Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿಜಯಪುರ: ನಾಡಪ್ರಭು ಕೆಂಪೇಗೌಡರು ಆಧುನಿಕ ಬೆಂಗಳೂರಿನ ಮೂಲ ಶಿಲ್ಪಿ. ಆಧುನಿಕ ಬೆಂಗಳೂರಿನ ನಿರ್ಮಾತೃ ಆಗಿರುವ ಇವರು ವಿಜಯನಗರ ಸಾಮ್ರಾಜ್ಯದಲ್ಲಿ ಮುಖ್ಯಸ್ಥರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದರು. ಗೌಡ ವಂಶಸ್ಥರಾದ ಇವರು ಆ ಕಾಲದಲ್ಲಿ ಅತ್ಯಂತ ವಿದ್ಯಾವಂತ ಯಶಸ್ವಿ ಆಡಳಿತಗಾರರಲ್ಲಿ ಒಬ್ಬರು ಎಂದು ಗುರುತಿಸಿಕೊಂಡಿದ್ದರು ಎಂದು ಬಂಜಾರಾ ಪ್ರೌಢ ಶಾಲೆಯ ಪ್ರಭಾರಿ ಮುಖ್ಯ ಗುರು ಎಸ್.ವ್ಹಿ.ದೇಶಪಾಂಡೆ ಹೇಳಿದರು.ಗುರುವಾರದಂದು ಜಿಲ್ಲಾ ಬಂಜಾರಾ ವಿದ್ಯಾವರ್ಧಕ ಸಂಘದ ಬಂಜಾರಾ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ “ನಾಡಪ್ರಭು ಕೆಂಪೇಗೌಡರ ಜಯಂತಿ’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವೇಗವಾಗಿ ಬೆಳೆಯುತ್ತಿರುವ ರಾಜ್ಯ ರಾಜ್ಯಧಾನಿ ಬೆಂಗಳೂರು ಇವತ್ತು ಕೋಟ್ಯಂತರ ಜನರ ಆಶ್ರಯತಾಣವಾಗಿದೆ. ಇಲ್ಲಿಯವರಿಗಿಂತ ಹೆಚ್ಚು ಮಂದಿ ಹೊರಗಿನಿಂದ ಬಂದು ಇಲ್ಲಿ ತಮ್ಮ ಬದುಕನ್ನು ಕಟ್ಟಿಕೊಂಡಿದ್ದಾರೆ. ಅತ್ಯಂತ ಸುರಕ್ಷಿತ, ಸುಂದರ ಮತ್ತು ಸುಸಜ್ಜಿತ ನಗರವಾಗಿ ಬೆಂಗಳೂರು ಬೆಳೆಯಲು ಕೆಂಪೇಗೌಡಅವರ ವಿವೇಚನೆ ಮತ್ತು ದೂರದೃಷ್ಟಿಯೇ ಮುಖ್ಯಕಾರಣ ಎಂದು ಹೇಳಿದರು.ಈ ಸಂದರ್ಭದಲ್ಲಿ ಎಸ್.ಕೆ.ಶಿಂಧೆಯವರು ಮಾತನಾಡುತ್ತ, ಕೆಂಪೇಗೌಡರು ೧೫೩೭ ರಲ್ಲಿ ಕರ್ನಾಟಕದ ರಾಜಧಾನಿ ಬೆಂಗಳೂರನ್ನು ಯಶಸ್ವಿಯಾಗಿ…
ಇಂಡಿ: ಕರ್ನಾಟಕ ರಾಜ್ಯ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6 ರಿಂದ 8ನೇ ತರಗತಿ) ಸಂಘಕ್ಕೆ ಸರ್ಕಾರವು ಮಾನ್ಯತೆ ನೀಡಿದ್ದು ಅತೀವ ಸಂತಸ ತಂದಿದೆ ಎಂದು ಜಿಪಿಟಿ ಸಂಘದ ತಾಲ್ಲೂಕು ಅಧ್ಯಕ್ಷ ಶಂಕರ್ ಕೋಳೆಕರ ಹೇಳಿದರು.