Subscribe to Updates
Get the latest creative news from FooBar about art, design and business.
Author: editor.udayarashmi@gmail.com
-ಮಲ್ಲಿಕಾಜು೯ನ ಎನ್.ಕೆಂಭಾವಿಬ್ರಹ್ಮದೇವನಮಡು ಬ್ರಹ್ಮದೇವನಮಡು: ಲಕ್ಷಾಂತರ ಭಕ್ತರ ಶ್ರದ್ಧಾ ಕೇಂದ್ರ, ಶ್ರೀಶೈಲ ಗಿರಿಯ ಪ್ರತಿರೂಪ, ಇಷ್ಟಾರ್ಥ ಕರುಣಿಸುವ ಪುಣ್ಯತಾಣ ಎನಿಸಿದ ಗೋಲಗೇರಿ ಕ್ಷೇತ್ರದಲ್ಲಿ ಅದ್ಧೂರಿ ಉತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಬಿರು ಬಿಸಿಲನ್ನೂ ಲೆಕ್ಕಿಸದೆ ಇಲ್ಲಿನ ಗೊಲ್ಲಾಳೇಶ್ವರ ದೇವಸ್ಥಾನಕ್ಕೆ ಬರುವ ಭಕ್ತರ ಸಂಖ್ಯೆ ದಿನೇ ದಿನೆ ಹೆಚ್ಚುತ್ತಿದೆ.ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಪುಟ್ಟ ಗ್ರಾಮ ಗೋಲಗೇರಿ. ಅಂದಾಜು ೫ ಸಾವಿರ ಜನಸಂಖ್ಯೆ ಹೊಂದಿರುವ ಗ್ರಾಮ ನೂರಾರು ವರ್ಷಗಳ ಹಿಂದೆ ಕುರಿ ದಡ್ಡಿಯಾಗಿತ್ತು. ಪಕ್ಕದ ಢವಳಾರ ಗ್ರಾಮದ ಬಲ್ಲುಗ-ದುಗ್ಗಳಾದೇವಿ ದಂಪತಿಗೆ ೧೦ನೇ ಶತಮಾನದ ಕೊನೆಯಲ್ಲಿ ಗೊಲ್ಲಾಳೇಶ ಎಂಬ ಪುತ್ರ ಜನಿಸುತ್ತಾನೆ. ಮನೆತನದ ಕುರಿ ಕಾಯುವ ವೃತ್ತಿಯನ್ನೇ ಮುಂದುವರಿಸಿದ ಗೊಲ್ಲಾಳೇಶ ಜನ್ಮಾಂತರದ ಸುಕೃತದಿಂದ ನಿರಂತರ ಶಿವನ ಧ್ಯಾನದಲ್ಲೇ ತೊಡಗುತ್ತಾನೆ. ಒಮ್ಮೆ ನಾಮಸ್ಮರಣೆಯಲ್ಲಿ ಮೈಮರೆತ ಸಂದರ್ಭದಲ್ಲೇ ಪಾದಯಾತ್ರೆ ಮೂಲಕ ಶ್ರೀಶೈಲಕ್ಕೆ ಹೊರಟಿದ್ದ ನಂದಯ್ಯಸ್ವಾಮಿ ಎಂಬುವರ ಭೇಟಿಯಾಗುತ್ತದೆ. ಅವರಿಗೆ ಗೊಲ್ಲಾಳೇಶ ಒಂದು ನಾಣ್ಯ ನೀಡಿ ಶ್ರೀಶೈಲದಿಂದ ಲಿಂಗ ತೆಗೆದುಕೊಂಡು ಬರಲು ಹೇಳುತ್ತಾನೆ.ಆದರೆ ಲಿಂಗ ತರುವುದನ್ನು ಮರೆತ ನಂದಯ್ಯಸ್ವಾಮಿ, ಹತ್ತಿರದಲ್ಲೇ ಇದ್ದ…
