Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿಜಯಪುರ: ವಿಜಯಪುರದ ಸೋಲಾಪುರ ರಸ್ತೆಯಲ್ಲಿರುವ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವಿವಿಧ ವೃತ್ತಿಗಳಲ್ಲಿ ಖಾಲಿ ಇರುವ ಸ್ಥಾನಗಳಿಗೆ ಪ್ರವೇಶಕ್ಕಾಗಿ ಆಸಕ್ತ ಎಸ್.ಎಸ್.ಎಲ್.ಸಿ. ಪಾಸಾದ ಅರ್ಹ ಅಭ್ಯರ್ಥಿಗಳು ಸಂಸ್ಥೆಗೆ ಭೇಟಿ ನೀಡಿ ಆಫ್‌ಲೈನ್ ಮೂಲಕ ಜುಲೈ೪ರಿಂದ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಪ್ರವೇಶವನ್ನು ಮಾರನೇಯ ದಿನ ಬೆಳಿಗ್ಗೆ ೧೦ ಗಂಟೆಗೆ ಮೆರಿಟ್ ಆಧಾರದಲ್ಲಿ ನೀಡಲಾಗುವುದು. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು, ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ವಿಜಯಪುರ ಮೊ: ೯೯೭೨೬೮೨೧೮೪, ೯೪೪೮೯೮೬೩೮೧ & ೯೦೩೫೪೩೪೩೮೧ ಸಂಖ್ಯೆಗೆ ಸಂಪರ್ಕಿಸುವಂತೆ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲಾ ಮಟ್ಟದ ಡಿಸಿಸಿ ಮತ್ತು ಡಿಎಲ್‌ಆರ್‌ಸಿ ಸಭೆಯಲ್ಲಿ ಸಿಇಓ ರಿಷಿ ಆನಂದ ಸೂಚನೆ ವಿಜಯಪುರ: ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ವಿವಿಧ ಬ್ಯಾಂಕುಗಳಿಂದ ಒಟ್ಟು ೧೭೦೯೩ ಕೋಟಿ ರೂ. ಸಾಲ ಒದಗಿಸಿದ್ದು, ಕಳೆದ ವರ್ಷಕ್ಕಿಂತ ಶೇ.೩.೮೮ ಪ್ರಗತಿ ಸಾಧಿಸಲಾಗಿದೆ. ಕೃಷಿ, ಶಿಕ್ಷಣ, ವ್ಯವಹಾರ ಮನೆ ಸಾಲಗಳ ಮೇಲೆ ಒತ್ತು ನೀಡಿ ಇನ್ನಷ್ಟು ಹೆಚ್ಚಿನ ಪ್ರಗತಿ ಸಾಧಿಸುವಂತೆ ಜಿಲ್ಲಾ ಅಗ್ರಣೀಯ ಬ್ಯಾಂಕ್ ವ್ಯವಸ್ಥಾಪಕರಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಸೂಚನೆ ನೀಡಿದರು.ಶನಿವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಅಗ್ರಣೀಯ ಬ್ಯಾಂಕ್ ವತಿಯಿಂದ ತ್ರೈಮಾಸಿಕ ಜಿಲ್ಲಾ ಸಲಹಾ ಸಮಿತಿ (ಡಿಎಲ್‌ಸಿ) ಸಭೆ ಹಾಗೂ ಜಿಲ್ಲಾ ಮಟ್ಟದ ಪರಿಶೀಲನಾ (ಡಿಎಲ್‌ಆರ್‌ಸಿ) ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜಿಲ್ಲೆಯಲ್ಲಿ ಒಟ್ಟು ರೂ.೧೭೦೯೩ ಕೋಟಿ ರೂ. ಸಾಲ ಒದಗಿಸಿದ್ದು, ರೂ.೧೮೬೭೬ ಕೋಟಿ ಠೇವಣಿ ಇದೆ. ಕಳೆದ ವರ್ಷಕ್ಕಿಂತ ೩.೮೮% ಸಾಲದಲ್ಲಿ ಪ್ರಗತಿ ಸಾಧಿಸಿದ್ದು ಠೇವಣಿಯಲ್ಲಿ ೧೨.೦೨% ಪ್ರಗತಿ ಸಾಧಿಸಲಾಗಿದೆ. ಜೊತೆಗೆ ಪ್ರಸ್ತುತ ೨೦೨೪-೨೫ ಸಾಲಿನಲ್ಲಿ…