ಪಟ್ಟಣದ ತಾಲ್ಲೂಕು ಕ್ಷೇತ್ರ ಶಿಕ್ಷಣ ಇಲಾಖೆ ಕಾರ್ಯಾಲಯದಲ್ಲಿ ಕರ್ನಾಟಕ ರಾಜ್ಯ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದಬಿಇಓ ಟಿ ಎಸ್ ಆಲಗೂರ ಅವರಿಗೆ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.ಮಾನ್ಯತೆಗಾಗಿ ಶಿಕ್ಷಕರ ಸಂಘದ ಅಧ್ಯಕ್ಷರು ಶಾಲಾ ಶಿಕ್ಷಣ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದ್ದರು. ಕರ್ನಾಟಕ ಸಿವಿಲ್ ಸೇವಾ (ಸೇವಾ ಸಂಘಗಳ ಮಾನ್ಯತೆ) ಸಂಘಗಳ ಮಾನ್ಯತೆ ನಿಯಮಗಳು-2015 ರ ಅನ್ವಯ ಮಾನ್ಯತೆ ಹೊಂದಲು ಅರ್ಹತೆ ಹೊಂದಿರುತ್ತಾರೆ ಎಂದು ಶಾಲಾ ಶಿಕ್ಷಣ ಆಯುಕ್ತರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಈ ಪ್ರಸ್ತಾವನೆಯನ್ನು ಪರಿಶೀಲಿಸಿದ ಬಳಿಕ ಸರ್ಕಾರವು ಸಂಘಕ್ಕೆ ಮಾನ್ಯತೆ ನೀಡಿದ್ದು ಅತೀವ ಸಂತಸ ತಂದಿದೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಇಂಡಿ ತಾಲೂಕ ಅಧ್ಯಕ್ಷ ಎಸ್…
ಇಂಡಿ: ರಾಜ್ಯ ರಾಜ್ಯಧಾನಿ ಬೆಂಗಳೂರು ಇವತ್ತು ಕೋಟ್ಯಾಂತರ ಜನರ ಆಶ್ರಯತಾಣವಾಗಿದೆ. ಇಲ್ಲಿನವರಿಗಿಂತ ಹೆಚ್ಚು ಮಂದಿ ಹೊರಗಿನಿಂದ ಬಂದು ಇಲ್ಲಿ ತಮ್ಮ ಬದುಕನ್ನು ಕಟ್ಟಿಕೊಂಡಿದ್ದಾರೆ. ಅತ್ಯಂತ ಸುರಕ್ಷಿತ, ಸುಂದರ ಮತ್ತು ಸುಸಜ್ಜಿತ ನಗರವಾಗಿ ಬೆಂಗಳೂರು ಬೆಳೆಯಲು ಕೆಂಪೇಗೌಡ ಅವರ ವಿವೇಚನೆ ಮತ್ತು ದೂರದೃಷ್ಟಿಯೇ ಮುಖ್ಯಕಾರಣ ಎಂದು ಕಂದಾಯ ಉಪವಿಭಾಗ ಅಧಿಕಾರಿ ಅಬೀದ್ ಗದ್ಯಾಳ ಹೇಳಿದರು.ಪಟ್ಟಣದ ವಿಜಯಪುರ ರಸ್ತೆಯಲ್ಲಿರುವ ಆದರ್ಶ ಶಾಲೆಯಲ್ಲಿ, ತಾಲ್ಲೂಕು ಆಡಳಿತ ವತಿಯಿಂದ ಆಯೋಜಿಸಿದ್ದ ನಾಡುಪ್ರಭು ಕೆಂಪೇಗೌಡ ಜಯಂತಿ ನಿಮತ್ಯವಾಗಿ ಭಾವಚಿತ್ರಕ್ಕೆ ಪುಷ್ಪಾರ್ಚಾಣೆ ಮಾಡಿ ಮಾತನಾಡಿದರು.ಜನಮಾನಸದಲ್ಲಿ ಶಾಶ್ವತವಾಗಿ ನೆಲೆಯಾಗಿರುವ ಕೆಂಪೇಗೌಡ ಜಾತ್ಯಾತೀತ ಸಮಾಜದ ನೆಮ್ಮದಿ ಬದುಕಿಗೆ ಅದ್ವಿತೀಯ ಕೊಡುಗೆ ನೀಡಿದ ಮಹಾನ ನಾಯಕರು.