Author: editor.udayarashmi@gmail.com

ಕರ್ನಾಟಕ ಬಾಲವಿಕಾಸ ಅಕಾಡೆಮಿ ನೂತನ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಅಭಿಮತ ಸಿಂದಗಿ: ಮಕ್ಕಳ ಮಾನಸಿಕ, ದೈಹಿಕ, ಆರೋಗ್ಯ ರಕ್ಷಣೆ, ಪೋಷಣೆ, ಶಿಕ್ಷಣ ಮತ್ತು ಹಕ್ಕುಗಳ ಸಂರಕ್ಷಣೆ ಕುರಿತು ವಿಶೇಷ ಗಮನ ಹರಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಕರ್ನಾಟಕ ಬಾಲವಿಕಾಸ ಅಕಾಡೆಮಿಯ ನೂತನ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.ಪಟ್ಟಣದ ಮಕ್ಕಳ ಕಲ್ಯಾಣ ಪ್ರತಿಷ್ಠಾನದ ಕ್ರಿಯೇಟಿವ್‌ ಕಿಡ್ಸ್ ಹೋಮ್‌ಗೆ ಸೋಮವಾರ ಬೇಟಿ ನೀಡಿದ ಸಂದರ್ಭದಲ್ಲಿ ಅವರು ಮಾತನಾಡಿದರು.ಮಕ್ಕಳ ಕಲ್ಯಾಣಕ್ಕಾಗಿ ವಿವಿಧ ತರಬೇತಿ ಕಾರ್ಯಾಗಾರ, ಕಮ್ಮಟ ಕಾರ್ಯಕ್ರಮಗಳನ್ನು ರೂಪಿಸುವ ಮತ್ತು ಅನುಷ್ಠಾನಕ್ಕೆ ತರುವ ಉದ್ದೇಶ ಹೊಂದುವಂತೆ ಮಾಡಿ ನಾಡಿನ ಮಕ್ಕಳ ಶ್ರೇಯೋಭಿವೃದ್ಧಿಗಾಗಿ ಕರ್ನಾಟಕ ಸರಕಾರವು ಈ ಅಕಾಡೆಮಿಯನ್ನು ಸ್ಥಾಪಿಸಿದೆ. ದೇಶದ ಮಕ್ಕಳಿಗಾಗಿ ಸ್ಥಾಪನೆಗೊಂಡಿರುವ ಎರಡನೇ ಅಕಾಡೆಮಿ ಇದಾಗಿದೆ ಎಂದು ಹೇಳಿದರು.ಈ ವೇಳೆ ಮಕ್ಕಳ ಕಲ್ಯಾಣ ಪ್ರತಿಷ್ಠಾನದ ಸಂಸ್ಥಾಪಕ ಅಧ್ಯಕ್ಷ, ಮಕ್ಕಳ ಹಿರಿಯ ಸಾಹಿತಿ ಹ.ಮ.ಪೂಜಾರ ಅವರೊಂದಿಗೆ ಚರ್ಚಿಸಿ, ಶಿಕ್ಷಣ, ಸಾಹಿತ್ಯ, ಸಂಗೀತ, ಹಾಗೂ ಕಲೆಯು ಸೇರಿದಂತೆ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಹಾಗೂ ಪ್ರಗತಿಗಾಗಿ ವಿಶೇಷ ಕಾರ್ಯಕ್ರಮವನ್ನು…

Read More

ಸಿಂದಗಿ: ವಿದ್ಯುತ್ ಅವಘಡ ತಪ್ಪಿಸಲು ಸಾರ್ವಜನಿಕರಿಗೆ ಅರಿವು ಮೂಡಿಸುವುದು ಅಗತ್ಯ. ನಿಗಮದ ಪವರ್‌ಮೆನ್‌ಗಳು ಹಾಗೂ ಅಧಿಕಾರಿಗಳು ಸಹ ಸುರಕ್ಷತಾ ಕ್ರಮಗಳಿಗೆ ಹೆಚ್ಚಿನ ಪ್ರಾಶಸ್ತ್ಯ ಕೊಡಬೇಕು ಎಂದು ವಿಭಾಗಾಧಿಕಾರಿ ಮಲಕಪ್ಪ ಜಾಲಿಬೆಂಚಿ ಹೇಳಿದರು.ಪಟ್ಟಣದ ಹೆಸ್ಕಾಂ ಕಛೇರಿಯಲ್ಲಿ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ್ ಹಾಗೂ ಸಿಂದಗಿ ಉಪವಿಭಾಗದ ವತಿಯಿದ ಹಮ್ಮಿಕೊಂಡ ವಿದ್ಯುತ್ ಸುರಕ್ಷಾ ಪಾಕ್ಷಿಕ ಜಾಗೃತಿ ಸಭೆಯಲ್ಲಿ ಮಾತನಾಡಿದ ಅವರು, ವಿದ್ಯುತ್ ಬಳಕೆಯಲ್ಲಿ ಸುರಕ್ಷತೆ, ವಿದ್ಯುತ್ ಉಳಿತಾಯ, ಸೌರ ಮೇಲ್ಛಾವಣಿ, ಪಿ.ಎಂ ಕುಸುಮ್ ಯೋಜನೆ ಹಾಗೂ ವಿದ್ಯುತ್ ಚಾಲಿತ ಚಾರ್ಜಿಂಗ್ ಕೇಂದ್ರಗಳ ಕುರಿತು ಗ್ರಾಹಕರಲ್ಲಿ ಅರಿವು ಅತ್ಯಗತ್ಯವಾಗಿದೆ. ಸಾರ್ವಜನಿಕರಿಗೆ ವಿದ್ಯುತ್ ದುರಸ್ತಿ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳು ಕುರಿತು ತಿಳಿಸಿ ಕೊಡಬೇಕು. ಸ್ಪಲ್ಪ ನಿರ್ಲಕ್ಷ್ಯ ವಹಿಸಿದರೂ ಪ್ರಾಣಕ್ಕೆ ಅಪಾಯ ಎದುರಾಗುವ ಸಾಧ್ಯತೆ ಹೆಚ್ಚಿರುತ್ತದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ವಿದ್ಯುತ್ ಸುರಕ್ಷತಾ ಮುನ್ನೆಚ್ಚರಿಕೆ ಕ್ರಮಗಳ ಕುರಿತು ನಿಗಾ ವಹಿಸುವಂತೆ ಹೆಸ್ಕಾಂ ಅಧಿಕಾರಿಗಳು ಸಲಹೆ ನೀಡಿದರು.ಇದೇ ಸಂದರ್ಭದಲ್ಲಿ ಶಾಂತೂ ಬಿರಾದಾರ, ಬಸವರಾಜ ಅಗಸರ, ಚಂದ್ರಶೇಖರ ಅಂಗಡಿ,…

Read More

ರೂ.೨.೪೩ ಕೋಟಿ ವೆಚ್ಚದ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯ ಉದ್ಘಾಟನೆ ಸಿಂದಗಿ: ೨.೪೩ ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣವಾದ ಬಾಲಕಿಯರ ವಸತಿ ನಿಲಯದಲ್ಲಿ ಸ್ವಚ್ಚತೆ, ಗುಣಮಟ್ಟದ ಆಹಾರ ಹಾಗೂ ಮಕ್ಕಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಪಟ್ಟಣದ ಹಳೆ ಚಾಂದಕವಟೆ ರಸ್ತೆಯಲ್ಲಿರುವ ವಿಜಯಪುರ ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಡಿ.ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯ, ಸಿಂದಗಿ ಟೌನ್ ನೂತನ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು. ೨೦೨೦ರಲ್ಲಿ ನಮ್ಮ ತಂದೆಯವರಾದ ದಿ.ಎಂ.ಸಿ.ಮನಗೂಳಿ ಅವರ ಹಸ್ತದಿಂದ ಅಡಿಗಲ್ಲು ಸಮಾರಂಭ ಜರುಗಿದ್ದು, ಇಂದು ನಾನು ಕಟ್ಟಡ ಉದ್ಘಾಟನೆ ಮಾಡುತ್ತಿರುವುದು ಸಂತಸ ತಂದಿದೆ. ಸಿಂದಗಿ ಶಿಕ್ಷಣ ಕಾಶಿಯಾಗಿ ಹೊರಹೊಮ್ಮುತ್ತಿದೆ. ವಿದ್ಯಾರ್ಥಿಗಳ ಪ್ರತಿಭೆಗಳನ್ನು ಶಿಕ್ಷಕರು ಗುರುತಿಸಬೇಕು. ಮಕ್ಕಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು. ಶಿಕ್ಷಣ ಒಂದಿದ್ದರೆ ಜೀವನದಲ್ಲಿ ಏನೆಲ್ಲವನ್ನು ಪಡೆದುಕೊಳ್ಳಬಹುದು. ಹಾಗಾಗಿ ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದರು.ಈ ವೇಳೆ ಕರ್ನಾಟಕ ಬಾಲವಿಕಾಸ ಅಕಾಡೆಮಿ ನೂತನ ಅಧ್ಯಕ್ಷ ಸಂಗಮೇಶ…

Read More

ಆಲಮೇಲದಲ್ಲಿ ರೂ.೩.೫ ಕೋಟಿ ವೆಚ್ಚದ ಕೆರೆ ಅಭಿವೃದ್ದಿ ಕಾಮಗಾರಿಗೆ ಶಾಸಕರಿಂದ ಚಾಲನೆ ಆಲಮೇಲ: ಪಟ್ಟಣದ ೫೪ ಎಕರೆ ವಿಶಾಲವಾದ ಕೆರೆಯನ್ನು ಅಭಿವೃದ್ದಿಗೊಳಿಸಿ, ಕೆರೆಯ ಸುತ್ತಲೂ ತಡೆಗೊಡೆ ನಿರ್ಮಿಸಿ ಸಾರ್ವಜನಿಕರಿಗೆ ವಾಯುವಿಹಾರದ ವ್ಯವಸ್ಥೆ ಮಾಡುವ ಮೂಲಕ ಮಾದರಿ ಕೆರೆಯನ್ನಾಗಿ ಮಾಡಲಾಗುವುದು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಭಾನುವಾರ ಸಣ್ಣ ನೀರಾವರಿ ಇಲಾಖೆಯಿಂದ ೩.೫ ಕೋಟಿ ವ್ಯೆಚ್ಚದ ಕೆರೆ ಅಭಿವೃದ್ದಿ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.ಪಟ್ಟಣದ ಕೆರೆಯಲ್ಲಿನ ಹೊಳು ತಗೆದು ಮಳೆ ನೀರು ಮತ್ತು ಕಾಲುವೆ ಮೂಲಕ ಕೆರೆ ತುಂಬುವ ಯೋಜನೆ ಇದಾಗಿದ್ದು ಇದರಿಂದ ಪಟ್ಟಣದ ಜನರ ನೀರಿನ ಸಮಸ್ಯೆ ನಿವಾರಿಸಲಿದೆ ಮತ್ತು ಅಂತರ್ಜಲ ಹೆಚ್ಚಾಗಿ ಸುತ್ತಲಿನ ರೈತರಿಗೂ ಅನಕೂಲವಾಗಲಿದೆ. ೫೪ ಎಕರೆ ಕೆರೆಯ ಜಾಗದಲ್ಲಿ ಸಂಪೂರ್ಣ ಹೂಳೆತ್ತಿ ಸುತ್ತಲೂ ತಡೆಗೋಡೆಗಳನ್ನು ನಿರ್ಮಿಸಿ ವೀಕ್ಷಣೆಯ ಸ್ಥಳವನ್ನಾಗಿ ಮಾಡಲಾಗುವುದು ಎಂದರು.ನಮ್ಮ ತಂದೆ ದಿ. ಎಂ.ಸಿ. ಮನಗೂಳಿ ಅವರು ಸಿಂದಗಿ ನಗರದ ಜನರಿಗೆ ನೀರಿನ ಬವಣೆ ನೀಗಿಸಲು ಕೆರೆ ಅಭಿವೃದ್ದಿಗೊಳಿಸಿ ಬೇರೆಡೆಯಿಂದ ಪೈಪಲೈನ್ ಮೂಲಕ ಕೆರೆಗೆ…

Read More

ವಿಜಯಪುರ: ಭೂತನಾಳದ ಮೀನುಗಾರಿಕೆ ಸಂಶೋಧನಾ ಮತ್ತು ಮಾಹಿತಿ ಕೇಂದ್ರದಲ್ಲಿ ಜುಲೈ ೧೨ ರಂದು ರಾಷ್ಟ್ರೀಯ ಮೀನು ಕೃಷಿಕರ ದಿನಾಚರಣೆ ಯ ಅಂಗವಾಗಿ ಮಿಶ್ರ ಮೀನು ಸಾಕಾಣಿಕೆ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ವೇಳೆ ಒಂದು ರೂಪಾಯಿಗೆ ಮೀನುಮರಿಗಳನ್ನು ಮಾರಾಟ ಮಾಡಲಾಗುವುದು. ರೈತರು ಇದರ ಸದುಪಯೋಗ ಪಡಿಸಿಕೊಳ್ಳವಂತೆಯೂ, ಹೆಚ್ಚಿನ ಮಾಹಿತಿಗೆ ದೂ: ೦೮೩೫೨-೨೬೪೫೧೬, ಮೊ: ೯೪೮೦೫೧೮೬೭೯, ೯೯೪೫೯೫೯೭೦೪ನ್ನು ಸಂಪರ್ಕಿಸಬೇಕು ಎಂದು ಭೂತನಾಳ ಮೀನುಗಾರಿಕೆ ಮತ್ತು ಸಂಶೋಧನಾ ಕೇಂದ್ರದ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Read More

