Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಇಂಡಿ: ತನ್ನ ಪಾಲಿನ ಆಸ್ತಿ ಕೊಡದಿದ್ದಕ್ಕೆ ಕುಪಿತಗೊಂಡ ಮಗನೋರ್ವ ಸ್ವಂತ ತಂದೆಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಇಂಡಿ ತಾಲೂಕಿನ ಚಿಕ್ಕಮಣೂರ ಗ್ರಾಮದಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ.ಮೃತನನ್ನು ಲಕ್ಷ್ಮಣ್ ಮ್ಯಾಗೇರಿ (೬೫) ಎಂದು ಗುರುತಿಸಲಾಗಿದ್ದು ಪ್ರಕಾಶ್ ಮ್ಯಾಗೇರಿ (೩೩) ಯೇ ಕೊಲೆ ಮಾಡಿದ ಮಗನಾಗಿದ್ದಾನೆ ಎಂದು ತಿಳಿದು ಬಂದಿದೆ.ಪ್ರಕಾಶ್ ಮ್ಯಾಗೇರಿಯನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾg. ಈ ಕುರಿತು ಇಂಡಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇಂಡಿಯಲ್ಲಿ ಪರಂಪರಾಗತ ಕೃಷಿ ವಿಕಾಸ ಯೋಜನೆ ಅಡಿ ನಿಂಬೆ ಬೆಳೆಗಾರರ ಕಾರ್ಯಾಗಾರ ಉದ್ಘಾಟನೆ ಇಂಡಿ: ಇಲ್ಲಿಯ ನಿಂಬೆಗೆ ಭೌಗೋಲಿಕ ಸೂಚ್ಯಾಂಕ ದೊರೆತಿದ್ದು ಅಂತರ ರಾಷ್ಟ್ರೀಯ ಮಟ್ಟದಲ್ಲಿ ಇಂಡಿಯ ನಿಂಬೆಗೆ ಚೆನ್ನಾಗಿ ಬೆಲೆ ದೊರೆಯುತ್ತಿದ್ದು ರಾಜ್ಯ ಮತ್ತು ದೇಶದಲ್ಲಿ ಅಷ್ಟೇ ಅಲ್ಲದೆ ವಿದೇಶದಲ್ಲಿಯೂ ಭಾರಿ ಬೇಡಿಕೆ ಇದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲರು ಹೇಳಿದರು.ಮಂಗಳವಾರ ಪಟ್ಟಣದ ರೈಲ್ವೆ ಸ್ಟೇಷನ ರಸ್ತೆಯಲ್ಲಿರುವ ಕೃಷಿ ವಿಜ್ಞಾನ ಕೇಂದ್ರದಲ್ಲಿ ತೋಟಗಾರಿಕೆ ಇಲಾಖೆ, ಕೃಷಿ ವಿಜ್ಞಾನ ಕೇಂದ್ರ ಮತ್ತು ಎಸ್.ಡಬ್ಲೂ.ಎ.ಆರ್.ಡಿಎಸ್ ಸಂಸ್ಥೆ ಸಹಯೋಗದೊಂದಿಗೆ ಪರಂಪರಾಗತ ಕೃಷಿ ವಿಕಾಸ ಯೋಜನೆ ಅಡಿ ನಿಂಬೆ ಬೆಳೆಗಾರರ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.