ಕೆಂಪೇಗೌಡರು ಬೆಂಗಳೂರು ನಗರವನ್ನು ನಿರ್ಮಿಸುವಾಗಲೇ ಪ್ರತಿಯೊಂದು ಜನಾಂಗದ ಕುಲಕಸುಬು ಹಾಗೂ ಹಾಗೂ ವೃತ್ತಿ ಆಧಾರಿತವಾದ 54 ಪೇಟೆಗಳನ್ನು ನಿರ್ಮಿಸಿದರು. ಇದರಿಂದ ಎಲ್ಲಾ ಸಮುದಾಯದ ಬಡಕುಟಂಬಗಳ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಸಾಧ್ಯವಾಯಿತು. ಅಕ್ಕಿಪೇಟೆ, ಅರಳೇಪೇಟೆ, ತಿಗಳರಪೇಟೆ, ರಾಗಿಪೇಟೆ, ಗೊಲ್ಲರಪೇಟೆ ಹೀಗೆ ಮುಂತಾದ ಪೇಟೆಗಳನ್ನು ನಿರ್ಮಿಸಿರುವುದು ಅವರ ಸರ್ವ ಜನಾಂಗದ ಅಭ್ಯುದಯದ…
ಇಂಡಿ: ಶಿಕ್ಷಕರು ಪ್ರತಿ ಶಾಲೆಯಲ್ಲಿ ಸೇವಾದಳದ ಘಟಕವನ್ನು ಸ್ಥಾಪಿಸಿ, ಮಕ್ಕಳಲ್ಲಿ ರಾಷ್ಟ್ರಭಕ್ತಿ, ಶಿಸ್ತು ಹಾಗೂ ಸಾಮಾಜಿಕ ಜೀವನ ನಿರ್ವಹಣೆಯ ಪಾಠ ಅರಿಯಲು ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದು ತಾಲೂಕ ಭಾರತ ಸೇವಾದಳದ ಅಧ್ಯಕ್ಷ ಕೆ ಪಿ ಭೈರಜಿ ಹೇಳಿದರು.ಪಟ್ಟಣದ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾರತ ಸೇವಾದಳ ಜಿಲ್ಲಾ ಸಮಿತಿ, ತಾಲೂಕು ಘಟಕ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಹಯೋಗದಲ್ಲಿ ನಡೆದ ಶಿಕ್ಷಕ, ಶಿಕ್ಷಕಿಯರ ಒಂದು ದಿನದ ಮಿಲಾಪ್ ಶಿಬಿರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಸಂಪನ್ಮೂಲ ವ್ಯಕ್ತಿ ಅಂಬಣ್ಣ ಸುಣಗಾರ ಮಾತನಾಡಿ, ಶಿಕ್ಷಕ ಸಮುದಾಯ ಸೇವಾ ಮತ್ತು ಅರ್ಪಣಾ ಮನೋಭಾವದಿಂದ ಕಾರ್ಯ ನಿರ್ವಹಿಸುವ ಮೂಲಕ ಭಾರತ ಸೇವಾದಳವನ್ನು ಉಳಿಸಿ ಬೆಳೆಸಬೇಕು ಎಂದು ಹೇಳಿದರು.ಶಿಕ್ಷಕ ಸಂತೋಷ ಬಂಡೆ ಮಾತನಾಡಿ, ಭಾರತ ಸೇವಾದಳ ಸ್ವಾತಂತ್ರ್ಯ ಹೋರಾಟಗಾರರು ಮತ್ತು ದೇಶಭಕ್ತರನ್ನು ಹುಟ್ಟು ಹಾಕಿದ ಸಂಸ್ಥೆ. ಸ್ವಾತಂತ್ರ್ಯ ಚಳುವಳಿಯಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರಿಗೆ ಸಾತ್ ಕೊಟ್ಟ ಏಕೈಕ ಸಂಸ್ಥೆ ಎಂದು ಹೇಳಿದರು.ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ…
