Author: editor.udayarashmi@gmail.com

ಸಿಂದಗಿಯಲ್ಲಿ ಕೂಡಲಸಂಗಮ ಪೀಠದ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ವಿಷಾದ ಸಿಂದಗಿ: ೨ಎ ಮೀಸಲಾತಿಗಾಗಿ ಪಂಚಮಸಾಲಿ ಸಮಾಜ ನಡೆಸಿರುವ ಹೋರಾಟಕ್ಕೆ ದೀರ್ಘ ಇತಿಹಾಸವಿದೆ. ಇಷ್ಟೊಂದು ಸುಧೀರ್ಘ ಹೋರಾಟದ ನಂತರವೂ ನ್ಯಾಯ ದೊರಕದೆ ಇದ್ದದ್ದು ವಿಪರ್ಯಾಸ ಎಂದು ಕೂಡಲಸಂಗಮ ಪೀಠದ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ವಿಷಾದ ವ್ಯಕ್ತಪಡಿಸಿದರು.ಶಾಸಕ ಅಶೋಕ ಮನಗೂಳಿ ಅವರ ಮನೆಗೆ ಕೂಡಲಸಂಗಮ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಹಾಗೂ ಸಮಾಜ ಬಂಧುಗಳು ತೆರಳಿ ಮುಂಗಾರು ಅಧಿವೇಶನದಲ್ಲಿ ೨ಎ ಮೀಸಲಾತಿಗಾಗಿ ಅಧಿವೇಶನದಲ್ಲಿ ಪ್ರಸ್ತಾಪಿಸಬೇಕೆಂದು ಆಗ್ರಹ ಪತ್ರವನ್ನು ಸಲ್ಲಿಸಿ ಮಾತನಾಡಿದ ಅವರು, ಕಳೆದ ಬಾರಿಯ ಆಡಳಿತಾರೂಢ ಬಿಜೆಪಿ ಸರಕಾರದ ಬಿ.ಎಸ್.ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಸರ್ಕಾರದಿಂದ ಸೂಕ್ತ ಸ್ಪಂದನೆ ಸಿಗಲಿಲ್ಲ. ಪ್ರಸ್ತುತ ಸರ್ಕಾರವೂ ನಿರ್ಲಕ್ಷ ಧೋರಣೆ ತಾಳುತ್ತಿದೆ. ಪಂಚಮಸಾಲಿಗಳ ಹೋರಾಟಕ್ಕೆ ಯಶಸ್ಸು ಸಿಗದೇ ಇರಲು ಕಾಣದ ಕೈಗಳು ಕೆಲಸ ಮಾಡುತ್ತಿವೆ. ಇದ್ಯಾವುದಕ್ಕೂ ಜಗ್ಗದೆ, ಎದೆಗುಂದದೆ ಯಾರೇ ಮುಖ್ಯಮಂತ್ರಿಯಾಗಿರಲಿ ಯಾವುದೇ ಸರ್ಕಾರ ಬರಲಿ ಜಯ ಸಿಗುವವರೆಗೂ ನಮ್ಮ ಹೋರಾಟ…

Read More

ಮಾದಕ ದ್ರವ್ಯ ನಿರ್ಮೂಲನೆ ಕುರಿತ ಜಿಲ್ಲಾ ಮಟ್ಟದ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ ವಿಜಯಪುರ: ಮಾದಕ ದ್ರವ್ಯ ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಿಗೆ ಹಾಗೂ ಶಾಲಾ-ಕಾಲೇಜಿನ ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅರಿವು ಮೂಡಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸಮಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.ಸೋಮವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮಾದಕ ದ್ರವ್ಯ ನಿರ್ಮೂಲನೆ ಕುರಿತ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆ ತಮ್ಮ ವ್ಯಾಪ್ತಿಯ ಶಾಲಾ-ಕಾಲೇಜ್‌ಗಳ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜಾಗೃತಿ ಮೂಡಿಸಬೇಕು. ಮಾದಕ ದ್ರವ್ಯ ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.ಉಪ ಅರಣ್ಯ ಸಂರಕ್ಷಣಾ ಇಲಾಖೆ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಮಾದಕ ದ್ರವ್ಯ, ಗಾಂಜಾ ಸಸಿ-ಗಿಡಗಳು ಬೆಳೆಯದಂತೆ ಕಟ್ಟೆಚ್ಚರ ವಹಿಸಬೇಕು. ಗಾಂಜಾ ಗಿಡಗಳು ಕಂಡು ಬಂದಲ್ಲಿ ಕೂಡಲೇ ಸಂಬಂಧಿಸಿದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು.…

