Author: editor.udayarashmi@gmail.com

ಬಸವನಬಾಗೇವಾಡಿ: ತಾಲೂಕಿನ ಯರನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಡಿ ನಿರ್ಮಾಣವಾಗಿರುವ ಅಮೃತ ಸರೋವರ ದಡದ ಮೇಲೆ ಶುಕ್ರವಾರ ೧೦ ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.ಈ ಕಾರ್ಯಕ್ರಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಕಿ ಎಸ್.ಡಿ.ಕನ್ನೊಳ್ಳಿ ಅವರು, ಪ್ರತಿನಿತ್ಯ ಯೋಗ ಮಾಡುವದರಿಂದ ಜೀವನದಲ್ಲಿ ಆಗುವ ಪ್ರಯೋಜನಗಳ ಕುರಿತು, ಉಸಿರಾಟದ ವ್ಯಾಯಾಮದ ಬಗ್ಗೆ ಆರೋಗ್ಯಕರ ಜೀವನಶೈಲಿಯ ಮಹತ್ವವನ್ನು ತಿಳಿಸಿಕೊಟ್ಟರು.ಕಾರ್ಯಕ್ರಮದಲ್ಲಿ ಯರನಾಳ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಾಂತವ್ವ ಕೋಲಕಾರ, ಉಪಾಧ್ಯಕ್ಷ ಹಣಮಂತ ಹಾದಿಮನಿ, ಸದಸ್ಯ ಅನಿಲ ಹಾರಿವಾಳ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಜಾನಕರ, ಸಿಬ್ಬಂದಿಗಳಾದ ರಮೇಶ ಉಣ್ಣಿಭಾವಿ, ಸಿದ್ದವ್ವ ಹರಿಜನ, ನೀಲವ್ವ ಕರಾಬಿ, ನಾಗು ಬಡಿಗೇರ, ಆಕಾಶ ಮಾದರ, ಗ್ರಾಮ ಕಾಯಕ ಮಿತ್ರ ಲಲಿತಾ ಕೋಲಕಾರ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಡಿ.ಬಿ.ಉಕ್ಕಲಿ, ತಾಲೂಕು ಐಇಸಿ ಸಂಯೋಜಕ ಮಡಿವಾಳಪ್ಪ ಬಿರಾದಾರ ಇತರರು ಇದ್ದರು.ಯೋಗ ದಿನಾಚರಣೆಯಲ್ಲಿ ನರೇಗಾ ಕೂಲಿಕಾರರು, ಗ್ರಾಮ ಪಂಚಾಯಿತಿ ಸಿಬ್ಬಂದಿಗಳು, ಶಾಲಾ ಮಕ್ಕಳು ಭಾಗವಹಿಸಿದ್ದರು.

