Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಅಥಣಿ: ಯೋಗವು ನಮ್ಮ ಬದುಕಿನಲ್ಲಿ ಹೊಸ ಆಯಾಮವನ್ನು ತಂದುಕೊಡುವುದರ ಜೊತೆಗೆ ರೋಗಮುಕ್ತ ಸಮಾಜ ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡುತ್ತದೆ. ಆದ್ದರಿಂದ ಯೋಗವನ್ನು ಕೇವಲ ವಿಶ್ವ ಯೋಗ ದಿನಾಚರಣೆಗೆ ಸೀಮಿತಗೊಳಿಸದೆ, ವರ್ಷದ ಎಲ್ಲಾ ದಿನಗಳಲ್ಲೂ ಜೀವನದ ಭಾಗವನ್ನಾಗಿಸಿಕೊಳ್ಳಬೇಕು ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.ಅವರು ಅಥಣಿ ಪಟ್ಟಣದ ಎಸ್.ಎಸ್.ಎಂ.ಎಸ್. ಕಾಲೇಜು ಆವರಣದಲ್ಲಿ ಹಮ್ಮಿಕೊಂಡಿದ್ದ 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಇಂದಿನ ಬದಲಾದ ಆಹಾರ ಪದ್ಧತಿ ಹಾಗೂ ಜೀವನಶೈಲಿಯಿಂದ ಜನರು ವಿವಿಧ ಆರೋಗ್ಯ ಸಮಸ್ಯೆಗಳಿಗೆ ತುತ್ತಾಗುತ್ತಿದ್ದಾರೆ. ಆರೋಗ್ಯಕರ ಮತ್ತು ರೋಗಮುಕ್ತ ಜೀವನ ನಡೆಸಬೇಕಾದರೆ ಪ್ರತಿದಿನ ಯೋಗಾಭ್ಯಾಸವನ್ನು ರೂಢಿಸಿಕೊಳ್ಳುವುದು ಅವಶ್ಯಕ ಎಂದು ಹೇಳಿದರು.ನಂತರ ಮಾತನಾಡಿದ ತಹಸೀಲ್ದಾರ್ ಸಿದ್ರಾಯ ಬೋಸಗಿ, ಯೋಗವು ಭಾರತೀಯ ಸಂಸ್ಕೃತಿಯ ಅಮೂಲ್ಯ ಕೊಡುಗೆಯಾಗಿದ್ದು, ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ ಎಂದರು.ಇಂದಿನ ಒತ್ತಡದ ಬದುಕಿನಲ್ಲಿ ಯೋಗಾಭ್ಯಾಸ ಅತ್ಯಂತ ಅಗತ್ಯವಾಗಿದ್ದು, ಪ್ರತಿಯೊಬ್ಬರೂ ಪ್ರತಿದಿನ ಸ್ವಲ್ಪ ಸಮಯವನ್ನು ಯೋಗಕ್ಕಾಗಿ ಮೀಸಲಿಡಬೇಕು. ಯೋಗದಿಂದ ದೇಹದ ರೋಗನಿರೋಧಕ ಶಕ್ತಿ…
ಕರ್ನಾಟಕ ಮಾಹಿತಿ ಆಯೋಗದ ಬೆಳಗಾವಿ ಪೀಠದ ರಾಜ್ಯ ಮಾಹಿತಿ ಆಯುಕ್ತರಾದ ಪ್ರಕಾಶ ನಾರಾಯಣ ಚನ್ನಾಳ ಮಾಹಿತಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪ್ರಜಾಪ್ರಭುತ್ವ ವ್ಯವಸ್ಥೆಯ ಭದ್ರ ಬುನಾದಿಯಾಗಿರುವ ಮಾಹಿತಿ ಹಕ್ಕು ಕಾಯ್ದೆಯಡಿ ಆಯೋಗದ ಬೆಳಗಾವಿ ಪೀಠದಲ್ಲಿ ನಿತ್ಯ ಸುಮಾರು ೬೦-೧೦೦ ಅರ್ಜಿಗಳ ವಿಚಾರಣೆ ಆಫ್ ಲೈನ್ ಹಾಗೂ ಆನ್ ಲೈನ್ ನಲ್ಲಿ ನಡೆಯುತ್ತಿವೆ ಎಂದು ಕರ್ನಾಟಕ ಮಾಹಿತಿ ಆಯೋಗದ ಬೆಳಗಾವಿ ಪೀಠದ ರಾಜ್ಯ ಮಾಹಿತಿ ಆಯುಕ್ತ ಪ್ರಕಾಶ ನಾರಾಯಣ ಚನ್ನಾಳ ತಿಳಿಸಿದ್ದಾರೆ.