Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಬಸವನಬಾಗೇವಾಡಿ, ಕೊಲ್ಹಾರ, ನಿಡಗುಂದಿ ತಾಲೂಕುಗಳಲ್ಲಿ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳು ಆರಂಭವಾಗಿರುತ್ತವೆ. ರೈತರು ತಮ್ಮ ಬೆಳೆಗಳನ್ನು ಪ್ರಕೃತಿ ವಿಕೋಪಗಳಿಂದ ರಕ್ಷಿಸಿಕೊಳ್ಳಲು ಬೆಳೆ ವಿಮೆ ಮಾಡಿಸಿಕೊಳ್ಳುವುದು ಅತ್ಯಂತ ಮಹತ್ವದ್ದು ಮತ್ತು ಅಗತ್ಯವಾಗಿರುತ್ತದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಯೋಗದಲ್ಲಿ ಕರ್ನಾಟಕ ರಾಜ್ಯ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ರೈತರು ತಮ್ಮ ಬೆಳೆಗಳಿಗೆ ವಿಮೆ ಮಾಡಿಸಿಕೊಳ್ಳಬಹುದಾಗಿದೆ. ಇತ್ತೀಚಿನ ವರ್ಷಗಳಲ್ಲಿ ಅನಿಯಮಿತ ಮಳೆ, ಬರ, ಗಾಳಿಮಳೆ, ಪ್ರವಾಹ, ಕೀಟ ಹಾಗೂ ರೋಗಬಾಧೆ ಮುಂತಾದ ಕಾರಣಗಳಿಂದ ರೈತರು ಅಪಾರ ನಷ್ಟ ಅನುಭವಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಬೆಳೆ ವಿಮೆ ರೈತರಿಗೆ ಆರ್ಥಿಕ ನೆರವು ಒದಗಿಸಿ ಕೃಷಿಯಲ್ಲಿ ಸ್ಥಿರತೆ ಕಾಪಾಡಲು ಸಹಕಾರಿಯಾಗುತ್ತದೆ. 2026 ಮುಂಗಾರು ಹಂಗಾಮಿಗೆ ಬಸವನಬಾಗೇವಾಡಿ ತಾಲೂಕಿನಲ್ಲಿ ತೊಗರಿ, ಮುಸಕಿನಜೋಳ, ಈರುಳ್ಳಿ, ಸಜ್ಜೆ ಮತ್ತು ಸೂರ್ಯಕಾಂತಿ, ಹತ್ತಿ, ನಿಡಗುಂದಿ ತಾಲೂಕಿನಲ್ಲಿ ತೊಗರಿ, ಮುಸಕಿನಜೋಳ, ಈರುಳ್ಳಿ ಮತ್ತು ಸೂರ್ಯಕಾಂತಿ, ಕೊಲ್ಹಾರ ತಾಲೂಕಿನಲ್ಲಿ ತೊಗರಿ, ಮುಸಕಿನಜೋಳ, ಈರುಳ್ಳಿ ಮತ್ತು ಸಜ್ಜೆ ಅಧಿಸೂಚಿತ…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ತಾಲೂಕಿನ ಕಾನ್ನಾಳದಿಂದ ಸಂಕನಾಳಕ್ಕೆ ಹೋಗುವ ರಸ್ತೆ ತುಂಬಾ ಹದಗೆಟ್ಟಿದ್ದರಿಂದ ಈ ರಸ್ತೆಯನ್ನು ಸುಧಾರಿಸಬೇಕೆಂದು ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘದಿಂದ ಬುಧವಾರ ಪಟ್ಟಣದ ಪಂಚಾಯತ ಇಲಾಖೆಯ ಸಹಾಯಕ ಅಭಿಯಂತರರಿಗೆ ಬರೆದ ಮನವಿ ಪತ್ರವನ್ನು ರೈತ ಸಂಘದಿಂದ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಇಮೇಳ ವಾಲೀಕಾರ ಮಾತನಾಡಿ, ಸುಮಾರು ವರ್ಷಗಳಿಂದ ಕಾನ್ನಾಳ ಗ್ರಾಮದಿಂದ ಸಂಕನಾಳ ಹಾಗೂ ಬಸವನ ಬಾಗೇವಾಡಿಗೆ ಹೋಗುವ ರಸ್ತೆ ಇದೆ. ಈ ರಸ್ತೆಯನ್ನು ಸುಮಾರು 10-15 ವರ್ಷಗಳ ಹಿಂದ ದುರಸ್ತಿ ಮಾಡಲಾಗಿತ್ತು. ಇದೀಗ ಈ ರಸ್ತೆ ಸಂಪೂರ್ಣವಾಗಿ ಹದಗೆಟ್ಟು ಹೋಗಿದೆ. ಈ ರಸ್ತೆ ಮಾರ್ಗವಾಗಿ ತಾಲೂಕು ಆಸ್ಪತ್ರೆಗೆ ಗರ್ಭಿಣಿ ಮಹಿಳೆಯರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವ ಸಮಯದಲ್ಲಿ ನಡು ರಸ್ತೆ ಮಧ್ಯದಲ್ಲಿಯೇ ಹೆರಿಗೆಯಾದ ಪ್ರಸಂಗಗಳಿವೆ. ಎಷ್ಟು ಶಿಶುಗಳು ಮರಣ ಹೊಂದಿದ್ದು ಇದೆ. ದ್ವಿಚಕ್ರ ವಾಹನ ಸವಾರರು ಬಿದ್ದು ವಾಹನದಿಂದ ಬಿದ್ದು ಕೈ ಕಾಲು ಮುರಿದು ಕೊಂಡು ಜಿಲ್ಲಾ ಆಸ್ಪತ್ರೆಗೆ ದಾಖಲ ಆಗಿದ್ದಾರೆ. ಶಾಲಾ ಮಕ್ಕಳು ಶಾಲೆಗೆ…

Read More

ವಿಜಯಪುರದಲ್ಲಿ ಕೈಗಾರಿಕೆ ಮತ್ತು ಮೂಲಸೌಲಭ್ಯ‌ ಅಭಿವೃದ್ಧಿ ಸಚಿವ‌ ಎಂ.ಬಿ.ಪಾಟೀಲ ಭರವಸೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಯುಕೆಪಿ 3ನೇ ಹಂತದಲ್ಲಿ ಬರುವ ಆಲಮಟ್ಟಿ ಜಲಾಶಯ ಎತ್ತರದ ಹಿನ್ನೀರಿನಿಂದ ಬಾಧಿತವಾಗುವ ಎಲ್ಲ ಗ್ರಾಮಸ್ಥರ ಹಿತ ಕಾಪಾಡಲು ಬದ್ಧನಾಗಿದ್ದೇನೆ ಎಂದು ಕೈಗಾರಿಕೆ ಮತ್ತು ಮೂಲಸೌಲಭ್ಯ‌ ಅಭಿವೃದ್ಧಿ ಸಚಿವ‌ ಎಂ. ಬಿ. ಪಾಟೀಲ ತಿಳಿಸಿದ್ದಾರೆ‌.ಬುಧವಾರ ತಮ್ಮ ಗೃಹ ಕಚೇರಿಯಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆ ಮುಳುಗಡೆ ಸಂತ್ರಸ್ಥರ ಹೋರಾಟ ಸಮಿತಿ‌ ಪದಾಧಿಕಾರಿಗಳು ಮತ್ತು ರೈತರೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.