Author: editor.udayarashmi@gmail.com

ಚಡಚಣ: ಸಮೀಪದ ನಿವರಗಿ ಗ್ರಾಮದಲ್ಲಿ ಗಡಿನಾಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವಿಜಯಪುರ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಚಡಚಣ ಇವರ ಸಂಯುಕ್ತ ಆಶ್ರಯದಲ್ಲಿ ಜಾನಪದ ಗೋಷ್ಠಿ ಕಾರ್ಯಕ್ರಮ ಉದ್ಘಾಟಿಸಿ ಕರ್ನಾಟಕ ಸಮೃದ್ಧ ಜಾನಪದ ಸಾಹಿತ್ಯದ ಆಗರ, ಜನಪದ ಸಾಹಿತ್ಯ ಶ್ರೀಮಂತಿಕೆಗೆ ಅಪಾರವಾದದ್ದು , ಅದು ನಮ್ಮ ದೇಶದಲ್ಲಿ ಅಷ್ಟೇ ಅಲ್ಲ, ಅಮೆರಿಕದಲ್ಲಿ ಸಹ ತನ್ನ ಚಾಪು ಮೂಡಿಸಿದೆ. ಕನ್ನಡ ಅಂದರೆ ಅದೊಂದು ಸಂಸ್ಕೃತಿ, ಅಸ್ಮಿತೆ ನಮ್ಮ ಉಸಿರು. ಕನ್ನಡದ ಕೆಲಸಕ್ಕೆ ಎಲ್ಲರೂ ಒಂದಾಗಿ ಇರಬೇಕು. ಈ ನಿಟ್ಟಿನಲ್ಲಿ ಗಡಿ ಪ್ರಾಧಿಕಾರ ಮತ್ತು ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯ‌ ಶ್ಲಾಘನೀಯ ಎಂದರು.ಮುಖ್ಯ ಅತಿಥಿಯಾಗಿ ಆಗಮಿಸಿದ ತಾಳಿಕೋಟೆಯ ಜಾನಪದ ವಿದ್ವಾಂಸೆ ಶಿವಲೀಲಾ ಮುರಾಳ ಮಾತನಾಡುತ್ತ, ಜಾನಪದವು ದಿನನಿತ್ಯ ಬೆಳಸುವ ಬದುಕಿನ ಸಂಸ್ಕೃತಿ ಅಂಗವಾಗಿದೆ. ಜನಪದ ಸಾಹಿತ್ಯವು ತಾಯಂದಿರು ಹಾಡುವ ಲಾಲಿಗಳಿಂದ ಪ್ರಾರಂಭವಾಗಿ ಹಾಡುವಾಗ, ಬೀಸುವಾಗ, ಕುಟ್ಟುವಾಗ ಹಾಡುವ ಹಾಡಿನಿಂದ ಈ ಜಾನಪದ ಹುಟ್ಟುತ್ತದೆ.ಮೊಬೈಲ್ ಯುಗದಲ್ಲಿ ಜನಪದ ಹಾಡುಗಳು ನಶಿಸಿ…