ಇಂಡಿ: ಕೆಂಪೇಗೌಡರು ಎಲ್ಲ ಜಾತಿ, ಸಮುದಾಯದವರಿಗೆ ನೆಲೆ ಕಲ್ಪಿಸಿಕೊಟ್ಟು, ಬೆಂಗಳೂರು ನಗರವನ್ನು ನಿರ್ಮಿಸಿ,ಸರ್ವಧರ್ಮ ಸಹಿಷ್ಣುತೆಯ ಪ್ರಜಾನಾಯಕರಾಗಿದ್ದು ಇಂದಿಗೂ ಆದರ್ಶಪ್ರಾಯವಾಗಿದೆ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.ತಾಲೂಕಿನ ಹಿರೇರೂಗಿ ಗ್ರಾಮದ ಕೆಬಿಎಸ್, ಕೆಜಿಎಸ್, ಯುಬಿಎಸ್ ಶಾಲೆಯ ವತಿಯಿಂದ ಹಮ್ಮಿಕೊಂಡ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆಗೆ ಚಾಲನೆ ನೀಡಿ ಮಾತನಾಡಿದರು.ಕೆಂಪೇಗೌಡರ ವಿವೇಚನಾಯುತ ಯೋಜನೆ ಮತ್ತು ಕತೃತ್ವಶಕ್ತಿಯ ವ್ಯಕ್ತಿತ್ವ ಎಲ್ಲರಿಗೂ ಪ್ರೇರಕಶಕ್ತಿಯಾಗಿದೆ.ಅವರು ಯೋಜನಾನಿಪುಣ ಹಾಗೂ ವಿಚಾರವಾದಿಯಾಗಿ ದೂರದೃಷ್ಟಿತ್ವದೊಂದಿಗೆ ಬೆಂಗಳೂರು ನಗರ ನಿರ್ಮಾಣ ಮಾಡಿದ್ದು ಐತಿಹಾಸಿಕವಾಗಿದೆ ಎಂದು ಹೇಳಿದರು. ಶಿಕ್ಷಕಿ ಎಸ್ ಡಿ ಬಿರಾದಾರ ಮಾತನಾಡಿ, ಶತಶತಮಾನಗಳು ಕಳೆದರೂ ನಾಡಿನ ಜನರು ಮೆಲುಕು ಹಾಕುವ ರೀತಿಯಲ್ಲಿ ಕೆಂಪೇಗೌಡರು ಸುಮಾರು 48 ವರ್ಷಗಳ ಕಾಲ ಆಳ್ವಿಕೆ ನಡೆಸಿದ್ದು, ಅವರ ದೂರದೃಷ್ಟಿತ್ವದ ಆಡಳಿತ ಇಂದಿನ ಆಡಳಿತ ವ್ಯವಸ್ಥೆಗೆ ಮಾದರಿಯಾಗಿದೆ ಎಂದು ಹೇಳಿದರು.ಅಧ್ಯಕ್ಷತೆ ವಹಿಸಿದ್ದ ಕೆಬಿಎಸ್ ಮುಖ್ಯ ಶಿಕ್ಷಕ ಅನಿಲ ಪತಂಗಿ ಮಾತನಾಡಿ, ಬೆಂಗಳೂರು ಇಂದು ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿದ್ದು, ಐಟಿ ಬಿಟಿ ಕಂಪನಿಗಳ ತವರೆನಿಸಿಕೊಂಡಿದೆ. ಬೆಂಗಳೂರು ಕೆಂಪೇಗೌಡರ ಕಾಲದಲ್ಲೂ…
ಪ.ಜಾತಿ-ಪಂಗಡದ ಸಮಸ್ಯೆಗಳ ತ್ವರಿತ ಇತ್ಯರ್ಥಕ್ಕೆ ಡಿಸಿ ಟಿ.ಭೂಬಾಲನ್ ಸೂಚನೆ ವಿಜಯಪುರ: ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಇಲಾಖೆಗಳು ತ್ವರಿತವಾಗಿ ಸ್ಪಂದಿಸಿ ಇತ್ಯರ್ಥಗೊಳಿಸಿ ಅನುಸರಣಾ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ಗುರುವಾರ ಸಂಜೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ದೌರ್ಜನ್ಯ ಪ್ರಕರಣಗಳು ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ದೌರ್ಜನ್ಯ ತಡೆ ಜಾಗೃತಿಗಾಗಿ ಪೊಲೀಸ್ ಇಲಾಖೆ, ಕಂದಾಯ ಇಲಾಖೆ, ಜಿಲ್ಲಾ ಪಂಚಾಯತ್, ಹಾಗೂ ಸಮಾಜ ಇಲಾಖೆ ಸಹಯೋಗದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನರಲ್ಲಿ ಜಾಗೃತಿ ಮೂಡಿಸಬೇಕು. ದೌರ್ಜನ್ಯ ಪ್ರಕರಣಗಳಲ್ಲಿ ದಾಖಲಾದ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಕ್ಕೆ ಕ್ರಮ ವಹಿಸಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಜನಾಂಗಗಳಿಗೆ ಸರ್ಕಾರದಿಂದ ದೊರೆಯುವ ಸಹಾಯ ಸೌಲಭ್ಯಗಳನ್ನು ಒದಗಿಸಲು ಕ್ರಮ ವಹಿಸಬೇಕು. ಇಲಾಖೆಗಳಲ್ಲಿ ಮೀಸಲಿರುವ ಅನುದಾನದ ಸದ್ಬಳಕೆ ಮಾಡಿಕೊಂಡು ನಿಗದಿತ ಅವಧಿಯಲ್ಲಿ ಸಹಾಯ-ಸೌಲಭ್ಯ ಒದಗಿಸಲು ಕ್ರಮ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ…
ಬಬಲೇಶ್ವರ ತಾಲೂಕಿನ ವಿವಿಧ ಕಚೇರಿಗಳಿಗೆ ಭೇಟಿ ನೀಡಿದ ಡಿಸಿ ಟಿ.ಭೂಬಾಲನ್ ಖಡಕ್ ಸೂಚನೆ ವಿಜಯಪುರ: ಬಬಲೇಶ್ವರ ನಾಡಕಚೇರಿ, ರೈತ ಸಂಪರ್ಕ ಕೇಂದ್ರ, ಮೀಸಲು ಅರಣ್ಯ ಪ್ರದೇಶ, ಮಮದಾಪುರ ಕೆರೆಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಸಮರ್ಪಕವಾಗಿ ಕಾರ್ಯನಿರ್ವಹಣೆಗೆ ಸಂಬಂಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.ಗುರುವಾರ ಬಬಲೇಶ್ವರ ತಾಲೂಕಿನ ಮಮದಾಪುರ ನಾಡಕಚೇರಿಗೆ ಭೇಟಿ ನೀಡಿದ ಅವರು, ಕಂದಾಯ ಇಲಾಖೆಯ ವಿವಿಧ ಕಾರ್ಯಗಳ ಕುರಿತು ಪರಿಶೀಲನೆ ನಡೆಸಿದರು. ಕಚೇರಿಗಳಲ್ಲಿರುವ ಕಡತಗಳನ್ನು ಪರಿಶೀಲನೆ ನಡೆಸಿ, ಸಾರ್ವಜನಿಕರ ಯಾವುದೇ ಕಾರ್ಯಗಳಿಗೆ ವಿಳಂಬ ಧೋರಣೆ ಅನುಸರಿಸದೇ ನಿಗದಿತ ಕಾಲಾವಧಿಯಲ್ಲಿ ಇತ್ಯರ್ಥಗೊಳಿಸುವಂತೆ ತಿಳಿಸಿದ ಅವರು, ಕಚೇರಿ ಕಾರ್ಯಗಳಿಗಾಗಿ ಬರುವ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸುವುದೊಂದಿಗೆ ಜನಸ್ನೇಹಿಯಾಗಿ ಕಾರ್ಯನಿರ್ವಹಿಸುವ ಮೂಲಕ ಅವರ ಸಮಸ್ಯೆಗಳನ್ನು ತ್ವರಿತವಾಗಿ ಸ್ಪಂದಿಸಿ ಪರಿಹರಿಸಲು ಪ್ರಯತ್ನಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.