Author: editor.udayarashmi@gmail.com

ಆಲಮಟ್ಟಿಯ ಎಂಪಿಎಸ್ & ಎಂಎಚ್‌ಎಂ ಶಾಲೆಯ ಹಳೆಯ ವಿದ್ಯಾರ್ಥಿ ಬಳಗದಿಂದ ಗುರು ಶಿಷ್ಯರ ಮಹಾಸಂಗಮ | ಗ್ರಂಥ ಬಿಡುಗಡೆ ಆಲಮಟ್ಟಿ: ಇಲ್ಲಿನ ಸರಕಾರಿ ಶಾಲೆಯ ಹಳೆಯ ವಿದ್ಯಾರ್ಥಿಗಳು ತಮ್ಮ ಶಾಲೆಯ ೬೦ನೆಯ ವರ್ಷಾಚರಣೆಯ ಸಂದರ್ಭದಲ್ಲಿ ಕಲಿತ ಶಾಲೆ ಅಕ್ಷರ ತೋರಣ ಎಂಬ ಅಭಿನಂದನ ಗ್ರಂಥವನ್ನು ಅರ್ಪಿಸಿರುವುದು ಇಡೀ ರಾಜ್ಯಕ್ಕೆ ಮಾದರಿ ಕೆಲಸವಾಗಿದೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಬಣ್ಣಿಸಿದರು.ಇಲ್ಲಿನ ಸಮುದಾಯ ಭವನದಲ್ಲಿ ಶುಕ್ರವಾರ ಕರ್ನಾಟಕ ಗಾಂಧಿ ಮಂಜಪ್ಪ ಹರ್ಡೇಕರ ಪ್ರೇರಿತ ಎಂಪಿಎಸ್ ಮತ್ತು ಎಂಎಚ್‌ಎಂ. ಶಾಲೆಗಳ ಹಳೆಯ ವಿದ್ಯಾರ್ಥಿಗಳ ಬಳಗದಿಂದ ಹಮ್ಮಿಕೊಂಡ ‘ಕಲಿತ ಶಾಲೆಗೆ ಅಕ್ಷರ ತೋರಣ’ ಹಾಗೂ ಗುರು ಶಿಷ್ಯರ ಮಹಾಸಂಗಮ ಕಾರ್ಯಕ್ರಮದಲ್ಲಿ ಶುಕ್ರವಾರ ಗ್ರಂಥ ಬಿಡುಗಡೆಗೊಳಿಸಿ ಅವರು ಮಾತನಾಡಿದರು.ಹುಟ್ಟಿದ ಊರು, ಹೆತ್ತ ತಂದೆ ತಾಯಿ, ಕಲಿತ ಶಾಲೆ, ಕಷ್ಟದಲ್ಲಿ ಸಹಾಯ ಮಾಡಿದವರನ್ನು ಎಂದೂ ಮರೆಯಬಾರದು. ಉತ್ತಮ ತಾಯಿ ನೂರು ಜನ ಶಿಕ್ಷಕರಿಗೆ ಸಮ. ಗುರು ಶಿಷ್ಯರ ಸಂಬಂಧ ಉತ್ತಮವಾಗಿರಬೇಕು ಎಂದು ಹೇಳಿದರು.ಸರಕಾರೀ ಶಾಲೆಗಳ ಅಗತ್ಯವನ್ನು ಒತ್ತಿ…

Read More

ಚಡಚಣ: ಸಮೀಪದ ಬರಡೋಲ ಗ್ರಾಮದ ಶ್ರೀ ಚೆನ್ನಮಲ್ಲಿಕಾರ್ಜುನ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2024-25 ನೇ ಸಾಲಿನ ವಿವಿಧ ವಸತಿ ಶಾಲೆಗಳ ಪರೀಕ್ಷೆಯಲ್ಲಿ ಆಯ್ಕೆಗೊಂಡ 22 ವಿದ್ಯಾರ್ಥಿಗಳಿಗೆ ಗ್ರಾಮಸ್ಥರು ಹಾಗೂ ಶಾಲೆಯ ಸಿಬ್ಬಂದಿ ವರ್ಗದವರು , ವಿದ್ಯಾರ್ಥಿಗಳು ಮುಂತಾದವರು ಸನ್ಮಾನಿಸುವ ಮೂಲಕ ಅಭಿನಂದಿಸಿದರು.