ಇಂಡಿ: ಇತೀಚೆಗೆ ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ ಕೊಲೆ ಪ್ರಕರಣದ ವಿಚಾರವಾಗಿ ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಗೃಹ ಮಂತ್ರಿಗಳು ಕೀಳು ಹೇಳಿಕೆ ನೀಡಿರುವುದು ಸರಿಯಲ್ಲ. ಇಂತಹ ಹೇಳಿಕೆಗಳನ್ನು ಗಮನಿಸಿದರೆ ರಾಜ್ಯ ಸರ್ಕಾರ ಹಿಂದೂ ವಿರೋಧಿ ಸರ್ಕಾರ ಎನ್ನುವುದರಲ್ಲಿ ಎರಡು ಮಾತಿಲ್ಲ ಎಂದು ಬಂಥನಾಳ ಹಾಗೂ ಲಚ್ಚಾಣ ಪೀಠದ ಡಾ. ವೃಷಭಲಿಂಗ ಮಹಾಶಿವಯೋಗಿಗಳು ಹೇಳಿದರು.ಸೋಮವಾರ ತಾಲೂಕಿನ ಇಂಗಳಗಿ ಗ್ರಾಮದ ಶ್ರೀ ಅಲ್ಲಮಪ್ರಭು ಹಾಗೂ ಹನುಮ ಜಯಂತಿ ಮತ್ತು ಗೈಬೂಸಾಬ್ ಜಾತ್ರಾ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಧರ್ಮಸಭೆಯ ಪಾವನ ಸಾನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.ಧರ್ಮದಲ್ಲಿ ರಾಜಕೀಯವಿರಬಾರದು ಆದರೆ ರಾಜಕಾರಣದಲ್ಲಿ ಧರ್ಮವಿರಬೇಕು. ಅದನ್ನು ರಾಜಕಾರಣಿಗಳು ಅರ್ಥ ಮಾಡಿಕೊಳ್ಳಬೇಕಾಗಿದೆ ಎಂದರು.ಇಂಗಳಗಿ ಗ್ರಾಮಸ್ಥರು ಸೇರಿಕೊಂಡು ಸಾಮೂಹಿಕ ವಿವಾಹದ ಜೊತೆಗೆ ಜಾತಿ, ಮತ, ಪಂಥ ಎನ್ನದೆ ಹಿಂದೂ ಮುಸ್ಲಿಂ ಎರಡು ದೇವತೆಗಳ ಜಾತ್ರಾ ಮಹೋತ್ಸವವನ್ನು ಅದ್ದೂರಿಯಾಗಿ ಎಲ್ಲರೂ ಸೇರಿ ಆಚರಿಸುತ್ತಿರುವುದು ಸಂತಸ ತಂದಿದೆ. ಇಂಡಿ ತಾಲೂಕಿನಲ್ಲಿ ಇಂಗಳಗಿ ಗ್ರಾಮ ಆದರ್ಶ ಗ್ರಾಮವಾಗಿದೆ ಎಂದರು.ನೂತನವಾಗಿ ನವದಾಂಪತ್ಯಕ್ಕೆ ಕಾಲಿಟ್ಟ ಜೋಡಿಗಳು. ಉತ್ತಮವಾಗಿ…
ವಿಜಯಪುರ: ವಿಜಯಪುರ ಲೋಕಸಭಾ ಚುನಾವಣೆ-೨೦೨೪ರ ವೆಚ್ಚ ವೀಕ್ಷಕ ಐ.ಆರ್.ಎಸ್‌ನ ಅಧಿಕಾರಿ ಅನುಪ ಕುಮಾರ ರವರು ಸೋಮವಾರದಂದು ಮುದ್ದೇಬಿಹಾಳ ತಾಲೂಕಿನ ತಂಗಡಗಿ ಚೆಕ್ ಪೋಸ್ಟ್ ಗೆ ಭೇಟಿ ನೀಡಿ ಪರಿಶೀಲಿಸಿದರು.
ವಿಜಯಪುರ: ಭಾರತೀಯ ಚುನಾವಣೆ ಆಯೋಗ ಸೂಚಿಸಿರುವ ನಿರ್ದೇಶನಗಳನ್ನು ಚಾಚು ತಪ್ಪದೇ ನಿರ್ವಹಿಸಿ ೨೦೨೪ ರ ಲೋಕಸಭೆ ಚುನಾವಣೆ ಪ್ರಕ್ರಿಯೆಯನ್ನು ಯಶಸ್ವಿಗೊಳಿಸಬೇಕು ಎಂದು ವಿಜಯಪುರ ಮೀಸಲು ಮತಕ್ಷೇತ್ರದ ಚುನಾವಣಾ ವೀಕ್ಷಕರಾದ ಡಾ.ರತನ್ ಕನ್ವರ್ ಎಚ್. ಗಂಧವಿಚರಣ ಹೇಳಿದರು.ಅವರು ಶನಿವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಚುನಾವಣಾ ನೋಡಲ್ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಕಳೆದ ಚುನಾವಣೆಯಲ್ಲಿ ಕಡಿಮೆ ಮತದಾನ ಆಗಿರುವ ಪ್ರದೇಶಗಳಲ್ಲಿ ಮತದಾನ ಜಾಗೃತಿ ಕಾರ್ಯಕ್ರಮಗಳನ್ನು ಹೆಚ್ಚು ಹೆಚ್ಚು ಆಯೋಜಿಸಬೇಕು. ಜಿಲ್ಲೆಯ ಮತದಾರ ಮುಕ್ತವಾಗಿ ಮತದಾನ ಮಾಡಲು ಶಾಂತಿಯುತವಾದ, ಸುವ್ಯವಸ್ಥಿತವಾದ ವಾತಾವರಣ ರೂಪಿಸಬೇಕು. ಮತಗಟ್ಟೆಗಳಲ್ಲಿ ಯಾವುದೇ ಗೊಂದಲ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಸಮಸ್ಯೆಗಳು ಕಂಡು ಬಂದರೆ ಮೊದಲ ಆದ್ಯತೆಯ ಮೇರೆಗೆ ನಿವಾರಿಸಬೇಕು. ಮತಗಟ್ಟೆಗಳಲ್ಲಿ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಕಲ್ಪಿಸಬೇಕು ಎಂದರು.ಪೊಲೀಸ್ ವಿಕ್ಷಣಾಧಿಕಾರಿ ಎಂ. ಅರ್ಶಿ ಅವರು ಮಾತನಾಡಿ, ಚುನಾವಣೆಗೆ ಕಾರ್ಯಕ್ಕೆ ನಿಯೋಜನೆಗೊಂಡ ಎಲ್ಲಾ ಅಧಿಕಾರಿಗಳು ಕಾರ್ಯಕ್ಷಮತೆಯಿಂದ ಕರ್ತವ್ಯ ನಿರ್ವಹಿಸಬೇಕು. ಮತದಾನಕ್ಕೆ ಪ್ರಜೆಗಳ ಸಹಕಾರ ಅತಿ ಅವಶ್ಯಕವಿದ್ದು, ಅಧಿಕಾರಿಗಳು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಲ್ಲಿ ಕ್ರಮವಹಿಸಬೇಕು…
ವಿಜಯಪುರ: ಅಂತಿಮ ಕಣದಲ್ಲಿ ೮ ಅಭ್ಯರ್ಥಿಗಳು ವಿಜಯಪುರ: ಲೋಕಸಭಾ ಚುನಾವಣೆಗೆ ಸಲ್ಲಿಕೆಯಾಗಿದ್ದ ನಾಮಪತ್ರಗಳನ್ನು ಹಿಂಪಡೆಯುವ ಅವಧಿ ಸೋಮವಾರ ಮುಕ್ತಾಯವಾಗಿದ್ದು, ಒಟ್ಟಾರೆ ೪ ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ವಾಪಸ್ ತೆಗೆದುಕೊಂಡಿದ್ದಾರೆ. ಅಂತಿಮ ಕಣದಲ್ಲಿ ೮ ಅಭ್ಯರ್ಥಿಗಳು ಇದ್ದಾರೆ.