Author: editor.udayarashmi@gmail.com

ಮಣೂರ ಸರ್ಕಾರಿ ಪ್ರಾಥಮಿಕ ಶಾಲೆ ಮಕ್ಕಳು | ಮಧ್ಯಾನ್ಹದ ಬಿಸಿಯೂಟದ ವಿಳಂಬತೆ | ಶಾಲೆಗೆ ಸರಿಯಾಗಿ ಬಾರದ ಮುಖ್ಯಗುರು ದೇವರಹಿಪ್ಪರಗಿ: ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಮಕ್ಕಳು ಮಧ್ಯಾನ್ಹದ ಬಿಸಿಯೂಟದ ವಿಳಂಬತೆ, ಪ್ರಭಾರಿ ಮುಖ್ಯಗುರು ಶಾಲೆಗೆ ಸರಿಯಾಗಿ ಬಾರದೇ, ಪಾಠ ಮಾಡದಿರುವ ಕುರಿತು ಬೇಸತ್ತು ಶಾಲಾ ಆವರಣದಲ್ಲಿ ಧರಣಿ ಕುಳಿತು ಪ್ರತಿಭಟಿಸಿದರು.ತಾಲ್ಲೂಕಿನ ಮಣೂರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಮಕ್ಕಳು ಬುಧವಾರ ಶಾಲೆಯ ತಮ್ಮ ಶೈಕ್ಷಣಿಕ ಕುಂದುಕೊರತೆಗಳ ಕುರಿತು ಅಸಮಾಧಾನ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಮಕ್ಕಳಾದ ರಕ್ಷಿತಾ ಜೋಗೂರ, ಹಣಮಂತ ಹಿರೇಕುರುಬರ ಮಾತನಾಡಿ, ಮಧ್ಯಾನ್ಹದ ಬಿಸಿಯೂಟ ಸರಿಯಾಗಿ ವಿತರಿಸುತ್ತಿಲ್ಲ. ಶಾಲೆಯ ಪ್ರಭಾರ ಮುಖ್ಯಗುರು ಜಯಶ್ರೀ ನಾಯಿಕ ಸರಿಯಾದ ಸಮಯಕ್ಕೆ ಶಾಲೆಗೆ ಬರುತ್ತಿಲ್ಲ. ಇದರಿಂದ ಪಾಠಗಳಿಗೆ ಅಡತಡೆಯಾಗಿದೆ. ಕೂಡಲೇ ಇವುಗಳನ್ನು ಸರಿಪಡಿಸಲು ಆಗ್ರಹಿಸಿದರು.ಮಕ್ಕಳ ಧರಣಿ ಹಾಗೂ ಪ್ರತಿಭಟನೆಯ ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಬಿಇಓ ಆರೀಫ್ ಬಿರಾದಾರ ಹಾಗೂ ಎಸ್‌ಡಿಎಮ್‌ಸಿ ಅಧ್ಯಕ್ಷರು ಹಾಗೂ ಪಾಲಕರು ಶಿಕ್ಷಕಿ ಜಯಶ್ರೀಯನ್ನು ತರಾಟೆಗೆ ತೆಗೆದುಕೊಂಡು ಮಕ್ಕಳ ಬೇಡಿಕೆಯಂತೆ ಪ್ರಭಾರಿ…