Read More

ವಿಜಯಪುರದ ಫ್ರೆಂಡ್ಸ್ ಟೆನಿಕಾಯಿಟ್ ಅಸೋಸಿಯೇಷನ್ ಕ್ಲಬ್ ಆಯೋಜನೆ ವಿಜಯಪುರ: ಜಿಲ್ಲಾ ಯುವಜನ ಕ್ರೀಡಾ ಇಲಾಖೆ ಸಹಯೋಗದೊಂದಿಗೆ ರಾಜ್ಯಮಟ್ಟದ ಡಬಲ್ಸ್ ಟೆನಿಕ್ವೈಟ್ ಪಂದ್ಯಾವಳಿಯು ನಗರದ ಡಾ. ಬಿ ಆರ್ ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಜು.7 ರಂದು ರವಿವಾರ ನಡೆಯಿತು.ನಗರದ ಫ್ರೆಂಡ್ಸ್ ಟೆನಿಕಾಯಿಟ್ ಅಸೋಸಿಯೇಷನ್ ಕ್ಲಬ್ ಸಂಘಟಿಸಿದ ಈ ಪಂದ್ಯಾವಳಿಯಲ್ಲಿ ಗುಳೇದ್ಗುಡ್ಡ, ಕೋಲಾರ್, ಮುದ್ದೇಬಿಹಾಳ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ ಪ್ರಖ್ಯಾತ ಕ್ರೀಡಾಪಟುಗಳ ಒಟ್ಟು 36 ತಂಡಗಳು ಭಾಗವಹಿಸಿದ್ದವು.ಪಂದ್ಯಾವಳಿಯಲ್ಲಿ ಅಂತಿಮವಾಗಿ ರಾಮ್ ಮತ್ತು ಅಬ್ದುಲ್ ರಜಾಕ್ ಪೆಂಡಾರಿ ಗುಳೇದಗುಡ್ ಪ್ರಥಮ ಸ್ಥಾನ, ಚಂದ್ರಶೇಖರ್ ಖಂಡೆಕರ್ ಮತ್ತು ಪರಶುರಾಮ ಜಿಲ್ಲಾ ಕ್ರೀಡಾಂಗಣ ವಿಜಯಪುರ ದ್ವಿತೀಯ ಸ್ಥಾನ, ನಮ್ಮ ವಿಜಯಪುರದ ಹೆಮ್ಮೆಯ ಐಶ್ವರ್ಯ ನಗರದ ವರದಾಂಜನೇಯ ದೇವಸ್ಥಾನದ ಉದ್ಯಾನವನದ ತಂಡದ ಪ್ರಕಾಶ್ ಕೋರಳ್ಳಿ ಹಾಗೂ ಡಾ. ದರ್ಶನ್ ಧರಿ ರೋಮಾಂಚನವಾಗಿ ಆಟವಾಡಿ ವಿರೋಚಿತ ಪ್ರದರ್ಶನದೊಂದಿಗೆ ತೃತೀಯ ಸ್ಥಾನ ಗಿಟ್ಟಿಸಿಕೊಂಡು ಪಾರಿತೋಷಕ ಹಾಗೂ ನಗದು ಬಹುಮಾನ ಸ್ವೀಕರಿಸಿದರು.ಅಧಿಕ ಸಂಖ್ಯೆಯಲ್ಲಿ ಕ್ರೀಡಾಭಿಮಾನಿಗಳು ಪಾಲ್ಗೊಂಡು ಪಂದ್ಯಾವಳಿಯನ್ನು ಕಣ್ತುಂಬಿಕೊಂಡರು.

Read More

ಅಕ್ಕಿ ದಾಸ್ತಾನು ಇದ್ದರೂ ಅಕ್ಕಿ ನೀಡುತ್ತಿಲ್ಲ | ಕೇಂದ್ರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ | ಸಿಎಂ ಸಿದ್ದರಾಮಯ್ಯ ಕಿಡಿ ಬೆಂಗಳೂರು: ರಾಜ್ಯಕ್ಕೆ ಎಂಆರ್‌ಪಿ ದರದಲ್ಲಿ 29 ರೂ.ಗೆ ಕೆಜಿ ಭಾರತ್ ಅಕ್ಕಿ ಮಾರಾಟವನ್ನು ನಿಲ್ಲಿಸಿದ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.ಶನಿವಾರ ವಿಧಾನಸೌಧದಲ್ಲಿ ಮಾಜಿ ಉಪಪ್ರಧಾನಿ ಬಾಬು ಜಗಜೀವನ್ ರಾಂ ಅವರ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಕೇಂದ್ರ ಸರ್ಕಾರ ಭಾರತ್ ಅಕ್ಕಿ ಮಾರಾಟ ಸ್ಥಗಿತಗೊಳಿಸಿರುವುದರ ವಿರುದ್ಧ ನಾವು ಪ್ರತಿಭಟನೆ ಪ್ರಾರಂಭಿಸುತ್ತೇವೆ. ಅವರ ಬಳಿ ಅಕ್ಕಿ ದಾಸ್ತಾನು ಇದ್ದರೂ ಅಕ್ಕಿ ನೀಡುತ್ತಿಲ್ಲ ಎಂದರೆ ಅದು ರಾಜಕೀಯ ಎಂದು ತಿರುಗೇಟು ನೀಡಿದ್ದಾರೆ.ಚುನಾವಣೆ ಉದ್ದೇಶದಿಂದ ಭಾರತ್ ಅಕ್ಕಿಯ ಮಾರಾಟ ಮಾಡಲಾಯಿತು. ಚುನಾವಣೆ ಮುಗಿದ ಮೇಲೆ ಅದನ್ನು ನಿಲ್ಲಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು.ಶನಿವಾರ ವಿಧಾನಸೌಧದಲ್ಲಿ ಮಾಜಿ ಉಪಪ್ರಧಾನಿ ಬಾಬು ಜಗಜೀವನ್ ರಾಂ ಅವರ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ…

