Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಬ್ರಹ್ಮದೇವನಮಡು: ಸಿಂದಗಿ ತಾಲೂಕಿನ ಸುಕ್ಷೇತ್ರ ಗೋಲಗೇರಿ ಗೊಲ್ಲಾಳೇಶ್ವರ ಜಾತ್ರೆ ನಿಮಿತ್ಶ ಏ.೨೧ರಿಂದ ೨೭ರವರೆಗೆ ನಾನಾ ಧಾಮಿ೯ಕ ಕಾಯ೯ಕ್ರಮಗಳು ಜರುಗಲಿವೆ. ಏ.೨೩ರಂದು ಸಂಜೆ ೫.೩೦ಕ್ಕೆ ಧಮ೯ದಶಿ೯ಗಳಾದ ವರಪುತ್ರ ಹೊಳೆಪ್ಪನವರು ದೇವರಮನಿ ಹಾಗೂ ನಿಜಪ್ಪ ಶರಣರು ದೇವರಮನಿ ನೇತೃತ್ವದಲ್ಲಿ ಪಂಚಲೋಹದ ಕಲಶಾರೋಹಣ, ಭೂಚಕ್ರ ಕೊಡೆ ಏರಿಸಿದ ನಂತರ ಮಹಾರಥೋತ್ಸವ ನಡೆಯಲಿದೆ. ಏ.೨೧ರಂದು ರಾತ್ರಿ ೧೦ಕ್ಕೆ ಡೊಳ್ಳಿನ ವಾಲಗ ಉತ್ಸವ, ಏ.೨೨ರಂದು ಸಂಜೆ ಗೊಲ್ಲಾಳೇಶ್ವರ ಮಹಾ ಪುರಾಣ ಮಂಗಲ ನಂತರ ೭ಕ್ಕೆ ಬಿಂದಗಿ ಉತ್ಸವ, ರಾತ್ರಿ ೧೦ಕ್ಕೆ ಕಡೆ ಉಚ್ಚಾಯಿ ಕಾಯ೯ಕ್ರಮ ನಡೆಯಲಿದೆ. ಏ.೨೫ರಂದು ಕಡಬಿನ ಕಾಳಗ, ಏ.೨೭ರಂದು ಕಲಶ ಇಳಿಸುವ ಮೂಲಕ ಜಾತ್ರೆ ಸಂಪನ್ನಗೊಳ್ಳಲಿದೆ ಎಂದು ಗೊಲ್ಲಾಳೇಶ್ವರ ದೇವಸ್ಥಾನ ಟ್ರಸ್ಟ್ ಕಮಿಟಿ ಕಾರ್ಯಾಧ್ಶಕ್ಷ ರವಿರಾಜ ದೇವರಮನಿ ತಿಳಿಸಿದ್ದಾರೆ.
ಇಂಡಿ: 2024 ರ ಲೋಕಸಭೆ ಸಾರ್ವತ್ರಿಕ ಚುನಾವಣೆ ನಿಮಿತ್ಯ ಪದಾಧಿಕಾರಿಗಳ, ಕಾರ್ಯಕರ್ತರ ಸಭೆ ಹಾಗೂಬೃಹತ್ ರೋಡ್ ಶೋ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ರೈತ ಮೋರ್ಚಾ ಉಪಾಧ್ಯಕ್ಷ ಶಿವರಾಜ ಕೆಂಗನಾಳ ಪತ್ರಿಕೆ ಪ್ರಕಟಣೆಯಲ್ಲಿ ಶನಿವಾರ ತಿಳಿಸಿದ್ದಾರೆ.ತಾಲ್ಲೂಕಿನ ತಾಂಬಾ ಪಟ್ಟಣದಲ್ಲಿ ರವಿವಾರ ಏಪ್ರಿಲ್ 21 ರಂದು ಸಂಜೆ 4-ಘಂಟೆಗೆ ತಾಂಬಾ ಬಿಜೆಪಿ ಮಾಹಾಶಕ್ತಿ ಕೇಂದ್ರದ ಆಶ್ರಯದಲ್ಲಿ ಜರಗುತ್ತದೆಈ ಕಾರ್ಯಕ್ರಮದಲ್ಲಿ ಅಭ್ಯರ್ಥಿ ರಮೇಶ್ ಜಿಗಜಿಣಗಿ, ಮಾಜಿ ಶಾಸಕ ರಮೇಶ್ ಭೂಸನೂರ, ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ್ ಶಹಾಪುರ ಹಾಗೂ ಬಿಜೆಪಿಯ ಅನೇಕ ಮುಖಂಡರು ಭಾಗವಹಿಸಲಿದ್ದಾರೆ. ಹಾಗಾಗಿ ಈ ಭಾಗದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಮನವಿ ಮಾಡಿಕೊಂಡಿದ್ದಾರೆ.ಈ ಸಮಯದಲ್ಲಿ ಬಿಜೆಪಿ ಹಿರಿಯ ಮುಖಂಡ ಜಿ ವಾಯ್ ಗೊರನಾಳ, ತಾಲೂಕು ಪಂಚಾಯತ ಸದಸ್ಯ ಪ್ರಕಾಶ್ ಮುಂಜಿ , ರುದ್ರಪ್ಪ ನಾವದಗಿ, ಶಂಕರ ಯಳಕೋಟಿ, ಸುಭಾಷ ಪ್ಯಾಟಿ, ಮಹಾವೀರ ತಂಗಾ ಇತರರು ಇದ್ದರು.
