Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಸರ್ಕಾರಿ ನೌಕರರ ವಿವಿಧ ಬೇಡಿಕೆ ಈಡೇರಿಕೆಗೆ ಸಚಿವರಿಗೆ ಮನವಿ ವಿಜಯಪುರ: ಏಳನೇ ವೇತನ ಆಯೋಗದ ವರದಿ ಯಥಾವತ್ತಾಗಿ ಜಾರಿಗೊಳಿಸುವದು. ಹೊಸ ಪಿಂಚಣಿ ಯೋಜನೆ ರದ್ದು ಪಡಿಸಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೆ ತರುವುದು. ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.ಮನವಿ ಸಲ್ಲಿಸಿ ಮಾತನಾಡಿದ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಸುರೇಶ ಶಡಶ್ಯಾಳ ನೌಕರರ ನ್ಯಾಯಯುತ ಬೇಡಿಕೆಗಳನ್ನು ಸರ್ಕಾರ ಬೇಗನೆ ಈಡೇರಿಸಬೇಕು. ನೌಕರರ ಸಮ್ಮೇಳನದಲ್ಲಿ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೌಕರರ ಪರವಾಗಿ ನಮ್ಮ ಸರ್ಕಾರವಿದೆ ಅವರ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ್ದರು. ನೌಕರರಿಗೆ ನಿರಾಶೆ ಮಾಡದೇ ಸರ್ಕಾರ ಬೇಡಿಕೆ ಈಡೇರಿಸಬೇಕೆಂದು ತಿಳಿಸಿದರು.ಈ ಸಂದರ್ಭದಲ್ಲಿ ನೌಕರ ಸಂಘದ ಪ್ರಧಾನ ಕಾರ್ಯದರ್ಶಿ ರಾಜಶೇಖರ ದೈವಾಡಿ, ಖಜಾಂಚಿ ಜುಬೇರ ಕೆರೂರ, ಗಂಗಾಧರ ಜೇವೂರ, ವಿಜಯಕುಮಾರ ಹತ್ತಿ, ವಿಶ್ವನಾಥ ಬೆಳೆನ್ನವರ, ಚನ್ನಯ್ಯು ಮಠಪತಿ ಇತರರು…
ಬಸವನಬಾಗೇವಾಡಿ: ಡೆಂಗ್ಯೂ, ಮಲೇರಿಯಾ, ಚಿಕನ್ ಗುನ್ಯಾ ಸೊಳ್ಳೆಗಳಿಂದ ಹರಡುತ್ತವೆ. ಈ ಸೊಳ್ಳೆಗಳು ನಿಂತ ನೀರಿನಲ್ಲಿ ಹುಟ್ಟಿಕೊಳ್ಳುತ್ತವೆ. ಪರಿಸರವನ್ನು ಸ್ವಚ್ಛವಾಗಿ ಇಡುವುದರ ಕುರಿತು ಗ್ರಾಮೀಣ ಜನರಲ್ಲಿ ಅರಿವು ಮೂಡಿಸಬೇಕೆಂದು ಸಮುದಾಯ ಅರೋಗ್ಯ ಅಧಿಕಾರಿ ಶರಣಬಸು ಗುದ್ದಿ ಹೇಳಿದರು.ತಾಲೂಕಿನ ದಿಂಡವಾರ ಗ್ರಾಮ ಪಂಚಾಯತ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ಪಂಚಾಯತ, ಜಲಜೀವನ ಮಿಷನ್ ಹಾಗೂ ಸ್ವಚ್ಛ ಭಾರತ ಯೋಜನೆ ಅಡಿಯಲ್ಲಿ ಹಮ್ಮಿಕೊಂಡಿದ್ದ ನೀರು ಮತ್ತು ನೈರ್ಮಲ್ಯ ಸಮಿತಿ ಸದಸ್ಯರ ತರಬೇತಿ ಸಭೆಯಲ್ಲಿ ಮಾತನಾಡಿದ ಅವರು,ತ್ಯಾಜ್ಯದ ಸರಿಯಾದ ವಿಲೇವಾರಿ ಪ್ಲಾಸ್ಟಿಕ್ ಬಳಕೆಯ ಕೆಟ್ಟ ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ಸಲಹಾ ಸಮಿತಿಯ ಸದಸ್ಯರು ಗ್ರಾಮ ಪಂಚಾಯಿತಿಯ ಸಹಕಾರದೊಂದಿಗೆ ಮುಂದಾಗಬೇಕು ಎಂದು ಹೇಳಿದರು.ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಜಿಲ್ಲಾ ಸಂಯೋಜಕ ಶಿವಾನಂದ ಬಡಿಗೇರ ಮಾತನಾಡಿ, ರಾಜ್ಯಾದ್ಯಂತ ಸಾಂಕ್ರಾಮಿಕ ರೋಗಗಳಾದ ಡೆಂಗ್ಯೂ, ಮಲೇರಿಯಾ ಹಾಗೂ ಚಿಕುನಗುನ್ಯ ತೀವ್ರವಾಗಿ ಹರಡುತ್ತಿವೆ. ಮುಂಜಾಗ್ರತಾ ಕ್ರಮವಾಗಿ ನೀರು ಮತ್ತು ನೈರ್ಮಲ್ಯದ ಕುರಿತು ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ಹೇಳಿದರು.ನೀರಿನ ಪ್ರಮುಖ ಮೂಲಗಳಾದ ಬೋರವೆಲ್ ಗಳ ಹತ್ತಿರ…
ಸರ್ಕಾರಿ ನೌಕರರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮನವಿ ಬಸವನಬಾಗೇವಾಡಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಪ್ರಮುಖ ಬೇಡಿಕೆಗಳಾದ ಏಳನೇ ವೇತನ ಆಯೋಗದ ವರದಿಯನ್ನು ಯಥವತ್ತಾಗಿ ಜಾರಿಗೊಳಿಸುವದು, ಎನ್ಪಿಎಸ್ ರದ್ದು ಪಡಿಸಿ ಹಳೆ ಪಿಂಚಣಿ ಯೋಜನೆಯನ್ನು ಮರುಜಾರಿಗೊಳಿಸುವದು, ಆರೋಗ್ಯ ಸಂಜೀವಿನ ಯೋಜನು ಅನುಷ್ಠಾನಗೊಳಿಸುವದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಸರ್ಕಾರಿ ಕೂಡಲೇ ಈಡೇರಿಸಬೇಕೆಂದು ಆಗ್ರಹಿಸಿ ತಾಲೂಕು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶಿವಾನಂದ ಮಂಗಾನವರ ನೇತೃತ್ವದಲ್ಲಿ ಶುಕ್ರವಾರ ನೌಕರ ಬಾಂಧವರು ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಮುಖಾಂತರ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ತಾಲೂಕಾಧ್ಯಕ್ಷ ಶಿವಾನಂದ ಮಂಗಾನವರ ಮಾತನಾಡಿ, ರಾಜ್ಯದಲ್ಲಿ ೨.೬೦ ಲಕ್ಷ ಹುದ್ದೆಗಳು ಖಾಲಿಯಿದ್ದರೂ ಸಹ ಸರ್ಕಾರವು ಜನಸಾಮಾನ್ಯರ ಕಲ್ಯಾಣ ಹಾಗೂ ರಾಜ್ಯದ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸುವ ಯೋಜನೆಗಳನ್ನು ಶ್ರೀಸಾಮಾನ್ಯರಿಗೆ ತಲುಪಿಸುವ ಕಾರ್ಯದ ಜೊತೆಗೆ ರಾಜ್ಯದ ಅಭಿವೃದ್ಧಿ ಸೂಚ್ಯಾಂಕದ ಬೆಳವಣಿಗೆಯಲ್ಲಿ ಹಾಗೂ ಜಿಎಸ್ಟಿ ತೆರಿಗೆ ಸಂಗ್ರಹಣೆಯಲ್ಲಿ ಇಡೀ ದೇಶಕ್ಕೆ ಮಾದರಿಯಾಗಲು ಸರ್ಕಾರಿ ನೌಕರರ ಪಾತ್ರ ಪ್ರಮುಖವಾಗಿದೆ. ಇಂತಹ ಕಾರ್ಯಾಂಗದ ನೌಕರರ ಬೇಡಿಕೆಗಳಾದ ರಾಜ್ಯ…