Read More

ಮುದ್ದೇಬಿಹಾಳ: ಡೆಂಗಿ ಜ್ವರ ನಿಯಂತ್ರಣಗೊಳಿಸಲು ರಾಜ್ಯದಾದ್ಯಂತ ಹಮ್ಮಿಕೊಳ್ಳಲಾದ ಪ್ರತೀ ಶುಕ್ರವಾರ ಈಡಿಸ್ ಲಾರ್ವಾ ಉತ್ಪತ್ತಿ ತಾಣಗಳನ್ನು ನಾಶ ಪಡಿಸುವ ಚಟುವಟಿಕೆಯನ್ನು ಪಟ್ಟಣದ ಪುರಸಭೆ ಎದುರು ಶುಕ್ರವಾರ ಪು.ಸದಸ್ಯೆ ಪ್ರೀತಿ ದೇಗಿನಾಳ ಚಾಲನೆ ನೀಡಿದರು.ಈ ವೇಳೆ ನಗರ ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಎಸ್.ಗೌಡರ ಮಾತನಾಡಿ, ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟುವ ಮುನ್ನೆಚ್ಚರಿಕೆ ಕ್ರಮವಾಗಿ ಈ ಸಮೀಕ್ಷೆ ನಡೆಸಲಾಗುತ್ತಿದೆ. ಡೆಂಘೀ ರೋಗವು ಈಡಿಸ್ ಎಂಬ ಸೊಳ್ಳೆಗಳಿಂದ ಹರಡುವ ರೋಗವಾಗಿದೆ. ಇಂಥ ಸೊಳ್ಳೆಗಳ ಸಂತಾನೋತ್ಪತ್ತಿ ತಾಣಗಳಾದ ಹೂವಿನ ಕುಂಡ, ಬಿಸಾಕಿದ ಹಳೆ ಟೈರ್, ಹಳೆ ಎಣ್ಣೆಯ ಡ್ರಮ್, ನೀರು ಸಂಗ್ರಹಿಸುವ ತೊಟ್ಟ್ಟಿ ಮುಂತಾದವುಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವದು, ಮಳೆಗಾಲದಲ್ಲಿ ಸೋಂಕು ಹೆಚ್ಚಾಗಿ ಹರಡುವುದರಿಂದ ಇವುಗಳನ್ನು ಶುಚಿಗೊಳಿಸಿ ಸೊಳ್ಳೆ ಮೊಟ್ಟೆ ಇಡಲು ಅವಕಾಶವಿರದಂತೆ ಸಾರ್ವಜನಿಕರು ನೋಡಿಕೊಳ್ಳಬೇಕು. ಹಗಲಿನಲ್ಲಿ ಸೊಳ್ಳೆ ಕಚ್ಚದಂತೆ ಎಚ್ಚರ ವಹಿಸಬೇಕು. ನೀರು ಶೇಖರಣಾ ತೊಟ್ಟಿ ಮತ್ತು ಟ್ಯಾಂಕ್‌ಗಳ ಮುಚ್ಚಳವನ್ನು ಭದ್ರವಾಗಿ ಮುಚ್ಚಬೇಕು. ಪಾತ್ರೆ ಹಾಗೂ ಬಿಂದಿಗೆಗಳಲ್ಲಿ ಹೆಚ್ಚು ದಿನ ನೀರು ಸಂಗ್ರಹಿಸಿಡಬಾರದು. ಮನೆಯ ಸುತ್ತ ಮತ್ತು ಮಾಳಿಗೆಯ ಮೇಲೆ ನೀರು…

