Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಆಲಮೇಲ: ನೂತನ ತಾಲೂಕಿನ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕೆಲಸ ಮಾಡಿದ ಶಾಸಕ ಅಶೋಕ ಮನುಗುಳಿ ಅವರ ಅವಧಿಯಲ್ಲಿ ಪ್ರಾರಂಭಗೊಂಡ ಕಾಮಗಾರಿಗಳು ಅವರ ಅವಧಿಯಲ್ಲಿ ಉದ್ಘಾಟನೆ ಗೊಳ್ಳಲಿವೆ ಎಂದು ಪಟ್ಟಣ ಪಂಚಾಯತ್ ಅಧ್ಯಕ್ಷ ಸಾಧಿಕ ಸುಂಬಡ ಹೇಳಿದರು. ಮಂಗಳವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡುತ್ತಾ ಹೇಳಿದರು.ಜೂ.25 ರಂದು ವಿವಿಧ ಕಾಮಗಾರಿಗಳ ಭೂಮಿ ಪೂಜೆ ಹಾಗೂ ಉದ್ಘಾಟನೆ ಮಾಡಲು ಆಗಮಿಸುತ್ತಿರುವ ಸಚಿವರುಗಳು ಅಭಿವೃದ್ಧಿ ಕೆಲಸಗಳನ್ನು ವೀಕ್ಷಿಸಲಿದ್ದಾರೆ. ಎಲ್ಲಾ ಕಾರ್ಯಕ್ರಮಗಳು ಪಟ್ಟಣದಲ್ಲಿ ಜರುಗಲಿದ್ದು ಪಟ್ಟಣದ ಜನರು ಸೇರಿದಂತೆ ತಾಲೂಕಿನ ವಿವಿಧ ಗ್ರಾಮದ ಜನರು ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ವಿನಂತಿಸಿದರು.ಪಟ್ಟಣದಲ್ಲಿ 20 ಕೋಟಿ ವೆಚ್ಚದಲ್ಲಿ ಸದಾಶಿವ ಗೌಡ ರಾಜ್ಯ ಮುಖ್ಯ ರಸ್ತೆ ಅಗಲೀಕರಣದಲಿ, ದಂಬರಿಕಾರಣ, ವಿದ್ಯುತ್ ವ್ಯೆವಸ್ಥೆ ನಿರ್ಮಾಣಕೆ ಅನೇಕ ಬಡ ಜನರ ಮನೆಗಳು ಅಂಗಡಿಗಳು ದೇವಸ್ಥಾನ ಸ್ಮಶಾನ ಜಾಗವನ್ನು ಸ್ವಯಂ ಪ್ರೇರಿತವಾಗಿ ತೆರವುಗೊಳಿಸಿ ಅಭಿವೃದ್ಧಿಗೆ ಸಹಕರಿಸಿದ್ದಾರೆ. ಅವರಿಗೆ ಪಟ್ಟಣ ಪಂಚಾಯಿತಿ ವತಿಯಿಂದ ಧನ್ಯವಾದಗಳು ಅರ್ಪಿಸಲಿದ್ದೇವೆ. ಆಲಮೇಲ ತೋಟಗಾರಿಕೆ ಕಾಲೇಜು ಕಟ್ಟಡದ ಭೂಮಿ…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪ್ರತಿಯೊಬ್ಬರೂ ಹನ್ನೆರಡನೇ ಶತಮಾನದ ಬಸವಾದಿ ಶರಣರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಮಾಜಕ್ಕೆ ಏನಾದರೂ ಕೊಡುಗೆ ನೀಡುವಂತಾಗಬೇಕೆಂದು ಧಾರವಾಡ ಮುರುಘಾಮಠದ ಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು.ತಾಲೂಕಿನ ಇಂಗಳೇಶ್ವರ ಗ್ರಾಮದ ವಿರಕ್ತಮಠದ ವಚನ ಶಿಲಾ ಮಂಟಪದ ಆವರಣದಲ್ಲಿ ಲಿಂ.