ಕೋಲ್ಡ ಸ್ಟೋರೆಜ್: ಇಂಡಿಯ ಕೃಷಿ ವಿಜ್ಞಾನದಲ್ಲಿ ಕೇಂದ್ರದಲ್ಲಿ ಮೂರು ಎಕರೆ, ಇಲ್ಲವೆ ನಿಂಬೆ ಅಭಿವೃದ್ದಿ ಮಂಡಳಿಗೆ ಸರಕಾರ ಜಾಗ ನೀಡಿದ್ದು, ಅಲ್ಲಿ ಮೂರು ಎಕರೆ, ಇಲ್ಲವೆ ಬೂದಿಹಾಳ ಹತ್ತಿರ ಔದ್ಯೋಗಿಕ ವಸಹಾತು ನಿರ್ಮಿಸುತ್ತಿದ್ದು, ಅಲ್ಲಿ ಮೂರು ಎಕರೆ ಯಾವದಾದರೂ ಒಂದು ಕಡೆ ಜಾಗ ನೀಡಿ ಶೀಘ್ರದಲ್ಲಿಯೇ ಕೋಲ್ಡ್ ಸ್ಟೋರೆಜ್ ನಿರ್ಮಿಸಲಾಗುವದು…
ಬಸವನಬಾಗೇವಾಡಿಯಲ್ಲಿ ತೋಟಗಾರಿಕೆ ಬೆಳೆಗಳಲ್ಲಿ ಸಮಗ್ರ ಕೀಟ ನಿರ್ವಹಣೆ ಕುರಿತ ವಿಚಾರಗೋಷ್ಠಿ ಬಸವನಬಾಗೇವಾಡಿ: ತೋಟಗಾರಿಕೆ ಬೆಳೆ ಸೇರಿದಂತೆ ಇತರೇ ಬೆಳೆಗಳಿಗೆ ರೋಗ ಬಂದರೆ ಕೀಟಗಳು ತಾರತಮ್ಯ ಮಾಡದೇ ಎಲ್ಲ ಬೆಳೆಗಳನ್ನು ತಿನ್ನುತ್ತವೆ. ಅದಕ್ಕಾಗಿ ರೈತರು ಯಾವುದೇ ಬೆಳೆ ಇರಲಿ ಬರತಕ್ಕಂತಹ ಕೀಟಗಳನ್ನು ಯಾವ ತರಹ ನಿರ್ವಹಣೆ ಮಾಡಬೇಕೆಂಬುವದರ ಕುರಿತು ಅರಿತುಕೊಳ್ಳಬೇಕಾದ ಅಗತ್ಯವಿದೆ ಎಂದು ಬಾಗಲಕೋಟ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕೀಟಶಾಸ್ತ್ರ ವಿಭಾಗದ ವಿಜ್ಞಾನಿ ಡಾ.ರಾಮನಗೌಡ ಎಸ್.ಎಚ್. ಹೇಳಿದರು.ಪಟ್ಟಣದ ಮಸಬಿನಾಳ ರಸ್ತೆಯಲ್ಲಿರುವ ಯಲ್ಲಾಲಿಂಗ ಮಠದ ಕಲ್ಯಾಣ ಮಂಟಪದಲ್ಲಿ ಬಾಗಲಕೋಟ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ತೋಟಗಾರಿಕೆ ಇಲಾಖೆ, ಬಸವನಬಾಗೇವಾಡಿಯ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘ, ಧಾರವಾಡದ ಬಿ.ಆರ್.ಮೈಕ್ರೊನ್ಯೂಟ್ರಿಯಂಟ್ಸ ಪ್ರೈ.ಲಿ. ಹಾಗೂ ಎಸ್.ಎಸ್.ವಿ.