Read More

ಗುಂಟೆವಾರು ನಿವೇಶನ ರಚಿಸಿ ಮಾರಾಟ ಮಾಡುವುದು ನಿಯಮ ಬಾಹಿರ | ನೀರಿನ ಸಂಪರ್ಕ-ವಿದ್ಯುತ್ ಸಂಪರ್ಕಕ್ಕೆ ಅನುಮತಿ ಇಲ್ಲ ವಿಜಯಪುರ: ನಗರದಾದ್ಯಂತ ವಿಜಯಪುರ ನಗರಾಭಿವೃದ್ದಿ ಪ್ರಾಧಿಕಾರದಿಂದ ಅನುಮೋದನೆ ಪಡೆಯದೆ ಕೆಲ ಭೂ ಮಾಲೀಕರು ತಮ್ಮ ಶೇತ್ಕಿ ಜಮೀನುಗಳನ್ನು ಖಾಸಗಿಯಾಗಿ ವಿಭಾಗಿಸಿ ಗುಂಟೆವಾರು ನಿವೇಶನಗಳನ್ನು ರಚಿಸಿ ಮಾರಾಟ ಮಾಡುವುದು ನಿಯಮ ಬಾಹಿರವಾಗಿದ್ದು, ಈ ರೀತಿಯ ಅನಧಿಕೃತ ಗುಂಟಾ ನಿವೇಶನಗಳ ನಿರ್ಮಾಣದ ಕಡಿವಾಣಕ್ಕೆ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದ್ದಾರೆ.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಜರುಗಿದ ನಗರದ ಸ್ಥಳೀಯ ಯೋಜನಾ ಪ್ರದೇಶಕ್ಕೆ ಸರ್ಕಾರದಿಂದ ಅನುಮೋದನೆಯಾದ ಮಹಾಯೋಜನೆಯಲ್ಲಿ ಪ್ರಸ್ತಾಪಿಸಿರುವ ರಸ್ತೆಗಳಲ್ಲಿ ನಿವೇಶನ-ಕಟ್ಟಡಗಳನ್ನು ಹಾಗೂ ಅನಧಿಕೃತ ಗುಂಟಾ ನಿವೇಶನ ರಚನೆ ತಡೆಗಟ್ಟುವ ಕುರಿತ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಗುಂಟಾ ನಿವೇಶನ ಮಾಡುವ ಭೂ ಮಾಲೀಕರಿಗೆ ಹಲವು ಬಾರಿ ತಿಳುವಳಿಕೆ ನೀಡಿದರೂ ಸಹ ಗುಂಟಾ ನಿವೇಶನ ರಚನೆ ಕಂಡು ಬಂದಿದ್ದು, ಕಡಿವಾಣಕ್ಕೆ ಕಟ್ಟುನಿಟ್ಟಿನ ಕ್ರಮ ವಹಿಸುವಂತೆ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಅನಧಿಕೃತವಾಗಿ ನಿರ್ಮಾಣಗೊಂಡ…

Read More

ವಿಜಯಪುರ: ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದ ವತಿಯಿಂದ ಅನುಷ್ಠಾನಗೊಳಿಸುತ್ತಿರುವ ೨೦೨೪-೨೫ನೇ ಸಾಲಿನ ಅಮೃತ ಸ್ವಾಭಿಮಾನಿ ಕುರಿಗಾಯಿ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ.ಈ ಯೋಜನೆಯಡಿ ಜಿಲ್ಲೆಯ ಅರ್ಹ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಸದಸ್ಯರಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿಯನ್ನು ದಿನಾಂಕ : ೨೬-೦೭-೨೦೨೪ರೊಳಗೆ ಸಹಾಯಕ ನಿರ್ದೇಶಕರು ಕರ್ನಾಟಕ ಕುರಿತು ಮತ್ತು ಉಣ್ಣೆ ಅಭಿವೃದ್ದಿ ನಿಗಮ ನಿಯಮಿತ ವಿಜಯಪುರ ಕಚೇರಿಗೆ ಸಲ್ಲಿಸಬೇಕು. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ ವಿಜಯಪುರ ಮೊ: ೯೯೦೨೩೬೩೧೪೩ ಸಂಖ್ಯೆಗೆ ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.