Read More

ವಾಲ್ಮೀಕಿ ನಿಗಮದ ೧೮೭ ಕೋಟಿ ರೂ.ಗಳ ಭ್ರಷ್ಟಾಚಾರ ಹಗರಣ ಖಂಡಿಸಿ ಬಿಜೆಪಿ ಎಸ್.ಟಿ.ಮೋರ್ಚಾ ಬೃಹತ್ ಪ್ರತಿಭಟನೆ ವಿಜಯಪುರ: ವಾಲ್ಮೀಕಿ ನಿಗಮದಲ್ಲಿ ೧೮೭ ಕೋಟಿ ರೂ.ಗಳ ಭ್ರಷ್ಟಾಚಾರ ಹಗರಣ ಖಂಡಿಸಿ ಬಿಜೆಪಿ ಎಸ್.ಟಿ.ಮೋರ್ಚಾ ವತಿಯಿಂದ ಶುಕ್ರವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.ಶ್ರೀ ಸಿದ್ಧೇಶ್ವರ ದೇವಸ್ಥಾನದಿಂದ ಆರಂಭವಾದ ಪ್ರತಿಭಟನೆ ಗಾಂಧಿಚೌಕ್‌ನಲ್ಲಿ ರಾಜ್ಯ ಸರ್ಕಾರದ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳ ಮಾತನಾಡಿ, ದಲಿತರ ಕಲ್ಯಾಣ ಮಾಡುವುದಾಗಿ ಹೇಳಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಬಿಜೆಪಿಯ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಪರಿಶಿಷ್ಟ ಕಲ್ಯಾಣ ಮೀಸಲಿಟ್ಟದ್ದ ೨೮ ಸಾವಿರ ಕೋಟಿ ಹಣ ದುರ್ಬಳಕೆ ಮಾಡಿದರು. ನಂತರ ವಾಲ್ಮೀಕಿ ನಿಗಮದಲ್ಲಿ ಪರಿಶಿಷ್ಟ ಪಂಗಡ ಅಭಿವೃದ್ಧಿಗೆ ಇಟ್ಟಿದ್ದ ೧೮೭ ಕೋಟಿ ಹಣದಲ್ಲಿ ೪೫ ಕೋಟಿ ರೂ. ನೆರೆಯ ತೆಲಂಗಾಣ ರಾಜ್ಯಕ್ಕೆ ೯ ಬೇರೆ ನಕಲಿ ಖಾತೆಗಳಿಗೆ ಹಣ ವರ್ಗಾವಣೆ ಮಾಡಿ ತಮ್ಮ ಪಕ್ಷಕ್ಕೆ…

Read More

ದೇವರಹಿಪ್ಪರಗಿ: ಗ್ರಾಮದ ಮುಖ್ಯರಸ್ತೆಯ ಕಾಮಗಾರಿ ವಿಳಂಬವಾಗಿದ್ದು, ತ್ವರಿತವಾಗಿ ಪೂರ್ಣಗೊಳಿಸಿ ಗ್ರಾಮಸ್ಥರ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ರಾಜ್ಯಹೆದ್ದಾರಿ ೪೧ರಲ್ಲಿ ಪ್ರತಿಭಟನಾ ಧರಣಿ ಕೈಗೊಂಡರು.ತಾಲ್ಲೂಕಿನ ಚಿಕ್ಕರೂಗಿ ಗ್ರಾಮದ ಬಸ್ ನಿಲ್ದಾಣದ ರಾಜ್ಯಹೆದ್ದಾರಿಯಲ್ಲಿ ಶುಕ್ರವಾರ ಸಭೆ ಸೇರಿ, ಮುಖ್ಯ ರಸ್ತೆಯ ಕಾಮಗಾರಿ ವಿಳಂಬಕ್ಕೆ ಆಕ್ರೋಶ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಕರವೇ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀಶೈಲ ಮುಳಜಿ ಹಾಗೂ ಎಂ.ಡಿ.ಕಣಮೇಶ್ವರ ಮಾತನಾಡಿ, ಕಳೆದ ಒಂದೂವರೆ ವರ್ಷಗಳ ಹಿಂದೆ ೨೦೨೨-೨೩ನೇ ಸಾಲಿನಲ್ಲಿ ಅಂದಿನ ಶಾಸಕ ಸೋಮನಗೌಡ ಪಾಟೀಲ(ಸಾಸನೂರ) ಭೂಮಿಪೂಜೆ ನೆರವೇರಿಸಿ, ಮುಖ್ಯರಸ್ತೆಯ ಎಡಬದಿ ಚರಂಡಿಗಳ ಸಹಿತ ೫೦೦ ಮೀಟರ್ ಉದ್ದದ ದ್ವೀಪಥ ರಸ್ತೆಗೆ ಚಾಲನೆ ನೀಡಿದ್ದರು. ನಂತರ ಗುತ್ತಿಗೆದಾರರು ರಸ್ತೆಯನ್ನು ಅಗೆದು ನಂತರ ಕಾರ್ಯ ನಿಲ್ಲಿಸಿದರು. ಈಗ ಅಗೆದ ರಸ್ತೆ ಗ್ರಾಮಸ್ಥರಿಗೆ ಶಾಪವಾಗಿ ಕಾಡುತ್ತಿದ್ದು ಅಪಘಾತಗಳಿಗೂ ಆಹ್ವಾನಿಸುವಂತಿದೆ. ಆದ್ದರಿಂದ ಕೂಡಲೇ ಗುತ್ತಿಗೆದಾರರು ಸ್ಥಳಕ್ಕೆ ಆಗಮಿಸಿ ರಸ್ತೆ ಎಂದು ಪೂರ್ಣಗೊಳಿಸಲಾಗುವುದು ಎಂಬುದರ ಕುರಿತು ನಿಖರ ಮಾಹಿತಿ ನೀಡಬೇಕು ಎಂದು ಆಗ್ರಹಿಸಿದರು.ಪ್ರತಿಭಟನಾ ಸುದ್ದಿ ತಿಳಿದು ಸ್ಥಳಕ್ಕೆ…