Read More

ಸಿಂದಗಿ: ಈಗಾಗಲೇ ರಾಜ್ಯದಲ್ಲಿ ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರು ನಮ್ಮ ಬೇಡಿಕೆಗಾಗಿ ಹಲವು ಬಾರಿ ಮನವಿ ಸಲ್ಲಿಸಿದ್ದೇವೆ. ಹಲವು ದಿನಗಳ ಹಿಂದೆ ತುಮಕೂರದಿಂದ ಬೆಂಗಳೂರದವರೆಗೆ ಪಾದಯಾತ್ರೆ ಮಾಡಿ ೧೪೩ ದಿನಗಳ ಕಾಲ ನಿರಂತರವಾಗಿ ಅನಿರ್ಧಿಷ್ಟಾವಧಿ ಧರಣಿ ಮಾಡಿದ್ದರೂ ಸಹ ಸರ್ಕಾರ ನಮ್ಮ ಸಮಸ್ಯೆಯನ್ನು ಪರಿಹರಿಸಲು ಮುಂದಾಗಿಲ್ಲ ಎಂದು ಸಂಘದ ರಾಜ್ಯ ಕಾರ್ಯದರ್ಶಿ ಕಿರನಳ್ಳಿ ಆಕ್ರೋಶ ವ್ಯಕ್ತಪಡಿಸಿದರು.ಪಟ್ಟಣದ ತಾಲೂಕು ಆಡಳಿತ ಸೌಧದಲ್ಲಿ ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ ಓ.ಪಿ.ಎಸ್ ಜಾರಿಗೊಳಿಸುವ ಮತ್ತು ಜ್ಯೋತಿ ಸಂಜೀವಿನಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಕೂಡಲೇ ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘ ತಾಲೂಕಾ ಘಟಕದ ಪದಾಧಿಕಾರಿಗಳು ತಹಶೀಲ್ದಾರ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಹಾಗೂ ಮುಖ್ಯಮಂತ್ರಿಗಳಿಗೆ ಶನಿವಾರ ಮನವಿ ಸಲ್ಲಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಚುನಾವಣೆಗೂ ಪೂರ್ವ ಡಿಸಿಎಂ ಡಿ.ಕೆ.ಶಿವಕುಮಾರ ಅವರು ನಮ್ಮ ಧರಣಿ ಸ್ಥಳಕ್ಕೆ ಆಗಮಿಸಿ ನಮ್ಮ ಸರ್ಕಾರ ಬಂದ ಮೇಲೆ ಕೂಡಲೇ ತಮ್ಮ ಸಮಸ್ಯೆಯನ್ನು…