ವಿಜಯಪುರ: ೧೧೦ ಕೆವಿ ದೇವರಹಿಪ್ಪರಗಿ ಹತ್ತಿರ ೧೧೦ ಕೆವಿ ಲಿಲೋ ಗೋಪುರದ ಮೇಲೆ ತಂತಿ ಜೋಡಿಸುವ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ೧೧೦ ಕೆವಿ ಅಥರ್ಗಾ, ೧೧೦ ಕೆವಿ ದೇವರಹಿಪ್ಪರಗಿ, ೧೧೦ ಕೆವಿ ಹಿರೇಮಸಳಿ, ೩೩ ಕಡ್ಲೇವಾಡ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎಲ್ಲಾ ೧೧ ಕೆವಿ ಮಾರ್ಗಗಳಲ್ಲಿ ಜುಲೈ ೧೦ರ ಬೆಳಿಗ್ಗೆ ೭ ರಿಂದ ಬೆಳಿಗ್ಗೆ ೧೧ ಗಂಟೆಯವರೆಗೆ ವಿದ್ಯುತ್ ಪೂರೈಕೆಯಲಿ ವ್ಯತ್ಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಇಂಡಿ ಹೆಸ್ಕಾಂನ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿಜಯಪುರ: ಕರ್ನಾಟಕ ಯಕ್ಷಗಾನ ಅಕಾಡೆಮಿಯು ಯಕ್ಷಗಾನದ ತೆಂಕು, ಬಡಗು ಬಡಾಬಡಗು, ಯಕ್ಷಗಾನ ಗೊಂಬೆಯಾಟ ಮೂಡಲಪಾಯ ಯಕ್ಷಗಾನ, ಕೇಳಿಕೆ, ಘಟ್ಟದಕೋರೆ ಮತ್ತು ತಾಳಮದ್ದಲೆ ಇತ್ಯಾದಿ ಕಲಾ ಪ್ರಕಾರಗಳಲ್ಲಿ ೨೦೨೨ ಹಾಗೂ ೨೦೨೩ನೇ ಸಾಲಿನ ಕ್ಯಾಲೆಂಡರ್ ವರ್ಷದಲ್ಲಿ ಪ್ರಕಟಿಸಿರುವ ಪುಸ್ತಕಗಳನ್ನು ಬಹುಮಾನಕ್ಕೆ ಆಯ್ಕೆ ಮಾಡಲು ಲೇಖಕರಿಂದ ಹಾಗೂ ಪ್ರಕಾಶಕರಿಂದ ಅರ್ಜಿ ಆಹ್ವಾನಿಸಿದೆ.ಆಯ್ಕೆಯಾದ ಪುಸ್ತಕಕ್ಕೆ ರೂ. ೨೫,೦೦೦ ಬಹುಮಾನ ನೀಡಲಾಗುವುದು. ಯಕ್ಷಗಾನದ ವಿವಿಧ ಆಯಾಮಗಳ ಬಗ್ಗೆ ಸಂಗೀತ, ಆಹರ‍್ಯ, ಅಭಿನಯ, ಸಂಶೋಧನೆ, ವಿಮರ್ಶೆ, ಜೀವನ ಚರಿತ್ರೆ, ಪ್ರಸಂಗ ಪುಸ್ತಕ ಇತ್ಯಾದಿ ಪ್ರಕಾರಗಳನ್ನು ಒಳಗೊಂಡ ಪ್ರಥಮ ಮುದ್ರಣ ಆವೃತ್ತಿಯ ಸ್ವರಚಿತ ಪುಸ್ತಕಗಳನ್ನು ಬಹುಮಾನಕ್ಕಾಗಿ ಆಹ್ವಾನಿಸಿದೆ. ಬಹುಮಾನಕ್ಕೆ ಸಲ್ಲಿಸುವ ಪುಸ್ತಕವು ಪಠ್ಯಕ್ಕಾಗಿ ಸಿದ್ಧಪಡಿಸಿರಬಾರದು ಹಾಗೂ ಸಂಪಾದಿತ ಅಥವಾ ಅಭಿನಂದನ ಕೃತಿಯಾಗಿರಬಾರದು. ಪುಸ್ತಕಗಳನ್ನು ರಿಜಿಸ್ಟಾçರ್, ಕರ್ನಾಟಕ ಯಕ್ಷಗಾನ ಅಕಾಡೆಮಿ, ಕನ್ನಡ ಭವನ, ಎರಡನೇ ಮಹಡಿ, ಚಾಲುಕ್ಯ ವಿಭಾಗ, ಜೆ.ಸಿ.ರಸ್ತೆ, ಬೆಂಗಳೂರು-೫೬೦ ೦೦೨, ಇವರಿಗೆ ೨೦೨೪ರ ಜುಲೈ ೨೫ರ ಒಳಗಾಗಿ ಅರ್ಜಿಯೊಂದಿಗೆ ಪುಸ್ತಕದ ನಾಲ್ಕು ಪ್ರತಿಗಳನ್ನು ಕಡ್ಡಾಯವಾಗಿ ಕಳುಹಿಸುವುದು. ಯಾವುದೇ ಕಾರಣಕ್ಕೂ ಪುಸ್ತಕಗಳನ್ನು ಹಿಂದಿರುಗಿಸಲಾಗುವುದಿಲ್ಲ. ಅರ್ಜಿಗಳನ್ನು…

