Author: editor.udayarashmi@gmail.com

ಮಹಾನಗರ ಪಾಲಿಕೆ ಮೇಯರ್, ಉಪ ಮೇಯರ್, ಪಾಲಿಕೆಯ ಸದಸ್ಯರು & ಆಯುಕ್ತರೊಂದಿಗೆ ವಿವಿಧೆಡೆ ಭೇಟಿ ನೀಡಿದ ಡಿಸಿ ವಿಜಯಪುರ: ಸ್ವಚ್ಛ, ಸುಂದರ ನಗರ ನಿರ್ಮಾಣ ಮಾಡುವ ನಿಟ್ಟಿನಲ್ಲಿ ನಗರದ ವಿವಿಧ ಪ್ರದೇಶಗಳಲ್ಲಿನ ಸ್ವಚ್ಛತೆ ಕಾಪಾಡಿಕೊಳ್ಳುವುದು, ಬೀದಿ ಬದಿ ವ್ಯಾಪಾರಸ್ಥರಿಗೆ ವಿವಿಧೆಡೆ ವ್ಯಾಪಾರ ವಲಯ ಸ್ಥಾಪಿಸಿ ಅನುಕೂಲ ಕಲ್ಪಿಸುವುದು, ಸುವ್ಯವಸ್ಥಿತ ವಾಹನಗಳ ನಿಲುಗಡೆ ವ್ಯವಸ್ಥೆ ಕೈಗೊಂಡು ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ಮಹಾನಗರ ಪಾಲಿಕೆ ಆಯುಕ್ತರಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದ್ದಾರೆ.ಮಹಾನಗರ ಪಾಲಿಕೆಯ ಮಹಾಪೌರರಾದ ಶ್ರೀಮತಿ ಮಹೇಜಬಿನ್ ಹೊರ್ತಿ, ಉಪ ಮಹಾಪೌರ ದಿನೇಶ ಹಳ್ಳಿ, ಪಾಲಿಕೆಯ ವಿವಿಧ ಸದಸ್ಯರು ಹಾಗೂ ಪಾಲಿಕೆ ಆಯುಕ್ತರು ಸೇರಿದಂತೆ ವಿವಿಧ ಅಧಿಕಾರಿಗಳೊಂದಿಗೆ ಶುಕ್ರವಾರ ಬೆಳಿಗ್ಗೆ ನಗರದ ವಿವಿಧೆಡೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅವರು ಸೂಚನೆ ನೀಡಿದರು.ಬೆಳಿಗ್ಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಹಿಂಭಾಗದಲ್ಲಿರುವ ಕಣಕಿ ಬಜಾರ ಪ್ರದೇಶಕ್ಕೆ ಭೇಟಿ ನೀಡಿದ ಅವರು, ಐತಿಹಾಸಿಕ ಕೋಟೆ ಗೋಡೆ ಪಕ್ಕದಲ್ಲಿ ಬೆಳೆದಿರುವ ಮುಳ್ಳಿನ ಕಂಟಿಗಳನ್ನು ತೆರವುಗೊಳಿಸುವುದು, ಸದರಿ ಪ್ರದೇಶದಲ್ಲಿ…

Read More

ವಿಜಯಪುರ: ಜಿಲ್ಲಾ ಅಪಾರ ಜಿಲ್ಲಾಧಿಕಾರಿಯಾಗಿ ಹಾಜರಾದ ದಕ್ಷ ಐ.ಎ.ಎಸ್ ಅಧಿಕಾರಿ ಸೋಮಲಿಂಗ ಗೆಣ್ಣೂರ ಅವರನ್ನು ಗೌರವಿಸಲು ಅಭಿಮಾನಿಗಳು, ಹಿತೈಷಿಗಳು ಮತ್ತು ಸ್ನೇಹಿತರು ಬಿಡುವಿಲ್ಲದಂತೆ ಆಗಮಿಸುತ್ತಿರುವುದು ಗೆಣ್ಣೂರ ರವರ ಬಾಂಧವ್ಯವನ್ನು ಸೂಚಿಸುತ್ತದೆ.ಇಂತಹ ಗೌರವದ ಅಪರ ಜಿಲ್ಲಾಧಿಕಾರಿಗಳನ್ನು ಯಾದಗಿರಿಯ ಹೋರಾಟಗಾರರು ಮತ್ತು ಪತ್ರಕರ್ತರಾದ ಸಂಗಮೇಶ. ಹೊಸಮನಿ, ಶಾಂತು ದೊಡ್ಡಮನಿ ಮತ್ತು ರಾಮು ದೊಡ್ಡಮನಿಯವರು ಗೌರವಿಸಿ ಅಭಿನಂದಿಸಿದರು.

