Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ೨೦೨೬-೨೭ನೇ ಸಾಲಿನ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ (ಪಿಎಂಆರ್ ಬಿಪಿ) ಪ್ರಶಸ್ತಿಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಈ ಪ್ರತಿಷ್ಠಿತ ರಾಷ್ಟ್ರೀಯ ಪ್ರಶಸ್ತಿಯನ್ನು ಅಸಾಧಾರಣ ಪ್ರತಿಭೆ ಹಾಗೂ ಸಾಧನೆಗಳನ್ನು ಮೆರೆದ ಮಕ್ಕಳಿಗೆ ಭಾರತದ ಗೌರವಾನ್ವಿತ ರಾಷ್ಟ್ರಪತಿಗಳು ನವದೆಹಲಿಯಲ್ಲಿ ನಡೆಯುವ ವಿಶೇಷ ಸಮಾರಂಭದಲ್ಲಿ ಪ್ರದಾನ ಮಾಡಲಿದ್ದಾರೆ.೧೮ ವರ್ಷದೊಳಗಿನ ಅರ್ಹ ಮಕ್ಕಳು ಶೌರ್ಯ, ಕ್ರೀಡೆ, ಸಮಾಜ ಸೇವೆ, ವಿಜ್ಞಾನ ಮತ್ತು ತಂತ್ರಜ್ಞಾನ, ಕಲೆ ಮತ್ತು ಸಂಸ್ಕೃತಿ ಹಾಗೂ ನಾವೀನ್ಯತೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆಗಳನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತದೆ. ಸ್ವಯಂ ನಾಮನಿರ್ದೇಶನ ಹಾಗೂ ಇತರರಿಂದ ನಾಮನಿರ್ದೇಶನ ಸಲ್ಲಿಸಲು ಅವಕಾಶವಿದೆ. ಆಸಕ್ತರು ರಾಷ್ಟ್ರೀಯ ಪ್ರಶಸ್ತಿhttps://awards.gov.in ಪೋರ್ಟಲ್ ಮೂಲಕ ಮಾತ್ರ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ.೩೧ ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದೂರವಾಣಿ ಸಂಖ್ಯೆ ೦೮೩೫೨-೨೯೫೩೫೩ ಮೂಲಕ…

Read More

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ | ಯುವ ಮತದಾರರಲ್ಲಿ ಜಾಗೃತಿ ಮೂಡಿಸಿದ ಬೃಹತ್ ಜಾಥಾ | ಜಿಪಂ ಸಿಇಓ ರಿಷಿ ಆನಂದ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮತದಾರರ ಪಟ್ಟಿಯು ಪ್ರಜಾಪ್ರಭುತ್ವದ ಮೂಲ ಆಧಾರವಾಗಿದ್ದು, ಅರ್ಹ ಮತದಾರರ ಹೆಸರು ಪಟ್ಟಿಯಲ್ಲಿ ಸೇರ್ಪಡೆಯಾಗುವುದು ಅತ್ಯಂತ ಮಹತ್ವದ್ದಾಗಿದೆ. ಈ ಹಿನ್ನೆಲೆಯಲ್ಲಿ ಯುವಜನತೆ ಸೇರಿದಂತೆ ಸಾರ್ವಜನಿಕರಲ್ಲಿ ಮತದಾರರ ನೋಂದಣಿ, ಹೆಸರು ಪರಿಶೀಲನೆ, ತಿದ್ದುಪಡಿ ಹಾಗೂ ಮತದಾನದ ಹಕ್ಕಿನ ಮಹತ್ವದ ಕುರಿತು ಅರಿವು ಮೂಡಿಸಲು ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದುಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾದ ರಿಷಿ ಆನಂದ ಅವರು ಹೇಳಿದರು.ನಗರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಿಂದ ಸೋಮವಾರ ಆಯೋಜಿಸಲಾಗಿದ್ದ ಜಾಗೃತಿ ಜಾಥಾಕ್ಕೆ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು. ಮತದಾನವು ಕೇವಲ ಹಕ್ಕು ಮಾತ್ರವಲ್ಲ, ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯೂ ಆಗಿದೆ. ೧೮…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ:೨೦೨೬-೨೭ನೇ ಸಾಲಿನಲ್ಲಿ ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದಿಂದ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಶೈಕ್ಷಣಿಕ ಸಾಲಕ್ಕಾಗಿ ಕ್ರಿಶ್ಚಿಯನ್ ಜನಾಂಗಕ್ಕೆ ಸೇರಿದ ಸಿಇಟಿ, ನೀಟ್ ಹಾಗೂ ಜೆಇಇ ಮೂಲಕ ಆಯ್ಕೆಯಾದ ಎಂಬಿಬಿಎಸ್, ಎಂಡಿ, ಎಂ.ಎಸ್ ಕೋರ್ಸ್ ಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಂದ ಆನ್ ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಸರ್ಕಾರಿ, ಕಾಲೇಜು, ಖಾಸಗಿ, ಮ್ಯಾನೇಜ್‌ಮೆಂಟ್ ಕೋಟಾದಡಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಗರಿಷ್ಠ ೫ ಲಕ್ಷಗಳವರೆಗೆ ಸಾಲ ಸೌಲಭ್ಯ ಒದಗಿಸಲಾಗುತ್ತಿದ್ದು, ವೃತ್ತಿಪರ ಕೋರ್ಸಗಳಾದ ಎಂ.ಟಿ.ಟಿ.ಎಸ್. ಎಂ.ಡಿ. ಬಿ.ಡಿ.ಎಸ್. ಟಿ.ಆಯುಷ್, ಎಂ.ಆಯುಷ್. ಬಿ.ಇ. ಬಿ.ಟೆಕ್. ಅಗ್ರಿಕಲ್ಟರ್ ಇಂಜಿನೀಯರಿಂಗ್, ಡೈರಿ ಟೆಕ್ನಾಲಜಿ, ಫೋರೆಸ್ಟ್ರಿ, ವೆಟೆರ್‌ನರಿ ಹಾಗೂ ಅನಿಮಲ್ ಸೈನ್ಸಿಸ್, ಫುಡ್ ಟೆಕ್ನಾಲಜಿ, ಬೈಯೋಟಕ್ನಾಲಜಿ, ಫಿಶರೀಸ್, ಸೆರಿಕಲ್ಟರ್, ಹೋಂ/ ಕಮ್ಯುನಿಟಿ ಸೈನ್ಸಿಸ್. ಫುಡ್ ನ್ಯೂಟ್ರಿಷನ್ & ಡೈಯಾಟೆಟಿಕ್ಸ್, ಬಿ.ಫಾರ್ಮಾ, ಎಂ.ಫಾರ್ಮಾ, ಫಾರ್ಮಾ.ಡಿ, ಡಿ.ಫಾರ್ಮಾ ಈ ಕೋರ್ಸಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಆನ್ ಲೈನ್ ಮೂಲಕ ಅರಿವು ವಿದ್ಯಾಭ್ಯಾಸ ಸಾಲಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ…

Read More