ಬಯೋಸೈನ್ಸನ್ ಇವರ ಸಹಯೋಗದಲ್ಲಿ ಬುಧವಾರ ಹಮ್ಮಿಕೊಂಡಿದ್ದ ತೋಟಗಾರಿಕೆ ಬೆಳೆಗಳಲ್ಲಿ ಸಮಗ್ರ ಕೀಟ ನಿರ್ವಹಣೆ ಕುರಿತು ಹಮ್ಮಿಕೊಂಡಿದ್ದ ವಿಚಾರಗೋಷ್ಠಿಯಲ್ಲಿ ಮಾತನಾಡಿದ ಅವರು, ಕೀಟಗಳನ್ನು ನಾಶ ಮಾಡುವುದಕ್ಕಾಗಿ ದುಬಾರಿಯಾದ ಯಥೇಚ್ಛವಾಗಿ ರಾಸಾಯನಿಕ ಕೀಟನಾಶಕಗಳನ್ನು ಖರೀದಿಸಿ ಬಳಕೆ ಮಾಡಲಾಗುತ್ತಿದೆ. ಇದರಿಂದಾಗಿ ಬೆಳೆ ಬೆಳೆಯುವದಕ್ಕೆ ಸಾಕಷ್ಟು ಖರ್ಚು…
ವಿಜಯಪುರ ನಗರದಲ್ಲಿ ರೈಲ್ವೆ ಮೇಲ್ಸೆತುವೆ ಸೇರಿದಂತೆ ಉಕ ಭಾಗದ ರೈಲ್ವೆ ಅಭಿವೃದ್ಧಿ ಬೇಡಿಕೆಗಳಿಗಾಗಿ ಮನವಿ ವಿಜಯಪುರ: ನಗರ ಶಾಸಕ ಬಸನಗೌಡ ರಾ.ಪಾಟೀಲ ಯತ್ನಾಳ ಅವರು ಬುಧವಾರ ನವದೆಹಲಿಯಲ್ಲಿ ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಅವರನ್ನು ಭೇಟಿ ಮಾಡಿ, ವಿಜಯಪುರ ನಗರದಲ್ಲಿ ರೈಲ್ವೆ ಮೇಲ್ಸೆತುವೆ ನಿರ್ಮಾಣ ಸೇರಿದಂತೆ ಉತ್ತರ ಕರ್ನಾಟಕ ಭಾಗದ ರೈಲ್ವೆ ಅಭಿವೃದ್ಧಿ ಬೇಡಿಕೆಗಳ ಕುರಿತು ಮನವಿ ಪತ್ರ ನೀಡಿ ಚರ್ಚಿಸಿದರು.ವಿಜಯಪುರ ನಗರವು ಸುಮಾರು ೧೦ ಲಕ್ಷ ಜನಸಂಖ್ಯೆ ಹೊಂದಿದ್ದು, ವೇಗವಾಗಿ ಬೆಳೆಯುತ್ತಿರುವ ನಗರವಾಗಿದೆ. ಹುಟಗಿ-ಗದಗ ನಡುವೆ ಡಬ್ಬಿಂಗ್ ಟ್ರಾö್ಯಕ್ ಮತ್ತು ರೈಲ್ವೆ ವಿದ್ಯುದೀಕರಣಗೊಳ್ಳುವುದರಿಂದ ಈ ಮಾರ್ಗದಲ್ಲಿ ವಂದೇ ಭಾರತ್ ಮತ್ತು ಇತರೆ ಸೂಪರ್ ಪಾಸ್ಟ್ ರೈಲುಗಳು ಸಂಚರಿಸುವ ಸಾಧ್ಯತೆಯಿದೆ. ಹೀಗಾಗಿ ವಿಜಯಪುರ ರೈಲು ನಿಲ್ದಾಣವನ್ನು ಅಮೃತ್ ಭಾರತ್ ಸ್ಟೇಶನ್ ಸ್ಕಿಮ್ ಅಡಿಯಲ್ಲಿ ಮೇಲ್ದರ್ಜೆಗೆ ಏರಿಸಿದರೆ, ರೈಲು ನಿಲ್ದಾಣ ನವೀಕರಣ, ಪ್ರಯಾಣಿಕರಿಗೆ ಸೌಕರ್ಯ, ಪ್ರಯಾಣಿಕರ ಮಾರ್ಗದರ್ಶಿ ಸೂಚನಾ ಫಲಕಗಳ ಅಳವಡಿಕೆ ಮಾಡಲು ಅನುಕೂಲವಾಗುತ್ತದೆ.ಅದೇ ರೀತಿ ನಗರದ ಮುಖ್ಯ ರೈಲು ನಿಲ್ದಾಣದಿಂದ…
