Subscribe to Updates
Get the latest creative news from FooBar about art, design and business.
Author: editor.udayarashmi@gmail.com
ದೇವರ ಹಿಪ್ಪರಗಿ: ಕಳೆದ ಹಲವಾರು ದಿನಗಳಿಂದ ತಾಲೂಕಿನಲ್ಲಿ ಉತ್ತಮ ಮಳೆಯಾಗುತ್ತಿದ್ದು, ರೈತರಿಗೆ ಬಿತ್ತನೆ ಬೀಜ ಮತ್ತು ರಸಗೊಬ್ಬರ ಸಮರ್ಪಕವಾಗಿ ಪೂರೈಸಲು ಅಗತ್ಯ ದಾಸ್ತಾನು ಕ್ರಮ ಕೈಗೊಳ್ಳಬೇಕು ಎಂದು ಹುಣಶ್ಯಾಳ ಗ್ರಾಪಂ ಮಾಜಿ ಅಧ್ಯಕ್ಷೆ ಬಂಗಾರೇಮ್ಮ ಮಾನಪ್ಪ ದೊಡಮನಿ ತಹಶೀಲ್ದಾರರಿಗೆ ಮನವಿ ಪತ್ರ ಸಲ್ಲಿಸಿ, ಆಗ್ರಹಿಸಿದ್ದಾರೆ.ಮನವಿ ಸಲ್ಲಿಸಿ ಮಾತನಾಡಿ, ಯಾವುದೇ ಕಾರಣಕ್ಕೂ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ಕೊರತೆ ಉಂಟಾಗದಂತೆ ತಾಲೂಕು ಕೃಷಿ ಅಧಿಕಾರಿಗಳು ಹಾಗೂ ತಾಲೂಕು ಆಡಳಿತ ಕ್ರಮ ಕೈಗೊಳ್ಳಬೇಕು, ಅಗತ್ಯ ಪ್ರಮಾಣದಲ್ಲಿ ದಾಸ್ತಾನು ಸಂಗ್ರಹಿಸುವ ಕಾರ್ಯವಾಗಬೇಕು, ತಾಲೂಕಿನ ಕೊನೆಯ ಭಾಗದ ರೈತರಿಗೂ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದರು.ಬೀಜ ರಸಗೊಬ್ಬರಗಳಿಗೆ ಸರ್ಕಾರ ನಿಗದಿ ಮಾಡಿದ ದರಕ್ಕಿಂತ ಹೆಚ್ಚಿನ ಹಣವನ್ನು ರೈತರಿಂದ ವಸೂಲಾತಿ ಮಾಡುತ್ತಿರುವುದು ಕಂಡು ಬಂದರೆ ಅಂತಹ ಅಧಿಕಾರಿ, ಸಿಬ್ಬಂದಿ ಹಾಗೂ ಮಧ್ಯವರ್ತಿಗಳ ವಿರುದ್ಧ ಹಾಗೂ ನಕಲಿ ಬೀಜ ಹಾಗೂ ರಸಗೊಬ್ಬರಗಳ ಮಾರಾಟ ಮಾಡುವವರ ಪತ್ತೆ ಹಚ್ಚಿ ಕ್ರಮ ಕೈಗೊಳ್ಳಬೇಕು.ರೆಂಟೆ ಸಮಗೊಳಿಸುವ, ಬಿತ್ತನೆಗೆ ಅನುಕೂಲವಾಗುವಂತಹ ಕೃಷಿ ಯಂತ್ರೋಪಕರಣಗಳನ್ನು…
ಕೊಲ್ಹಾರ: ಸಮಾಜದಲ್ಲಿ ರಾಜಕೀಯ ಗಣ್ಯರು ವ್ಯಾಪಾರಸ್ಥರು ಉದ್ಯಮಿಗಳು, ಯುವ ನೇತಾರರು ತಮ್ಮಗಳ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಡಂಬರದ ಸಾರ್ವಜನಿಕರಿಗೆ ಪ್ರತಿಷ್ಟೆ ತೋರಿಸುವ ಸಲುವಾಗಿ ಆಚರಣೆ ಮಾಡಿಕೊಳ್ಳುವ ಇಂದಿನ ದಿನಮಾನಗಳಲ್ಲಿ ಕೊಲ್ಹಾರದ ದೇಸಗತಿ ಮನೆತನದ ಯುವ ಮುಖಂಡರಾದ ವಿನೀತಕುಮಾರ ದೇಸಾಯಿಯವರು ತಮ್ಮ ೩೫ನೇ ಹುಟ್ಟುಹಬ್ಬವನ್ನು ಶುಕ್ರವಾರ ವಿಶಿಷ್ಟ ರೀತಿಯಲ್ಲಿ ಆಚರಣೆ ಮಾಡಿಕೊಂಡಿದ್ದಾರೆ.