Read More

ಬಸವನಬಾಗೇವಾಡಿ: ಪಟ್ಟಣದ ಕೂಡಲಸಂಗಮ ಅಭಿವೃದ್ಧಿ ಮಂಡಳಿಯ ಅಡಿಯಲ್ಲಿರುವ ಬಸವೇಶ್ವರ ದೇವಾಲಯ ಅಂತರಾಷ್ಟ್ರೀಯ ಶಾಲೆಯಲ್ಲಿ ಶುಕ್ರವಾರ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.ವಿನೂತನವಾಗಿ ಸಪ್ತ ಚಕ್ರದ ಮೊದಲನೇ ಅಂಗ ಮೂಲಾಧಾರ ಶೈಲಿಯಲ್ಲಿ ಯೋಗವನ್ನು ಶಾಲೆಯ ೩೫೦ ವಿದ್ಯಾರ್ಥಿಗಳೊಂದಿಗೆ ಸೂರ್ಯ ನಮಸ್ಕಾರ, ಆಸನಗಳು ಹಾಗೂ ಪ್ರಾಣಾಯಾಮ ಮತ್ತು ಶಾಲೆಯ ೨೨ ಯೋಗಪಟುಗಳು ಯೋಗದ ಕಠಿಣವಾದ ಆಸನಗಳನ್ನು ಶಾಲೆಯ ದೈಹಿಕ ಶಿಕ್ಷಕರಾದ ಮಹೇಶ ಸಂಗಮ, ವಿಜಯ ರಾಠೋಡ ಅವರ ಮಾರ್ಗದರ್ಶನದಲ್ಲಿ ಯೋಗ ದಿನಾಚರಣೆಯಂಗವಾಗಿ ಪ್ರದರ್ಶಿಸಿದರು.ಅತಿಥಿಗಳಾಗಿ ಆಗಮಿಸಿದ್ದ ಡಾ.ಅರವಿಂದ ಪಿ.ಕೆ. ಅವರು ವಿದ್ಯಾರ್ಥಿಗಳೊಂದಿಗೆ ಯೋಗಾಸನ ಮಾಡುವ ಜೊತೆಗೆ ಯೋಗದ ಮಹತ್ವದ ಕುರಿತು ಮಾಹಿತಿ ನೀಡಿದರು.ಶಾಲಾ ಮೇಲುಉಸ್ತುವಾರಿ ಸಮಿತಿ ಅಧ್ಯಕ್ಷ ಅನಿಲ ಅಗರವಾಲ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ನಿತ್ಯ ಜೀವನದಲ್ಲಿ ಯೋಗವನ್ನು ಮಾಡಬೇಕು. ಯೋಗ ಮಾಡಿದರೆ ತಮ್ಮ ಆರೋಗ್ಯ ಚೆನ್ನಾಗಿ ಇರುವ ಜೊತೆಗೆ ಏಕಾಗ್ರತೆ, ಜ್ಞಾಪಕ ಶಕ್ತಿ ಹೆಚ್ಚಾಗುವ ಜೊತೆಗೆ ದೇಹವು ಚೈತನ್ಯಮಯ,ಉಲ್ಲಾಸಭರಿತವಾಗಿ ಸದಾ ಇರುತ್ತದೆ. ಪ್ರತಿಯೊಬ್ಬರೂ ಯೋಗವನ್ನು ನಿತ್ಯ ತಪ್ಪದೇ ಮಾಡಿದರೆ ನಿರೋಗಿಗಳಾಗಿ ಇರಲು ಸಾಧ್ಯ ಎಂದರು.ಕಾರ್ಯಕ್ರಮದಲ್ಲಿ ಶಾಲಾ…

Read More

ಬಸವನಬಾಗೇವಾಡಿ: ಭಾರತ ದೇಶವು ಜಗತ್ತಿನ ಅನೇಕ ಕೊಡುಗೆಗಳನ್ನು ನೀಡಿದೆ. ಈ ಕೊಡುಗೆಗಳಲ್ಲಿ ಯೋಗವು ಒಂದು ಅತ್ಯುನ್ನತ ಕೊಡುಗೆಯಾಗಿದೆ ಎಂದು ಸಿವ್ಹಿಲ್ ನ್ಯಾಯಾಧೀಶೆ ತೇಜಸ್ವಿನಿ ಸೊಗಲದ ಹೇಳಿದರು.ಪಟ್ಟಣದ ನ್ಯಾಯಾಲಯದ ಮುಂಭಾಗ ತಾಲೂಕು ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘ, ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ವಿಶ್ವ ಯೋಗ ದಿನಾಚಾರಣೆಯಂಗವಾಗಿ ಶುಕ್ರವಾರ ಹಮ್ಮಿಕೊಂಡಿದ್ದ ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ಪ್ರಾಚೀನರು ನಮ್ಮ ದೇಹದ ಆರೋಗ್ಯವನ್ನು ಚೆನ್ನಾಗಿ ಇಟ್ಟುಕೊಳ್ಳುವ ಜೊತೆಗೆ ಯಾವಾಗಲೂ ಚೈತನ್ಯದಿಂದ ಇರಲು ಯೋಗವನ್ನು ಜಗತ್ತಿಗೆ ಕೊಡುಗೆಯಾಗಿ ನೀಡಿದ್ದಾರೆ. ಇಂದು ಇಡೀ ಜಗತ್ತಿನಲ್ಲಿ ಯೋಗದ ಮಹತ್ವದ ಗೊತ್ತಾಗಿದೆ. ಯೋಗವು ಶಿಸ್ತನ್ನು ಕಲಿಸುವುದರ ಜೊತೆಗೆ ನಮ್ಮ ಗುರಿ ಸಾದನೆಗೆ ಅತ್ಯಂತ ಬಲವಾದ ಸಾಧನವಾಗಿದೆ. ಯೋಗಕ್ಕಿರುವ ಶಕ್ತಿ ಬೇರೆ ಯಾವ ಔಷಧಿಗೂ ಇಲ್ಲ. ಪ್ರತಿಯೊಬ್ಬರೂ ಯೋಗದ ಮಹತ್ವವನ್ನು ತಿಳಿದುಕೊಂಡು ಪ್ರತಿನಿತ್ಯ ಒಂದು ಗಂಟೆ ಕಾಲ ಯೋಗಾಸ ಮಾಡುವ ಮೂಲಕ ಸುಂದರ ಜೀವನವನ್ನು ರೂಪಿಸಿಕೊಳ್ಳಬೇಕೆಂದರು.ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಚ್.ಎಸ್.ಗುರಡ್ಡಿ ಮಾತನಾಡಿ, ಯೋಗದಿಂದ…