-ವೀಣಾ ಹೇಮಂತ್ ಗೌಡ ಪಾಟೀಲ್, ಮುಂಡರಗಿ-ಗದಗ ಸ್ವತಂತ್ರ ಭಾರತದ ಅತಿ ದೊಡ್ಡ ಹಬ್ಬ ಚುನಾವಣೆ. ಪ್ರತಿ ಐದು ವರ್ಷಕ್ಕೊಮ್ಮೆ ವಿಧಾನಸಭೆ ಮತ್ತು ಲೋಕಸಭೆಗಳಿಗೆ ನಡೆಯುವ ಈ ಚುನಾವಣೆಯಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲ ಭಾರತೀಯ ಪ್ರಜೆಗಳು ಮತ ಚಲಾಯಿಸಲು ಅರ್ಹರಾಗಿದ್ದಾರೆ. ಭಾರತ ವಿಶ್ವದಲ್ಲಿಯೇ ಅತಿ ಹೆಚ್ಚು ಯುವಜನರನ್ನು ಹೊಂದಿರುವ ರಾಷ್ಟ್ರವಾಗಿದ್ದು, ಇದೀಗ ಲೋಕಸಭಾ ಚುನಾವಣೆಯು ಸನ್ನಿಹಿತವಾಗಿದ್ದು ಇಡೀ ಜಗತ್ತಿನ ಕಣ್ಣು ಭಾರತದೆಡೆಗಿದೆ.ನಮ್ಮ ಸಂವಿಧಾನವು ರೂಪಿಸಿರುವ ಪ್ರಜೆಗಳಿಂದ ಪ್ರಜೆಗಳಿಗಾಗಿ ಪ್ರಜೆಗಳಿಗೋಸ್ಕರ ಪ್ರಜೆಗಳೇ ಪ್ರಜಾಪ್ರತಿನಿಧಿಗಳನ್ನು ಆಯ್ಕೆ ಮಾಡುವ ಈ ಮಹತ್ತರ ಜವಾಬ್ದಾರಿಯ ಕಾರ್ಯ ಇದೀಗ ಭಾರತದ ಸರ್ವ ನಾಗರಿಕರ ಕೈಯಲ್ಲಿದೆ.ನಮ್ಮ ದೇಶದಲ್ಲಿ ಆಡಳಿತಾತ್ಮಕ ವ್ಯವಸ್ಥೆಯು ಸುಗಮವಾಗಿ ಸಾಗಲು ಗ್ರಾಮ ಪಂಚಾಯಿತಿ, ಮಹಾನಗರ ಪಾಲಿಕೆ, ಜಿಲ್ಲಾ ಪಂಚಾಯಿತಿ, ವಿಧಾನಸಭಾ ಮತ್ತು ಲೋಕಸಭಾ ವ್ಯಾಪ್ತಿಯಲ್ಲಿ ಚುನಾವಣೆಗಳು ನಡೆಯುತ್ತವೆ. ಇಲ್ಲಿ ತಮ್ಮದೇ ಆದಆಶೋತ್ತರಗಳನ್ನು ಹೊಂದಿರುವ ಪಕ್ಷಗಳು ತಮ್ಮ ಪಕ್ಷವು ಅಧಿಕಾರಕ್ಕೆ ಬಂದರೆ ಅಭಿವೃದ್ಧಿಯನ್ನು ಕೈಗೊಳ್ಳಲು ತಾವು ತೆಗೆದುಕೊಳ್ಳಬಹುದಾದ ಕ್ರಮಗಳನ್ನು ಸೂಚಿಸುವ ವಿಷಯಗಳನ್ನು ಹೊಂದಿರುವ ಪ್ರಣಾಳಿಕೆಗಳನ್ನು ಚುನಾವಣೆ ಪೂರ್ವದಲ್ಲಿ ಬಿಡುಗಡೆ…
ವಿಜಯಪುರ: ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ರಾಜ್ಯ ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್. ಪಾಟೀಲ (ಬ್ಯಾಡಗಿ) ಇವರ ಅಧ್ಯಕ್ಷತೆಯಲ್ಲಿ ವಿಜಯಪುರ ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಸರಕಾರದಿಂದ ನಾಮನಿರ್ದೇಶನಗೊಂಡು ಜಿಲ್ಲಾ ಅನುಷ್ಠಾನ ಸಮಿತಿ ಹಾಗೂ ತಾಲೂಕಾ ಸಮಿತಿಗಳ ಸಭೆಯನ್ನು ಕರೆಯಲಾಗಿತ್ತು.