Read More

ಚಡಚಣ: ಬರಿ ಅಂಕ ಗಳಿಸುವುದು ಶಿಕ್ಷಣದ ಉದ್ದೇಶವಲ್ಲ, ಆದರೆ ಸದ್ಗುಣಗಳನ್ನು ಕಲಿಸುವದು ಶಿಕ್ಷಣದ ಮುಖ್ಯ ಉದ್ದೇಶ ಎಂದು ಕಾತ್ರಾಳದ ಗುರದೇವ ಆಶ್ರಮದ ಅಮೃತಾನಂದ ಸ್ವಾಮೀಜಿ ಹೇಳಿದರು.ಚಡಚಣದ ಸಂಗಮೇಶ್ವರ ಪದವಿ ಪೂವ ಮಹಾವಿದ್ಯಾಲಯದ ವತಿಯಿಂದ ಅತ್ಯುನ್ನತ ಶ್ರೇಣಿಯಲ್ಲಿ ಪಾಸಾದ ಪಿಯುಸಿ ದ್ವಿತೀಯ ವರ್ಷದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಮತ್ತುಕ್ರೀಡಾ ಹಾಗೂ ಸಾಂಸ್ಕತಿಕ ವಿಭಾಗ, ಎನ್‌,ಎಸ್.ಎಸ್, ರೇಂಜರ, ರೋವರ ಮತ್ತು ರೆಡ್‌ ಕ್ರಾಸ್‌ ವಿಭಾಗಗಳನ್ನು ಉಧ್ಘಾಟಿಸಿ ಅವರು ಆಶಿರ್ವಚನ ನೀಡಿದರು.ವಿದ್ಯಾರ್ಥಿಗಳು ಬರಿ ಕಾಲೇಜು ಪರೀಕ್ಷೆಗಳಲ್ಲಿ ಮಾತ್ರ ಯಶಸ್ವು ಸಾಧಿಸದೆ ಬದುಕೆಂಬ ಪರೀಕ್ಷೆಯಲ್ಲಿಯೂ ಸಾಧನೆ ಮಾಡಬೇಕು ಎಂದು ಅವರು ಹೇಳಿದರು.ವಿದ್ಯಾರ್ಥಿಯಾದವನು ಪ್ರತಿದಿನ ಹೊಸದನ್ನು ಕಲಿಯಬೇಕು. ಕಲಿಕೆಯನ್ನು ನಿರಂತರವಾಗಿ ಇಟ್ಟುಕೊಳ್ಳಬೇಕು. ಎಲ್ಲರಿಂದಲೂ ಒಂದಿಲ್ಲೊಂದು ಒಳ್ಳೆಯ ವಿಷಯವನ್ನು ಕಲಿಯಬೇಕು. ಜೀವನದಲ್ಲಿ ಸಂಸ್ಕಾರಗಳನ್ನು ಕಲಿತು ಸಾಧನೆ ಮಾಡಬೇಕು. ಪ್ರತಿಯೊಬ್ಬರು ತಂದೆ-ತಾಯಿಗಳ ಸೇವೆ ಮಾಡಬೇಕು. ತಂದೆ-ತಾಯಿಗಳ ಸೇವೆ ಮಾಡದವ ಸಮಾಜದ ಸೇವೆ ಮಾಡಲು ಸಾಧ್ಯವಿಲ್ಲ ಎಂದ ಅವರು, ಒಳ್ಳೆಯ ಶಿಕ್ಷಣದ ಅರ್ಥ ಅಂಕವಲ್ಲ ಎಂದು ಅವರು ಹೇಳಿದರು.ಕಾರ್ಯಕ್ರಮದ ಅದ್ಯಕ್ಷತೆಯನ್ನು ಸಂಗಮೇಶ್ವರ ಸಂಸ್ಥೆಯ…