Read More

ಮುದ್ದೇಬಿಹಾಳ: ಯೋಗಾಭ್ಯಾಸವನ್ನು ಒಂದು ದಿನಕ್ಕೆ ಮಾತ್ರ ಸೀಮಿತಗೊಳಿಸದೇ ದಿನನಿತ್ಯ ಅಭ್ಯಾಸಿಸಿದಲ್ಲಿ ಆರೋಗ್ಯವನ್ನು ಸುಲಭವಾಗಿ ಕಾಪಾಡಿಕೊಳ್ಳಬಹುದು ಎಂದು ಕಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ಸಂಪತ್ತಕುಮಾರ ಬಳೂಲಗಿಡದ ಹೇಳಿದರು.ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಅವರು ಮಾತನಾಡಿದರು.ಯೋಗದಿಂದ ರೋಗ ಮುಕ್ತ ಎನ್ನುವಂತೆ ದಿನಿನಿತ್ಯ ಯೋಗಾಭ್ಯಾಸ ಮಾಡುವದರಿಂದ ಎಲ್ಲ ರೋಗಗಳಿಗೆ ಪರಿಹಾರ ಕಂಡುಕೊಳ್ಳಬಹುದು. ಮನಸ್ಸು ಮತ್ತು ದೇಹವನ್ನು ಸದೃಢವಾಗಿ ಇಟ್ಟುಕೊಳ್ಳಬಹುದು ಎಂದರು.ಕಿರಿಯ ಶ್ರೇಣಿ ಸಹಾಯಕ ಸರ್ಕಾರಿ ಅಭಿಯೋಜಕ ಬಸವರಾಜ ಆಹೇರಿ, ನ್ಯಾಯವಾದಿಗಳ ಸಂಘದ ಪ್ರ.ಕಾರ್ಯದರ್ಶಿ ಪಿ.ಬಿ.ಗೌಡರ ಮಾತನಾಡಿದರು. ನ್ಯಾಯವಾದಿ ಎಂ.ಆರ್.ಪಾಟೀಲ, ನ್ಯಾಯಾಲಯದ ಸಿಬ್ಬಂದಿಗಳಾದ ಎಸ್.ಎಸ್.ಬಳಗಾನೂರ, ಅರವಿಂದ ಕುಂಬಾರ, ನರ್ಮದಾ ಮರೋಳ, ಎಲ್.ಬಿ.ಗುರಿಕಾರ, ಜೆ.ಎಸ್.ಹೆಬ್ಬಾಳ, ರೇಣುಕಾ ಜಾನಮಟ್ಟಿ, ಅಕ್ಕಮಹಾದೇವಿ ಪಟ್ಟಣಶೆಟ್ಟಿ, ಬಿ.ಎಂ.ಖಾಜಿ, ಆಯ್.ಆರ್.ಹಿರೇಮಠ, ಶ್ರೀಕಾಂತ ಸಂಕೀನ, ಪಾಂಡು ಚೌದರಿ, ಮಹಾಂತೇಶ ಹಚರೆಡ್ಡಿ, ಇಸಾಕ ಒಂಟಿ ಸೇರಿದಂತೆ ಮತ್ತೀತರರು ಇದ್ದರು.

Read More

ಕೇಂದ್ರ ಸಂವಹನ ಇಲಾಖೆ, ವಾರ್ತಾ ಮತ್ತು ಪ್ರಸಾರ ಸಚಿವಾಲಯ ಸಹಯೋಗದಲ್ಲಿ ಯೋಗ ದಿನ ಆಚರಣೆ ವಿಜಯಪುರ: ಭಾರತ ಸರ್ಕಾರ ಕೇಂದ್ರ ಸಂವಹನ ಇಲಾಖೆ, ವಾರ್ತಾ ಮತ್ತು ಪ್ರಸಾರ ಸಚಿವಾಲಯ, ವಿದ್ಯಾವರ್ಧಕ ಸಂಘದ ಬನ್ಸಿಲಾಲ್ ವಿಟ್ಟಲ್ ದಾಸ್ ಪದವಿ ಮಹಾವಿದ್ಯಾಲಯದಲ್ಲಿ ಇಂದು ನೆಹರು ಯುವ ಕೇಂದ್ರ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಜಿಲ್ಲಾ ಘಟಕ ಇವರ ಸಹಯೋಗದಲ್ಲಿ ಶುಕ್ರವಾರ ನಗರದ ದರಬಾರ್ ಹೈಸ್ಕೂಲ್ ಮೈದಾನದಲ್ಲಿ ೧೦ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಯಿತು.ಯೋಗ ದಿನಾಚರಣೆ ಕಾರ್ಯಕ್ರಮವನ್ನು ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಕೃಷ್ಣಮೂರ್ತಿ ದೇಶಪಾಂಡೆ ಅವರು ಉದ್ಘಾಟಿಸಿ ಮಾತನಾಡಿ, ದಿನನಿತ್ಯ ಯೋಗಾಭ್ಯಾಸ ಮಾಡುವುದರಿಂದ ಶಾಂತಿ ಸಹ ಬಾಳ್ವೆ ಬದುಕು ರೂಡಿಸಿಕೊಳ್ಳಲು ಸಾಧ್ಯವಾಗುತ್ತದೆ. ಪೋಷಕರು ಶಿಕ್ಷಣದ ಜೊತೆಗೆ ಯೋಗ ಶಿಕ್ಷಣ ನೀಡಲು ಮಕ್ಕಳಿಗೆ ಆದ್ಯತೆ ನೀಡಬೇಕೆಂದು ಕರೆ ನೀಡಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರಾಜೇಶ್ ದರ್ಬಾರ್ ಅವರು ಮಾತನಾಡಿ, ಸುಮಾರು ೫೦೦೦ ವರ್ಷಗಳ ಇತಿಹಾಸವಿರುವ ಯೋಗ ಕಲೆಯನ್ನು ಜಗತ್ತಿಗೆ ಪರಿಚಯಿಸಿದ ಹಿರಿಮೆ ಭಾರತ ಹೊಂದಿದೆ. ಪ್ರತಿಯೊಬ್ಬ ಭಾರತೀಯ…

