Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಬಸವನಬಾಗೇವಾಡಿ: ಪಟ್ಟಣದ ತಹಸೀಲ್ದಾರ ಕಚೇರಿಯ ಸಭಾಂಗಣದಲ್ಲಿ ಜೂ. ೨೬ ರಂದು ಬೆಳಗ್ಗೆ ೧೧ ಗಂಟೆಗೆ ಜೂ.೨೭ ರಂದು ಆಚರಿಸಲ್ಪಡುವ ನಾಡಪ್ರಭು ಕೆಂಪೇಗೌಡ ಅವರ ೫೧೫ ನೇ ಜಯಂತಿಯಂಗವಾಗಿ ಪೂರ್ವಭಾವಿ ಸಭೆ ಕರೆಯಲಾಗಿದೆ. ಸಭೆಗೆ ತಾಲೂಕು ಮಟ್ಟದ ಎಲ್ಲ ವಿವಿಧ ಇಲಾಖೆಯ ಅಧಿಕಾರಿಗಳು, ಪಟ್ಟಣದ ಎಲ್ಲ ವಿವಿಧ ಸಂಘಟನೆಗಳ ಪ್ರಮುಖರು, ಮುಖಂಡರು, ಪದಾಽಕಾರಿಗಳು,ಎಲ್ಲ ವಿವಿಧ ಸಮಾಜದ ಮುಖಂಡರು ಆಗಮಿಸಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆಗೆ ಸಲಹೆ-ಸೂಚನೆಗಳನ್ನು ನೀಡಬೇಕೆಂದು ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಸವನಬಾಗೇವಾಡಿ: ತಾಲೂಕಿನ ನಂದಿಹಾಳ ಪಿಯು ಗ್ರಾಮದ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ 2024-25 ನೇ ಸಾಲಿನ ಶಾಲಾ ಸಂಸತ್ ಗೆ ಚುನಾವಣೆ ಜರುಗಿತು.ಶಾಲಾ ಸಂಸತ್ ಚುನಾವಣೆಯಲ್ಲಿ ಸ್ಪರ್ಧಿಸಿ ವಿಜೇತರಾದ ಮಕ್ಕಳಿಗೆ ಪ್ರಮಾಣ ವಚನ ಬೋಧಿಸಿ ಮಕ್ಕಳಿಗೆ ಪ್ರಮಾಣ ಪತ್ರ ನೀಡಲಾಯಿತು.ಶಿಕ್ಷಕ ಬಸವರಾಜ ಬಾಗೇವಾಡಿ ಅವರು ಶಾಲಾ ಸಂಸತ್ತು ರಚನೆ ಮತ್ತು ವಿದ್ಯಾರ್ಥಿ ಪ್ರತಿನಿಧಿಗಳ ಶಾಲಾ ಕರ್ತವ್ಯ ಬಗ್ಗೆ ವಿವರವಾಗಿ ಹೇಳಿದರು. ಶಾಲಾ ಮುಖ್ಯ ಗುರು ಬಿ.ಎಂ. ಸಂಗಳದ, ಶಿಕ್ಷಕರಾದ ಸಿ.ಎನ್. ಗಟೆಗಾರ್, ಸಂಗು ನಾಗರಾಳ, ಪ್ರೇಮಲತಾ, ರಮೇಶ ಕುದರಿ, ಶಿವು ಮಡಿಕೇಶ್ವರ, ವೈ.ಬಿ. ಬಾಗೇವಾಡಿ,ಅತಿಥಿ ಶಿಕ್ಷಕರಾದ ಲಕ್ಷ್ಮಿಕಾಂತ, ವಿಜಯಲಕ್ಷ್ಮೀ, ಶಭಾನಮ್ ಇದ್ದರು.
