Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿಜಯಪುರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹೊಸದಾಗಿ ಮಂಜೂರಾದ ಮೆಟ್ರಿಕ್ ನಂತರದ ಬಾಲಕರ ವಸತಿನಿಲಯ(೧೦೦ ವಿದ್ಯಾರ್ಥಿಗಳು), ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯ(೧೦೦ ವಿದ್ಯಾರ್ಥಿಯರು)ಕ್ಕಾಗಿ ಬಾಡಿಗೆ ಕಟ್ಟಡಕ್ಕಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.ವಸತಿ ನಿಲಯಗಳ ಸಂಖ್ಯಾಬಲಕ್ಕೆ ಅನುಗುಣವಾಗಿ ಸಾಕಷ್ಟು ಸ್ಥಳಾವಕಾಶವಿರುವ ಸುಸಜ್ಜಿತ ಮೂಲಭೂತ ಸೌಕರ್ಯಗಳುಳ್ಳ ( ಹತ್ತು ವಿದ್ಯಾರ್ಥಿಗಳಿಗೆ ಒಂದರಂತೆ ಶೌಚಾಲಯ ಹಾಗೂ ಸ್ನಾನದ ಗೃಹಗಳು, ಸೋಲಾರ್ ವಾಟರ್ ಹೀಟರ್, ಸಾಕಷ್ಟು ಪ್ರಮಾಣದಲ್ಲಿ ನೀರು) ಕಟ್ಟಡಗಳ ಅವಶ್ಯಕತೆಯಿರುವುದರಿಮದ ಆಸಕ್ತಿಯುಳ್ಳ ಕಟ್ಟಡ ಮಾಲೀಕರು ಸರ್ಕಾರ ನಿಗಧಿ ಪಡಿಸಿದ ಮಿತಿಯಲ್ಲಿ ಬಾಡಿಗೆ ಮೊತ್ತಕ್ಕೆ ಬಾಡಿಗೆ ರೂಪದಲ್ಲಿ ಕೊಡಲು ಇಚ್ಚಿಸಿದಲ್ಲಿ ಜುಲೈ ೫ರ ಒಳಗಾಗಿ ತಾಲೂಕ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಡಿ.ದೇವರಾಜ ಅರಸು ಭವನ, ಜಿಲ್ಲಾ ಪಂಚಾಯತ್ ಕಚೇರಿ ಹತ್ತಿರ ಕನಕದಾಸ ಬಡಾವಣೆ ಇವರಿಗೆ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು.ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ೦೮೩೫೨-೨೬೭೯೯೩ ಹಾಗೂ ಮೊಬೈಲ್ ಸಂಖ್ಯೆ: ೯೬೧೧೫೧೮೪೭೬ನ್ನು ಸಂಪರ್ಕಿಸಬಹುದು ಎಂದು ವಿಜಯಪುರ ತಾಲೂಕಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ…