Read More

ದೇವರಹಿಪ್ಪರಗಿ: ಶಾಲಾ ಮಕ್ಕಳು, ಶಿಕ್ಷಕರು ಹಾಗೂ ಪ್ರಮಖರ ಉಪಸ್ಥಿತಿಯಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಿಸಲಾಯಿತು.ಪಟ್ಟಣದ ೧೦೦೮ ಜಗದ್ಗುರು ಪಂಚಾಚಾರ್ಯ ಕಲ್ಯಾಣ ಮಂಟಪದಲ್ಲಿ ಗುರುವಾರ ಬೆಳಿಗ್ಗೆ ೯ ಗಂಟೆಗೆ ಆಯೋಜಿಸಲಾಗಿದ್ದ ಜಯಂತಿ ಕಾರ್ಯಕ್ರಮಕ್ಕೆ ಕೆಂಪೇಗೌಡರ ಭಾವಚಿತ್ರದ ಮೆರವಣಿಗೆಗೆ ಪಟ್ಟಣ ಪಂಚಾಯಿತಿ ಆವರಣದಲ್ಲಿ ಪಂಚಾಯಿತಿ ಸದಸ್ಯರ ಸಮ್ಮುಖದಲ್ಲಿ ಪೂಜೆ ಸಲ್ಲಿಸಿ ಚಾಲನೆ ನೀಡಲಾಯಿತು. ಶಾಲಾ ಮಕ್ಕಳು ಹಾಗೂ ಶಿಕ್ಷಕರು ಪಾಲ್ಗೊಂಡಿದ್ದ ಮೆರವಣಿಗೆ ಮೊಹರೆ ಹಣಮಂತ್ರಾಯ, ಅಂಬೇಡ್ಕರ್ ವೃತ್ತಗಳ ಮಾರ್ಗವಾಗಿ ಕಲ್ಯಾಣ ಮಂಟಪ ತಲುಪಿತು. ಇಲ್ಲಿ ಉಪನ್ಯಾಸ, ಪಾರಿತೋಷಕ ವಿತರಣೆಗಳು ಜರುಗಿದವು.ಈ ಎಲ್ಲ ಕಾರ್ಯಕ್ರಮಗಳಲ್ಲಿ ಪಟ್ಟಣ ಪಂಚಾಯಿತಿ ಸದಸ್ಯರಿಗೆ ತಹಶೀಲ್ದಾರ ಪ್ರಕಾಶ ಸಿಂದಗಿ ಆಹ್ವಾನ ನೀಡಿದ್ದರೂ ಬಹುತೇಕರು ಬರದೇ ಇದ್ದು, ಜೊತೆಗೆ ವಿವಿಧ ಇಲಾಖೆಗಳ ಅಧಿಕಾರಿಗಳು ಗೈರು ಹಾಜರಾಗಿದ್ದು ಕಂಡು ಬಂತು.ಕಾರ್ಯಕ್ರಮದಲ್ಲಿ ತಹಶೀಲ್ದಾರ ಪ್ರಕಾಶ ಸಿಂದಗಿ, ತಾಲ್ಲೂಕು ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್.ಎನ್.ಬಸವರಡ್ಡಿ, ದಲಿತ ಸಂಘರ್ಷ ಸಮೀತಿಯ ಪದಾಧಿಕಾರಿ ಪ್ರಕಾಶ ಗುಡಿಮನಿ ಮಾತನಾಡಿದರು.ಗ್ರೇಡ-೨ ತಹಶೀಲ್ದಾರ ಎಸ್.ಎಚ್.ರಾಠೋಡ, ಉಪತಹಶೀಲ್ದಾರ ಸುರೇಶ ಮ್ಯಾಗೇರಿ, ಪಟ್ಟಣ ಪಂಚಾಯಿತಿ ಕಿರಿಯ…