ಬಸವನಬಾಗೇವಾಡಿ: ಜಲಜೀವನ ಮಿಷನ್ ಯೋಜನೆಯಡಿ ಗ್ರಾಮೀಣ ಭಾಗದಲ್ಲಿ ಪ್ರತಿಯೊಂದು ಮನೆಗೂ ನಲ್ಲಿ ಅಳವಡಿಸುವ ಮೂಲಕ ಜನರಿಗೆ ಕುಡಿಯುವ ನೀರು ಒದಗಿಸಲಾಗುತ್ತಿದೆ. ಜನರ ಆರೋಗ್ಯದ ಹಿತದೃಷ್ಟಿಯಿಂದ ನೀರಿನ ಸ್ವಚ್ಛತೆಯ ಬಗ್ಗೆ ಜನರಲ್ಲಿ ಜಾಗೃತಿಯನ್ನು ಮೂಡಿಸುವಲ್ಲಿ ಆಯಾ ಗ್ರಾಮ ಪಂಚಾಯಿತಿಯ ಅಧಿಕಾರಿಗಳು ಗಮನ ಹರಿಸಬೇಕೆಂದು ಗ್ರಾಮೀಣ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಅಭಿಯಂತರ ವ್ಹಿ.ಬಿ.ಗೊಂಗಡಿ ಹೇಳಿದರು.ಪಟ್ಟಣದ ತಾಲೂಕು ಪಂಚಾಯಿತಿಯ ರಾಜೀವಗಾಂಧಿ ಸೇವಾ ಕೇಂದ್ರದಲ್ಲಿರುವ ಸಭಾ ಭವನದಲ್ಲಿ ಪ್ರತಿ ಮನೆಗೆ ನಲ್ಲಿ ಸಂಪರ್ಕ ಮೂಲಕ ಮತ್ತು ಶುದ್ಧ ಹಾಗೂ ಸುರಕ್ಷಿತ ನೀರು ಗ್ರಾಮಗಳಲ್ಲಿ ನೀರನ್ನು ಪೂರೈಕೆ ಮಾಡುವ ಕುರಿತು ಮಂಗಳವಾರ ಹಮ್ಮಿಕೊಂಡಿದ್ದ ಜಲಜೀವನ ಮಿಷನ್ ಯೋಜನೆಯ ಒಂದು ದಿನದ ಕಾರ್ಯಾಗಾರವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಜನರು ನೀರನ್ನು ಮಿತವಾಗಿ ಬಳಸುವುದರ ಮೂಲಕ ನೀರಿನ ಸಂರಕ್ಷಣೆ ಮಾಡುವ ಜವಾಬ್ದಾರಿ ಪ್ರತಿಯೊಬ್ಬರದ್ದಾಗಿದೆ. ಜಲಮೂಲವನ್ನು ಸುಸ್ಥಿರವಾಗಿಟ್ಟುಕೊಳ್ಳುವ ಜೊತೆಗೆ ನೀರು ಮಲಿನವಾಗದಂತೆ ನೋಡಿಕೊಳ್ಳಬೇಕು. ನೀರಿನ ಭದ್ರತೆ, ಶುದ್ಧ ಕುಡಿಯುವ ನೀರಿನ ಪೂರೈಕೆ ನಮ್ಮೆಲ್ಲರ ಹೊಣೆಯಾಗಿದೆ ಎಂದರು.ಅಧ್ಯಕ್ಷತೆ…
ಮುದ್ದೇಬಿಹಾಳ: ಪಟ್ಟಣದ ಬಸವೇಶ್ವರ ವೃತ್ತದ ಬಳಿ ಓಸಿ ಮಟಕಾ ಜೂಜಾಟ ನಡೆಸುತಿದ್ದ ವ್ಯಕ್ತಿಯ ಮೇಲೆ ಇಲ್ಲಿನ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.ತಾಲೂಕಿನ ನಾಗಬೇನಾಳ ಗ್ರಾಮದ ಮಾಳಪ್ಪ ಹುಡೇದ ನ ಮೇಲೆ ಪ್ರಕರಣ ದಾಖಲಾಗಿದ್ದು ಈತ ಸಾರ್ವಜನಿಕ ಸ್ಥಳದಲ್ಲಿ ನಿಂತುಕೊಂಡು ತನ್ನ ಫಾಯಿದೇಗೋಸ್ಕರ ೧ ರೂಪಾಯಿಗೆ ೮೦ ರೂಪಾಯಿ ಕೊಡುವ ಕರಾರಿನ ಮೇಲೆ ಅಂಕಿ ಸಂಖ್ಯೆಗಳ ಆಧಾರದ ಮೇಲೆ ಸಾರ್ವಜನಿಕರಿಂದ ಹಣ ಇಸಿದುಕೊಂಡು ಓ.ಸಿ ಮಟಕಾ ಜೂಜಾಟದಲ್ಲಿ ತೊಡಗಿದ್ದಾಗ ಪೊಲೀಸರ ಕೈಗೆ ಸಿಕ್ಕಿದ್ದು ಪಿಎಸ್‌ಐ ಸಂಜಯ ತಿಪರೆಡ್ಡಿ ಪ್ರಕರಣ ದಾಖಲಿಸಿದ್ದಾರೆ.