ಬಿದರಕುಂದಿ ಗ್ರಾಮದ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ ನಡೆದ ಪ್ರವೇಶ ಪರೀಕ್ಷೆ – ಚೇತನ ಶಿವಶಿಂಪಿಮುದ್ದೇಬಿಹಾಳ: ಪರೀಕ್ಷೆಗಳಲ್ಲಿ ನಡೆಯುವ ಅಕ್ರಮಗಳನ್ನು ತಡೆಯಲು ಶಿಕ್ಷಣ ಇಲಾಖೆ ಹಲವಾರು ಕಟ್ಟು ನಿಟ್ಟಿನ ನಿಯಮಗಳನ್ನು ರೂಪಿಸುವ ಮೂಲಕ ನಾನಾ ಕಸರತ್ತುಗಳನ್ನ ನಡೆಸುತ್ತೆ. ಆದರೆ ಜವಾಬ್ದಾರಿಯುತ ಅಧಿಕಾರಿಗಳು ಮಾತ್ರ ತಮ್ಮ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸದ ಕಾರಣ ಪರೀಕ್ಷಾ ನಿಯಮಗಳು ಕೆಲ ಬಡಪಾಯಿ ವಿದ್ಯಾರ್ಥಿಗಳಿಗೆ ಮಾತ್ರ ಸೀಮಿತ ಅನ್ನೋ ಸಾಮಾಜಿಕ ಹೋರಾಟಗಾರರ ವಾದ ತಳ್ಳಿಹಾಕುವಂತಿಲ್ಲ. ಇದಕ್ಕೆ ಕೈಗನ್ನಡಿಯಾದ ಉದಾಹರಣೆಯೊಂದು ಇಲ್ಲಿದೆ ನೋಡಿ.ಅಲ್ಲಿ ಖಾಲಿ ಇರುವ ಸೀಟುಗಳು ಒಟ್ಟು ೧೯. ಪರೀಕ್ಷೆ ಬರೆಯೋಕೆ ಬಂದ ವಿದ್ಯಾರ್ಥಿಗಳ ಸಂಖ್ಯೆ ಬರೋಬ್ಬರಿ ೩೯೧. ಈ ಎಲ್ಲ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಒಟ್ಟು ೧೮ ಕೊಠಡಿಗಳಲ್ಲಿ. ಅದರಲ್ಲೂ ಒಂದು ಕೊಠಡಿಯಲ್ಲಿ ಕೇವಲ ೪ ವಿದ್ಯಾರ್ಥಿಗಳು ಮಾತ್ರ.ಈ ಅಂಕಿ ಸಂಖ್ಯೆಯನ್ನ ನೋಡಿದರೆ ಒಂದು ಕೊಠಡಿಯಲ್ಲಿ ಅದೆಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆದಿರಬಹುದು ಎಂದು ನೀವೇ ಲೆಕ್ಕಾ ಹಾಕಿ. ಪರೀಕ್ಷೆಗಳ ಪ್ರಶ್ನೆ ಪತ್ರಿಕೆಯಲ್ಲಿ ಸಿರೀಸ್ ಇದ್ದರೆ ಒಂದು ಡೆಸ್ಕ್ ನಲ್ಲಿ…
“ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ”- ವಿವೇಕಾನಂದ. ಎಚ್. ಕೆ. ಬೆಂಗಳೂರು ಇಂದಿನ ಸಂದರ್ಭದ ಅತಿ ಅಗತ್ಯ ವಿಷಯ ಮತ್ತು ನಂಬಿಕೆಗಳ ಪುನರ್ ಸ್ಥಾಪನೆಯ ಪ್ರಯತ್ನ..ಖಾಸಗಿ ಸಂಭಾಷಣೆಗಳ ಧ್ವನಿಮುದ್ರಣ ಸರಿಯೇ? ತಪ್ಪೇ?..ಇದು ತುಂಬಾ ಗಂಭೀರವಾದ ವಿಷಯ. ಅದರಲ್ಲೂ ಇತ್ತೀಚಿನ ಆಧುನಿಕ ತಂತ್ರಜ್ಞಾನದ ದಿನಗಳಲ್ಲಿ ಮಾನವೀಯ ನಂಬಿಕೆಗಳಿಗೇ ಬಹುದೊಡ್ಡ ಸವಾಲು ಎಸೆದಿರುವ ಅಂಶ..