ನಾಗಠಾಣ ಶಾಸಕ ವಿಠಲ ಕಟಕದೊಂಡ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೫ ವರ್ಷದೊಳಗಿನ ಮಕ್ಕಳ ಆರೋಗ್ಯಯುತ ಬೆಳವಣಿಗೆಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಿಸುವುದು ಅಗತ್ಯವಾಗಿದೆ. ಎಲ್ಲ ಪಾಲಕರು ನಿರ್ಲಕ್ಷ್ಯ ತೋರದೆ ತಮ್ಮ ಮಕ್ಕಳನ್ನು ಲಸಿಕಾ ಕೇಂದ್ರಗಳಿಗೆ ಕರೆ ತಂದು ಲಸಿಕೆ ಹಾಕಿಸುವ ಮೂಲಕ ಅವರಿಗೆ ಆರೋಗ್ಯ ಸಂಪತ್ತು ಕಲ್ಪಿಸಬೇಕು ಎಂದು ನಾಗಠಾಣ ಶಾಸಕರಾದ ವಿಠ್ಠಲ ಕಟಕದೊಂಡ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಾನಗರ ಪಾಲಿಕೆ ಹಾಗೂ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ದರ್ಗಾ ಸಹಯೋಗದಲ್ಲಿ ಇತ್ತಿಚಿಗೆ ಹಮ್ಮಿಕೊಳ್ಳಲಾಗಿದ್ದ ಪಲ್ಸ್ ಪೊಲಿಯೋ ಹನಿ ಹಾಕುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಇತ್ತಿಚಿಗೆ ಕ್ಯಾನ್ಸರ್ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು ಎಲ್ಲ ತಾಯಂದಿರು ಪ್ರತಿ ವರ್ಷ ಆರೋಗ್ಯ ತಪಾಸಣೆಗೆ ಒಗಳಗಾಗಬೇಕು. ಜಿಲ್ಲೆಯ ೦-೫ ವರ್ಷದೊಳಗಿನ ಮಕ್ಕಳ ಗುರಿ-೨೯೩೫೧೯ ಇದ್ದು, ಅದಕ್ಕಾಗಿ ಪೋಲಿಯೋ ಬೂತ್ಸಂಖ್ಯೆ-೧೩೨೬ ರಚಿಸಿದ್ದು, ಇದರಲ್ಲಿ ೩೧ ಸಂಚಾರಿ ತಂಡಗಳು ಮತ್ತು ಟ್ರಾಂಜಟ್-೪೧ ತಂಡಗಳನ್ನು ಒಳಗೊಂಡಿದೆ. ಪೋಲಿಯೋ ನಿರ್ಮೂಲನೆಯಲ್ಲಿ…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಪಟ್ಟಣಕ್ಕೆ ಇಂದು ಮಂಗಳವಾರ ಮದುತ್ತರಾದಿ ಮಠದ ಶ್ರೀಸತ್ಯಾತ್ಮತೀರ್ಥ ಪಾದಂಗಳರವರು ಆಗಮಿಸಲಿದ್ದಾರೆ.ಪಟ್ಟಣದಲ್ಲಿ ಶ್ರೀಮೂಲರಾಮ ದೇವರ ಪೂಜಾ ಮಹೋತ್ಸವ ಅಂಗವಾಗಿ ಆಗಮಿಸುವ ಶ್ರೀಗಳು ವಿಜಯಪುರ ರಸ್ತೆಯ ಗೌರೀಶಂಕರ ನಗರದ ವರ್ಕಾನಳ್ಳಿ ವಿನಾಯಕ ಪಾಟೀಲ ಅವರ ತೋಟದ ಮನೆಯಲ್ಲಿ ಬೆಳಿಗ್ಗೆ ಪಾದಪೂಜೆ ನಂತರ ಸಪ್ತಮುದ್ರಾಧಾರಣೆ ಆನಂತರ ಮೂಲರಾಮದೇವರ ಪೂಜೆಯಲ್ಲಿ ಪಾಲ್ಗೊಳ್ಳಲಿದ್ದಾರೆ.ಪೂಜೆಯ ನಂತರ ತೀರ್ಥಪ್ರಸಾದ ವಿತರಣೆಯಾಗಲಿದೆ.ಕೊನೆಯಲ್ಲಿ ಶ್ರೀಗಳಿಂದ ಫಲಮಂತ್ರಾಕ್ಷತೆ ಹಾಗೂ ಆಶೀರ್ವಚನ ಜರುಗಲಿದೆ. ಈ ಎಲ್ಲ ಕಾರ್ಯಗಳಲ್ಲಿ ಪಟ್ಟಣ ಸೇರಿದಂತೆ ತಾಲ್ಲೂಕಿನ ಎಲ್ಲ ವಿಪ್ರ ಸಮುದಾಯದವರು ಪಾಲ್ಗೊಳ್ಳುವಂತೆ ಶ್ರೀಚಿದಂಬರ ಸೇವಾ ಸಮಿತಿ ಅಧ್ಯಕ್ಷ ನರೇಂದ್ರ ನಾಡಗೌಡ ಹಾಗೂ ವಿನಾಯಕ ಪಾಟೀಲ (ವರ್ಕಾನಳ್ಳಿ) ಪ್ರಕಟಣೆ ಮೂಲಕ ತಿಳಿಸಿದ್ದಾರೆ.