ಸಭೆಯನ್ನುದ್ದೇಶಿಸಿ ಎಸ್.ಆರ್. ಪಾಟೀಲ (ಬ್ಯಾಡಗಿ) ಇವರು ಮಾತನಾಡುತ್ತಾ ೨೦೨೩ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ, ಹಾಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ೫ ಗ್ಯಾರಂಟಿಗಳನ್ನು ಘೋಷಿಸಿದ್ದರು. ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ತಕ್ಷಣ ರಾಜ್ಯದ ಜನತೆಗೆ ನೀಡಿದ ಭರವಸೆಗಳನ್ನು ಈಡೇರಿಸಿ ನುಡಿದಂತೆ ನಡೆದಿದೆ. ಅದರಿಂದ ಎಲ್ಲ ವರ್ಗದವರಿಗೂ ಈ ಯೋಜನೆಗಳನ್ನು ತಲುಪಿ ಜನರು ಸಂತೋಷದಿಂದಿದ್ದಾರೆ. ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿಯೂ ಎಐಸಿಸಿ ವತಿಯಿಂದ ಪಂಚನ್ಯಾಯ ಗಳನ್ನು ಪ್ರಣಾಳಿಕೆಯಲ್ಲಿ ಘೋಷಿಸಿದ್ದು, ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ತಕ್ಷಣ ಈ ಪಂಚನ್ಯಾಯ ಗಳನ್ನು ಈಡೇರಿಸಲು ಬದ್ಧವಾಗಿದೆ. ಸದರಿ ಯೋಜನೆಗಳ ಗ್ಯಾರಂಟಿ ಕಾರ್ಡಗಳನ್ನು ಜಿಲ್ಲೆಯ ಪ್ರತಿ ಮನೆ ಮನೆಗೆ ಭೇಟಿ ನೀಡಿ ಅವರಿಗೆ ಗ್ಯಾರಂಟಿ…
ವಿಜಯಪುರ: ಲೋಕಸಭಾ ಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿಯಾಗಿರುವ ಸಂಸದ ರಮೇಶ ಜಿಗಜಿಣಗಿ ಅವರ ಪರ ಬೂತ್ ಮಟ್ಟದಲ್ಲಿ ಬಿರುಸಿನ ಪ್ರಚಾರ ಕೈಗೊಳ್ಳುವ ನಿಟ್ಟಿನಲ್ಲಿ ಏ.19 ಮತ್ತು 20 ಶುಕ್ರವಾರ ಹಾಗೂ ಶನಿವಾರ ಎರಡು ದಿನಗಳ ಕಾಲ ವಿಜಯಪುರ ಜಿಲ್ಲೆಯ ಎಲ್ಲಾ ಎಂಟು ವಿಧಾನಸಭಾ ಕ್ಷೇತ್ರಗಳ ಒಟ್ಟು 428 ಶಕ್ತಿಕೇಂದ್ರಗಳಿಗೆ ಬಿಜೆಪಿಯ ಲೋಕಸಭಾ ಚುನಾವಣೆ ರಾಜ್ಯ ಸಂಚಾಲಕ ವಿ. ಸುನೀಲ್ ಕುಮಾರ್ ಅವರು ಜಿಲ್ಲೆಯ ನಾಯಕರುಗಳನ್ನು ನಿಯೋಜಿಸಿದ್ದಾರೆ.