ವಿಜಯಪುರ: ೨೦೨೪-೨೫ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗಾಗಿ ಆನ್‌ಲೈನ್ ಅರ್ಜಿಯನ್ನು ಆಹ್ವಾನಿಸಲಾಗಿದೆ. ಜುಲೈ ೨೦ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು ವಿದ್ಯಾರ್ಥಿಗಳ ತಮ್ಮ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು ಎಂದು ವಿಜಯಪುರ ತಾಲೂಕ ಹಿಂದುಳಿದ ವರ್ಗಗಳ ಕಲ್ಯಾಣಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರ: ಕರ್ನಾಟಕ ಜಾನಪದ ಅಕಾಡೆಮಿಯ ವತಿಯಿಂದ ೨೦೨೨ (ದಿನಾಂಕ೧-೧-೨೦೨೨ ರಿಂದ ೩೧-೧೨-೨೦೨೨ರವರೆಗೆ) ಹಾಗೂ ೨೦೨೩ನೇ (೧-೧-೨೦೨೩ರಿಂದ ೩೧-೧೨-೨೦೨೩ರವರಗೆ) ಸಾಲಿನಲ್ಲಿ ಪ್ರಥಮ ಆವೃತ್ತಿಯಲ್ಲಿ ಮುದ್ರಣಗೊಂಡಿರುವ(ತಾಂತ್ರಿಕ ಹಾಗೂ ಪೂರ್ವಭಾವಿ ಪುಟಗಳನ್ನು ಹೊರತುಪಡಿಸಿ) ಕನಿಷ್ಠ ೧೫೦ ಪುಟಗಳಿಗೂ ಮೇಲ್ಪಟ್ಟಿರುವಂತೆ ಜನಪದ ಗದ್ಯ, ಜನಪದ ಪದ್ಯ, ಜನಪದ ವಿಚಾರ-ವಿಮರ್ಶೆ-ಸಂಶೋಧನೆ, ಜನಪದ ಸಂಕೀಣ ಈ ನಾಲ್ಕು ಪ್ರಕಾರಗಳ ಜಾನಪದ ಕೃತಿಗಳಿಗೆ ಬಹುಮಾನ ನೀಡುವ ಯೋಜನೆಯಡಿಯಲ್ಲಿ ಜಾನಪದ ಕೃತಿಗಳ ಪುಸ್ತಕ ಬಹುಮಾನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.ಲೇಖಕರು, ಪ್ರಕಾಶಕರು, ಸಂಪಾದಕರು ೪ ಕೃತಿಗಳನ್ನು ದ್ವಪ್ರತಿ ಬಿಲ್ಲಿನೊಂದಿಗೆ ರಿಜಿಸ್ಟಾರ್, ಕರ್ನಾಟಕ ಜಾನಪದ ಅಕಾಡೆಮಿ, ೨ನೇ ಮಹಡಿ ಜೆ.ಸಿ. ರಸ್ತೆ ಬೆಂಗಳುರು-೫೬೦೦೦೨ ಇವರಿಗೆ ಜುಲೈ ೨ರ ಒಳಗೆ ತಲುಪುವಂತೆ ಖುದ್ದಾಗಿ ಕೊರಿಯರ್ ಅಥವಾ ಅಂಚೆ ಮೂಲಕ ಕಳಿಹಿಸಬೇಕು ಎಂದು ವಿಜಯಪುರ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರ: ೨೦೨೪-೨೫ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ದಾಳಿಂಬೆ, ಲಿಂಬೆ, ಹಾಗೂ ದ್ರಾಕ್ಷಿ ಬೆಳೆಗೆ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿವಾ ಯೋಜನೆಯನ್ನು ಅನುಷ್ಠಾನಗೊಳಿಸಲು ಅಧಿಸೂಚಿಸಲಾಗಿದೆ.