Read More

ವಿಜಯಪೂರ: ೨೦೨೪-೨೫ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರಗಳನ್ನು ಮುಂಗಾರು ರೈತರ ಬೆಳೆ ಸಮೀಕ್ಷೆ ಆ್ಯಪ್‌ನಲ್ಲಿ ದಾಖಲಿಸಲು ಆಗಸ್ಟ್ ೩೧ರವರೆಗೆ ಕಾಲಾವಕಾಶ ವಿಸ್ತರಿಸಲಾಗಿದೆ. ರೈತರು ತಮ್ಮ ಜಮೀನಿನ ಬೆಳೆ ಸಮೀಕ್ಷೆಯನ್ನು ತಾವೇ ಕೈಗೊಳ್ಳಲು ಆಗದೇ ಇದ್ದಲ್ಲಿ ತಮ್ಮ ಜಮೀನಿನಲ್ಲಿ ಬೆಳೆದ ವಿವಿಧ ಬೆಳೆಗಳ ಮಾಹಿತಿಯನ್ನು ಖಾಸಗಿ ನಿವಾಸಿಗಳ (ಪಿಆರ್) ಮೂಲಕ ಖುದ್ದಾಗಿ ಕ್ಷೇತ್ರದಲ್ಲಿದ್ದು, ದಿನಾಂಕ:೧೫-೦೮-೨೦೨೪ ರಿಂದ ೩೦-೦೯-೨೦೨೪ರ ಒಳಗಾಗಿ ನಿಖರವಾಗಿ ಬೆಳೆ ವಿವರಗಳನ್ನು ದಾಖಲಿಸಬೇಕೆಂದು ಜಂಟಿ ಕೃಷಿ ನಿರ್ದೇಶಕರಾದ ಡಾ. ಡಿ.ಡಬ್ಲೂ ರಾಜಶೇಖರ ಅವರು ತಿಳಿಸಿದ್ದಾರೆ.ರೈತರು ಗೂಗಲ್ ಪ್ಲೇ ಸ್ಟೋರ್ ಅಥವಾ ಕ್ಯೂ ಆರ್ ಕೋಡ್‌ನಿಂದ ಮುಂಗಾರು ಬೆಳೆ ಸಮೀಕ್ಷೆ ಆ್ಯಪ್ ಡೌನ್ಲೋಡ್ ಮಾಡಿಕೊಂಡು ಸ್ವತಃ ತಾವೇ ಬೆಳೆ ಸಮೀಕ್ಷೆ ಮಾಡಿ ಬೆಳೆದ ಬೆಳೆ ವಿವರಗಳನ್ನು ದಾಖಲಿಸಬಹುದಾಗಿದೆ. ಬೆಳೆ ಸಮೀಕ್ಷೆ ಆ್ಯಪ್‌ನಲ್ಲಿ ದಾಖಲಾಗುವ ಮಾಹಿತಿಯನ್ನು ಬೆಳೆ ಸಾಲ, ಬೆಳೆ ವಿಮೆ, ಬೆಂಬಲ ಬೆಲೆ, ಖರೀದಿ, ಬೆಳೆ ಪರಿಹಾರ ಪಹಣಿಯಲ್ಲಿ ಬೆಳೆ ವಿವರಗಳನ್ನು ದಾಖಲಿಸಲು ಮತ್ತು ವಿವಿಧ ಇಲಾಖೆಗಳ…

