Author: editor.udayarashmi@gmail.com

ಮುದ್ದೇಬಿಹಾಳ: ತಾಲ್ಲೂಕಿನ ಬಸರಕೋಡ ಗ್ರಾಮದ ಶ್ರೀ ಪವಾಡ ಬಸವೇಶ್ವರ ಪ್ರೌಢಶಾಲೆ ಹಾಗೂ ಮಾತೋಶ್ರೀ ಶಿವಲಿಂಗಮ್ಮ ಬ ನಾಡಗೌಡರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆವನ್ನು ಸಂಸ್ಥೆಯ ಅಧ್ಯಕ್ಷರಾದ ಕೆ ವಾಯ್ ಬಿರಾದಾರ ಹಾಗೂ ಪ್ರಾಥಮಿಕ ಶಾಲೆಯ ಅಧ್ಯಕ್ಷರಾದ ಎಸ್ ಬಿ ನಾಡಗೌಡರ(ಧಣಿ), ಹಾಗೂ ಪ್ರೌಢ ಹಾಗೂ ಪ್ರಾಥಮಿಕ ಶಾಲೆಯ ಮುಖ್ಯ ಗುರುಗಳು, ಹಾಗೂ ಸಹ ಶಿಕ್ಷಕರು ಸೇರಿದಂತೆ ವಿದ್ಯಾರ್ಥಿಗಳು ಇದ್ದರು.ದೈಹಿಕ ಶಿಕ್ಷಕರಾದ ಸಚೀನ ರಾಠೋಡ ಮಕ್ಕಳಿಗೆ ಯೋಗಾಸನ ಮಾಡಿಸಿದರು. ಪ್ರಕಾಶ ಗೊಂದಳೆ ಶಿಕ್ಷಕರು ಕಾರ್ಯಕ್ರಮವನ್ನು ನಿರೂಪಿಸಿದರು.

Read More

ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಯೋಗ ದಿನಾಚರಣೆ ವಿಜಯಪುರ: ದೈನಂದಿನ ಚಟುವಟಿಕೆಗಳಲ್ಲಿ ಯೋಗ ಅಳವಡಿಸಿಕೊಳ್ಳುವುದರಿಂದ ಮಾನಸಿಕ ಹಾಗೂ ದೈಹಿಕ ಸದೃಡತೆಗೆ ಯೋಗವು ತುಂಬಾ ಸಹಾಯಕಾರಿಯಾಗಿದೆ. ನಮ್ಮ ಬದುಕಿನಲ್ಲಿ ದಿನನಿತ್ಯದ ಚಟುವಟಿಕೆಗಳಲ್ಲಿ ಯೋಗಾಸನ ಮಹತ್ವದ್ದಾಗಿದೆ ಎಂದು ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ.ಆರ್.ಎಂ.ಮಿರ್ದೆ ಹೇಳಿದರು.ಶುಕ್ರವಾರ ನಗರದ ಬಿ.ಎಲ್.ಡಿ.ಇ.ಸಂಸ್ಥೆಯ ಎಸ್.ಬಿ.ಕಲಾ ಹಾಗೂ ಕೆಸಿಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಐಕ್ಯೂಎಸಿ,ಎನ್ ಎಸ್ ಎಸ್ ಘಟಕ ಹಾಗೂ ಐಐಸಿ ಸಂಯೋಜನೆಯಡಿಯಲ್ಲಿ ಅಂತರಾಷ್ಟೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಅವರು ಯೋಗವು ಒಂದು ಸರ್ವ ಸಿದ್ದಿಸಾಧವಾಗಿದೆ, ನಮ್ಮ ದೈಹಿಕ, ಮಾನಸಿಕ ಸದೃಡತೆಗೆ ಹಾಗೂ ನಮ್ಮ ಭವಿಷ್ಯದ ಸುಂದರ ಬದುಕಿಗೆ ಅಂತ್ಯದ ಅವಶ್ಯಕವಾಗಿದೆ. ಯೋಗವು ಕೇವಲ ಒಂದು ದಿನಕ್ಕೆ ಆಚರಣೆಗೆ ಸೀಮಿತವಾಗದೇ ನಿತ್ಯದ ಬದುಕಿನಲ್ಲಿ ಸದಾ ಯೋಗಾಸನ ಮಾಡುವ ಮೂಲಕ ವ್ಯಕ್ತಿಯೂ ತನ್ನ ಆರೋಗ್ಯವನ್ನು ಕಾಪಡಿಕೊಳ್ಳವಂತಾಗಬೇಕು. ವಿದ್ಯಾರ್ಥಿಗಳು ಪ್ರತಿನಿತ್ಯವು ಯೋಗಾಸನ ಆರಂಭಿಸುವ ಮೂಲಕವೇ ತನ್ನ ಕಾರ್ಯ ಚಟುವಟಿಕೆಗಳನ್ನು ಆರಂಭಿಸಬೇಕು. ಇದರಿಂದ ನಿತ್ಯದ ಕಾರ್ಯದಲ್ಲಿ ಉಲ್ಲಾಸ ಉತ್ಸಾಹ ಎದ್ದು…

