Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಾಲ ನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ಕಾಯ್ದೆ ೨೦೧೫ರ ಅನ್ವಯ, ವಿವಿಧ ಕಾರಣಗಳಿಂದ ಪೋಷಕರ ಆಸರೆಯಿಲ್ಲದ ಮಕ್ಕಳಿಗೆ ತಾತ್ಕಾಲಿಕ ಆರೈಕೆ ನೀಡುವ ಪೋಷಕತ್ವ ಯೋಜನೆಗೆ ವಿಜಯಪುರ ಜಿಲ್ಲಾ ಮಕ್ಕಳ ರಕ್ಷಣಾ ಘಟಕವು ಅರ್ಹ ಸಾಕು ಪೋಷಕರಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಮಾರಣಾಂತಿಕ ಕಾಯಿಲೆ, ತೀವ್ರ ಅನಾರೋಗ್ಯದಿಂದ ಸಾವು ಅಥವಾ ಇನ್ನಿತರ ಕಾರಣಗಳಿಂದಾಗಿ ಪೋಷಕರ ಆರೈಕೆಯಿಂದ ವಂಚಿತರಾದ ಮಕ್ಕಳನ್ನು ಅವರ ವಿಸ್ತೃತ ಕುಟುಂಬ ಸದಸ್ಯರು ಅಥವಾ ಅಸಂಬಂಧಿತ ವ್ಯಕ್ತಿ ಅಥವಾ ಕುಟುಂಬದಲ್ಲಿ ತಾತ್ಕಾಲಿಕ ಆರೈಕೆ ನೀಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.ಕಾರಣಾಂತರಗಳಿಂದ ದತ್ತು ಸ್ವೀಕಾರಕ್ಕೆ ಒಳಪಡಲು ಸಾಧ್ಯವಿಲ್ಲದ ೦೭ ರಿಂದ ೧೮ ವರ್ಷದೊಳಗಿನ ಮಕ್ಕಳಿಗೆ ತಾತ್ಕಾಲಿಕ ಪೋಷಕರನ್ನು ಒದಗಿಸುವುದು ಈ ಯೋಜನೆಯಡಿ ಸೇರಿದೆ. ವಿಜಯಪುರ ಜಿಲ್ಲೆಗೆ ಸಂಬಂಧಿಸಿದಂತೆ ೨೦೨೬-೨೭ನೇ ಸಾಲಿನಲ್ಲಿ ಪೋಷಕತ್ವ ಕಾರ್ಯಕ್ರಮದಡಿ ಮಾರ್ಗಸೂಚಿಯಂತೆ ಅರ್ಹತಾ ಸಂಭವನೀಯ ಸಾಕು ಪೋಷಕರು ಅರ್ಜಿ ಸಲ್ಲಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಬಿ೪/೩, ವಿವೇಕ ನಗರ ಪಶ್ಚಿಮ,…
ಉದಯರಶ್ಮಿ ದಿನಪತ್ರಿಕೆ ಇಂಡಿ: ಛಲವಾದಿ ಮಹಾಸಭಾ ಉದ್ದೇಶ ಸಮಾಜದ ಸರ್ವೋತೋಮುಖ ಅಭಿವೃದ್ದಿಯೊಂದಿಗೆ ಸಾಮಾಜಿಕ ಸಾಮರಸ್ಯ ಬೆಳೆಸುವ ಮೂಲಕ ಗುಣಾತ್ಮಕ ಸಮಾಜ ಕಟ್ಟುವಲ್ಲಿ ಶ್ರಮಿಸುವ ಸಂಘಟನೆಯಾಗಿದೆ ಎಂದು ಜಿಲ್ಲಾಧ್ಯಕ್ಷ ಸುನೀಲ ಹೊಸಹಳ್ಳಿ ಹೇಳಿದರು.ಪ್ರವಾಸಿ ಮಂದಿರದಲ್ಲಿ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದ ಅವರು, ಛಲವಾದಿ ಮಹಾಸಭಾ ಕಟ್ಟಿದ ದಿ. ಕೆ.