Read More

ಚಿಮ್ಮಡ: ಗ್ರಾಮದಲ್ಲಿ ನಿರ್ಮಿಸಲಾದ ದೊಡ್ಡ ಕೆರೆ ಅಂಗಳದಲ್ಲಿ ಸ್ಥಳಿಯ ಗ್ರಾಮ ಪಂಚಾಯತಿ ಹಾಗೂ ಸಾಮಾಜಿ ಅರಣ್ಯ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಸಸಿ ನೆಡುವ ಕಾರ್ಯಕ್ರಮ ಗುರುವಾರ ಆಯೋಜಿಸಲಾಗಿತ್ತು.ಲಕ್ಷ ವೃಕ್ಷ ಅಭಿಯಾಣ ಯೊಜನೆಯಡಿ ಸಸಿ ನೆಡುವ ಕಾರ್ಯಕ್ರಮಕ್ಕೆ ಸ್ಥಳಿಯ ಗ್ರಾಮ ಪಂಚಾಯತಿ ಅಧ್ಯಕ್ಷೆ ಶ್ರೀಮತಿ ಮಾಲಾ ಅಶೋಕ ಮೋಟಗಿಯವರು ಗ್ರಾಮದ ಕೆರೆ ಅಂಗಳದಲ್ಲಿ ವೃಕ್ಷ ನೆಡುವ ಮೂಲಕ ಚಾಲನೆ ನೀಡಿದರು.ಗ್ರಾಮದ ಕೆರೆ ಅಂಗಳ ಹಾಗೂ ಸುತ್ತಮುತ್ತಲಿನಲ್ಲಿ ಸುಮಾರು ೧೨೦೦ ಸಸಿ ನೆಡಲಾಗಿದ್ದು ಅವುಗಳನ್ನು ಗ್ರಾಮ ಪಂಚಾಯತಿ ಹಾಗೂ ಸಾಮಾಜಿಕ ಅರಣ್ಯ ಇಲಾಖೆಯಿಂದ ಪೋಷಿಸಿ ಬೆಳೆಸಲು ರೂಪುರೆಷೆ ತಯಾರಿಸಲಾಗಿದ್ದು ಒಂದೂ ಗಿಡ ಹಾಳಾಗದಂತೆ ಕ್ರಮ ಕೈಗೊಳ್ಳಲಾಗುವುದೆಂದು ಗ್ರಾಮ ಪಂಚಾಯತಿ ಅಧ್ಯಕ್ಷೆ ಶ್ರೀಮತಿ ಮಾಲಾ ಅಶೋಕ ಮೋಟಗಿಯವರು ತಿಳಿಸಿದರು.ಸಾಮಾಜಿಕ ಅರಣ್ಯ ಇಲಾಖೆಯ ಅಧಿಕಾರಿ ಮಹಾಂತೇಶ ಚಂಡಕಿ, ಗ್ರಾ.ಪಂ. ಸದಸ್ಯ ನಾಗಪ್ಪ ಆಲಕನೂರ, ಅಶೋಕ ಮೋಟಗಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Read More