ಆಲಮಟ್ಟಿ ಜಲಾಶಯದ ಎತ್ತರ ಹೆಚ್ಚಳ ಮತ್ತು ನೀರು‌ ಹಂಚಿಕೆ ಕುರಿತು 2010ರಲ್ಲಿ ತೀರ್ಪು ಬಂದಿತ್ತು. ನಂತರ 2013ರಲ್ಲಿ ನಾನು ಜಲಸಂಪನ್ಮೂಲ‌ ಸಚಿವನಾಗಿದ್ದಾಗ ಒಟ್ಟು‌ 130 ಟಿಎಂಸಿ ನೀರು‌ ಹಂಚಿಕೆಯಾಗಿತ್ತು. ಇದರಿಂದ 1.30 ಲಕ್ಷ ಎಕರೆ ಭೂಸ್ವಾಧೀನ ಅಗತ್ಯವಾಗಿತ್ತು. ಪ್ರತಿ‌ ಎಕರೆ ಒಣಬೇಸಾಯ ಜಮೀನಿಗೆ ರೂ. 8 ಲಕ್ಷ ಮತ್ತು ನೀರಾವರಿ‌ ಜಮೀನಿಗೆ ರೂ. 12 ಲಕ್ಷ ನಿಗದಿ ಪಡಿಸಲಾಗಿತ್ತು. ಆದರೆ, ಅಂದು ಹಣಕಾಸು ಇಲಾಖೆ ಸಧ್ಯಕ್ಕೆ ಆರ್ಥಿಕವಾಗಿ ಯೋಜನೆ…

Read More

ಪತ್ರಕರ್ತರ ಬೇಡಿಕೆ ಬಗ್ಗೆ ಚರ್ಚೆ | ಪತ್ರಿಕಾ ದಿನಾಚರಣೆಗೆ ಆಹ್ವಾನ | ಮಾಧ್ಯಮ ಸಂಜೀವಿನಿ ಯೋಜನೆ ಶೀಘ್ರ ಜಾರಿಗೆ ಮನವಿ ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಕೆಯುಡಬ್ಲೂಜೆ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ನೇತೃತ್ವದ ನಿಯೋಗವು ಭೇಟಿ ಮಾಡಿ, ಪುಸ್ತಕ ಮತ್ತು ಗಣಪತಿ ಮೂರ್ತಿಯನ್ನು ನೀಡಿ ಅಭಿನಂದಿಸಿತು.ಇದೇ ಸಂದರ್ಭದಲ್ಲಿ ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಮತ್ತು ಮಾಧ್ಯಮ ಸಂಜೀವಿನಿ ಯೋಜನೆಯನ್ನು ತ್ವರಿತ ಗತಿಯಲ್ಲಿ ಜಾರಿಗೊಳಿಸಬೇಕು ಎಂದು ಕೆಯುಡಬ್ಲೂಜೆ ವತಿಯಿಂದ ಮನವಿಯನ್ನು ಸಲ್ಲಿಸಲಾಯಿತು. ಈ ಬಗ್ಗೆ ಕ್ರಮ ತೆಗೆದುಕೊಳ್ಳುವುದಾಗಿ ಸಿಎಂ ಭರವಸೆ ನೀಡಿದರು.ಜುಲೈ 1 ರಂದು ಪತ್ರಿಕಾ ದಿನಾಚರಣೆಯನ್ನು ವಾರ್ತಾ ಇಲಾಖೆ, ಮಾಧ್ಯಮ ಅಕಾಡೆಮಿ ಮತ್ತು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಸಂಯುಕ್ತಾಶ್ರಯದಲ್ಲಿ ಪ್ರತಿ ವರ್ಷ ಆಚರಣೆ ಮಾಡಿಕೊಂಡು ಬರಲಾಗುತ್ತಿದೆ. ಪ್ರತಿ ವರ್ಷವೂ ಮುಖ್ಯಮಂತ್ರಿಗಳು ಪತ್ರಿಕಾ ದಿನಾಚರಣೆ ಉದ್ಘಾಟನೆ ಮಾಡಿಕೊಂಡು ಬಂದಿದ್ದಾರೆ. ಈ ಬಾರಿ ತಾವು ಉದ್ಘಾಟನೆಗೆ ಆಗಮಿಸಬೇಕು ಎಂದು ಕೆಯುಡಬ್ಲೂೃಜೆ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ ನಗರದ ರಹಿಂನಗರದಲ್ಲಿ ಶ್ರೀಮತಿ ರಾಜೇಶ್ವರಿ ಮಲ್ಲಪ್ಪ ಬರಟಗಿ ಅವರ ಖಾಲಿ ಜಾಗೆಯಲ್ಲಿದ್ದ ಶೆಡ್‌ನಲ್ಲಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳಿಂದ ವಾಣಿಜ್ಯ ಸಿಲಿಂಡರ್‌ಗಳಿಗೆ ಅಕ್ರಮವಾಗಿ ಗ್ಯಾಸ್ ತುಂಬಿಸಿ ಹೋಟೆಲ್‌ಗಳಿಗೆ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಆಹಾರ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಜಂಟಿ ದಾಳಿ ನಡೆಸಿದರು.ದಾಳಿಯ ವೇಳೆ ಸುಮಾರು 10 ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳು ಮತ್ತು 13 ಗೃಹಬಳಕೆಯ ಸಿಲಿಂಡರ್‌ಗಳು ಪತ್ತೆಯಾಗಿದ್ದು, ಅವುಗಳನ್ನು ವಶಪಡಿಸಿಕೊಳ್ಳಲಾಗಿದೆ.ಈ ಸಂಬಂಧ ಎಲ್‌ಪಿಜಿ (ಪೂರೈಕೆ ಮತ್ತು ವಿತರಣೆ ನಿಯಂತ್ರಣ) ಆದೇಶ-2000 ಹಾಗೂ ಅಗತ್ಯ ವಸ್ತುಗಳ ಕಾಯ್ದೆ-1955ರ ಸೆಕ್ಷನ್ 3/7ರ ಅಡಿಯಲ್ಲಿ ಗಾಂಧೀಚೌಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಆಹಾರ ನಿರೀಕ್ಷಕ ಶಂಕರಗೌಡ ಬಿ. ಬಿರಾದಾರ ಅವರು ದೂರು ದಾಖಲಿಸಿದ್ದು, ಗೃಹಬಳಕೆಯ ಸಿಲಿಂಡರ್‌ಗಳ ಗ್ಯಾಸ್ ಅನ್ನು ವಾಹನಗಳಿಗೆ ಅಥವಾ ವಾಣಿಜ್ಯ ಸಿಲಿಂಡರ್‌ಗಳಿಗೆ ಅಕ್ರಮವಾಗಿ ತುಂಬಿಸಿ ಮಾರಾಟ ಮಾಡುವುದು ಕಾನೂನುಬಾಹಿರ ಎಂದು ತಿಳಿಸಿದ್ದಾರೆ.ಜಿಲ್ಲೆಯ ಎಲ್ಲಾ ಹೋಟೆಲ್ ಮಾಲೀಕರು ಸರ್ಕಾರದಿಂದ ಅಧಿಕೃತ ಮಾನ್ಯತೆ ಪಡೆದ ವಾಣಿಜ್ಯ ಎಲ್‌ಪಿಜಿ ವಿತರಕರಿಂದ…

Read More

ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಮತದಾರರ ಪಟ್ಟಿಯನ್ನು ಹೆಚ್ಚು ನಿಖರವಾಗಿ ಹಾಗೂ ಪಾರದರ್ಶಕವಾಗಿಡುವ ಉದ್ದೇಶದಿಂದ ನಮ್ಮ ರಾಜ್ಯದಲ್ಲಿ ಚುನಾವಣಾ ಆಯೋಗವು ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಉಪವಿಭಾಗಾಧಿಕಾರಿ ಶ್ವೇತಾ ಬಿಡಿಕರ್ ಹೇಳಿದರು.