ನಂತರ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ರೈತರಿಂದ ಯಾವುದೇ ದೂರು ಬರದಂತೆ ನೋಡಿಕೊಳ್ಳಬೇಕು. ಬೀಜ, ರಸಗೊಬ್ಬರ…
ತಾಪಂ-ಗ್ರಾಪಂ ಕಾರ್ಯಾಲಯಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದ ಜಿ.ಪಂ.ಸಿಇಓ ರಿಷಿ ಆನಂದ ಸೂಚನೆ ವಿಜಯಪುರ: ವಿಜಯಪುರ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರು ಗುರುವಾರ ವಿಜಯಪುರ ತಾಲೂಕಾ ಪಂಚಾಯತ್ ಕಚೇರಿ ಹಾಗೂ ಮದಭಾವಿ ಗ್ರಾಮ ಪಂಚಾಯತ್ ಕಾರ್ಯಾಲಯಕ್ಕೆ ದಿಢೀರವಾಗಿ ಭೇಟಿ ನೀಡಿ ಕಾರ್ಯವ್ಯವಸ್ಥೆ ಕುರಿತು ಪರಿಶೀಲನೆ ನಡೆಸಿದರು.ಮದಭಾವಿ ಗ್ರಾಮ ಪಂಚಾಯತಿಗೆ ಭೇಟಿ ನೀಡಿ, ಸಿಬ್ಬಂದಿಯ ಹಾಜರಾತಿ ಹಾಗೂ ಸಿಬ್ಬಂದಿ ಇ-ಹಾಜರಾತಿ ವ್ಯವಸ್ಥೆ ಬಿಲ್ ಕಲೆಕ್ಟರ್ ಸಿಬ್ಬಂದಿಯು ತೆರಿಗೆ ವಸೂಲಾತಿ ಮಾಡುವ ಪಿ.ಓ.ಎಸ್ ಮಷಿನ್ ವ್ಯವಸ್ಥೆ, ಗ್ರಾಮ ಪಂಚಾಯತಿಯ ಸರಕಾರಿ ಗ್ರಂಥಾಲಯದಲ್ಲಿನನ ಮೂಲಭೂತ ಸೌಕರ್ಯಗಳಾದ ವಿದ್ಯುತ್ ವ್ಯವಸ್ಥೆ, ಓದುಗರಿಗೆ ಆಸನದ ವ್ಯವಸ್ಥೆ, ಗಾಳಿ, ಬೆಳಕು ಹಾಗೂ ಗ್ರಂಥಾಲಯದ ಪುಸ್ತಕಗಳನ್ನು ಇರಿಸಲು ಸ್ಥಳಾವಕಾಶ ಕುರಿತು ಪರಿಶೀಲನೆ ಮಾಡಿದರು.ಗ್ರಂಥಾಲಯದಲ್ಲಿ ಪುಸ್ತಕಗಳನ್ನು ಇಡಲು ಹೆಚ್ಚಿನ ರ‍್ಯಾಕ್ ವ್ಯವಸ್ಥೆ, ವಿದ್ಯಾರ್ಥಿಗಳಿಗೆ ಓದಲು ಈಗ ಇರುವ ಪುಸ್ತಕಗಳಷ್ಟೇ ಅಲ್ಲದೇ ಸ್ಪರ್ಧಾತ್ಮಕ ಪುಸ್ತಕ, ಸ್ಪೋಕನ್ ಇಂಗ್ಲೀಷ್ ಹಾಗೂ ಇತರೆ ಉತ್ತಮ ವಿಷಯಗಳನ್ನೊಳಗೊಂಡ ಪುಸ್ತಕಗಳನ್ನು ಒದಗಿಸಬೇಕು. ಗ್ರಂಥಾಲಯವು ವಿಶಾಲವಾಗಿರುವುದರಿಂದ…