ನಸುಕಿನ ಜಾವ ನಾಲ್ಕು ಘಂಟೆಗೆ ಬಾಗಲಕೋಟ ಜಿಲ್ಲೆಯ ಮುಚಖಂಡಿ ಗ್ರಾಮದಲ್ಲಿರುವ ಬಸವೇಶ್ವರ ಸಂಸ್ಥೆಯ ಗೋಶಾಲೆಗೆ ತೆರಳಿ ಸುಮಾರು ೧೧ ಸಾವಿರ ರೂಪಾಯಿಯ ಮೇವು ಖರೀದಿ ಮಾಡಿ ೧೬೦ ಜಾನುವಾರುಗಳಿಗೆ ತಾವೇ ಖುದ್ದಾಗಿ ಮೇವಿನ ಆಹಾರವನ್ನು ಪೂರೈಕೆ ಮಾಡಿದರು ಅದರಂತೆ ಬೆಂಗಳೂರಿನ ಇಸ್ಕಾನ್ ಸಂಸ್ಥೆಯವರು ನಡೆಸಿಕೊಂಡು ಬರುತ್ತಿರುವ ಅನಾಥಾಶ್ರಮಕ್ಕೆ ೧೧ ಸಾವಿರ ರೂಪಾಯಿಗಳ ದೇಣಿಗೆಯನ್ನು ನೀಡಿದರು. ಬಾದಾಮಿ ಬನಶಂಕರಿ ದೇವಸ್ಥಾನಕ್ಕೆ ತೆರಳಿ ಆಡಳಿತ ಮಂಡಳಿಗೆ ದೇವಸ್ಥಾನದ ಜೀರ್ಣೋದ್ದಾರಕ್ಕಾಗಿ ಸಹಾಯ ಮಾಡಿರುವದು ಅದ್ದೂರಿಯಾಗಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವ ಜನರಿಗೆ ಇವರು ಮಾಡಿರುವ ಕಾರ್ಯ ಆದರ್ಶ ಪ್ರಾಯವಾಗಿದೆ.ಕುಟುಂಬವ್ಯವಸ್ಥೆಯಲ್ಲಿ ಬದುಕುವಾಗ ಸಮಾಜದ ಮಧ್ಯದಲ್ಲಿ ನಾವುಗಳು ನಡೆದುಕೊಳ್ಳುವ ರೀತಿ ಪರೋಪಕಾರಂ ಇದಂ…
ವಿಜಯಪುರ: ಅಭಿಮಾನಿಯನ್ನೇ ಕೊಲ್ಲುವ ಮೃಗಿಯ ಭಾವನೆ ಹೊಂದಿರುವ ನಟ ದರ್ಶನ ಪ್ರಭಾವಿ ರಾಜಕಾರಣಿಗಳ ಆಪ್ತರಾಗಿದ್ದು ಸಾಕ್ಷಿ ನಾಶದ ಜೊತೆಯಲ್ಲಿ ಪ್ರಕರಣದ ತನಿಖೆಯಲ್ಲಿ ಪ್ರಭಾವ ಬೀರುವ ಸಾಧ್ಯತೆಗಳು ಹೆಚ್ಚಾಗಿರುತ್ತವೆ. ಅದು ಅಲ್ಲದೆ ನಟ ದರ್ಶನರವರು ತಮ್ಮನ್ನು ಈ ಪ್ರಕರಣದಿಂದ ಕೈಬಿಟ್ಟರೆ ಕೇಳಿದಷ್ಟು ಹಣ ಕೊಡುವುದಾಗಿ ಪೊಲೀಸ್ ಅಧಿಕಾರಿಗಳಿಗೆ ಆಮಿಷವೊಡ್ಡಿರುವುದು ಮಾಧ್ಯಮಗಳಲ್ಲಿ ಬಿತ್ತರಗೊಂಡಿದೆ. ಹಾಗಾಗಿ ಈ ಪ್ರಕರಣವನ್ನು ರಾಜ್ಯ ಸರ್ಕಾರ ಸಿಬಿಐಗೆ ವಹಿಸಬೇಕೆಂದು ಕೆಆರ್‌ಎಸ್ ಪಕ್ಷವು ವಿಜಯಪುರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಾನಂದ ಯಡಹಳ್ಳಿ, ಗಣಪತಿ ರಾಠೋಡ, ದೀಪಾ ಮರನೂರ, ದುರ್ಗಪ್ಪ ಬೂದಿಹಾಳ, ಲಕ್ಷ್ಮಣ ಚಡಚಣ, ರಾಕೇಶ ಇಂಗಳಗಿ, ಪ್ರವೀಣ ಕನಸೇ ಇತರರು ಇದ್ದರು.
