Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿಜಯಪುರ: ಶುಕ್ರವಾರ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆ-೨ರ ಗಣಿತ ವಿಷಯದಲ್ಲಿ ಜಿಲ್ಲೆಯ ಒಟ್ಟು ೩,೫೮೮ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಇದರಲ್ಲಿ ೨,೯೭೭ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ ೬೧೧ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರ: ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರು ಜೂನ್ ೧೮ ರಂದು ನಗರದ ಎಸ್.ಎಸ್.ಎಲ್.ಸಿ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಪರೀಕ್ಷಾ ವ್ಯವಸ್ಥೆ ಹಾಗೂ ವಿಜಯಪುರ ನಗರದ ಕೆ.ಬಿ.ಎಸ್ ಶಾಲೆ ನಂ.೪ರಲ್ಲಿನ ಮೂಲಭೂತ ಸೌಲಭ್ಯಗಳ ಪರಿಶೀಲಿಸಿದರು.ನಗರದ ಪಿ.ಡಿ.ಜೆ ಪ್ರೌಢ ಶಾಲೆಯಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆ-೨ರ ಗಣಿತ ವಿಷಯದ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ, ಪರೀಕ್ಷೆಗೆ ಹಾಜರಾದ ಎಲ್ಲ ವಿದ್ಯಾರ್ಥಿಗಳ ಹಾಜರಾತಿ,ಪರೀಕ್ಷಾ ಕೇಂದ್ರಗಳ ಕೊಠಡಿ, ವಿದ್ಯಾರ್ಥಿಗಳಿಗೆ ಆಸನ ವ್ಯವಸ್ಥೆ, ಅಗತ್ಯ ಇರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಆಸನದ ವ್ಯವಸ್ಥೆ, ಪರೀಕ್ಷಾ ಕೇಂದ್ರದಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಿರುವ ಕುರಿತು, ಪರೀಕ್ಷಾ ಕೇಂದ್ರದ ಎಲ್ಲಾ ಕೊಠಡಿಗಳಿಗೆ ಸಿ.ಸಿ.ಟಿವಿ ಅಳವಡಿಸಿರುವುದೂ ಸೇರಿದಂತೆ ಪರೀಕ್ಷಾ ಕೇಂದ್ರಗಳಿಗೆ ಪೊಲೀಸ್ ಭದ್ರತಾ ವ್ಯವಸ್ಥೆ ಹಾಗೂ ಆರೋಗ್ಯ ಕಾರ್ಯಕರ್ತರ ನಿಯೋಜನೆ ಮಾಡಿರುವ ಕುರಿತು ಪರಿಶೀಲನೆ ನಡೆಸಿದರು. ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಸಮಸ್ಯೆಗಳು ಉಂಟಾಗದಂತೆ ಪರೀಕ್ಷೆಗಳನ್ನು ಕಟ್ಟು-ನಿಟ್ಟಾಗಿ ಶಿಸ್ತಿನಿಂದ ನಡೆಸುವುದು, ಪ್ರಶಾಂತ ವಾತಾವರಣದಲ್ಲಿ ಆತ್ಮ ವಿಶ್ವಾಸದಿಂದ ಪರೀಕ್ಷೆ ಬರೆಯುವ ವಿದ್ಯಾರ್ಥಿ ಸ್ನೇಹಿ…