ಜಲಸಂಪನ್ಮೂಲ ಸಚಿವ & ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಸಚಿವ ಶಿವಾನಂದ ಪಾಟೀಲ ಪತ್ರ ಆಲಮಟ್ಟಿ: ಇಲ್ಲಿಯ ಆಲಮಟ್ಟಿ ಜಲಾಶಯದ ಹೊರಹರಿವು ವ್ಯರ್ಥವಾಗುವುದನ್ನು ತಪ್ಪಿಸಿ ಸದ್ಬಳಕೆ ಮಾಡಿಕೊಳ್ಳಲು ವಿವಿಧ ನೀರಾವರಿ ಯೋಜನೆಗಳ ಕಾಲುವೆಗಳ ಮೂಲಕ ಕೆರೆಗಳಿಗೆ ನೀರು ಹರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಚಿವ ಶಿವಾನಂದ ಪಾಟೀಲ ಅವರು ಜಲಸಂಪನ್ಮೂಲ ಖಾತೆ ಹೊಂದಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಸಚಿವ ಆರ್.ಬಿ. ತಿಮ್ಮಾಪುರ ಅವರಿಗೆ ಮನವಿ ಮಾಡಿದ್ದಾರೆ.ಆಲಮಟ್ಟಿ ಜಲಾಶಯದಲ್ಲಿ ೬೭ ಟಿಎಂಸಿ ಬಳಕೆಗೆ ಲಭ್ಯ ಇರುವಷ್ಟು ನೀರು ಸಂಗ್ರಹಣೆಯಾಗಿದ್ದು, ಜಲಾಶಯ ಪ್ರತಿಶತ ೬೩ರಷ್ಟು ಭರ್ತಿಯಾಗಿದೆ. ಜಲಾಶಯದ ಮೇಲ್ಭಾಗದಲ್ಲಿ ಪ್ರತಿನಿತ್ಯ ಮಳೆಯಾಗುತ್ತಿದ್ದು, ಒಳಹರಿವಿನ ಪ್ರಮಾಣ ಎಪ್ಪತ್ತು ಸಾವಿರ ಕ್ಯೂಸೆಕ್ಸ್ ಇದೆ. ಬರುವ ದಿನಗಳಲ್ಲಿ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಒಳಹರಿವಿನ ಪ್ರಮಾಣ ಹೆಚ್ಚಾಗಿ ಹೆಚ್ಚುವರಿ ನೀರು ಜಲಾಶಯದ ಹೊರ ಹರಿವಿನಿಂದ ನೆರೆಯ ಆಂಧ್ರಪ್ರದೇಶಕ್ಕೆ ಹೋಗಿ ಮುಂದೆ ಸಮುದ್ರ ಸೇರಿ ವ್ಯರ್ಥವಾಗಲಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.ವಿಜಯಪುರ ಜಿಲ್ಲೆಯಲ್ಲಿ…
ಶ್ರವಣ ದೋಷಯುಳ್ಳ ವಿದ್ಯಾರ್ಥಿಗಳಿಗೆ ಶ್ರವಣೋಪಕರಣಗಳನ್ನು ವಿತರಿಸಿದ ಜಿ.ಪಂ. ಸಿಇಓ ರಿಷಿ ಆನಂದ ಕಿವಿಮಾತು ವಿಜಯಪುರ: ಜೀವನದಲ್ಲಿ ಯಾವುದೇ ಸಮಸ್ಯೆ ಎದುರಾದಾಗ ಕುಗ್ಗದೇ ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸಿ ಗುರಿಯೆಡೆಗೆ ಸಾಗಬೇಕು ಎಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಹೇಳಿದರು.ಜಿಲ್ಲಾ ಪಂಚಾಯತಿ, ಶಿಕ್ಷಣ ಇಲಾಖೆ ಹಾಗೂ ವಿ ಹೀಯರ್ ಸಂಸ್ಥೆ ಹಾಗೂ ಯಸ್ ಬ್ಯಾಂಕ್ ಸಹಯೋಗದೊಂದಿಗೆ ಜುಲೈ ೧೨ ರಂದು ನಗರದ ಸರಕಾರಿ ಬಾಲಕಿಯರ ಕರ್ನಾಟಕ ಪಬ್ಲಿಕ್ ಶಾಲೆಯ ಸಭಾಭವನದಲ್ಲಿ ಆಯೋಜಿಸಲಾದ ಶ್ರವಣ ದೋಷಯುಳ್ಳ ವಿದ್ಯಾರ್ಥಿಗಳಿಗೆ ಶ್ರವಣೋಪಕರಣಗಳನ್ನು ವಿತರಿಸಿ ಮಾತನಾಡಿದ ಅವರು, ಒಂದು ವಿಶೇಷವಾದ ಶಕ್ತಿ ನಮ್ಮಲ್ಲಿದೆ. ಅದನ್ನು ನಾವು ಗುರುತಿಸಿಕೊಂಡು ಸರಿಯಾಗಿ ಸದುಪಯೋಗಪಡಿಸಿಕೊಳ್ಳಬೇಕು. ಕೆಲವರಿಗೆ ಚಿತ್ರಕಲೆಯಲ್ಲಿ ವಿಶೇಷ ಜ್ಞಾನ, ಇನ್ನೂ ಕೆಲವು ವಿದ್ಯಾರ್ಥಿಗಳು ಆಟೋಟಗಳಲ್ಲಿ ವಿಶೇಷ ಆಸಕ್ತಿ ಹೊಂದಿರುತ್ತಾರೆ. ಇಂತಹ ಸೃಜನಾತ್ಮಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು. ವಿದ್ಯಾರ್ಥಿ ಜೀವನದಲ್ಲಿ ಗುರಿ ಮುಖ್ಯವಾಗಿದೆ. ಗುರಿಯೊಂದಿಗೆ ನಿರಂತರ ಪ್ರಯತ್ನವೂ ನಿಮ್ಮದಾಗಿರಬೇಕು. ಗುರಿ ತಲುಪಲು ನಿರಂತರ ಪ್ರಯತ್ನ ಹಾಗೂ ಶ್ರಮ ಇರಬೇಕು. ಅಂದಾಗ ಮಾತ್ರ…
ವಿಜಯಪುರ: ಜಿಲ್ಲಾಡಳಿತದ ವತಿಯಿಂದ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮವನ್ನು ಇದೇ ಜುಲೈ ೨೧ ರಂದು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು.ಶುಕ್ರವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣುರ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಹಡಪದ ಅಪ್ಪಣ್ಣ ಜಯಂತಿ ಪೂರ್ವಸಿದ್ಧತಾ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.ಅಂದು ಬೆಳಗ್ಗೆ ೯.೩೦ ಕೆಕೆ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಗಾಂಧಿವೃತ್ತ ಮಾರ್ಗವಾಗಿ, ಬಸವೇಶ್ವರ ವೃತ್ತ, ಅಂಬೇಡ್ಕರ ವೃತ್ತ, ಕನಕದಾಸ ವೃತ್ತದ ಮಾರ್ಗವಾಗಿ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದ ವರೆಗೆ ಹಡಪದ ಅಪ್ಪಣ್ಣ ಭಾವಚಿತ್ರ ಮೆರವಣಿಗೆ ಮಾಡಲಾಗುವುದು.ಈ ವೇಳೆ ವಿವಿಧ ವಾದ್ಯಮೇಳಗಳ ಪಾಲ್ಗೊಳ್ಳಲಿವೆ. ಬೆಳಗ್ಗೆ ೧೧ ಗಂಟೆಗೆ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಜಯಂತಿ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದ ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಂತೋಷ ಭೋವಿ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