Read More

ವೃಕ್ಷೋಥಾನ್ ಹೆರಿಟೇಜ್ ರನ್ ಪೋಸ್ಟರ್ ಬಿಡುಗಡೆ ಮಾಡಿದ ಸಚಿವ ಎಂ.ಬಿ.ಪಾಟೀಲ ಮಾಹಿತಿ ವಿಜಯಪುರ: ಈ ಬಾರಿ ವೃಕ್ಷೋತ್ಥಾನ್ ಹೆರಿಟೇಜ್ ರನ್ ಮುಂಬರುವ ಡಿಸೆಂಬರ್ 22 ರಂದು ನಗರದಲ್ಲಿ ನಡೆಯಲಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ.ಶುಕ್ರವಾರ ವೃಕ್ಷೋತ್ಥಾನ್ ಹೆರಿಟೇಜ್ ರನ್-2024 ಸಮಿತಿ ಪದಾಧಿಕಾರಿಗಳ ಸಮ್ಮುಖದಲ್ಲಿ ನಡೆಯಲಿರುವ ಈ ವರ್ಷದ ವೃಕ್ಷೋಥಾನ್ ಹೆರಿಟೇಜ್ ರನ್-2024 ಪೋಸ್ಟರ್ ನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು.ಕಳೆದ ವರ್ಷ ನಡೆದ ಮ್ಯಾರಾಥಾನ್ ನಲ್ಲಿ 10 ಸಾವಿರಕ್ಕೂ ಹೆಚ್ಚು ಜನ ಪಾಲ್ಗೋಂಡಿದ್ದರು. ಈ ಬಾರಿ ಸುಮಾರು 15 ಸಾವಿರಕ್ಕೂ ಹೆಚ್ಚು ಜನ ಪಾಲ್ಗೋಳ್ಳುವ ನಿರೀಕ್ಷೆಯಿದೆ ಎಂದು ತಿಳಿಸಿದರು.ಕಳೆದ ಬಾರಿ ನಡೆದ ಮ್ಯಾರಾಥಾನ್ ನಿಂದಾಗಿ ದೇಶಾದ್ಯಂತ ವಿಜಯಪುರ ಜಿಲ್ಲೆ ಮತ್ತು ಇಲ್ಲಿರುವ ಪ್ರಾಚೀನ ಸ್ಮಾರಕಗಳು ಹಾಗೂ ಇಲ್ಲಿನ ಆಯೋಜನೆ ಗಮನ ಸೆಳೆದಿದ್ದು, ಎಲ್ಲರಿಂದಲೂ ಶ್ಲಾಘನೆ ವ್ಯಕ್ತವಾಗಿದೆ. ಈ ಬಾರಿ ಮತ್ತಷ್ಟು ಅಚ್ಚುಕಟ್ಟಾಗಿ ಕಾರ್ಯಕ್ರಮ ನಡೆಯಲಿದೆ. ಇದರಲ್ಲಿ ಪಾಲ್ಗೊಳ್ಳುವವರು ಈಗಿನಿಂದಲೇ ತಯಾರಿ…