Read More

ವಿಜಯಪುರ: ಸಾರ್ವಜನಿಕ ಗ್ರಂಥಾಲಯ ಇಲಾಖೆಯಲ್ಲಿ ರಾಜ್ಯದ ೪ ಕಂದಾಯ ವಿಭಾಗಗಳಲ್ಲಿ ಗ್ರಂಥಾಲಯ ವಿಜ್ಞಾನ ತರಬೇತಿ ಶಾಲೆಯನ್ನು ನಡೆಸಲಾಗುತ್ತಿದ್ದು, ಧಾರವಾಡ ವಿಭಾಗದ ಗ್ರಂಥಾಲಯ ವಿಜ್ಞಾನ ತರಬೇತಿ ಶಾಲೆಗೆ ಪ್ರವೇಶ ಬಯಸುವ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.ಪಿಯುಸಿ ಪರೀಕ್ಷೆಯಲ್ಲಿ ಕನಿಷ್ಠ ಶೇ.೪೦ ರಷ್ಟು ಹಾಗೂ ಎಸ್ಸಿ.ಎಸ್ಟಿ ಅಭ್ಯರ್ಥಿಗಳು ಕನಿಷ್ಠ ಶೇ.೩೫ರಷ್ಟು ಅಂಕ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಹಾಲಿ ಕಾರ್ಯ ನಿರ್ವಹಿಸುತ್ತಿರುವ ಇಲಾಖೆಯ ಡಿ ದರ್ಜೆ ಸಹವರ್ತಿ ಅಭ್ಯರ್ಥಿಗಳು ಸಂಬಂಧಿಸಿದ ಉಪನಿರ್ದೇಶಕರು- ಮುಖ್ಯ ಗ್ರಂಥಾಲಯಾಧಿಕಾರಿಗಳ ಮೂಲಕ ಗ್ರಾಮ ಪಂಚಾಯತಿ ಗ್ರಂಥಾಲಯ ಮೇಲ್ವಿಚಾರಕರು ಪಂಚಾಯತ್ ಅಭಿವೃದ್ದಿ ಅಧಿಕಾರಿಗಳ ಮೂಲಕ ಹಾಗೂ ಇತರೆ ಸಂಸ್ಥೆಯಿಂದ ಬರುವ ಅಭ್ಯರ್ಥಿಗಳು ತಮ್ಮ ಸಂಸ್ಥೆಯ ಮುಖ್ಯಸ್ಥರ ಮೂಲಕ ಅರ್ಜಿ ಸಲ್ಲಿಸಬೇಕು.ಅರ್ಜಿ ಸಲ್ಲಿಸಲು ದಿನಾಂಕ : ೧೯-೦೭-೨೦೨೪ ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ನಗರ ಕೇಂದ್ರ ಗ್ರಂಥಾಲಯ, ಡಿಸಿ ಕಚೇರಿಯ ಆವರಣ, ಧಾರವಾಡ-೫೮೦೦೦೧ ದೂ: ೦೮೩೬-೨೪೪೨೪೬೫ ಸಂಖ್ಯೆಗೆ ಸಂಪರ್ಕಿಸುವಂತೆ ವಿಜಯಪುರ ನಗರ ಕೇಂದ್ರ ಗ್ರಂಥಾಲಯದ…

Read More

ವಿಜಯಪುರ: ಡಿಪ್ಲೋಮಾ ೨ನೇ ವರ್ಷದ ಅಥವಾ ೩ನೇ ಸೆಮಿಸ್ಟರ್ ಇಂಜಿನೀಯರಿಂಗ್ ಕೊರ್ಸ್ಗಳಿಗೆ ೨೦೨೪ನೇ ಸಾಲಿನ ಪ್ರವೇಶಕ್ಕೆ ಡಿಪ್ಲೋಮಾ ಸಾಮಾನ್ಯ ಪ್ರವೇಶ ಪರೀಕ್ಷೆಗಳು ಜೂ.೨೨ ರಂದು ವಿಜಯಪುರ ನಗರದ ಬಾಲಕರ ಸರ್ಕಾರಿ ಪದವಿಪುರ್ವ ಕಾಲೇಜ್‌ನಲ್ಲಿ ಜರುಗಲಿದ್ದು, ಮುನ್ನೆಚ್ಚರಿಕೆಯಾಗಿ ಪರೀಕ್ಷಾ ಕೇಂದ್ರಗಳ ಸುತ್ತಲಿನ ೨೦೦ ಮೀಟರ್ ವ್ಯಾಪ್ತಿಯಲ್ಲಿ ಮಧ್ಯಾಹ್ನ ೧೨-೩೦ರಿಂದ ಪರೀಕ್ಷೆ ಮುಕ್ತಾಯವಾಗುವರೆಗೆ ಕಲಂ ೧೪೪ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಆದೇಶ ಹೊರಡಿಸಿದ್ದಾರೆ.ಪರೀಕ್ಷಾ ಕೇಂದ್ರದ ಸಮೀಪದಲ್ಲಿರುವ ಝರಾಕ್ಸ್ ಅಂಗಡಿಗಳು, ಕಂಪ್ಯೂಟರ್ ಸೆಂಟರ್‌ಗಳು, ಇಂಟರ್‌ನೆಟ್ ಕೆಫೆಗಳು, ಕೋಚಿಂಗ್ ಕೇಂದ್ರಗಳು ಸದರಿ ಅವಧಿಯಲ್ಲಿ ತೆರೆಯದಂತೆ ಅದೇಶದಲ್ಲಿ ಆದೇಶಿಸಲಾಗಿದೆ.

