದ ಮುಖಂಡ ಜಿತೇಂದ್ರ ಕಾಂಬಳೆ ಒತ್ತಾಯಿಸಿದರು.ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡೋಹರ ಕಕ್ಕಯ್ಯ ಸಮುದಾಯಕ್ಕೆ ಸೇರಿದ ವಿಠ್ಠಲ ಕಟಕಧೋಂಡ ಸಾತ್ವಿಕ ಹಾಗೂ ಸರಳ ರಾಜಕಾರಣಿ, ಅನೇಕ ವರ್ಷಗಳಿಂದ ರಾಜಕೀಯದಲ್ಲಿರುವ ಅನುಭವಿ ರಾಜಕಾರಣಿ, ಎಲ್ಲ ಸಮುದಾಯಗಳನ್ನು ಪ್ರೀತಿ, ವಿಶ್ವಾಸದಿಂದ ಕಾಣುವ ವ್ಯಕ್ತಿ, ಹೀಗಾಗಿ ಅವರಿಗೆ ಸಚಿವ ಸ್ಥಾನ ನೀಡುವುದು ಅಗತ್ಯವಾಗಿದೆ, ಆ ಮೂಲಕ ಈ ದಲಿತ ಸಮುದಾಯಕ್ಕೆ ನ್ಯಾಯ ಒದಗಿಸಲು ಸಾಧ್ಯ, ಇಂದಿಗೂ ಪರಿಶಿಷ್ಟ ಜಾತಿಯ ಸಮುದಾಯಗಳಿಗೆ ಕಾಂಗ್ರೆಸ್‌ನಿಂದ ನ್ಯಾಯ ದೊರಕಿಲ್ಲ, ಈ ಸಮುದಾಯದ ಶಾಸಕರು ಸಹ…
ಪಂಚಮಸಾಲಿ ಸಮಾಜಕ್ಕೆ ಕಾಂಗ್ರೆಸ್ ಸರ್ಕಾರದಿಂದ ನಿರಂತರ ಅನ್ಯಾಯ | ಸಮಾಜ ಮುಖಂಡರಿಂದ ಸುದ್ದಿಗೋಷ್ಟಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪಂಚಮಸಾಲಿ ಸಮಾಜದ ರಾಜು ಕಾಗೆ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ಹಾಗೂ ಐದು ಜನ ಪಂಚಮಸಾಲಿ ಸಮಾಜದ ಶಾಸಕರಿಗೆ ಸಚಿವ ಸ್ಥಾನ ನೀಡುವಂತೆ ಪಂಚಮಸಾಲಿ ಸಮಾಜದ ಮುಖಂಡ ಸುರೇಶ ಶಂಕರಗೌಡ ಬಿರಾದಾರ ಒತ್ತಾಯಿಸಿದರು.ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಂಚಮಸಾಲಿ ಸಮಾಜ ತ್ಯಾಗ, ಶೈಕ್ಷಣಿಕ ಸೇವೆ, ಅಧ್ಯಾತ್ಮಿಕತೆಗೆ ಹೆಸರುವಾಸಿಯಾಗಿದೆ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವಲ್ಲಿ ಪಂಚಮಸಾಲಿ ಸಮಾಜದ ಪಾತ್ರ ಪ್ರಮುಖವಾಗಿದೆ, ಆದರೆ ರಾಜ್ಯ ಕಾಂಗ್ರೆಸ್ ಸರ್ಕಾರ ಪಂಚಮಸಾಲಿ ಸಮಾಜಕ್ಕೆ ಸೂಕ್ತವಾದ ಪ್ರಾತಿನಿಧ್ಯ ನೀಡುವಲ್ಲಿ ವಿಫಲವಾಗಿದೆ, ಈ ಸರ್ಕಾರ ಪಂಚಮಸಾಲಿ ಸಮಾಜದ ಋಣದಲ್ಲಿದೆ, ಅದನ್ನು ಕಾಂಗ್ರೆಸ್ ಮರೆಯಬಾರದು, ಹೀಗಾಗಿ ಸಮಾಜಕ್ಕೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು, ಆರು ಬಾರಿ ಶಾಸಕರಾಗಿರುವ ಹಾಗೂ ಜನಪರವಾಗಿ ನಿಷ್ಠೆಯ ಉದಾರಹಣೆಯಾಗಿರುವ ರಾಜು ಕಾಗೆ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲೇಬೇಕು, ವಿಜಯಪುರ ಜಿಲ್ಲೆಯಿಂದ ಆಯ್ಕೆಯಾದ, ಹಿರಿಯರಾದ ಶಿವಾನಂದ ಪಾಟೀಲ, ಯುವ ಶಾಸಕ ಅಶೋಕ ಮನಗೂಳಿ,…
