Subscribe to Updates
Get the latest creative news from FooBar about art, design and business.
Author: editor.udayarashmi@gmail.com
Udayarashmi kannada daily newspaper
ಢವಳಗಿ: ಸಮೀಪದ ಬಸರಕೋಡ ಗ್ರಾಮದಲ್ಲಿ ಶ್ರೀ ಪವಾಡ ಬಸವೇಶ್ವರರ ಜಾತ್ರಾ ನಿಮಿತ್ತವಾಗಿ ಮಂಗಳವಾರದಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ ವಿಜಯಪುರ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಢವಳಗಿ ಹಾಗೂ ಶ್ರೀ ಪವಾಡ ಬಸವೇಶ್ವರರ ದೇವಸ್ಥಾನದ ಕಮೀಟಿ ಬಸರಕೋಡ ಅವರ ಸಹಯೋಗದಲ್ಲಿ ಹಮ್ಮಿಕೊಂಡ ಬೃಹತ್ ರಕ್ತದಾನ ಶಿಬಿರದಲ್ಲಿ ಒಟ್ಟು 47 ಜನರು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿದರು.ಶ್ರೀ ಪವಾಡ ಬಸವೇಶ್ವರ ಸಂಸ್ಥೆಯ ಅಧ್ಯಕ್ಷ ಕೆ ವಾಯ್ ಬಿರಾದಾರ, ಪ್ರಧಾನ ಕಾರ್ಯದರ್ಶಿ ಸಿಂದುಬಲ್ಲಾಳರಾವ್ ನಾಡಗೌಡ ಧಣಿಗಳು, ಜಾತ್ರಾ ಕಮೀಟಿ ಅಧ್ಯಕ್ಷ ಶ್ರೀಶೈಲ ಸೂಳಿಭಾವಿ, ಬಿ ಎಸ್ ಬೈಲಗುಂಡ್,ಎಸ್ ವಾಯ್ ಸೂಳಿಭಾವಿ, ಶ್ರೀಶೈಲ ಮೇಟಿ, ಹಾಗೂ ಆಶಾ ಕಾರ್ಯಕರ್ತೆಯರು, ಮತ್ತು ಯುವಕರು ಪಾಲ್ಗೊಂಡಿದ್ದರು.
ಬಿಜೆಪಿ ಮಹಿಳಾ ಮೊರ್ಚಾ ಜಿಲ್ಲಾ ನೂತನ ಪದಾಧಿಕಾರಿಗಳ ಪದಗ್ರಹಣ ವಿಜಯಪುರ: ದೇಶದ ರಕ್ಷಣೆ ಹಾಗೂ ಅಭಿವೃದ್ಧಿಯ ಜೊತೆಗೆ ದೇಶದಲ್ಲಿ ಮಹಿಳೆಯರ ರಕ್ಷಣೆ ಹಾಗೂ ಸಬಲೀಕರಣಕ್ಕಾಗಿ ಬಿಜೆಪಿ ಪಕ್ಷ ಅಧಿಕಾರವಕಾಶ ಸಿಕ್ಕಾಗಲೆಲ್ಲಾ ಪ್ರಥಮಾದ್ಯತೆ ನೀಡಿ ಹಲವಾರು ಮಹಿಳಾಪರ ಯೋಜನೆಗಳನ್ನು ಅನುಷ್ಠಾನಕ್ಕೆ ತಂದು ಮಹಿಳಾ ಸಶಕ್ತಿಕರಣಗೊಳಿಸಲು ಶ್ರಮಿಸುತ್ತಿದೆ ಎಂದು ಬಿಜೆಪಿ ಮಹಿಳಾ ಮೊರ್ಚಾ ಜಿಲ್ಲಾಧ್ಯಕ್ಷೆ ಸಪ್ನಾ ಕಣಮುಚನಾಳ ಹೇಳಿದರು.ನಗರದ ಬಿಜೆಪಿ ಚುನಾವಣಾ ಕಾರ್ಯಾಲಯದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಬಿಜೆಪಿ ಮಹಿಳಾ ಮೊರ್ಚಾದ ಜಿಲ್ಲಾ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಅವರು ಮಾತನಾಡಿದರು.ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಬಿಜೆಪಿ ಸರಕಾರವು ಮಹಿಳಾ ಸಬಲೀಕರಣಕ್ಕೆ ಕಳೆದ 10 ವರ್ಷಗಳಲ್ಲಿ ಗರಿಷ್ಠ ಆದ್ಯತೆ ನೀಡಿದೆ. ಕಳೆದ 10 ವರ್ಷಗಳಲ್ಲಿ 51.6 ಕೋಟಿ ಜನ್ ಧನ್ ಖಾತೆಗಳನ್ನು ತೆರೆಯಲಾಗಿದೆ. ಇದರಲ್ಲಿ 28 ಕೋಟಿ ಮಹಿಳಾ ಖಾತೆಗಳಿವೆ. ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಶೇ 70ರಷ್ಟು ಮನೆಗಳನ್ನು ಮಹಿಳೆಯರಿಗೇ ಕೊಡಲಾಗುತ್ತಿದೆ. ಈ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲು ಮಹಿಳೆಯರ ಪಾತ್ರ ದೊಡ್ಡದಿದೆ. ಎಲ್ಲರೂ…
ಬಸವನಬಾಗೇವಾಡಿ: ಪಟ್ಟಣದ ವಿರಕ್ತಮಠದಲ್ಲಿ ವೈರಾಗ್ಯನಿಧಿ ಅಕ್ಕಮಹಾದೇವಿಯ ಜಯಂತಿಯಂಗವಾಗಿ ಮಂಗಳವಾರ ವಿವಿಧ ಅಕ್ಕನ ಬಳಗದ ಸದಸ್ಯರು ಶ್ರೀಮಠದ ಸಿದ್ದಲಿಂಗ ಸ್ವಾಮೀಜಿ ಸಾನಿಧ್ಯದಲ್ಲಿ ತೊಟ್ಟಿಲೋತ್ಸವ ನೆರವೇರಿಸಿ ಅಕ್ಕಮಹಾದೇವಿಗೆ ನಮನ ಸಲ್ಲಿಸಿದರು.ಶ್ರೀಮಠದ ಅಕ್ಕಮಹಾದೇವಿ ಅಕ್ಕನಬಳಗ, ಮುಕ್ತಾಯಕ್ಕ ಅಕ್ಕನಬಳಗ, ದಾನಮ್ಮದೇವಿ ಅಕ್ಕನಬಳಗ, ಕ್ವಾಟಿಲಕ್ಷ್ಮೀ ನಗರದ ಅಕ್ಕನಬಳಗ, ಗಂಗಾಂಬಿಕಾ ಅಕ್ಕನಬಳಗ ಸದಸ್ಯರು ಬಾಲ ಅಕ್ಕಮಹಾದೇವಿ ಮೂರ್ತಿಯನ್ನು ಸಂಪ್ರದಾಯದಂತೆ ತೊಟ್ಟಿಲಲ್ಲಿ ಹಾಕಿ ನಾಮಕರಣ ಮಾಡುವ ತೊಟ್ಟಿಲೋತ್ಸವ ನೆರವೇರಿಸಿದರು. ತೊಟ್ಟಿಲ ಕೆಳಗೆ ಶಕುಂತಲಾ ಝಳಕಿ, ಸರಸ್ವತಿ ನಾಯ್ಕೋಡಿ ಕುಳಿತುಕೊಂಡಿದ್ದರು.