ಬೆಳೆಸಾಲ ಪಡೆದ ರೈತರು ಹಾಗೂ ಬೆಳೆ ಸಾಲ ಪಡೆಯದೆ ಇರುವ ರೈತರು ತಮ್ಮ ಆಧಾರ್ ಕಾರ್ಡ್ ಝರಾಕ್ಸ್, ಪಹಣಿ ಪತ್ರಿಕೆ ಹಾಗೂ ಬ್ಯಾಂಕ್ ಪಾಸ್‌ಬುಕ್ ಪ್ರತಿಯೊಂದಿಗೆ ಹತ್ತಿರದ ಬ್ಯಾಂಕ್‌ಗಳಲ್ಲಿ ಅಥವಾ ಗ್ರಾಮ ಒನ್ ಕೇಂದ್ರ, ಸಿಎಸ್‌ಸಿ ಸೆಂಟರ್‌ಗಳಲ್ಲಿ ವಿಮಾ ಯೋಜನೆಯಡಿ ನೋಂದಾಯಿಸಿಕೊಳ್ಳಬೇಕು.ದ್ರಾಕ್ಷಿ ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಲು ಜಿಲೈ ೧೫ ಕೊನೆಯ ದಿನವಾಗಿರುತ್ತದೆ. ರೈತರು ಪಾವತಿಸಬೇಕಾದ ವಿಮಾ ಕಂತಿನ ಮೊತ್ತ ೧೪೦೦ ರೂ.ಗಳಾಗುರುತ್ತದೆ. ದಾಳಿಂಬೆ ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಲು ಜುಲೈ ೧ ಕೊನೆಯದಿನವಾಗುದ್ದು, ರೈತರು ೬,೩೫೦ರೂ.ಗಳನ್ನು ವಿಮಾಕಂತು ತುಂಬಬೇಕು. ಹಾಗೂ ಲಿಂಬೆ ಬೆಳೆಗೆ ವಿಮೆ ನೋಂದಾಯಿಸಿಕೊಳ್ಳಲು ಜುಲೈ ೧ ಕೊನೆಯದಿನವಾಗಿದ್ದು, ವಿಮಾ ಕಂತಿನ ಮೊತ್ತ ೨೮೦೦ರೂ ಗಳನ್ನು ಪಾವತಿಸಬೇಕು.ಹೆಚ್ಚಿನ ಮಾಹಿತಿಗಾಗಿ ಹತ್ತಿರದ ತೋಟಗಾರಿಕೆ ಇಲಾಖೆ, ರೈತ ಸಂಪರ್ಕ ಕೇಂದ್ರ, ಬ್ಯಾಂಕ್, ಹಾಗೂ ಪವಿತ್ರಾ, ಅಗ್ರಿಕಲ್ಚರಲ್ ಇನ್ಸುರನ್ಸ್ ಕಂಪನಿ ವಿಮಾ…
ವಿಜಯಪುರ: ಜಿಲ್ಲೆಯ ಯುವಕ ಯುವತಿಯರಿಗೆ ಉದ್ಯೋಗ ಕೌಶಲ್ಯ ತರಬೇತಿ ನೀಡುವುದರ ಜೊತೆಗೆ ಸ್ವಯಂ ಉದ್ಯೋಗ ಸ್ಥಾಪನೆ ಮಾಡುವಂತೆ ಪ್ರೇರೆಪಿಸಬೇಕು ಎಂದು ಕನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಕಾಂತಾ ನಾಯಕ ಅವರು ಹೇಳಿದರು.