Author: editor.udayarashmi@gmail.com

ಬಸವನಬಾಗೇವಾಡಿ: ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಅವರ ಹತ್ಯೆ ಸಿನಿಮಾ ಮಾದರಿಯಲ್ಲಿ ನಡೆದಿರುವುದು ಇಡೀ ಮನುಕುಲವೇ ತಲೆತಗ್ಗಿಸುವಂತಾಗಿದೆ. ಇದೊಂದು ಅಮಾನವೀಯ ಕೃತ್ಯವಾಗಿದೆ. ಈಚೆಗೆ ಲವ್ ಜಿಹಾದ್ ಹೆಸರಿನಲ್ಲಿ ಹಿಂದು ಹೆಣ್ಣುಮಕ್ಕಳು ಬಲಿಯಾಗುತ್ತಿರುವುದು ಖೇದಕರ ಸಂಗತಿ. ಅಬ್ದುಲ್ ಕಲಾಂ, ಸಂತ ಶಿಶುನಾಳ ಷರೀಪ್ ಅಜ್ಜ ಸೇರಿದಂತೆ ಅನೇಕ ವ್ಯಕ್ತಿಗಳು ಮುಸ್ಲಿಂ ಸಮಾಜಕ್ಕೆ ಸೇರಿದವರಾದರೂ ಇಡೀ ಮನುಕುಲಕ್ಕೆ ಬೇಕಾದವರು. ಇವರ ಸಂದೇಶ ಇಡೀ ಜಗತ್ತಿಗೆ ಮಾದರಿಯಾಗಿದೆ. ಇಂತಹ ಮಹಾತ್ಮರ ಹಾದಿಯಲ್ಲಿ ಎಲ್ಲ ಸಮಾಜ ಬಾಂಧವರು ನಡೆಯುವಂತಾಗಬೇಕು. ಯಾವುದೇ ಸಮಾಜದಲ್ಲಿ ಇಂತಹ ಹೀನ ಕೃತ್ಯ ಮಾಡಿದವರಿಗೆ ಕಠಿಣ ಶಿಕ್ಷೆ ವಿಧಿಸುವಂತಾಗಬೇಕು. ಇಂತಹ ದುಷ್ಕ್ರತ್ಯ ಮಾಡಿದವರನ್ನು ಬಹಿರಂಗವಾಗಿ ಶಿಕ್ಷೆ ವಿಧಿಸಿದರೆ ಮುಂದಿನ ದಿನಗಳಲ್ಲಿ ಇಂತಹ ಘಟನೆ ಜರುಗುವುದಿಲ್ಲ. ನೇಹಾ ಹಿರೇಮಠ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ದೇವರು ನೀಡುವಂತಾಗಲಿ ಎಂದು ಸ್ಥಳೀಯ ಹಿರೇಮಠದ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಸಿಂದಗಿ: ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಐದು ಗ್ಯಾರಂಟಿಗಳನ್ನು ನೀಡಿ ಜನರ ಹಾದಿ ತಪ್ಪಿಸುತ್ತಿದೆ ಎಂದು ಸಿಂದಗಿ ವಿಧಾನಸಭಾ ಕ್ಷೇತ್ರದ ಸಂಘಟನಾ ಪ್ರಭಾರಿ ವಿಜೂಗೌಡ ಪಾಟೀಲ ಹೇಳಿದರು.ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಶುಕ್ರವಾರ ಸಾಯಂಕಾಲ ಹಮ್ಮಿಕೊಂಡ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಒಂದು ವರ್ಷದಿಂದ ಈ ಐದು ಗ್ಯಾರಂಟಿಯಿಂದ ಅಭಿವೃದ್ದಿ ಕುಂಠಿತಗೊಂಡಿದೆ. ಅಲ್ಲದೇ ರಾಜ್ಯದಲ್ಲಿ ಯಾವಾಗ ಯಾವಾಗ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗ ಬರಗಾಲ ಬೀಳುವುದು ನಿಶ್ಚಿತವಾಗಿದೆ. ಈ ಕಾರಣಕ್ಕೆ ಮೋದಿ ಅವರ ಸಾಧನೆಯ ಮೇಲೆ ಜನತೆ ಮೆಚ್ಚುಗೆ ವ್ಯಕ್ತಪಡಿಸಿ ೨೨,೨೩,.೨೪ರಂದು ಮಹಾಸಂಪರ್ಕ ಅಭಿಯಾನ ಹಮ್ಮಿಕೊಳ್ಳಲಾಗಿದೆ.ರಮೇಶ ಜಿಗಜಿಣಗಿ ೧೩ಬಾರಿ ಚುನಾವಣೆ ಎದುರಿಸಿ ೧೨ಸಲ ಆಯ್ಕೆಯಾಗಿ ಯಾವುದೇ ಕಪ್ಪು ಚುಕ್ಕೆ ಇಲ್ಲದೇ ಅಧಿಕಾರ ಮಾಡಿ ೧ಲಕ್ಷ ಕೋಟೊ ಅನುದಾನ ತಂದಿದ್ದಾರೆ. ಮೋದಿ ಅವರ ಅಲೆ ಇಡೀ ದೇಶದಲ್ಲದ್ದು, ಅದನ್ನು ಯಾರಿಂದಲು ತಡೆಯಲು ಸಾಧ್ಯವಿಲ್ಲ. ಸುಕಾ ಸುಮ್ಮನೇ ಜಿಗಜಿಣಗಿ ಅವರ ಮೇಲೆ ಸುಳ್ಳು ಆರೋಪಗಳನ್ನು ಹೇಳುತ್ತಾ ಅವರ ಮಾತುಗಳನ್ನು ತಿರುಚಿ ಗೊಂದಲು ಸೃಷ್ಠಿ ಮಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷ…