ಸಾನಿಧ್ಯ ವಹಿಸಿದ್ದ ಶ್ರೀಮಠದ ಸಿದ್ದಲಿಂಗ ಸ್ವಾಮೀಜಿ ಮಾತನಾಡಿ, ೧೨ ನೇ ಶತಮಾನದಲ್ಲಿ ಶರಣ ಸಂಕುಲೆಯಲ್ಲಿದ್ದ ಅಕ್ಕಮಹಾದೇವಿ ಕನ್ನಡ ಸಾಹಿತ್ಯದ ಮೊದಲ ಕವಯತ್ರಿ. ಅಕ್ಕಮಹಾದೇವಿಯು ಉಡುತಡಿಯಲ್ಲಿ ಜನಿಸಿ ಸುಖ, ಸಂಪತ್ತು ತ್ಯಜಿಸಿ ಬಸವ ಕಲ್ಯಾಣದಲ್ಲಿದ್ದ ಅನುಭವ ಮಂಟಪಕ್ಕೆ ಬಂದು ತನ್ನ ವ್ಯಕ್ತಿತ್ವ ಸಾಬೀತು ಪಡಿಸುವ ಮೂಲಕ ವೈರಾಗ್ಯ ನಿಧಿ ಎನಿಸಿಕೊಂಡಳು. ಕದಳಿವನದಲ್ಲಿ ಬಯಲಾದಳು. ಇಂತಹ ವೈರಾಗ್ಯ ನಿಧಿ ಇಡೀ ಮನುಕುಲಕ್ಕೆ ಆದರ್ಶಪ್ರಾಯವಾಗಿದ್ದಾಳೆ. ಅಕ್ಕ ರಚಿಸಿರುವ ವಚನಗಳು ವೈರಾಗ್ಯ ಮತ್ತು ಆತ್ಮಪ್ರಜ್ಞೆಗೆ ಸಾಕ್ಷಿಯಾಗಿವೆ. ಅಕ್ಕನ ಆದರ್ಶವನ್ನು…
ಬಸವನಬಾಗೇವಾಡಿ: ಪಟ್ಟಣ ಸೇರಿದಂತೆ ತಾಲೂಕಿನ ಹನುಮಾನ ದೇವಸ್ಥಾನಗಳಲ್ಲಿ ಹನುಮ ಜಯಂತಿಯಂಗವಾಗಿ ಮಂಗಳವಾರ ಬಾಲ ಹನುಮನನ್ನು ತೊಟ್ಟಿಲಲ್ಲಿ ಹಾಕಿ ತೊಟ್ಟಿಲೋತ್ಸವ ನೆರವೇರಿಸಿ ಹನುಮಾನ ದೇವರಿಗೆ ವಿಶೇಷ ಪೂಜೆ ನೆರವೇರಿಸಿ ಜನರು ಭಕ್ತಿ ಭಾವ, ಶ್ರದ್ಧೆಯಿಂದ ಹನುಮ ಜಯಂತಿ ಆಚರಿಸಿದರು.ಪಟ್ಟಣದ ಹೃದಯ ಭಾಗದಲ್ಲಿರುವ ಹನುಮಾನ ದೇವಸ್ಥಾನದಲ್ಲಿ ನಸುಕಿನ ಜಾವ ವಿಪ್ರಸಮಾಜದ ಮಹಿಳೆಯರು ಬಾಲ ಹನುಮನನ್ನು ತೊಟ್ಟಿಲಲ್ಲಿ ಹಾಕಿ ನಾಮಕರಣ ಮಾಡುವ ಸಂಪ್ರದಾಯ ನೆರವೇರಿಸಿ ಪೂಜೆ ಸಲ್ಲಿಸಿದರು. ಶ್ರೀರಾಮ, ಹನುಮಾನ ಕುರಿತಾದ ಭಜನೆಗಳನ್ನು ಹಾಡಿದರು. ಹನುಮಾನ ದೇವರಿಗೆ ವಿಶೇಷ ಪೂಜೆ ನೆರವೇರಿದ ನಂತರ ಭಕ್ತರಿಗೆ ಕೋಸಂಬರಿ, ಪಾನಕ ಪ್ರಸಾದ ವಿತರಿಸಲಾಯಿತು.