ಶುಕ್ರವಾರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜಿಲ್ಲೆಯಲ್ಲಿ ೯ ಬೃಹತ್ ಪ್ರಮಾಣದ ಸಕ್ಕರೆ ಕಾರ್ಖಾನೆಗಳಿದ್ದು, ೨೦೨೨-೨೩ನೇ ಸಾಲಿನಲ್ಲಿ ಒಟ್ಟು ೯,೪೭೬ ಉದ್ಯಮಗಳು ನೋಂದಣಿಯಾಗಿರುತ್ತವೆ. ಕೌಶಲ್ವಾಭಿವೃದ್ಧಿ ಇಲಾಖೆಯೆ ಮುಖಾಂತರ ನಿರುದ್ಯೋಗಿ ಯುವಕ/ಯುವತಿಯರಿಗೆ ಅವರ ಅನುಭವ ಕೌಶಲ್ಯಗಳ ಆಧಾರದ ಮೇಲೆ ತರಬೇತಿಯನ್ನು ನೀಡಿ ಉದ್ಯೋಗ ಸೃಷ್ಟಿಗೆ ಕಾರ್ಯಪ್ರವೃತ್ತರಾಗಬೇಕು ಎಂದು ಹೇಳಿದರು.ತರಬೇತಿಯೂ ಕೇವಲ ಉದ್ಯೋಗ ಕೊಡಿಸುವುದಷ್ಟೇ ಗುರಿಯಾಗಿರಬಾರದು, ಆತ್ಮ ವಿಶ್ವಾಸ ಬೆಳಸಿ ಅವರನ್ನು ಯಶಸ್ವಿ ಉದ್ಯಮಿಯಾಗಿ ಜೀವನ ನಡೆಸುವಂತೆ ಸ್ಪೂರ್ತಿದಾಯಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅವರ ಬೇಡಿಕೆಯನುಸಾರವಾಗಿ ವಿವಿಧ ತರಬೇತಿಗಳನ್ನು ನೀಡುವಲ್ಲಿ ಎಲ್ಲಾ ಇಲಾಖೆಗಳು ಸಮನ್ವಯತೆ ಸಾಧಿಸಿಬೇಕು ಎಂದರು.ಜಿಲ್ಲೆಯಲ್ಲಿ ಸ್ಥಾಪನೆಗೊಂಡಿರುವ ಉದ್ಯಮ, ಇಂಡಸ್ಟಿçಗಳಲ್ಲಿ ಸ್ಥಳೀಯ ಜನರಿಗೆ ಆಧ್ಯತೆಯನ್ನು ನೀಡಬೇಕು. ಜಿಲ್ಲೆಯಲ್ಲಿ ನಿರುದ್ಯೋಗ ಪ್ರಮಾಣ…
ಬಸವನಬಾಗೇವಾಡಿ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗ್ರಾಮಾಡಳಿತಾಧಿಕಾರಿಗಳ ಸಂಘಕ್ಕೆ ರಾಜ್ಯ ಉಪಾಧ್ಯಕ್ಷರಾಗಿ ಆಯ್ಕೆಯಾದ ಸ್ಥಳೀಯ ಗ್ರಾಮಾಡಳಿತಾಧಿಕಾರಿ ಸಂತೋಷ ಕುಂಟೋಜಿ ಅವರನ್ನು ಗುರುವಾರ ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಸನ್ಮಾನಿಸಿದರು.ಈ ಸಂದರ್ಭದಲ್ಲಿ ಕಂದಾಯ ನಿರೀಕ್ಷಕರಾದ ಸಂತೋಷ ದೇಸಾಯಿ, ಜಿ.ಟಿ.ನಾಯಕ, ಜಗದೀಶ ಹಾರಿವಾಳ, ಗ್ರಾಮಾಡಳಿತಾಧಿಕಾರಿಗಳಾದ ರಮಾನಂದ ಚಕ್ಕಡಿ, ಅನಿಲ ಚವ್ಹಾಣ, ಲೋಹಿತ ಬೈರಗೊಂಡ, ರೆಹಮಾನ ಕನಾಮೇಶ್ವರ, ಶಿವಾನಂದ ಹಳ್ಳೂರ, ಅಂಜುಮ ಅವಟಿ ಇತರರು ಇದ್ದರು.