Read More

ವಿಜಯಪುರ: ದೈನಂದಿನ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳಬೇಕು ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಕರೆ ನೀಡಿದರು.ಅವರು ಆಯುಷ್ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆಯುಷ್ ಇಲಾಖೆ ಇವರ ಸಹಯೋಗದೊಂದಿಗೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜೂನ್ ೨೧ರಂದು ‘ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ’ ಎಂಬ ಘೋಷವಾಕ್ಯದೊಂದಿಗೆ ನಡೆದ ೧೦ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವುದರ ಮೂಲಕ ಚಾಲನೆ ನೀಡಿ ಮಾತನಾಡಿದರು.ದೈಹಿಕ, ಮಾನಸಿಕ ಸದೃಢತೆಗೆ ಯೋಗ ಸಹಕಾರಿ. ಜೀವನದಲ್ಲಿ ಪ್ರತಿನಿತ್ಯ ಯೋಗ ರೂಡಿಸಿಕೊಳ್ಳಬೇಕು. ನಿಯಮಿತ ಯೋಗ ಮಾಡುವುದರ ಮೂಲಕ ಆರೋಗ್ಯ ದೃಢತೆ ಹಾಗೂ ಚೈತನ್ಯಯುಕ್ತ ಬದುಕು ನಡೆಸಬಹುದಾಗಿದೆ. ಯೋಗ ರೂಢಿಸಿಕೊಳ್ಳುವ ಮೂಲಕ ಆರೋಗ್ಯಯುತ ಜೀವನ ನಡೆಸಬಹುದು.ವಿಶ್ವಕ್ಕೆ ಯೋಗ ಪರಿಚಯಿಸಿದ್ದು ಭಾರತ. ಜೂನ್೨೧ ರಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಹಲವಾರು ದೇಶಗಳು ಯೋಗ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದು ಹೇಳಿದರು.ಸಾಮೂಹಿಕ ಯೋಗಾಭ್ಯಾಸ:‘ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ’ ಎಂಬ ಘೋಷವಾಕ್ಯದೊಂದಿಗೆ ನಡೆದ ೧೦ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ…

Read More

ಹಿಂದಿನ ಬಜೆಟ್‌ನಲ್ಲಿ ಈಗಾಗಲೇ ಅನುಮೋದನೆ | 20 ಹೋಬಳಿಗಳಲ್ಲಿ ಈ ವರ್ಷವೇ ವಸತಿ ಶಾಲೆ ಆರಂಭ | ಸಿಎಂ ಸಿದ್ದರಾಮಯ್ಯ ಸ್ಪಷ್ಠನೆ ಬೆಂಗಳೂರು: ಶಿಕ್ಷಣ ಪ್ರತಿಯೊಬ್ಬರ ಮೂಲಭೂತ ಹಕ್ಕು ಎಂದು ಹೇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದ ಪ್ರತಿ ಹೋಬಳಿಗೂ ಕಡ್ಡಾಯವಾಗಿ ವಸತಿ ಶಾಲೆಗಳನ್ನು ನೀಡಲಾಗುವುದು ಎಂದು ಘೋಷಿಸಿದರು.ಸಮಾಜ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಆಯೋಜಿಸಿದ್ದ ಎಸ್‌ಸಿ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಿಎಂ, ಹಿಂದಿನ ಬಜೆಟ್‌ನಲ್ಲಿ ಈಗಾಗಲೇ ಅನುಮೋದನೆ ದೊರೆತಿದ್ದು, 20 ಹೋಬಳಿಗಳಲ್ಲಿ ಈ ವರ್ಷ ವಸತಿ ಶಾಲೆಗಳನ್ನು ಆರಂಭಿಸಲಾಗುವುದು. ಹಂತ ಹಂತವಾಗಿ ರಾಜ್ಯದ ಎಲ್ಲ ಹೋಬಳಿಗಳಲ್ಲಿ ವಸತಿ ಶಾಲೆಗಳು ಬರಲಿವೆ ಎಂದರು.ಸರ್ಕಾರಿ ಶಾಲೆಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಬೇಕು. ಅವರನ್ನು ಪ್ರೋತ್ಸಾಹಿಸಲು ಪ್ರೋತ್ಸಾಹಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಮಾಜ ಕಲ್ಯಾಣ ಇಲಾಖೆಯಡಿ 833, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ 113 ವಸತಿ ಶಾಲೆಗಳಿದ್ದು, ಮುಂದಿನ ದಿನಗಳಲ್ಲಿ ಈ ಸಂಖ್ಯೆ ಹೆಚ್ಚಾಗಲಿದೆ ಎಂದು ಸಿಎಂ…