ಪಕ್ಷೇತರ ಅಭ್ಯರ್ಥಿಗಳಾದ ಸಂಗಪ್ಪಾ ಹುಣಶಿಕಟ್ಟಿ, ಹಾಗೂ ಬಾಬುರಾಜೇಂದ್ರ ನಾಯಿಕ, ಭಾರತೀಯ ಜವಾನ್ ಕಿಸಾನ್ ಪಕ್ಷದ ಕುಲಪ್ಪಾ ಬಿ ಚವ್ಹಾಣ, ಬಿಎಸ್‌ಪಿ ಪಕ್ಷದ ಮಲ್ಲು ಹಾದಿಮನಿ ತಮ್ಮ ಉಮೇದುವಾರಿಕೆಯನ್ನು ಏ.೨೨(ಸೋಮವಾರ) ರಂದು ಹಿಂಪಡೆದಿದ್ದಾರೆ.ಭಾರತೀಯ ಜನತಾ ಪಕ್ಷದ ರಮೇಶ ಜಿಗಜಿಣಗಿ, ಕಾಂಗ್ರೇಸ್‌ನ ರಾಜು ಆಲಗೂರ, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಗಣಪತಿ ಲಾಲಸಿಂಗ ರಾಠೋಡ, ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಎ) ಪಕ್ಷದ ಜಿತೇಂದ್ರ ಅಶೋಕ ಕಾಂಬ್ಲೆ, ಸೋಶಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯೂನಿಸ್ಟ್) ಪಕ್ಷದ ನಾಗಜ್ಯೋತಿ. ಬಿ. ಎನ್, ರಾಷ್ಟ್ರೀಯ ಸಮಾಜ ಪಕ್ಷದ ರಾಜಕುಮಾರ್ ಅಪ್ಪಣಾ ಹೋನ್ನಕಟ್ಟಿ, ನಕಿ ಭಾರತೀಯ ಏಕತಾ ಪಕ್ಷದ ರಾಮಜಿ ಹರಿಜನ್, ಪಕ್ಷೇತರ ಅಭ್ಯರ್ಥಿ ತಾರಾಬಾಯಿ ಬೋವಿ ಅಂತಿಮ ಕಣದಲ್ಲಿರುವ ಅಭ್ಯರ್ಥಿಗಳಾಗಿದ್ದಾರೆ.
ದೇವರಹಿಪ್ಪರಗಿ: ವಿದ್ಯುತ್ ಅವಘಡದಿಂದ ಒಣಮೇವಿನ ಬಣವೆಗೆ ಬೆಂಕಿ ತಗುಲಿ ಹಾನಿಗೊಳಗಾದ ಘಟನೆ ಮುಳಸಾವಳಗಿ ಗ್ರಾಮದಲ್ಲಿ ಜರುಗಿದೆ.ತಾಲ್ಲೂಕಿನ ಮುಳಸಾವಳಗಿ ಗ್ರಾಮದ ರೈತ ಬಸಣ್ಣ ಬಿರಾದಾರ ಅವರ ಜಮೀನಿನಲ್ಲಿ ಶನಿವಾರ ಈ ಘಟನೆ ಸಂಭವಿಸಿದ್ದು, ಬೇಸಿಗೆಯಲ್ಲಿ ಜಾನುವಾರಗಳಿಗೆ ಒಣಮೇವು ಕೊರತೆಯಾಗಬಾರದು ಎಂಬ ಕಾರಣಕ್ಕೆ ೩೦ ಸಾವಿರ ನೀಡಿ ೩ ಟ್ರ್ಯಾಕ್ಟರ್ ಒಣಮೇವು ಖರೀದಿಸಲಾಗಿತ್ತು. ಇದನ್ನು ಜಮೀನಿನಲ್ಲಿ ಸಂಗ್ರಹಿಸಿ ಇಡಲಾಗಿತ್ತು. ಆದರೆ ಶನಿವಾರದಂದು ಜೋರಾದ ಗಾಳಿ ಬೀಸಿದ ಪರಿಣಾಮ ಬಣವೆಯ ಮೇಲೆ ಹಾದು ಹೋದ ವಿದ್ಯುತ್ ತಂತಿಗಳು ಪರಸ್ಪರ ಕೂಡಿ ಬೆಂಕಿ ಹುಟ್ಟಿ ಬಣವೆಗೆ ತಗುಲಿದ್ದು , ಘಟನೆಗೆ ಕಾರಣವಾಗಿದೆ.