ನಾವು ಗೆಳೆಯ/ಗೆಳತಿ ಅಥವಾ ಗೆಳೆಯರಂತಿರುವ ಜೊತೆಗಾರರೊಂದಿಗೆ ಅಥವಾ ಪರಿಚಿತ/ಅಪರಿಚಿತರೊಂದಿಗೆ ಅನೇಕ ರೀತಿಯ ಖಾಸಗಿ ಸಂಭಾಷಣೆ ನಡೆಸುತ್ತೇವೆ. ನಮ್ಮ ಅತ್ಯಂತ ಖಾಸಗಿ ಆರೋಗ್ಯದಿಂದ – ವಿಶ್ವದ ಎಲ್ಲಾ ಆಸಕ್ತಿದಾಯಕ ವಿಷಯಗಳನ್ನೂ ಚರ್ಚಿಸುತ್ತೇವೆ. ನಮ್ಮ ಆರ್ಥಿಕ ಸಂಕಷ್ಟ, ನೈತಿಕ/ಅನೈತಿಕ ಸಂಬಂಧಗಳು, ಇತರರ ಬಗ್ಗೆ ನಮಗಿರುವ ಪ್ರೀತಿ/ದ್ವೇಷ/ಅಸೂಯೆ ಎಲ್ಲವನ್ನೂ ಮಾತನಾಡುತ್ತೇವೆ. ರಾಜಕೀಯ, ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ಎಲ್ಲವೂ ನಮ್ಮ ನಮ್ಮ ಆಸಕ್ತಿಗೆ ಅನುಗುಣವಾಗಿ ಸಂಭಾಷಣೆ ಇರುತ್ತದೆ. ಕೆಲವೊಮ್ಮೆ ಗಾಢ ಸ್ನೇಹ ಇರಬಹುದು ಅಥವಾ ಕೆಲವೊಮ್ಮೆ ದೂರದ ಸ್ನೇಹ/ಪರಿಚಯ ಇರಬಹುದು..ಆದರೆ, ಈ ಗೆಳೆತನದ ಸಮಯದಲ್ಲಿ ನಾವು ಆಡಿದ ಸಹಜ ಲೋಕಾಭಿರಾಮದ ಮಾತುಗಳನ್ನು ನಮಗೆ ತಿಳಿಯದಂತೆ ಜೊತೆಗಾರರಲ್ಲಿ ಒಬ್ಬರು…
ಜಿಲ್ಲಾ ಕಾಂಗ್ರೆಸ್ ಘಟಕದಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಿಗೆ ಸನ್ಮಾನ ವಿಜಯಪುರ: ಜೂ.೨೭ ರಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನೆಗಾಗಿ ವಿಜಯಪುರಕ್ಕೆ ಆಗಮಿಸಿದ್ದ ಸಚಿವ ದಿನೇಶ ಗುಂಡುರಾವ ಅವರು ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯಕ್ಕೆ ಭೇಟಿ ನೀಡಿದರು.ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಲೋಣಿ ರವರು ಹಾಗೂ ಪಕ್ಷದ ಮುಖಂಡರು ಸಚಿವರನ್ನು ಸ್ವಾಗತಿಸಿ ಸನ್ಮಾನಿಸಿದರು.ಸನ್ಮಾನ ಸ್ವೀಕರಿಸಿ ಮಾತನಾಡಿದ ದಿನೇಶ ಗುಂಡುರಾವ ಅವರು, ಪಕ್ಷದ ವತಿಯಿಂದ ಸಚಿವರಾದವರು ತಪ್ಪದೇ ಪಕ್ಷದ ಕಛೇರಿಗೆ ಭೇಟಿ ನೀಡಿ ಕಾರ್ಯಕರ್ತರೊಂದಿಗೆ ಸಮಾಲೋಚನೆ ಮಾಡುವದು ಅತೀ ಅವಶ್ಯ. ಇದರಿಂದ ಕಾರ್ಯಕರ್ತರಿಗೆ ಹುಮ್ಮಸ್ಸು ಬರುತ್ತದೆ. ಅವರ ಕೆಲಸ ಕಾರ್ಯಗಳ ಬಗ್ಗೆ ಸ್ಪಂದಿಸುವದು ಸಚಿವರಾದ ನಮ್ಮ ಕರ್ತವ್ಯ ಎಂದು ಹೇಳಿದರು.ಪಕ್ಷದ ಜಿಲ್ಲಾ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು, ಅಂಗ ಘಟಕಗಳ ಅಧ್ಯಕ್ಷರುಗಳು ಹಾಗೂ ಪಕ್ಷದ ಮುಖಂಡರು ಈ ಸಂದರ್ಭದಲ್ಲಿ ಪಾಲ್ಗೊಂಡಿದ್ದರು.ಈ ಸಂದರ್ಭದಲ್ಲಿ ನಾಗಠಾಣ ಶಾಸಕರಾದ ವಿಠ್ಠಲ ಕಟಕಧೋಂಡ, ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ನಾಯಕ, ಕೆಪಿಸಿಸಿ…