Read More

ಇಂದು ವಿಶ್ವ ಯೋಗ ದಿನಾಚರಣೆ ನಿಮಿತ್ಯ ಈ ವಿಶೇಷ ಲೇಖನ ಸ್ವಪ್ನಾ .ಜೆ .ರಾಥೋಡ್ ಎ. ಪತ್ರಿಕೋದ್ಯಮ ವಿದ್ಯಾರ್ಥಿನಿ ಎಸ್ ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯ, ವಿಜಯಪುರ ಯೋಗ ಎಂಬ ಪದವು ಸಂಸ್ಕೃತ ಮೂಲದಿಂದ ಬಂದಿದೆ. ‘ಯುಜ್’ ಅಂದರೆ ಬಂಧಿಸುವುದು, ಸೇರುವುದು, ಜೋಡಿಸುವುದು ಮತ್ತು ನೊಗಕ್ಕೆ. ಯೋಗವನ್ನು ಕೆಲವೊಮ್ಮೆ ನಾಲ್ಕು ಮಾರ್ಗಗಳಾಗಿ ವಿಂಗಡಿಸಲಾಗಿದೆ: ಭಕ್ತಿ ಮಾರ್ಗ, ಜ್ಞಾನ ಮಾರ್ಗ, ಕರ್ಮ ಮಾರ್ಗ ಮತ್ತು ಯೋಗ ಮಾರ್ಗ (ರಾಜ-ಯೋಗ ಮಾರ್ಗ ಎಂದೂ ಸಹ ಕರೆಯಲಾಗುತ್ತದೆ )ಆಧ್ಯಾತ್ಮಿಕ, ಮಾನಸಿಕ ಮತ್ತು ದೈಹಿಕ ಶಾಂತಿ-ಸಂಯಮಗಳನ್ನು ಕಾಯ್ದುಕೊಳ್ಳಲು ಸಾಧಿಸಲಾಗುವ ಉನ್ನತ ಜೀವನ ಶಿಕ್ಷಣವೇ ಯೋಗ.ಸಾವಿರಾರು ವರ್ಷಗಳಿಂದಲೂ ಭಾರತ ದೇಶದಲ್ಲಿ ಆಚರಿಸಲ್ಪಡುತ್ತಿರುವ ‘ಯೋಗವಿದ್ಯೆಯು’ ಋಷಿ ಮುನಿಗಳಾದಿ ಸಾಧಕರಿಂದ ವಿದ್ಯೆ ಮತ್ತು ಜೀವನ ಶೈಲಿಯಾಗಿ ಹರಿದು ಬಂದಿದೆ.ಯೋಗಶ್ಚಿತ್ತವೃತ್ತಿನಿರೋಧಃ ಎಂದ ಮಹಾ ಯೋಗಾಚಾರ್ಯ ಪತಂಜಲಿ ಮಹರ್ಷಿಗಳು ಯೋಗ ಪ್ರವರ್ತಕರು. ಯೋಗ ಸೂತ್ರಗಳು ಎಂಬ ಗ್ರಂಥದ ಮೂಲಕ, ಕ್ಲಿಷ್ಟಕರವಾದ ಯೋಗ ರಹಸ್ಯ ಗಳನ್ನು ಸುಲಭವಾಗಿ ತಿಳಿಸಿದ್ದಾರೆ.ಯೋಗದ ಎಂಟು ಅಂಗಗಳು (ಅಷ್ಟಾಂಗಗಳು)ಯಮ,ನಿಯಮ,ಆಸನ,ಪ್ರಾಣಯಾಮ,ಪ್ರತ್ಯಾಹಾರಧಾರಣ,ಧ್ಯಾನ,ಸಮಾಧಿಯೋಗ…