ಡೆಂಗಿ ನಿಯಂತ್ರಣಕ್ಕೆ ಲಾರ್ವಾಹಾರಿ ಮೀನು ಬಿಡುವ ಕಾರ್ಯಕ್ರಮಕ್ಕೆಆರೋಗ್ಯ ಸಚಿವ ದಿನೇಶ ಗುಂಡೂರಾವ್ ಚಾಲನೆ ವಿಜಯಪುರ: ಡೆಂಗಿ ನಿಯಂತ್ರಣಕ್ಕಾಗಿ ರಾಜ್ಯದಾದ್ಯಂತ ಹಮ್ಮಿಕೊಂಡ ಪ್ರತಿ ಶುಕ್ರವಾರ ಈಡೀಸ್ ಲಾರ್ವಾ ನಿರ್ಮೂಲನಾ ದಿನ ಹಾಗೂ ಲಾರ್ವಾಹಾರಿ ಮೀನು ಬಿಡುಗಡೆ ಅಭಿಯಾನಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವರಾದ ದಿನೇಶ ಗುಂಡೂರಾವ್ ಅವರು ಶುಕ್ರವಾರ ನಗರದ ದರ್ಗಾ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಾಲನೆ ನೀಡಿದರು.ಇಂದು ನಗರದ ದರ್ಗಾ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹಮ್ಮಿಕೊಂಡ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ, ಈ ಕಾರ್ಯಕ್ರಮ ರಾಜ್ಯದಾದ್ಯಂತ ಏಕ ಕಾಲದಲ್ಲಿ ಪ್ರತಿ ಜಿಲ್ಲೆ, ತಾಲೂಕು ಮಟ್ಟಗಳಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಅಭಿಯಾನದ ಮೂಲಕ ಡೆಂಗಿ ರೋಗ ಹರಡದಂತೆ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಹೇಳಿದರು.ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಹಾಗೂ ಸ್ವಯಂ ಸೇವಾ ಸಂಸ್ಥೆಗಳೊಂದಿಗೆ ಸಮನ್ವಯತೆ ಸಾಧಿಸಿಕೊಂಡು ಡೆಂಗಿ ಜ್ವರದ ಹಾಗೂ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಪ್ರತಿ ಗ್ರಾಮದ ಮನೆ-ಮನೆಗಳಿಗೆ ತೆರಳಿ ಜನರಲ್ಲಿ ಜಾಗೃತಿ ಮೂಡಿಸಬೇಕು. ಸಾರ್ವಜನಿಕರಿಗೆ ಮನೆಯಲ್ಲಿರುವ ಪಾತ್ರೆಗಳಲ್ಲಿ ನೀರನ್ನು ಹೆಚ್ಚು…

Read More

ವಿಜಯಪುರ: ಶಾಲೆ ಕಾಲೇಜುಗಳಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಾಗು ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದವರಿಗೆ ಪ್ರತಿಭಾ ಪುರಸ್ಕಾರ ನೀಡುವುದರಿಂದ ಇತರ ವಿಧ್ಯಾರ್ಥಿಗಳಿಗೆ ಸ್ಪೂರ್ತಿ ಹಾಗು ಪ್ರೇರಣೆ ನೀಡುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲಿಕಾರ ಅಭಿಪ್ರಾಯ ವ್ಯಕ್ತಪಡಿಸಿದರು.ಶುಕ್ರವಾರ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತು ತಿಕೋಟಾ ಹಾಗು ಮುರಾರ್ಜಿ ದೇಸಾಯಿ ವಸತಿ ಶಾಲೆ ತಿಕೋಟಾ ಸಂಯುಕ್ತ ಆಶ್ರಯದಲ್ಲಿ ಮುರಾರ್ಜಿ ದೇಸಾಯಿ ವಸತಿ ಶಾಲೆ ತಿಕೋಟಾದಲ್ಲಿ ಜರುಗಿದ ತಿಕೋಟಾ ತಾಲೂಕಿನಲ್ಲಿ ಎಸ್ ಎಸ್ ಎಲ್ ಸಿ ಹಾಗು ಪಿಯುಸಿ ವಿಜ್ಞಾನ, ಕಲಾ. ವಾಣಿಜ್ಯ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಪ್ರಥಮ, ದ್ವಿತೀಯ, ತೃತೀಯ ಬಹುಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪುರಸ್ಕಾರ ಪ್ರದಾನ ಮಾಡುವದು ಸರ್ಕಾರ ಹಾಗು ಸಂಘ ಸಂಸ್ಥೆಗಳ ಕತ೯ವ್ಯವಾಗಿದೆ. ಇದರಿಂದ ಇತರ ವಿದ್ಯಾರ್ಥಿಗಳಿಗೆ ಪ್ರೇರಣೆ ಹಾಗು ಸ್ಪೂರ್ತಿ ನೀಡುತ್ತದೆ ಎಂದರು.ಸಾನ್ನಿಧ್ಯ ವಹಿಸಿದ್ದ ಖ್ಯಾತ ಕೀತ೯ನಕಾರ ಬಾಬುರಾವ ಮಹಾರಾಜ ಹೊನವಾಡ ಮಾತನಾಡಿ, ಮಕ್ಕಳು ಪಠ್ಯಕ್ರಮದ ಅನುಸಾರ ಪರಿಪೂರ್ಣ ಜ್ಞಾನ…