ದೇವರಹಿಪ್ಪರಗಿ ಪೊಲೀಸ್ ಠಾಣೆಯಲ್ಲಿ ಮೊಹರಂ ಪ್ರಯುಕ್ತ ಜರುಗಿದ ಶಾಂತಿಸಭೆ ದೇವರಹಿಪ್ಪರಗಿ: ಮೊಹರಂ ಹಬ್ಬವನ್ನು ಶಾಂತಿಯುತವಾಗಿ ಆಚರಿಸುವುದರ ಮೂಲಕ ಪ್ರತಿಯೊಬ್ಬರು ಸಾಂಪ್ರದಾಯಿಕ ಸೌಹಾರ್ದತೆಯನ್ನು ಮುಂದುವರೆಸಬೇಕು ಎಂದು ಪಿ.ಎಸ್.ಐ ಬಸವರಾಜ ತಿಪ್ಪಾರೆಡ್ಡಿ ಹೇಳಿದರು.ಪಟ್ಟಣದ ಪೊಲೀಸ್ ಠಾಣೆಯಲ್ಲಿ ಬುಧವಾರ ಮೊಹರಂ ಪ್ರಯುಕ್ತ ಜರುಗಿದ ಶಾಂತಿಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಪಟ್ಟಣ ಹಿಂದಿನಿಂದಲೂ ಶಾಂತಿ, ಸುವ್ಯವಸ್ಥೆ, ಸೌಹಾರ್ದತೆ, ಭಾತೃತ್ವಕ್ಕೆ ಹೆಸರಾಗಿದೆ. ಇಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಿಲ್ಲ. ಅದಾಗ್ಯೂ ಇಲಾಖೆಯ ನಿರ್ದೇಶನದಂತೆ ಸಭೆ ನಡೆಸಬೇಕಾಗುತ್ತದೆ. ಸಾರ್ವಜನಿಕರ ಹಿತರಕ್ಷಣೆಕ್ಕಾಗಿ ಇಲಾಖೆ ಕೈಗೊಳ್ಳುವ ಎಲ್ಲಾ ಮುಂಜಾಗ್ರತಾ ಕ್ರಮಗಳಿಗೆ ಪ್ರತಿಯೊಬ್ಬರು ಸಹಕಾರ ನೀಡಬೇಕು ಎಂದರು.ನಾಗರೀಕರ ಪರವಾಗಿ ಮಹಿಬೂಬ್ ಹುಂಡೇಕಾರ ,ಶ್ರೀಧರ ನಾಡಗೌಡ, ಮಾತನಾಡಿದರು.ಸಭೆಯಲ್ಲಿ ಪಟ್ಟಣ ಪಂಚಾಯಿತಿ ಸದಸ್ಯರುಗಳಾದ ಬಶೀರ್‌ಅಹ್ಮದ್ ಬೇಪಾರಿ, ಕಾಶೀನಾಥ ಬಜಂತ್ರಿ, ನಾಮ ನಿರ್ದೇಶಿತ ಸದಸ್ಯ ಸುನೀಲ ಕನಮಡಿ, ವಿನೋದ ಪಾಟೀಲ, ಮಲ್ಲನಗೌಡ ಪಾಟೀಲ, ಪ್ರಕಾಶ ಗುಡಿಮನಿ, ಪ್ರಕಾಶ ತಳಕೇರಿ, ಹುಸೇನ್ ಗೌಂಡಿ, ಅಕ್ಬರ್ ಬಾಗವಾನ, ನಬಿಲಾಲ್, ದೇವರಾಜ ಬಿರಾದಾರ, ಎಮ್.ಎಸ್.ಮೆಟಗಾರ, ಸಿಬ್ಬಂದಿ ಸಂಜೀವ ತಳವಾರ, ರಾಮನಗೌಡ ಬಿರಾದಾರ ಸಹಿತ ಇತರರು…
ವಿಜಯಪುರ: ಮೃದು ಮನಸ್ಸಿನ ಮಕ್ಕಳಿಗೆ ಶಾಲೆಯಲ್ಲಿ ಉತ್ತಮ ಕಲಿಕಾ ವಾತಾವರಣ ನಿರ್ಮಿಸಿ ತಿದ್ದಿ ತೀಡಿ ಶಿಕ್ಷಣ ನೀಡಿ ಅವರ ಜೀವನವನ್ನು ನಿರ್ಮಿಸುವ ಶಿಕ್ಷಕರೇ ಧನ್ಯರು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಜಿಲ್ಲಾ ಉಪನಿರ್ದೇಶಕ ಎನ್.