ಸಿದ್ಧಲಿಂಗ ಶಿವಯೋಗಿಗಳವರ 92ನೇ ಜಾತ್ರಾ ಮಹೋತ್ಸವದ ಅಂಗವಾಗಿ ಸೋಮವಾರ ಹಮ್ಮಿಕೊಂಡಿದ್ದ ಧರ್ಮಸಭೆ ಹಾಗೂ ಗುರುವಂದನ ಸಮಾರಂಭದ ಸಾನಿಧ್ಯ ವಹಿಸಿ ಉದ್ಘಾಟಿಸಿ ಮಾತನಾಡಿದ ಅವರು, ಬಸವಾದಿ ಶರಣರು ಸಾಮಾನ್ಯರಂತೆ ಬದುಕಿ ತಮ್ಮ ವಚನ ಸಾಹಿತ್ಯದ ಮೂಲಕ ಜಗತ್ತಿಗೆ ಮಾನವೀಯ ಮೌಲ್ಯಗಳನ್ನು ನೀಡಿದ್ದಾರೆ. ಅವರು ನುಡಿದಂತೆ ನಡೆಯುವ ಮೂಲಕ ಜಗತ್ತಿನಲ್ಲಿ ಚಿರಸ್ಥಾಯಿಯಾಗಿದ್ದಾರೆ ಎಂದರು.ಶ್ರೀಮಠದ ಲಿಂ. ಚನ್ನಬಸವ ಸ್ವಾಮೀಜಿಯವರು ತಮ್ಮ ಬದುಕಿನಲ್ಲಿ ಬಸವಾದಿ ಶರಣರ ತತ್ವಗಳನ್ನು ಅಳವಡಿಸಿಕೊಂಡು ಶರಣ ತತ್ವದಂತೆ ಆಧ್ಯಾತ್ಮ ಬದುಕು ಸಾಗಿಸಿದರು. ಇವರು ವಚನ ಸಾಹಿತ್ಯ ಶಾಶ್ವತವಾಗಿ ಸಂರಕ್ಷಣೆ ಮಾಡುವ ಉದ್ದೇಶದಿಂದ ವಚನ ಶಿಲಾ ಮಂಟಪವನ್ನು ನಿರ್ಮಿಸಿದ್ದು ಶರಣ ಪರಂಪರೆಗೆ ಮಾದರಿಯಾಗಿದೆ. ಇವರು ರಾಜ್ಯ, ಹೊರ ರಾಜ್ಯಗಳಲ್ಲಿ ಅಪಾರ ಭಕ್ತ ಸಮೂಹ ಸಂಪಾದಿಸಿದ್ದಾರೆ ಎಂದರು.ನೇತೃತ್ವ…
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಉತ್ತಮ ಮಳೆ, ಕೃಷಿ ಸಮೃದ್ಧಿ ಹಾಗೂ ಜನಜೀವನದ ಒಳಿತಿಗಾಗಿ ತಾಲೂಕಿನ ಮಟ್ಟಿಹಾಳ ಗ್ರಾಮಸ್ಥರು ಮಂಗಳವಾರ ಪಟ್ಟಣದ ಹತ್ತಿರದ ಕೃಷ್ಣಾ ನದಿ ತೀರದಲ್ಲಿ ಸಂಪ್ರದಾಯಬದ್ಧವಾಗಿ ಗಂಗಾ ಪೂಜೆ ಮತ್ತು ವಿಶೇಷ ಪ್ರಾರ್ಥನೆ ನೆರವೇರಿಸಿದರು.ಹಿಂದೂ ಸಂಪ್ರದಾಯದಲ್ಲಿ ಗಂಗಾಮಾತೆಯ ಆರಾಧನೆಗೆ ವಿಶೇಷ ಮಹತ್ವವಿದ್ದು, ಜಲಾಭಿಷೇಕದ ಮೂಲಕ ವರುಣ ದೇವರನ್ನು ಪ್ರಾರ್ಥಿಸುವ ಪದ್ಧತಿ ಅನಾದಿ ಕಾಲದಿಂದಲೂ ನಡೆದುಬಂದಿದೆ. ಗಂಗಾಜಲವು ಶಿವನಿಗೆ ಅತ್ಯಂತ ಪ್ರಿಯವಾದುದು ಎಂಬ ನಂಬಿಕೆಯಿಂದ ಗ್ರಾಮಸ್ಥರು ಭಕ್ತಿಭಾವದಿಂದ ಪೂಜೆ ಸಲ್ಲಿಸಿದರು.ಮುಂಗಾರು ಆರಂಭವಾದರೂ ಸಮರ್ಪಕ ಮಳೆಯಾಗದ ಹಿನ್ನೆಲೆಯಲ್ಲಿ ರೈತರಲ್ಲಿ ಆತಂಕ ಹೆಚ್ಚಾಗಿದೆ. ರಾಜ್ಯದ ಹಲವು ಭಾಗಗಳಲ್ಲಿ ನೀರಿನ ಕೊರತೆ ತೀವ್ರಗೊಂಡಿದ್ದು, ಕೆರೆ-ಕಟ್ಟೆಗಳು ಬತ್ತುತ್ತಿರುವ ಪರಿಸ್ಥಿತಿಯಲ್ಲಿ ಉತ್ತಮ ಮಳೆಯಾಗಲೆಂದು ವಿಶೇಷ ಪ್ರಾರ್ಥನೆ ಆಯೋಜಿಸಲಾಯಿತು.ಈ ಸಂದರ್ಭದಲ್ಲಿ ನೂರಾರು ಮುತ್ತೈದೆಯರು ಕುಂಭದೊಂದಿಗೆ ಕೃಷ್ಣಾ ನದಿ ದಡಕ್ಕೆ ತೆರಳಿ ಗಂಗಾಮಾತೆಗೆ ಅಭಿಷೇಕ ನೆರವೇರಿಸಿದರು. ಅರಿಶಿನ, ಕುಂಕುಮ, ಹೂವು ಹಾಗೂ ನೈವೇದ್ಯವನ್ನು ಅರ್ಪಿಸಿ, ನಾಡಿನಲ್ಲಿ ಉತ್ತಮ ಮಳೆಯಾಗಿ ಸಮೃದ್ಧಿ ನೆಲೆಸಲೆಂದು ಸಂಕಲ್ಪ ಮಾಡಿದರು.