ಶಿವರಾಮ ಅಧಿಕಾರಿಗಳ ಪರಿಕಲ್ಪನೆ ಅನೇಕ ಆಯಾಮಗಳಿಂದ ಕೂಡಿತ್ತು. ಛಲವಾದಿ ಸಮುದಾಯ ಗ್ರಾಮೀಣ ಭಾಗದಲ್ಲಿ ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿತ್ತು ಇದನ್ನು ಸುಧಾರಣೆಗೆ ತರಬೇಕು ಎಂಬ ವಿಚಾರಧಾರೆ ಶಿವರಾಮ ಅವರದಾಗಿತ್ತು. ವಿಧಿ ಅವರ ಸಮಾಜ ಮುಖಿ ಕಾರ್ಯ ದೈವಾಧೀನರಾದ ನಂತರ ಇಡೇರಲ್ಲಿಲ್ಲ. ಇಂದು ಅವರ ವಿಚಾರಧಾರೆಯನ್ನೇ ಕೈಗೆತ್ತಿಕೊಂಡ ರಾಜ್ಯ ಸಂಚಾಲಕರಾದ ಶ್ರೀಮತಿ ವಾಣಿ. ಕೆ ಶಿವರಾಂ ರವರು ಸಮಾಜ ಚಿಂತನೆಯಿಂದ ಮತ್ತು ಛಲವಾದಿ ಬಡಮಕ್ಕಳು ಆಯ್,ಎ.ಎಸ್.ಕೆ.ಎ.ಎಸ್ ತರಬೇತಿ ಕಲಿತು ಉನ್ನತ ಹುದ್ದೆ ಅಲಂಕರಿಸಲಿ ಎಂಬ ಸದಾಶಯದೊಂದಿಗೆ ತರಬೇತಿ ಕೇಂದ್ರ ತೆರೆದಿದ್ದಾರೆ ಇದರ ಸದುಪಯೋಗ ಪಡೆಯಬೇಕು. ಛಲವಾದಿ ಮಹಾಸಭಾ ಅಧ್ಯಕ್ಷ ಪದಾಧಿಕಾರಿಗಳು ಗ್ರಾಮೀಣ ಭಾಗ ,ಭೂತ ಮಟ್ಟದಲ್ಲಿ…
ಇಂದು (ಜನೇವರಿ ೨೯, ಬುಧವಾರ) “ಭಾರತೀಯ ವೃತ್ತಪತ್ರಿಕೆಯ ದಿನದ ಪ್ರಯುಕ್ತ ಈ ವಿಶೇಷ ಲೇಖನ ಲೇಖನ- ಮಲ್ಲಪ್ಪ. ಸಿ. ಖೊದ್ನಾಪೂರ (ತಿಕೋಟಾ)ವಿಜಯಪುರ ಉದಯರಶ್ಮಿ ದಿನಪತ್ರಿಕೆ ಡಿ.ವ್ಹಿ.ಗುಂಡಪ್ಪ ಅವರು, “ಪತ್ರಿಕೋದ್ಯಮವು ಜನರನ್ನು ಪ್ರಬುದ್ಧರನ್ನಾಗಿ ಮಾಡಲು ಮತ್ತು ಸಮಾಜಕ್ಕೆ ಸರಿಯದ ದಾರಿಯನ್ನು ತೋರುವ ಏಕೈಕ ಮಾಧ್ಯಮವಾಗಿದೆ” ಎಂದು ಹೇಳಿದ್ದಾರೆ. ಸಮಾಜದ ಏಳ್ಗೆಗೆ ಮತ್ತು ಸಮಾಜದ ಅಂಕು ಡೊಂಕುಗಳ ಕೈಗನ್ನಡಿಯಾಗಿ ಸಮಾಜದ ಆಗುಹೋಗುಗಳ ಮೇಲೆ ಬೆಳಕು ಚೆಲ್ಲುತ್ತವೆ. ಅದರಲ್ಲೂ ಕನ್ನಡ ಪತ್ರಿಕೆಗಳು ಸ್ವಾತಂತ್ರ್ಯ ಪೂರ್ವದಲ್ಲಿ, ಸಂಗ್ರಾಮದಲ್ಲಿ ಮತ್ತು ಕರ್ನಾಟಕ ಏಕೀಕರಣದಂತಹ ಸಂದರ್ಭದಲ್ಲಿ ನಾಗರೀಕತೆಯ ಬೆಳವಣಿಗೆಯಲ್ಲಿ ಉತ್ತಮ ಸೇವೆಯನ್ನು ಸಲ್ಲಿಸಿದೆ. ನಮಗೆ ಜಗತ್ತಿನ ಎಲ್ಲ ಅಗು-ಹೋಗುಗಳ ಕುರಿತು ತಿಳಿಸಿಕೊಡುವುದೇ ವೃತ್ತಪತ್ರಿಕೆ. ಇಂದಿನ ಡಿಜಿಟಲ್ ಯುಗದಲ್ಲಿ ವೃತ್ತಪತ್ರಿಕೆಯು ಇ-ಪೇಪರ್, ಸಾಮಾಜಿಕ ಜಾಲತಾಣ ಮತ್ತು ವಿವಿಧ ವೆಬಸೈಟಗಳ ಮೂಲಕವೂ ತಮ್ಮ ಕಾರ್ಯವ್ಯಾಪ್ತಿಯನ್ನು ಹೆಚ್ಚಿಸುತ್ತಾ ಅತ್ಯಂತ ವಿಶ್ವಾಸಾರ್ಹ ಸಂಪರ್ಕ-ಸಂವಹನ ಮಾಧ್ಯಮವಾಗಿ ಪರಿಣಮಿಸಿದೆ. ಕನ್ನಡ ಭಾಷೆ, ಸಾಹಿತ್ಯ ಮತ್ತು ಕರುನಾಡಿನ ಸುದ್ದಿ ಪ್ರಕಟಿಸುವ ಪ್ರಥಮ ಪತ್ರಿಕೆಜರ್ಮನ್ ಮಿಷನರಿ ರೆವರೆಂಡ್ ಹರ್ಮನ್ ಮ್ಯಾಗ್ಲಿಂಗ್ ಎಂಬುವವರಿAದ…
