Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿಜಯಪುರ: ಜೂ.30 ರಂದು ಶಿಕ್ಷಕರ ಅರ್ಹತಾ ( ಟಿಇಟಿ) ಪರೀಕ್ಷೆಗಳು ವಿಜಯಪುರ ನಗರದ 43 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿವೆ. ಪರೀಕ್ಷೆಗಳು ಸುವ್ಯವಸ್ಥಿತವಾಗಿ ನಡೆಯಲು ಮುಂಜಾಗ್ರತಾ ಕ್ರಮವಾಗಿ 43 ಪರೀಕ್ಷಾ ಕೇಂದ್ರದ 200 ಮೀ. ವ್ಯಾಪ್ತಿಯ ಪ್ರದೇಶದಲ್ಲಿ ಅಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆಯವರೆಗೆ 144ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಆದೇಶ ಹೊರಡಿಸಿದ್ದಾರೆ.ಪರೀಕ್ಷೆಯಲ್ಲಿ ತೊಡಗಿರುವ ಯಾವುದೇ ಅಧಿಕಾರಿ ಹಾಗೂ ಸಿಬ್ಬಂದಿಗಳು ಮತ್ತು ಇತರರು ಮೊಬೈಲ್ ಫೋನನ್ನು ತರುವುದನ್ನು, ಬಳಸುವುದನ್ನು ನಿಷೇಧಿಸಿದೆ. ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರಗಳ ಸಮೀಪದಲ್ಲಿರುವ ಝರಾಕ್ಸ ಅಂಗಡಿಗಳು, ಕಂಪ್ಯೂಟರ್ ಸೆಂಟರ್‌ಗಳು, ಇಂಟರ್‌ನೆಟ್ ಸೈಬರ್ ಕೆಫೆಗಳು, ಕೋಚಿಂಗ್ ಕೇಂದ್ರಗಳು ತೆರೆಯದಂತೆ ಅವರು ಆದೇಶಿಸಿದ್ದಾರೆ.
ವಿಜಯಪುರ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಚಾಲಕ ಮೋಹನ್ ಭಾಗವತ್ ಕಳೆದ ಮೂರು ದಿನಗಳಿಂದ ವಿಜಯಪುರ ಜಿಲ್ಲೆಯಲ್ಲಿ ವಾಸ್ತವ್ಯ ಹೂಡಿದ್ದಾರೆ. ಚಡಚಣ ತಾಲೂಕಿನ ನಿಂಬಾಳದಲ್ಲಿರುವ ಇಂಚಗೇರಿ ಸಾಂಪ್ರದಾಯದ ಗುರುದೇವ ರಾಣಡೆ ಆಶ್ರಮದಲ್ಲಿ ವಾಸ್ತವ್ಯ ಹೂಡಿದ್ದಾರೆ. ಪ್ರತಿ ವರ್ಷ ಜೂನ್-ಜುಲೈ ತಿಂಗಳಲ್ಲಿ ಇಂಚಗೇರಿ ಸಾಂಪ್ರದಾಯದ ಆಧ್ಯಾತ್ಮ ಆಚರಣೆಗಳಲ್ಲಿ ತೊಡಗುವುದು ವಾಡಿಕೆ ಇದ್ದು, ಕಳೆದ ಮೂರು ದಿನಗಳಿಂದ ಆಧ್ಯಾತ್ಮ ಸಾಧನೆಯಲ್ಲಿ ತೊಡಗಿದ್ದಾರೆ.