Read More

ಸಿಂದಗಿ: ಪಟ್ಟಣದ ಬಸ್ ನಿಲ್ದಾಣದ ಎದುರಿಗಡೆ ಇರುವ ಅಂಜುಮನ್-ಎ-ಇಸ್ಲಾಂ ಸಂಸ್ಥೆ, ವಿಜಯಪುರ ಆಫಿಸರ್ಸ ಕಕಾಡೆಮಿ, ಪಾಲ್ಕಾನ್ ಪಿಯು ಕಾಲೇಜ ಹಾಗೂ ಅಂಜುಮನ್ ಐಟಿಐ ಕಾಲೇಜಿನ ಸಹಯೋಗದೊಂದಿಗೆ ಏ.೨೪ರಂದು ಬೆಳಿಗ್ಗೆ ೧೦ಗಂಟೆಗೆ ಗ್ರಾಮೀಣ ಅಭಿವೃದ್ದಿ ಅಧಿಕಾರಿ, ರೈಲ್ವೆ ಪ್ರೋಟೆಕ್ಷನ್ ಪೋರ್ಸ್, ಪಿಡಿಒ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಒಂದು ದಿನದ ಉಚಿತ ಕಾರ್ಯಾಗಾರ ಏರ್ಪಡಿಸಲಾಗಿದೆ. ಕಾರಣ ಸಿಂದಗಿ ಮತ್ತು ಸುತ್ತಮುತ್ತಲಿನ ಗ್ರಾಮೀಣ ಪ್ರದೇಶದ ಸ್ಪರ್ಧಾರ್ಥಿಗಳು ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು.ಹೆಚ್ಚಿನ ಮಾಹಿತಿಗಾಗಿ ೮೬೬೦೧೬೬೪೪೮, ೯೪೪೮೪೪೦೧೮೦, ೯೪೮೨೮೯೧೮೬೨ ದೂರವಾಣಿಗೆ ಸಂಪರ್ಕಿಸಬೇಕು ಎಂದು ಪ್ರಾಚಾರ್ಯರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಸಿಂದಗಿ: ಪಟ್ಟಣದ ತಹಶೀಲ್ದಾರ್ ಕಛೇರಿಯಲ್ಲಿ ಏ.೨೧ರಂದು ಬೆಳಿಗ್ಗೆ ೧೦ಗಂಟೆಗೆ ಶ್ರೀ ಭಗವಾನ್ ಮಹಾವೀರ ಅವರ ಜಯಂತಿಯನ್ನು ಲೋಕಸಭಾ ಚುನಾವಣಾ ನೀತಿ ಸಂಹಿತೆಯ ನಿಯಮಗಳನ್ನು ಅನುಸರಿಸುತ್ತಾ ಸರಳವಾಗಿ ಕಾರ್ಯಾಲಯದ ಸಭಾ ಭವನದಲ್ಲಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಜಯಂತಿ ಕಾರ್ಯಕ್ರಮವನ್ನು ನೇರವೇರಿಸಲಾಗುವುದು. ಕಾರಣ ಮುಖಂಡರು, ವಿವಿಧ ಸಂಘಟನೆಯ ಪದಾಧಿಕಾರಿಗಳು, ಸಾರ್ವಜನಿಕರು, ತಾಲೂಕು ಮಟ್ಟದ ಎಲ್ಲ ಅಧಿಕಾರಿಗಳು, ಸಿಬ್ಬಂದಿ ವರ್ಗ ಕಾರ್ಯಕ್ರಮದಲ್ಲಿ ಭಾಗವಹಿಸಿ ಶೋಭೆತರಬೇಕೆಂದು ತಹಶೀಲ್ದಾರ್ ಪ್ರದೀಪಕುಮಾರ ಹಿರೇಮಠ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಸಿಂದಗಿ: ರಾಜ್ಯದಲ್ಲಿ ರಾಜಾರೋಷವಾಗಿ ಇಂತಹ ಕೃತ್ಯಗಳು ನಡೆಯುತ್ತಿದ್ದು, ಕಾನೂನಿನ ಸುವ್ಯವಸ್ಥೆ ಕುಸಿದು ಹೋಗಿದೆ ಎಂದು ಬಿಜೆಪಿ ಮಂಡಲ ತಾಲೂಕಾಧ್ಯಕ್ಷ ಸಂತೋಷ ಪಾಟೀಲ ಡಂಬಳ ಹೇಳಿದರು.ಪಟ್ಟಣದ ಸಂಗಮೇಶ್ವರ ದೇವಾಸ್ಥಾನದಿಂದ ಸ್ವಾಮಿ ವಿವೇಕಾನಂದ ವೃತ್ತದವರೆಗೆ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ಹುಬ್ಬಳ್ಳಿ ಬಿವಿಬಿ ಕಾಲೇಜಿನ ವಿದ್ಯಾರ್ಥಿ ನೇಹಾಳನ್ನು ಹತ್ಯೆಗೈದ ಆರೋಪಿಗಳನ್ನು ಕೂಡಲೇ ಗಲ್ಲು ಶಿಕ್ಷೆಗೆ ಹಾಕಬೇಕು. ಅಂದಾಗ ಮುಂದೇ ಈ ರೀತಿಯ ಘಟನೆಗಳು ಸಂಭವಿಸುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.ಈ ವೇಳೆ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷ ಶಿಲ್ಪಾ ಕುದರಗೊಂಡ ಮಾತನಾಡಿ, ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಹೆಣ್ಣು ಮಕ್ಕಳ ಮೇಲೆ ನಿರಂತರವಾಗಿ ದೌರ್ಜನ್ಯ, ಹತ್ಯೆ ನಡೆಯುತ್ತಿದ್ದರೂ ರಾಜ್ಯ ಸರಕಾರ ನಿರ್ಲಕ್ಷö್ಯ ತೋರುತ್ತಿರುವುದು ಸರಿಯಲ್ಲ. ನೇಹಾಗೆ ಚಾಕುವಿನಿಂದ ಇರಿದ ಫಯಾಜ್ ವಿರುದ್ಧ ಕಠಿಣ ಶಿಕ್ಷೆಗೆ ಒತ್ತಾಯಿಸಿದರು.ಈ ವೇಳೆ ಲಿಂಬೆ ಅಭಿವೃದ್ಧಿ ನಿಗಮ ಮಂಡಳಿ ಮಾಜಿ ಅಧ್ಯಕ್ಷ ಅಶೋಕ ಅಲ್ಲಾಪೂರ, ಅಶೋಕ ನಾರಾಯಣಪೂರ, ಗುರು ತಳವಾರ, ಸಿದ್ರಾಮ ಅನಗೊಂಡ, ಎಸ್.ಆರ್.ಪಾಟೀಲ,…