ಬಸವನಬಾಗೇವಾಡಿ: ಪ್ರಾಥಮಿಕ ಹಂತದಲ್ಲಿಯೇ ವಿದ್ಯಾರ್ಥಿಗಳಿಗೆ ಶಿಸ್ತು, ದೇಶಪ್ರೇಮ, ಭಾವೈಕ್ಯತೆ ಮೂಡಿಸಲು ಭಾರತ ಸೇವಾದಳದ ಘಟಕಗಳನ್ನು ಪ್ರಾಥಮಿಕ ಶಾಲಾ ಹಂತದಿಂದ ಆರಂಭಿಸಿರುವುದು ಶ್ಲಾಘನೀಯ ಎಂದು ಕ್ಷೇತ್ರಸಮನ್ವಾಧಿಕಾರಿ ಪಿ.ಯು.ರಾಠೋಡ ಹೇಳಿದರು.ಪಟ್ಟಣದ ಬಸವೇಶ್ವರ ಸರ್ಕಾರಿ ಪದವಿಪೂರ್ವ ಕಾಲೇಜಿನ ಆವರಣದಲ್ಲಿರುವ ಭಾರತ ಸೇವಾದಳದ ಕಾರ್ಯಾಲಯದಲ್ಲಿ ಭಾರತ ಸೇವಾದಳದ ಜಿಲ್ಲಾ ಹಾಗೂ ತಾಲೂಕು ಸಮಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಹಯೋಗದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಭಾರತ ಸೇವಾದಳದ ಶಿಕ್ಷಕರ ಪುನಶ್ಚೇತನ ಕಾರ್ಯಕ್ರಮದಲ್ಲಿ ಡಾ. ನಾ.ಸು.ಹರ್ಡೇಕರ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಅರ್ಪಿಸಿದ ನಂತರ ಮಾತನಾಡಿದ ಅವರು, ಭಾರತ ಸೇವಾದಳ ಸೇರಲು ವಿದ್ಯಾರ್ಥಿಗಳು ದೈಹಿಕ,ಭೌತಿಕವಾಗಿ ಸದೃಢರಾಗಿರಬೇಕು. ಅಲ್ಲದೇ ಮಾನಸಿಕ ಸ್ವಾಸ್ಥ್ಯದಿಂದ ಇರಬೇಕು. ಭಾರತ ಸೇವಾದಳದಿಂದ ರಾಷ್ಟ್ರಗೀತೆ, ರಾಷ್ಟ್ರಧ್ವಜಕ್ಕೆ ಗೌರವ ನೀಡುವುದು, ಸಹೋದರತೆ, ಭಾವೈಕ್ಯತೆ, ನಾಯಕತ್ವ ಗುಣ, ಸಮಾನತೆ, ಸರಳತೆ, ಪ್ರಾಮಾಣಿಕತೆ, ದೇಶಪ್ರೇಮ,ಶಿಸ್ತು ಸೇರಿದಂತೆ ಅನೇಕ ಗುಣಗಳನ್ನು ವಿದ್ಯಾರ್ಥಿಗಳು ಕಲಿತುಕೊಳ್ಳುತ್ತಾರೆ. ಭಾರತ ಸೇವಾದಳದ ಶಿಕ್ಷಕರು ಇಂತಹ ಗುಣಗಳನ್ನು ವಿದ್ಯಾರ್ಥಿಗಳಲ್ಲಿ ಮೈಗೂಡಿಸಬೇಕೆಂದರು.ಕಾರ್ಯಕ್ರಮ ಉದ್ಘಾಟಿಸಿದ ಭಾರತ ಸೇವಾದಳದ ಕೇಂದ್ರ ಸಮಿತಿ ಸದಸ್ಯ ಶಿವನಗೌಡ ಬಿರಾದಾರ…