ಎಚ್. ನಾಗೂರ ಹೇಳಿದರು.ತಾಲ್ಲೂಕಿನ ತಿಡಗುಂದಿಯ ಕಾಯಕಯೋಗಿ ಗ್ರಾಮೀಣ ಸಂಸ್ಥೆ ಮಾನಸ ಗಂಗೋತ್ರಿ ವಸತಿ ಶಾಲೆಯಲ್ಲಿ ಜಿಲ್ಲಾ ಪಂಚಾಯತ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಗ್ರಾಮೀಣವಲಯ ವಿಜಯಪುರ ಸಹಯೋಗದಲ್ಲಿ ಬುಧವಾರ ನಡೆದ ಹಿರಿಯ ಪ್ರಾಥಮಿಕ ಶಾಲೆಗಳ ಮುಖ್ಯೋಪಾಧ್ಯಾಯರಿಗೆ ಏರ್ಪಡಿಸಿದ ಪ್ರೇರಣಾ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.ಗುರು ಪರಂಪರೆಗೆ ಹೆಚ್ಚು ಮಹತ್ವ ಕೊಟ್ಟಿರುವವರು ನಾವು, ಸಮಾಜ ಅತೀ ಹೆಚ್ಚು ಗೌರವ ಕೊಡುವ ಕ್ಷೇತ್ರ ನಮ್ಮ ಶಿಕ್ಷಕರ ಕ್ಷೇತ್ರವಾಗಿದೆ. ಶಾಲೆಯು ಜೀವಂತ ದೇವರ ಗುಡಿ ಎಂದು ಸಮಾಜವು ನಂಬಿದೆ. ಕಡುಬಡತನದ ಮಕ್ಕಳು ಸರ್ಕಾರಿ ಶಾಲೆಗೆ ಬರುತ್ತಾರೆ. ಅವರ ಜೀವನ ಉಜ್ವಲಗೊಳಿಸುವ ಜವಾಬ್ದಾರಿ ನಮ್ಮ ಮೇಲಿದೆ. ಶಾಲೆಯಲ್ಲಿ ಉತ್ತಮ ಪರಿಸರ ವ್ಯವಸ್ಥೆ ಕಲ್ಪಿಸುವ ಜವಾಬ್ದಾರಿ ಮುಖ್ಯೋಪಾಧ್ಯಾಯರದ್ದಾಗಿದೆ. ಸರ್ಕಾರಿ ಶಾಲೆಗಳಲ್ಲಿ…
ವಿಜಯಪುರ: ಸಾಮಾಜಿಕ ನೆರವು ಯೋಜನೆಗಳಿಗೆ ಸಂಬಂಧಿಸಿದಂತೆ ಪಿಂಚಣಿದಾರರು ತಮ್ಮಕುಂದು ಕೊರತೆ ನೋಂದಾಯಿಸಲು,ಪಿಂಚಣಿ ಕುರಿತ ಮಾಹಿತಿ ಪಡೆಯಲು ಹಾಗೂ ಮಾಹಿತಿ ಹಂಚಿಕೊಳ್ಳಲುಜಿಲ್ಲೆಯ ೧೩ ಗ್ರಾಮ ಪಂಚಾಯತಿ ಮಟ್ಟದಲ್ಲಿ ಪ್ರತಿ ತ್ರೈಮಾಸಿಕದಲ್ಲಿ ಒಂದು ಬಾರಿ ಪಿಂಚಣಿ ದಿನವನ್ನು ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಯಶಸ್ವಿಯಾಗಿ ಜುಲೈ ೨೦ರಂದು ಬೆಳಿಗ್ಗೆ ೧೧ ಗಂಟೆಗೆ ಜಿಲ್ಲೆಯ ೧೩ ಗ್ರಾಮ ಪಂಚಾಯತಿಗಳಲ್ಲಿ ಪಿಂಚಣಿ ದಿನ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ತಿಳಿಸಿದ್ದಾರೆ.