ಗುರುದೇವ ರಾಣಡೆ ಆಶ್ರಮದಲ್ಲಿ ವಾಸ್ತವ್ಯ: ವಿಜಯಪುರ ಜಿಲ್ಲೆಯ ಆಧ್ಯಾತ್ಮ ತವರು ಅನ್ನೋದ್ರಲ್ಲಿ ಎರಡು ಮಾತಿಲ್ಲ. ಜಿಲ್ಲೆಯಲ್ಲಿ ಆಗಿ ಹೋದ ಸಂತಮಹಂತರು ವಿಶ್ವವ್ಯಾಪಿ ಆವರಿಸಿಕೊಂಡಿದ್ದಾರೆ. ಅದೇ ರೀತಿ ವಿಜಯಪುರ ಜಿಲ್ಲೆಯಲ್ಲಿ ಇಂಚಗೇರಿ ಸಾಂಪ್ರದಾಯದ ಮಠಗಳಿಗೇನು ಕಮ್ಮಿ ಇಲ್ಲ. ಇಂಚಗೇರಿ ಮಠದ ಆದರ್ಶ, ಗುರುಪರಂಪರೆಯನ್ನ ಮೆಚ್ಚಿ ದೇಶ ವಿದೇಶಗಳಿಂದ ಭಕ್ತರು ಬರ್ತಾರೆ. ಅದೇ ರೀತಿ ನಿಂಬಾಳದಲ್ಲಿರುವ ಗುರುದೇವ ರಾಣಡೆ ಅವರ ಆಶ್ರಮಕ್ಕು ದೇಶ-ವಿದೇಶಗಳಿಂದ ಭಕ್ತರು ಬಂದು ಸಾಧನೆ ಮಾಡ್ತಾರೆ. ಇಂಥಹ ಭಕ್ತರಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಚಾಲಕರಾದ ಮೋಹನ್ ಭಾಗವತ್ ಅವರು ಸಹ ಒಬ್ಬರು.…
ವಿಜಯಪುರ: ಕಲಬುರ್ಗಿ ಜಿಲ್ಲೆಯ ಯಡ್ರಾಮಿ ತಾಲೂಕು ಘಟಕದ ರೈತಸಂಘ ಮತ್ತು ಹಸಿರು ಸೇನೆಯ ಅಧ್ಯಕ್ಷ ಈರಣ್ಣ ಗುರುನಾಥ ಭಜಂತ್ರಿ ಅವರಿಗೆ ಜೂ.೨೩ರಂದು ಬೆಂಗಳೂರಿನ ಅಕ್ಕಮಹಾದೇವಿ ಸಬಾಂಗಣದಲ್ಲಿ ಜರುಗಿದ ಬೆಳಕು ಸಂಭ್ರಮದ ಕಾರ್ಯಕ್ರಮದಲ್ಲಿ ಬೆಳಕು ಸಾಹಿತ್ಯ, ಶೈಕ್ಷಣಿಕ, ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ರಾಷ್ಟ್ರಮಟ್ಟದ ’ರೈತರತ್ನ’ ಪ್ರಶಸ್ತಿ ಪ್ರದಾನ ಮಾಡಲಾಯಿತು.ಕಲಬುರ್ಗಿ ಜಿಲ್ಲೆಯಲ್ಲಿ ಈರಣ್ಣ ಭಜಂತ್ರಿ ಅವರ ಹಲವಾರು ವರ್ಷಗಳ ರೈತಪರ ಕಾಳಜಿ, ರೈತಪರ ಹೋರಾಟಗಳ ಗಣನೀಯ ಸಾಧನೆಯನ್ನು ಪರಿಗಣಿಸಿ ಅವರಿಗೆ ಈ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ ಎಂದು ಬೆಳಕು ಟ್ರಸ್ಟ್ ಅಧ್ಯಕ್ಷ ಅಣ್ಣಪ್ಪ ಮೇಟಿಗೌಡ ತಿಳಿಸಿದರು.ಬೆಳಕು ಸಂಭ್ರಮದ ಸರ್ವಾಧ್ಯಕ್ಷೆ, ಸ್ವರಮಧುರ ಹಿಂದುಸ್ತಾನಿ ಶಾಸ್ತ್ರೀಯ ಸಂಗೀತ ವಿದ್ಯಾಲಯ ಪ್ರಾಂಶುಪಾಲೆ ಶ್ರೀಮತಿ ಗೌರಿಶಂಕರ ಚಟ್ಟಿ ಸೇರಿದಂತೆ ಹಲವು ಗಣ್ಣರು ವೇದಿಕೆ ಮೇಲಿದ್ದರು.