ಎಸ್ಸೆಸ್ಸೆಲ್ಸಿ ಪರೀಕ್ಷೆ -೨ ೫೨೬ ವಿದ್ಯಾರ್ಥಿಗಳ ಗೈರು ವಿಜಯಪುರ: ಶುಕ್ರವಾರ ನಡೆದ ಎಸ್ಸೆಸೆಲ್ಸಿ ಪರೀಕ್ಷೆ -೨ರ ಪ್ರಥಮ ಭಾಷೆ ವಿಷಯದಲ್ಲಿ ಜಿಲ್ಲೆಯ ಒಟ್ಟು ೪,೭೭೭ ವಿದ್ಯಾರ್ಥಿಗಳು ನೋಂದಣಿ ಮಾಡಿದ್ದರು. ಇದರಲ್ಲಿ ೪,೨೫೧ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ ೫೨೬ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರ: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶಶಿಧರ ಕೋಸಂಬೆ ಅವರು ಜೂ.೧೯ರಿಂದ ೨೧ರವರೆಗೆ ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.ಜೂ.೧೯ರಂದು ಬೆಳಿಗ್ಗೆ ೬ಗಂಟೆಗೆ ವಿಜಯಪುರಕ್ಕೆ ಆಗಮಿಸಿ, ಅಂದು ಬೆಳಿಗ್ಗೆ ೮ ರಿಂದ ರಾತ್ರಿ ೮ ಗಂಟೆಯವರೆಗೆ ವಸತಿ ಶಾಲೆ, ವಸತಿ ನಿಲಯ, ಜಿಲ್ಲಾ ಆಸ್ಪತ್ರೆ ಅಂಗನವಾಡಿ, ಮಕ್ಕಳ ಪಾಲನಾ ಸಂಸ್ಥೆ ಹಾಗೂ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಜೂ.೨೦ರಂದು ಬೆಳಿಗ್ಗೆ ೧೦-೩೦ ರಿಂದ ಮಧ್ಯಾಹ್ನ ೨ ಗಂಟೆಯವರೆಗೆ ಮಕ್ಕಳ ರಕ್ಷಣಾ ವ್ಯವಸ್ಥೆ ಕುರಿತು ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಂಜೆ ೬ ಗಂಟೆಗೆ ವಿಜಯಪುರದಿಂದ ಸಿಂದಗಿಗೆ ಪ್ರಯಾಣ ಬೆಳೆಸಿ, ರಾತ್ರಿ ೮ ಗಂಟೆಗೆ ಸಿಂದಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪರಿಶೀಲನೆ ನಡೆಸಿ, ಮಕ್ಕಳೊಂದಿಗೆ ಊಟ ಮತ್ತು ವಾಸ್ತವ್ಯ ಮಾಡಲಿದ್ದಾರೆ.ಜೂ.೨೧ರಂದು ಬೆಳಿಗ್ಗೆ ೬ ಗಂಟೆಗೆ ಮಕ್ಕಳೊಂದಿಗೆ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಬೆಳಿಗ್ಗೆ ೮ ಗಂಟೆಗೆ ಸಿಂದಗಿಯಿಂದ ಬೀದರ್…