Read More

ಸಿಂದಗಿ: ತಾಲೂಕಿನ ರೈತರು ಈಗಾಗಲೇ ಬಿತ್ತನೆ ಮಾಡಿದ್ದಾರೆ. ಬೆಳೆಗಳು ನಾಟಿ ರೂಪದಲ್ಲಿ ಬಂದಿವೆ. ಸರಿಯಾಗಿ ಮಳೆ ಬಾರದ ಕಾರಣ ಹಾಳಾಗಿ ರೈತರಿಗೆ ನಷ್ಟವಾಗಲಿದೆ. ಆದ್ದರಿಂದ ಕಾಲುವೆಗಳಿಗೆ ತಕ್ಷಣ ನೀರು ಹರಿಸಿ ಅನುಕೂಲ ಮಾಡಿಕೊಡಬೇಕೆಂದು ಉತ್ತರ ಕರ್ನಾಟಕ ವಲಯ ಅಧ್ಯಕ್ಷ ಬಸನಗೌಡ ಧರ್ಮಗೊಂಡ ಹೇಳಿದರು.ಪಟ್ಟಣದ ತಾಲೂಕು ಆಡಳಿತ ಸೌಧದದಲ್ಲಿ ಕಾಲುವೆಗಳಿಗೆ ನೀರು ಹರಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಘಟಕದ ವತಿಯಿಂದ ಶನಿವಾರ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ರೈತರು ಮುಂಗಾರು ಬಿತ್ತನೆ ಕೆಲಸ ಶುರು ಮಾಡಿದ್ದು, ಮಳೆ ಸರಿಯಾಗಿ ಬರದೆಯಿರುವ ಹಿನ್ನಲೆಯಲ್ಲಿ ಬೆಳೆ ಒಣಗುತ್ತಿದೆ. ರೈತರು ಆಕಾಶದತ್ತ ಚಿತ್ತ ನೆಟ್ಟಿದ್ದಾರೆ. ಆದರೆ ಮಳೆಯಾಗುತ್ತಿಲ್ಲ ಕಾರಣ ಕಾಲುವೆಗೆ ನೀರು ಆಗ್ರಹಿಸುವಂತೆ ಒತ್ತಾಯಿಸಿದರು.ಈ ವೇಳೆ ತಾಲೂಕಾಧ್ಯಕ್ಷ ದಶರಥಸಿಂಗ್ ರಜಪೂತ ಮಾತನಾಡಿ, ರೈತರು ಹೊಲದಲ್ಲಿ ಬೀಜ, ಗೊಬ್ಬರ ಹಾಕಿ ಹಣೆಗೆ ಕೈ ಹಚ್ಚಿಕೊಂಡು ಕುಳಿತುಕೊಳ್ಳುವ ಪರಿಸ್ಥಿತಿ ಬಂದಿದೆ. ಮಳೆ ಸಮಸ್ಯೆಯಿಂದ ಸರಿಯಾಗಿ ನಾಟಿಯಾಗಿದೆ ಒಣಗುತ್ತಿವೆ. ಹೀಗಾಗಿ ಕಾಲುವೆಗಳಿಗೆ ನೀರು ಹರಿಸಬೇಕು ಎಂದು…

Read More

ಸಿಂದಗಿ: ಜು.೧೦ರಂದು ತಾಲೂಕು ಆಡಳಿತ ಸೌಧದಲ್ಲಿ ಬೆಳಿಗ್ಗೆ ೧೧ ಗಂಟೆಗೆ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಸಿಂದಗಿ ತಾಲೂಕಿನ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.ಅಹವಾಲು ಸ್ವೀಕರಿಸುವ ಕಾರ್ಯಕ್ರಮದಲ್ಲಿ ತಾಲೂಕಿನ ಸಾರ್ವಜನಿಕರು ಭರ್ತಿ ಮಾಡಿ ಅರ್ಜಿ ಮತ್ತು ನೋಟರಿಗಳಿಂದ ಅಫಿಡೆವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರಕಾರಿ ಕಛೇರಿಗಳಲ್ಲಿ ಅಧಿಕೃತವಾಗಿ ಕೆಲಸಗಳನ್ನು ಮಾಡಿಕೊಡುವಲ್ಲಿ ವಿಳಂಬ, ಲಂಚದ ಬೇಡಿಕೆ ಸೇರಿದಂತೆ ಇನ್ನಿತರ ಸಮಸ್ಯೆಗಳನ್ನು ನೀಡುವ ಅಧಿಕಾರಿ ಹಾಗೂ ಸಿಬ್ಬಂದಿಗಳ ವಿರುದ್ಧ ಸಾರ್ವಜನಿಕರು ದೂರುಗಳನ್ನು ನೀಡಬಹುದು. ಪರಿಹಾರ ಕಂಡುಕೊಳ್ಳಬಹುದಾದ ದೂರುಗಳಿಗೆ ಸ್ಥಳದಲ್ಲಿಯೇ ಸಂಬಂಧಿಸಿದ ಸ್ಥಳೀಯ ಅಧಿಕಾರಿಗಳಿಂದ ಇತ್ಯರ್ಥಗೊಳಿಸಲು ಪ್ರಯತ್ನಿಸಲಾಗುವುದು. ಕಳಪೆ ಕಾಮಗಾರಿ, ಸರಕಾರಿ ಹಣದ ದುರುಪಯೋಗ ಸೇರಿದಂತೆ ಅನೇಕ ದೂರುಗಳಿಗಾಗಿ ಕಾರ್ಯಾಲಯದ ದೂರವಾಣಿ ೦೮೩೫೨-೨೫೫೩೩೩, ೨೫೭೭೮೬, ೨೯೫೦೭೪ ಸಂಖ್ಯೆಗೆ ಸಂಪರ್ಕಿಸಬೇಕು ಎಂದು ಲೋಕಾಯುಕ್ತ ಪೊಲೀಸ್ ಅಧಿಕಾರಿ ಟಿ.ಮಲ್ಲೇಶ ಪತ್ರಿಕಾ ಪ್ರಕಟಣೆಯಲ್ಲಿ ತಿಳಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ೯೩೬೪೦೬೨೫೨೮, ಉಪಾಧೀಕ್ಷ ೯೩೬೪೦೬೨೫೫೭, ಲೋಕಾಯುಕ್ತ ಪಿಎಸ್‌ಐ-೧ ೯೩೬೪೦೬೨೬೪೦, ಪಿಎಸ್‌ಐ-೨ ೯೩೬೪೦೬೨೬೩೯ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.