ಬೆಳಗ್ಗೆ ೧೧ ಗಂಟೆಗೆ ನಿರ್ಮಾಲ್ಯ ವಿಸರ್ಜನೆ ನಂತರ ಹನುಮಾನ ದೇವರಿಗೆ ಪಂಚಾಮೃತ ಅಭಿಷೇಕ, ವಾಯುಸ್ತುತಿ ಪಠಣ, ವಿಷ್ಣು ಸಹಸ್ರನಾಮ ಪಠಣ ನೆರವೇರಿದ ನಂತರ ದೇವರಿಗೆ ವಿಶೇಷ ಅಲಂಕಾರ ಪೂಜೆಯನ್ನು ವಾದಿರಾಜ ಯರ್ಜುವೇದಿ ಅವರು ನೆರವೇರಿಸಿದ ನಂತರ ನೈವೇದ್ಯ ಅರ್ಪಿಸಿ, ಭಕ್ತರಿಗೆ ಪ್ರಸಾದ ವಿತರಿಸಲಾಯಿತು. ಸಂಜೆ ಮಂಗಳಾರತಿ, ಭಜನೆ ನಡೆದವು.ತೊಟ್ಟಿಲೋತ್ಸವದಲ್ಲಿ ರಾಮಾಚಾರಿ ಯುರ್ಜುವೇದಿ,ವಿಠ್ಠಲ ಕುಲಕರ್ಣಿ, ಅನಿಲ ದೇಶಪಾಂಡೆ,…
ಬಸವನಬಾಗೇವಾಡಿ: ಪಟ್ಟಣದ ಇಂಗಳೇಶ್ವರ ರಸ್ತೆಯಲ್ಲಿರುವ ನಾಗಾವಿ ಯಲ್ಲಮ್ಮದೇವಿ ಜಾತ್ರಾಮಹೋತ್ಸವ ಮಂಗಳವಾರ ಸಂಭ್ರಮ, ಸಡಗರದಿಂದ ಜರುಗಿತು. ಜಾತ್ರೆಯಂಗವಾಗಿ ಪಲ್ಲಕ್ಕಿ ಉತ್ಸವದ ಮೆರವಣಿಗೆಯು ಪಟ್ಟಣದ ಪ್ರಮುಖ ಬೀದಿಗಳಲ್ಲಿ ವಿವಿಧೆಡೆಗಳಿಂದ ಆಗಮಿಸಿದ್ದ ತಾಯಿಜೋಗಮ್ಮರ ಕುಣಿತ, ವಿವಿಧ ವಾದ್ಯ ಮೇಳದೊಂದಿಗೆ ಸಂಭ್ರಮದಿಂದ ಜರುಗಿತು.ನಾಗಾವಿ ಯಲ್ಲಮ್ಮ ದೇವಸ್ಥಾನದಿಂದ ಐದು ಕಳಸ ಹಾಗೂ ಪಲ್ಲಕ್ಕಿ ಉತ್ಸವವು ಪಟ್ಟಣದ ಬಸವೇಶ್ವರ ವೃತ್ತ, ಅಗಸಿ, ಮಹಾರಾಜರ ಮಠದ ಮಾರ್ಗ, ಬಸವಜನ್ಮ ಸ್ಮಾರಕ ಮಾರ್ಗ, ವಿಜಯಪುರ ಮಾರ್ಗವಾಗಿ ಪುನಃ ಬಸವೇಶ್ವರ ವೃತ್ತಕ್ಕೆ ಬಂದು ಬಸವೇಶ್ವರ ದೇವಸ್ಥಾನದ ಬಸವತೀರ್ಥ ಭಾವಿಗೆ ಆಗಮಿಸಿದ ನಂತರ ಗಂಗಾಸ್ಥಳ ಮಾಡಿಕೊಂಡ ನಂತರ ಡೊಳ್ಳು, ಚೌಡಕಿ ಸೇರಿದಂತೆ ಸುಮಂಗಲೆಯರ ಆರತಿಯೊಂದಿಗೆ ಬಸವೇಶ್ವರ ವೃತ್ತದ ಮಾರ್ಗವಾಗಿ ಇಂಗಳೇಶ್ವರ ರಸ್ತೆಯಲ್ಲಿರುವ ಯಲ್ಲಮ್ಮದೇವಿ ದೇವಸ್ಥಾನಕ್ಕೆ ಕಳಸಗಳು, ನಾಗಾವಿ ಯಲ್ಲಮ್ಮದೇವಿ ಪಲ್ಲಕ್ಕಿ ಉತ್ಸವ ತಲುಪಿತು. ಕಳಸಗಳಿಗೆ ಪೂಜೆ ನೆರವೇರಿಸಿದ ನಂತರ ದೇವಸ್ಥಾನಕ್ಕೆ ಕಳಸಗಳನ್ನು ಏರಿಸಲಾಯಿತು. ದೇವಸ್ಥಾನದಲ್ಲಿ ವಿಶೇಷ ಪೂಜೆ ಜರುಗಿತು. ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ಪಲ್ಲಕ್ಕಿ ಉತ್ಸವದಲ್ಲಿ ಬಿರುಬಿಸಿಲನ್ನು ಲೆಕ್ಕಿಸದೇ ಅಪಾರ ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದರು.ಪಲ್ಲಕ್ಕಿ…
ಮುದ್ದೇಬಿಹಾಳ: ಹನುಮಾನ ದೇವರ ಜಯಂತಿ ಅಂಗವಾಗಿ ಪಟ್ಟಣದ ಹುಡ್ಕೋ ಬಡಾವಣೆಯ ಶಿರವಾಳ ಲೇಔಟ್‌ನಲ್ಲಿರುವ ಪಶ್ಚಿಮ ದಿಕ್ಕಿಗೆ ಇರುವ ಪ್ರಸನ್ನಾಂಜನೇಯ ದೇವಸ್ಥಾನದಲ್ಲಿ ಮಂಗಳವಾರ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.ಪಟ್ಟಣದ ಹುಡ್ಕೋ ಬಡಾವಣೆಯ ಪ್ರಮುಖ ಬೀದಿಗಳಲ್ಲಿ ಭಾಜಾ ಭಜಂತ್ರಿಗಳೊಂದಿಗೆ ಕಳಶದ ಮೆರವಣಿಗೆಯನ್ನು ನಡೆಸಲಾಯಿತು. ಪಂಚಾಮೃತ ಅಭಿಷೇಕ, ಅಲಂಕಾರ, ಪೂಜೆ, ತೊಟ್ಟಿಲೋಸ್ತವ, ಕುಂಕುಮಾರ್ಷನೆ, ಎಲೆ ಪೂಜೆ, ಧ್ವಜಾರೋಹಣ ಮತ್ತು ಕಳಸಾರೋಹಣ, ಮಹಾಪ್ರಸಾದ ಮತ್ತು ಸತ್ಯನಾರಾಯಣ ಪೂಜೆ ಕಾರ್ಯಕ್ರಮಗಳು ಅದ್ದೂರಿಯಾಗಿ ನೂರಾರು ಭಕ್ತರ ಮಧ್ಯೆ ಜರುಗಿದವು.ಪ್ರಮುಖರಾದ ಎನ್.ಎಸ್.ಮಠ, ವಿ.ಎಚ್.ಶಿರವಾಳ. ಮಾರುತಿ ನಲವಡೆ, ಎಂ.ಎಚ್.ಬುಡ್ಡೋಡಿ, ಎ.ಎಸ್.ಹುಬ್ಬಳ್ಳಿ, ಎ.ಎಸ್.ಹಿರೇಮಠ, ದೆವೇಂದ್ರ ಪೂಜಾರಿ, ಬಿ.ಎಚ್.ಪೂಜಾರಿ, ಸಿ.ಪಿ.ಸಜ್ಜನ, ಟಿ.ಡಿ.ಲಮಾಣಿ ಸೇರಿದಂತೆ ಹಲವರು ಶ್ರಮಿಸಿ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಿದರು.