ವಿಜಯಪುರ: ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಸರ್ಕಾರದ ಕಾರ್ಯದರ್ಶಿಗಳಾದ ವಿಜಯಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಜೂ.೧೪ ರಿಂದ ೧೬ರವರೆಗೆ ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.ಜೂ.೧೪ರಂದು ರಾತ್ರಿ ವಿಜಯಪುರಕ್ಕೆ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ. ಜೂ.೧೫ ರಂದು ಬೆಳಿಗ್ಗೆ ೧೧ ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯುವ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ನಂತರ ಸ್ಥಳೀಯ ಪರಿಶೀಲನೆ ನಡೆಸಿ, ವಿಜಯಪುರದಲ್ಲಿ ವಾಸ್ತವ್ಯ ಮಾಡಲಿದ್ದಾರೆ.ಜೂ.೧೬ರಂದು ಬೆಳಿಗ್ಗೆ ೧೦ ಗಂಟೆಗೆ ಸ್ಥಳೀಯ ಪರಿಶೀಲನೆ ನಡೆಸಿ ನಂತರ ಬೆಂಗಳೂರಿಗೆ ಮರು ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಮುಖ್ಯಮಂತ್ರಿ ಸಿದ್ಧರಾಮಯ್ಯ ವಿಜಯಪುರ ಜಿಲ್ಲಾ ಪ್ರವಾಸ ವಿಜಯಪುರ: ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜೂ.೧೬ ರಂದು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.ಜೂ.೧೬ರಂದು ಬೆಳಿಗ್ಗೆ ೧೦ ಗಂಟೆಗೆ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಪ್ರಯಾಣ ಬೆಳೆಸಿ, ೧೦-೫೦ಕ್ಕೆ ಬಳ್ಳಾರಿ ಜಿಲ್ಲೆ ತೋರಣಗಲ್ಲು ಏರಸ್ಟ್ರಿಪ್‌ಗೆ ಆಗಮಿಸಿ ೧೦-೫೫ಕ್ಕೆ ಹೆಲಿಕ್ಯಾಪ್ಟರ್ ಮೂಲಕ ಹೊರಟು ಮಧ್ಯಾಹ್ನ ೧೨-೧೦ಕ್ಕೆ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಇಂಚಗೇರಿ ಗ್ರಾಮದ ಹೆಲಿಪ್ಯಾಡ್‌ಗೆ ಆಗಮಿಸಿ, ಇಂಚಗೇರಿ ಮಠದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿ ಪುಷ್ಪಾರ್ಚನೆ ಕಾರ್ಯಕ್ರಮ ಹಾಗೂ ನಿಜರಾಜಯೋಗಿ ಶ್ರೀ ಸಮರ್ಥ ಸದ್ಗುರು ಶ್ರೀ ಮಾಧವಾನಂದ ಪ್ರಭುಗಳ ದೇವಸ್ಥಾನ ಲೋಕಾರ್ಪಣೆ, ಕಳಸಾರೋಹಣ ಮತ್ತು ೪೪ನೇ ಪುಣ್ಯತಿಥಿ ಸಪ್ತಾಹದಲ್ಲಿ ಭಾಗವಹಿಸಲಿದ್ದಾರೆ.ಮಧ್ಯಾಹ್ನ ೩ ಗಂಟೆಗೆ ಇಂಚಗೇರಿ ಹೆಲಿಪ್ಯಾಡ್‌ದಿಂದ ಹೆಲಿಕ್ಯಾಪ್ಟರ್ ಮೂಲಕ ಬೆಂಗಳೂರಿಗೆ ಮರು ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಪೂರ್ವಭಾವಿ ಸಿದ್ಧತೆ ಕುರಿತು ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ – ಪರಿಶೀಲನೆ ವಿಜಯಪುರ: ಜಿಲ್ಲೆಯ ಚಡಚಣ ತಾಲೂಕಿನ ಇಂಚಗೇರಿ ಗ್ರಾಮಕ್ಕೆ ಜೂ.