ನಗರದ ಮಿನಿ ವಿಧಾನಸೌಧದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ಆಯೋಗದ ನಿರ್ದೇಶನದಂತೆ ವಿಶೇಷ ಸಮಗ್ರ ಮತದಾರ ಪಟ್ಟಿ ಪರಿಷ್ಕರಣೆ ಅಭಿಯಾನವನ್ನು ಜೂನ್ 30 ರಿಂದ ಜುಲೈ 29 ವರೆಗೆ ಒಂದು ತಿಂಗಳವರೆಗೆ ನಡೆಸಲಾಗುವುದು, ಪ್ರಸ್ತುತ ನಡೆಯುತ್ತಿರುವ 14 ನೆಯ ವಿಶೇಷ ಸಮಗ್ರ ಪರಿಷ್ಕರಣೆ ಎಂದು ಪರಿಗಣಿಸಲಾಗಿದೆ.2002 ರಲ್ಲಿರುವ ಮತದಾರರ ಪಟ್ಟಿಯಲ್ಲಿರುವ ಅರ್ಹ ಮತದಾರರ ಮಕ್ಕಳು, ಸಂಬಂಧಿಕರು ಅರ್ಹರಾಗಿರುತ್ತಾರೆ. ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗೆ ಹೋಗಬಾರದು, ಅನರ್ಹ ಮತದಾರ ಹೆಸರನ್ನು ತೆಗೆದು ಹಾಕಿ ಪಾರದರ್ಶಕ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವುದು ಎಸ್ಐಆರ್ ನ ಪ್ರಮುಖ ಉದ್ದೇಶವಾಗಿದೆ.ಮತದಾರರ ಪಟ್ಟಿ ಪರಿಷ್ಕರಣೆ ಪ್ರಾರಂಭದಿಂದ ಪ್ರತಿ ಮನೆಗಳಿಗೆ ಭೂತ ಮಟ್ಟದ ಅಧಿಕಾರಿಗಳು ಭೇಟಿ ನೀಡಿ ಪೂರ್ವ ಮುದ್ರಿತ ಎಣಿಕೆ ನಮೂನೆಯನ್ನು ವಿತರಿಸಲಿದ್ದು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಆಲಮಟ್ಟಿ ತೋಟಗಾರಿಕೆ ಕ್ಷೇತ್ರದಲ್ಲಿರುವ ನೆರಳೆ, ತೆಂಗು ಹಾಗೂ ಚಿಕ್ಕು ಫಸಲುಗಳನ್ನು ಮತ್ತು ದೇವರ ಹಿಪ್ಪರಗಿ ತೋಟಗಾರಿಕೆ ಕ್ಷೇತ್ರದಲ್ಲಿರುವ ಚಿಕ್ಕು ಫಸಲನ್ನು ಬಹಿರಂಗ ಹರಾಜು ಮೂಲಕ ವಿಲೇವಾರಿ ಮಾಡಲು ತೀರ್ಮಾನಿಸಲಾಗಿದೆ.ಸದರಿ ಫಸಲುಗಳನ್ನು ದಿನಾಂಕ 01.06.2026 ರಿಂದ 30.06.2026ರ ಅವಧಿಗೆ ರೋಡಿಸಿಕೊಳ್ಳಲು ಹರಾಜು ಪ್ರಕ್ರಿಯೆ ನಡೆಸಲಾಗುವುದು. ಆಸಕ್ತ ರೈತರು, ವ್ಯಾಪಾರಸ್ಥರು ಹಾಗೂ ಸಾರ್ವಜನಿಕರು ಸಂಬಂಧಿತ ತೋಟಗಾರಿಕೆ ಕ್ಷೇತ್ರಗಳಿಗೆ ಭೇಟಿ ನೀಡಿ ಫಸಲನ್ನು ವೀಕ್ಷಿಸಿ, ನಿಬಂಧನೆ ಮತ್ತು ಷರತ್ತುಗಳಿಗೆ ಒಪ್ಪಿಗೆ ಸೂಚಿಸಿ ಹರಾಜಿನಲ್ಲಿ ಭಾಗವಹಿಸಬಹುದಾಗಿದೆ.ಹರಾಜು ದಿನಾಂಕಗಳು:

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ಅವರು ವಿಜಯಪುರ ಜಿಲ್ಲೆಯಲ್ಲಿ ನಾಳೆ ದಿ.25 ಮತ್ತು ದಿ.26 ಎರಡು ದಿನಗಳ ಕಾಲ ಪ್ರವಾಸ ಕೈಗೊಳ್ಳಲಿದ್ದಾರೆ.ದಿ.25 ಗುರುವಾರ ಬೆ.10 ರಿಂದ 12ಗಂ. ವರೆಗೆ ಬಿ.ಎಂ.ಪಾಟೀಲ ರಸ್ತೆ ಗೃಹ ಕಚೇರಿಯಲ್ಲಿ ಸಾರ್ವಜನಿಕರ ಕುಂದುಕೊರತೆ ಆಲಿಸಲಿದ್ದಾರೆ. ಸಂ.4ಗಂ. ಸಿಂದಗಿ ವಿಧಾನಸಭಾ ಕ್ಷೇತ್ರದ ಆಲಮೇಲ ತಾಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಭೂಮಿಪೂಜೆ ಹಾಗೂ ಉದ್ಘಾಟಣೆ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.ದಿ.26 ಶುಕ್ರವಾರ ಬೆ.9ಗಂ., ಐಶ್ವರ್ಯನಗರ ರಾಣಿಚೆನ್ನಮ್ಮ ಮಂಗಲ ಕಾರ್ಯಾಲಯದಲ್ಲಿ ವಿಜಯಪುರ ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳ ಕಾಂಗ್ರೆಸ್ ಪಕ್ಷದ ಬಿ.ಎಲ್.ಎ ಗಳ ತರಬೇತಿ ಶಿಬಿರದಲ್ಲಿ ಭಾಗವಹಿಸಲಿದ್ದಾರೆ. ನಂತರ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ ಎಂದು ಸಚಿವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಿ.ಎಲ್.ಡಿ.ಇ ಆಸ್ಪತ್ರೆಯಲ್ಲಿ ಹೃದಯಸ್ಪರ್ಶಿ ಘಟನೆಯೊಂದು ಮಂಗಳವಾರ ನಡೆಯಿತು.ಗೊರನಾಳ ಗ್ರಾಮದ 75 ವರ್ಷದ ಹಿರಿಯ ನಾಗರಿಕರೊಬ್ಬರು ತಮ್ಮ ಮಗಳು ಮತ್ತು ಮೊಮ್ಮಗನೊಂದಿಗೆ ಬಿ.ಎಲ್.ಡಿ.ಇ ಆಸ್ಪತ್ರೆಗೆ ಬಂದು ನನ್ನದೊಂದು ಅಳಿಲು ಕಾಣಿಕೆ ಸ್ವೀಕರಿಸಿ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಎಸ್. ಆರ್. ಬೆಂತೂರು ಮತ್ತು ಎಲುವು ಮತ್ತು ಕೀಲು ತಜ್ಞ ಡಾ.ಗಿರೀಶ ಖೋದ್ನಾಪುರ ಅವರನ್ನು ಕೇಳಿಕೊಂಡರು. ಆಗ ಒಂದು ಕ್ಷಣ ವೈದ್ಯರು, ಇದೆಲ್ಲ ಏಕೆ ಎಂದು ಪ್ರಶ್ನಿಸಿದರು. ಆಗ 75 ವರ್ಷದ ನಬೀಸಾಬ ಪಿಂಜಾರ ತಾನು ಈಗ ಸಂಪೂರ್ಣ ಗುಣಮುಖನಾಗಿದ್ದು, ಊರುಗೊಲಿನ ಸಹಾಯವಿಲ್ಲದೆ ನಡೆಯುತ್ತಿದ್ದೇನೆ. ಈ ಸಂತಸವನ್ನು ತಮ್ಮೊಂದಿಗೆ ಹಂಚಿಕೊಳ್ಳಲು ಮಗಳು ಮತ್ತು ಮೊಮ್ಮಗನೊಂದಿಗೆ ಬಂದಿದ್ದೇನೆ ಎಂದು ಹೇಳಿ ತನ್ನ ಜೊತೆಗೆ ತಂದಿದ್ದ ಅಕ್ಕಿ ಮತ್ತು ಗೋದಿಯ ಮೂಟೆಯನ್ನು ಆಸ್ಪತ್ರೆಗೆ ನೀಡಿದರು.