Read More

ವಿಜಯಪುರ: ರಾಜ್ಯ ಸರ್ಕಾರದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯನ್ನು ವಿರೋಧಿಸಿ ಭಾರತೀಯ ಜನತಾ ಪಾರ್ಟಿ, ಬಬಲೇಶ್ವರ ಮಂಡಲದ ವತಿಯಿಂದ ತಿಕೋಟ ಪಟ್ಟಣದಲ್ಲಿ ಎತ್ತಿನ ಗಾಡಿಯಲ್ಲಿ ಬೈಕ ಮೆರವಣಿಗೆ ಮಾಡುವ ಮೂಲಕ ವಿನೂತನವಾಗಿ ಪ್ರತಿಭಟನೆ ಮಾಡಲಾಯಿತು.ಪ್ರತಿಭಟನೆಯ ನೇತೃತ್ವ ವಹಿಸಿದ ಮುಖಂಡ ವಿಜುಗೌಡ ಎಸ್. ಪಾಟೀಲ ಹಾಗೂ ಮುಖಂಡರು ಮಾತನಾಡಿ ಬೆಲೆಯೇರಿಕೆಯಿಂದ ಜನಸಾಮಾನ್ಯರಿಗೆ ಆಗುತ್ತಿರುವಂತಹ ಸಮಸ್ಯೆಗಳನ್ನು ಹಾಗೂ ರಾಜ್ಯ ಸರ್ಕಾರ ಹೇಗೆ ಭ್ರಷ್ಟಾಚಾರದಲ್ಲಿ ಮುಳುಗಿದೆ ಎನ್ನುವದನ್ನ ಸವಿಸ್ತಾರವಾಗಿ ವಿವರಿಸಿದರು. ವಾಲ್ಮೀಕಿ ಹಗರಣ ಆಗಿರಬಹುದು, ಕೊಲೆ ಸುಲಿಗೆಗಳು ಆಗಿರಬಹುದು ಹಾಗೂ ಮತಕ್ಷೇತ್ರದಲ್ಲಿ ಯಾವುದೇ ಹೊಸ ಕಾಮಗಾರಿಗಳು ಜರುಗದೆ ಇರುವ ಬಗ್ಗೆ ಬೆಳಕು ಚಲ್ಲಿದರು.ಈ ಸಂದರ್ಭದಲ್ಲಿ ಮುಖಂಡರಾದ ಶ್ರೀ ವಿಜುಗೌಡ ಎಸ್. ಪಾಟೀಲ, ಮಂಡಲ ಅಧ್ಯಕ್ಷರಾದ ಸಂತೋಷ ಶಿ. ಕುರದಡ್ಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಈರಣ್ಣ ರಾವುರ, ನಿಕಟ ಪೂರ್ವ ಕಾರ್ಯದರ್ಶಿ ಬಸವರಾಜ ಬಿರಾದಾರ, ಮಂಡಲ ಪ್ರಧಾನ ಕಾರ್ಯದರ್ಶಿ ವಿನಾಯಕ ಗು. ಮಮದಾಪುರ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಪ್ರ.ಕಾರ್ಯದರ್ಶಿ ಮಹಾವೀರ ಮಾಯಪ್ಪಗೊಳ, ಮುಖಂಡರಾದ ರಾಮು ಜಾಧವ,…