ಆಲಮಟ್ಟಿ: ಇಲ್ಲಿನ ಕೆಬಿಜೆಎನ್ಎಲ್ ಮುಖ್ಯ ಎಂಜಿನಿಯರ್ ಕಚೇರಿ ಎದುರು ನಾನಾ ಬೇಡಿಕೆ ಈಡೇರಿಕೆಗೆಆಗ್ರಹಿಸಿ ಕೃಷ್ಣಾತೀರ ಗುತ್ತಿಗೆದಾರರ ಸಂಘದ ಆಶ್ರಯದಲ್ಲಿ ಜೂ.19ರಿಂದಗುತ್ತಿಗೆದಾರರು ಹಮ್ಮಿಕೊಂಡಿದ್ದ ಅನಿರ್ದಿಷ್ಟಾವಧಿ ಧರಣಿಯು ಕೃಷ್ಣಾ ಭಾಗ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮೋಹನರಾಜ್ ಕೆ.ಪಿ. ಅವರ ಭರವಸೆ ಮೇರೆಗೆ ಬುಧವಾರಅಂತ್ಯಗೊಳಿಸಿದರು.ಧರಣಿ ಸ್ಥಳಕ್ಕೆ ಕೆಬಿಜೆಎನ್ಎಲ್ ಎಂಡಿ ಆಗಮಿಸಿದಾಗ ಧರಣಿ ನಿರತರು ತಮ್ಮ ನಾನಾ ಬೇಡಿಕೆ ಈಡೇರಿಸುವಂತೆ ಮನವಿ ಸಲ್ಲಿಸಿದರು.ಮನವಿ ಸ್ವೀಕರಿಸಿದ ಎಂಡಿ ಮೋಹರಾಜ ಕೆ.ಪಿ. ಮಾತನಾಡಿ, ಕಳೆದ ವರ್ಷದಲ್ಲಿ ಕರೆಯಲಾದ ಎಲ್ಲ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆಯಲ್ಲಿ ಪಾರದರ್ಶಕ ಕಾಯ್ದೆ ಅನುಸಾರ ಕ್ರಮಕೈಗೊಂಡು ಕಾಮಗಾರಿಗಳ ಬಿಡ್‌ನಲ್ಲಿ ಭಾಗವಹಿಸಿದ ಗುತ್ತಿಗೆದಾರರ ಮುಂಗಡ ಹಣವನ್ನುಆಯಾ ಗುತ್ತಿಗೆದಾರರಿಗೆ ಮರಳಿಸಲಾಗಿದೆ. ಕಾಲುವೆಗಳ ದುರಸ್ತಿ, ನೂತನ ಮುಖ್ಯ ಕಾಲುವೆ, ವಿತರಣಾ ಕಾಲುವೆ, ಸೀಳು ಕಾಲುವೆ, ಉಪಕಾಲುವೆಗಳ ನಿರ್ಮಾಣ ಕಾಮಗಾರಿಗಳನ್ನು ಪ್ಯಾಕೇಜ್ಪದ್ದತಿಗೆ ಅಳವಡಿಸದೆ ವಿಂಗಡಣೆ ಮಾಡಿ ಟೆಂಡರ್ ಕರೆಯುವುದು ಸೇರಿದಂತೆ ಇತರೆ ಎಲ್ಲ ಬೇಡಿಕೆಗಳನ್ನು ಕಾನೂನು ಚೌಕಟ್ಟಿನಲ್ಲಿ ಪರಿಶೀಲನೆ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದರು.ಅಧ್ಯಕ್ಷ ಎಂ.ಎ.ಮೇಟಿ, ಉಪಾಧ್ಯಕ್ಷ ಎಸ್.ಎಸ್.ಗದಿಗೆಪ್ಪಗೌಡರ, ಕಾರ್ಯದರ್ಶಿ ವೈ.ವೈ.ಬಿರಾದಾರ,…
ವಿಜಯಪುರ : ಎಬಿವಿಪಿ ವಿಜಯಪುರ ಶಾಖೆ ವತಿಯಿಂದ ಜಿಲ್ಲೆಯ ಕೇಂದ್ರ ಬಸ್ ನಿಲ್ದಾಣ ಮುಂದೆ ವಿದ್ಯಾರ್ಥಿಗಳ ಶೈಕ್ಷಣಿಕ ವೇಳಾಪಟ್ಟಿಗೆ ಅನುಗುಣವಾಗಿ ಬಸ್ ಪಾಸ್ ವಿತರಿಸುವಂತೆ ಹಾಗೂ ಬಸ್ ಗಳ ಸಂಖ್ಯೆಯನ್ನು ಹೆಚ್ಚಳ ಮಾಡುವಂತೆ ಆಗ್ರಹಿಸಿ ಬುಧವಾರ ಎಬಿವಿಪಿ ಕಾರ್ಯಕರ್ತರು ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಿದರು.ಬಳಿಕ ಈಶಾನ್ಯ ರಸ್ತೆ ಸಾರಿಗೆ ಸಂಸ್ಥೆಯ ವಿಜಯಪುರ ಶಾಖೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಎಬಿವಿಪಿ ರಾಜ್ಯ ಕಾರ್ಯದರ್ಶಿ ಸಚೀನ ಕುಳಗೇರಿ ಮಾತನಾಡಿ, ರಾಜ್ಯದಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಪಡೆಯಲು ಅತೀ ಹೆಚ್ಚು ನಗರ ಪ್ರದೇಶಗಳ ಶಾಲಾ ಕಾಲೇಜುಗಳಿಗೆ ಬರುತ್ತಾರೆ, ವಿದ್ಯಾರ್ಥಿಗಳ ತರಗತಿಗಳು ಪ್ರಾರಂಭವಾದ ನಂತರ ಸರಿಯಾದ ಸಮಯಕ್ಕೆ ಬಸ್ ಪಾಸ್ ಅನ್ನು ವಿತರಣೆ ಮಾಡದೇ ಇರುವ ಕಾರಣ ಪ್ರತಿದಿನ ನೂರಾರು ರೂಪಾಯಿಗಳನ್ನು ಖರ್ಚು ಮಾಡಿಕೊಂಡು ಬಡ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ಬರುವುದು ಕಷ್ಟದ ಸಂಗತಿ ಆಗಿದೆ. ಸರ್ಕಾರ ಶಾಲಾ ಕಾಲೇಜುಗಳು ಪ್ರಾರಂಭವಾದ ತಕ್ಷಣವೇ ವಿದ್ಯಾರ್ಥಿಗಳಿಗೆ ಬಸ್ ಪಾಸ್ ಅನ್ನು ಸಕಾಲದಲ್ಲಿ ಒದಗಿಸುವ ನಿಟ್ಟಿನಲ್ಲಿ…
ಲೈಂಗಿಕ ದೌರ್ಜನ್ಯ ಪ್ರಕರಣ | ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾ | ಇನ್ನೂ ಮೂರು ದಿನಗಳ ಕಾಲ ಎಸ್ಐಡಿ ಕಸ್ಟಡಿ ಬೆಂಗಳೂರು: ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಯನ್ನು ಬೆಂಗಳೂರಿನ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.ಹಾಸನ ಜಿಲ್ಲೆ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಧೀಶ ಸಂತೋಷ್ ಗಜಾನನ ಭಟ್, ತೀರ್ಪು ಕಾಯ್ದಿರಿಸಿದ್ದರು. ಬುಧವಾರ (ಜೂನ್ 26) ಅರ್ಜಿ ವಜಾಗೊಳಿಸಿ ಆದೇಶಿಸಿದ್ದಾರೆ.ಹೊಳೆನರಸೀಪುರದಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಬಂಧಿಸಿರುವ ಎಸ್‌ಐಟಿ ಪೊಲೀಸರು ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. ಹಾಗಾಗಿ, ಜಾಮೀನು ಕೋರಿ ಪ್ರಜ್ವಲ್ ಅರ್ಜಿ ಸಲ್ಲಿಸಿದ್ದರು.ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ 42ನೇ ಎಸಿಎಂಎಂ ನ್ಯಾಯಾಲಯ, ಪ್ರಜ್ವಲ್ ರೇವಣ್ಣ ಅವರನ್ನು ಜೂನ್ 29ರವರೆಗೆ ಎಸ್‌ಐಟಿ ಕಸ್ಟಡಿಗೆ ನೀಡಿದೆ.…