Read More

ಕೊಲ್ಹಾರ: ಬಿಜೆಪಿ ಪಕ್ಷದ ಯುವ ಶಕ್ತಿ ಬೂತ್ ಮಟ್ಟದ ಪದಾದಿಕಾರಿಗಳು ಕಳೆದ ೧೦ ವರ್ಷಗಳ ಅವಧಿಯಲ್ಲಿ ದೇಶದಲ್ಲಿ ಆಡಳಿತ ಮಾಡುತ್ತಿರುವ ನರೇಂದ್ರ ಮೋದಿಯವರ ಜನಪರ ಯೋಜನೆಗಳನ್ನು ಮತದಾರರ ಮನೆಮನೆಗೆ ತೆರಳಿ ತಿಳಿಸಿಕೊಟ್ಟು ಮತ್ತೊಮ್ಮೆ ಭಾರತೀಯ ಜನತಾಪಕ್ಷವು ಅಧಿಕಾರದ ಚುಕ್ಕಾಣಿ ಪಡೆದುಕೊಳ್ಳಲು ಶ್ರಮಿಸಬೇಕಾಗಿದೆ ಎಂದು ಮಾಜಿ ಶಾಸಕ ಸೋಮನಗೌಡ ಬ ಪಾಟೀಲ ಹೇಳಿದರು.ಪಟ್ಟಣದ ಮಾಜಿ ಸಚಿವ ಎಸ.ಕೆ.ಬೆಳ್ಳುಬ್ಬಿಯವರ ಮನೆಯಲ್ಲಿ ನಡೆದ ಕೊಲ್ಹಾರ ಮಹಾಶಕ್ತಿ ಕೇಂದ್ರದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡುತ್ತಿದ್ದರು.ವಿಜಯಪೂರ ಲೋಕಸಭಾ ಅಭ್ಯರ್ಥಿ ರಮೇಶ ಜಿಗಜಿಣಗಿ ಅವರಿಗೆ ಬಸವನ ಬಾಗೇವಾಡಿ ಮತಕ್ಷೇತ್ರದಿಂದ ಸುಮಾರು ಇಪ್ಪತ್ತು ಸಾವಿರ ಅಧಿಕ ಮತಗಳು ದೊರಕಿ ಮತ್ತೊಮ್ಮೆ ಸಂಸದರಾಗಲು ಪ್ರಯತ್ನಿಸಬೇಕು. ಅವರು ಹಾಗೂ ಕ್ಷೇತ್ರದ ಮಾಜಿ ಶಾಸಕರು, ಸಚಿವರು ಆದಂತಹ ಎಸ್.ಕೆ.ಬೆಳ್ಳುಬ್ಬಿಯವರ ಅಭಿವೃದ್ದಿ ಕಾರ್ಯಕ್ರಮಗಳನ್ನು ಕೂಡ ಜನರಿಗೆ ಮನಮುಟ್ಟುವಂತೆ ವಿವರಿಸಿ ಬಿಜೆಪಿ ಪಕ್ಷಕ್ಕೆ ಮತ ಹಾಕಿಸಲು ಪ್ರಯತ್ನಿಸಬೇಕು ಎಂದು ಕಾರ್ಯಕರ್ತರಿಗೆ ಕರೆಕೊಟ್ಟರು.ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯದಕ್ಷತೆಯನ್ನು ಹಾಗೂ ದೇಶದ ಹಿತದೃಷ್ಟಿಯಿಂದ ಈಗಾಗಲೇ ಜನರ ಒಲವು ಬಿಜೆಪಿ ಪಕ್ಷದ ಕಡೆಇದ್ದು…