ಶಾಲೆಯ ಸುತ್ತಮುತ್ತ ಗುಟ್ಟಾ ತಂಬಾಕು ಸಿಗರೇಟ್ ಮಾರಾಟ ಮಾಡುವ ಅಂಗಡಿ ಸಂಪೂರ್ಣ ಬಂದ್ ಮಾಡಲು ಸಾರ್ವಜನಿಕರ ಆಗ್ರಹ ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಶಾಲಾ ಕಾಲೇಜುಗಳ ಮುಂದೆ ಗುಟ್ಕಾ ಸಿಗರೇಟ್ ಬಿಡಿ ಹಾಗೂ ಇತರೆ ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿದ್ದು ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಸಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.ಪಟ್ಟಣದ ವಾರ್ಡ್ ಸಂಖ್ಯೆ 4ರಲ್ಲಿ ಬರುವ ಸರ್ಕಾರಿ ಪ್ರೌಢಶಾಲೆ, ಸರ್ಕಾರಿ ಪಾಲಿಟೆಕ್ನಿಕ್ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಯ ಶಾಲಾ ಕಾಲೇಜುಗಳು ಮುಂದೆ ಕಾನೂನುಬಾಹಿರ ಚಟುವಟಿಕೆಗಳು ನಡೆಯುತ್ತಿದ್ದು ಕೂಡಲೇ ತಡೆಗಟ್ಟಲು ಆಗ್ರಹಿಸಿ ಸೋಮವಾರ ಸಾರ್ವಜನಿಕರು ತಹಸಿಲ್ದಾರ್, ಪೊಲೀಸ್ ಠಾಣೆ ಮತ್ತು ಪಟ್ಟಣ ಪಂಚಾಯಿತಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಮಾಜಿ ಅಧ್ಯಕ್ಷ ವಿರುಪಾಕ್ಷಿ ಕೋಲಕಾರ ಹಾಗೂ ಪಟ್ಟಣ ಪಂಚಾಯತ್ ಸದಸ್ಯ ಬಾಬು ಭಜಂತ್ರಿ ಮಾತನಾಡಿ, ಶಾಲಾ ಕಾಲೇಜುಗಳಿಂದ ಸುಮಾರು 200 ಮೀಟರ್ ಅಂತರದಲ್ಲಿ ಗುಟ್ಕಾ ಸಿಗರೇಟ್ ನಂತಹ ಅಂಗಡಿಗಳು ದೂರವಿರಬೇಕು ಎಂಬ ಆದೇಶವಿದ್ದರೂ ಕೂಡ ಈ…
ಪಪೂ ಉಪನ್ಯಾಸಕರ ನ್ಯಾಯಯುತ ಬೇಡಿಕೆಗಳಿಗೆ ಸಂಪೂರ್ಣ ಬೆಂಬಲ ವ್ಯಕ್ತ | ಮಾಜಿ ಎಂಎಲ್ಸಿ ಅರುಣ ಶಹಾಪೂರ ಆಗ್ರಹ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ರಾಜ್ಯದಲ್ಲಿ ಶಿಕ್ಷಣ ಕ್ಷೇತ್ರ ಅನೇಕ ಸಮಸ್ಯೆಗಳಿಂದ ಬಳಲುತ್ತಿದೆ. ಖಾಲಿ ಇರುವ ವಿಷಯ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡದೆ, ಅತಿಥಿ ಶಿಕ್ಷಕರ ಮೇಲೆಯೇ ಶಿಕ್ಷಣ ವ್ಯವಸ್ಥೆಯನ್ನು ನಡೆಸುತ್ತಿರುವುದು ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಆತಂಕಕಾರಿ ಬೆಳವಣಿಗೆಯಾಗಿದೆ. ಜೊತೆಗೆ ಇದೀಗ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರನ್ನು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಬೋಧನೆಗೆ ನಿಯೋಜಿಸುವ ಕ್ರಮವೂ ವ್ಯಾಪಕ ವಿರೋಧಕ್ಕೆ ಕಾರಣವಾಗಿದೆ ಎಂದು ಮಾಜಿ ವಿಪ ಸದಸ್ಯ ಅರುಣ ಶಹಾಪೂರ ಹರಿಹಾಯ್ದರು.