Read More

ವಿಜಯಪುರ: ಜಿಲ್ಲಾ ಕೃಷಿ ತರಬೇತಿ ಕೇಂದ್ರದ ವತಿಯಿಂದ ಜೂನ್-೨೦೨೪ರ ಮಾಹೆಯಲ್ಲಿ ವಿಜಯಪುರ ಜಿಲ್ಲೆಯ ರೈತ-ರೈತ ಮಹಿಳೆಯರಿಗೆ ವಿಜಯಪುರ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಜೂ.೨೬ ರಂದು ಮುಂಗಾರು ಬೆಳೆಗಳ ಸಾಗುವಳಿಯಲ್ಲಿ ನವೀನ ತಾಂತ್ರಿಕತೆಗಳು ವಿಷಯ ಕುರಿತು ತರಬೇತಿ ಆಯೋಜಿಸಲಾಗಿದೆ.ಆಸಕ್ತ ರೈತರು ತರಬೇತಿಯಲ್ಲಿ ಭಾಗವಹಿಸಲು ಕೋರಲಾಗಿದ್ದು, ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಹಾಗೂ ನೊಂದಣಿಗಾಗಿ ಕೃಷಿ ಅಧಿಕಾರಿಗಳಾದ ಫಾತೀಮಾ ಬಾನು ಸುತಾರ್ ಮೊ: ೯೮೮೬೧೩೪೩೧೦ ಸಂಖ್ಯೆಗೆ ಸಂಪರ್ಕಿಸುವಂತೆ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿಜಯಪುರ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದಿಂದ ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ-ನೀಟ್ ಮೂಲಕ ದಾಖಲಾತಿ ಪಡೆಯುವ ವಿದ್ಯಾರ್ಥಿಗಳಿಗೆ ಅರಿವು ಸಾಲ ಯೋಜನೆಯಡಿಯಲ್ಲಿ ವಿದ್ಯಾಭ್ಯಾಸ (ಶೈಕ್ಷಣಿಕ) ಸಾಲ ಪಡೆಯಲು ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಮತೀಯ ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಹಾಗೂ ಆಂಗ್ಲೋ ಇಂಡಿಯನ್ ಜನಾಂಗಕ್ಕೆ ಸೇರಿದ ಸಿಇಟಿ-ನೀಟ್ ಪರೀಕ್ಷೆಗೆ ಹಾಜರಾಗಿ ವೈದ್ಯಕೀಯ (ಎಂಬಿಬಿಎಸ್), ಬಿಡಿಎಸ್, ಬಿಇ , ಬಿಟೆಕ್ ಬ್ಯಾಚುಲರ್ ಆಫ್ ಆರ್ಕಿಟೆಕ್ಟರ್, ಬಿ.ಆಯುಷ್, ಫಾರ್ಮಸಿ, ಕೃಷಿ ವಿಜ್ಞಾನ ಮತ್ತು ಪಶು ವೈದ್ಯಕೀಯ ಕೋರ್ಸ್ಗಳಿಗೆ ಸೇರಬಯಸುವ ವಿದ್ಯಾರ್ಥಿಗಳಿಗೆ ಹೊಸದಾಗಿ ಸಾಲ ಸೌಲಭ್ಯ ಒದಗಿಸಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅರ್ಹರು ನಿಗಮದ ವೆಬ್‌ಸೈಟ್ https:kmdconline.karnataka.gov.inಮೂಲಕ ಅರ್ಜಿ ಸಲ್ಲಿಸಿ, ಸಲ್ಲಿಸಿದ ಅರ್ಜಿಯ ಪ್ರಿಂಟ್‌ಔಟ್ ತೆಗೆದು, ಇತರೆ ಅವಶ್ಯಕ ದಾಖಲೆಗಳೊಂದಿಗೆ ನಿಗಮದ ಜಿಲ್ಲಾ ಕಚೇರಿಗೆ ಸಲ್ಲಿಸಬೇಕು. ನಂತರ ಅರ್ಹ ವಿದ್ಯಾರ್ಥಿಗಳಿಗೆ ಅವರು ಸೇರಬಯಸುವ ಕಾಲೇಜಿಗೆ ಬೋಧನಾ ಶುಲ್ಕವನ್ನು…