ಮುದ್ದೇಬಿಹಾಳ ಮತಕ್ಷೇತ್ರದ 52 ಶಕ್ತಿಕೇಂದ್ರಗಳಿಗೆ ಮಾಜಿ ಸಚಿವರಾದ ಎಸ್.ಕೆ.ಬೆಳ್ಳುಬ್ಬಿ ಅವರನ್ನು , ದೇವರ ಹಿಪ್ಪರಗಿ ಮತಕ್ಷೇತ್ರದ 48 ಶಕ್ತಿಕೇಂದ್ರಗಳಿಗೆ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರನ್ನು, ಬಸನವ ಬಾಗೇವಾಡಿ ಮತಕ್ಷೇತ್ರದ 58 ಶಕ್ತಿಕೇಂದ್ರಗಳಿಗೆ ಮಾಜಿ ಶಾಸಕ ಸೋಮನಗೌಡ ಪಾಟೀಲ್ ಸಾಸನೂರ ಅವರನ್ನು, ಬಬಲೇಶ್ವರ ಮತಕ್ಷೇತ್ರದ 48 ಶಕ್ತಿಕೇಂದ್ರಗಳಿಗೆ ಮುಖಂಡ ಸಂಜೀವ ಐಹೊಳೆ ಅವರನ್ನು, ವಿಜಯಪುರ ನಗರ ಮತಕ್ಷೇತ್ರದ 54 ಶಕ್ತಿಕೇಂದ್ರಗಳಿಗೆ ಮುಖಂಡ ಕಾಸೂಗೌಡ ಬಿರಾದಾರ ಅವರನ್ನು, ನಾಗಠಾಣ ಮತಕ್ಷೇತ್ರದ 47 ಶಕ್ತಿಕೇಂದ್ರಗಳಿಗೆ ಮಾಜಿ ಶಾಸಕ…
Udayarashmi kannada daily newspaper
ವಿಜಯಪುರ: ಲೋಕಸಭಾ ಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿಯಾಗಿರುವ ಸಂಸದ ರಮೇಶ ಜಿಗಜಿಣಗಿ ಅವರ ಪರ ಬೂತ್ ಮಟ್ಟದಲ್ಲಿ ಬಿರುಸಿನ ಪ್ರಚಾರ ಕೈಗೊಳ್ಳುವ ನಿಟ್ಟಿನಲ್ಲಿ ಏ.19 ಮತ್ತು 20 ಶುಕ್ರವಾರ ಹಾಗೂ ಶನಿವಾರ ಎರಡು ದಿನಗಳ ಕಾಲ ವಿಜಯಪುರ ಜಿಲ್ಲೆಯ ಎಲ್ಲಾ ಎಂಟು ವಿಧಾನಸಭಾ ಕ್ಷೇತ್ರಗಳ ಒಟ್ಟು 428 ಶಕ್ತಿಕೇಂದ್ರಗಳಿಗೆ ಬಿಜೆಪಿಯ ಲೋಕಸಭಾ ಚುನಾವಣೆ ರಾಜ್ಯ ಸಂಚಾಲಕ ವಿ. ಸುನೀಲ್ ಕುಮಾರ್ ಅವರು ಜಿಲ್ಲೆಯ ನಾಯಕರುಗಳನ್ನು ನಿಯೋಜಿಸಿದ್ದಾರೆ.ಮುದ್ದೇಬಿಹಾಳ ಮತಕ್ಷೇತ್ರದ 52 ಶಕ್ತಿಕೇಂದ್ರಗಳಿಗೆ ಮಾಜಿ ಸಚಿವರಾದ ಎಸ್.ಕೆ.