Read More

ನಾಮಫಲಕಗಳಲ್ಲಿ ಶೇ.60% ಭಾಗ ಕನ್ನಡ ಹೊಂದಿರದಿದ್ದರೆ ಹೋರಾಟದ ಎಚ್ಚರಿಕೆ ನೀಡಿದ ಕರವೇ ವಿಜಯಪುರ: ಜಿಲ್ಲೆಯಲ್ಲಿರುವ ಅಂಗಡಿ-ಮುಂಗಟ್ಟುಗಳು ಹಾಗೂ ಸಂಘ ಸಂಸ್ಥೆಗಳು ತಮ್ಮ ನಾಮಫಲಕಗಳಲ್ಲಿ ಶೇ.60% ಕನ್ನಡ ಹಾಗೂ ಶೇ.40% ಅನ್ಯ ಭಾಷೆಯನ್ನೊಳಗೊಂಡ ನಾಮಫಲಕಗಳನ್ನು ಅಳವಡಿಸಿಕೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಶ್ರೀಶೈಲ ಮುಳಜಿ ಆಗ್ರಹಿಸಿದರು.ಗುರುವಾರ ನಗರದ ಖಾಸಗಿ ಹೋಟೆಲ್ ನಲ್ಲಿ ನಡೆದ ಪತ್ರಿಕಾ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಕುರಿತು ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮಾಡಿದ್ದರೂ ಸಹ ಜಿಲ್ಲಾಡಳಿತ ಕಾರ್ಯ ರೂಪಕ್ಕೆ ಇಳಿದಿಲ್ಲ. ಇದೇ ರೀತಿ ಮುಂದುವರೆದರೆ ಕರವೇ ಸೇನಾನಿಗಳು ಬೀದಿಗಿಳಿದು ಹೋರಾಟ ಮಾಡುವುದು ಅನಿವಾರ್ಯ ಆಗಲಿದೆ ಎಂದು ಎಚ್ಚರಿಸಿದರು.ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಮಂಜೂರಾತಿ ಹಿಂದಿನ ಸರ್ಕಾರದ ಅವಧಿಯಲ್ಲಿ ದೊರೆತ್ತಿದ್ದರೂ ರಾಜಕೀಯ ಇಚ್ಚಾಶಕ್ತಿ ಕೊರತೆಯಿಂದ ನೆನೆಗುದಿಗೆ ಬಿದ್ದಿದೆ. ಈ ವಿಷಯವಾಗಿ ಜಿಲ್ಲೆಯಲ್ಲಿ ಹೋರಾಟ ಕೈಕೊಂಡು ಸರ್ಕಾರದ ಗಮನ ಸೆಳೆದು ವೈದ್ಯಕೀಯ ಕಾಲೇಜಿನ ಸ್ಥಾಪನೆಗೆ ಶ್ರಮಿಸುವುದಾಗಿ ತಿಳಿಸಿದರು.ಬರಗಾಲದಿಂದ ತತ್ತರಿಸಿರುವ ವಿಜಯಪುರ ಜಿಲ್ಲೆಯಲ್ಲಿ ಮುಂಗಾರು ಮಳೆ ಉತ್ತಮ ಆಗಿರುವ ಪ್ರಯುಕ್ತ ರೈತರಿಗೆ…

Read More

ಮುದ್ದೇಬಿಹಾಳ: ಪಟ್ಟಣದ ಅಂಬೇಡ್ಕರ್ ವೃತ್ತದ ಬಳಿ ಇರುವ ಸಿದ್ದೇಶ್ವರ ಹೋಟಲ್ ನಲ್ಲಿ ಬುಧವಾರ ಸಂಜೆ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ತಾಲೂಕು ಅಧ್ಯಕ್ಷರಾಗಿ ಆಯ್ಕೆಯಾದ ಕಾಮರಾಜ ಬಿರಾದಾರ ಅವರನ್ನ ಸಾಹಿತಿಗಳು, ಕನ್ನಡಾಭಿಮಾನಿಗಳು, ಪ್ರಗತಿಪರ ಚಿಂತಕರು, ಅವರ ಅಭಿಮಾನಿಗಳು ಸೇರಿ ಸನ್ಮಾನಿಸಿ ಗೌರವಿಸಿದರು.ಈ ವೇಳೆ ಎಪಿಎಂಸಿ ನಿರ್ದೇಶಕ ವಾಯ್.ಎಚ್.ವಿಜಯಕರ ಮಾತನಾಡಿ ತಾಲೂಕಿನಲ್ಲಿ ಕನ್ನಡದ ರಥ ಎಳೆಯುವ ಸಾರಥ್ಯ ಸೂಕ್ತವಾಗಿರುವ ವ್ಯಕ್ತಿಗೆ ಸಿಕ್ಕಿರುವದು ಸಂತೋಷ ತಂದಿದೆ. ಹೋರಾಟಗಾರರಾಗಿ, ಮಾಜಿ ಪುರಸಭೆ ಸದಸ್ಯರಾಗಿ, ಯುವ ಮುಖಂಡರಾಗಿ ಕಾಮರಾಜ ಅವರು ಸಾಕಷ್ಟು ಕ್ಷೇತ್ರಗಳಲ್ಲಿ ಅನುಭವ ಹೊಂದಿದ್ದಾರೆ. ಅವರ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸಿಕೊಂಡು ಹೋಗುವ ವಿಶ್ವಾಸ ನಮಗಿದೆ ಎಂದರು.ಸನ್ಮಾನ ಸ್ವೀಕರಿಸಿ ಮಾತನಾಡಿದ ಕಾಮರಾಜ ಅವರು, ಈ ಹುದ್ದೆಯನ್ನು ನಾನು ನಮ್ಮ ತಂದೆಯವರ ಪಾದಕ್ಕೆ ಅರ್ಪಿಸುವೆ. ನನ್ನ ಮೇಲೆ ವಿಶ್ವಾಸವಿಟ್ಟು ನನ್ನನ್ನು ಈ ಹುದ್ದೆಗೆ ಆಯ್ಕೆ ಮಾಡಿದ ಜಿಲ್ಲಾಧ್ಯಕ್ಷ ಹಾಸೀಂಪೀರ ವಾಲೀಕಾರ ಅವರನ್ನು ಮೊದಲು ಮಾಡಿ ಎಲ್ಲ ಕನ್ನಡಾಭಿಮಾನಿಗಳಿಗೆ, ಸಾಹಿತಿಗಳಿಗೆ ನಾನು ಕೃತಜ್ಞನಾಗಿದ್ದೇನೆ. ಯಾವುದೇ ಅಧ್ಯಕ್ಷ ಹುದ್ದೆಯಿದ್ದರೂ ಅದೊಂದು ಮುಳ್ಳಿನ…