ಅಂದು ಬೆಳಗ್ಗೆ ೧೧ ಗಂಟೆಗೆ ವಿಜಯಪುರದ ಗ್ರೇಡ್-೨ ತಹಶೀಲ್ದಾರ ಅವರು ಕನ್ನೂರಿನ ಗ್ರಾಮ ಪಂಚಾಯತಿ ಸಭಾ ಭವನದಲ್ಲಿ, ಬಬಲೇಶ್ವರ ಗ್ರೇಡ್-೨ ತಹಶೀಲ್ದಾರ್ ಅವರು ಕಂಬಗಿ ಗ್ರಾಮ ಪಂಚಾಯತಿಯಲ್ಲಿ, ತಿಕೋಟಾ ಗ್ರೇಡ್-೨ ತಹಶೀಲ್ದಾರ ಅವರು ಟಕ್ಕಳಕಿಯ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ,ಬಸವನ ಬಾಗೇವಾಡಿ ತಹಸೀಲ್ದಾರ್ ಅವರು ಯರನಾಳ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಪಿಂಚಣಿ ದಿನ ನಡೆಸಲಿದ್ದಾರೆ.ನಿಡಗುಂದಿ ಗ್ರೇಡ್-೨ ತಹಶೀಲ್ದಾರ ಅವರು ಆಲಮಟ್ಟಿ ಗ್ರಾಮ ಪಂಚಾಯತಿ ಸಭಾ ಭವನದಲ್ಲಿ, ಕೊಲ್ಹಾರ ತಹಶೀಲ್ದಾರ್ ಅವರು, ಕೂಡಗಿ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ, ಮುದ್ದೇಬಿಹಾಳ…
ವಿಜಯಪುರ: ಸಾಂಖ್ಯಿಕ ತಜ್ಞ ಪಿ.ಸಿ.ಮಹಾಲನೋಬಿಸ್ ಅವರ ಜನ್ಮ ದಿನದ ಅಂಗವಾಗಿ ವಿಜಯಪುರ ನಗರದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನದಲ್ಲಿ ಬುಧವಾರ ನಿರ್ಣಯಗಳನ್ನು ಕೈಗೊಳ್ಳುವಲ್ಲಿ ದತ್ತಾಂಶಗಳ ಬಳಕೆ ಎಂಬ ಘೋಷವಾಕ್ಯದೊಂದಿಗೆ ಸಾಂಖ್ಯಿಕ ದಿನ ಆಚರಣೆ ಮಾಡಲಾಯಿತು.ಬುಧವಾರ ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವ ಮೂಲಕ ಚಾಲನೆ ನೀಡಲಾಯಿತು. ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಎನ್.ಕೆ.ಗೋಠೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಯಾವುದೇ ಯೋಜನೆಗಳನ್ನು ರೂಪಿಸಲು ಅಂಕಿ-ಅಂಶಗಳು ಮಹತ್ವದ ಪಾತ್ರ ವಹಿಸುತ್ತವೆ. ಯಾವುದೇ ಕೆಲಸವನ್ನು ಮಾಡಲು ಮೊದಲಿಗೆ ಯೋಜನೆಯನ್ನು ಹಾಕಿಕೊಳ್ಳಬೇಕು. ಯೋಚನೆ, ಯೋಜನೆಯಿಂದ ಅಭಿವೃದ್ಧಿ ಸಾಧ್ಯ ಎಂದು ಹೇಳಿದರು.