ಎಂಎಲ್ಸಿ ಸುನೀಲಗೌಡ ಪಾಟೀಲ ನಿವಾಸಕ್ಕೆ ಆಗಮಿಸಿದ ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಾಜ್ಯದಲ್ಲಿ ಸಮಗ್ರ ಮತದಾರರ ಪರಿಷ್ಕರಣೆ (SIR) ಪ್ರಕ್ರಿಯೆ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಅವರು ತಮ್ಮ ನಿವಾಸಕ್ಕೆ ಆಗಮಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಿದರು.ತಮ್ಮ ನಿವಾಸಕ್ಕೆ ಆಗಮಿಸಿದ ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಮತಗಟ್ಟೆ ಸಂಖ್ಯೆ 46ರ ಅಧಿಕಾರಿಗಳಾದ ಅಜೀತ ಬಿಜ್ಜೂರ ಹಾಗೂ ಫಯಾಜ್ ಮಂಡೆ ಅವರು ಶಾಸಕರಿಂದ ಮಾಹಿತಿ ಸಂಗ್ರಹಿಸಿದರು.ಈ ಸಂದರ್ಭದಲ್ಲಿ ಅಗತ್ಯವಾದ ಎಲ್ಲ ಮಾಹಿತಿಯನ್ನು ಒದಗಿಸಿದ ಶಾಸಕರು, ಪ್ರತಿಯೊಬ್ಬರು ಈ ಪ್ರಕ್ರಿಯಲ್ಲಿ ಪಾಲ್ಗೊಂಡು ಮತದಾರರ ಪಟ್ಟಿಯಲ್ಲಿ ತಮ್ಮ ಹಾಗೂ ಕುಟುಂಬ ಸದಸ್ಯರ ಹೆಸರುಗಳು ಮುಂದುವರೆಯುವುದನ್ನು ಖಚಿತ ಪಡಿಸಿಕೊಳ್ಳಬೇಕು ಎಂದು ಹೇಳಿದರು.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಿ. ಎಲ್. ಡಿ. ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದ ಹಿರಿಯ ನಾಗರಿಕರ ವೈದ್ಯಕೀಯ ವಿಭಾಗದ ವತಿಯಿಂದ ಬುಧವಾರ ಹಿರಿಯ ನಾಗರಿಕರ ಮೇಲಿನ ದೌರ್ಜನ್ಯ ತಡೆ ಮತ್ತು ಜಾಗೃತಿ ಕುರಿತು ಕಾರ್ಯಕ್ರಮವನ್ನು ನಡೆಯಿತು.ಕಾರ್ಯಕ್ರಮಕ್ಕೆ ಚಾಲನೆ ನೀಡಿದ ವಿಜಯಪುರ ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿ ಜಗದೀಶ ಕೆ. ಮಾತನಾಡಿ, ಹಿರಿಯ ನಾಗರಿಕರ ಮೇಲಿನ ದೌರ್ಜನ್ಯಕ್ಕೆ ಒಳಗಾದವರಿಗೆ ಸರಕಾರದಿಂದ ಲಭ್ಯವಿರುವ ನಾನಾ ನೆರವು ಹಾಗೂ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು.