Author: editor.udayarashmi@gmail.com

ವಿಜಯಪುರ: ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಕುಬಕಡ್ಡಿ ಗ್ರಾಮದ RMSMA ಪ್ರೌಢ ಶಾಲೆಯಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಆಚರಿಸಲಾಯಿತುಈ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರು ಮತ್ತು ಆರೋಗ್ಯ ಸಿಬ್ಬಂದಿ ಹಾಜರಿದ್ದರು.

Read More

ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣ | 20ಕ್ಕೂ ಹೆಚ್ಚು ಸ್ಥಳಗಳ ಮೇಲೆ ಇಡಿ ದಾಳಿ | ಶಾಂತಿನಗರದ ಇಡಿ ಕಚೇರಿಗೆ ಕರೆದೊಯ್ದ ಅಧಿಕಾರಿಗಳು ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಬ್ಯಾಂಕ್‌ ಖಾತೆಯಿಂದ ಅಕ್ರಮವಾಗಿ ಹಣ ವರ್ಗಾವಣೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಬಳ್ಳಾರಿ ಗ್ರಾಮೀಣ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಜು.12 ರಂದು ತಮ್ಮ ವಶಕ್ಕೆ ಪಡೆದಿದ್ದಾರೆ.ಬೆಂಗಳೂರಿನ ಸದಾಶಿವನಗರದ ಡಾಲರ್ಸ್‌ ಕಾಲೊನಿಯ ನಿವಾಸದಿಂದ ನಾಗೇಂದ್ರ ಅವರನ್ನು ಶುಕ್ರವಾರ ಬೆಳಿಗ್ಗೆ ವಶಕ್ಕೆ ಪಡೆದ ಅಧಿಕಾರಿಗಳು, ಶಾಂತಿನಗರದಲ್ಲಿರುವ ಇಡಿ ಕಚೇರಿಗೆ ಕರೆದೊಯ್ದಿದ್ದಾರೆ. ನಾಗೇಂದ್ರ ಮತ್ತು ಶಾಸಕ ಬಸನಗೌಡ ದದ್ದಲ್ ಅವರ ಆಪ್ತರು ಮತ್ತು ಆಪ್ತ ಸಹಾಯಕರನ್ನು ಕೂಡ ಇದೇ ಕಚೇರಿಯಲ್ಲಿ ಇರಿಸಲಾಗಿದೆ.ಇಡಿ ಅಧಿಕಾರಿಗಳು ಕರೆದೊಯ್ಯುವಾಗ ಮಾಧ್ಯದವರಿಗೆ ಪ್ರತಿಕ್ರಿಯಿಸಿದ ಬಿ.ನಾಗೇಂದ್ರ “ನಾನೇನು ಮಾಡಿಲ್ಲ, ನನಗೇನು ಗೊತ್ತಿಲ್ಲ. ಸುಮ್ಮನೆ ಕರೆದುಕೊಂಡು ಬಂದಿದ್ದಾರೆ” ಎಂದು ಹೇಳಿದ್ದಾರೆ.ಮಾಜಿ ಸಚಿವ ಬಿ. ನಾಗೇಂದ್ರ ಮತ್ತು ವಾಲ್ಮೀಕಿ ನಿಗಮದ ಅಧ್ಯಕ್ಷರೂ…