ದೇವರಹಿಪ್ಪರಗಿ: ಮದುವೆ ಮಂಟಪದಲ್ಲಿ ಮತದಾನ ಜಾಗೃತಿ ಮಾಡುವುದರ ಮೂಲಕ ತಾಲ್ಲೂಕು ಪಂಚಾಯಿತಿ ಸಿಬ್ಬಂದಿ ಸಾರ್ವಜನಿಕರಲ್ಲಿ ಮತದಾನದ ಅರಿವು ಮೂಡಿಸಿದರು.ತಾಲ್ಲೂಕಿನ ಕೊಂಡಗೂಳಿ ಗ್ರಾಮದಲ್ಲಿ ಭಾನುವಾರ ಜರುಗಿದ ಪಂಚಾಯಿತಿ ಸಿಬ್ಬಂದಿ ಸೋಮಶೇಖರ ಆನೆಗುಂದಿ ಅವರ ಮದುವೆ ಸಮಾರಂಭದಲ್ಲಿ ತಾಲೂಕು ಪಂಚಾಯಿತಿ ಸಿಬ್ಬಂದಿ ಭಾಗವಹಿಸುವ ಮೂಲಕ ವಿಶೇಷ ಸಂದರ್ಭಕ್ಕೆ ಸಾಕ್ಷಿಯಾದರು.ಈ ಸಮಯದಲ್ಲಿ ತಾಲ್ಲೂಕು ಪಂಚಾಯಿತಿ ಇಓ ಸಂಜೀವ ಜುನ್ನೂರ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಅತ್ಯಂತ ಪವಿತ್ರ ಕಾರ್ಯ ಹಾಗೂ ಕರ್ತವ್ಯ. ಪ್ರತಿ ಮತವೂ ಅತ್ಯಂತ ಪ್ರಮುಖ. ಪ್ರತಿಯೊಬ್ಬರೂ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಪ್ಪದೆ ಮತ ಚಲಾಯಿಸಬೇಕು. ಚುನಾವಣಾ ಆಯೋಗ ಜಿಲ್ಲಾ ಸ್ವೀಪ್ ಸಮಿತಿ ಮತದಾನ ಹೆಚ್ಚಳಕ್ಕಾಗಿ ಸಾಕಷ್ಟು ಶ್ರಮಿಸುತ್ತಿದೆ. ಇದಕ್ಕೆಲ್ಲ ಸಾರ್ವಜನಿಕರು ಕೈ ಜೋಡಿಸಬೇಕು. ಮತದಾನದ ದಿನ ಯಾವುದೇ ಕೆಲಸವಿದ್ದರೂ ಮೊದಲು ಮತ ಚಲಾಯಿಸಬೇಕು. ಇದರಿಂದ ಪ್ರಜಾಪ್ರಭುತ್ವಕ್ಕೆ ಮತ್ತಷ್ಟು ಮಹತ್ವ ಮೆರಗು ಬರುತ್ತದೆ ಎಂದರು.ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಶಾಂತಗೌಡ ನ್ಯಾಮಣ್ಣವರ, ಶಿವಾನಂದ ಮೂಲಿಮನಿ, ಆನಂದ, ಗೊಲ್ಲಾಳ ಸೇರಿದಂತೆ ಸಾರ್ವಜನಿಕರು ಇದ್ದರು.