ಪೂಜೆ ಬಳಿಕ ಗ್ರಾಮಸ್ಥರು ಹಾಗೂ ಮಹಿಳೆಯರು ಕೊಲ್ಹಾರದ…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಜಾನಪದ ಸಾಹಿತ್ಯದ ಮಾಲಿಕರು ಗ್ರಾಮೀಣರು. ಸಮುದಾಯ ಅಂಕು ಡೊಂಕುಗಳನ್ನು ತಿದ್ದುವ ಸಾಮರ್ಥ್ಯ ಜಾನಪದ ಸಾಹಿತ್ಯಕ್ಕೆ ಇದೆ. ಸರಳ ಭಾಷೆಯಿಂದ ಜನಪದ ಸಾಹಿತ್ಯ ಕೂಡಿದೆ ಎಂದು ಆಲಮೇಲ ವಿರಕ್ತಮಠದ ಜಗದೇವ ಮಲ್ಲಿಬೊಮ್ಮಯ್ಯ ಸ್ವಾಮಿಜಿ ಅಭಿಪ್ರಾಯ ವ್ಯಕ್ತಪಡಿಸಿದರು.ತಾಲೂಕಿನ ಇಂಗಳೇಶ್ವರ ಗ್ರಾಮದ ವಿರಕ್ತಮಠದ ಲಿಂ.ಸಿದ್ದಲಿಂಗ ಸ್ವಾಮೀಜಿಯವರ 92 ನೇ ಜಾತ್ರಾಮಹೋತ್ಸವದಂಗವಾಗಿ ವಚನ ಶಿಲಾಶಾಸನ ಮಂಟಪ ಆವರಣದಲ್ಲಿ ಜಿಲ್ಲಾ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ಸೋಮವಾರ ಸಂಜೆ ಹಮ್ಮಿಕೊಂಡಿದ್ದ ಜಾನಪದ ಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ನಮ್ಮೆಲ್ಲರ ಹಿರಿಯರು ಜಾನಪದ ಸಂಸ್ಕೃತಿಯ ಮೌಲ್ಯಗಳನ್ನು ಪ್ರತಿಪಾದಿಸಿ ಅದರಂತೆ ನಡೆದು ಸುಂದರ ಸೌಹಾರ್ದತೆಯ ಮೂಲಕ ಜೀವನ ಕಟ್ಟಿಕೊಂಡು ಮಾದರಿಯಾಗಿದ್ದಾರೆ ಎಂದರು.ಅಧ್ಯಕ್ಷತೆ ವಹಿಸಿದ್ದ ಜಾನಪದ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಬಾಳನಗೌಡ ಪಾಟೀಲ ಮಾತನಾಡಿ. ಗ್ರಾಮೀಣರು ಜಾನಪದ ಸಾಹಿತ್ಯ ಬೆಳೆಸಿ ಉಳಿಸಿದವರು. ಮೌಖಿಕ ಪರಂಪರೆಯಿಂದ ಬೆಳೆದುಬಂದ ಜನಸಾಮಾನ್ಯರ ಸಾಹಿತ್ಯವಾಗಿದೆ. ಜನಪದ ಗೀತೆಗಳು. ಕಥೆಗಳು. ಗಾದೆಗಳು. ಒಗಟುಗಳು ಪ್ರಖ್ಯಾತಗೊಂಡಿವೆ. ರಾಜ್ಯದಲ್ಲಿ ಜಾನಪದ ವಿಶ್ವವಿದ್ಯಾಲಯ ಸ್ಥಾಪನೆಯಾಗಿದ್ದು ಜನಪದರ ಆಸ್ತಿ ಎಂದರು.ಸಾಹಿತಿ…
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ತಾಲೂಕಿನ ಕೂಡಗಿ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪೊಲೀಸ್ ಇಲಾಖೆಯ ವತಿಯಿಂದ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಕಾರ್ಯಕ್ರಮದಲ್ಲಿ ಕೂಡಗಿ ಪೊಲೀಸ್ ಠಾಣೆಯ ಪಿಎಸ್ಐ ಯತೀಶ್ ಕೆ.