Read More

ವಿಜಯಪುರ: ಇಂಡಿ ಸರಕಾರಿ ಆದರ್ಶ ವಿದ್ಯಾಲಯದಲ್ಲಿ 2024-25 ನೇ ಸಾಲಿನಲ್ಲಿ 7, 8 ಮತ್ತು 9ನೇ ತರಗತಿಯಲ್ಲಿ ಖಾಲಿ ಇರುವ ಸೀಟುಗಳಿಗೆ ವಿದ್ಯಾರ್ಥಿಗಳನ್ನು ಭರ್ತಿ ಮಾಡಿಕೊಳ್ಳಲು ಮಾನ್ಯ ರಾಜ್ಯ ಯೋಜನಾ ನಿರ್ದೇಶಕರು ಸಮಗ್ರ ಶಿಕ್ಷಣ ಕರ್ನಾಟಕ ಬೆಂಗಳೂರು ರವರ ಸುತ್ತೋಲೆಯ ಮೇರೆಗೆ ತರಗತಿವಾರು ಮತ್ತು ರೋಸ್ಟರ್ ಆಧಾರದ ಮೇಲೆ ಈ ಸಂಸ್ಥೆಯಲ್ಲಿ ಖಾಲಿ ಇರುವ ತರಗತಿವಾರು ಸೀಟುಗಳು ಅರ್ಜಿ ಕರೆಯಲಾಗಿದೆ.7ನೇ ತರಗತಿಯಲ್ಲಿ 22 ಸೀಟುಗಳು, 8ನೇ ತರಗತಿಯಲ್ಲಿ 08 ಸೀಟುಗಳು, 9ನೇ ತರಗತಿಯಲ್ಲಿ 08 ಸೀಟುಗಳು. ಖಾಲಿ ಇದ್ದು, ಆಸಕ್ತಿಯುಳ್ಳ ವಿದ್ಯಾರ್ಥಿಗಳು ಜೂನ 20 ರಿಂದ ಜೂನ 26 ವರೆಗೆ ಸರಕಾರಿ ಆದರ್ಶ ವಿದ್ಯಾಲಯ ಇಂಡಿಯಲ್ಲಿ ಅರ್ಜಿ ಪಡೆದು ಭರ್ತಿ ಮಾಡಿಕೊಳ್ಳಲು ಮಾನ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎಸ್.ಆಲಗೂರ ಮತ್ತು ಮುಖ್ಯೋಪಾಧ್ಯಾಯ ಎಸ್.ಜಿ.ಬನಸೋಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪರೀಕ್ಷಾ ದಿನಾಂಕ ಜೂನ 29, ಪರೀಕ್ಷಾ ಸಮಯ: 10.30 ರಿಂದ 01.00 ಗಂಟೆಯವರೆಗೆ, ಹೆಚ್ಚಿನ ಮಾಹಿತಿಗಾಗಿ 8970716054 , 6360904885 ಈ ನಂಬರಗಳಿಗೆ ಸಂಪರ್ಕಿಸಿ.

Read More