ವಿಜಯಪುರ: ಲೈಫ್ ಸ್ಟೈಲ್ ಮೆಡಿಸೀನ್ ಸಪ್ತಾಹದ ಅಂಗವಾಗಿ ನಗರದ ಪ್ರತಿಷ್ಠಿತ ಬಿ. ಎಲ್. ಡಿ. ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ.ಎಂ.ಪಾಟೀಲ್ ವೈದ್ಯಕೀಯ ಮಹಾವಿದ್ಯಾಲಯದ ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದ ಫಿಸಿಯಾಲಜಿ ವಿಭಾಗದ ವತಿಯಿಂದ ಜೀವನಶೈಲಿ ಔಷಧದ ತತ್ವಗಳು, ಆರೋಗ್ಯ ಮತ್ತು ಯೋಗಕ್ಷೇಮದ ಮೇಲೆ ಅದರ ಪ್ರಭಾವವನ್ನುದ ಕುರಿತು ಜಾಗೃತಿ ಒಂದು ವಾರ ಪ್ರತಿ ದಿನ ನಾನಾ ಕಾರ್ಯಕ್ರಮಗಳು ನಡೆದವು.ವಿಶ್ವಾದ್ಯಂತ ಪ್ರತಿ ವರ್ಷ ಜೂನ್ ತಿಂಗಳಲ್ಲಿನಲ್ಲಿ ಈ ಸಪ್ತಾಹ ಆಚರಿಸಲಾಗುತ್ತಿದ್ದು, ಬಿ.ಎಲ್.ಡಿ.ಈ ಡೀಮ್ಡ್ ವಿವಿ ಆವರಣದಲ್ಲಿ ಈ ತಿಂಗಳ ಕೊನೆಯ ವಾರ ಈ ಸಪ್ತಾಹ ಆಚರಿಸಲಾಯಿತು.ಆರೋಗ್ಯದ ಆರು ಪ್ರಮುಖ ಆಧಾರ ಸ್ತಂಭಗಳಾದ ದೈಹಿಕ ಚಟುವಟಿಕೆ, ನಿದ್ರೆ, ಒತ್ತಡ ನಿರ್ವಹಣೆ, ಸಾಮಾಜಿಕ ಸಂಪರ್ಕಗಳು ಮತ್ತು ಹಾನಿಕಾರಕ ಪದಾರ್ಥಗಳನ್ನು ತಪ್ಪಿಸುವುದರ ಮೇಲೆ ಈ ಕಾರ್ಯಕ್ರಮಗಳು ಕೇಂದ್ರೀಕೃತವಾಗಿದ್ದವು.ಫಿಸಿಯಾಲಜಿ ವಿಭಾಗದ ಮುಖ್ಯಸ್ಥೆ ಡಾ. ಲತಾ ಮುಳ್ಳೂರ ಅವರ ಮಾರ್ಗದರ್ಶನದಲ್ಲಿ ಶರೀರಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕಿ ಮತ್ತು ಜೀವನಶೈಲಿ ವೈದ್ಯಕೀಯ ವೈದ್ಯ ಡಾ. ಅನಿತಾ ತೇಲಿ ಅವರ ಉಸ್ತುವಾರಿಯಲ್ಲಿ…
ಸಿಂದಗಿ: ಪ್ರತಿ ಮನೆಗೂ ಶುದ್ಧ ಕುಡಿಯುವ ನೀರು ಜಲ ಜೀವನ ಮಿಷನ್ ಯೋಜನೆ ಮೂಲಕ ಸಂಪರ್ಕ ಕಲ್ಪಿಸಲಾಗಿದೆ. ಅಧಿಕಾರಿಗಳು ನೀರು ಪೂರೈಕೆಯಲ್ಲಿ ಬದ್ಧತೆ ಕಾಯ್ದುಕೊಂಡು ಜನರಿಗೆ ಶುದ್ಧ ಹಾಗೂ ಸುರಕ್ಷಿತ ನೀರನ್ನು ಪೂರೈಕೆ ಮಾಡಬೇಕು ಎಂದು ಗ್ರಾಮೀಣ ನೀರು ಮತ್ತು ನೈರ್ಮಲ್ಯ ಇಲಾಖೆ ಸಹಾಯಕ ಅಭಿಯಂತರ ಹಾಗೂ ದೇವರ ಹಿಪ್ಪರಗಿ ತಾಲೂಕ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಮತಿ ಭಾರತಿ ಚೆಲುವಯ್ಯ ಸೂಚಿಸಿದರು. ಪಟ್ಟಣದ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ಜಿಲ್ಲಾ ಪಂಚಾಯತ್ ಜಲಜೀವನ್ ಮಿಷನ್ ಯೋಜನೆಯ ಮಾಹಿತಿ ಅನುಷ್ಠಾನ ನೆರವು ಸಂಸ್ಥೆ ಸಂಯೋಗದಲ್ಲಿ ಪ್ರತಿಮನೆಗೆ ನಲ್ಲಿ ಸಂಪರ್ಕ ಮೂಲಕ ಶುದ್ಧ ಹಾಗೂ ಸುರಕ್ಷಿತ ನೀರು ಗ್ರಾಮಗಳಲ್ಲಿ ಪೂರೈಕೆ ಮಾಡುವ ಕುರಿತು ಶುಕ್ರವಾರ ನಡೆದ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.ಗ್ರಾಮೀಣ ಭಾಗದ ಜನರಿಗೆ ಜಲಜೀವನ್ ಮಿಷನ್ ಯೋಜನೆಯಡಿ ಪೂರೈಕೆ ಆಗುವ ನೀರನ್ನು ಬಹಳ ಸುರಕ್ಷತೆ ದೃಷ್ಟಿಯಿಂದ ಬಳಸಬೇಕು. ನೀರು ಸಂಗ್ರಹಿಸುವ ತೊಟ್ಟಿ ಹಾಗೂ ನೀರನ್ನು ಬಳಕೆ ಮಾಡುವ ವಸ್ತುಗಳನ್ನು ಶುಚಿಯಾಗಿಟ್ಟುಕೊಳ್ಳುವಂತೆ ಸಲಹೆ…
ಕೆಂಭಾವಿ: ಮುಸ್ಲಿಮರು ಪವಿತ್ರವಾದ ಪುಣ್ಯ ಕ್ಷೇತ್ರ ಮೆಕ್ಕಾ ಮದೀನಾಗೆ ವರ್ಷಪೂರ್ತಿ ಪಾದಯಾತ್ರೆ ಕೈಗೊಂಡು 2025 ರ ಹಜ್ಜ್ ಯಾತ್ರೆಗೆ ತೆರಳುತ್ತಿರುವ ಪಟ್ಟಣದ ನಿವಾಸಿಯಾದ ಸೈಯದ್ ಜಿಲಾನಿ ಯವರನ್ನು ಮಾರ್ಗ ಮಧ್ಯದಲ್ಲಿ ಕರ್ನಾಟಕ ಸರ್ಕಾರದ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳು ಮತ್ತು ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಪುರ ಸನ್ಮಾನಿಸಿ, ಗೌರವಿಸಿ ಪಾದಯಾತ್ರಿಗೆ ಶುಭಹಾರೈಸಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಮುಚ್ಚಿಹಾಕಲು ಸರ್ಕಾರ ಯತ್ನ | ದಲಿತರ ಹಣ ಲೂಟಿ | ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆರೋಪ ಬೆಂಗಳೂರು: ಸರ್ಕಾರಿ ಸ್ವಾಮ್ಯದ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ಬಿಜೆಪಿ ಶುಕ್ರವಾರ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿತು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿತು.ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಇಂದು ಪ್ರತಿಭಟನೆ ನಡೆಸಿದರು.