Read More

ವಿಜಯಪುರ: ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚನ್ನಮ್ಮ, ಡಾ.ಬಿ.ಆರ್.ಅಂಬೇಡ್ಕರ್, ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಗಳಲ್ಲಿ ೨೦೨೪-೨೫ನೇ ಸಾಲಿನಲ್ಲಿ ೬ನೇ ತರಗತಿ ಪ್ರವೇಶಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಈ ವಸತಿ ಶಾಲೆಗಳಲ್ಲಿ ಸಫಾಯಿ ಕರ್ಮಚಾರಿ, ಮ್ಯಾನುವೆಲ್ ಸ್ಕಾö್ಯವೆಂಜರ್, ಚಿಂದಿ ಆಯುವರು, ಸ್ಮಶಾನ ಕಾರ್ಮಿಕರ ಮಕ್ಕಳು,ಬಾಲಕಾರ್ಮಿಕರು, ಜೀತ ವಿಮುಕ್ತ ಕಾರ್ಮಿಕರ ಮಕ್ಕಳು, ಮಾಜಿ ದೇವದಾಸಿಯರ ಮಕ್ಕಳು, ಶೇ.೨೫ಕ್ಕಿಂತ ಹೆಚ್ಚಿನ ಅಂಗವಿಕಲತೆ ಹೊಂದಿರುವ ಮಕ್ಕಳು, ಹೆಚ್‌ಐವಿಗೆ ತುತ್ತಾದ ಪೊಷಕರ ಮಕ್ಕಳು, ಒಬ್ಬ ಪೋಷಕರನ್ನು ಮಾತ್ರ ಹೊಂದಿರುವ ಅಥವಾ ಅನಾಥ ಮಕ್ಕಳು, ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮಅತಿ ಸೂಕ್ಷ್ಮ ಸಮುದಾಯದ, ಸೈನಿಕರು ಮತ್ತು ಮಾಜಿ ಸೈನಿಕರು ಸರ್ಕಾರಿ ಯೋಜನೆಗಳಿಂದ ಸ್ಥಳಾಂತರಗೊಂಡ ಪೋಷಕರ ಮಕ್ಕಳು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಆಶ್ರಯ ವಸತಿ ಶಾಲೆಗಳ್ಲಲಿ ೫ನೇ ತರಗತಿಯಲ್ಲಿ ಉತ್ತೀರ್ಣರಾದ ಮಕ್ಕಳು ಪ್ರವೇಶಕ್ಕೆ…

Read More

ವಿಜಯಪುರ: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದ ವತಿಯಿಂದ ಮಹಾನಗರ ಪಾಲಿಕೆ ವ್ಯಾಪ್ತಿಯ ವಸತಿ ರಹಿತ ಲಿಂಗತ್ವ ಅಲ್ಪಸಂಖ್ಯಾತರಿಗೆ ಪ್ರಧಾನಮಂತ್ರಿ ಆವಾಸ ವಿಶೇಷ ಯೋಜನೆಯಡಿ ೫೦ ಮನೆಗಳ ಗುರಿ ನಿಗದಿಪಡಿಸಿದ್ದು, ವಿಜಯಪುರ ಮಹಾನಗರ ಪಾಲಿಕೆ ವ್ಯಾಪ್ತಿಯ ನಿರ್ಗತಿಕ ವಸತಿ ರಹಿತ ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನಿಸಲಾಗಿದೆ.ಈ ಯೋಜನೆಯಡಿ ಅರ್ಜಿ ಸಲ್ಲಿಸುವ ಆಸಕ್ತ ಅರ್ಹರು ಅರ್ಜಿ ಮತ್ತು ಅರ್ಜಿದಾರ ಭಾವಚಿತ್ರ, ಜಿಲ್ಲಾಧಿಕಾರಿಗಳಿಂದ ಪಡೆದಿರುವ ಲಿಂಗತ್ವ ಅಲ್ಪಸಂಖ್ಯಾತ ಗುರುತಿನ ಚೀಟಿ, ಪಡಿತರ ಚೀಟಿ, ಆಧಾರ ಕಾರ್ಡ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಚುನಾವಣಾ ಗುರುತಿನ ಚೀಟಿ ಹಾಗೂ ಬ್ಯಾಂಕ್ ಪಾಸ್ ಬುಕ್‌ದೊಂದಿಗೆ ದಿನಾಂಕ : ೨೬-೦೭-೨೦೨೪ರೊಳಗೆ ಅರ್ಜಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ವಿಜಯಪುರ ಕಚೇರಿಗೆ ಸಲ್ಲಿಸಬೇಕು.ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಅಭಿವೃದ್ದಿ ನಿರೀಕ್ಷಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮ, ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ವಿಜಯಪುರ ದೂ: ೦೮೩೫೨-೨೯೫೩೫೩ ಸಂಖ್ಯೆಗೆ ಸಂಪರ್ಕಿಸುವಂತೆ ಉಪನಿರ್ದೇಶಕರು ಪ್ರಕಟಣೆಯಲ್ಲಿ…