ವ್ಹಿವ್ಹಿಎಸ್ ಭನಸಿಲ್ ವ್ಹಿಠಲದಾಸ ದರಬಾರ ಪದವಿ ಮಹಾ ವಿದ್ಯಾಲಯದ ಉಪನ್ಯಾಸಕ ಆನಂದ ಕುಲಕರ್ಣಿ ನಿರ್ಣಯ ಕೈಗೊಳ್ಳುವಲ್ಲಿ ದತ್ತಾಂಶಗಳ ಬಳಕೆ (Use of Data for Decision Making) ಕುರಿತು ಉಪನ್ಯಾಸ ನೀಡಿ, ನಮ್ಮ ದಿನನಿತ್ಯದ ಜೀವನದಲ್ಲಿ ಗಣಿತ ಮತ್ತು ಸಂಖ್ಯಾಶಾಸ್ತ್ರವನ್ನು ಹೇಗೆ ಉಪಯೋಗಿಸುತ್ತೆವೆ ಎಂಬುವುದನ್ನು ನೈಜ ಉದಾಹರಣೆಗಳೊಂದಿಗೆ ವಿವರಿಸಿ ಸವಿಸ್ತಾರವಾಗಿ ಮಾತನಾಡಿದರು.ಮುಖ್ಯ ಅತಿಥಿಗಳಾಗಿ ಬಸವನ ಬಾಗೇವಾಡಿ ತಾಲ್ಲೂಕಿನ…
ವಿಜಯಪುರ: ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರಿಗೂ ಅವಕಾಶ ಕಲ್ಪಿಸಲಾಗಿದ್ದು, ಜಿಲ್ಲೆಯಲ್ಲಿ ಮಂಗಳವಾರ ೧೫ ಲಿಂಗತ್ವ ಅಲ್ಪಸಂಖ್ಯಾತರು ಅರ್ಜಿ ಸಲ್ಲಿಸಿದ್ದು, ಬಾಕಿ ಉಳಿದ ಲಿಂಗತ್ವ ಅಲ್ಪಸಂಖ್ಯಾತರು ಅರ್ಜಿ ಸಲ್ಲಿಸಿ ಗೃಹಲಕ್ಷ್ಮೀ ಯೋಜನೆ ಸದುಪಯೋಗ ಪಡೆದುಕೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.ಸರ್ಕಾರ ಮಹಿಳೆಯರ ಸರಿಸಮಾನವಾಗಿ ಲಿಂಗತ್ವ ಅಲ್ಪಸಂಖ್ಯಾಥರನ್ನೂ ಗೃಹಲಕ್ಷ್ಮೀ ಫಲಾನುಭವಿಗಳೆಂದು ಪರಿಗಣಿಸಿ ಅವರ ಖಾತೆಗಳಿಗೂ ಸಹ ಹಣ ಜಮೆ ಮಾಡಲು ನಿರ್ಧರಿಸಿದೆ. ಜಿಲ್ಲೆಯಲ್ಲಿ ೨೫೦೦ಕ್ಕೂ ಹೆಚ್ಚು ಲಿಂಗತ್ವ ಅಲ್ಪಸಂಖ್ಯಾತರಿದ್ದು, ಸಧ್ಯ ೨೬೦ ಜನರು ಮಾತ್ರು ಗುರುತಿನ ಚೀಟಿ ಹೊಂದಿದ್ದು, ಅವರಿಂದ ಅರ್ಜಿ ಸ್ವೀಕರಿಸಲಾಗುತ್ತಿದೆ. ಅರ್ಹ ಲಿಂಗತ್ವ ಅಲ್ಪಸಂಖ್ಯಾತರು ಜಿಲ್ಲಾಡಳಿತ ನೀಡುವ ಗುರುತಿನ ಚೀಟಿ ಪಡೆದು, ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಿದರೆ ಅವರ ಖಾತೆಗೂ ಮಾಸಿಕ ಎರಡು ಸಾವಿರ ರೂ. ಜಮೆಯಾಗಲಿದ್ದು, ಈ ಯೋಜನೆಯಡಿ ಜಿಲ್ಲೆಯ ಎಲ್ಲ ಲಿಂಗತ್ವ ಅಲ್ಪಸಂಖ್ಯಾತರು ಜಿಲ್ಲಾಡಳಿತದಿಂದ ಗುರುತಿನ ಚೀಟಿ ಪಡೆದು ಅರ್ಜಿ ಸಲ್ಲಿಸಿ ಸದುಪಯೋಗ ಪಡೆದುಕೊಳ್ಳುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರ: ಜಿಲ್ಲೆಯಲ್ಲಿನ ಗ್ರಾಮೀಣ ಪ್ರದೇಶಗಳಿಗೂ ಬಿಎಸ್‌ಎನ್‌ಎಲ್ ೪ಜಿ ಸೇವೆಗಳನ್ನು ತ್ವರಿತವಾಗಿ ಒದಗಿಸಲು ಆದ್ಯತೆ ಮೇರೆಗೆ ಕಾರ್ಯನಿರ್ವಹಿಸುವಂತೆ ವಿಜಯಪುರ ಸಂಸದ ರಮೇಶ ಜಿಗಜಿಣಗಿ ಬಿಎಸ್‌ಎನ್‌ಎಲ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಸೋಮವಾರ ನಡೆದ ಬಿಎಸ್‌ಎನ್‌ಎಲ್ ಟೆಲಿಕಾಂ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು ಅವಳಿ ಜಿಲ್ಲೆಯ ಗ್ರಾಹಕರಿಗೆ ಉತ್ತಮ ಸೇವೆ ಒದಗಿಸುವ ನಿಟ್ಟಿನಲ್ಲಿ ಅಗತ್ಯ ಸಹಕಾರ ಹಾಗೂ ಬೆಂಬಲ ನೀಡುವುದಾಗಿ ಅವರು ಭರವಸೆ ನೀಡಿದರು.ಬಿಎಸ್‌ಎನ್‌ಎಲ್‌ನ ಡಿಜಿಎಂ ರವೀಂದ್ರ ಜಂಬಗಿ ಅವರು ಮಾತನಾಡಿ, ಮೇಕ್ ಇನ್ ಇಂಡಿಯಾ ಯೋಜನೆಯಡಿಯಲ್ಲಿ ೪ಜಿ ತಂತ್ರಜ್ಞಾನವನ್ನು ಸ್ಥಳೀಯವಾಗಿ ಅಭಿವೃದ್ದಿಪಡಿಸಲಾಗಿದೆ. ಇದನ್ನು ಸುಲಭವಾಗಿ ೫ಜಿಗೆ ಉನ್ನತೀಕರಿಸಬೇಕಾಗಿದ್ದು, ಮುಂದಿನ ೧೦ ತಿಂಗಳೊಳಗೆ ಜಿಲ್ಲೆಯಾದ್ಯಂತೆ ೩೪೩ ಹೊಸ ೪ಜಿ ಮೊಬೈಲ್ ಟವರ್‌ಗಳನ್ನು ಅಳವಡಿಸಲಾಗುತ್ತಿದೆ ಎಂದರು.ಸಭೆಯಲ್ಲಿ ಉಪ ಮಹಾಪ್ರಬಂಧಕ ಅರವಿಂದ ಸಕಟೆ, ಎಜಿಎಂ ಎ.ವ್ಹಿ.ಮಹಾಜನ್, ಮುಖ್ಯ ಲೆಕ್ಕಾಧಿಕಾರಿ ಎ.ಎಂ.ಪಾಟೀಲ, ಎಜಿಎಂ ಎಸ್.ಎಂ.ರಾಠೋಡ, ವಿ.ಡಿ.ನಾಯಕ, ಲೆಕ್ಕಾಧಿಕಾರಿ ರಾಮಪ್ಪ ಹೂಗಾರ ಸಭೆಯಲ್ಲಿ ಉಪಸ್ಥಿತರಿದ್ದರು.