ಎನ್. ಮಾತನಾಡಿ, ಯುವ ಸಮುದಾಯವು ಮಾದಕ ದ್ರವ್ಯಗಳ ವ್ಯಸನಕ್ಕೆ ಒಳಗಾಗುತ್ತಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಹೇಳಿದರು.ವ್ಯಸನಗಳಿಂದ ದೂರ ಉಳಿದು ಉತ್ತಮ ಸಾಮಾಜಿಕ ಜೀವನವನ್ನು ರೂಪಿಸಿಕೊಳ್ಳುವ ಮೂಲಕ ಸಮಾಜದ ಅಭಿವೃದ್ಧಿಗೆ ಯುವಜನತೆ ಕೈಜೋಡಿಸಬೇಕು ಎಂದು ಕರೆ ನೀಡಿದರು.ಮಾದಕ ದ್ರವ್ಯ ಸೇವನೆಯು ವ್ಯಕ್ತಿಯ ದೈಹಿಕ, ಮಾನಸಿಕ ಹಾಗೂ ಭಾವನಾತ್ಮಕ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಮಾದಕ ದ್ರವ್ಯಗಳ ಸೇವನೆ, ಮಾರಾಟ ಮತ್ತು ಸಂಗ್ರಹಣೆ ಕಾನೂನುಬಾಹಿರವಾಗಿದ್ದು, ಇಂತಹ ಕೃತ್ಯಗಳಲ್ಲಿ ತೊಡಗುವವರಿಗೆ ಕನಿಷ್ಠ 10 ವರ್ಷಗಳವರೆಗೆ ಜೈಲು ಶಿಕ್ಷೆಯ ಸಾಧ್ಯತೆ ಇದೆ ಎಂದು ಅವರು ತಿಳಿಸಿದರು. ರಾಜ್ಯವನ್ನು ಮಾದಕ ದ್ರವ್ಯ ಮುಕ್ತಗೊಳಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಕಠಿಣ ಕ್ರಮಗಳನ್ನು ಕೈಗೊಂಡಿದೆ ಎಂದರು.ಇತ್ತೀಚಿನ ದಿನಗಳಲ್ಲಿ ಮಾದಕ ದ್ರವ್ಯ ಮಾರಾಟಗಾರರು ಯುವಜನರನ್ನು ಗುರಿಯಾಗಿಸಿಕೊಂಡಿದ್ದು,…
ಸಂಸ್ಥೆಗಳ ಕಾರ್ಯ ಶ್ಲಾಘಿಸಿದ ವಿಜಯಪುರ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಶಿವಾನಂದ ಮಾಸ್ತಿಹೊಳಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅನೀಮಿಯಾ ಮುಕ್ತ ಭಾರತ ಹಾಗೂ ಅನೀಮಿಯಾ ಮುಕ್ತ ಕರ್ನಾಟಕ ಅಭಿಯಾನಕ್ಕೆ ಕೈಜೋಡಿಸಿ ರಾಜ್ಯಾದ್ಯಂತ ಜನಜಾಗೃತಿ, ತಪಾಸಣೆ ಹಾಗೂ ಉಚಿತ ಔಷಧಿ ವಿತರಣೆಯ ಮೂಲಕ ಮಹತ್ವದ ಸೇವೆ ಸಲ್ಲಿಸುತ್ತಿರುವ ಗ್ರಾಮೀಣ ಅಭಿವೃದ್ಧಿ ಸಂಸ್ಥೆ (ಐ.ಆರ್.ಡಿ.) ಮತ್ತು ಸ್ಪಂದನ ಸ್ವಯಂ ಸೇವಾ ಸಂಸ್ಥೆಗಳ ಕಾರ್ಯ ಶ್ಲಾಘನೀಯವಾಗಿದೆ ಎಂದು ಜಿಲ್ಲಾ ಆಸ್ಪತ್ರೆ ವಿಜಯಪುರದ ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ. ಶಿವಾನಂದ ಮಾಸ್ತಿಹೊಳಿ ಹೇಳಿದರು.ಮಂಗಳವಾರ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಐ.ಆರ್.