ಕುಟುಂಬದಲ್ಲಿ ದೌರ್ಜನ್ಯವನ್ನು ತಡೆಗಟ್ಟಲು ಹೊಸ ತಲೆಮಾರಿನೊಂದಿಗೆ ಹೊಂದಾಣಿಕೆ ಬೆಳೆಸಿಕೊಳ್ಳುವುದು ಅತ್ಯಂತ ಅಗತ್ಯವಾಗಿದೆ. ಮಕ್ಕಳ ಸಣ್ಣಪುಟ್ಟ ತಪ್ಪುಗಳನ್ನು ಕ್ಷಮಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಕುಟುಂಬದಲ್ಲಿ ಸೌಹಾರ್ದಯುತ ವಾತಾವರಣ ನಿರ್ಮಿಸಬೇಕು ಮತ್ತು ಪರಸ್ಪರ ಸಹಕಾರದಿಂದ ಕುಟುಂಬವನ್ನು ಸದೃಢವಾಗಿರಿಸಬೇಕು ಎಂದು ಅವರು ಸಲಹೆ ನೀಡಿದರು.ಬಿ.ಎಲ್.ಡಿ.ಇ ಡೀಮ್ಡ್ ವಿವಿ ಕಾನೂನು ಶಾಲೆಯ ಪ್ರಾಚಾರ್ಯ ಡಾ. ರಘುವೀರ ಕುಲಕರ್ಣಿ ಮಾತನಾಡಿ,…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಜಲನಗರದಲ್ಲಿರುವ ಬಿ. ಎಂ. ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ವಿಶ್ವ ತಾಯಂದಿರ ದಿನ ಆಚರಿಸಲಾಯಿತು.ಮಂಗಳವಾರ ನಡೆದ ಕಾರ್ಯಕ್ರಮಕ್ಕೆ ಶಾಲೆಯ ಪ್ರಾಚಾರ್ಯ ವಿಕ್ರಂ ನಾರ್ವೆೇಕರ ಚಾಲನೆ ನೀಡಿದರು.ಬಳಿಕ ಮಾತನಾಡಿದ ಅವರು ಪ್ರತಿಯೊಬ್ಬರ ಯಶಸ್ಸಿನ ಹಿಂದೆ ತಾಯಿ ಆಶೀರ್ವಾದ, ಪ್ರೋತ್ಸಾಹ, ಪರಿಶ್ರಮ, ತ್ಯಾಗ ಅಡಗಿರುತ್ತದೆ. ಆದ್ದರಿಂದ ಇಂಥ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ತಾಯಿಯನ್ನು ಗೌರವಿಸಬೇಕು ಎಂದು ಹೇಳಿದರು.ಕಾರ್ಯಕ್ರಮದಲ್ಲಿ ತಾಯಂದಿರಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಮಕ್ಕಳ ಮನೋರಂಜನೆ ಮತ್ತು ನಾಬಾ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು.ಈ ಸಂದರ್ಭದಲ್ಲಿ ಶಾಲೆಯ ಹಿರಿಯ ಸಂಯೋಜಕಿ ಜಯಾ ಗಲಗಲಿ, ಬೋಧಕ, ಬೋಧಕರ ಹೊರತಾದ ಸಿಬ್ಬಂದಿ, ಪಾಲಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ-೨೦೨೬ | ವಿಜಯಪುರ ಜಿಲ್ಲಾಧಿಕಾರಿ & ಜಿಲ್ಲಾ ಚುನಾವಣಾಧಿಕಾರಿ ಡಾ.ಆನಂದ ಕೆ ಹೇಳಿಕೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ-೨೦೨೬ ಪ್ರಕ್ರಿಯೆಯು ಪ್ರಸ್ತುತ ಜಾರಿಯಲ್ಲಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಇದೇ ಜೂನ್.