ಮುದ್ದೇಬಿಹಾಳ: ನೇಹಾ ಹಿರೇಮಠ ಕೊಲೆ ಪ್ರಕರಣ ಖಂಡಿಸಿ ಪಟ್ಟಣದಲ್ಲಿ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಎಲ್ಲ ಸಮುದಾಯಗಳ ವ್ಯಾಪಾರಸ್ಥರು ಸ್ವಯಂ ಪ್ರೇರಿತರಾಗಿ ಬಂದ್ ಮಾಡುವ ಮೂಲಕ ಪ್ರತಿಭಟಿಸಿದರು.ವಿವಿಧ ಹಿಂದೂಪರ ಸಂಘಟನೆಗಳು, ಬಜಾರ್ ವ್ಯಾಪಾರಸ್ಥರ ಸಂಘದ ವತಿಯಿಂದ ಸ್ವಯಂಪ್ರೇರಿತರಾಗಿ ಬಂದ್ ಮಾಡುವದಾಗಿ ನಿರ್ಧರಿಸಿದ್ದರು. ಬೆಳಿಗ್ಗೆಯಿಂದ ಮಾಧ್ಯಾಹ್ನದವರೆಗೆ ತರಕಾರಿ, ಹಣ್ಣು, ಔಷದ ಅಂಗಡಿಗಳನ್ನು ಹೊರತುಪಡಿಸಿ ಎಲ್ಲ ವ್ಯಾಪಾರಸ್ಥರು ಬಂದ್ ಗೆ ಬೆಂಬಲ ಸೂಚಿಸಿದರು.
ಸಿಂದಗಿ: ಈ ಲೋಕಸಭಾ ಚುನಾವಣೆಯು ಕಾಂಗ್ರೆಸ್ ಹಾಗೂ ಬಿಜೆಪಿಯ ಮದ್ಯ ನಡೆಯುತ್ತಿರುವ ಚುನಾವಣೆಯಲ್ಲ. ಇದು ಧರ್ಮ ಮತ್ತು ಅಧರ್ಮದ ಮದ್ಯ ನಡೆಯುತ್ತಿರುವ ಚುನಾವಣೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ಮಂಗಳವಾರ ಸಂವಿಧಾನ ವಿರೋಧಿ, ಕೋಮುವಾದಿ ಪಕ್ಷವನ್ನು ಬೆಂಬಲಿಸಿ ಜನಪರ ಚಿಂತನೆ ಹೊಂದಿದ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಎಂಬ ಕರಪತ್ರವನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ಬಿಜೆಪಿ ಪಕ್ಷವು ಅಧರ್ಮವನ್ನು ಸಾರುತ್ತದೆ. ಕಾಂಗ್ರೆಸ್ ಪಕ್ಷವು ಧರ್ಮವನ್ನು ಜನರಲ್ಲಿ ಬಿತ್ತುತಿದೆ. ಸಂವಿಧಾನ ಪ್ರಜಾಪ್ರಭುತ್ವ ಡಾ.ಬಿ.ಆರ್. ಅಂಬೇಡ್ಕರ್ ಅವರ ಚಿಂತನೆಗಳ ಮೇಲೆ ಕಾಂಗ್ರೆಸ್ ಪಕ್ಷವು ನಿಂತಿದೆ. ಪ್ರಜಾಪ್ರಭುತ್ವದ ಮೌಲ್ಯವನ್ನು ಎತ್ತಿ ಹಿಡಿಯಲು, ಸಂವಿಧಾನದ ಆಶಯ ಜಾರಿ ಮಾಡಲು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ನಮ್ಮ ಪಕ್ಷದ ಅಭ್ಯರ್ಥಿ ರಾಜು ಆಲಗೂರ ಅವರಿಗೆ ತಮ್ಮ ಮತ ಚಲಾಯಿಸಿ ಗೆಲ್ಲಿಸಿ ತರಬೇಕೆಂದು ಮನವಿ ಮಾಡಿದ್ದಾರೆ.