ಡಿ ಮತ್ತು ಸ್ಪಂದನ ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ತೆರೆಯಲಾದ ಉಚಿತ ಅನೀಮಿಯಾ ಅರಿವು, ರಕ್ತಹೀನತೆ ತಪಾಸಣೆ ಹಾಗೂ ಔಷಧಿ ವಿತರಣಾ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅನೀಮಿಯಾ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಬಾಬು ಜಿ. ಸಜ್ಜನ ಹಾಗೂ ಸ್ಪಂದನ ಸಂಸ್ಥೆಯ ಅಧ್ಯಕ್ಷ ಮಹಾದೇವ ದೇವರ ಅವರ ನೇತೃತ್ವದಲ್ಲಿ ಜಿಲ್ಲೆಯ ತಾಳಿಕೋಟೆ…
ವಿಜಯಪುರ ಜಿಪಂನಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ | ಸಚಿವ ಡಾ.ಎಂ.ಬಿ. ಪಾಟೀಲ ಅಧಿಕಾರಿಗಳಿಗೆ ಕಟ್ಟಪ್ಪಣೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜುಲೈ ೨ನೇ ವಾರದಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಆದಾಗ್ಯೂ ಮಳೆ ಅಭಾವದಿಂದ ಜಿಲ್ಲೆಯಾದ್ಯಂತ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಜವಾಬ್ದಾರಿ ಅರಿತು ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಸಚಿವರಾದ ಡಾ. ಎಂ.ಬಿ. ಪಾಟೀಲ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಸೂಚನೆ ನೀಡಿದರು.ನಗರದ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಅವರು ಮಾತನಾಡಿದರು.ಜಿಲ್ಲೆ ಸೇರಿದಂತೆ ಗ್ರಾಮೀಣ, ನಗರ, ಸ್ಥಳೀಯ ಸಂಸ್ಥೆ ಹಾಗೂ ಪಾಲಿಕೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಆಯಾ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಜಿಲ್ಲೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಸಂಬಂಧಿಸಿದಂತೆ ವಿದ್ಯುತ್ ಪರಿವರ್ತಕಗಳ ಸಮಸ್ಯೆಯಿದ್ದಲ್ಲಿ ಸ್ಪೀಡ್ ಅಪ್ ಮಾಡಿ ಕುಡಿಯುವ ನೀರಿಗೆ ತಕ್ಷಣಕ್ಕೆ ವಿದ್ಯುತ್ ಪೂರೈಕೆಯಾಗುವಂತೆ ಹೆಸ್ಕಾಂ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು…
ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಮಕ್ಕಳು ಮಾದಕ ವ್ಯಸನದಿಂದ ದೂರ ಇರುವುದರ ಜೊತೆಗೆ ಸುತ್ತಮುತ್ತಲಿನ ಜನರಲ್ಲಿ ಅದರ ಕುರಿತು ಜಾಗೃತಿ ಮೂಡಿಸಿ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಬೇಕು ಎಂದು ಪೋಲಿಸ್ ಅಧಿಕಾರಿ ಪಿ.ಎಚ್.ಘಾಟಗೆ ಅಭಿಪ್ರಾಯ ಪಟ್ಟರು. ಹತ್ತಿರದ ಕುಂಬಾರಹಳ್ಳ ಪಿ.ಎ. ಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನಡೆಸಿದ ಮಾದಕ ವ್ಯಸನ ವಿರೋಧಿ ಮತ್ತು ಜಾಗೃತಿ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾತನಾಡುತ್ತಾ ಇಂದು ಯುವ ಜನತೆ ಡ್ರಗ್ಸ, ಗಾಂಜಾ, ಬಿಡಿ , ಸಿಗರೇಟ್, ಮಾವಾ ಇವೇ ಮೊದಲಾದ ಮಾದಕ ವ್ಯಸನಕ್ಕೆ ಬಲಿಯಾಗಿ ಜೀವನವನ್ನು ಹಾಳು ಮಾಡಿ ಕೊಳ್ಳುತ್ತಿದ್ದಾರೆ, ಒಮ್ಮೆ ಚಟಕ್ಕೆ ಬಿದ್ದರೆ ಅದರಿಂದ ತಪ್ಪಿಸಿ ಕೊಳ್ಳುವುದು ಬಹಳ ಕಷ್ಟ ಆದ್ದರಿಂದ ಮಾದಕವ್ಯಸನಗಳಿಂದ ದೂರವಿರಿ ಎಂದು ಕಿವಿಮಾತು ಹೇಳಿದರು. ನಿಮ್ಮ ಸುತ್ತಮುತ್ತಲು ಯಾರಾದರೂ ಮಾದಕ ವ್ಯಸನಕ್ಕೆ ಬಲಿಯಾದರೆ ನಾವು ನೀಡುವ ಆ್ಯಪ ಮೂಲಕ ನಮಗೆ ತಿಳಿಸಿದರೆ ಅವರನ್ನೂ ಸಹ ಸನ್ಮಾರ್ಗಕ್ಕೆ ತರಲು ಸಾಧ್ಯ ಎಂದು ಹೇಳಿ ಸ್ಕ್ಯಾನರ್ ನ್ನು ಪರಿಚಯಿಸಿ ಶಾಲೆಯಲ್ಲಿ ಎಲ್ಲರಿಗೂ ಸಿಗುವಂತೆ ಪ್ರದರ್ಶಿಸಲು…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಯೋಗವು ಭಾರತವು ಜಗತ್ತಿಗೆ ನೀಡಿದ ಅತ್ಯಂತ ಅಮೂಲ್ಯವಾದ ಕೊಡುಗೆಯಾಗಿದ್ದು, ದೈಹಿಕ ಸದೃಢತೆಯ ಜೊತೆಗೆ ಮಾನಸಿಕ ಶಾಂತಿ ಹಾಗೂ ಆಧ್ಯಾತ್ಮಿಕ ಬೆಳವಣಿಗೆಯನ್ನು ನೀಡುವ ಮಹಾನ್ ಪರಂಪರೆಯಾಗಿದೆ ಎಂದು ಬಿಎನ್‌ಬಿ ಫೌಂಡೇಶನ್ ಅಧ್ಯಕ್ಷ ಹಾಗೂ ಯುವ ಮುಖಂಡ ಶ್ರೀಶೈಲಗೌಡ ಬಿರಾದಾರ ಹೇಳಿದರು.ನಗರದ ಜ್ಯೋತಿಮಂಗಲ ಕಾರ್ಯಾಲಯದಲ್ಲಿ ಲಿಟಲ್ ವಿಂಗ್ಸ್ ಸ್ಕೂಲ್ ಮತ್ತು ಬಿ ಎನ್ ಬಿ ಫೌಂಡೇಶನ್ ಸಹಯೋಗದಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಸಸಿಗೆ ನೀರುಣಿಸಿ ಅವರು ಮಾತನಾಡಿದರು.