Read More

ಬಂಜಾರಾ ಪ್ರೌಢ ಶಾಲೆಯಲ್ಲಿ ಚುನಾವಣಾ ಮಾದರಿಯಲ್ಲಿ ಶಾಲಾ ಸಂಸತ್ ಚುನಾವಣೆ ವಿಜಯಪುರ: ಭಾರತದ ಭಾವಿ ಮತದಾರ ಆಗಲಿರುವ ಫ್ರೌಢ ಶಾಲಾ ಮಕ್ಕಳು ನಮ್ಮ ಚುನಾವಣಾ ಮಾದರಿ ಅನುಸರಿಸಲಾಗಿದೆ. ಚುನಾವಣೆಯಲ್ಲಿ ಒಬ್ಬ ವ್ಯಕ್ತಿಯನ್ನು ಆಯ್ಕೆ ಮಾಡುವುದರಲ್ಲಿ ಮತದಾರರ ಜವಾಬ್ದಾರಿ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸುವುದಾಗಿದೆ ಎಂದು ಶಾಲಾ ಚುನಾವಣಾ ಅಧಿಕಾರಿಗಳಾದ ಎಸ್.ಕೆ.ಸಿಂಧೆಯವರು ಹೇಳಿದರು.ಶುಕ್ರವಾರದಂದು ನಗರದ ಜಿಲ್ಲಾ ಬಂಜಾರಾ ವಿದ್ಯಾವರ್ಧಕ ಸಂಘದ ಬಂಜಾರಾ ಪ್ರೌಢ ಶಾಲೆಯಲ್ಲಿ ಚುನಾವಣಾ ಮಾದರಿಯಲ್ಲಿ ಶಾಲಾ ಸಂಸತ್ ಚುನಾವಣೆ ಜರುಗಿತು. ನಾಮಪತ್ರ ಸಲ್ಲಿಕೆ, ಚಿಹ್ನೆ ನೀಡುವಿಕೆ, ಬ್ಯಾಲೇಟ್ ಪೇಪರ್, ಚುನಾವಣಾ ಪ್ರಚಾರ, ಸಿಬ್ಬಂದಿಗಳ ನೇಮಕ, ಮತ ಹಾಕಿದ ವಿದ್ಯಾರ್ಥಿಗಳಿಗೆ ಶಾಹಿ ಬಳಕೆ, ಏಜೆಂಟರ ನೇಮಕ ಮಾಡುವ ಮೂಲಕ ಚುನಾವಣಾ ಮಾದರಿಯಲ್ಲಿಯೇ ಶಾಲಾ ಸಂಸತ್ತು ಚುನಾವಣೆ ಯಶಸ್ವಿಯಾಗಿ ನೆರವಾಯಿತು. ಈ ವೇಳೆ ೪೫೦ ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತದಾನ ಮಾಡಿ ತಮ್ಮ ನಾಯಕರನ್ನು ಆರಿಸಿದರು.ಈ ವೇಳೆಯಲ್ಲಿ ಮಾತನಾಡಿದ ಅವರು. ಚುನಾವಣೆಯಲ್ಲಿ ಆಸಕ್ತಿ ಮತ್ತು ನಾಯಕತ್ವದ ಗುಣ ಬೆಳೆಸುವ ಭಾಗವಾಗಿ ಈ ಚುನಾವಣೆ…

Read More

ವಿಜಯಪುರ: ನಗರದ ಗಾಂಧಿನಗರ ಬಡಾವಣೆಯಲ್ಲಿರುವ ಕಲ್ಲು ಗಣಿಗಾರಿಕೆಯಿಂದ ಉಂಟಾಗುತ್ತಿರುವ ಗುಂಡಿಯ ಸುತ್ತಲೂ ಗೋಡೆಯನ್ನು ನಿರ್ಮಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವಂತೆ ಸೋಶಿಯಲ್ ಡೆಮೋಕ್ರೇಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಅತಾವುಲ್ಲಾ ದ್ರಾಕ್ಷೀ ಮಾತನಾಡಿ, ವಿಜಯಪುರ ನಗರದ ಗಾಂಧಿನಗರ ಬಡಾವಣೆಯಲ್ಲಿ ನೀರಿನ ಟ್ಯಾಂಕ್ ಹತ್ತಿರ ಕಳೆದ ಹಲವಾರು ವರ್ಷಗಳಿಂದ ಇರುವ ಕಲ್ಲು ಗಣಿಗಾರಿಕೆಯಿಂದ ಉಂಟಾಗಿರುವ ಗುಂಡಿಯ ಸುತ್ತಲು ಸುರಕ್ಷತೆಗಾಗಿ ಸಂಬಂಧಪಟ್ಟ ಇಲಾಖೆಯಿಂದ ಯಾವುದೇ ರೀತಿಯ ಕ್ರಮ ಕೈಗೊಳ್ಳದ ಕಾರಣ ಅಲ್ಲಿ ಸುತ್ತು ಮುತ್ತಲೂ ವಾಸಿಸುವ ಜನ – ಜಾನುವಾರುಗಳ , ವಾಹನ ಸವಾರರ ಮತ್ತು ಶಾಲಾ ಮಕ್ಕಳಿ ಜೀವಕ್ಕೆ ಹಾನಿ ಉಂಟಾಗುವ ಸಂಭವ ಇರುತ್ತದೆ. ಅದಲ್ಲದೆ ಗುಂಡಿಯಲ್ಲಿ ಮಳೆ ನೀರು ತುಂಬಿರುವುದರಿಂದ ಜನ – ಜಾನುವಾರುಗಳ ಜೀವಹಾನಿ ಉಂಟಾಗುವ ಸಂಭವ ಹೆಚ್ಚಾಗಿದ್ದು, ಗುಂಡಿಯಲ್ಲಿ ಮಳೆ ನೀರು ತುಂಬಿದ್ದರಿಂದ ಅಲ್ಲಿ ಸುತ್ತು ಮುತ್ತಲೂ ವಾಸಿಸುವ ಜನರದ ಆರೋಗ್ಯದ ಮೇಲೆ ಗಂಭೀರ ದುಷ್ಪರಿಣಾಮ ಬೀರುತ್ತಿದೆ. ಅದಲ್ಲದೆ ಕೆಲವು ತಿಂಗಳುಗಳ…