Read More

ಸೇತುವೆ ದುರಸ್ತಿಗೊಳಿಸದಿದ್ದರೆ ಗ್ರಾಮಸ್ಥರಿಂದ ಉಗ್ರ ಹೋರಾಟದ ಎಚ್ಚರಿಕೆ ಉದಯರಶ್ಮಿ ದಿನಪತ್ರಿಕೆ ಎಚ್ ಡಿ ಕೋಟೆ: ಕಳೆದ ಹಲವು ವರ್ಷಗಳಿಂದ ಶಿಥಿಲಾವಸ್ಥೆಗೆ ತಲುಪಿ ಒಂದು ಕಡೆಯಿಂದ ಕುಸಿಯುತ್ತಾ ಬರುತ್ತಿರುವ, ಅನೇಕ ಅನಾಹುತಗಳಿಗೆ ಕಾರಣವಾಗಿರುವ, ನಾಲ್ಕೈದು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಗ್ರಾಮದಲ್ಲಿರುವ ಕಿರಿದಾದ ಎರಡು ಸೇತುವೆಗಳನ್ನು ದುರಸ್ತಿಗೊಳಿಸದಿದ್ದರೆ, ಸಂಬಂಧಪಟ್ಟ ಇಲಾಖೆ ಕಚೇರಿ ಎದುರು ಧರಣಿ ನಡೆಸಲು ಶೀರನಹುಂಡಿ ಗ್ರಾಮಸ್ಥರು ಮುಂದಾಗಿದ್ದಾರೆ.ತಾಲೂಕಿನ ಶೀರನಹುಂಡಿ ಗ್ರಾಮದ ಬಳಿ ಎರಡು ಕಿರಿದಾದ ಸೇತುವೆಗಳಿವೆ. ಒಂದು ಸೇತುವೆ ಶೀರನಹುಂಡಿಯಿಂದ ನಾಗನಹಳ್ಳಿ, ಮಾಚನಾಯಕನಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸಿದರೆ, ಮತ್ತೊಂದು ಸೇತುವೆ, ಮೈಸೂರು-ಮಾನಂದವಾಡಿ (ಅಂತರಸಂತೆ)ಮುಖ್ಯರಸ್ತೆಗೆ ಸಂಪರ್ಕ ಕಲ್ಪಿಸುತ್ತದೆ. ಅಲ್ಲದೆ ಈ ಎರಡು ಸೇತುವೆಗಳ ಮೂಲಕವೇ ಕೆಎಸ್ ಆರ್ ಟಿಸಿ ಬಸ್ ಸೇರಿದಂತೆ ವಾಹನಗಳು ಓಡಾಡುತ್ತವೆ. ಆದರೆ ಈ ಎರಡು ಸೇತುವೆಗಳು ಬಹಳ ಹಳೆಯದಾಗಿದ್ದು, ಬಹಳ ಕಿರಿದಾಗಿದ್ದು ಕುಸಿಯುತ್ತಾ ಬರುತ್ತಿದೆ. ಸೇತುವೆಗೆ ಅಡ್ಡಲಾಗಿರುವ ತಡೆಗೋಡೆ ಕೂಡ ಕುಸಿದು ಬಿದ್ದಿದ್ದು, ಜನರು ಜೀವ ಭಯದಲ್ಲೇ ಓಡಾಡಬೇಕಾಗಿದೆ. ರಾತ್ರಿ ವೇಳೆ ವಾಹನ ಸವಾರರು ಈ ಸೇತುವೆಗಳ ಮೇಲೆ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಾತ್ವಿಕ ರಾಜಕಾರಣಕ್ಕೆ ಉದಾಹರಣೆಯಾಗಿರುವ ಸಂಸದ ರಮೇಶ ಜಿಗಜಿಣಗಿ ಅವರ ಬಗ್ಗೆ ಇಲ್ಲ ಸಲ್ಲದ ಆರೋಪ ಮಾಡಿ ಅವರ ತೇಜೋವಧೆ ಮಾಡಬೇಡಿ ಎಂದು ಬಿಜೆಪಿ ಓಬಿಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ವಿವೇಕಾನಂದ ಡಬ್ಬಿ ಹೇಳಿದರು.ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಕಾ, ಬಾಬಾ, ಅಣ್ಣ ಎಂದು ಸಾತ್ವಿಕತನದಿಂದ ಕೂಡಿದ ಮಾತುಗಳನ್ನಾಡುವ ಸಂಸದ ರಮೇಶ ಜಿಗಜಿಣಗಿ ಲಕ್ಷ ಕೋಟಿ ರೂ.ಗೂ ಹೆಚ್ಚು ಅನುದಾನವನ್ನು ಜಿಲ್ಲೆಗೆ ತಂದಿರುವ ಕೀರ್ತಿ ಸಂಸದ ರಮೇಶ ಜಿಗಜಿಣಗಿ ಅವರಿಗೆ ಸಲ್ಲುತ್ತದೆ, ಈ ಹಿಂದಿನ ಸಂಸದರು ಮಾಡಿದ ಕಾರ್ಯವೈಖರಿ ಹಾಗೂ ಸಂಸದ ರಮೇಶ ಜಿಗಜಿಣಗಿ ಅವರ ಕಾಲಘಟ್ಟದಲ್ಲಿ ಕೈಗೊಂಡ ಕಾಮಗಾರಿಗಳನ್ನು ತುಲನೆ ಮಾಡಿ ನೋಡಿ, ಸಂಸದ ರಮೇಶ ಜಿಗಜಿಣಗಿ ಅವರು ಸಂಸದರಾಗಿದ್ದ ಅವಧಿಯಲ್ಲಿ ರೈಲ್ವೇ ಓವರ್ ಬ್ರಿಡ್ಜ್, ವಿಮಾನ ನಿಲ್ದಾಣ, ಬಹುಹಳ್ಳಿ ಕುಡಿಯುವ ನೀರು, ವಿಜಯಪುರ-ಸೊಲ್ಲಾಪೂರ ರಾಷ್ಟ್ರೀಯ ಹೆದ್ದಾರಿ ಪ್ರಗತಿ ಹೀಗೆ ಅವರ ಸಾಧನೆ ಹೇಳಲು ದಿನಗಳೇ ಬೇಕು ಎಂದರು.ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಡಾ.ಸುಧಾಮೂರ್ತಿ ಅವರನ್ನು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಪ್ರತಿಷ್ಠಿತ ಸಿಕ್ಯಾಬ್ ಶಿಕ್ಷಣ ಸಂಸ್ಥೆಯ ಪ್ರಧಾನಕಾರ್ಯದರ್ಶಿ ಎ ಎಸ್ ಪಾಟೀಲ ಅವರು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ನೇಮಕವಾದ ನಿಮಿತ್ಯ ಅಮ್ಮ ಫೌಂಡೇಶನ್ ವತಿಯಿಂದ ಶೈಕ್ಷಣಿಕ ಸನ್ಮಾನಿಸಿ ಗೌರವಿಸಲಾಯಿತು.ಈ ಸಂದರ್ಭದಲ್ಲಿ ಎಂಜಿಎಂ ಶಿಕ್ಷಣ ಸಂಸ್ಥೆಯ ಅಧ್ಯಕ್ಷ, ಖ್ಯಾತ ನ್ಯಾಯವಾದಿ ಎ ಎಂ ತಾಂಬೋಳಿ ಮಾತನಾಡಿ, ಶಿಕ್ಷಣ ಕ್ಷೇತ್ರದಲ್ಲಿ ಅಮೋಘ ಸಾಧನೆಯ ಮೂಲಕ ಜಿಲ್ಲೆಯ ಲಕ್ಷಾಂತರ ವಿದ್ಯಾರ್ಥಿಗಳ ಬಾಳಿಗೆ ಬೆಳಕಾಗಿರುವ ಎ ಎಸ್ ಪಾಟೀಲ ಅವರು ಸಿಂಡಿಕೇಟ್ ಸದಸ್ಯರಾಗಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ವಿಷಯವಾಗಿದೆ. ಅತ್ಯಂತ ಸಂಕಷ್ಟದ ದಿನಗಳಲ್ಲಿ ಡಾ. ಎಸ್ ಎ ಪುಣೇಕರ ಅವರೊಂದಿಗೆ ಸೇರಿದ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸುವುದರ ಮೂಲಕ ಉತ್ತಮ ಕಾರ್ಯ ಮಾಡಿದ್ದಾರೆ. ಅದರಲ್ಲೂ ಹೆಣ್ಣುಮಕ್ಕಳ ಶಿಕ್ಷಣ ಸಲುವಾಗಿ ಪ್ರತ್ಯೇಕ ಮಹಿಳಾ ಕಾಲೇಜುಗಳನ್ನು ತೆರೆದು ಶಿಕ್ಷಣ ಕ್ಷೇತ್ರದಲ್ಲಿ ವಿಶಿಷ್ಠ ಸೇವೆ ತೋರಿದ್ದಾರೆ. ಇವರ ಸೇವೆ ಸಂದ ಫಲವಾಗಿದೆ ಎಂದರು.ಸನ್ಮಾನ ಸ್ವೀಕರಿಸಿ ಮಾತನಾಡಿದ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ನೂತನ ಸಿಂಡೀಕೇಟ್ ಸದಸ್ಯ ಎ ಎಸ್…

Read More

ಉದ್ದೇಶ ದಿನಪತ್ರಿಕೆ ವಿಜಯಪುರ: ಶಿಕ್ಷಣದಿಂದ ಪ್ರತಿಯೊಬ್ಬರ ಬದುಕು ಬೆಳಗಲು ತಮ್ಮ ಸಂಪತ್ತನ್ನೇ ತ್ಯಾಗ ಮಾಡಿದ ತ್ಯಾಗವೀರ ಶಿರಸಂಗಿ ಲಿಂಗರಾಜ ಮಹಾರಾಜರು ಎರಡನೇಯ ಬಸವಣ್ಣ ಎಂದು ನಾಗಠಾಣ ಶಾಸಕ ವಿಠ್ಠಲ ಕಟಕಧೋಂಡ ಹೇಳಿದರು.ಶಿರಸಂಗಿ ಲಿಂಗರಾಜ ವಿವಿಧೋದ್ದೇಶ ಸಂಸ್ಥೆ, ಶ್ರೀಮತಿ ಕಮಲಾಬಾಯಿ ಬಸನಗೌಡ ಪಾಟೀಲ ಚಾರಿಟೇಬಲ್ ಟ್ರಸ್ಟ್, ಶಿರಸಲಿಂಗ ಲಿಂಗರಾಜ ಪತ್ತಿನ ಸಹಕಾರ ಸಂಘ, ಲಿಂಗಾಯತ ಕುಡು ಒಕ್ಕಲಿಗ ನೌಕರರ ಕ್ಷೇಮಾಭಿವೃದ್ಧಿ ವೇದಿಕೆ, ವಿಜಯಪುರ, ಬಾಗಲಕೋಟೆ ಹಾಗೂ ಅಥಣಿ ಕುಡು ಒಕ್ಕಲಿಗ ಸಮುದಾಯದ ಸಹಯೋಗದಲ್ಲಿ ವಿಜಯಪುರದ ಅಥಣಿ ರಸ್ತೆಯಲ್ಲಿರುವ ಶ್ರೀ ಜಿ.ಕೆ. ಪಾಟೀಲ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ತ್ಯಾಗವೀರ ಶಿರಸಂಗಿ ಮಹಾರಾಜರ ಹೆಸರಿನಲ್ಲಿ ಪ್ರಸಕ್ತ ವರ್ಷದ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ತ್ಯಾಗವೀರ ಶಿರಸಿಂಗ ಲಿಂಗರಾಜ ಮಹಾರಾಜರು ಶಿಕ್ಷಣ ಪ್ರಸಾರಕ್ಕೆ ನೀಡಿದ ಕೊಡುಗೆ ಅಮೋಘ, ತಮ್ಮ ಮಹೋನ್ನತ ವಿಚಾರಧಾರೆ, ದೂರದೃಷ್ಟಿಯ ಫಲವಾಗಿ ತಮ್ಮ ಇಡೀ ಸಂಪತ್ತನ್ನೇ ದಾನ ಮಾಡಿ ಶಿಕ್ಷಣ ಸಂಸ್ಥೆಗಳಿಗೆ ಧಾರೆ ಎರೆದರು. ಹೀಗಾಗಿ ವಿದ್ಯಾರ್ಥಿಗಳು ಈ ಮಹಾನ್ ಚಿಂತಕ ಶಿರಸಂಗಿ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: “ಜಗತ್ತಿಗೆ ವೇದೋಪನಿಷತ್ತುಗಳು ಹಾಗೂ ವಚನ ಸಾಹಿತ್ಯವನ್ನು ಕೊಟ್ಟವರು ಭಾರತೀಯರು, ಆಧ್ಯಾತ್ಮ ನಮ್ಮ ಉಸಿರು ಸಂಸ್ಕಾರಯುದ್ಧ ಜೀವನ ನಮ್ಮ ಬಾಳಿನ ಬೆಳಕು ಹಾಗಾಗಿ ನಮ್ಮ ದೇವಾಲಯಗಳು ನಮ್ಮ ಉಸಿರು ಹಾಗೂ ನಮ್ಮೆಲ್ಲರ ಬಾಳಿಗೆ ಬೆಳಕು ಚೆಲ್ಲುವ ಆಧ್ಯಾತ್ಮಿಕತೆಯ ಶ್ರದ್ಧಾ ಕೇಂದ್ರಗಳಾಗಿವೆ” ಎಂದು ಕರ್ನಾಟಕ ರಾಜ್ಯ ಬಾಲವಿಕಾಸ ಅಕಾಡೆಮಿಯ ನಿಕಟಪೂರ್ವ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.ವಿಜಯಪುರ ನಗರದ ಅಭಿವೃದ್ಧಿ ಬಡಾವಣೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಅಭಯಾಂಜನೇಯ ದೇವಾಲಯದ ಮೂರ್ತಿ ಪ್ರತಿಷ್ಠಾಪನೆ ಕಳಸಾರೋಹನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಪ್ರತಿ ಬಡಾವಣೆಯಲ್ಲಿರುವ ದೇವಾಲಯಗಳಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜೊತೆಗೆ ಭಗವಂತನ ನಿಜವಾದ ಸ್ವರೂಪವಾಗಿರುವ ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ, ಅವರ ಪ್ರತಿಭೆಯ ಅಭಿವ್ಯಕ್ತಿಗೆ ಸಹಕಾರಿಯಾಗಬಹುದಾದ ಕಾರ್ಯಕ್ರಮಗಳನ್ನು ಪ್ರತಿ ವರ್ಷ ರೂಪಿಸಬೇಕೆಂದು ಬಬಲೇಶ್ವರ ಮನವಿ ಮಾಡಿದರು.ಕಾರ್ಯಕ್ರಮದ ಸಾನಿಧ್ಯವನ್ನು ವಹಿಸಿದ್ದ ಹುಬ್ಬಳ್ಳಿಯ ಎರಡೇತ್ತಿನ ಮಠ ಹಾಗೂ ನಿಡೋನಿಯ ಶ್ರೀಮಠದ ಸಿದ್ದಲಿಂಗೇಶ್ವರ ಮಹಾಸ್ವಾಮಿಜಿಗಳು ಆಶೀರ್ವಚನ ನೀಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೇವಸ್ಥಾನದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಎಸ್ ಎನ್ ಅರಿಕೇರಿ ವಹಿಸಿದ್ದರು.…

Read More