Read More

ವಿಜಯಪುರ: ಕೆಪಿಟಿಸಿಎಲ್ ವತಿಯಿಂದ ಜೂ.೨೮ರಂದು ೧೧೦/೧೧ ಕೆವ್ಹಿ ಕೆಐಎಡಿಬಿ, ಭೂತನಾಳ, ಜುಮನಾಳ ಹಾಗೂ ವಿಜಯಪುರ ನಗರ ಮತ್ತು ೨೨೦/೧೧೦ ಕೆವ್ಹ್ಹಿ ವಿದ್ಯುತ್ ವಿತರಣಾ ಕೇಂದ್ರದ ಮೊದಲನೇ ತ್ರೆöÊಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳುವುದರಿಂದ ಸದರಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೋಗುವ ಎಲ್ಲ ೧೧ ಕೆವ್ಹಿ ಮಾರ್ಗಗಳಿಗೆ ಅಂದು ಮಧ್ಯಾಹ್ನ ೨ ರಿಂದ ೬-೩೦ ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ವಿಜಯಪುರ ಹೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರು ಕೋರಿದ್ದಾರೆ.

Read More

ವಿಜಯಪುರ: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯು ಇದೇ ೨೬ ರಂದು ಜರುಗಲಿದ್ದು ಪರೀಕ್ಷಾ ಕೇಂದ್ರಗಳಿಗೆ ನಿಯೋಜಿಸಿರುವ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಟ್ಟು ನಿಟ್ಟಿನ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ. ಬೂಬಾಲನ್ ಹೇಳಿದರು.ಬುಧವಾರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧಕ್ಷತೆ ವಹಿಸಿ ಮಾತನಾಡಿದ ಅವರು, ನಗರದಲ್ಲಿ ಒಟ್ಟು ೪೩ ಕೇಂದ್ರಗಳಲ್ಲಿ ಎರಡು ಅವಧಿಗಳಲ್ಲಿ ಪರೀಕ್ಷೆಗಳು ನಡೆಯಲಿವೆ. ೧೧೭೮೭ ಅಭ್ಯರ್ಥಿಗಳು ಪರೀಕ್ಷೆಗೆ ನೊಂದಾಯಿಸಿಕೊಂಡಿದ್ದಾರೆ. ಬೆಳಿಗ್ಗೆ ೯-೩೦ಕ್ಕೆ ಮೊದಲನೆ ಅವಧಿಯ ಪರೀಕ್ಷೆಗಳು ನಡೆಯಲಿದ್ದು ಅಭ್ಯರ್ಥಿಗಳು ೯ಗಂಟೆಗೆ ಬಂದು ವರದಿ ಮಾಡಿಕೊಳ್ಳಬೇಕು ಎರಡನೇ ಅವಧಿಯ ಪರೀಕ್ಷ್ಷೆ ಮಧ್ಯಾಹ್ನ ೨ಗಂಟೆಗೆ ಆರಂಭವಾಗಲಿದ್ದು, ೧-೩೦ಕ್ಕೆ ವರದಿ ಮಾಡಿಕೊಳ್ಳಬೇಕು ಎಂದು ತಿಳಿಸಿದರು.ಪರೀಕ್ಷೆಯ ಎಲ್ಲ ಕೊಠಡಿಗಳಿಗೆ ಸಿ.ಸಿ ಕ್ಯಾಮರಾಗಳನ್ನು ಅಳವಡಿಸುವುದು, ಪರೀಕ್ಷಾ ದಿನದಂದು ಪ್ರತಿ ಕೊಠಡಿಗಳಲ್ಲಿ ಛಾಯಾಗ್ರಾಹಕರನ್ನು ನೇಮಿಸಬೇಕು, ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಮುಖ್ಯದ್ವಾರದೊಳಗೆ ಬರುವಾಗ ಮೊಬೈಲ್‌ಪೋನ್, ಸ್ಮಾರ್ಟ್ಪೋನ, ಬ್ಯಾಗ್ ಹಾಗೂ ಇತರೇ ವಸ್ತುಗಳನ್ನು ಒಳಗಡೆ ತೆಗೆದುಕೊಂಡು ಅವಕಾಶ ವಿರುವುದಿಲ್ಲ, ಅಭ್ಯರ್ಥಿಯು ಒಳಗಡೆ ಹೋದ…