Read More

ವಿಜಯಪುರ: ನಗರದಲ್ಲಿರುವ ಅಕ್ಕಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯದಲ್ಲಿ ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ನೂತನ ವಸತಿ ನಿಲಯ ಮಂಜೂರು ಮಾಡಲು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಪುಂಡಲೀಕ ಮಾನವರ ರವರಿಗೆ ದಲಿತ ವಿದ್ಯಾರ್ಥಿ ಪರಿಷತ್ ಮೂಲಕ ಮನವಿ ಮಾಡಲಾಯಿತು.ದಲಿತ ವಿದ್ಯಾರ್ಥಿ ಪರಿಷತ್ ಮುಖಂಡ ಅಕ್ಷಯ್ ಕುಮಾರ್ ಅಜಮನಿಯವರು ಮಾತನಾಡಿ, ವಿಜಯಪುರ ಜಿಲ್ಲೆಯಲ್ಲಿರುವ ರಾಜ್ಯದ ಏಕೈಕ ಮಹಿಳಾ ವಿಶ್ವವಿದ್ಯಾಲಯವಾದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯಕ್ಕೆ ರಾಜ್ಯದ ನಾನಾ ಭಾಗಗಳಿಂದ ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಆಗಮಿಸುತ್ತಾರೆ.ಈ ಬಾರಿ ಹೆಚ್ಚಿನ ವಿದ್ಯಾರ್ಥಿನಿಯರು ಕೋರ್ಸ್ಗಳಿಗೆ ಪ್ರವೇಶ ಪಡೆದುಕೊಂಡಿರುವುದರಿಂದ ವಿದ್ಯಾರ್ಥಿಗಳಿಗೆ ಕ್ಯಾಂಪಸ್‌ನಲ್ಲಿ ಈಗಿರುವ ವಸತಿ ನಿಲಯಗಳಲ್ಲಿ ಅವಕಾಶ ಸಿಗದೇ ಹೊರಗಡೆ ರೂಮ್ ಮಾಡಿಕೊಂಡು ಓದಬಹುದು ಕಷ್ಟದ ಸಂಗತಿ ಆಗಿದೆ, ಅದರಲ್ಲೂ ಕಾಲೇಜಿನ ಸಮಯಕ್ಕೆ ಸರಿಯಾಗಿ ಬಸ್ ಗಳಿಲ್ಲದೆ ಕ್ಲಾಸ್ ಗಳನ್ನು ತಪ್ಪಿಸುವ ಸಂಭವ ಉಂಟಾಗಿದೆ ಪ್ರತಿದಿನ ಕಾಲೇಜಿನಿಂದ ರೂಮಿಗೆ ರೂಮಿನಿಂದ ಕಾಲೇಜಿಗೆ ಓಡಾಡುವದರಿಂದ ವಿದ್ಯಾಭ್ಯಾಸದಲ್ಲಿ ಕುಂಠಿತವಾಗುತ್ತಿದೆ.ಅದಕ್ಕಾಗಿ ಹೆಣ್ಣು ಮಕ್ಕಳ ರಕ್ಷಣೆ ಮತ್ತು ಹಿತ ದೃಷ್ಟಿಯಯಿಂದ ಸಮಾಜ ಕಲ್ಯಾಣ…

Read More

ಚಿಮ್ಮಡದಲ್ಲಿ ಸಸಿ ನೆಡುವ ಕಾರ್ಯಕ್ರಮ | ನಿವೃತ್ತ ಅಧಿಕಾರಿಯ ಪರಿಸರ ಪ್ರೇಮ ಚಿಮ್ಮಡ: ಮನುಕುಲ, ಪಕ್ಷಿ ಸಂಕುಲ ಸೇರಿದಂತೆ ಸಕಲ ಜೀವರಾಶಿಗಳ ಉಳಿವಿಗೆ ಹಸಿರು ಪರಿಸರ ಕಾಪಾಡಿಕೊಳ್ಳುವ ಅಗತ್ಯತೆ ಹೆಚ್ಚಿದೆ ಎಂದು ಚಿಮ್ಮಡ ವಿರಕ್ತಮಠದ ಶ್ರೀ ಪ್ರಭು ಮಹಾಸ್ವಾಮಿಗಳು ಹೇಳಿದರು.ಗ್ರಾಮದ ಗುಡ್ಡದ ಪ್ರಭುಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ನಿವೃತ್ತ ವಲಯ ಅರಣ್ಯಾಧಿಕಾರಿ ವಾಸುದೇವ ಇಗವೆಯವರು ಆಯೋಜಿಸಿದ್ದ “ಸಸಿ ನೆಡುವ ಕಾರ್ಯಕ್ರಮ”ದ ಸಾನಿಧ್ಯವಹಿಸಿ ಮಾತನಾಡಿದ ಅವರು ಅಭೀವೃದ್ದಿ, ಆದುನಿಕತೆಯ ಭರಾಟೆಯಲ್ಲಿ ಲಕ್ಷಾಂತರ ಗಿಡ, ಮರಗಳನ್ನು ಕಡಿದು ಹಾಕಲಾಗುತ್ತಿದೆ. ಅದಕ್ಕೆ ಪ್ರತಿಯಾಗಿ ಸಾವಿರಾರು ಗಿಡಗಳನ್ನು ನೆಡಲಾಗುತ್ತಿದೆ ಆದರೆ ಅವುಗಳ ಪೋಷಣೆ ಮಾಡದ್ದರಿಂದ ಶೇ. ೯೦ ರಷ್ಟು ಗಿಡಗಳು ಹಾಳಾಗುತ್ತಿವೆ ಇಂಥಹ ಸಂಧರ್ಬದಲ್ಲಿ ವಾಸುದೇವ ರವರು ನಿವೃತ್ತಿ ಹೊಂದಿದ್ದರು ಪರಿಸರ ಬೆಳೆಸುವ ಅವರ ಕಾಳಜಿ ಮಾದರಿಯಾಗಿದೆ ಎಂದರು.ಸ್ಥಳಿಯ ರಘುನಾಥ ಪ್ರೀಯ ಸಾಧು ಮಹಾರಾಜರ ಮಠದ ಶ್ರೀ ಜನಾರ್ಧನ ಮಹಾರಾಜರು ಮಾತನಾಡಿ, ಗ್ರಾಮದ ಯುವಕರ ಕಾಳಜಿಯಿಂದ ಗ್ರಾಮದ ಬಂಜರು ಪ್ರದೇಶ ಇಂದು ಹಸಿರು ತಾಣವಾಗಿದೆ. ಗುಡ್ಡದ ದೇವಸ್ಥಾನ ಇಂದು…