Read More

ವಿಜಯಪುರ: ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಆವರಣದಲ್ಲಿ ಜುಲೈ ೨೦ ರಂದು ಬೆಳಗ್ಗೆ ೧೦ ಗಂಟೆಗೆ ಐಟಿಐ ಪಾಸಾದ ಹಾಗೂ ಅಂತಿಮ ವರ್ಷದ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳಿಗೆ ಬೆಂಗಳೂರಿನ ಎಚ್ ಎ ಎಲ್ ವತಿಯಿಂದ ಅಪ್ರೆಂಟಿಶಿಪ್ ತರಬೇತಿಗಾಗಿ ಸಂದರ್ಶನ ನಡೆಯಲಿದೆ.ಆಸಕ್ತ ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ಅರ್ಹತೆಯ ಪ್ರಮಾಣ ಪತ್ರಗಳೊಂದಿಗೆ ಭಾಗವಹಿಸಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ದೂ: ೦೮೩೫೨-೨೬೦೩೬೦, ಮೊಬೈಲ್ ೯೮೮೬೪೩೭೫೧೭ ಸಂಪರ್ಕಿಸುವಂತೆ ವಿಜಯಪುರ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿಜಯಪುರ: ೨೦೨೩-೨೪ನೇ ಸಾಲಿಗೆ ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಯಡಿಯಲ್ಲಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ ೩೧ ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ www.kacdc.karnataka.gov.inಅಥವಾ ನಿಗಮದ ಸಹಾಯವಾಣಿ ೯೪೪೮೪೫೧೧೧ ಸಂಪರ್ಕಿಸಬಹುದು ಎಂದು ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ತಿಪ್ಪನಗೌಡ ಕುಮಸಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿಜಯಪುರ: ವಿಜಯಪುರದ ಕೃಷಿ ಮಹಾವಿದ್ಯಾಲಯದಲ್ಲಿ ಅಸಿಸ್ಟೆಂಟ್ ಮೆಡಿಕಲ್ ಆಫೀಸರ್ ಒಂದು ಹುದ್ದೆಗೆ ತಾತ್ಕಾಲಿಕ ನೇಮಕ ಮಾಡಿಕೊಳ್ಳಲು ಜುಲೈ ೩೦ ರಂದು ಬೆಳಗ್ಗೆ ೧೦.೩೦ಕ್ಕೆ ಸಂದರ್ಶನ ನಡೆಯಲಿದೆ ಎಂದು ಕೃಷಿ ಮಹಾವಿದ್ಯಾಲಯದ ಮುಖ್ಯಸ್ಥರು ತಿಳಿಸಿದ್ದಾರೆ.ಶೈಕ್ಷಣಿಕ ಅರ್ಹತೆಯುಳ್ಳ ಅಭ್ಯರ್ಥಿಗಳು ಸಂದರ್ಶನಕ್ಕೆ ಬರುವಾಗ ತಮ್ಮ ವಿದ್ಯಾರ್ಹತೆಗೆ ಸಂಬಂಧಪಟ್ಟ ಎಲ್ಲ ಮೂಲ ದಾಖಲೆ ಹಾಗೂ ಎರಡು ಝರಾಕ್ಸ್ ಪ್ರತಿ ತಮ್ಮ ಭಾವಚಿತ್ರದೊಂದಿಗೆ ಅರ್ಜಿ ನಮೂನೆಗೆ ಲಗತ್ತಿಸಿ, ಸಂದರ್ಶನಕ್ಕೆ ಆಗಮಿಸುವಾಗ ತೆಗೆದುಕೊಂಡು ಬರುವುದು. ಯಾವುದೇ ಸಂದರ್ಭದಲ್ಲಿ ಅರ್ಜಿಯನ್ನು ಮುಂಗಡವಾಗಿ ಕಳುಹಿಸಬಾರದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: ೦೮೩೫೨-೨೯೫೪೧೧ ಮೊ:೯೦೦೮೮೦೬೭೩೯ನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿಜಯಪುರ: ಜಿಲ್ಲೆಯಲ್ಲಿ ಅಪಘಾತ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಿಗ್ನಲ್-ರೋಡ ಬ್ಯಾರಿಕೇಡ್, ಮಾಹಿತಿ ಫಲಕ, ತಿರುವು ರಸ್ತೆಗಳ ಮಾಹಿತಿ, ವೃತ್ತಗಳ ಮಾಹಿತಿ ಅಳವಡಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ರಸ್ತೆ ಅಪಘಾತಗಳನ್ನು ತಡೆಗಟ್ಟಲು ರಸ್ತೆ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಿಳುವಳಿಕೆ ನೀಡಬೇಕು. ರಸ್ತೆಯ ಸುಧಾರಣೆ ಕೈಗೊಂಡು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಪಘಾತ ಸಂಭವಿಸಿದ ಸಂದರ್ಭದಲ್ಲಿ ತಕ್ಷಣ ಸೂಕ್ತ ಸಮಯದಲ್ಲಿ ಚಿಕಿತ್ಸೆ ಒದಗಿಸಲು ಅನುಕೂಲವಾಗುವ ನಿಟ್ಟಿನಲ್ಲಿ ಅಂಬ್ಯುಲೆನ್ಸ್ ವ್ಯವಸ್ಥೆ ಸೇರಿದಂತೆ ತುರ್ತು ವೈದ್ಯಕೀಯ ವ್ಯವಸ್ಥೆ ಒದಗಿಸಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.ಅಪಘಾತ ಪ್ರಕರಣಗಳು ಸಂಭವಿಸಿದ ಸಂದರ್ಭಧಲ್ಲಿ ಸಾವು ನೋವುಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ತುರ್ತು ವೈದ್ಯಕೀಯ ಚಿಕಿತ್ಸೆ ಒದಗಿಸಲು ಹೆದ್ದಾರಿಗಳಲ್ಲಿ ತುರ್ತು ದೂರವಾಣಿ ೧೦೮ ಹೆದ್ದಾರಿ ಹೆಲ್ಪಲೈನ್ ೧೦೩೩ ಟೋಲ್‌ಫ್ರೀ ಫಲಕಗಳನ್ನು ಅಳವಡಿಸಬೇಕು. ಈ ದೂರವಾಣಿಗಳಿಗೆ ಬಂದಿರುವ ಕರೆಗಳಿಗೆ ತುರ್ತಾಗಿ ಸ್ಪಂದಿಸಬೇಕು. ತುರ್ತು…