Read More

ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಕಿವಿಮಾತು ವಿಜಯಪುರ: ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ ಸೌಲಭ್ಯ ಒದಗಿಸಬೇಕು ಮತ್ತು ಶಾಲಾ ಕಟ್ಟಡಗಳ ದುರಸ್ಥಿ ಮತ್ತು ಹಾಸ್ಟೇಲುಗಳಲ್ಲಿ ಸೂಕ್ತ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಕಳೆದ ಕೆಡಿಪಿ ಸಭೆಯಲ್ಲಿಯೇ ಸ್ಪಷ್ಟ ಸೂಚನೆ ನೀಡಿದ್ದೇನೆ ಎಂದು ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಶುಕ್ರವಾರ ಎಬಿವಿಪಿ ಕಾರ್ಯಕರ್ತರಿಂದ ಮನವಿ ಸ್ವೀಕರಿಸಿ ಅವರು ಮಾತನಾಡಿದರು.ಗ್ರಾಮೀಣ ಮತ್ತು ನಗರ ಭಾಗದ ಶಾಲೆ ಹಾಗೂ ಕಾಲೇಜುಗಳ ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ಬಸ್ ಸೌಲಭ್ಯ ಒದಗಿಸುವಂತೆ ಈಗಾಗಲೇ ಸೂಚನೆ ನೀಡಿದ್ದೇನೆ. ಅಲ್ಲದೇ, ಶಿಥಿಲಾವಸ್ಥೆಯಲ್ಲಿರುವ ಶಾಲಾ ಕಟ್ಟಡಗಳ ಸಮೀಕ್ಷೆ ನಡೆಸಿ ವರದಿ ಸಲ್ಲಿಸಬೇಕು. ತುರ್ತಾಗಿ ಕ್ರಮ ಕೈಗೊಳ್ಳಬೇಕಿರುವ ಕಡೆ ಕೂಡಲೇ ಕೆಲಸ ಮಾಡುವಂತೆ ಸೂಚನೆ ನೀಡಲಾಗಿದೆ. ಅಲ್ಲದೇ, ಹಾಸ್ಟೇಲುಗಳಲ್ಲಿ ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ ಪ್ರವೇಶಾತಿ ನೀಡಬೇಕು ಮತ್ತು ಅಲ್ಲಿ ಸೂಕ್ತ ಮೂಲಸೌಲಭ್ಯ ಒದಗಿಸಬೇಕು. ಜೊತೆಗೆ, ಹೆಚ್ಚುವರಿ ಹಾಸ್ಟೇಲುಗಳ ಅಗತ್ಯತೆ ಕುರಿತು ಕೂಡ…

Read More

ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಳ್ಳಲು ಸಿಜೆಐಗೆ ಶಾಸಕ ಬಸನಗೌಡ ಪಾಟೀಲ (ಯತ್ನಾಳ) ಪತ್ರ ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ನಡೆದಿರುವ ಪರ್ಯಾಯ ಪ್ಲಾಟ್ ಹಗರಣದ ಕುರಿತು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಳ್ಳಬೇಕು ಎಂದು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎನ್‌ವಿ ಅಂಜರಿಯಾ ಅವರಿಗೆ ಪತ್ರ ಬರೆದಿದ್ದಾರೆ.ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಫಲಾನುಭವಿಯಾಗಿದ್ದು, ಪ್ರಕರಣವನ್ನು ಕೇಂದ್ರೀಯ ತನಿಖಾ ಸಂಸ್ಥೆಗೆ ಹಸ್ತಾಂತರಿಸಲು ಹಗರಣದ ಕಾನೂನು ಪ್ರಕ್ರಿಯೆಗಳನ್ನು ಪ್ರಾರಂಭಿಸುವಂತೆ ಬಿಜೆಪಿ ಶಾಸಕರು ಮನವಿ ಮಾಡಿದ್ದಾರೆ.ನಿಷ್ಪಕ್ಷಪಾತ ಮತ್ತು ಸಮಗ್ರತೆಯನ್ನು ಖಚಿತಪಡಿಸಿಕೊಳ್ಳಲು ಗೌರವಾನ್ವಿತ ಉಚ್ಚ ನ್ಯಾಯಾಲಯ ಪ್ರಕರಣದ ತನಿಖೆಯ ಮೇಲ್ವಿಚಾರಣೆ ವಹಿಸಿಕೊಳ್ಳಬೇಕು ಎಂದು ವಿನಂತಿಸುತ್ತೇನೆ. ನಿಮ್ಮ ಮಾರ್ಗದರ್ಶನದಲ್ಲಿ ನ್ಯಾಯವು ಮೇಲುಗೈ ಸಾಧಿಸುತ್ತದೆ ಮತ್ತು ನಾಗರಿಕರ ಹಕ್ಕುಗಳನ್ನು ಎತ್ತಿಹಿಡಿಯುತ್ತದೆ ಎಂದು ನನಗೆ ವಿಶ್ವಾಸವಿದೆ ಎಂದು ಯತ್ನಾಳ್ ಹೇಳಿದ್ದಾರೆ.ಮೈಸೂರು ನಗರದ ವಿಜಯನಗರದ ಮೂರು ಮತ್ತು ನಾಲ್ಕನೇ ಹಂತಗಳಲ್ಲಿ ಪ್ರಮುಖ ಆಸ್ತಿ ಸೇರಿದಂತೆ 3,000ಕ್ಕೂ ಹೆಚ್ಚು ನಿವೇಶನಗಳನ್ನು(ಸೈಟ್‌ಗಳು) ಅಕ್ರಮವಾಗಿ ಹಂಚಿಕೆ ಮಾಡಲಾಗಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ…