ಸಿಂದಗಿ ನಗರದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ನಿರ್ಧಾರವನ್ನು ಮರುಪರಿಶೀಲಿಸಿ, ಅವರೊಂದಿಗೆ ಚರ್ಚಿಸಿ ನಿರ್ಣಯ ಕೈಗೊಳ್ಳಬೇಕಾಗಿದೆ. ರಾಜ್ಯ ಸರ್ಕಾರವು ಸಂಪೂರ್ಣ ಸಚಿವ ಸಂಪುಟವನ್ನು ರಚಿಸಿ, ಶಿಕ್ಷಣ ಇಲಾಖೆಗೆ ಪೂರ್ಣಾವಧಿಯ ಸಚಿವರನ್ನು ನೇಮಿಸಬೇಕು. ಶಿಕ್ಷಣದಂತಹ ಮಹತ್ವದ ಇಲಾಖೆಗೆ ಇನ್ನೂ ಸಚಿವರ ನೇಮಕವಾಗದೇ ಇರುವುದು ಅತ್ಯಂತ ದುರದೃಷ್ಟಕರ ಸಂಗತಿ. ಈ ವಿಷಯದಲ್ಲಿ ಹೋರಾಟ ನಡೆಸುತ್ತಿರುವವರ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ವಿಕಲಚೇತನರು ಸಮಾಜದಲ್ಲಿ ಮುಕ್ತವಾಗಿ ಸಂಚರಿಸಲು ಅವರಿಗೆ ತ್ರಿಚಕ್ರ ವಾಹನ ನೀಡುತ್ತಿರುವುದು ಶ್ಲಾಘನೀಯ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಸಿಂದಗಿ ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತನ್ ೨೦೨೫-೨೬ನೆಯ ಸಾಲಿನ ತಾಪಂ ಅನಿರ್ಬಂಧಿತ ಅನುದಾನದಡಿಯಲ್ಲಿ ಅರ್ಹ ೬ ವಿಕಲಚೇತನ ಪಲಾನುಭವಿಗಳಿಗೆ ಇಂಧನ ಜಾಲಿತ ತ್ರಿಕಚ್ರ ವಾಹನವನ್ನು ವಿತರಿಸಿ ಮಾತನಾಡಿದ ಅವರು, ವಿಕಲಚೇತನರು ಸಮಾಜದಲ್ಲಿ ಸಮಾನವಾಗಿ ಪ್ರಗತಿ ಸಾಧಿಸಲು ಅವರಿಗೆ ಸರಕಾರದಿಂದ ಸಿಗಬೇಕಾದ ಸೌಕರ್ಯಗಳನ್ನು ಅತ್ಯಂತ ಪ್ರಮಾಣಿಕವಾಗಿ ಅರ್ಹರಿಗೆ ತಲುಪುವಂತಾಗಬೇಕು. ಜೊತೆಗೆ ತ್ವರಿತ ಗತಿಯಲ್ಲಿ ಒದಗಿಸಬೇಕು. ಸಮಾಜದಲ್ಲಿ ವಿಕಲಚೇತನರು ಸ್ವಾವಲಂಬಿಗಳಾಗಿ ಬದುಕಬೇಕು. ಉದ್ಯೋಗಕ್ಕಾಗಿ ಮತ್ತು ಮತ್ತಿತರ ವ್ಯವಸ್ಥೆಗಳಿಗೆ ಬೇರೆಯವರನ್ನು ಆಶ್ರಯಿಸಬೇಕಾದ ಅನಿವಾರ್ಯತೆ ಇದೆ. ಆ ಕಾರಣಕ್ಕೆ ಅವರ ಬದುಕಿಗೆ ಚೈತನ್ಯ ನೀಡಲು ಮತ್ತು ಉಳಿದವರಿಗಿಂತ ನಾವೇನೂ ಕಡಿಮೆ ಇಲ್ಲ ಎಂದು ಸಾಧಿಸಿ ತೋರಿಸಲು ಸರಕಾರ ಸಹಕಾರ ನೀಡುತ್ತದೆ. ಇದರ ಸದುಪಯೋಗವನ್ನು ಎಲ್ಲರೂ ಪಡೆಯಬೇಕು ಎಂದರು.ಈ ವೇಳೆ ತಾಪಂ ಇಒ ರಾಮು ಅಗ್ನಿ, ಅಕ್ಷರ ದಾಸೋಹ ಅಧಿಕಾರಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೨೦೨೬-೨೭ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ವಿಜಯಪುರ ಜಿಲ್ಲೆಗೆ ದಾಳಿಂಬೆ, ಲಿಂಬೆ ಹಾಗೂ ದ್ರಾಕ್ಷಿ ಬೆಳೆಗಳಿಗೆ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯನ್ನು ಆರ್‌ಡಬ್ಲೂಬಿಸಿಐಎಸ್ ಅನುಷ್ಠಾನಗೊಳಿಸಲು ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಅವರು ತಿಳಿಸಿದ್ದಾರೆ.