ಬೆಳ್ಳುಬ್ಬಿ ಅವರನ್ನು , ದೇವರ ಹಿಪ್ಪರಗಿ ಮತಕ್ಷೇತ್ರದ 48 ಶಕ್ತಿಕೇಂದ್ರಗಳಿಗೆ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರನ್ನು, ಬಸನವ ಬಾಗೇವಾಡಿ ಮತಕ್ಷೇತ್ರದ 58 ಶಕ್ತಿಕೇಂದ್ರಗಳಿಗೆ ಮಾಜಿ ಶಾಸಕ ಸೋಮನಗೌಡ ಪಾಟೀಲ್ ಸಾಸನೂರ ಅವರನ್ನು, ಬಬಲೇಶ್ವರ ಮತಕ್ಷೇತ್ರದ 48 ಶಕ್ತಿಕೇಂದ್ರಗಳಿಗೆ ಮುಖಂಡ ಸಂಜೀವ ಐಹೊಳೆ ಅವರನ್ನು, ವಿಜಯಪುರ ನಗರ ಮತಕ್ಷೇತ್ರದ 54 ಶಕ್ತಿಕೇಂದ್ರಗಳಿಗೆ ಮುಖಂಡ ಕಾಸೂಗೌಡ ಬಿರಾದಾರ ಅವರನ್ನು, ನಾಗಠಾಣ ಮತಕ್ಷೇತ್ರದ 47 ಶಕ್ತಿಕೇಂದ್ರಗಳಿಗೆ ಮಾಜಿ ಶಾಸಕ…
ನವದೆಹಲಿ: ನಾಗಾಲ್ಯಾಂಡ್‌ನ ಏಕೈಕ ಲೋಕಸಭಾ ಸ್ಥಾನಕ್ಕೆ ಶುಕ್ರವಾರ ಒಂದೇ ಹಂತದಲ್ಲಿ ಮತದಾನ ನಡೆದಿದೆ. ಆದರೆ, ಈಶಾನ್ಯ ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರತ್ಯೇಕ ರಾಜ್ಯದ ಬೇಡಿಕೆ ಮುಂದಿಟ್ಟುಕೊಂಡು ಜನರು ಮತದಾನದಿಂದ ದೂರ ಉಳಿದಿದ್ದಾರೆ ಎಂದು ‘ಇಂಡಿಯಾ ಟುಡೇ’ ವರದಿ ಮಾಡಿದೆ.ಪೂರ್ವ ನಾಗಾಲ್ಯಾಂಡ್ ಪೀಪಲ್ಸ್ ಆರ್ಗನೈಸೇಶನ್ (ENPO) ಪ್ರತಿಭಟನೆಯ ರೂಪವಾಗಿ ಚುನಾವಣೆಯಲ್ಲಿ ಮತ ಚಲಾಯಿಸದಂತೆ ಪ್ರದೇಶದ ಆರು ಜಿಲ್ಲೆಗಳ ಜನರಿಗೆ ಕರೆ ಕೊಟ್ಟಿದೆ.ಈ ಪ್ರದೇಶದ ಆರು ಜಿಲ್ಲೆಗಳ 738 ಮತಗಟ್ಟೆಗಳಲ್ಲಿ ಚುನಾವಣಾಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ನಾಗಾಲ್ಯಾಂಡ್‌ನ ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ ಅವಾ ಲೋರಿಂಗ್ ತಿಳಿಸಿದ್ದಾರೆ.ಆರು ಜಿಲ್ಲೆಗಳಲ್ಲಿ 4 ಲಕ್ಷಕ್ಕೂ ಅಧಿಕ ಮತದಾರರಿದ್ದಾರೆ. ಅವರು ‘ಇಎನ್‌ಪಿಒ’ನೊಂದಿಗೆ ಒಗ್ಗಟ್ಟನ್ನು ತೋರಿಸಲು ಆಯ್ಕೆ ಮಾಡಿಕೊಂಡಿದ್ದು, ಮತದಾನದ ದಿನದಂದು ಮನೆಯೊಳಗೆ ಉಳಿದರು. ಮಧ್ಯಾಹ್ನ 1 ಗಂಟೆಯವರೆಗೂ ಆರು ಜಿಲ್ಲೆಗಳಲ್ಲಿ ಮತದಾರರೇ ಇರಲಿಲ್ಲ ಎಂದು ತಿಳಿದುಬಂದಿದೆ.