Read More

“ಜಯ್ ನುಡಿ” (ವ್ಯಕ್ತಿತ್ವ ವಿಕಸನ ಮಾಲಿಕೆ) – ಜಯಶ್ರೀ ಜೆ.ಅಬ್ಬಿಗೇರಿಇಂಗ್ಲೀಷ ಉಪನ್ಯಾಸಕರು, ಬೆಳಗಾವಿ. ಮೋ: ೯೪೪೯೨೩೪೧೪೨ ಯಾರೊಂದಿಗೆ ಹೇಗೆ ಮಾತನಾಡಬೇಕು ಅಂತ ತಿಳಿಯದೇ ಎಷ್ಟೋ ಸಲ ಅಪಾರ್ಥಗಳು ಸೃಷ್ಟಿಯಾಗಿ ಬಿಡುತ್ತವೆ. ಮಾತನಾಡಿದರೆ ರಗಳೆ ಅಂತ ಮಾತನಾಡಲೇಬೇಕಾದ ಸಂದರ್ಭ ಬಂದಾಗಲೂ ಮೌನ ವಹಿಸುತ್ತೇನೆ. ಆಗಲೂ ಬೈಸಿಕೊಳ್ಳುತ್ತೇನೆ ಮಾತನಾಡದೇ ಇದ್ದುದಕ್ಕೆ. ಬಾಯಿ ಬಿಟ್ಟರೂ ತೊಂದರೆ ಮುಚ್ಚಿಕೊಂಡಿದ್ದರೂ ತೊಂದರೆ ಯಾವಾಗ, ಎಲ್ಲಿ, ಎಷ್ಟು, ಹೇಗೆ ಮಾತನಾಡುವುದು ತಿಳಿಯದೇ ತಲೆ ಗಿರಗಿಟ್ಲೆ ಆಡಿಸುತ್ತದೆ. ಅಪರಿಚಿತರನ್ನು ಕಂಡಾಗಲಂತೂ ಮೈ ಮೇಲೆ ಮುಳ್ಳು ಬಿದ್ದವರ ತರ ಆಡ್ತಿನಿ. ಗೆಳೆಯರೊಂದಿಗೆ ಕೊಂಚ ಸಲುಗೆಯಿಂದ ಮಾತನಾಡಿದರೆ ನಿನ್ನ ಮಾತು ಮನಸ್ಸಿಗೆ ನೋವು ತಂತು ಅಂತಾರೆ. ಮೌನ ವಹಿಸಿದರೆ ಆತ್ಮೀಯತೆಯೇ ಇಲ್ಲ ಅಂತ ಬೈತಾರೆ. ಅಬ್ಬಬ್ಬಾ! ಎಷ್ಟೊಂದು ಕಠಿಣ ಈ ಸಂವಹನ. ನಾವಾಡುವ ಮಾತುಗಳು ಕೇವಲ ನಮ್ಮ ಮನದ ಅಭಿಪ್ರಾಯಗಳನ್ನು ಸೂಚಿಸುತ್ತವೆ ಅಂತ ತಿಳಿದಿದ್ದೆ. ಹಲವು ಬಾರಿ ನಾನು ಬಳಸುವ ಪದಗಳು ನಿಜ ಸಂದೇಶವನ್ನು ತಲುಪಿಸದೇ ತಪ್ಪು ಕಲ್ಪನೆಯನ್ನು ಮೂಡಿಸುತ್ತವೆ. ವಿಸ್ಮಯಕಾರಿ ಪರಿಣಾಮ ಬೀರುತ್ತವೆ.…