೩೦ ರಿಂದ ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ-ಮನೆ ಭೇಟಿ ನೀಡಲಿದ್ದಾರೆ ಎಂದು ವಿಜಯಪುರ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ.ಆನಂದ ಕೆ ಅವರು ತಿಳಿಸಿದ್ದಾರೆ.ದಿನಾಂಕ: ಜೂ.೩೦ರಿಂದ ಜುಲೈ.೨೯ರವರೆಗೆ ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಅವರು ಜಿಲ್ಲೆಯ ಮನೆ-ಮನೆಗೆ ಭೇಟಿ ನೀಡಲಿದ್ದಾರೆ. ಭೇಟಿಯ ಸಂದರ್ಭದಲ್ಲಿ ಅಧಿಕಾರಿಗಳು ಎನ್ಯೂಮರೇಷನ್ ಫಾರ್ಮ್ ಗಳನ್ನು ದ್ವಿ-ಪ್ರತಿಯಲ್ಲಿ ಪ್ರತಿಯೊಬ್ಬ ಮತದಾರರಿಗೆ ನೀಡಲಿದ್ದಾರೆ. ಮತದಾರರು ಈ ಫಾರ್ಮ್ಗಳನ್ನು ಭರ್ತಿ ಮಾಡಿ, ಮರಳಿ ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ(ಬಿಎಲ್‌ಒ )ಅವರಿಗೆ ಹಿಂದಿರುಗಿಸುವಂತೆ ತಿಳಿಸಿದ್ದಾರೆ.ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ-೨೦೨೬ ರ ಕುರಿತು ಹೆಚ್ಚಿನ ಮಾಹಿತಿ ಮತ್ತು ವಿವರವನ್ನು ಚುನಾವಣಾ ಆಯೋಗದ ಅಧಿಕೃತ ಅಂತರಜಾಲ ತಾಣಗಳಾದ Voters Service Portal: https://voters.eci.gov.in/ಮುಖ್ಯ…
ಮುದ್ದೇಬಿಹಾಳದಲ್ಲಿ ೧೨ ಪ್ರಕರಣ ದಾಖಲು | ರೂ.೨,೩೦೦ ದಂಡ ವಸೂಲಿ ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ತಂಬಾಕು ನಿಯಂತ್ರಣಕ್ಕೆ ತಾಲೂಕಿನ ಕುಂಟೋಜಿ ಗ್ರಾಮದಲ್ಲಿ ಆರೋಗ್ಯ ಇಲಾಖೆಯ ನೇತೃತ್ವದಲ್ಲಿ ತಂಬಾಕು ನಿಯಂತ್ರಣ ಕೋಶ ಹಾಗೂ ತಾಲೂಕು ತಂಬಾಕು ತನಿಖಾ ದಳದ ಸದಸ್ಯರು ಕೊಟ್ಟಾ ಕಾಯ್ದೆಯಡಿ ವಿಶೇಷ ದಾಳಿ ನಡೆಸಿ, ನಿಯಮ ಉಲ್ಲಂಘಿಸಿದ ಅಂಗಡಿ ಮಾಲೀಕರ ವಿರುದ್ಧ ೧೨ ಪ್ರಕರಣಗಳನ್ನು ದಾಖಲಿಸಿ ಒಟ್ಟು ₹೨,೩೦೦ ದಂಡ ವಸೂಲಿ ಮಾಡಿದ್ದಾರೆ.ಗ್ರಾಮದ ಮುಖ್ಯರಸ್ತೆಯಿಂದ ಬಸವೇಶ್ವರ ದೇವಸ್ಥಾನದವರೆಗೆ ಹಾಗೂ ಮುದ್ದೇಬಿಹಾಳ ರಸ್ತೆಯಲ್ಲಿರುವ ಚಹಾ ಅಂಗಡಿಗಳು ಸೇರಿದಂತೆ ವಿವಿಧ ವ್ಯಾಪಾರ ಮಳಿಗೆಗಳ ಮೇಲೆ ದಾಳಿ ನಡೆಸಿದ ಅಧಿಕಾರಿಗಳು, ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಸಂಬಂಧಿಸಿದ ನಿಯಮಗಳನ್ನು ಉಲ್ಲಂಘಿಸಿದ ಅಂಗಡಿಗಳ ವಿರುದ್ಧ ಕ್ರಮ ಕೈಗೊಂಡಿದ್ದಾರೆ.