Read More

ಚಡಚಣ: ಜಾಗತಿಕ ಜನಸಂಖ್ಯೆಯ ಪ್ರಮಾಣ ಹೆಚ್ಚುತ್ತಿರುವುದಿಂದ ಸಾಮಾಜಿಕ, ಆರ್ಥಿಕ, ಪರಿಸರ ನಾಶದಂತಹ ಅನೇಕ ಸಮಸ್ಯೆಗಳು ಕಾಡುತ್ತಿವೆ. ಇಂದು ಹೆಚ್ಚುತ್ತಿರುವ ಜನಸಂಖ್ಯೆ ಮಾನವನಿಗೆ ಒಂದು ಸವಾಲಾಗಿ ಪರಿಣಮಿಸಿದೆ ಎಂದು ಶಿಕ್ಷಕರಾದ ಆರ್.ಎಂ.ಚೋಪಡೆ ಹೇಳಿದರು.ಗುರುವಾರದಂದು ರೇವತಗಾಂವ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ‘ವಿಶ್ವ ಜನಸಂಖ್ಯಾ ದಿನ’ದ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿ. ಹೆಚ್ಚುತ್ತಿರುವ ಜನಸಂಖ್ಯೆ ಮತ್ತು ಅದರ ದುಷ್ಪರಿಣಾಮಗಳ ಬಗ್ಗೆ ಜನರಿಗೆ ಅರಿವು ಮೂಡಿಸಲು ಮತ್ತು ಜನಸಂಖ್ಯೆಯ ಬೆಳವಣಿಗೆಯ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸಲು ಪ್ರತಿವರ್ಷ ಜುಲೈ ೧೧ ರಂದು ವಿಶ್ವ ಜನಸಂಖ್ಯಾ ದಿನವನ್ನು ಆಚರಿಸಲಾಗುತ್ತಿದೆ ಎಂದು ಹೇಳಿದರು.ಈ ವೇಳೆಯಲ್ಲಿ ಶಿಕ್ಷಕರಾದ ಎಂ.ಸಿ.ಮಾಳಾಬಗಿಯವರು ಮಾತನಾಡುತ್ತ. ಈ ದಿನವು ಜನಸಂಖ್ಯೆಯ ಬೆಳವಣಿಗೆ, ಸಂಪನ್ಮೂಲಗಳ ಮೇಲೆ ಅದರ ಪ್ರಭಾವ ಮತ್ತು ಆರೋಗ್ಯ ಮತ್ತು ಶಿಕ್ಷಣಕ್ಕೆ ಸಮಾನವಾದ ಪ್ರವೇಶದ ಅಗತ್ಯತೆಯ ಚರ್ಚೆಗಳನ್ನು ಪ್ರೋತ್ಸಾಹಿಸುತ್ತದೆ. ವಿವಿಧ ಉಪಕ್ರಮಗಳ ಮೂಲಕ, ವಿಶ್ವ ಜನಸಂಖ್ಯಾ ದಿನವು ಜವಾಬ್ದಾರಿಯುತ ಜನಸಂಖ್ಯೆ ನಿರ್ವಹಣೆ, ಲಿಂಗ ಸಮಾನತೆ ಮತ್ತು ಸಬಲೀಕರಣವನ್ನು ಉತ್ತೇಜಿಸುತ್ತದೆ ಎಂದು ಹೇಳಿದರು.ಈ ವೇಳೆಯಲ್ಲಿ…