Read More

ಚಡಚಣ: ದೇಶದಲ್ಲಿ ನಡೆಯುವ ಚುನಾವಣೆಗಳು ಪ್ರಜಾಪ್ರಭುತ್ವದ ಗೌರವವನ್ನು ಎತ್ತಿ ಹಿಡಿಯುವ ಕೆಲಸ ಮಾಡುತ್ತವೆ. ಸಂವಿಧಾನ ನೀಡಿರುವ ಮತದಾನದ ಹಕ್ಕು ದೇಶದ ಸಂಸತ್ತನ್ನು ನಿರ್ಮಿಸುವ ಹಕ್ಕಾಗಿದೆ. ನಾವೇಲ್ಲ ಚುನಾವಣೆ ದಿನ ಯಾರು ಕೂಡ ಮತದಾನದಿಂದ ಹಿಂದೆ ಉಳಿಯದೆ ಮತ್ತು ಯಾವುದೇ ಆಸೆ-ಆಮಿಷಗಳಿಗೆ ಒಳಗಾಗದೆ ಆತ್ಮಸಾಕ್ಷಿಗೆ ಅನುಗುಣವಾಗಿ ಎಲ್ಲರೂ ಮತ ಚಲಾಯಿಸುವ ಮೂಲಕ ನೂರರಷ್ಟು ಮತದಾನ ಮಾಡುವಂತೆ ರೇವತಗಾಂವ ಗ್ರಾಪಂ ಪಿಡಿಓ ದೇವೇಂದ್ರ ವಾಗ್ಮೋಡೆ ಕರೆ ನೀಡಿದರು.ತಾಲೂಕು ಸ್ವೀಪ್ ಸಮಿತಿ ಶನಿವಾರ ಬೆಳಗ್ಗೆ ಹಾಲಳ್ಳಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ‘ಚುನಾವಣಾ ಪರ್ವ ದೇಶದ ಗರ್ವ’ ಘೋಷಣೆಯೊಂದಿಗೆ ಮತದಾನ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಅವರು. ಸುಭದ್ರ ಸರ್ಕಾರ ರಚನೆಗೆ ಪ್ರತಿಯೊಬ್ಬರ ಮತದಾನವು ಪ್ರಮುಖವಾಗಿದೆ. ಕಡ್ಡಾಯ ಮತದಾನ ರಕ್ತದಾನ, ಅನ್ನದಾನ ಸೇರಿದಂತೆ ಇನ್ನಿತರೆ ಯಾವುದೇ ದಾನಕ್ಕಿಂತಲೂ ಹೆಚ್ಚಿನ ದಾನವಾಗಿದೆ. ಕೂಲಿಕಾರರು ಎಲ್ಲರೂ ಮತಚಲಾಯಿಸಬೇಕು. ಸ್ವಂತ ಊರಿನಿಂದ ಬೇರೆ ಊರಿಗೆ ತೆರಳಿರುವ ತಮ್ಮ ಕುಟುಂಬ ಸದಸ್ಯರನ್ನು ಮತದಾನದ ದಿನ ಕರೆಸಿಕೊಂಡು ಮತದಾನ ಮಾಡಿಸಿ ಎಂದರು.ಈ ವೇಳೆಯಲ್ಲಿ ಚಡಚಣ…