ದಾಳಿಯ ವೇಳೆ ಸಾರ್ವಜನಿಕರಿಗೆ ತಂಬಾಕು ಸೇವನೆಯ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಿ, ಅಂಗಡಿ ಮಾಲೀಕರು ಹಾಗೂ ವ್ಯಾಪಾರಸ್ಥರಿಗೆ ಕೊಟ್ಟಾ ಕಾಯ್ದೆಯ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಎಚ್ಚರಿಕೆ ಸಹ ನೀಡಿದ್ದಾರೆ.ಈ ವೇಳೆ ಕಾಯ್ದೆಯ ಸೆಕ್ಷನ್ ೪ ಹಾಗೂ ೬(ಎ) ಅನ್ವಯ ಕಡ್ಡಾಯವಾಗಿ…
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಪಟ್ಟಣದ ಇಂದಿರಾನಗರದ ಸರ್ವೇ ನಂ. ೫೯ರಲ್ಲಿ ನಿರ್ಮಿಸಲಾಗಿರುವ ಚರಂಡಿಯನ್ನು ತಕ್ಷಣ ಸ್ವಚ್ಛಗೊಳಿಸಿ, ಅನಧಿಕೃತವಾಗಿ ನಿರ್ಮಿಸಲಾಗಿರುವ ಕಟ್ಟಡಗಳನ್ನು ತೆರವುಗೊಳಿಸುವಂತೆ ಆಗ್ರಹಿಸಿ ಸ್ಥಳೀಯ ನಿವಾಸಿಗಳು ಮುಖಂಡ ಮಹಿಬೂಬ ಅವಟಿ ನೇತೃತ್ವದಲ್ಲಿ ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ ಅವರಿಗೆ ಮನವಿ ಸಲ್ಲಿಸಿದರು.ಈ ಹಿಂದೆ ಸಾರ್ವಜನಿಕರು ನಡೆಸಿದ್ದ ಧರಣಿಯ ನಂತರ ಪುರಸಭೆ ಅಧಿಕಾರಿಗಳು ಸ್ಪಂದಿಸಿ ಕೆಲವು ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸಿದ್ದಕ್ಕಾಗಿ ಅಭಿನಂದನೆ ಸಲ್ಲಿಸಿದ ನಿವಾಸಿಗಳು ತೆರವುಗೊಳಿಸಿದ ಕಟ್ಟಡಗಳ ಅವಶೇಷಗಳನ್ನು ಇನ್ನೂ ಸ್ಥಳದಿಂದ ತೆರವುಗೊಳಿಸದ ಕಾರಣ ಸಾರ್ವಜನಿಕರ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದೆ ಎಂದು ದೂರಿದರು.ಇದಲ್ಲದೆ, ಚರಂಡಿಯಲ್ಲಿ ಕೊಳಚೆ ನೀರು ನಿಂತು ದುರ್ವಾಸನೆ ಹರಡುತ್ತಿದ್ದು, ಸೊಳ್ಳೆಗಳ ಕಾಟ ಹೆಚ್ಚಾಗಿ ಸುತ್ತಮುತ್ತಲಿನ ನಿವಾಸಿಗಳ ಆರೋಗ್ಯಕ್ಕೂ ಅಪಾಯ ಉಂಟಾಗುತ್ತಿದೆ ಕೂಡಲೇ ಚರಂಡಿಯನ್ನು ಸ್ವಚ್ಛಗೊಳಿಸಿ, ಕೊಳಚೆ ನೀರು ಸರಾಗವಾಗಿ ಹರಿಯುವಂತೆ ಅಗತ್ಯ ಕಾಮಗಾರಿ ಕೈಗೊಳ್ಳುವ ಮೂಲಕ ಸ್ವಚ್ಛತೆಗೆ ಆದ್ಯತೆ ಕೊಡಬೇಕು ಮತ್ತು ಸರ್ವೇ ನಂ. ೫೯ರಲ್ಲಿ ನಿರ್ಮಾಣವಾಗಿರುವ ಎಲ್ಲಾ ಅನಧಿಕೃತ ಕಟ್ಟಡಗಳ ಬಗ್ಗೆ ಸಮಗ್ರ ಪರಿಶೀಲನೆ ನಡೆಸಿ, ನಿಯಮಾನುಸಾರ ಕ್ರಮ…