Read More

ಇಂಡಿ: ನಲಿಕಲಿ ಶಿಕ್ಷಣವನ್ನು ಪುನಶ್ಚೇತನಗೊಳಿಸಿ ಮಕ್ಕಳಲ್ಲಿ ಪ್ರತಿನಿತ್ಯ ಉತ್ಸಾಹ ತುಂಬುವ ಕಾರ್ಯ ಶಿಕ್ಷಕರಿಂದ ನಡೆಯಬೇಕು ಎಂದು ಕ್ಷೇತ್ರ ಸಮನ್ವಯಾಧಿಕಾರಿ ಶ್ರೀಧರ ನಡುಗಡ್ಡಿ ಹೇಳಿದರು.ಅವರು ತಾಲೂಕಿನ ಹಿರೇರೂಗಿ ಗ್ರಾಮದ ಕೆಬಿಎಸ್ ಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಇಂಡಿ ವತಿಯಿಂದ ಆಯೋಜಿಸಿದ್ದ ಹಿರೇರೂಗಿ-ತಡವಲಗ ಕ್ಲಸ್ಟರ್ ಮಟ್ಟದ ನಲಿ-ಕಲಿ ಶಿಕ್ಷಕರ ಸಮಾಲೋಚನೆ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.ನಲಿ-ಕಲಿ ಶಿಕ್ಷಣ ಮಕ್ಕಳ ಭವಿಷ್ಯದ ಭದ್ರ ಬುನಾದಿ.2008 ರಿಂದ ರಾಜ್ಯಾದ್ಯಂತ ಜಾರಿಗೊಂಡ ಈ ಪದ್ದತಿಯಲ್ಲಿ ಮಕ್ಕಳು ನಲಿಯುತ್ತ ಕಲಿಯಲಿ ಎಂಬ ತತ್ವ ಅಡಗಿದ್ದು, ಚಟುವಟಿಕೆಗಳ ಮೂಲಕ ಮಕ್ಕಳು ಆಡುತ್ತಾ ಹಾಡುತ್ತಾ ಕಲಿಯಲು ಶಿಕ್ಷಕರ ಸಹಕಾರ ಅಗತ್ಯ ಎಂದು ಹೇಳಿದರು.ತಾಲೂಕು ನಲಿಕಲಿ ನೋಡಲ್ ಅಧಿಕಾರಿ ಬಸವರಾಜ ಗೋರನಾಳ ಮಾತನಾಡಿ, ವಿದ್ಯಾರ್ಥಿಯು ಶಿಕ್ಷಕರ ಮಾರ್ಗದರ್ಶನದಲ್ಲಿ ಕಲಿಕೆಯನ್ನು ಆರಂಭಿಸಿ, ಗೆಳೆಯರ ಸಹಕಾರದಲ್ಲಿ ಪುನರ್ಬಲನಗೊಂಡು, ಸ್ವತಂತ್ರವಾಗಿ ಕಾರ್ಯನಿರ್ವಹಿಸುವ ಸಾಮರ್ಥ್ಯ‌ ಗಳಿಸುವುದು ಈ ಪದ್ಧತಿಯ ವೈಶಿಷ್ಟ್ಯವಾಗಿದೆ ಎಂದು ಹೇಳಿದರು.ಹಿರೇರೂಗಿ ಕ್ಲಸ್ಟರ್ ಸಿಆರ್ಪಿ ಸಂತೋಷ ಚವ್ಹಾಣ ಮಾತನಾಡಿ, ನಲಿ-ಕಲಿ ಪದ್ಧತಿಯಲ್ಲಿರುವ ಬಹುಹಂತದ ಕಲಿಕೆ, ಸ್ವಕಲಿಕೆ,…

Read More

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಗರಣ | ಸಂಸದ ಜಿಗಜಿಣಗಿ ಸರ್ಕಾರಕ್ಕೆ ಒತ್ತಾಯ ವಿಜಯಪುರ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ಹಗರಣದ ತನಿಖೆಯನ್ನು ಸಿಬಿಐ ಅಥವಾ ನ್ಯಾಯಾಂಗ ತನಿಖೆಗೊಳಪಡಿಸಬೇಕು ಎಂದು ವಿಜಯಪುರ ಸಂಸದ ರಮೇಶ ಜಿಗಜಿಣಗಿ ಒತ್ತಾಯಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿ ಸರ್ಕಾರಕ್ಕೆ ಒತ್ತಾಯಿಸಿರುವ ಅವರು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ಹಗರಣ ಒಂದು ದೊಡ್ಡ ಮಟ್ಟದ ಹಗರಣವಾಗಿದೆ. ಸ್ವತ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಹೆಸರು ಈ ಹಗರಣದಲ್ಲಿ ತಳಕು ಹಾಕಿಕೊಂಡಿದೆ, ಹೀಗಾಗಿ ಮುಕ್ತವಾದ ತನಿಖೆ ನಡೆಯಬೇಕಾಗಿರುವುದು ಅಗತ್ಯವಾಗಿದೆ, ಸಿಬಿಐ ಅಥವಾ ನ್ಯಾಯಾಂಗ ತನಿಖೆ ನಡೆದರೆ ಮಾತ್ರ ಸತ್ಯಾಂಶ ಹೊರಬೀಳಲಿದೆ, ಮುಕ್ತ ಹಾಗೂ ನ್ಯಾಯಸಮ್ಮತ ತನಿಖೆಗೆ ಸರ್ಕಾರ ಕೂಡಲೇ ಸಿಬಿಐಗೆ ಈ ಪ್ರಕರಣದ ತನಿಖೆಯನ್ನು ವಹಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ, ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ ಹಗರಣ ಹಿಗೆ ಹಗರಣಗಳಲ್ಲಿಯೇ ಮುಳುಗಿ ಹೋಗಿರುವ ರಾಜ್ಯ ಸರ್ಕಾರ ಒಂದು ರೀತಿ ಲೂಟಿ ಸರ್ಕಾರವಾಗಿದೆ ಎಂದು ಜಿಗಜಿಣಗಿ ರಾಜ್ಯ ಸರ್ಕಾರವನ್ನು ಟೀಕಿಸಿದ್ದಾರೆ.