Read More

ಆಲಮಟ್ಟಿ: 3500 ಕ್ಯುಸೆಕ್ಸ್ ಹೊರಹರಿವು :ವಿದ್ಯುತ್ ಉತ್ಪಾದನೆ ಆರಂಭ ಆಲಮಟ್ಟಿ: ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಗುರುವಾರ ಮಧ್ಯಾಹ್ನದಿಂದ 3500 ಕ್ಯುಸೆಕ್ ನೀರನ್ನು ಹೊರಬಿಡಲಾಗುತ್ತಿದೆ.ಈ ನೀರನ್ನು ಜಲಾಶಯದ ಬಲಭಾಗದ ವಿದ್ಯುತ್ ಉತ್ಪಾದನಾ ಘಟಕದ ಮೂಲಕ ವಿದ್ಯುತ್ ಉತ್ಪಾದನೆ ಆರಂಭಗೊಂಡಿದೆ.ಕಳೆದ‌ ಕೆಲ ತಿಂಗಳಿಂದ ಹೊರಹರಿವು ಸ್ಥಗಿತವಾಗಿದ್ದರಿಂದ ವಿದ್ಯುತ್ ಉತ್ಪಾದನಾ ಘಟಕ ಬಂದಾಗಿತ್ತು.ಗುರುವಾರ 55 ಮೆಗಾವಾಟ್ ಸಾಮರ್ಥ್ದದ ಒಂದು ಘಟಕ ಕಾರ್ಯನಿರ್ವಹಿಸುತ್ತಿದ್ದು, ಅದರಿಂದ 25 ಮೆಗಾವಾಟ್ ವಿದ್ಯುತ್ ಉತ್ಪಾದನೆ ಯಾಗುತ್ತಿದೆ.ಗುರುವಾರ 69,482 ಕ್ಯುಸೆಕ್ ಇದ್ದ ಒಳಹರಿವು ಸಂಜೆ ವೇಳೆಗೆ ಕಡಿಮೆಯಾಗಿದೆ. ನಾರಾಯಣಪುರ ಜಲಾಶಯ ಭರ್ತಿಗಾಗಿ ಇಲ್ಲಿಂದ ನೀರು ಬಿಡಲಾಗುತ್ತಿದೆ.ಸದ್ಯ ಆಲಮಟ್ಟಿ ಜಲಾಶಯದಲ್ಲಿ 84 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ.ಮುಂಜಾಗ್ರತೆಯ ಕ್ರಮವಾಗಿ ಜಲಾಶಯ ಭರ್ತಿಗೂ‌ ಮುನ್ನವೇ ಆಲಮಟ್ಟಿ ಜಲಾಶಯದಿಂದ ನೀರು ಹರಿಸಲಾಗುತ್ತಿದೆ. ಈಗಿರುವ 3500 ಕ್ಯುಸೆಕ್ ಹೊರಹರಿವನ್ನು ಸದ್ಯಕ್ಕೆ ಹೆಚ್ಚಿಗೆ ಮಾಡುವುದಿಲ್ಲ ಎಂದು ಪ್ರಭಾರಿ ಅಧೀಕ್ಷಕ ಎಂಜಿನಿಯರ್ ಬಿ.ಎಸ್. ಪಾಟೀಲ ತಿಳಿಸಿದರು.ಆಲಮಟ್ಟಿ ಜಲಾಶಯದ ಮುಂಭಾಗ ಹಾಗೂ ನಾರಾಯಣಪುರ ಜಲಾಶಯದ ಹಿಂಭಾಗದಲ್ಲಿನ ಕೃಷ್ಣಾ ನದಿ…

Read More

ಇಂಡಿ: ಜನಸಂಖ್ಯೆ ಹೆಚ್ಚಳದಿಂದ ಮೂಲ ಸೌಲಭ್ಯಗಳ ಕೊರತೆ, ಶಿಕ್ಷಣ-ಆರೋಗ್ಯ-ನೈರ್ಮಲ್ಯ ಸೇವೆಗಳ ಅಲಭ್ಯತೆ, ಅಪೌಷ್ಟಿಕತೆ, ನಿರುದ್ಯೋಗದಂತಹ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಈ ನಿಟ್ಟಿನಲ್ಲಿ ಪ್ರಜ್ಞಾವಂತರು ಜಾಗೃತಿ ಮೂಡಿಸಲು ವ್ಯಾಪಕವಾಗಿ ಶ್ರಮಿಸಬೇಕೆಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ವಿಶ್ವ ಜನಸಂಖ್ಯಾ ದಿನದ ನಿಮಿತ್ತ ಹಮ್ಮಿಕೊಂಡ ‘ಜನಸಂಖ್ಯೆ ನಿಯಂತ್ರಣದಲ್ಲಿ ಶಿಕ್ಷಣದ ಪಾತ್ರ’ ಕುರಿತ ಚರ್ಚಾಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿದರು.ಬಡತನ ಮತ್ತು ಜನಸಂಖ್ಯೆಯ ನಡುವೆ ನೇರ ಸಂಬಂಧವಿದೆ. ಶಿಕ್ಷಣದಿಂದ ಜನರ ಜೀವನಮಟ್ಟ ಹೆಚ್ಚಿಸಿ, ಮಿತ ಸಂತಾನದ ಅರಿವನ್ನು ತೀವ್ರಗೊಳಿಸಬೇಕಾಗಿದೆ ಎಂದು ಹೇಳಿದರು.ದೇಶದಲ್ಲಿ 1951ರಲ್ಲಿ ಕೇವಲ 36 ಕೋಟಿ ಇದ್ದ ಜನಸಂಖ್ಯೆ 2011ರಲ್ಲಿ 121 ಕೋಟಿ ಆಗಿದೆ. ಪ್ರತಿ ವರ್ಷ 1.81 ಕೋಟಿ ಜನ ಸೇರ್ಪಡೆಯಾಗುತ್ತಿದ್ದಾರೆ. ರಾಜ್ಯದಲ್ಲಿ 1951ರಲ್ಲಿ 1.94 ಕೋಟಿ ಇದ್ದ ಜನಸಂಖ್ಯೆ 2011ರಲ್ಲಿ 6.11 ಕೋಟಿಯಾಗಿದೆ. ಪ್ರತಿ ವರ್ಷ 8.40 ಲಕ್ಷ ಜನ ಹೆಚ್ಚಾಗಿ ಸೇರ್ಪಡೆಯಾಗುತ್ತಿದ್ದಾರೆ. ಇದೇ ವೇಗದಲ್ಲಿ ಜನಸಂಖ್ಯೆ ಬೆಳೆದರೆ ಬಡತನ, ಅನಕ್ಷರತೆ, ಅಜ್ಞಾನ, ಅನಾರೋಗ್ಯ, ಅತ್ಯಾಚಾರ, ಅಸುರಕ್ಷಿತ ಜೀವನ ಶೈಲಿ…