ಸಿಂದಗಿ: ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಮಹರ್ಷಿ ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ ನಡೆದ ಅವ್ಯವಹಾರ ವಿರುದ್ದ ಜೂ.೨೮ರಂದು ಫ್ರತಿಭಟನೆ ನಡೆಸಲು ತಾಲೂಕು ಎಸ್.ಟಿ.ಮೋರ್ಚಾ ವತಿಯಿಂದ ಪೂರ್ವಭಾವಿ ಸಭೆ ನಡೆಸಲಾಯಿತು.ಈ ವೇಳೆ ಮಾಜಿ ಶಾಸಕ ರಮೇಶ ಭೂಸನೂರ, ಒಬಿಸಿ ರಾಜ್ಯ ಉಪಾಧ್ಯಕ್ಷ ವಿವೇಕಾನಂದ ಡಬ್ಬಿ, ಎಸ್.ಟಿ.ಮೋರ್ಚಾ ಜಿಲ್ಲಾಧ್ಯಕ್ಷ ರವಿ ವಗ್ಗಿ, ಪ್ರದಾನ ಕಾರ್ಯದರ್ಶಿ ಭರತ್ ಕೋಳಿ, ತಾಲೂಕಾಧ್ಯಕ್ಷ ಪ್ರಶಾಂತ ಕದ್ದರಗಿ, ಮುಖಂಡರಾದ ಅನೀಲ ಜಮಾದಾರ, ಪ್ರ.ಕಾರ್ಯದರ್ಶಿ ಭಾಗಣ್ಣ ಕೊಟ್ಟಿಗೊಳ, ಶಿವು ಗುರಿಕಾರ, ಪೀರು ಕೆರೂರ, ರಾಜು ದ್ಯಾಬೇರಿ, ನೀಲಮ್ಮ ಯಡ್ರಾಮಿ ಮತ್ತಿತರಿದ್ದರು.
ಶಾಲಾ ವಿದ್ಯಾರ್ಥಿಗಳಿಗೆ ಪಾಠ ಮಾಡಿದ ಜಿಲ್ಲಾಧಿಕಾರಿ ವಿಜಯಪುರ: ಮಂಗಳವಾರ ಚಡಚಣದಲ್ಲಿ ಆಯೋಜಿಸಲಾದ ಜನಸ್ಪಂದನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಬರಡೋಲದ ಕರ್ನಾಟಕ ಪಬ್ಲಿಕ್ ಶಾಲೆ ಭೇಟಿ ನೀಡಿ, ಶಾಲೆಯಲ್ಲಿ ಒದಗಿಸಿರುವ ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಿದರು.ಶಾಲಾ ಮಕ್ಕಳಿಗೆ ಪಾಠ ಮಾಡಿದ ಜಿಲ್ಲಾಧಿಕಾರಿ: ಈ ಸಂದರ್ಭದಲ್ಲಿ ಶಾಲಾ ತರಗತಿಗೆ ತೆರಳಿಗೆ ಮಕ್ಕಳೊಂದಿಗೆ ಸಂವಾದ ನಡೆಸಿದ ಅವರು, ಮಕ್ಕಳಿಗೆ ಪಾಠ ಹೇಳುವ ಮೂಲಕ ಪ್ರೊತ್ಸಾಹಿಸಿದ ಅವರು, ವಿದ್ಯಾರ್ಥಿಗಳು ಓದಿನಲ್ಲಿ ತೊಡಗಿಸಿಕೊಂಡು ಶಿಕ್ಷಕರು ಹೇಳಿಕೊಡುವ ಪಾಠ ಮನನ ಮಾಡಿಕೊಂಡು ಕಲಿತ ಶಾಲೆಗೆ ಕೀರ್ತಿ ತರುವಂತೆ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರುಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಸೇರಿದಂತೆ ಇತರ ಅಧಿಕಾರಿಗಳು ಉಸ್ಥಿತರಿದ್ದರು.