Read More

ವಿಜಯಪುರ: ಬಹುಜನ ದಲಿತ ಸಂಘರ್ಷ ಸಮಿತಿ (ರಿ), ವಿಜಯಪುರ ಜಿಲ್ಲಾ ಸಮಿತಿ ವತಿಯಿಂದ ಡಾ.ಬಿ.ಆರ್. ಅಂಬೇಡ್ಕರ ರವರ ೧೩೩ನೇ ವರ್ಷದ ಜಯಂತಿ ಹಾಗೂ ಜಗಜ್ಯೋತಿ ಬಸವೇಶ್ವರ ಜಯಂತಿ ಪ್ರಯುಕ್ತ ಶೈಕ್ಷಣಿಕ ಜಾಗೃತಿ ಸಮಾವೇಶ ಹಾಗೂ ಡಾ. ವಿಜಯಲಕ್ಷ್ಮೀ ಪಾಟೀಲ ರವರು ರಚಿಸಿದ ಅನಿತಾ ದೇಸಾಯಿ ಆ್ಯನ್ ಇಂಡಿಯನ್ ನೋವೆಲಿಸ್ಟ್ ಎಂಬ ಕೃತಿ ಬಿಡುಗಡೆ ಮತ್ತು ಸನ್ ೨೦೨೩-೨೪ನೇ ಸಾಲಿನ ಎಸ್.ಎಸ್.ಎಲ್.ಸಿ.ಶೇ.೮೫ ರಷ್ಟು ಮತ್ತು ದ್ವಿತೀಯ ಪಿ.ಯು.ಸಿ.ಶೇ. ೯೦ ರಷ್ಟು ಯಲ್ಲಿ ಹೆಚ್ಚಿನ ಅಂಕಗಳನ್ನು ಪಡೆದುಕೊಂಡ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ದಿ : ೩೦-೦೬-೨೦೨೪ ರಂದು ಬೆಳಿಗ್ಗೆ ೧೧.೩೦ ಗಂಟೆಗೆ ವಿಜಯಪುರ ನಗರದ ಕಂದಗಲ್ ಹಣಮಂತ್ರಾಯ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.ಬುಧವಾರ ಪತ್ರಿಕಾಗೋಷ್ಟಿಯಲ್ಲಿ ಈ ವಿಷಯ ತಿಳಿಸಿದ ಬಹುಜನ ದಲಿತ ಸಂಘರ್ಷ ಸಮಿತಿ ಮಖಂಡರು, ಕಳೆದ ಎರಡು ದಶಕಗಲಿಂದ ಇಲ್ಲಿಯವರೆಗೆ ಬಹುಜನ ದಲಿತ ಸಂಘರ್ಷ ಸಮಿತಿ (ರಿ) ರಾಜ್ಯಾದ್ಯಂತ ಸಾಮಾಜಿಕ, ಶೈಕ್ಷಣಿಕ, ರಾಜಕೀಯ, ಸಾಹಿತ್ಯ, ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಬಹುಜನರ ಹಿತಕ್ಕಾಗಿ ಗಣನೀಯ ಸೇವೆ…

Read More

ವಿಜಯಪುರ: ರಾಷ್ಟ್ರೀಯ ಮಾನಸಿಕ ಆರೋಗ್ಯ ಕಾರ್ಯಕ್ರಮದ ಅಡಿಯಲ್ಲಿ ಅಂತರ್‌ರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ಸಪ್ತಾಹ ದಿನಾಚರಣೆ ಅಂಗವಾಗಿ ಬುಧವಾರ ನಗರದಲ್ಲಿ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಯಿತು.ಜಾಗೃತಿ ಜಾಥಾಕ್ಕೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪ್ರಧಾನ ಹಿರಿಯ ಸಿವ್ಹಿಲ್ ನ್ಯಾಯಾಧೀಶ ಮಲ್ಲಿಕಾರ್ಜುನ ಅಂಬ್ಲಿ, ಉಪ ಪೋಲಿಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಬಸವರಾಜ ಹುಬ್ಬಳ್ಳಿ ಜಂಟಿಯಾಗಿ ಚಾಲನೆ ನೀಡಿದರು.ನಗರದ ಸಿದ್ದೇಶ್ವರ ದೇವಸ್ಥಾನದಿಂದ ಆರಂಭಗೊಂಡ ಜಾಥಾವು, ನಗರದ ಗಾಂಧಿವೃತ್ತದ ಮಾರ್ಗವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯವರೆಗೆ ಸಾಗಿ, ದಾರಿಯುದ್ದಕೂ ಜಾಗೃತಿ ಮೂಡಿಸಲಾಯಿತು.ಕಾರ್ಯಕ್ರಮದಲ್ಲಿ ಮನೋವೈದ್ಯರಾದ ಡಾ.ಮಂಜುನಾಥ ಮಸಳಿ ಮಾತನಾಡಿ, ಮಾದಕ ವಸ್ತುಗಳ ಸೇವನೆಯಿಂದ ಯುವ ಜನಾಂಗದ ಮೇಲೆ ದುಷ್ಪರಿಣಾಮ ಬೀರುತ್ತಿದ್ದು, ಯುವ ಜನಾಂಗ ಮಾದಕ ವಸ್ತುಗಳಿಂದ ದೂರವಿರುವಂತೆ ಅವರು ಸಲಹೆ ನೀಡಿದ ಅವರು, ಉಚಿತ ಸಹಾಯವಾಣಿ ೧೪೪೧೬ ಸಂಖ್ಯೆಗೆ ಸಂಪರ್ಕಿಸಿ ಮಾಹಿತಿ ಪಡೆಯುವಂತೆ ಅವರು ಹೇಳಿದರು.ಕಾರ್ಯಕ್ರಮದಲ್ಲಿ…