Read More

ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿನ ವಾರ್ಡ ನಂ ೩೫ ರ ಮಹಲಬಾಗಾಯತ್ ರಿಸನಂ.೬೪೯/ಸಿ ಪ್ಲಾಟ್ ನಂ.೦೩ರ ಜಾಗೆಯಲ್ಲಿ ಅಧ್ಯಕ್ಷರು ಮಹಬೂಬಿ ಎಜ್ಯುಕೇಶನಲ್ ಟ್ರಸ್ಟ್ ರವರ ಧಾರ್ಮಿಕ ಕಟ್ಟಡ(ಪ್ರೇಯರ್ ಹಾಲ್) ಉದ್ದೇಶ ಕಟ್ಟಡದ ಅನುಮತಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಿದ್ದು, ಸದರಿ ಧಾರ್ಮಿಕ ಕಟ್ಟಡ ಅನುಮತಿಗೆ ಸಂಬಂಧಿಸಿದಂತೆ ಸಾರ್ವಜನಿಕ ಹಿತದೃಷ್ಠಿಯಿಂದ ಯಾವುದಾದರೂ ಆಕ್ಷೇಪಣೆಗಳು ಇದ್ದಲ್ಲಿ ದಿನಾಂಕ ಏಪ್ರೀಲ್ ೨೫ರ ಒಳಗಾಗಿ ಮಹಾನಗರ ಪಾಲಿಕೆ ಕಾರ್ಯಾಲಯಕ್ಕೆ ಸಲ್ಲಿಸಬಹುದು ಎಂದು ಮಹನಾಗರ ಪಾಲಿಕೆ ವಲಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿಜಯಪುರ: ನಾವು ಚಲಾವಣೆ ಮಾಡುವ ಮತ ಬಲಿಷ್ಠ ಹಾಗೂ ಸುಸ್ಥಿರ ದೇಶ ಕಟ್ಟಲು ಸಹಾಯ ಮಾಡುತ್ತದೆ. ಯಾವುದೇ ಆಸೆ ಆಮಿಷಕ್ಕೆ ಬಲಿಯಾಗದೆ ಮತ ಚಲಾಯಿಸಿ ಎಂದು ಜಿಲ್ಲಾ ಸ್ವೀಪ್ ಸಮಿತಿ ಅದ್ಯಕ್ಷರು ಹಾಗೂ ಪಂಚಾಯತ್ ಮುಖ್ಯ ಕಾರ್ಯನಿರ್ವಹಕ ಅಧಿಕಾರಿ ರಿಶಿ ಆನಂದ ಹೇಳಿದರು.ವಿಜಯಪುರ ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ, ಜಿಲ್ಲಾ ಸ್ವೀಪ್ ಸಮಿತಿ ವಿಜಯಪುರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ವಿಜಯಪುರ ಇವರ ಸಹಯೋಗದಲ್ಲಿ ನವ ಸ್ಪೂರ್ತಿ ಸಂಘ, ಮಾಜಿ ದೇವದಾಸಿ ಪುನರ್ವಸತಿ ಯೋಜನೆ, ಏಡ್ಸ್ ಜಾಗೃತಿ ಮಹಿಳಾ ಸಂಘ ವಿಜಯಪುರ ಸಹಯೋಗದಲ್ಲಿ ನಡೆದ ಸಾರ್ವತ್ರಿಕ ಲೋಕಸಭಾ ಚುನಾವಣೆ-೨೦೨೪ “ಮತದಾನ ಜಾಗೃತಿ ಅಭಿಯಾನ” ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ನಾವು ಚುನಾಯಿಸುವ ಜನಪ್ರತಿದಿಗಳು ಆಯ್ಕೆಯಾದ ಮೇಲೆ ಆರೋಗ್ಯ, ಶಿಕ್ಷಣ, ಹಾಗೂ ಮೂಲಭೂತ ಸೌಕರ್ಯಗಳ ಬಗ್ಗೆ ಯೋಜನೆಗಳನ್ನು ಹಾಕಿಕೊಂಡು ಸಮಾಜದ ಸಮಸ್ಯೆಗಳನ್ನು ನಿವಾರಿಸುತ್ತಾರೆ. ಈ ನಿಟ್ಟಿನಲ್ಲಿ ಸದೃಢ ರಾಷ್ಟç ನಿರ್ಮಾಣಕ್ಕೆ ತೊಡಗಿಸಿ ಕೊಳ್ಳುತ್ತಾರೆ. ಹಾಗಾಗಿ ಎಚ್ಚರಿಕೆ…

Read More

ವಿಜಯಪುರ: ವಿಜಯಯಪುರ ಮೀಸಲು ಲೋಕಸಭಾ ಕ್ಷೇತ್ರದ ಸಾಮಾನ್ಯ ವೀಕ್ಷಕರನ್ನಾಗಿ ಡಾ.ರತನ್‌ಕನ್ವರ ಎಚ್. ಗಂಧವಿಚರಣ್ ನೇಮಕ ಮಾಡಲಾಗಿದೆ. ಚುನಾವಣೆ ವಿಷಯಗಳಿಗೆ ಸಂಬಂಧಿಸಿದಂತೆ ಅವರ ವಿಳಾಸ ಸರ್ಕ್ಯೂಟ್ ಹೌಸ್ ಸೈನಿಕ ಶಾಲೆಯ ಹತ್ತಿರ, ಬೆಳಗ್ಗೆ ೯ರಿಂದ ೧೦.೩೦ರವರೆಗೆ ಅವರನ್ನು ಬೇಟಿ ಮಾಡಬಹುದು ಅಥವಾ ೬೩೬೩೯೨೭೨೨೫ಕ್ಕೆ ಕರೆ ಮಾಡಬಹುದು ಎಂದು ಎಂದು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More