Read More

ಸಿಂದಗಿ: ಜು.೧೦ರಂದು ತಾಲೂಕು ಆಡಳಿತ ಸೌಧದಲ್ಲಿ ಬೆಳಿಗ್ಗೆ ೧೧ ಗಂಟೆಗೆ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಸಿಂದಗಿ ತಾಲೂಕಿನ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.ಅಹವಾಲು ಸ್ವೀಕರಿಸುವ ಕಾರ್ಯಕ್ರಮದಲ್ಲಿ ತಾಲೂಕಿನ ಸಾರ್ವಜನಿಕರು ಭರ್ತಿ ಮಾಡಿ ಅರ್ಜಿ ಮತ್ತು ನೋಟರಿಗಳಿಂದ ಅಫಿಡೆವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರಕಾರಿ ಕಛೇರಿಗಳಲ್ಲಿ ಅಧಿಕೃತವಾಗಿ ಕೆಲಸಗಳನ್ನು ಮಾಡಿಕೊಡುವಲ್ಲಿ ವಿಳಂಬ, ಲಂಚದ ಬೇಡಿಕೆ ಸೇರಿದಂತೆ ಇನ್ನಿತರ ಸಮಸ್ಯೆಗಳನ್ನು ನೀಡುವ ಅಧಿಕಾರಿ ಹಾಗೂ ಸಿಬ್ಬಂದಿಗಳ ವಿರುದ್ಧ ಸಾರ್ವಜನಿಕರು ದೂರುಗಳನ್ನು ನೀಡಬಹುದು. ಪರಿಹಾರ ಕಂಡುಕೊಳ್ಳಬಹುದಾದ ದೂರುಗಳಿಗೆ ಸ್ಥಳದಲ್ಲಿಯೇ ಸಂಬಂಧಿಸಿದ ಸ್ಥಳೀಯ ಅಧಿಕಾರಿಗಳಿಂದ ಇತ್ಯರ್ಥಗೊಳಿಸಲು ಪ್ರಯತ್ನಿಸಲಾಗುವುದು. ಕಳಪೆ ಕಾಮಗಾರಿ, ಸರಕಾರಿ ಹಣದ ದುರುಪಯೋಗ ಸೇರಿದಂತೆ ಅನೇಕ ದೂರುಗಳಿಗಾಗಿ ಕಾರ್ಯಾಲಯದ ದೂರವಾಣಿ ೦೮೩೫೨-೨೫೫೩೩೩, ೨೫೭೭೮೬, ೨೯೫೦೭೪ ಸಂಖ್ಯೆಗೆ ಸಂಪರ್ಕಿಸಬೇಕು ಎಂದು ಲೋಕಾಯುಕ್ತ ಪೊಲೀಸ್ ಅಧಿಕಾರಿ ಟಿ.ಮಲ್ಲೇಶ ಪತ್ರಿಕಾ ಪ್ರಕಟಣೆಯಲ್ಲಿ ತಿಳಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ೯೩೬೪೦೬೨೫೨೮, ಉಪಾಧೀಕ್ಷ ೯೩೬೪೦೬೨೫೫೭, ಲೋಕಾಯುಕ್ತ ಪಿಎಸ್‌ಐ-೧ ೯೩೬೪೦೬೨೬೪೦, ಪಿಎಸ್‌ಐ-೨ ೯೩೬೪೦೬೨೬೩೯ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.