ವಿಜಯಪುರ: ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಎನ್.ಎಚ್. ನಾಗೂರ ಅವರು ಗುರುವಾರ ವಿಜಯಪುರ ತಾಲೂಕಿನ ಸವನಹಳ್ಳಿಯ ಸರ್ಕಾರಿ ಪ್ರೌಢಶಾಲೆಗೆ ಭೇಟಿ ಗುರುವಾರ ನೀಡಿ ಪರಿಶೀಲನೆ ನಡೆಸಿ,ಶಾಲೆಯ ಸಮಗ್ರ ಕಲಿಕಾ ವಾತಾವರಣ, ಕಲಿಕಾ ಚಟುವಟಿಕೆ, ವಾರ್ಷಿಕ ಕ್ರಿಯಾ ಯೋಜನೆ, ಮಕ್ಕಳ ಕಲಿಕಾ ಪ್ರಕ್ರಿಯೆ, ಕಲಿಕಾ ಗುಣಮಟ್ಟ, ಶಿಕ್ಷಕರ ಬೋಧನಾ ಕೌಶಲ್ಯ ಪರಿಶೀಲನೆ ನಡೆಸಿ, ಅಗತ್ಯ ಸಲಹೆ ಸೂಚನೆ ನೀಡಿದರು.ಅಲ್ಲದೇ ಇದೇ ಸಂದರ್ಭ ಎಸ್‌ಎಸ್‌ಎಲ್‌ಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಮುಂಬರುವ ಪರೀಕ್ಷೆಯಲ್ಲಿ ಉತ್ತಮ ಸಾಧನೆ ತೋರಬೇಕು ಎಂದು ಮಾರ್ಗದರ್ಶನ ಮಾಡಿದರು.ಈ ಸಂದರ್ಭ ಶಾಲೆಯ ಮುಖ್ಯೋಪಾಧ್ಯಾಯ ಗಣಪತಿ. ಎಲ್.ಬಿ, ಶಿಕ್ಷಕರಾದ ಎಸ್.ಬಿ. ಮಕಾನದಾರ, ಎಮ್.ಸಿ.ಮಿಶ್ರಕೋಟೆ, ಕೆ.ಎಚ್. ರಾಠೋಡ, ಪಿ.ಎಸ್. ಹಿರೇಮಠ, ಎಂ.ಆರ್.ಮುದ್ದೇಬಿಹಾಳ, ಎ.ವಿ. ಕುಲಕರ್ಣಿ ಮತ್ತಿತರರು ಉಪಸ್ಥಿತರಿದ್ದರು.
ವಿಜಯಪುರ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಸಿಕ್ಯಾಬ್ ಸಂಸ್ಥೆಯ ಮಲಿಕ್ ಸಂದಲ್ ಪಾಲಿಟೆಕ್ನಿಕ್ ಇವರ ಸಹಯೋಗದೊಂದಿಗೆ ಜುಲೈ ೧೧ ರಂದು ಬಾಗಲಕೋಟ ರಸ್ತೆಯಲ್ಲಿರುವ ಸಿಕ್ಯಾಬ್ ಮಲಿಕ್ ಸಂದಲ್ ಪಾಲಿಟೆಕ್ನಿಕ್ ಕಾಲೇಜಿನ ಆವರಣದಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದ್ದ ಉದ್ಯೋಗ ಮೇಳಕ್ಕೆ ಸುಮಾರು ೩೦೦ ಅಭ್ಯರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದು ಅದರಲ್ಲಿ ೨೪೦ ಅಭ್ಯರ್ಥಿಗಳು ಮೇಳದಲ್ಲಿ ಭಾಗವಹಿಸಿದ್ದರು. ೮ ಪ್ರತಿಷ್ಠಿತ ಉದ್ಯೋಗದಾತರು ಭಾಗವಹಿಸಿ ೩೧ ಅಭ್ಯರ್ಥಿಗಳಿಗೆ ಸ್ಥಳದಲ್ಲಿಯೇ ನೇಮಕಾತಿ ಪತ್ರ ನೀಡಲಾಯಿತು. ೫೦ ಅಭ್ಯರ್ಥಿಗಳಿಗೆ ಮುಂದಿನ ನೇಮಕಾತಿಗಾಗಿ ಕಾಯ್ಡಿರಿಸಲಾಗಿದೆ ಎಂದು ಉದ್ಯೋಗಾಧಿಕಾರಿಗಳು, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.ಈ ಸಂದರ್ಭ ಸಹಾಯಕ ಉದ್ಯೋಗಾಧಿಕಾರಿ ಎಸ್.ಎಸ್.ಆಲಮೇಲ, ಉದ್ಯೋಗಾಭಿವೃದ್ಧಿ ಕಾರ್ಯನಿರ್ವಾಹಕ ಮುಸ್ತಾಕ ಗುಂಡಬಾವಡಿ ಹಾಗೂ ಕಾಲೇಜಿನ ಪ್ರಾಚಾರ್ಯ ಸೈಯ್ಯದ್ ಸಮೀರ ಹುಸ್ಸೇನ ಹಾಗೂ ಶ್ರೀಮತಿ ಹಬಿಬಾ ಮ್ಯಾಗಿನಮನಿ ಉಪಸ್ಥಿತರಿದ್ದರು.