Read More

ಬಸವನಬಾಗೇವಾಡಿ: ತಾಲೂಕಿನ ಇಂಗಳೇಶ್ವರ ರೇವಣಸಿದ್ದೇಶ್ವರ ಗುಡ್ಡದಲ್ಲಿರುವ ಸಮುದಾಯ ಭವನದಲ್ಲಿ ಜಗದ್ಗುರು ರೇವಣಸಿದ್ದೇಶ್ವರ ಬೆಳ್ಳಿಯ ಉತ್ಸವ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಾಗೂ ರೇವಣಸಿದ್ದೇಶ್ವರ ಗುಡ್ಡದಲ್ಲಿರುವ ಅಕ್ಕನಾಗಮ್ಮ ಗುಹೆಯಲ್ಲಿ ಅಕ್ಕನಾಗಮ್ಮ, ಚನ್ನಬಸವಣ್ಣ ಮತ್ತು ಬಸವಣ್ಣನವರ ಮೂರ್ತಿಗಳ ಪ್ರಾಣ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣದಂಗವಾಗಿ ಭಾನುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಗುಡ್ಡದಲ್ಲಿ ೨೫ ಸಾವಿರ ಸಸಿಗಳನ್ನು ನೆಟ್ಟು ಅವುಗಳ ಸಂರಕ್ಷಣೆ ಕಾರ್ಯ ಮಾಡುತ್ತಿರುವ ಕೈಲಾಸ ಬಾಗೇವಾಡಿ, ಉಮೇಶ ಹಡಪದ, ರೇವಣಸಿದ್ದ ದಳವಾಯಿ, ಸಿದ್ದು ಬೊಮ್ಮನಹಳ್ಳಿ, ದಿಲೀಪ ಯಾಳವಾರ, ಮಲ್ಲಿಕಾರ್ಜುನ ಹಳ್ಳಿ ಅವರನ್ನು ಸನ್ಮಾನಿಸಲಾಯಿತು.

Read More

ಬಸವನಬಾಗೇವಾಡಿ: ತಾಲೂಕಿನ ಸುಕ್ಷೇತ್ರ ಉತ್ನಾಳ ಗ್ರಾಮದ ಹಿರೇಮಠದ ಮಹಾಲಕ್ಷ್ಮೀದೇವಿ ಉಪಾಸಕರಾದ ಶಿವಪುತ್ರಯ್ಯ ಹಿರೇಮಠ ಅವರ ಸುಪುತ್ರ ಡಾ.ಮಹಾಂತೇಶ ಹಿರೇಮಠ ಅವರಿಗೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಇಂಚಲದಲ್ಲಿ ಈಚೆಗೆ ಜರುಗಿದ ಪದವಿ ಪ್ರದಾನ ಕಾರ್ಯಕ್ರಮದಲ್ಲಿ ಕೆಎಲ್ಇ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ನಿತಿನ್ ಗಂಗನೆ, ಪ್ರಾಚಾರ್ಯ ಡಾ. ಜಿ.ವಿನಯ ಮೋಹನ ಅವರು ಆಯುರ್ವೇದದ ಕಾಯಚಿಕಿತ್ಸಾ ವಿಭಾಗದ ಸ್ನಾತಕೋತ್ತರ ಪದವಿ (ಎಂಡಿ) ಪ್ರದಾನ ಮಾಡಿದರು.ಈ ಕಾರ್ಯಕ್ರಮದಲ್ಲಿ ಶಿವಾನಂದ ಭಾರತಿ ಸ್ವಾಮೀಜಿ, ಪೂರ್ಣಾನಂದ ಭಾರತಿ ಸ್ವಾಮೀಜಿ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು ಎಂದು ಪ್ರಕಟಣೆ ತಿಳಿಸಿದೆ.

Read More