೧೬ ರಂದು ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಆಗಮಿಸಲಿರುವ ಹಿನ್ನಲೆಯಲ್ಲಿ ಜೂ.೧೪ರ ಶುಕ್ರವಾರ ಜಿಲ್ಲಾಧಿಕಾರಿಗಳಾದ ಟಿ.ಭೂಬಾಲನ್ ಅವರು ಸ್ಥಳಕ್ಕೆ ಭೇಟಿ ನೀಡಿ ಪೂರ್ವಸಿದ್ಧತೆ ಕುರಿತು ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಅಗತ್ಯ ಸಲಹೆ ಸೂಚನೆ ನೀಡಿದರು.ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸ್ಥಳಕ್ಕೆ ಭೇಟಿ ನೀಡಿ ಕೈಗೊಂಡಿರುವ ಸಿದ್ಧತೆಗಳ ಪರಿಶೀಲನೆ ನಡೆಸಿ, ಮುಖ್ಯಮಂತ್ರಿಗಳ ಆಗಮನ ಹಿನ್ನಲೆಯಲ್ಲಿ ಎಲ್ಲ ಅಗತ್ಯ ಸಿದ್ಧತೆ ಕೈಗೊಳ್ಳಬೇಕು. ಮುಖ್ಯಮಂತ್ರಿಗಳ ಕಾರ್ಯಕ್ರಮದ ಸಂದರ್ಭದಲ್ಲಿ ಯಾವುದೇ ಲೋಪವಾಗದಂತೆ ಅಗತ್ಯ ಭದ್ರತಾ ವ್ಯವಸ್ಥೆ, ಹೆಲಿಪ್ಯಾಡ್ ವ್ಯವಸ್ಥೆ ಕುರಿತು ಪರಿಶೀಲನೆ ನಡೆಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ ಇಂಡಿ ಉಪವಿಭಾಗಾಧಿಕಾರಿ ಆಬಿದ ಗದ್ಯಾಳ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಅಭಿಯಂತರ ರಾಜು ಮುಜುಮದಾರ ಸೇರಿದಂತೆ…
ಇಂಡಿ: ತಾಲೂಕಿನ ಅರಣ್ಯ ಪ್ರದೇಶ ಸಾವಳಸಂಗ ಗುಡ್ಡಕ್ಕೆ ವಿಜಯಪುರ ಜಿಲ್ಲಾಧಿಕಾರಿ ಟಿ.ಭೂಬಾಲನ್ ಭೇಟಿ ನೀಡಿದರು.ಅಲ್ಲಿ ಹೊಸದಾಗಿ ನಿರ್ಮಿಸುವ ಅಂತರ ರಾಷ್ಟ್ರೀಯ ಗುಡ್ಡಗಾಡು ಸೈಕ್ಲಿಂಗ್ ಪಾರ್ಕ ಕುರಿತು ಸೈಕ್ಲಿಂಗ್ ಸಂಘದ ಅಧ್ಯಕ್ಷ ದೇಸಾಯಿ ಇವರ ಜೊತೆ ಚರ್ಚೆ ನಡೆಸಿ ಸ್ಥಳ ಪರಿಶೀಲನೆ ನಡೆಸಿದರು.ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಸಾವಳಸಂಗ ಅರಣ್ಯ ಪ್ರದೇಶವನ್ನು ಪ್ರವಾಸಿ ತಾಣವಾಗಿ ಮಾಡಬೇಕು. ಟ್ರೀ ಪಾರ್ಕ, ಜಿಪಲಾಯಿನ್, ರೋಪವಾಕ್ ಮತ್ತು ಸಾಹಸಮಯ ಕ್ರೀಡೆಗಳಿಗೆ ಪ್ರೋತ್ಸಾಹಿಸುವ ಕ್ರೀಡಾ ಸ್ಥಳಗಳನ್ನು ನಿರ್ಮಿಸಲು ಕೇಳಿಕೊಂಡರು.