ವಿಜಯಪುರ: ಮಹಾನಗರ ಪಾಲಿಕೆಯ ೨೧ನೇ ಅವಧಿಗೆ ವಿವಿಧ ನಾಲ್ಕು ಸ್ಥಾಯಿ ಸಮಿತಿಗಳ ಸದಸ್ಯರ ಆಯ್ಕೆಗೆ ಜುಲೈ೧೫ ರಂದು ನಿಗದಿಪಡಿಸಿದ ಚುನಾವಣೆಯನ್ನು ಜುಲೈ ೧೫ ರಿಂದ ರಾಜ್ಯ ವಿಧಾನ ಮಂಡಲ ಅಧಿವೇಶನ ನಡೆಯುವ ಕಾರಣದಿಂದ ಮುಂದೂಡಲಾಗಿದೆ ಎಂದು ವಿಜಯಪುರ ಮಹಾನಗರ ಪಾಲಿಕೆ ಅಧ್ಯಕ್ಷಾಧಿಕಾರಿಗಳಾದ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರು ತಿಳಿಸಿದ್ದಾರೆ.
ವಿಜಯಪುರ: ವಿಜಯಪುರ ನಗರದ ವಿವಿಧೆಡೆ ಭಿಕ್ಷಾಟನೆಯಲ್ಲಿ ತೊಡಗಿದ ೧೮ ಜನ ಭಿಕ್ಷುಕರನ್ನು ರಕ್ಷಣೆ ಮಾಡಿ ನಗರದ ಅಫಜಲಪೂರ ಟಕ್ಕೆಯಲ್ಲಿರುವ ನಿರಾಶ್ರಿತರ ಪರಿಹಾರ ಕೇಂದ್ರಕ್ಕೆ ದಾಖಲು ಮಾಡಿ ಆಶ್ರಯ ಒದಗಿಸಲಾಗಿದೆ.ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ನಗರ ಸಂಚಾರ ಕೈಗೊಂಡ ಸಂದರ್ಭದಲ್ಲಿ ನಗರದ ವಿವಿಧೆಡೆ ಇರುವ ನಿರಾಶ್ರಿತರು-ಭಿಕ್ಷುಕರನ್ನು ಕಂಡು, ತಕ್ಷಣ ನಿರಾಶ್ರಿತ ಕೇಂದ್ರದ ಅಧಿಕಾರಿಗಳಿಗೆ ನಿರ್ದೇಶನ ನೀಡಿ, ಭಿಕ್ಷಾಟಣೆಯಲ್ಲಿ ತೊಡಗಿರುವವರನ್ನು ರಕ್ಷಣೆ ಮಾಡಿ, ಆಶ್ರಯ ಒದಗಿಸಲು ಸೂಚನೆ ನೀಡಿದ ಹಿನ್ನಲೆಯಲ್ಲಿ ಶುಕ್ರವಾರದಂದು ವಿಜಯಪುರ ನಗರದ ಲಕ್ಷ್ಮೀ ಗುಡಿ ಹತ್ತಿರ, ಗಾಂಧಿ ಚೌಕ್, ಬಸ್ ನಿಲ್ದಾಣ, ಬಸವೇಶ್ವರ ಸರ್ಕಲ್, ರೇಲ್ವೆ ಸ್ಟೇಶನ್ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಭಿಕ್ಷಾಟನೆ ಮಾಡುತ್ತಿರುವ ೧೬ ಜನರ ಪುರುಷರು ಹಾಗೂ ೦೨ ಮಹಿಳೆಯರನ್ನು ನಿರಾಶ್ರಿತರ ಪರಿಹಾರ ಕೇಂದ್ರದ ಸಿಬ್ಬಂದಿಗಳು ರಕ್ಷಣೆ ಮಾಡಿ ಆಶ್ರಯ ಒದಗಿಸಿದ್ದಾರೆ.ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿ ಆಶ್ರಯ ಪಡೆದ ಭಿಕ್ಷುಕರಿಗೆ ಹಾಸಿಗೆ, ಹೊದಿಕೆ, ಬಟ್ಟೆ, ಆರೋಗ್ಯ ತಪಾಸಣೆ ಮತ್ತು ಬೆಳಿಗ್ಗೆ ಯೋಗಾಸನ, ಉಪಹಾರ, ಊಟ ಒದಗಿಸುತ್ತಿದ್ದು, ಸಂಜೆ ನಿರಾಶ್ರಿತರಿಗೆ ಕ್ರೀಡಾ ಚಟುವಟಿಕೆ, ರಾತ್ರಿ…