Read More

ಕೆಂಭಾವಿ: ಯುವಕರು ಆಟೋಟಗಳಲ್ಲಿ ಆಸಕ್ತಿ ವಹಿಸಿದಾಗ ಹುರುಪು, ಹುಮ್ಮಸ್ಸು, ಉತ್ಸಾಹ, ಹೆಚ್ಚಾಗಿ ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಯಾಗುತ್ತದೆ ಎಂದು ಪಿಎಲ್ ಡಿ ಬ್ಯಾಂಕ್ ನಿರ್ದೇಶಕ ವಾಮನರಾವ್ ದೇಶಪಾಂಡೆ ಹೇಳಿದರು.ಪಟ್ಟಣದ ಎಸ್ ಬಿಸಿ ಕ್ಯಾಂಪ್ ನಲ್ಲಿ ಎಕ್ಸ್ ಟ್ರೀಮ್ ಬ್ಯಾಡ್ಮಿಂಟನ್ ಕ್ಲಬ್ ವತಿಯಿಂದ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಡಬಲ್ಸ್ ಬ್ಯಾಡ್ಮಿಂಟನ್ ಟೂರ್ನಮೆಂಟ್ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದ ಅವರು ಆಟಗಾರರು ಸೋಲು ಗೆಲುವನ್ನು ಸಮ ಚಿತ್ತದಿಂದ ಸ್ವೀಕರಿಸಬೇಕು. ಕ್ರೀಡಾಕೂಟಗಳು ಸಾಮರಸ್ಯದ ಸಂಕೇತ ಎಂದವರು. ಕ್ಲಬ್ ಯುವಕರಿಗಾಗಿ ಕ್ರೀಡಾಕೂಟಗಳು ಆಯೋಜಿಸುತ್ತಿರುವುದು ಉತ್ತಮ ಬೆಳವಣಿಗೆ ಎಂದು ಬಣ್ಣಿಸಿದರು.ಎಕ್ಸ್ ಟ್ರೀಮ್ ಬ್ಯಾಡ್ಮಿಂಟನ್ ಕ್ಲಬ್ ಅಧ್ಯಕ್ಷ ಮಹಿಪಾಲರಡ್ಢಿ ಡಿಗ್ಗಾವಿ, ಹಿರಿಯ ಪತ್ರಕರ್ತ ಸಂಜೀವರಾವ್ ಕುಲ್ಕರ್ಣಿ ಕ್ರೀಡಾಕೂಟಗಳನ್ನು ಆಯೋಜಿಸಲು ಕ್ಲಬ್ ವತಿಯಿಂದ ಅಗತ್ಯ ನೆರವು ನೀಡಲಾಗುವುದು. ಮುಂಬರುವ ದಿನಗಳಲ್ಲಿ ಜನಪ್ರತಿನಿಧಿಗಳು ಹಾಗೂ ಸ್ಥಳೀಯರ ಸಹಕಾರದಿಂದ ಸುಸಜ್ಜಿತ ಕ್ರೀಡಾಂಗಣ ನಿರ್ಮಾಣ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.ಇದೇ ವೇಳೆ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದು ಯಾದಗಿರಿ, ದ್ವಿತೀಯ ಸ್ಥಾನ ಪಡೆದ…