Read More

ಮುದ್ದೇಬಿಹಾಳ: ಕಳೆದ ಕೆಲವು ದಿನಗಳ ಹಿಂದೆ ಪಟ್ಟಣದ ಹುಡ್ಕೋ ಗೇಟ್ ಬಳಿ ದ್ವಿಚಕ್ರ ವಾಹನದಲ್ಲಿದ್ದ ಹಣವನ್ನು ಕಳ್ಳತನ ಮಾಡಿದ್ದ ಕಳ್ಳರನ್ನು ಬಂಧಿಸುವಲ್ಲಿ ಇಲ್ಲಿನ ಪೊಲೀಸರು ಯಶಸ್ವಿಯಾಗಿದ್ದಾರೆ.ಇಲ್ಲಿನ ಹುಡ್ಕೋದಲ್ಲಿರುವ ಕರ್ನಾಟಕ ಬ್ಯಾಂಕ್ ನಿಂದ ೩.೬೦ ಲಕ್ಷ ಹಣವನ್ನು ಡ್ರಾ ಮಾಡಿಕೊಂಡು ಬೈಕ್ ನ ಹಿಂಬದಿ ಬ್ಯಾಗನಲ್ಲಿಟ್ಟು ಹುಡ್ಕೋ ಗೇಟ್ ಬಳಿ ಎಳೆನೀರು ಖರೀದಿಸುವಷ್ಟರಲ್ಲಿ ಖದೀಮರು ಹಣವನ್ನು ಎಗರಿಸಿದ್ದರು. ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಕಳ್ಳರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.ಶಿವಮೊಗ್ಗ ಜಿಲ್ಲೆಯ ಭದ್ರಾವತಿಯವರಾದ ಶಂಕರ ಆಚಾರ್ಯ ಮತ್ತು ಸಂಜು ಹೊಸಮನಿ ಆರೋಪಿತರಿದ್ದು ಇವರಿಂದ ಮುದ್ದೇಬಿಹಾಳ, ನಿಡಗುಂದಿ, ತಾಳಿಕೋಟೆ ಪೊಲೀಸ್ ಠಾಣೆಗಳಲ್ಲಿ ದಾಖಲಾದ ಪ್ರಕರಣಗಳ ಪೈಕಿ ಒಟ್ಟು ೩.೫ ಲಕ್ಷ ರೂ ಗಳನ್ನ ವಶಕ್ಕೆ ಪಡೆದುಕೊಳ್ಳಲಾಗಿದೆ.ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾದ ಡಿವಾಯ್‌ಎಸ್‌ಪಿ ಬಲ್ಲಪ್ಪ ನಂದಗಾವಿ, ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಪಿಎಸ್‌ಐ ಸಂಜಯ ತಿಪರೆಡ್ಡಿ, ಕ್ರೈಂ ಪಿಎಸ್‌ಐ ಆರ್.ಎಲ್.ಮನ್ನಾಬಾಯಿ, ಸಿಬ್ಬಂದಿಗಳಾದ ಬಿ.ಕೆ.ಗುಡಿಮನಿ, ಆರ್.ಎಸ್.ಪಾಟೀಲ, ವಿ.ಎನ್.ಹಾಲಗಂಗಾಧರಮಠ, ಆರ್.ಎಸ್.ಮದರಿ, ಎಸ್.ಎಲ್.ಹತ್ತರಕಿಹಾಳ, ಎಸ್.ಸಿ.ರೆಡ್ಡಿ ಇವರನ್ನ ಶ್ಲಾಘಿಸಿದ ಎಸ್‌ಪಿ ಪ್ರಶಂಸನಾ…

Read More