ಕಲಕೇರಿ: ಗ್ರಾಮದ ಮಲ್ಲಿಕಾರ್ಜುನ ವಿಧ್ಯಾವರ್ಧಕ ಸಂಘದ ಅಡಿಯಲ್ಲಿ ನಡೆಯುತ್ತಿರುವ ಅನುಧಾನಿತ ಬಸವೇಶ್ವರ ಪದವಿಪೂರ್ವ ಕಾಲೇಜು ಹಾಗೂ ಕಲಕೇರಿ ಪೋಲಿಸ್ ಠಾಣೆ ಇವರ ಸಹಯೋಗದಲ್ಲಿ ಬುಧವಾರ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಾಣಿಕೆ ವಿರುದ್ದದ ಅಂತರಾಷ್ಟ್ರೀಯ ದಿನವನ್ನು ಆಚರಿಸಲಾಯಿತು.ಈ ಸಂದರ್ಭದಲ್ಲಿ ಕಲಕೇರಿ ಪಿಎಸ್‌ಐ ಗಂಗಾ ಬಿರಾದಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಸುಮಾರು ೩೦೦ ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳಿಂದಾಗುವ ದುಷ್ಪರಿಣಾಮಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು. ವಿದ್ಯಾರ್ಥಿಗಳು ಕಾಲೇಜು ಹಂತದಲ್ಲಿರುವಾಗ ಮನಸ್ಸು ಚಂಚಲತೆಯಿಂದ ಇರುವುದು ಸಾಮಾನ್ಯ. ಯುವ ಪೀಳಿಗೆ ಮಾದಕ ವಸ್ತುಗಳಿಂದ ದೂರವಿದ್ದು ತಮ್ಮ ಉಜ್ವಲ ಭವಿಷ್ಯವನ್ನು ನಿರ್ಮಿಸಿಕೊಳ್ಳುವತ್ತ ಮುಂದಾಗಬೇಕು ಎಂದು ಅವರು ಈ ಸಂದರ್ಬದಲ್ಲಿ ಹೆಳಿದರು.ಬಸವೆಶ್ವರ ಪಿಯು ಕಾಲೇಜಿನ ಪ್ರಾಚಾರ್ಯ ಸಿ ಎಸ್ ಹಿರೇಮಠ, ಪ್ರೋ ಎಸ್ ಎಸ್ ಕಲಶೇಟ್ಟಿ ಮಾತನಾಡಿದರು.ಇದೇ ವೇಳೆ ವಿದ್ಯಾರ್ಥಿಗಳಿಗೆ ಮಾದಕವಸ್ತುಗಳ ಕುರಿತ ಬೀತಿ ಪತ್ರಗಳನ್ನು ವಿತರಿಸಿ ನಂತರ ಮಾದಕ ವಸ್ತುಗಳಿಂದ ನಾವು ದೂರವಿರುತ್ತೆವೆ ಎಂಬ ಪ್ರತಿಜ್ಞಾವಿಧಿಯನ್ನು ಭೋದಿಸಲಾಯಿತು.ಈ ಸಂದರ್ಭದಲ್ಲಿ ಡಾ.ಗುರುರಾಜ್ ಮೆಡೆದಾರ,…
ವಿಜಯಪುರ : ವಿಜಯಪುರ ನಗರದ ಕೇಂದ್ರ ಭಾಗದಲ್ಲಿ ನೂತನವಾಗಿ ಪ್ರಾರಂಭವಾಗಿರುವ ಹೈಟೆಕ್ ಗ್ರಂಥಾಲಯಕ್ಕೆ ದಲಿತ ವಿದ್ಯಾರ್ಥಿ ಪರಿಷತ್ ಹೋರಾಟದ ಪ್ರತಿಫಲ ಸಿಕ್ಕಿದೆ ಎಂದು ಪರಿಷತ್ ಜಿಲ್ಲಾ ಸಂಚಾಲಕ ಅಕ್ಷಯ್ ಕುಮಾರ್ ಅಜಮನಿ ಅವರು ಮಾತನಾಡಿದರು.ನಗರದ ನೆಹರೂ ಕಾಂಪ್ಲೆಕ್ಸನಲ್ಲಿರುವ ಹಳೆಯ ಗ್ರಂಥಾಲಯ ಓದಲು ಯೋಗ್ಯವಿರಲಿಲ್ಲ, ಅಲ್ಲಿ ಪ್ರತಿದಿನ ನೂರಾರು ವಿದ್ಯಾರ್ಥಿಗಳು, ಹಿರಿಯರು ಓದಲು ಬರುತ್ತಿದ್ದರು ಅವರಿಗೆ ಗ್ರಂಥಾಲಯದಲ್ಲಿ ಓದಲು ಪುಸ್ತಕಗಳಿಲ್ಲದೆ, ಕೂಡಲು ಆಸನಗಳಿಲ್ಲದೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಅದನ್ನು ಗಮನಿಸಿದ ದಲಿತ ವಿದ್ಯಾರ್ಥಿ ಪರಿಷತ್ ಈ ಕುರಿತು ಜಿಲ್ಲಾಧಿಕಾರಿಗಳಿಗೆ ಸಂಪರ್ಕಿಸಿ ಮನವಿ ಮಾಡಿತು.