ಭಾರತದ ಯೋಗಕ್ಕೆ ಜಾಗತಿಕ ಮಟ್ಟದಲ್ಲಿ ಮನ್ನಣೆ ದೊರೆತಿದ್ದು, ವಿಶ್ವದಾದ್ಯಂತ ಜನರು ಯೋಗಾಭ್ಯಾಸದ ಮೂಲಕ ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುತ್ತಿದ್ದಾರೆ ಎಂದು ಹೇಳಿದರು.ಅತಿಥಿಯಾಗಿ ಮಾತನಾಡಿದ ಶಿಕ್ಷಕ ಸಿದ್ದು ಚಿಂಚೋಳಿ, ಯೋಗವು ದೈಹಿಕ, ಮಾನಸಿಕ ಹಾಗೂ ಭಾವನಾತ್ಮಕ ಆರೋಗ್ಯವನ್ನು ಸುಧಾರಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಲು ಪ್ರೇರೇಪಿಸುತ್ತದೆ ಎಂದು ತಿಳಿಸಿದರು.ಯುವ ಮುಖಂಡ ರಜತ ತಾಂಬೆ ಮಾತನಾಡಿದರು.ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಮಲ್ಲಣ್ಣ ಮನಗೂಳಿ, ಶೇಕುಂತಲಾ ಹಿರೇಮಠ, ಶಿಕ್ಷಣ ಸುಧಾರಣಾ ಸಮಿತಿ ಸದಸ್ಯ ಹಾಗೂ ಶಿಕ್ಷಕ…
ತಾಳಿಕೋಟೆ ಪೊಲೀಸ್ ಠಾಣೆಯಲ್ಲಿ ಮೋಹರಂ ಹಬ್ಬದ ಶಾಂತಿ ಪಾಲನಾ ಸಭೆ ಉದಯರಶ್ಮಿ ದಿನಪತ್ರಿಕೆ ತಾಳಿಕೋಟೆ: ಪಟ್ಟಣದಲ್ಲಿಯ ಹಿಂದೂ-ಮುಸ್ಲಿಂ ಬಾಂದವರು ಮೊದಲಿನಿಂದಲೂ ಸಹೋದರತೆ ಭಾವನೆಯಿಂದ ಸಾಗಿಬಂದವರಾಗಿದ್ದೀರಿ ಮೋಹರಂ ಹಬ್ಬದ ದಪನ್ ಸಮಯದಲ್ಲಿ ಎಲ್ಲ ಬಾಂದವರು ಸಹೋದರತೆ ಬಾತೃತ್ವದೊಂದಿಗೆ ಹಬ್ಬಕ್ಕೆ ವಿಶೇಷ ಮೇರಗನ್ನು ತರುವಂತಹ ಕಾರ್ಯ ಮಾಡಿ ಭಾವೈಕ್ಯತೆಗೆ ಸಾಕ್ಷೀಯಾಗಲೆಂದು ಸಿಪಿಐ ಮಹ್ಮದಪಶುಉದ್ದೀನ ಅವರು ಹೇಳಿದರು.ಸೋಮವಾರರಂದು ಪಟ್ಟಣದ ಪೊಲೀಸ್ ಠಾಣೆಯಲ್ಲಿ ಮೋಹರಂ ಹಬ್ಬದ ನಿಮಿತ್ಯವಾಗಿ ಕರೆಯಲಾದ ಶಾಂತಿ ಪಾಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದ ಅವರು ತಾಳಿಕೋಟೆ ಪಟ್ಟಣವು ಶಾಂತಿಪ್ರೀಯತೆಗೆ ಸಾಕ್ಷೀಯಾದ ಪಟ್ಟಣವಾಗಿದೆ ಹಿಂದೂ-ಮುಸ್ಲಿಂ ಹಬ್ಬಗಳಲ್ಲಿ ಎಲ್ಲರೂ ಮೊದಲಿಂದಲೂ ಸಹೋದರತೆಯೊಂದಿಗೆ ಭಾಗವಹಿಸುತ್ತಾ ತಾಳಿಕೋಟೆ ನಗರಕ್ಕೆ ಒಳ್ಳೆಯ ಹೆಸರನ್ನು ತಂದಿದ್ದೀರಿ ಅದರಂತೆ ಮುಂದೆಯೂ ಇದೇ ರೀತಿ ಸಾಗಲಿ ಎಂದು ಆಶಿಸಿದ ಅವರು ಮೋಹರಂ ಹಬ್ಬದ ಆಚರಣೆ ಸಮಯದಲ್ಲಿ ಯಾರೋ ಕುಚೇಷ್ಠಿಗಳಿಂದ ಸಣ್ಣ ಪುಟ್ಟ ಗಲಾಟೆಗಳಾಗುತ್ತಿದ್ದರೂ ಕೂಡಲೇ ನಮ್ಮ ಪೊಲೀಸ್ ಇಲಾಖೆಗೆ ಮಾಹಿತಿ ಒದಗಿಸುವಂತಹ ಕೆಲಸ ಮಾಡಿ ಇದರಿಂದ ಸಮಾಜದಲ್ಲಿ ಸಾಮರಸ್ಯ ಕದುಡುವ ಕೆಲಸಕ್ಕೆ ತಡೆಯಲು ಸಾದ್ಯವಾಗಲಿ…