“ಪ್ರಬುಧ್ಧ ಮನಸ್ಸು ಪ್ರಬುಧ್ಧ ಸಮಾಜ”- ವಿವೇಕಾನಂದ. ಎಚ್. ಕೆ. ಬೆಂಗಳೂರು ಸಾಮಾಜಿಕ ಜಾಲತಾಣಗಳು ಕನ್ನಡ ಭಾಷೆ ಮತ್ತು ಸಾಹಿತ್ಯದ ಮೇಲೆ ಬೀರಿದ ಪ್ರಭಾವ..ಸುಮಾರು 10/15 ವರ್ಷಗಳ ಹಿಂದೆ ಇದ್ದ ಕನ್ನಡ ಭಾಷೆ ಮತ್ತು ಸಾಹಿತ್ಯದ ಬಗೆಗಿನ ಆತಂಕ ಈಗ ಅಷ್ಟಾಗಿ ಕಾಣುತ್ತಿಲ್ಲ. ಫೇಸ್ ಬುಕ್, ವಾಟ್ಸ್ ಆಪ್, ಎಕ್ಸ್, ಇನ್ಸ್ಟಾಗ್ರಾಂ ಮುಂತಾದ ಜಾಲತಾಣಗಳ ಸಂಪರ್ಕ ಕ್ರಾಂತಿಯಿಂದ ಆದ ಕೆಲವು ಒಳ್ಳೆಯ ಬೆಳವಣಿಗೆಗಳಲ್ಲಿ ಕನ್ನಡ ಭಾಷೆ ಮತ್ತು ಸಾಹಿತ್ಯಕ್ಕೆ ಬಹಳ ಉಪಯೋಗವಾಗಿದೆ ಎಂಬುದನ್ನು ಗಮನಿಸಬಹುದು.ಮೊದಲೆಲ್ಲಾ ಕೇವಲ ಪತ್ರಿಕೆಗಳು, ನಿಯತಕಾಲಿಕೆಗಳು, ಒಂದಷ್ಟು ಸಾಂಸ್ಕೃತಿಕ ವೇದಿಕೆಗಳು, ಪ್ರಕಾಶನಗಳು ಮತ್ತು ಬೆರಳೆಣಿಕೆಯ ಬರಹಗಾರರು ಬಿಟ್ಟರೆ ಸಾಮಾನ್ಯರಿಂದ ಸಾಹಿತ್ಯ ದೂರವೇ ಇತ್ತು. ಸಿನಿಮಾ ಜನಪ್ರಿಯತೆಗೆ ಹೋಲಿಸಿದರೆ ಸಾಹಿತ್ಯ ಕೆಲವೇ ಜನರ ಆಸಕ್ತಿದಾಯಕ ಕ್ಷೇತ್ರವಾಗಿತ್ತು. ಆದರೆ ಈಗ ನೋಡಿ ಸಾಮಾನ್ಯ ಜನರೂ ತಮ್ಮ ಭಾವನೆ ಅಭಿಪ್ರಾಯಗಳನ್ನು ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಅದೂ ಕನ್ನಡದಲ್ಲಿಯೇ ವ್ಯಕ್ತಪಡಿಸುತ್ತಿದ್ದಾರೆ. ಕೆಲವು ಯುವ ಪ್ರತಿಭೆಗಳಂತೂ ಮೂಕವಿಸ್ಮಿತರಾಗುವಂತೆ ತಮ್ಮ ಬರಹಗಳನ್ನು ಮೂಡಿಸುತ್ತಿದ್ದಾರೆ. ಅವರ ಭಾಷೆ, ಕಲ್ಪನೆ, ನಿರೂಪಣೆ…
ಕೆಂಭಾವಿ: ಪಟ್ಟಣವು ಸೇರಿದಂತೆ ವಲಯದಲ್ಲಿರುವ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ ಓದುತ್ತಿರುವ ಮಕ್ಕಳ ದಾಖಲಾತಿ ಸಮಗ್ರ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ ಹೋರಾಟಗಾರ ಗೋಪಾಲ ಕಟ್ಟಿಮನಿ ಒತ್ತಾಯಿಸಿದ್ದಾರೆ.ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ಮಕ್ಕಳ ಅಧಿಕೃತ ದಾಖಲಾತಿ ಬಹುತೇಕ ಸರ್ಕಾರಿ ಶಾಲೆಗಳಲ್ಲಿ ಇದ್ದು ಅಂತಹ ಮಕ್ಕಳೇ ಖಾಸಗಿ ಶಾಲೆಗಳಿಗೆ ಓದಲು ತೆರಳುತ್ತಿರುವ ಸನ್ನಿವೇಶ ಕಂಡು ಬರುತ್ತಿದೆ. ಇದಕ್ಕೆ ನೇರ ಹೊಣೆ ಸರ್ಕಾರಿ ಶಾಲೆಗಳ ಮುಖ್ಯ ಶಿಕ್ಷಕರು, ಏಕೆಂದರೆ ಮಕ್ಕಳ ದಾಖಲಾತಿ ತೋರಿಸಿ ಬಿಸಿಯೂಟಕ್ಕೆ ಬೇಕಾದ ಸಾಮಗ್ರಿಗಳ ಖರೀದಿ ಮಾಡುತ್ತಾರೆ. ಇಲ್ಲಿ ಸಾಕಷ್ಟು ಲೋಪ ದೋಷಗಳು ಕಂಡರು ಕಣ್ಮುಚ್ಚಿ ಕುಳಿತ ಇಲಾಖೆ. ಹಣ ಗಳಿಸಲು ಮುಂದಾದ ಖಾಸಗಿ ಶಿಕ್ಷಣ ಸಂಸ್ಥೆಗಳು ಅಂತಹ ಮಕ್ಕಳನ್ನು ಶಾಲೆಗೆ ಬರಮಾಡಿಕೊಳ್ಳುತ್ತಿವೆ. ಇದು ಮಕ್ಕಳು ಕಲಿಕೆಯ ಮೇಲೆ ದುಷ್ಪರಿಣಾಮ ಬೀರಲಿದೆ. ಕಾರಣ ಇದರ ಸಮಗ್ರ ತನಿಖೆ ನಡೆಸಿ ಇದಕ್ಕೆ ಸಹಕಾರ ನೀಡುತ್ತಿರುವ ಶಾಲಾ ಶಿಕ್ಷಕರು ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳ ಮೇಲೆ ಕಾನೂನು…
ವಿಜಯಪುರ: ನಗರದ ಪ್ರತಿಷ್ಠಿತ ಬಿ. ಎಲ್. ಡಿ. ಇ ಆಸ್ಪತ್ರೆಗೆ ಹೆರಿಗೆಗೆ ಆಗಮಿಸುವ ಗರ್ಭಿಣಿ ಮಹಿಳೆಯರಿಗೆ ಉಚಿತ ಚಿಕಿತ್ಸೆ ವ್ಯವಸ್ಥೆ ಕಲ್ಲಿಸಲಾಗಿದೆ.ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದ ವೈದ್ಯಕೀಯ ಅಧೀಕ್ಷಕ ಡಾ. ರಾಜೇಶ ಹೊನ್ನುಟಗಿ, ಹೆರಿಗೆಗೆ ಆಸ್ಪತ್ರೆಗೆ ಆಗಮಿಸುವ ಮಹಿಳೆಯರಿಗೆ ಉಚಿತ ಹೆರಿಗೆ ಸೇರಿದಂತೆ ಇತರ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.ಬಿ. ಎಲ್. ಡಿ. ಇ ಡೀಮ್ಡ್ ವಿಶ್ವವಿದ್ಯಾಲಯದ ಕುಲಾಧಿಪತಿಪತಿ ಮತ್ತು ಸಚಿವರೂ ಆಗಿರುವ ಎಂ. ಬಿ. ಪಾಟೀಲ ಅವರು, ಕೊರೊನಾ ಸಂದರ್ಭದಲ್ಲಿ ಸರಕಾರ ನಿಗದಿ ಪಡಿಸಿದ ದರಕ್ಕಿಂತಲೂ ಕಡಿಮೆ ದರದಲ್ಲಿ ಚಿಕಿತ್ಸೆ ಮತ್ತು ಬಹಳಷ್ಟು ಜನರಿಗೆ ಉಚಿತ ಚಿಕಿತ್ಸೆ ಒದಗಿಸಿ ಮಾದರಿ ಕಾರ್ಯ ಮಾಡಿದ್ದರು. ರೋಗಿಗಳ ಸೇವೆಯಲ್ಲಿ ಸದಾ ಮುಂಚೂಣಿಯಲ್ಲಿರುವ ಆಸ್ಪತ್ರೆ ಈಗ ಈಗ ಅವರ ಸೂಚನೆಯಂತೆ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಉಪಯೋಗವಾಗಲು ಮತ್ತೋಂದು ಕಾರ್ಯಕ್ರಮ ರೂಪಿಸಲಾಗಿದೆ ಎಂದು ಅವರು…