ನೇಹಾ ಹತ್ಯೆ ಖಂಡಿಸಿ ಮಠಾಧೀಶರ ನೇತೃತ್ವದಲ್ಲಿ ಪ್ರತಿಭಟನೆ ಬಸವನಬಾಗೇವಾಡಿ: ಪಟ್ಟಣದ ಬಸವೇಶ್ವರ ವೃತ್ತದಲ್ಲಿ ತಾಲೂಕು ಜಂಗಮ ಸಮಾಜ,ಕರ್ನಾಟಕ ರಕ್ಷಣೆ ವೇದಕೆ ಹಾಗೂ ವಿವಿಧ ಸಂಘಟನೆಗಳು ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆ ಪ್ರಕರಣ ಖಂಡಿಸಿ ವಿವಿಧ ಮಠಾಧೀಶರ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ ತಹಸೀಲ್ದಾರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.ಪ್ರತಿಭಟನೆ ಉದ್ದೇಶಿಸಿ ಸ್ಥಳೀಯ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ, ಸಿದ್ದಲಿಂಗ ಸ್ವಾಮೀಜಿ, ಮುತ್ತಗಿಯ ವೀರರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ನೇಹಾ ಹಿರೇಮಠ ಹತ್ಯೆ ಅಮಾನವೀಯ ಕೃತ್ಯವಾಗಿದೆ. ಮಹಿಳೆಯನ್ನು ಪೂಜ್ಯ ಭಾವನೆಯಿಂದ ಕಾಣುವ ದೇಶದಲ್ಲಿ ಇಂತಹ ಕೃತ್ಯಗಳು ನಡೆದಿರುವುದು ಖಂಡನೀಯ. ಈ ಘಟನೆಯನ್ನು ವಯಕ್ತಿಕ ವಿಚಾರ ಎಂದು ಹೇಳುವುದು ಸರಿಯಲ್ಲ. ಇಂತಹ ಘಟನೆ ಬೇರೆ ರಾಜ್ಯದಲ್ಲಿ ನಡೆದಿದ್ದರೆ ಬುಲ್ಡೊಜರ ತೆಗೆದುಕೊಂಡು ಹೋಗಿ ತಕ್ಷಣ ಕ್ರಮ ತೆಗೆದುಕೊಳ್ಳುತ್ತಿದ್ದರು. ಜವಾಬ್ದಾರಿ ಹೊಂದಿದ ವ್ಯಕ್ತಿಗಳು ಇಂತಹ ಘಟನೆಗಳ ಬಗ್ಗೆ ನಿರ್ಲಕ್ಷ ತೋರಬಾರದು. ನೇಹಾ ಹತ್ಯೆಗೆ ನ್ಯಾಯ ಸಿಗುವವರೆಗೆ ನಮ್ಮ ಹೋರಾಟ ನಿಲ್ಲುವುದಿಲ್ಲ. ಕೊಲೆ ಮಾಡಿದ ವ್ಯಕ್ತಿಗೆ ಮರಣದಂಡನೆ ಶಿಕ್ಷೆಯಾಗಬೇಕು ಎಂದು…
ಬಸವನಬಾಗೇವಾಡಿ: ಮರಾಠ ಸಮಾಜ ಬಾಂಧವರು ಸ್ವರಾಜ ಕಲ್ಪನೆ ತಂದ ಶಿವಾಜಿ ವಂಶಜರು. ಮರಾಠರು ಭಾರತೀಯ ಹಿಂದುಗಳಾಗಿದ್ದಾರೆ. ಮರಾಠ ಸಮಾಜದವರು ಮುಸ್ಲಿಂರ ವಿರೋಧಿಗಳಲ್ಲ. ನಮ್ಮ ಸಮಾಜ ಬಾಂಧವರು ರಾಜಕೀಯವಾಗಿ ನಿರ್ಣಾಯಕವಾಗಿ ಒಗ್ಗೂಟ್ಟು ಪ್ರದರ್ಶಿಸುವ ಅಗತ್ಯವಿದೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದರು.ಪಟ್ಟಣದ ಯಲ್ಲಾಲಿಂಗ ಮಠದ ಕಲ್ಯಾಣ ಮಂಟಪದಲ್ಲಿ ಭಾನುವಾರ ಸಂಜೆ ಹಮ್ಮಿಕೊಂಡಿದ್ದ ಅಖಂಡ ಬಸವನಬಾಗೇವಾಡಿ ತಾಲೂಕಿನ ಪಕ್ಷಾತೀತವಾಗಿ ಭಾಗವಹಿಸಿದ್ದ ಮರಾಠ ಸಮಾಜ ಬಾಂಧವರ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಛತ್ರಪತಿ ಶಿವಾಜಿಯನ್ನು ಮುಸ್ಲಿಂರ ವಿರೋಧಿ ಎಂದು ಗುರುತಿಸಲಾಗುತ್ತಿದೆ. ಶಿವಾಜಿ ಮಹಾರಾಜರ ಸೈನ್ಯದಲ್ಲಿ ೬೦ ಸಾವಿರ ಮುಸ್ಲಿಂ ಸೈನಿಕರು ಇದ್ದರು. ಇವರ ೩೩ ಅಂಗರಕ್ಷಕರಲ್ಲಿ ೧೩ ಜನ ಮುಸ್ಲಿಂ ಅಂಗರಕ್ಷಕರು ಇದ್ದರು ಎಂದು ಇತಿಹಾಸದಿಂದ ತಿಳಿದುಬರುತ್ತದೆ. ಮರಾಠ ಸಮಾಜ ಬಾಂಧವರು ಇತಿಹಾಸವನ್ನು ಅರಿತುಕೊಳ್ಳಬೇಕಿದೆ. ಮರಾಠರು ಬಿಜೆಪಿಗೆ ಮತ ಹಾಕುತ್ತಾರೆ ಎಂಬುವದು ಸ್ವಲ್ಪಮಟ್ಟಿಗೆ ಸರಿಯಿದೆ. ಕಳೆದ ೧೦ ವರ್ಷದಲ್ಲಿ ನರೇಂದ್ರ ಮೋದಿ ಸರ್ಕಾರ ದೇಶದಲ್ಲಿ ಯಾವ ರೀತಿಯ ಆಡಳಿತ ನಡೆಸಿದೆ ಎಂಬುವದನ್ನು ಅರಿತುಕೊಳ್ಳಬೇಕಿದೆ. ನೋಟು…
ವಿಜಯಪುರದಲ್ಲಿ ನಡೆದ ವೈದ್ಯರು, ಸಹಕಾರ ಪ್ರತಿನಿಧಿಗಳು, ಹಾಗೂ ನ್ಯಾಯವಾದಿಗಳ ಸಭೆ ವಿಜಯಪುರ: ಚುನಾವಣೆಯ ಈ ಸಂದರ್ಭದಲ್ಲಿ ದೇಶದಲ್ಲಿರುವ ಸಧ್ಯದ ಪರಿಸ್ಥಿತಿಯ ಕುರಿತು ಶಿಕ್ಷಣ ತಜ್ಞರು, ವೈದ್ಯರು, ಸಹಕಾರ ಪ್ರತಿನಿಧಿಗಳು ಜನಜಾಗೃತಿ ಮೂಡಿಸಿ ಪ್ರಜಾಪ್ರಭುತ್ವ ಉಳಿಸಲು ಮುಂದಾಗಬೇಕು ಎಂದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರ ಹಾಗೂ ಪ್ರವಾಸೋದ್ಯಮ ಸಚಿವ ಎಚ್. ಕೆ. ಪಾಟೀಲ ಹೇಳಿದ್ದಾರೆ.ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರವಿವಾರ ಸಂಜೆ ನಗರದಲ್ಲಿ ನಡೆದ ವೈದ್ಯರು, ಸಹಕಾರ ಪ್ರತಿನಿಧಿಗಳು, ಹಾಗೂ ನ್ಯಾಯವಾದಿಗಳೊಂದಿಗೆ ಸಭೆಯಲ್ಲಿ ಅವರು ಮಾತನಾಡಿದರು. ದೇಶದ ಇಂದಿನ ಪರಿಸ್ಥಿತಿಯ ಕುರಿತು ಜನಜಾಗೃತಿ ಮೂಡಿಸದಿದ್ದರೆ ದೇಶ ಸರ್ವಾಧಿಕಾರ ಆಡಳಿತದ ಕಡೆಗೆ ಸಾಗಲಿದೆ. ಈ ಸಭೆಯಲ್ಲಿ ಸೇರಿರುವ ನಾನಾ ಕ್ಷೇತ್ರಗಳ ಗಣ್ಯರಾದ ತಾವು ಮತದಾರರು ಮಾತ್ರವಲ್ಲ. ಸಮಾಜವನ್ನು ಮುನ್ನಡೆಸುವ ಗಣ್ಯರಾಗಿದ್ದೀರಿ. ಪ್ರತಿಯೊಬ್ಬರು ಕನಿಷ್ಠ 100 ಕುಟುಂಬಗಳ ಮೇಲೆ ಹಾಗೂ ತಲಾ 500 ಮತದಾರರ ಮೇಲೆ ಪರಿಣಾಮ ಬೀರುವವರಾಗಿದ್ದೀರಿ. ತಾವು ಸಮಾಜಕ್ಕೆ ಮಾರ್ಗದರ್ಶನ ಮಾಡಿ ಪ್ರಜಾಪ್ರಭುತ್ವದ ಪರವಾಗಿರುವ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಅವರಿಗೆ…