ಪ್ರಕರಣದ ಹಿನ್ನೆಲೆ: ಗೊರನಾಳ ಗ್ರಾಮದ 75 ವರ್ಷದ ಹಿರಿಯ ವ್ಯಕ್ತಿ ನಬೀಸಾಬ ಪಿಂಜಾರ ಕಾಲು ಜಾರಿ ಬಿದ್ದ ಪರಿಣಾಮ ಅವರ ಎಡಚಪ್ಪೆಗೆ ಗಂಭೀರ ಗಾಯವಾಗಿತ್ತು. ನಡೆಯಲೂ…

Read More

ಬಬಲೇಶ್ವರ ಪ್ರೀಮಿಯರ್ ಲೀಗ್ ಸೀಸನ್-2 ಕ್ರಿಕೆಟ್ ಟೂರ್ನಾಮೆಂಟ್ ಉದ್ಘಾಟಿಸಿದ ಎಂಎಲ್ಸಿ ಸುನೀಲಗೌಡ ಪಾಟೀಲ ಸಲಹೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕ್ರಿಕೆಟ್ ಒಂದು ತಂಡವಾಗಿ ಒಗ್ಗಟ್ಟಿನಿಂದ ಕೆಲಸ ಮಾಡಲು ಮತ್ತು ಕ್ರೀಡಾ ಮನೋಭಾವ ಬೆಳೆಸಿಕೊಳ್ಳಲು ಸ್ಪೂರ್ತಿ ನೀಡುತ್ತದೆ ಎಂದು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಹೇಳಿದ್ದಾರೆ.ಮಂಗಳವಾರ ಮುಸ್ಸಂಜೆ ಬಬಲೇಶ್ವರ ಪಟ್ಟಣದದಲ್ಲಿ ದಿ. ಶ್ರೀ ಬಿ. ಎಂ. ಪಾಟೀಲ ಸ್ಮರಣಾರ್ಥ ಆಯೋಜಿಸಲಾಗಿರುವ ಬಬಲೇಶ್ವರ ಪ್ರೀಮಿಯರ್ ಲೀಗ್ ಸೀಸನ್-2 ಕ್ರಿಕೆಟ್ ಟೂರ್ನಾಮೆಂಟ್ ನ್ನು ಬ್ಯಾಟ್ ಮಾಡುವ ಮೂಲಕ ಉದ್ಗಾಟಿಸಿದ ಅವರು ಬಳಿಕ ಸಸಿಗೆ ನೀರುಣಿಸಿ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.ನಮ್ಮ ತಂದೆ ದಿ. ಬಿ. ಎಂ. ಪಾಟೀಲ ಅವರ ಹೆಸರಿನಲ್ಲಿ ಈ ಟೂರ್ನಾಮೆಂಟ್ ಆಯೋಜನೆ ಮಾಡಿರುವುದು ಸಂತಸದ ವಿಷಯವಾಗಿದೆ. ಬಿ. ಎಂ. ಪಾಟೀಲರು ಶಿಕ್ಷಣ ಪ್ರೇಮಿಯಾಗಿದ್ದರು. ಯುವಕರು ಹೆಚ್ಚಿನ ಶಿಕ್ಷಣಕ್ಕಾಗಿ ಬೇರೆ ಊರೂಗಳಿಗೆ ಅಲೆದಾಡುವುದು ಮತ್ತು ಬಡವರು ಶಿಕ್ಷಣವನ್ನು ಮೊಟಕುಗೊಳಿಸುವುದನ್ನು ತಡೆಯಲು ಬಿ.ಎಲ್.ಡಿ.ಇ ಶಿಕ್ಷಣ ಸಂಸ್ಥೆಯಲ್ಲಿ ಹೆಚ್ಚಿನ ಶಾಲೆ, ಕಾಲೇಜುಗಳನ್ನು ಮತ್ತು ಕೋರ್ಸುಗಳನ್ನು ಪ್ರಾರಂಭಿಸುವ ಮೂಲಕ…

Read More