Read More

ವಿಜಯಪುರ: ಜಲಮೂಲಗಳಾದ ನದಿ, ಕೆರೆ, ಕಾಲುವೆ ಮತ್ತು ಭಾವಿಗಳು ಮಾಲಿನ್ಯಕ್ಕೊಳಗಾಗದಂತೆ ಸಂರಕ್ಷಿಸುವ ಉದ್ದೇಶದಿಂದ ಪರಿಸರ ಸ್ನೇಹಿ ಮೂರ್ತಿ ಪ್ರತಿಷ್ಠಾಪನೆಯೊಂದಿಗೆ ಔಷದೀಯ ಗುಣವುಳ್ಳ ಸಸಿಗಳನ್ನು ಬೆಳೆಸುವ ಮೂಲಕ ಪರಿಸರ ಸಂರಕ್ಷಣೆ ಮುಂದಾಗುವಂತೆ ಜನರಲ್ಲಿ ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚಿಸಿದ್ದಾರೆ.ಜಿಲ್ಲೆಯಾದ್ಯಂತ ಪರಿಸರ ಸ್ನೇಹಿ ಗಣೇಶ ವಿಗ್ರಹ ಪ್ರತಿಷ್ಠಾಪನೆ ಕುರಿತು ಇತ್ತೀಚೆಗೆ ನಗರ ಸ್ಥಳೀಯ ಸಂಸ್ಥೆಗಳ ಆಯುಕ್ತರು, ಪರಿಸರ ಅಧಿಕಾರಿಗಳು, ಕೆ.ಎಸ್.ಪಿ.ಎಸಿ.ಬಿ. ವಿಜಯಪುರ ಹಾಗೂ ಮುಖ್ಯಾಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಪರಿಸರ ಸಂರಕ್ಷಣೆ ಹಾಗೂ ನೀರಿನ ಸಂರಕ್ಷಣೆಗಾಗಿ ಭಾರಲೋಹ ಮಿಶ್ರಿತ ರಾಸಾಯನಿಕಯುಕ್ತ ಬಣ್ಣದಿಂದ ಅಲಂಕೃತಗೊಂಡಂತಹ ಯಾವುದೇ ರೀತಿಯ ಪ್ಲಾಸ್ಟರ್ ಆಫ್ ಪ್ಯಾರಿಸ್‌ನಿಂದ ತಯಾರಿಸಿದ ವಿಗ್ರಹಗಳ ಉತ್ಪಾದನೆ, ಮಾರಾಟ ಹಾಗೂ ನೀರಿನ ಮೂಲಗಳಲ್ಲಿ ವಿಸರ್ಜನೆ ನಿಷೇಧಿಸಲಾಗಿದ್ದು, ಇಂತಹ ವಿಗ್ರಹಗಳ ಮಾರಾಟ, ಉತ್ಪಾದನೆಗೆ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪೊಲೀಸ್ ಇಲಾಖೆ ಸಹಯೋಗದಲ್ಲಿ ನಿಯಂತ್ರಣ ಮಾಡಬೇಕು. ವಿವಿಧ ಮಾಧ್ಯಮಗಳ ಮೂಲಕ ಈ ಕುರಿತು ಸಾರ್ವಜನಿಕರಲ್ಲಿ ತಿಳುವಳಿಕೆ ಜಾಗೃತಿ ಮೂಡಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚನೆ…

Read More

ವಿಜಯಪುರ: ರಾಜ್ಯ ಸರ್ಕಾರದ ಕ್ರೀಡಾ ವಿದ್ಯಾರ್ಥಿವೇತನ ಯೋಜನೆಯಡಿ ಪ್ರತಿಭಾವಂತ ಕ್ರೀಡಾಪುಟಗಳನ್ನು ಪ್ರೋತ್ಸಾಹಿಸುವ ಮಾಧ್ಯಮಿಕ-ಪ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟುಗಳಿಗೆ ವಾರ್ಷಿಕ ೧೦ ಸಾವಿರ ರೂ. ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿವೇತನ ಪಡೆಯಲು ಅರ್ಹರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಅರ್ಹ ಕ್ರೀಡಾ ಪಟುಗಳು ಅಧಿಕೃತ ಜಾಲತಾಣ https://sevasindhuservices.karnataka.gov.in ಮೂಲಕ ಆನ್‌ಲೈನ್‌ನಲ್ಲಿ ದಿನಾಂಕ : ೨೦-೦೭-೨೦೨೪ರೊಳಗೆ ಅರ್ಜಿ ಸಲ್ಲಿಸಬೇಕು. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣ ವಿಜಯಪುರ ದೂ: ೦೮೩೫೨-೨೫೧೦೮೫, ಮೊ: ೯೪೮೦೮೮೬೫೫೫ ಸಂಖ್ಯೆಗೆ ಸಂಪರ್ಕಿಸುವಂತೆ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More