ಸಾವಳಸಂಗದಲ್ಲಿ ಅರಣ್ಯ ಪ್ರದೇಶ ಹೆಚ್ಚಿಸಲು ಖಾಸಗಿಯವರು ತಮ್ಮ ಜಮೀನು ಮಾರುವವರಿದ್ದರೆ ಈ ಕುರಿತು ಪರಿಶೀಲಿಸಲು ತಿಳಿಸಿದರು.ನಂತರ ಅಮೃತ ಸರೋವರ ಪ್ರದೇಶವನ್ನು ವೀಕ್ಷಿಸಿದರು.ಜಿ.ಪಂ ಸಿಇಒ ರಿಷಿ ಆನಂದ, ಜಿಲ್ಲಾ ಪೋಲಿಸ ವರಿಷ್ಠಾಧಿಕಾರಿ ರಿಸಿಕೇಶ ಭಗವಾನ, ಇಂಡಿ ಕಂದಾಯ ಉಪವಿಬಾಗಾಧಿಕಾರಿ ಅಬೀದ್ ಗದ್ಯಾಳ, ವಲಯ ಅರಣ್ಯಾಧಿಕಾರಿ ಮಂಜುನಾಥ ಧುಳೆ, ಇಒ ಸಂಜಯ ಖಡಗೇಕರ, ಚಡಚಣ ತಹಸೀಲ್ದಾರ ಸಂಜಯ ಇಂಗಳೆ,ಸಾಹಿಲ್ ಧನಶೆಟ್ಟಿ, ವಿನೋದ ಸಜ್ಜನ, ರಾಮಗೌಡ ಸರಬಡಗಿ, ಪಿಡಿಒ ಸಿದ್ದು ಲೋಣಿ, ಗ್ರಾ.ಪಂ…
ಇಂಡಿ: ವಿಶ್ವ ರಕ್ತದಾನಿಗಳ ದಿನದ ಜಾಗತಿಕ ಧ್ಯೇಯವು ಪ್ರತಿ ವರ್ಷವೂ ತಮ್ಮ ರಕ್ತವನ್ನು ತಮಗೆ ತಿಳಿದಿಲ್ಲದ ಜನರಿಗಾಗಿ ದಾನ ಮಾಡುವ ನಿಸ್ವಾರ್ಥ ವ್ಯಕ್ತಿಗಳನ್ನು ಗುರುತಿಸುತ್ತದೆ ಎಂದು ಡಾ. ಪಿ.ಕೆ. ರಾಠೋಡ ಹೇಳಿದರು.ಪಟ್ಟಣದ ಜಿ.ಆರ್.ಗಾಂಧಿ ಕಲಾ, ವಾಯ್.ಎ.ಪಾಟೀಲ ವಾಣಿಜ್ಯ ಹಾಗೂ ಎಮ್.ಪಿ.ದೋಶಿ ವಿಜ್ಞಾನ ಪದವಿ ಮಹಾವಿದ್ಯಾಲಯದಲ್ಲಿ ರೆಡ್ ಕ್ರಾಸ್, ಸ್ಕೌಟ್ಸ್ ಗೈಡ್ಸ್, ಎನೆಸ್ಸೆಸ್ ಮತ್ತು ಜೀವಶಾಸ್ತ್ರ ವಿಭಾಗ ಅಡಿದಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.ಪ್ರತಿ ವರ್ಷ ಪ್ರಪಂಚದಾದ್ಯಂತದ ದೇಶಗಳು ಜೂನ್ ೧೪ ರಂದು ವಿಶ್ವ ರಕ್ತದಾನಿಗಳ ದಿನವನ್ನು ಆಚರಿಸುತ್ತವೆ. ಸುರಕ್ಷಿತ ರಕ್ತ ಮತ್ತು ರಕ್ತದ ಉತ್ಪನ್ನಗಳ ಅಗತ್ಯತೆಯ ಅರಿವು ಮೂಡಿಸಲು ಮತ್ತು ಸ್ವಯಂಪ್ರೇರಿತ, ಪಾವತಿಸದ ರಕ್ತದ ದಾನಿಗಳಿಗೆ ತಮ್ಮ ಜೀವ ಉಳಿಸುವ ರಕ್ತಕ್ಕಾಗಿ ಧನ್ಯವಾದಗಳನ್ನು ನೀಡಲು ಈವೆಂಟ್ ಕಾರ್ಯನಿರ್ವಹಿಸುತ್ತದೆ. ರೋಗಿಗಳಿಗೆ ಸುರಕ್ಷಿತ ರಕ್ತ ಮತ್ತು ರಕ್ತದ ಉತ್ಪನ್ನಗಳಿಗೆ ಸಾಕಷ್ಟು ಪ್ರಮಾಣದಲ್ಲಿ ಪ್ರವೇಶವನ್ನು ನೀಡುವ ರಕ್ತದ ಸೇವೆಯು ಪರಿಣಾಮಕಾರಿ ಆರೋಗ್ಯ ವ್ಯವಸ್ಥೆಯ ಪ್ರಮುಖ ಅಂಶವಾಗಿದೆ ಎಂದರು.ಶ್ವೇತಾ ಕಾಂತ, ಮಲ್ಲಿಕಾರ್ಜುನ ಕೊಣದೆ, ಡಾ. ಶ್ರೀಕಾಂತ…