Read More

ಮುದ್ದೇಬಿಹಾಳ: ಪೆಟ್ರೋಲ್, ಡೀಸಲ್ ಬೆಲೆ ಏರಿಕೆಯನ್ನು ಹಿಂದಕ್ಕೆ ಪಡೆದುಕೊಳ್ಳುವಂತೆ ಒತ್ತಾಯಿಸಿ ಪಟ್ಟಣದಲ್ಲಿ ಭಾಜಪಾ ಮಂಡಲದ ವತಿಯಿಂದ ಪ್ರತಿಭಟನೆ ನಡೆಸಿ ತಹಶೀಲ್ದಾರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.ಪಟ್ಟಣದ ಬಸವೇಶ್ವರ ವೃತ್ತದಿಂದ ಶುರುವಾದ ಪ್ರತಿಭಟನಾ ಮೆರವಣಿಗೆ, ಕಿತ್ತೂರು ರಾಣಿ ಚನ್ನಮ್ಮ ವೃತ್ತ ಮಾರ್ಗವಾಗಿ ತಹಶೀಲ್ದಾರ ಕಚೇರಿಯ ವರೆಗೆ ಸಾಗಿತು. ಅಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಜಗದಿಶ ಪಂಪಣ್ಣವರ, ಸಂಗಮ್ಮ ದೇವರಳ್ಳಿ, ಸಿದ್ದರಾಜ ಹೊಳಿ ಮತ್ತೀತರರು ಮಾತನಾಡಿ ಕಾಂಗ್ರೇಸ್ ಸರ್ಕಾರಕ್ಕೆ ಕುಟುಕಿದರು. ನೇಹಾ ಹತ್ಯೆ ಕೊಲೆ ಪ್ರಕರಣ ಪ್ರಕರಣ ಸೇರಿದಂತೆ ಬೆಲೆ ಏರಿಕೆ, ಗ್ಯಾರಂಟಿಗಳ ವಿರುದ್ಧ ಹರಿಹಾಯ್ದರು.ಪುರಸಭೆ ಸದಸ್ಯೆ ಸಹನಾ ಬಡಿಗೇರ ಮನವಿ ಪತ್ರ ಓದಿದರು.ಈ ವೇಳೆ ಮುತ್ತಣ್ಣ ಹುಗ್ಗಿ, ಸಂಜು ಬಾಗೇವಾಡಿ, ಹಣಮಂತ ನಲವಡೆ, ರಾಜು ಬಳ್ಳೊಳ್ಳಿ, ಶೇಖರ ಢವಳಗಿ, ಗುರು ರಾಯಗೊಂಡ, ಪರಶುರಾಮ ನಾಲತವಾಡ, ಮುತ್ತಣ್ಣ ಹುಗ್ಗಿ, ಪ್ರೀತಿ ಕಂಬಾರ, ಸುಭಾಷ ಕಟ್ಟಿಮನಿ, ಶಂಕರ ಡಮನಾಳ ಸೇರಿದಂತೆ ಮತ್ತೀತರರು ಇದ್ದರು.

Read More