ಜಿಲ್ಲಾ ಕೇಂದ್ರ ಚಿತ್ರದುರ್ಗ ಪಟ್ಟಣದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಭಾಗವಹಿಸಿದ್ದರು. ವಿಜಯೇಂದ್ರ ಮತ್ತು ಇತರ ಮುಖಂಡರು ಹಾಗೂ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸುತ್ತಿದ್ದಂತೆ, ಪೊಲೀಸರು ಅವರನ್ನು ತಡೆದು ವಶಕ್ಕೆ ಪಡೆದರು.ಬೆಳಗಾವಿ, ಮಂಡ್ಯ, ಮಂಗಳೂರು, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಇದೇ ರೀತಿ ಪ್ರತಿಭಟನೆಗಳು ನಡೆದಿರುವ ಬಗ್ಗೆ ವರದಿಯಾಗಿದೆ.ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿನ ಹಗರಣವನ್ನು ಮುಚ್ಚಿಹಾಕಲು…
ವಿಜಯಪುರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ತಾಯಂದಿರರ ಮತ್ತು ಮಕ್ಕಳ ಉತ್ತಮ ಆರೋಗ್ಯದ ಹಿತದೃಷ್ಟಿಯಿಂದ ವಿವಿಧ ರೀತಿಯ ಪೌಷ್ಟಿಕ ಆಹಾರವನ್ನು ಒದಗಿಸುತ್ತಿದೆ ಆದರೆ ಜಿಲ್ಲೆಯ ಬಹುತೇಕ ಅಂಗನವಾಡಿ ಕೇಂದ್ರಗಳು ಅಂಗನವಾಡಿ ಕಾರ್ಯಕರ್ತೆಯರ ಕುಟುಂಬದ ಆರ್ಥಿಕ ಅಭಿವೃದ್ದಿಗೆ ನಿರ್ಮಾಣವಾದಂತೆ ಭಾಸವಾಗುತ್ತಿವೆ.ಬಹುತೇಕ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳೇ ಇರುವುದಿಲ್ಲ, ಆದರೂ ಆ ದಿನದ ಹಾಜರಾತಿ ಪೂರ್ತಿಯಾಗಿ ತೋರಿಸಿ ಆ ಮಕ್ಕಳಿಗೆ ಬರುವ ಎಲ್ಲಾ ರೀತಿಯ ಸೌಲಭ್ಯಗಳನ್ನು (ಆಹಾರ ಕಿಟ್) ಹೊರಗಡೆ ಖಾಸಗಿ ವ್ಯಕ್ತಿಗಳಿಗೆ ಮಾರಿಕೊಳ್ಳುತ್ತಿರುವ ಸಂಗತಿ ಜಿಲ್ಲೆಯಾದ್ಯಂತ ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ. ಅಂಗನವಾಡಿ ಕೇಂದ್ರಗಳು ಕೇವಲ ಸರಕಾರಕ್ಕೆ ಖೊಟ್ಟಿ ವರದಿ ನೀಡುವ ಕೇಂದ್ರಗಳಾಗಿ ನಿರ್ಮಾಣವಾಗುತ್ತಿರುವುದು ವಿಷಾದನೀಯ ಸಂಗತಿ. ಈ ಕಹಿ ಸತ್ಯವು ತಮಗೂ ಸೇರಿದಂತೆ ಇಲಾಖೆಯ ಬಹುತೇಕ ಸಿಬ್ಬಂದಿಗಳಿಗೆ ತಿಳಿದ ವಿಷಯವೇ ಆದರೂ ಈ ವಿಷಯದ ಬಗ್ಗೆ ತಾವು ಯಾವುದೇ ರೀತಿಯ ಕ್ರಮವನ್ನು ಕೈಗೊಂಡಿರುವುದಿಲ್ಲ. ಆದ್ದರಿಂದಾಗಿ ಸೂಕ್ತ ಕ್ರಮ ಕೈಗೊಳ್ಳದೆ ಹೋದರೆ ಕರ್ನಾಟಕ ರಾಷ್ಟ ಸಮಿತಿ ಪಕ್ಷವು ತಮ್ಮ ಕಚೇರಿಯ ಮುಂದೆ ಉಗ್ರವಾದ ಹೋರಾಟವನ್ನು…