ವಿಜಯಪುರ: ವಿಜಯಪುರ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರು ವಿಜಯಪುರ ನಗರದ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದ ಸಗಟು ಮಳಿಗೆಗಳು/ಗೋದಾಮುಗಳಿಗೆ ಗುರುವಾರ ದಿಢೀರ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಅನ್ನಭಾಗ್ಯ ಯೋಜನೆ, ಮಧ್ಯಾಹ್ನ ಬಿಸಿಯೂಟ ಯೋಜನೆ ಹಾಗೂ ವಸತಿ ನಿಲಯಗಳಿಗೆ ಸರಬರಾಜು ಮಾಡುವ ಆಹಾರ ಧಾನ್ಯಗಳಾದ ಅಕ್ಕಿ, ಗೋಧಿ, ಸೂರ್ಯಕಾಂತಿ ಎಣ್ಣೆಗಳ ಗುಣಮಟ್ಟವನ್ನು ಪರಿಶೀಲಿಸಿದ ಅವರು, ಮಳಿಗೆಗಳಲ್ಲಿ ದಾಸ್ತಾನು ನಿರ್ವಹಣೆ ವ್ಯವಸ್ಥಿತವಾಗಿ ಮಾಡಬೇಕು. ವಿವಿಧ ವಸತಿ ನಿಲಯ, ಸರ್ಕಾರಿ ಶಾಲೆಗಳಿಗೆ ನಿಗದಿತ ಅವಧಿಯಲ್ಲಿ ಯಾವುದೇ ತೊಂದರೆಯಾಗದಂತೆ ದಾಸ್ತಾನು ಸರಬರಾಜು ಮಾಡಲು ಕ್ರಮ ವಹಿಸಬೇಕು. ದಾಸ್ತಾನುಗಳನ್ನು ಅವಶ್ಯಕತೆಗೆ ತಕ್ಕಂತೆ ಹಾಗೂ ಮಕ್ಕಳ ಸಂಖ್ಯೆಗನುಗುಣವಾಗಿ ದಾಸ್ತಾನುಗಳನ್ನು ಸ್ವಚ್ಚತೆ ಹಾಗೂ ಗುಣಮಟ್ಟದಿಂದ ಇರುವಂತೆ ಪೂರೈಸಬೇಕು, ಗೋದಾಮುಗಳನ್ನು ಪ್ರತಿದಿನ ಸ್ವಚ್ಚತೆ ಮಾಡಬೇಕು ಹಾಗೂ ಗೋದಾಮಿನ ಸುತ್ತ-ಮುತ್ತಲಿನ ಪರಿಸರವನ್ನೂ ಸಹ ಸ್ವಚ್ಛವಾಗಿಟ್ಟುಕೊಳ್ಳುವಂತೆ ಗೋದಾಮುಗಳ ವ್ಯವಸ್ಥಾಪಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.ಬಳಿಕ, ಗೋದಾಮುಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಕೂಲಿಕಾರರೊಂದಿಗೆ ಸಂವಾದ ನಡೆಸಿ, ಅವರಿಗೆ ಸಮಯಕ್ಕೆ ತಕ್ಕಂತೆ…
ವಿಜಯಪುರ: ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರು ಜೂ.೨೮ರಂದು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.ಜೂ.೨೮ರಂದು ಬೆಳಿಗ್ಗೆ ೧೦ ಗಂಟೆಗೆ ವಿಜಯಪುರ ಜಿಲ್ಲೆಯ ಆಲಮಟ್ಟಿಗೆ ಆಗಮಿಸಿ, ಆಲಮಟ್ಟಿಯಲ್ಲಿ ಸರಕಾರಿ ಶಾಲೆ ಅಭಿನಂದನಾ ಗ್ರಂಥ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ ೨-೩೦ಕ್ಕೆ ಆಲಮಟ್ಟಿಯಿಂದ ರಸ್ತೆ ಮಾರ್ಗವಾಗಿ ಬಾಗಲಕೋಟೆ ಜಿಲ್ಲೆ ಮುಧೋಳಕ್ಕೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