ವಿಜಯಪುರ: ನಗರದ ಮನಗೂಳಿ ಅಗಸಿ ಬಳಿ ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣಕ್ಕಾಗಿ ಹಾಗೂ ಭವನಕ್ಕೆ ಹೆಚ್ಚುವರಿ ಜಾಗ ನೀಡಲು ಒತ್ತಾಯಿಸಿ, ಡಾ.ಬಿ.ಆರ್.ಅಂಬೇಡ್ಕರ್ ಯುವಕ ಸಂಘದ ವತಿಯಿಂದ ಕಳೆದ ೨೯ ದಿನಗಳಿಂದ ನಿರಂತರವಾಗಿ ನಡೆಯುತ್ತಿದ್ದ ಧರಣಿ ಸ್ಥಳಕ್ಕೆ, ಮಂಗಳವಾರ ಭೇಟಿ ನೀಡಿದ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ನೀಡಿರುವ ಭರವಸೆಗೆ ಸ್ಪಂಧಿಸಿ, ಧರಣಿ ಕೈಬಿಟ್ಟರು.ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಮನಗೂಳಿ ಅಗಸಿ ಬಳಿ ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣ ಮಾಡಲು ಉದ್ದೇಶಿತ ಜಾಗ ಸರ್ಕಾರದ್ದಾಗಿದೆ. ಆ ಜಾಗವನ್ನು ವಕ್ಪ ಆಸ್ತಿಯನ್ನಾಗಿ ಮಾಡಿಕೊಂಡಿದ್ದು, ಮರಳಿ ಸರ್ಕಾರಿ ಆಸ್ತಿಯನ್ನಾಗಿ ಮಾಡಲು ಎಲ್ಲಾ ರೀತಿಯ ಹೋರಾಟ ಮಾಡಲಾಗುವುದು. ಅದಕ್ಕೆ ಸಂಬಂಧಿಸಿದಂತೆ ಸಾಕಷ್ಟು ದಾಖಲೆಗಳು ಸಹ ನಮ್ಮಲ್ಲಿವೆ. ಸರ್ಕಾರಿ ಜಾಗ ಆದ ಬಳಿಕ, ಅದೇ ಜಾಗದಲ್ಲಿ ದಲಿತ ಸಮುದಾಯದವರಿಗೆ ಮನೆಗಳನ್ನು ನಿರ್ಮಿಸಿಕೊಡಲಾಗುವುದು ಎಂದು ಭರವಸೆ ನೀಡಿದರು.೨೯ ದಿನಗಳ ಅಂಬೇಡ್ಕರ ಸಮುದಾಯ ಭವನದ ಹೋರಾಟ ಯಾವುದೇ ರೀತಿಯಿಂದ ವಿಫಲವಾಗುವುದಿಲ್ಲ. ಮುಂದಿನ ದಿನಗಳಲ್ಲಿ ಇಡೀ ದೇಶದಲ್ಲೇ ವಕ್ಪ ಆಸ್ತಿಯನ್ನು ಮರಳಿ ತೆಗೆದುಕೊಳ್ಳುವ…
ಸಿಂದಗಿ: ರಾಜ್ಯ ಸರ್ಕಾರ ಪೇಟ್ರೋಲ್-ಡಿಸೇಲ್ ಬೆಲೆ ಏರಿಕೆ ಮಾಡುವುದರೊಂದಿಗೆ ರಾಜ್ಯದ ಜನತೆಗೆ ಬೆಲೆ ಏರಿಕೆ ಬರೆ ನೀಡಿದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಸಂತೋಷ ಪಾಟೀಲ ಡಂಬಳ ಹೇಳಿದರು.ಮಂಗಳವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ಗ್ಯಾರಂಟಿ ಯೋಜನೆಗಳಿಗೆ ಅನುದಾನ ಹೊಂದಿಸುವುದಕ್ಕಾಗಿ ತೈಲ ಬೆಲೆಯನ್ನು ರಾಜ್ಯ ಸರಕಾರ ಏರಿಕೆ ಮಾಡಿದೆ. ಲೋಕಸಭೆಯ ಚುಣಾವಣೆಯಲ್ಲಿ ಸೋಲಿನ ಹತಾಶೆ, ಹದಗೆಟ್ಟಿರುವ ಆರ್ಥಿಕ ಪರಿಸ್ಥಿತಿಯಿಂದ ಆಡಳಿತವನ್ನು ಸಮರ್ಥವಾಗಿ ನಿಭಾಯಿಸಲು ರಾಜ್ಯ ಸರ್ಕಾರಕ್ಕೆ ಆಗುತ್ತಿಲ್ಲ. ರಾಜ್ಯದ ಆರ್ಥಿಕ ಪರಿಸ್ಥಿತಿ ಸದೃಡವಾಗಿದೆ ಎಂದು ಕೇವಲ ಭಂಡತನದಿಂದ ಮಾತನಾಡುವ ಸರ್ಕಾರ ಅಭಿವೃದ್ದಿ ಯೋಜನೆಗಳಿಗೆ ಹಣ ಬಿಡುಗಡೆಗೊಳಿಸದಂತಹ ಕಠಿಣ ಸ್ಥಿತಿಯಲ್ಲಿ ರಾಜ್ಯ ಸರ್ಕಾರವಿದೆ ಎಂದು ಆರೋಪಿಸಿದ ಅವರು, ನೀಡಿರುವ ಐದು ಗ್ಯಾರೆಂಟಿಗಳ ಕಾರಣದಿಂದ ರಾಜ್ಯದಲ್ಲಿ ಲೋಕಸಭೆಯ ಚುನಾವಣೆಯಲ್ಲಿ ಸುಮಾರು ೨೦ ಸ್ಥಾನಗಳನ್ನು ಗೆಲ್ಲುತ್ತೇವೆ ಎಂಬ ಭ್ರಮೆಯಲ್ಲಿತ್ತು, ಆದರೆ ರಾಜ್ಯದ ಮತದಾರರು ರಾಜ್ಯ ಸರ್ಕಾರದ ದುರಾಡಳಿತಕ್ಕೆ ಜನತೆ ತಕ್ಕ ಉತ್ತರ ನೀಡಿದ್ದಾರೆ. ರಾಜ್ಯ ಸರ್ಕಾರ ಕೂಡಲೇ ತೈಲ ಬೆಲೆಯನ್ನು ಇಳಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ…
ಸಿಂದಗಿ: ಮತಕ್ಷೇತ್ರದ ಸಂಪೂರ್ಣ ಪ್ರಗತಿಗಾಗಿ ಪ್ರಾಮಾಣಿಕವಾಗಿ ನಾನು ಪ್ರಯತ್ನಿಸುವೆ. ನನ್ನ ನಡೆ ಹಳ್ಳಿ ಕಡೆ. ಗ್ರಾಮೀಣ ಭಾಗದ ಅಭಿವೃದ್ಧಿಯೆಡೆಗೆ ಮೊದಲಾದ್ಯತೆ ನೀಡಿ ಸರ್ವಾಂಗೀಣ ಬೆಳವಣಿಗೆಯತ್ತ ತೆಗೆದುಕೊಂಡು ಹೋಗುವೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಮಂಗಳವಾರದಂದು ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಸಮಾಜ ಕಲ್ಯಾಣ ಇಲಾಖೆ ವಿಜಯಪುರ, ಅನುಷ್ಠಾನ ಕೆ.ಆರ್.ಐ.ಡಿ.ಎಲ್. ವಿಜಯಪುರ, ೨೦೨೨-೨೩ ನೇ ಸಾಲಿನ ಸಿಂದಗಿ ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಪರಿಶಿಷ್ಟ ಜಾತಿ ಕಾಲೋನಿಯಲ್ಲಿ ರೂ.೫೦ ಲಕ್ಷಗಳ ಅನುದಾನದಲ್ಲಿ ಸಿಸಿ ರಸ್ತೆಯ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಸಿಂದಗಿ ಮತ ಕ್ಷೇತ್ರದಲ್ಲಿ ಅನೇಕ ಹಳ್ಳಿಗಳಲ್ಲಿ ಮೂಲಭೂತ ಸೌಕರ್ಯಗಳಾದ ಶುದ್ದ ಕುಡಿಯುವ ನೀರು, ಉತ್ತಮ ಸಿಸಿ ರಸ್ತೆ ನಿರ್ಮಾಣ, ವಿದ್ಯುತ್ಮ ಶಿಕ್ಷಣ ಹಾಗೂ ಆರೋಗ್ಯದ ಕಡೆಗೆ ಹೆಚ್ಚು ಗಮನ ಸೆಳೆಯಲಾಗುತ್ತಿದೆ. ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಾಲೋನಿಗಳ ಅಭಿವೃದ್ದಿಗೆ ಹೆಚ್ಚು ಒತ್ತು ನೀಡುತ್ತಿದ್ದು ಆ ನಿಟ್ಟಿನಲ್ಲಿ ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಸಿಸಿ ರಸ್ತೆಯ ನಿರ್ಮಾಣದ ಕಾಮಗಾರಿ…
ಬಸವನಬಾಗೇವಾಡಿ: ತಾಲೂಕಿನ ನರಸಲಗಿ ತಾಂಡಾದ ನಂ- 2 ರಲ್ಲಿರುವ ಸರಕಾರಿ ಪ್ರಾಥಮಿಕ ಶಾಲೆಯ ಕೋಣೆಗಳ ಮುಂದೆಯೇ ಕ್ರೋಜರ್ ವಾಹನವನ್ನು ನಿಲ್ಲಿಸಿದ್ದರೂ ಸಹ ಶಾಲೆಯ ಶಿಕ್ಷಕರು ತೆಗೆಸದೇ ಇರುವದನ್ನು ಕಂಡು ಸಾರ್ವಜನಿಕರು ಶಾಲಾ ಸಿಬ್ಬಂದಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಿಕ್ಷಕರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಬಸವನಬಾಗೇವಾಡಿ: ಪಟ್ಟಣದ ಬಿಎಲ್ಡಿಇ ಸಂಸ್ಥೆಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ೨೦೨೪-೨೫ ನೇ ಸಾಲಿಗೆ ಎಮ್.ಎ. ಇತಿಹಾಸ ಸ್ನಾತಕೋತ್ತರ ಪದವಿ ಆರಂಭಗೊಂಡಿದೆ. ಬೆಳಗಾವಿ ರಾಣಿಚನ್ನಮ್ಮ ವಿಶ್ವವಿದ್ಯಾಲಯದ ಸಂಯೋಜನಾ ಸಮಿತಿ ಮಹಾವಿದ್ಯಾಲಯಕ್ಕೆ ಭೇಟಿ ನೀಡಿ ಎಮ್.ಎ. ಸ್ನಾತಕೋತ್ತರ ಪದವಿ ಆರಂಭಿಸಲು ಅನುಮತಿ ನೀಡಿದೆ. ೨೦೨೪-೨೫ ನೇ ಸಾಲಿನಲ್ಲಿ ಎಮ್.ಎ. ಇತಿಹಾಸ ಸ್ನಾತಕೋತ್ತರ ಪದವಿ ಮಾಡಲು ಬಯಸುವ ವಿದ್ಯಾರ್ಥಿಗಳು ಮಹಾವಿದ್ಯಾಲಯಕ್ಕೆ ಭೇಟಿ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಎ.ವ್ಹಿ.ಸೂರ್ಯವಂಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರೈತ ಕೃಷಿ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿದ ಜಂಟಿ ಕೃ಼ಷಿ ನಿರ್ದೇಶಕ ಡಾ.ವಿಲಿಯಂ ರಾಜಶೇಖರ ಸಲಹೆ ಬಸವನಬಾಗೇವಾಡಿ: ಪಟ್ಟಣದ ಕೃಷಿ ಇಲಾಖೆಯ ಆವರಣದಲ್ಲಿರುವ ರೈತ ಕೃಷಿ ಸಂಪರ್ಕ ಕೇಂದ್ರಕ್ಕೆ ಜಿಲ್ಲಾ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕ ಡಾ.ವಿಲಿಯಂ ರಾಜಶೇಖರ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು.ರೈತ ಕೃಷಿ ಸಂಪರ್ಕ ಕೇಂದ್ರಕ್ಕೆ ಬೀಜ ತೆಗೆದುಕೊಳ್ಳಲು ಆಗಮಿಸಿದ್ದ ರೈತ ಬಾಂಧವರೊಂದಿಗೆ ಮಾತನಾಡಿದ ಅವರು, ಬೀಜಗಳು ಸರಿಯಾಗಿ ವಿತರಣೆಯಾಗುತ್ತಿರುವ ಕುರಿತು ಮಾಹಿತಿ ಪಡೆದುಕೊಂಡರು. ಬೀಜ ವಿತರಣೆಯಲ್ಲಿ ಏನಾದರೂ ತೊಂದರೆಯಾದರೆ ನಮ್ಮ ಗಮನಕ್ಕೆ ತರಬೇಕು. ರೈತ ಕೃಷಿ ಸಂಪರ್ಕ ಕೇಂದ್ರಗಳಲ್ಲಿ ಎಲ್ಲ ಅಗತ್ಯ ಬೀಜಗಳು ದಾಸ್ತಾನು ಇದೆ. ಬೀಜಗಳಿಗೆ ಸರಿಯಾಗಿ ಬೀಜೋಪಚಾರ ಮಾಡಿ ಬಿತ್ತನೆ ಕಾರ್ಯ ಕೈಗೊಳ್ಳಬೇಕು. ಇದರಿಂದಾಗಿ ಮುಂದಿನ ದಿನಗಳಲ್ಲಿ ಬೆಳೆಗಳು ಯಾವುದೇ ರೋಗ, ಕೀಟಬಾಧೆಗೆ ತುತ್ತಾಗುವದಿಲ್ಲ. ಈಗ ಬಿತ್ತನೆಗೆ ಸಕಾಲಿಕವಾಗಿದೆ. ರೈತ ಬಾಂಧವರು ಬಿತ್ತನೆ ಕಾರ್ಯ ಕೈಗೊಳ್ಳಬಹುದು. ಸರ್ಕಾರ ರೈತ ಬಾಂಧವರಿಗೆ ಅನೇಕ ಸೌಲಭ್ಯಗಳನ್ನು ನೀಡುತ್ತಿದೆ. ಇದರ ಸದುಪಯೋಗ ಪಡೆದುಕೊಳ್ಳಬೇಕೆಂದರು. ಇದೇ ಸಂದರ್ಭದಲ್ಲಿ ಆಗಮಿಸಿದ…
ಬಸವನಬಾಗೇವಾಡಿ: ತಾಲೂಕಿನ ಡೋಣೂರ ಗ್ರಾಮದ ಆಸರೆ ಕಾಲೋನಿಯಲ್ಲಿ ಮಸೀದಿ ಜಾಗೆಯನ್ನು ಗುರುತಿಸಿ ಕೊಡುವಂತೆ ಮಂಗಳವಾರ ಗ್ರಾಮದ ಅಂಜುಮನ್-ಏ-ಇಸ್ಲಾಂ ಕಮಿಟಿ ಹಾಗೂ ಟಿಪ್ಪು ಕ್ರಾಂತಿ ಸೇನೆಯಿಂದ ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಅವರಿಗೆ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಟಿಪ್ಪು ಕ್ರಾಂತಿ ಸೇನೆಯ ಖಾಜಂಬರ ನಧಾಪ ಮಾತನಾಡಿ, ಡೋಣೂರ ಗ್ರಾಮದ ಆಸರೆ ಕಾಲೋನಿಯಲ್ಲಿ ಮುಸ್ಲಿಂ ಸಮುದಾಯ ಬಾಂಧವರಿಗೆ ಪ್ರಾರ್ಥನಾ ಮಂದಿರ, ದರ್ಗಾ, ಉರ್ದು ಶಾಲೆ, ಈದ್ಗಾ ಹಾಗೂ ಖಬರಸ್ತಾನಕ್ಕೆ ಸೂಕ್ತವಾದ ಸ್ಥಳವಿಲ್ಲ. ಬೇರೆ ಸಮಾಜ ಬಾಂಧವರು ತಮ್ಮ ಜಾಗೆಯನ್ನು ಗುರುತಿಸಿಕೊಂಡು ತಮ್ಮ ಕಬ್ಜಾದಲ್ಲಿ ಇಟ್ಟುಕೊಂಡಿದ್ದಾರೆ. ಮುಸ್ಲಿಂ ಸಮಾಜ ಬಾಂಧವರಿಗೆ ಯಾವುದೇ ಜಾಗವನ್ನು ಇದುವರೆಗೂ ಗುರುತಿಸಿ ಕೊಟ್ಟಿಲ್ಲ. ಇದರಿಂದ ಮುಸ್ಲಿ ಸಮಾಜ ಬಾಂಧವರಿಗೆ ದಿನಾಲೂ ನಮಾಜ ಮಾಡಲು ತೊಂದರೆಯಾಗುತ್ತಿದೆ. ನಮ್ಮ ಸಮಾಜ ಬಾಂಧವರಿಗೆ ಪ್ರಾರ್ಥನಾ ಮಂದಿರ, ದರ್ಗಾ, ಉರ್ದು ಶಾಲೆ, ಈದ್ಗಾ ಹಾಗೂ ಖಬರಸ್ತಾನಕ್ಕೆ ಸೂಕ್ತವಾದ ಸ್ಥಳವನ್ನು ಶೀಘ್ರವೇ ಗುರುತಿಸಿಕೊಡಬೇಕು. ನಮ್ಮ ಸಮಾಜದ ಜಾಗವನ್ನು ನಾವೇ ಗುರುತಿಸಿ ಪಡೆದುಕೊಳ್ಳಲು ಹೋದರೆ ಗ್ರಾಮದಲ್ಲಿ ಅಶಾಂತಿ ಹುಟ್ಟುವ ಸಂಭವವಿರುತ್ತದೆ. ಕೂಡಲೇ ತಾಲೂಕಾಡಳಿತವು…
ವಿಜಯಪುರ: ಮತ್ತಿಹಳ್ಳಿ ಮದನಮೋಹನ ಪತ್ರಿಕೋದ್ಯಮದ ಸರ್ವಕಾಲಿಕ ಆದರ್ಶ ಪತ್ರಕರ್ತರಾಗಿದ್ದರು. ಸುಮಾರು ೪೫ ವರ್ಷಗಳ ವೃತ್ತಿ ಬದುಕಿನಲ್ಲಿ ಯಾವುದೇ ಭಿಡೆ ಇಲ್ಲದೆ ಬರೆದವರು. ಅವರು ಪತ್ರಿಕೋದ್ಯಮದ ವಿಶ್ವಕೋಶವೇ ಆಗಿದ್ದರು ಎಂದು ಹಿರಿಯ ಪತ್ರಕರ್ತ ಗೋಪಾಲ ನಾಯಕ ಹೇಳಿದರು.ಇಲ್ಲಿನ ಪತ್ರಿಕಾಭವನದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಇತ್ತೀಚೆಗೆ ಮೃತಪಟ್ಟ ಹಿರಿಯ ಪತ್ರಕರ್ತರಾದ ಮದನ್‌ಮೋಹನ ಹಾಗೂ ರಾಮೋಜಿರಾವ್ ಅವರಿಗೆ ಹಮ್ಮಿಕೊಂಡಿದ್ದ ಸಂತಾಪ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.ಮದನಮೋಹನ ನನ್ನ ಗುರುವಾಗಿದ್ದರು. ಸ್ನೇಹಿತರಾಗಿದ್ದರು. ಆತ್ಮಬಂಧುವಾಗಿದ್ದರು. ಅವರನ್ನು ಕಳೆದುಕೊಂಡು ಪತ್ರಿಕೋದ್ಯಮ ಬಡವಾಗಿದೆ ಎಂದರು.ತಮ್ಮ ಅವರ ಬಾಂಧವ್ಯ ಐದು ದಶಕಗಳದ್ದು. ಆಗ ಮದನಮೋಹನ ಉತ್ತರ ಕರ್ನಾಟಕ, ಗೋವಾ ರಾಜ್ಯ ಸೇರಿದಂತೆ ೧೬ ಜಿಲ್ಲೆಗಳಿಗೆ ದಿ.ಹಿಂದೂ ಪತ್ರಿಕೆಯ ಪ್ರತಿನಿಧಿಯಾಗಿದ್ದರು. ಎಲ್ಲಿಯೇ ದೊಡ್ಡ ಕಾರ್ಯಕ್ರಮಗಳಾಗಲಿ, ಅನಾಹುತಗಳಾಗಲಿ, ಸಮಸ್ಯೆಗಳಾಗಲಿ ಅಲ್ಲಿ ಅವರು ಹಾಜರಿದ್ದು ವರದಿ ಮಾಡುತ್ತಿದ್ದರು. ಉತ್ತರ ಕರ್ನಾಟಕದಲ್ಲಿ ಮೊದಲ ಬಾರಿಗೆ ಲ್ಯಾಪ್ಟಾಪ್ ಬಳಸಿದವರು. ಅವರಲ್ಲಿ ದಾಖಲೆಗಳ ಬಹುದೊಡ್ಡ ಸಂಗ್ರಹವೇ ಇರುತ್ತಿತ್ತು. ಪ್ರತಿಯೊಂದು ಸೂಕ್ಷ್ಮ ವಿಷಯಗಳನ್ನು ಅಂಕಿ ಅಂಶಗಳನ್ನು ತಮ್ಮ ಡೈರಿಯಲ್ಲಿ ಬರೆದಿಟ್ಟುಕೊಳ್ಳುತ್ತಿದ್ದರು. ಅದಕ್ಕೆ…