Read More

ವಿಜಯಪುರ: ವಿಜಯಪುರ ನಗರ ಕೇಂದ್ರ ಗ್ರಂಥಾಲಯ ಹಾಗೂ ಶಾಖಾ ಗ್ರಂಥಾಲಯಗಳಲ್ಲಿ ಸಂಗ್ರಹವಾದ ಕನ್ನಡ ಮತ್ತು ಆಂಗ್ಲ ಹಳೆಯ ದಿನಪತ್ರಿಕೆ ಹಾಗೂ ನಿಯತಕಾಲಿಕೆಗಳನ್ನು ವಿಲೇವಾರಿ ಮಾಡಲಾಗುತ್ತಿದ್ದು, ಅರ್ಹರಿಂದ ದರಪಟ್ಟಿ ಆಹ್ವಾಸಲಾಗಿದೆ ಎಂದು ಉಪ ನಿರ್ದೇಶಕರು, ನಗರ ಕೇಂದ್ರ ಗ್ರಂಥಾಲಯ ಇವರು ತಿಳಿಸಿದ್ದಾರೆ.ದರಪಟ್ಟಿಯಲ್ಲಿ ಕನ್ನಡ ಮತ್ತು ಆಂಗ್ಲ ದಿನಪತ್ರಿಕೆ ಹಾಗೂ ನಿಯತಕಾಲಿಕೆಗಳ ಪ್ರತಿ ಕೆ.ಜಿ.ಗೆ ಪ್ರತ್ಯೇಕ ದರ ನಮೂದಿಸಿ ಸಲ್ಲಿಸಬೇಕು, ದರಪಟ್ಟಿಯನ್ನು ಮುಚ್ಚಿದ ಲಕೋಟೆಯಲ್ಲಿಟ್ಟು ಉಪ ನಿರ್ದೇಶಕರ ಕಚೇರಿ,ನಗರ ಕೇಂದ್ರ ಗ್ರಂಥಾಲಯ, ಗಾಂಧಿ ಚೌಕ, ವಿಜಯಪುರ ವಿಳಾಸಕ್ಕೆ ೨೦೨೪ರ ಆಗಸ್ಟ್ ೯ರ ಸಂಜೆ ೪ ಗಂಟೆ ಒಳಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಬೇಕು, ಅವಧಿ ಮೀರಿ ಬಂದ ದರಪಟ್ಟಿಗಳನ್ನು ಪರಿಗಣಿಸುವುದಿಲ್ಲ. ಅದೇ ದಿನ ಬಿಡ್ಡುದಾರರ ಸಮಕ್ಷಮದಲ್ಲಿ ೨೦೨೪ರ ಆಗಸ್ಟ್ ೯ರ ಸಂಜೆ ೫ ಗಂಟೆಗೆ ದರಪಟ್ಟಿ ತೆರೆಯಲಾಗುವುದು, ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ ನಗರ ಕೇಂದ್ರ ಗ್ರಂಥಾಲಯ ,ವಿಜಯಪುರ ಇವರನ್ನು ಕಛೇರಿಯ ಸಮಯದಲ್ಲಿ ಭೇಟಿ ನೀಡಿ ಪಡೆಯಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ…

Read More