ನಂತರ ಮನವಿ ಪ್ರತಿಫಲವಾಗಿ ವಿದ್ಯಾರ್ಥಿಗಳಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ಗ್ರಂಥಾಲಯ ಸಮಯವನ್ನು ಬದಲಾವಣೆ ಮಾಡಿದರು. ಮೊದಲು ಬೆಳಿಗ್ಗೆ ೩ ತಾಸು ಸಂಜೆ ೩ ತಾಸು ಇದ್ದ ಸಮಯವನ್ನ ಹಗಲು ಪೂರ್ತಿ ಆಯಿತು. ಪ್ರಸ್ತುತ ದಿನಮಾನಗಳಿಗೆ ಬೇಕಾದ ಪುಸ್ತಕಗಳನ್ನ ಪಟ್ಟಿ ಮಾಡಿ ಅವುಗಳನ್ನು ತರಿಸಲು ಆಗ್ರಹಿಸಲಾಗಿತ್ತು. ನೂತನ ಕಟ್ಟಡ ನಿರ್ಮಾಣ ಮಾಡಲು ಹೋರಾಟವನ್ನ ರೂಪಿಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿತ್ತು.…
ಮುದ್ದೇಬಿಹಾಳ: ತಾಲೂಕಿನ ಎಲ್ಲ ಹಳ್ಳಿಗಳಲ್ಲಿ ಈಗಾಗಲೇ ಚರ್ಮಗಂಟು ರೋಗದ ವಿರುದ್ಧ ಲಸಿಕಾ ಅಭಿಯಾನವು ಪ್ರಾರಂಭವಾಗಿದ್ದು ಈ ಅಭಿಯಾನವು ಜುಲೈ ೨೦ನೇ ತಾರೀಖಿನವರೆಗೆ ಚಾಲ್ತಿಯಲ್ಲಿರುತ್ತದೆ. ಎಲ್ಲ ರೈತರುಗಳು ತಮ್ಮ ಜಾನುವಾರುಗಳಿಗೆ ಲಸಿಕೆ ಹಾಕಿಸಿಕೊಳ್ಳುವಂತೆ ಪಶು ವೈದ್ಯಾಧಿಕಾರಿ ಶಿವಾನಂದ ಮೇಟಿ ಸಲಹೆ ನೀಡಿದರು.ಈ ಕುರಿತು ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಅವರು, ಈ ರೋಗವು ದನ ಮತ್ತು ಎಮ್ಮೆ ಎರಡರಲ್ಲಿಯೂ ಎಲ್‌ಎಸ್‌ಡಿ ವೈರಸ್ ನಿಂದ ಉಂಟಾಗುತ್ತದೆ. ಆದರೆ ಕಾಯಿಲೆ ಮತ್ತು ರೋಗಕ್ಕೆ ತುತ್ತಾಗುವ ದೃಷ್ಟಿಯಿಂದ ಎಮ್ಮೆಗಳಿಗೆ ಹೋಲಿಸಿದರೆ ದನಗಳಲ್ಲಿ ಈ ರೋಗವು ತೀವ್ರವಾಗಿರುತ್ತದೆ. ಮಿಶ್ರ ತಳಿ ರಾಸುಗಳಲ್ಲಿ ಚರ್ಮದ ಗಂಟುಗಳ ಗಾತ್ರವು ಹೆಚ್ಚು ದೊಡ್ಡದಾಗಿ ಇರುತ್ತವೆ. ಸದರಿ ಲಸಿಕಾ ಅಭಿಯಾನದಲ್ಲಿ ಕೇವಲ ದನಗಳಿಗೆ ಮಾತ್ರ ಲಸಿಕೆಯನ್ನು ಹಾಕಲಾಗುತ್ತದೆ. ಈ ರೋಗವು ಪ್ರಾಣಿಜನ್ಯ ರೋಗವಲ್ಲ. ಆದ್ದರಿಂದ ಜಾನುವಾರುಗಳಿಂದ ಮನುಷ್ಯರಿಗೆ ಹರಡುವುದಿಲ್ಲ. ಯಾವುದೇ ಗಾಬರಿ ಪಡುವ ಅವಶ್ಯಕತೆ ಇಲ್ಲ. ಕಾಯಿಸಿದ ಹಾಲು ಮನುಷ್ಯರ ಬಳಕೆಗೆ ಸುರಕ್ಷಿತವಾಗಿರುತ್ತದೆ. ಕುರಿ ಮತ್ತು ಮೇಕೆಗಳು ದನಗಳ ಸಮೀಪವಿದ್ದರೂ ಕೂಡ ಈ ರೋಗವು ಹರಡುವುದಿಲ್ಲ. ಈ…