ಬೆಳೆ ವಿಮೆ ಯೋಜನೆಯು ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಜಿಲ್ಲೆಯ ದಾಳಿಂಬೆ, ಲಿಂಬೆ ಮತ್ತು ದ್ರಾಕ್ಷಿ ಬೆಳೆಗಾರರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು.ಈ ಯೋಜನೆಯಡಿ ವಿಮೆಗೆ ಒಳಪಡುವ ನಿಗದಿತ ಬೆಳೆಯನ್ನು ಬೆಳೆಯದೆಯೇ, ತಪ್ಪು ಮಾಹಿತಿ ನೀಡಿ ವಿಮೆ ಯೋಜನೆಗೆ ನೋಂದಾಯಿಸಿಕೊಳ್ಳುವುದು ಕಾನೂನುಬಾಹಿರವಾಗಿದೆ. ಒಂದು ವೇಳೆ ಬೆಳೆಯನ್ನು ಬೆಳೆಯದೇ ವಿಮೆ ಯೋಜನೆಯಡಿ ನೋಂದಾಯಿಸಿಕೊಂಡಿರುವುದು ಕಂಡುಬಂದಲ್ಲಿ, ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಆದ್ದರಿಂದ, ರೈತರು ನಿಖರವಾದ ಮಾಹಿತಿ ನೀಡಿ, ಈ ಯೋಜನೆಯ ಸದುಪಯೋಗಪಡೆದುಕೊಳ್ಳುವಂತೆ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೨೦೨೬-೨೭ನೇ ಶೈಕ್ಷಣಿಕ ಸಾಲಿನ ಕಿತ್ತೂರ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ, ಬೆಳಗಾವಿಯ ಮುಖ್ಯ ಆವರಣದ ಸ್ನಾತಕೋತ್ತರ ಅಧ್ಯಯನ ವಿಭಾಗಗಳು, ಸ್ನಾತಕೋತ್ತರ ಕೇಂದ್ರ ವಿಜಯಪುರ, ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯ, ಬೆಳಗಾವಿ ಹಾಗೂ ಬೆಳಗಾವಿ ಮತ್ತು ವಿಜಯಪುರ ಜಿಲ್ಲೆಗಳ ಸಂಯೋಜಿತ ಮಹಾವಿದ್ಯಾಲಯಗಳಲ್ಲಿ ವಿವಿಧ ಸ್ನಾತಕೋತ್ತರ ಕೋರ್ಸ್ಗಳ ಪ್ರವೇಶಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಅಭ್ಯರ್ಥಿಗಳು ರಾಜ್ಯ ಸರ್ಕಾರದ ಯು.ಯು.ಸಿ.ಎಂ.ಎಸ್. ತಂತ್ರಾಂಶದ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲ್ಲು ಜುಲೈ ೨೦ ಕೊನೆಯ ದಿನಾಂಕವಾಗಿದೆ.ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ ಬಳಿಕ ಅದರ ಒಂದು ಮುದ್ರಿತ ಪ್ರತಿಯೊಂದಿಗೆ ಅಗತ್ಯ ದಾಖಲೆಗಳನ್ನು ಸಂಬಂಧಿತ ವಿಭಾಗ ಅಥವಾ ಕೇಂದ್ರಕ್ಕೆ ಕಡ್ಡಾಯವಾಗಿ ಸಲ್ಲಿಸಬೇಕು ಎಂದು ವಿಶ್ವವಿದ್ಯಾಲಯ ತಿಳಿಸಿದೆ.ಸ್ಥಳೀಯ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಆಸಕ್ತಿಯನ್ನು ಗಮನದಲ್ಲಿಟ್ಟುಕೊಂಡು, ೨೦೨೬-೨೭ನೇ ಶೈಕ್ಷಣಿಕ ಸಾಲಿನಿಂದ ವಿಜಯಪುರದ ಸ್ನಾತಕೋತ್ತರ ಕೇಂದ್ರದಲ್ಲಿ ಕನ್ನಡ, ಇಂಗ್ಲಿಷ್, ಇತಿಹಾಸ, ಸಮಾಜಕಾರ್ಯ, ವಾಣಿಜ್ಯಶಾಸ್ತ್ರ ಹಾಗೂ ಎಂ.ಸಿ.