Read More

ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಜುಲೈ ೦೨ರಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಡಾ.ಫ.ಗು.ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಅಂದು ಬೆಳಿಗ್ಗೆ ೧೦ ಗಂಟೆಗೆ ನಡೆಯಲಿರುವ ಜಯಂತಿ ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಸಚಿವರು ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ.ಪಾಟೀಲ ಉದ್ಘಾಟಿಸಲಿದ್ದಾರೆ. ವಿಜಯಪುರ ನಗರ ಶಾಸಕ ಬಸನಗೌಡ ಆರ್.ಪಾಟೀಲ (ಯತ್ನಾಳ) ಅಧ್ಯಕ್ಷತೆ ವಹಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ಜವಳಿ ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ, ಸರ್ಕಾರದ ನವದೆಹಲಿ ವಿಶೇಷ ಪ್ರತಿನಿಧಿ-೨ ಹಾಗೂ ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ ಹುಕ್ಕೇರಿ, ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ ನಿಯಮಿತ ಅಧ್ಯಕ್ಷರೂ ಆದ ಶಾಸಕ ಅಪ್ಪಾಜಿ ಸಿ.ಎಸ್.ನಾಡಗೌಡ, ಸಂಸದರಾದ ರಮೇಶ ಜಿಗಜಿಣಗಿ, ರಾಜ್ಯಸಭಾ ಸಂಸದರಾದ ಶ್ರೀಮತಿ ಸುಧಾ ಮೂರ್ತಿ, ಶಾಸಕರುಗಳಾದ ಯಶವಂತರಾಯಗೌಡ ಪಾಟೀಲ, ಹಣಮಂತ ನಿರಾಣಿ, ಪ್ರಕಾಶ…

Read More

ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಜೂ.೨೭ರಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಅಂದು ಬೆಳಿಗ್ಗೆ ೧೦ ಗಂಟೆಗೆ ನಡೆಯಲಿರುವ ಜಯಂತಿ ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಸಚಿವರು ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ.ಪಾಟೀಲ ಉದ್ಘಾಟಿಸಲಿದ್ದಾರೆ. ವಿಜಯಪುರ ನಗರ ಶಾಸಕ ಬಸನಗೌಡ ಆರ್.ಪಾಟೀಲ (ಯತ್ನಾಳ) ಅಧ್ಯಕ್ಷತೆ ವಹಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ಜವಳಿ ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ, ಸರ್ಕಾರದ ನವದೆಹಲಿ ವಿಶೇಷ ಪ್ರತಿನಿಧಿ-೨ ಹಾಗೂ ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ ಹುಕ್ಕೇರಿ, ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ ನಿಯಮಿತ ಅಧ್ಯಕ್ಷರೂ ಆದ ಶಾಸಕ ಅಪ್ಪಾಜಿ ಸಿ.ಎಸ್.ನಾಡಗೌಡ, ಸಂಸದರಾದ ರಮೇಶ ಜಿಗಜಿಣಗಿ, ರಾಜ್ಯಸಭಾ ಸಂಸದರಾದ ಶ್ರೀಮತಿ ಸುಧಾ ಮೂರ್ತಿ, ಶಾಸಕರುಗಳಾದ ಯಶವಂತರಾಯಗೌಡ ಪಾಟೀಲ, ಹಣಮಂತ ನಿರಾಣಿ, ಪ್ರಕಾಶ ರಾಠೋಡ, ಸುನೀಲಗೌಡ ಪಾಟೀಲ, ಪಿ.ಎಚ್.ಪೂಜಾರ, ವಿಠ್ಠಲ…

Read More