ಈ ಸಂದರ್ಭದಲ್ಲಿ ದಸಂಸ ಜಿಲ್ಲಾ ಸಂಚಾಲಕ ವೈ.ಸಿ.ಮಯೂರ್ ಮಾತನಾಡಿ, ಕರ್ನಾಟಕದ ಸಿಎಂ…
ಮುಗಿಲುಮುಟ್ಟಿದ ಹರ್ಷೋದ್ಗಾರ | ಭಕ್ತರಿಂದ ದೀಡ ನಮಸ್ಕಾರ – ಮಲ್ಲು ಎನ್. ಕೆಂಭಾವಿಬ್ರಹ್ಮದೇವನಮಡು: ಮುಗಿಲು ಮುಟ್ಟಿದ ಹರ್ಷೋದ್ಗಾರ, ಎಲ್ಲಿ ನೋಡಿದರೂ ಜನಸಾಗರ, ಗೋಧೂಳಿ ಮುಹೂರ್ತದಲ್ಲಿ ವೈಭವದ ರಥೋತ್ಸವ, ಹಣ್ಣು ಸಮರ್ಪಿಸಿ ಧನ್ಯತೆ ಮೆರೆದ ಭಕ್ತರು..ಸಿಂದಗಿ ತಾಲೂಕಿನ ಸುಕ್ಷೇತ್ರ ಗೋಲಗೇರಿಯ ಗೊಲ್ಲಾಳೇಶ್ವರದಲ್ಲಿ ಮಂಗಳವಾರ ಸಂಜೆ ಕಂಡುಬಂದ ದೃಶ್ಯಗಳಿವು.ಚೈತ್ರ ಪೌರ್ಣಿಮೆ ನಿಮಿತ್ತ ಪ್ರತಿ ವರ್ಷದಂತೆ ಅದ್ಧೂರಿ ರಥೋತ್ಸವ ನಡೆಯಿತು. ಲಕ್ಷಾಂತರ ಭಕ್ತರು ಬೆಳಗ್ಗೆಯಿಂದ ಕ್ಷೇತ್ರಕ್ಕೆ ಆಗಮಿಸಿ ದರ್ಶನ ಪಡೆದರು.ಸುತ್ತಲಿನ ೨೦ಕ್ಕೂ ಹೆಚ್ಚು ಹಳ್ಳಿಗಳ ಭಕ್ತರು ಪಾದಯಾತ್ರೆ ಮೂಲಕ ನಸುಕಿನಲ್ಲೇ ಕ್ಷೇತ್ರಕ್ಕೆ ಆಗಮಿಸಿದರು. ಸೂರ್ಯೋದಯ ಸಂದರ್ಭದಲ್ಲಿ ಸಾವಿರಾರು ಭಕ್ತರು ದೀಡ ನಮಸ್ಕಾರ ಹಾಕುವ ಮೂಲಕ ಹರಕೆ ತೀರಿಸಿದರು. ಧರ್ಮದರ್ಶಿ ವರಪುತ್ರ ಹೊಳೆಪ್ಪ ಶರಣರು ದೇವರಮನಿ ಹಾಗೂ ಸಿದ್ದರಾಮ ದೇವರಮನಿ ಅವರ ನೇತೃತ್ವದಲ್ಲಿ ಬೆಳಗ್ಗೆ ರುದ್ರಾಭಿಷೇಕ ಹಾಗೂ ವಿಶೇಷ ಅಲಂಕಾರ ಪೂಜೆ ನೆರವೇರಿಸಲಾಯಿತು. ಭಕ್ತರು ಸಂಜೆವರೆಗೆ ಸರದಿಯಲ್ಲಿ ನಿಂತು ಗೊಲ್ಲಾಳೇಶ್ವರನ ದರ್ಶನ ಪಡೆದರು. ಸಂಜೆ ಪಂಚಲೋಹದ ಕಲಶಾರೋಹಣ, ಭೂಚಕ್ರ ಕೊಡೆ ಏರಿಸಿದ ನಂತರ ಸಕಲ ವಾದ್ಯ ವೈಭವಗಳೊಂದಿಗೆ…