ಎ. ಕೋರ್ಸ್ಗಳ ಜೊತೆಗೆ ಉರ್ದು, ಮರಾಠಿ, ಗಣಿತಶಾಸ್ತ್ರ, ರಾಜ್ಯಶಾಸ್ತ್ರ ಮತ್ತು ಅರ್ಥಶಾಸ್ತ್ರ ವಿಷಯಗಳನ್ನೂ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅಂಗವಾಗಿ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಇಂದು ಮಾಜಿ ಸಚಿವರು ಹಾಗೂ ಶಾಸಕರಾದ ಶಿವಾನಂದ ಪಾಟೀಲ ಅವರ ನಿವಾಸಕ್ಕೆ ಭೇಟಿ ನೀಡಿ ಮತದಾರರ ಗಣತಿ ನಮೂನೆಗಳನ್ನು ವಿತರಿಸಿದರು.ಮನೆ-ಮನೆಗೆ ತೆರಳಿ ಗಣತಿ ನಮೂನೆಗಳನ್ನು ವಿತರಿಸುವ ಕಾರ್ಯ ಆರಂಭವಾಗಿರುವದರಿಂದ ಶಾಸಕ ಶಿವಾನಂದ ಪಾಟೀಲ ಅವರ ನಿವಾಸಕ್ಕೆ ಭೇಟಿ ನೀಡಿ ಗಣತಿ ನಮೂನೆಗಳನ್ನು ವಿತರಿಸಲಾಯಿತು.ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಆಯುಕ್ತರಾದ ವಿಜಯ ಮೆಕ್ಕಳಕಿ ಹಾಗೂ ಸಂಬಂಧಿತ ಬೂತ್ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೨೦೨೬-೨೭ ನೇ ಶೈಕ್ಷಣಿಕ ಸಾಲಿಗೆ ಪ್ರಥಮ ವರ್ಷದ ಬಿ.ವಿ.ಎ. ದೃಶ್ಯ ಕಲೆಯಲ್ಲಿ ನಾಲ್ಕು ವರ್ಷದ ಎಂಟು ಸೆಮ್ ಗಳ ‘ರಾಜ್ಯ ಶಿಕ್ಷಣ ಪದ್ಧತಿ’ ಯಂತೆ ಸ್ನಾತಕ ಪದವಿ ಪ್ರವೇಶಕ್ಕೆ ದ್ವಿತೀಯ ಪಿ.ಯು.ಸಿ. ಇಲ್ಲವೇ ಸಮಾನಾಂತರ ಕೋರ್ಸುಗಳಲ್ಲಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳಿಂದ ಮೈಸೂರು ವಿಶ್ವವಿದ್ಯಾಲಯ ಆನ್ ಲೈನ್ ಅರ್ಜಿ ಆಹ್ವಾನಿಸಿದೆ.https://uucms.karnataka.gov.in ಈ ವೆಬ್ ಸೈಟ್‌ನಲ್ಲಿ ಅಭ್ಯರ್ಥಿಗಳು ಜುಲೈ ೪ ರವರೆಗೆ (ದಂಡ ಶುಲ್ಕದೊಂದಿಗೆ) ಅರ್ಜಿ ಸಲ್ಲಿಸಬಹುದಾಗಿದೆ.ಈ ಪದವಿಯಲ್ಲಿ ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್ (ಅಚ್ಚುಕಲೆ), ಅನ್ವಯಕಲೆ, ಕಲಾ ಇತಿಹಾಸ ಛಾಯಾಚಿತ್ರ ಮತ್ತು ಛಾಯಾಚಿತ್ರ ಪತ್ರಿಕೋದ್ಯಮ ವಿಷಯಗಳಲ್ಲಿ ವಿಶೇಷ ಅಧ್ಯಯನ ಮಾಡಬೇಕಾಗುತ್ತದೆ.ಪ್ರವೇಶಾತಿ ಕೋರಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹತಾ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನವನ್ನು ಜುಲೈ ೬ ರಂದು ನಡೆಸಲಾಗುವುದು.ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ: ೦೮೨೧-೨೪೩೮೯೩೧ ಸಂಪರ್ಕಿಸಬಹುದು ಎಂದು ಚಾಮರಾಜೇಂದ್ರ ಸರ್ಕಾರಿ ದೃಶ್ಯ ಕಲಾ ಕಾಲೇಜನ ಡೀನ್‌ರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