ಬೆಂಗಳೂರು: ತಮಿಳುನಾಡಿಗೆ ನೀರು ಬಿಟ್ಟು ಕಾವೇರಿ ಮಾತೆಯ ‘ತುಂಬಿದ ಕೊಡ’ ಬರಿದು ಮಾಡಿ ಕನ್ನಡಿಗರಿಗೆ ಖಾಲಿ ಚೊಂಬು ಕೊಟ್ಟವರು ನೀವು ಎಂದು ಕಾಂಗ್ರೆಸ್’ಗೆ ಬಿಜೆಪಿ ತಿರುಗೇಟು ನೀಡಿದೆ.ಪತ್ರಿಕೆಯಲ್ಲಿ ‘ಚೊಂಬು’ ಜಾಹೀರಾತು ನೀಡುವ ಮೂಲಕ ಮೋದಿ ಸರ್ಕಾರದ ವಿರುದ್ದ ಕಾಂಗ್ರೆಸ್ ನೇರ ದಾಳಿ ಮಾಡಿದ್ದು, ಕರ್ನಾಟಕಕ್ಕೆ ಮೋದಿ ಸರ್ಕಾರ ಕೊಟ್ಟ ಕೊಡುಗೆ ಚೊಂಬು! ಹೀಗಾಗಿ ಕಾಂಗ್ರೆಸ್ ಪಕ್ಷಕ್ಕೆ ಮತನೀಡಿ ಎಂದು ಮತಯಾಚನೆ ಮಾಡಿದೆ.ಕರ್ನಾಟಕಕ್ಕೆ ಮೋದಿ ಸರ್ಕಾರ ಕೊಟ್ಟ ಕೊಡುಗೆ ಚೊಂಬು. ಎಲ್ಲರ ಖಾತೆಗೆ 15 ಲಕ್ಷ ಹಣ ಹಾಕುವ ಚೊಂಬು, ತೆರಿಗೆ ಹಂಚಿಕೆಯಲ್ಲಿ ಚೊಂಬು, ರೈತರ ಆದಾಯ ಡಬಲ್ ಮಾಡುವ ಚೊಂಬು, ಬರ/ನೆರೆ ಪರಿಹಾರದ ಚೊಂಬು, 7 ಜನ ಬಿಜೆಪಿ/ಜೆಡಿಎಸ್ ಸಂಸದರು ರಾಜ್ಯಕ್ಕೆ ನೀಡಿದ ಕೊಡುಗೆ ಕೇವಲ ಚೊಂಬು, ಈ ಚುನಾವಣೆಯಲ್ಲಿ ಬಿಜೆಪಿಗೆ ನಾವು ನೀಡೋಣ ಇದೇ ಚೊಂಬು, ಕನ್ನಡಿಗರ ಹಿತ ಕಾಪಾಡಲು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ.. ಎಂದು ಜಾಹೀರಾತು ನೀಡಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಇದೇ…
ಬೆಂಗಳೂರು: ಮಾಜಿ ಸಚಿವ ಹಾಗೂ ಕಲಬುರಗಿಯ ಪ್ರಭಾವಿ ನಾಯಕ ಮಾಲೀಕಯ್ಯ ಗುತ್ತೇದಾರ್ ಹಾಗೂ ಮಾಜಿ ಶಾಸಕಿ ಶಾರದಾ ಶೆಟ್ಟಿಯವರು ಶುಕ್ರವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.ಶುಕ್ರವಾರ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಇಬ್ಬರೂ ಅಧಿಕೃತವಾಗಿ ಸೇರ್ಪಡೆಯಾದರು.ಮಾಲೀಕಯ್ಯ ಗುತ್ತೇದಾರ್ ಅಫ್ಜಲ್ ಪುರ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕರಾಗಿದ್ದರು. ಮಾಜಿ ಸಚಿವರಾಗಿರುವ ಗುತ್ತೇದಾರ್ ಈ ಹಿಂದೆ ಕಾಂಗ್ರೆಸ್ ಪಕ್ಷದಲ್ಲೇ ಇದ್ದರು. ಬಳಿಕ ಜಿಲ್ಲೆಯಲ್ಲಿ ರಾಜಕೀಯ ಅಸಮಾಧಾನದಿಂದ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡರು. 2018 ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಎಂವೈ ಪಾಟೀಲ್ ವಿರುದ್ಧ ಸ್ಪರ್ಧಿಸಿ ಸೋತಿದ್ದರು.ಬಿಜೆಪಿಯಲ್ಲಿದ್ದ ಮಾಲೀಕಯ್ಯ ಗುತ್ತೇದಾರ್ ಕಾಂಗ್ರೆಸ್ ಸೇರ್ಪಡೆಯಾಗಲು ಅವರ ಸಹೋದರ ನಿತಿನ್ ಗುತ್ತೇದಾರ್ ಅವರನ್ನು ಬಿಜೆಪಿಗೆ ಸೇರ್ಪಡೆ ಮಾಡಿರುವುದು ಕಾರಣವಾಗಿದೆ.ಪಕ್ಷದ ನಾಯಕರ ನಡೆಯಿಂದ ಅಸಮಾಧಾನಗೊಂಡಿದ್ದ ಮಾಲೀಕಯ್ಯ ಗುತ್ತೇದಾರ್ ಬಿಜೆಪಿ ನಾಯಕರ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಬಿಜೆಪಿಯ ಭ್ರಷ್ಟಾಚಾರವೇ ಕಾರಣ ಎಂದು ಆರೋಪಿಸಿದ್ದರು.…