Read More

ದೇವರಹಿಪ್ಪರಗಿ: ಅಂಗನವಾಡಿ ಕೇಂದ್ರದ ಮೂಲಕ ನೀಡಲಾಗುತ್ತಿರುವ ಆರು ಸೇವೆಗಳಲ್ಲಿ ಶಾಲಾ ಪೂರ್ವ ಶಿಕ್ಷಣ ಅತ್ಯಂತ ಪ್ರಮುಖ ಸೇವೆಯಾಗಿದೆ ಎಂದು ಬಸವನಬಾಗೇವಾಡಿ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ನಿರ್ಮಲಾ ಸುರಪುರ ಹೇಳಿದರು.ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗುರುವಾರ ಉಜ್ವಲ ಗ್ರಾಮೀಣಾಭಿವೃದ್ಧಿ ಸೇವಾ ಸಂಸ್ಥೆ, ಶಿಕ್ಷಣಯಾತ್ರೆ, ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬಸವನ ಬಾಗೇವಾಡಿ ಇವರ ಸಹಯೋಗದಲ್ಲಿ ಜರುಗಿದ ಅಂಗನವಾಡಿ ಕಾರ್ಯಕರ್ತೆಯರ ಮೂರು ದಿನಗಳ ಶಾಲಾ ಪೂರ್ವ ಶಿಕ್ಷಣ ತರಬೇತಿಗೆ ಚಾಲನೆ ನೀಡಿ ಮಾತನಾಡಿದರು.ಅಂಗನವಾಡಿ ಕೇಂದ್ರಗಳಲ್ಲಿ ಶಾಲಾ ಪೂರ್ವ ಶಿಕ್ಷಣ ಸರಿಯಾಗಿ ಅನುಷ್ಠಾನಗೊಂಡರೇ, ಪಾಲಕರು ತಾವಾಗಿಯೇ ತಮ್ಮ ಮಕ್ಕಳನ್ನು ಅಂಗನವಾಡಿ ಕೇಂದ್ರಗಳಿಗೆ ಕಳಿಸುತ್ತಾರೆ. ಆದರೆ ಇಂದು ಅಂಗನವಾಡಿ ಕಾರ್ಯಕರ್ತೆಯರು ವಿವಿಧ ಇಲಾಖೆಯ ಸಹಯೋಗದ ಕಾರ್ಯಗಳನ್ನು ನಿರ್ವಹಿಸುತ್ತಿರುವುದರಿಂದ ಶಾಲಾ ಪೂರ್ವ ಶಿಕ್ಷಣದ ಅನುಷ್ಠಾನಕ್ಕೆ ಅಡಚಣೆಯುಂಟಾಗುತ್ತಿದೆ. ಅದಾಗ್ಯೂ ಕಾರ್ಯಕರ್ತೆಯರು ಈ ತರಬೇತಿಯನ್ನು ಪಡೆದು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಇದರಿಂದ ನಿಮಗೂ ಹಾಗೂ ಇಲಾಖೆಗೆ ಒಳ್ಳೆಯ ಹೆಸರು ಬರುವಂತಾಗುತ್ತದೆ ಎಂದರು.ಉಜ್ವಲ ಸಂಸ್ಥೆಯ ಸಂಯೋಜಕ ಸಾಗರ…

Read More