ವಿಜಯಪುರ: ಆರೋಗ್ಯ ಖಾತೆ ಸಚಿವರಾದ ದಿನೇಶ ಗುಂಡೂರಾವ್ ಅವರು ಜೂನ್.೨೮ರಂದು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.ಜೂ.೨೮ರಂದು ಬೆಳಿಗ್ಗೆ ೯ ಗಂಟೆಗೆ ವಿಜಯಪುರಕ್ಕೆ ಆಗಮಿಸಿ, ಬೆಳಿಗ್ಗೆ ೧೧ ಗಂಟೆಯವರೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವ್ಯಾಪ್ತಿಯ ವಿವಿಧ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಬೆಳಿಗ್ಗೆ ೧೧-೩೦ಕ್ಕೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ ೩ ಗಂಟೆಗೆ ವಿಜಯಪುರದಿಂದ ಬಾಗಲಕೋಟೆ ಜಿಲ್ಲೆಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ವಿಜಯಪುರ: ನಗರದ ದರಬಾರ ಹೈಸ್ಕೂಲ್ ಹತ್ತಿರ ಈಚೆಗೆ ಸಿಸಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಭೂಮಿಪೂಜೆ ನೆರವೇರಿಸಿದರು.ಲೋಕೋಪಯೋಗಿ ಇಲಾಖೆಯಿಂದ ಮಂಜೂರಾದ ರೂ.೭೦ ಲಕ್ಷ ಅನುದಾನದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಮುಖ್ಯ ರಸ್ತೆಯಿಂದ ದರಬಾರ ಹೈಸ್ಕೂಲ್ ಮೂಲಕ ಭವಾನಿ ಆಸ್ಪತ್ರೆ ವರೆಗೆ ಸಿಸಿ ರಸ್ತೆ ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದರು.ಭೂಮಿಪೂಜೆಯ ಬಳಿಕ ಸಮಸ್ಯೆಗಳ ಪರಿಹಾರಕ್ಕಾಗಿ ಆಗಮಿಸಿದ್ದ ಸಾರ್ವಜನಿಕರ ಅಹವಾಲು ಸ್ವೀಕರಿಸಿ, ಪರಿಹರಿಸುವ ಭರವಸೆ ನೀಡಿದ ಶಾಸಕರು, ಕೆಲವೊಂದು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸಿದರು.ಮಹಾನಗರ ಪಾಲಿಕೆ ಸದಸ್ಯರಾದ ಕಿರಣ ಪಾಟೀಲ, ಜವಾಹಾರ ಗೋಸಾವಿ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಶಂಕರ ಹೂಗಾರ ಸೇರಿದಂತೆ ಮುಖಂಡರು, ಕಾರ್ಯಕರ್ತರು, ಮಹಾನಗರ ಪಾಲಿಕೆ ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಚಡಚಣದಲ್ಲಿ ಜನಸ್ಪಂದನ ಕಾರ್ಯಕ್ರಮ | ಸಾರ್ವಜನಿಕರ ಅಹವಾಲು | ಅಧಿಕಾರಿಗಳ ಸ್ಪಂದನೆ ವಿಜಯಪುರ: ಜನರ ಸಮಸ್ಯೆಗಳನ್ನು ನಿವಾರಣೆ ಮಾಡಲು ಸರ್ಕಾರ ಬದ್ಧವಾಗಿದ್ದು, ಅದಕ್ಕಾಗಿ ಮನೆ ಬಾಗಿಲಿಗೆ ಸರಕಾರ ಎಂಬಂತೆ ಜನಸ್ಪಂದನ ಕಾರ್ಯಕ್ರಮ ನಡೆಯುತ್ತಿದೆ. ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ನಾಗಠಾಣ ಶಾಸಕ ವಿಠ್ಠಲ್ ಕಟಕದೊಂಡ ಹೇಳಿದರು.ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ ಇವುಗಳ ಸಂಯುಕ್ತಶ್ರಯದಲ್ಲಿ ಚಡಚಣ ನಗರದ ಗುರುಕೃಪ ಮಾಂಗಲ್ಯ ಕಾರ್ಯಾಲಯದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಸಾರ್ವಜನಿಕರು ತಮ್ಮ ಸಮಸ್ಯೆ, ದೂರು, ಅಹ್ವಾಲುಗಳನ್ನು ದೂರದ ಜಿಲ್ಲಾ ಕಚೇರಿಗೆ ಹೋಗಿ ದಾಖಲಿಸುವುದು ಆರ್ಥಿಕ ಹಾಗೂ ತೊಂದರೆಯಾಗುತ್ತಿರುವುದರಿಂದ ಸ್ಥಳೀಯವಾಗಿ ಸಮಸ್ಯೆಗಳನ್ನು ಪರಿಹರಿಸಿ ನ್ಯಾಯ ದೊರಕಿಸುವಲ್ಲಿ ಜನಸ್ಪಂದನ ಕಾರ್ಯಕ್ರಮ ನೆರವು ನೀಡುತ್ತದೆ. ಒಂದೇ ಸೂರಿನಡಿ ಎಲ್ಲಾ ಇಲಾಖೆಯ ಅಧಿಕಾರಿಗಳು ಲಭ್ಯವಿದ್ದು, ಬಹುಬೇಗನೆ ಜನರ ಕುಂದುಕೊರತೆ ನಿವಾರಿಸುವ ಮಹತ್ವಾಕಾಂಕ್ಷಿ ಕಾರ್ಯಕ್ರಮ ಜನಸ್ಪಂದನ ಕಾರ್ಯಕ್ರಮವಾಗಿದೆ ಎಂದು ಅವರು ಹೇಳಿದರು.ಆಯಾ ಕ್ಷೇತ್ರದ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸಲು ಜಾರಿಗೆ ಬಂದ ಈ ಕಾರ್ಯಕ್ರಮ ಜನರನ್ನು ಅಲೆದಾಡಿಸದೆ…
ಇಂಡಿ: ಪಟ್ಟಣದ ಜಿ.ಆರ್.ಜಿ. ಗಾಂಧಿ ಕಲಾ ವಾಯ್.ಎ. ಪಾಟೀಲ ವಾಣಿಜ್ಯ ಹಾಗೂ ಎಂ.ಎಫ್. ದೋಶಿ ವಿಜ್ಞಾನ ಪದವಿ ಮಹಾವಿದ್ಯಾಲಯಕ್ಕೆ ನ್ಯಾಕ್ ತಂಡ ಮಂಗಳವಾರ ಭೇಟಿ ನೀಡಿದರು.ತಂಡದಲ್ಲಿ ಕೇರಳದ ಡಾ. ಸುರೇಶ ರಂಗರಾಜ, ಸಿಲಾಂಗದ ಡಾ. ಓಂ ಪ್ರಕಾಶ ಸಿಂಗ್, ನಾಗಪುರದ ಡಾ. ಜಯವಂತ ವಡತೆ ಇದ್ದರು.ಈ ಸಂದರ್ಭದಲ್ಲಿ ಪ್ರಾಚಾರ್ಯರ, ಆಡಳಿತ ಮಂಡಳಿ, ಪ್ರಾಧ್ಯಾಪಕರು, ವಿದ್ಯಾರ್ಥಿಗಳು, ಹಳೇ ವಿದ್ಯಾರ್ಥಿಗಳು ಮತ್ತು ಪಾಲಕರ ಜೊತೆ ಸಂಪಾದ ನಡೆಸಿದರು.ಆಡಳಿತ ಮಂಡಳಿ ಅಧ್ಯಕ್ಷ ಡಾ. ದೀಪಕ ದೋಶಿ, ಗೌರವ ಅಧ್ಯಕ್ಷ ಪ್ರಭಾಕರ ಬಗಲಿ, ಡಾ. ಎಸ್.ಬಿ. ಜಾಧವ ಸೇರಿದಂತೆ ಎಲ್ಲ ಆಡಳಿತ ಮಂಡಳಿಯ ಸದಸ್ಯರು ಪಾಲ್ಗೊಂಡಿದ್ದರು.