Read More

ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳ ಪರದಾಟ | ಉಮರಜ, ರೇವತಗಾಂವ, ಶಿರಾಡೋಣ, ಹಾಲಳ್ಳಿ ವಿದ್ಯಾರ್ಥಿಗಳ ಗೋಳು ಕೇಳುವವರಿಲ್ಲ – ಸಿದ್ರಾಮ ಮಾಳಿರೇವತಗಾಂವ: ತಾಲೂಕಿನ ಬಹುತೇಕ ಗ್ರಾಮಗಳಿಂದ ವಿದ್ಯಾಭ್ಯಾಸಕ್ಕೆ ಹೋಗುವ ವಿದ್ಯಾರ್ಥಿಗಳು ನಿತ್ಯವೂ ಶಾಲಾ-ಕಾಲೇಜಿಗೆ ಬಸ್‌ನಲ್ಲಿ ಹೋಗಬೇಕೆಂದರೆ ಸರ್ಕಸ್ ಮಾಡಬೇಕು. ಇಲ್ಲವಾದರೆ, ತರಗತಿಯೂ ಸಿಗಲ್ಲ, ಮನೆಯಲ್ಲಿ, ಶಾಲಾ, ಕಾಲೇಜುಗಳಲ್ಲಿ ಬೈಸಿಕೊಳ್ಳುವುದು ತಪ್ಪಲ್ಲ!ತಾಲೂಕಿನ ಬಹುತೇಕ ಗ್ರಾಮಗಳಿಂದ ತಾಲೂಕು ಕೇಂದ್ರಗಳಿಗೆ ವಿದ್ಯಾಭ್ಯಾಸಕ್ಕಾಗಿ ಹೋಗುವ ಸಾವಿರಾರು ವಿದ್ಯಾರ್ಥಿಗಳು ಬೆಳಗ್ಗೆ ಮತ್ತು ಸಾಯಂಕಾಲದ ಸಮಯದಲ್ಲಿ ಎದುರಿಸುತ್ತಿರುವ ನಿತ್ಯದ ಸಮಸ್ಯೆ ಇದು. ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶದಲ್ಲಿ ರೈತರು ಹಾಗೂ ಕೂಲಿ ಕಾರ್ಮಿಕರ ಮಕ್ಕಳನ್ನು ನಗರ ಪ್ರದೇಶದಲ್ಲಿನ ಕಾಲೇಜಿಗೆ ಹೋಗುತ್ತಾರೆ. ಬಹುತೇಕರು ಸರಕಾರಿ ಸಾರಿಗೆಯನ್ನೇ ಆಶ್ರಯಿಸಿದ್ದಾರೆ.ವಿದ್ಯಾರ್ಥಿಗಳು ಹಣ ವ್ಯಯಿಸಿ ಸಾರಿಗೆ ಸಂಸ್ಥೆಯ ಬಸ್ ಪಾಸ್ ಪಡೆದರೂ, ಉಪಯೋಗವಿಲ್ಲದಂತಾಗಿದೆ. ಮಕ್ಕಳಿಗೆ ಬೆಳಗ್ಗೆ ಸಂಚರಿಸುವ ಬಸ್‌ಗಳಲ್ಲಿ ಜೀವವನ್ನು ಕೈಯಲ್ಲಿ ಹಿಡಿದು ಸರ್ಕಸ್ ಮಾಡಿಕೊಂಡು ಉಮರಜ, ರೇವತಗಾಂವ, ಶಿರಾಡೋಣ, ಹಾಲಳ್ಳಿ ಗ್ರಾಮಗಳಿಗೆ ಸೇರಬೇಕಾದ ದುಃಸ್ಥಿತಿ ಇದೆ. ಕೆಲವೊಮ್ಮೆ ಬಸ್‌ನ ಬಾಗಿಲಿನಲ್ಲಿ ನೇತಾಡಿಕೊಂಡು ಬಂದ ಹಲವು ಪ್ರಸಂಗಗಳು…

Read More