ಮಾಹಿತಿ ಹಕ್ಕು ಅಧಿನಿಯಮ ಮಾಹಿತಿಯನ್ನು ಸಾಮಾನ್ಯ ಜನರಿಗೆ ನೀಡದಿರುವುದು. ವಿಚಾರಣೆಗೆ ಗೈರು ಹಾಜರಾಗಿರುವುದು ಹಾಗೂ ಆಯೋಗದ ನೋಟಿಸ್ ಗಳಿಗೆ ಸ್ಪಂದಿಸದಿರುವ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಶಿಸ್ತು ಕ್ರಮ ಜರುಗಿಸಲಾಗುವುದು. ವಿಚಾರಣೆ ಸಮಿತಿಯ ಶಿಫಾರಸ್ಸಿನನ್ವಯ ೨೫ ಸಾವಿರ ರೂ. ವರೆಗೆ ದಂಡ ಮತ್ತು ಅರ್ಜಿದಾರರಿಗೆ ಪರಿಹಾರದ ಆದೇಶ ನೀಡಲಾಗುತ್ತಿದೆ ಎಂದವರು ತಿಳಿಸಿದ್ದಾರೆ. ಸ್ವತಂತ್ರ ಭಾರತದಲ್ಲಿ ಸಾಮಾನ್ಯ ಜನರಿಗೆ ಸರ್ಕಾರದ ಮಾಹಿತಿ ಸುಲಭವಾಗಿ ತಲುಪಬೇಕೆಂಬ ಉದ್ದೇಶ ಹೊಂದಿರುವ ಅತ್ಯಂತ ಕ್ರಾಂತಿಕಾರಕ ಕಾಯ್ದೆ ಇದಾಗಿದೆ ಎಂದು…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕಾರಾಗೃಹವು ಕೇವಲ ಬಂದಿಗಳ ಕೇಂದ್ರವಲ್ಲ, ಇದೊಂದು ಸುಧಾರಣಾ ಕೇಂದ್ರವಾಗಿದೆ ಎಂದು ಕಾರಾಗೃಹದ ಅಧೀಕ್ಷಕರಾದ ಮಲ್ಲಿಕಾರ್ಜುನ ಎಸ್. ಮಾಳಿ ಅವರು ಹೇಳಿದರು.ಅವರು ನಗರದ ಕೇಂದ್ರ ಕಾರಾಗೃಹದಲ್ಲಿ ಆಯೋಜಿಸಲಾಗಿದ್ದ ಅಂತರಾಷ್ಟ್ರೀಯ ಯೋಗ ದಿನಾಚಾರಣೆಯ ಅಂಗವಾಗಿ ಯೋಗ ತರಬೇತಿ ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದರು.ಬಂದಿಗಳಲ್ಲಿ ಪರಿವರ್ತನೆ ತರುವ ಪರಿವರ್ತನಾ ನಿಲಯವೂ ಆಗಿದೆ. ದೈನಂದಿನ ಯೋಗಾಭ್ಯಾಸವು ಬಂದಿಗಳ ಪುನರ್ವಸತಿ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಅತ್ಯಂತ ಸಹಕಾರಿಯಾಗಿದ್ದು, ಪ್ರತಿಯೊಬ್ಬರೂ ನಿಯಮಿತವಾಗಿ ಯೋಗಾಭ್ಯಾಸವನ್ನು ರೂಢಿಸಿಕೊಳ್ಳಬೇಕು. ಮುಂಬರುವ ದಿನಗಳಲ್ಲಿ ಕಾರಾಗೃಹದಲ್ಲಿ ನಿರಂತರವಾಗಿ ಯೋಗಾಭ್ಯಾಸ ಕಾರ್ಯಕ್ರಮಗಳು ಹಮ್ಮಿಕೊಳ್ಳಲಾಗುವುದು. ಕಾರಾಗೃಹದ ಬಂದಿಗಳನ್ನು ಉತ್ತಮ ನಾಗರೀಕರಾಗಿ ಸಮಾಜದ ಮುಖ್ಯ ವಾಹಿನಿಗೆ ಕಳುಹಿಸಲು ಶ್ರಮಿಸುವುದಾಗಿ ಹೇಳಿದರು.ಆರ್ಟ ಆಪ್ ಲಿವಿಂಗ್ ಶ್ರೀ ಬಿ.ಎಂ. ಪಾಟೀಲ ಗುರೂಜಿ ಮಾತನಾಡಿ, ಯೋಗವು ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಗೆ ಸಹಕಾರಿಯಾಗುವುದರ ಜೊತೆಗೆ ಒತ್ತಡ ನಿವಾರಣೆ, ಏಕಾಗ್ರತೆ ಮತ್ತು ಆತ್ಮವಿಶ್ವಾಸ ಹೆಚ್ಚಿಸಲು ನೆರವಾಗುತ್ತದೆ ಎಂದು ಹೇಳಿದರು.ಶಿಕ್ಷಕ ಡಿ.ಎಸ್.ದೀಕ್ಷಿತ ನಿರೂಪಿಸಿದರು. ಸಹಾಯಕ ಅಧಿಕ್ಷಕರಾದ ಅಭಿಜಿತ್ ಜಾಯಕ್ಕನವರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಸಿಂದಗಿ ಮತ್ತು ಆಲಮೇಲ ತಾಲೂಕುಗಳ ಕುಡಿಯುವ ನೀರಿನ ಪ್ರಗತಿ ಪರಿಶೀಲನಾ ಸಭೆಯಲ್ಲಿ ರಿಷಿ ಆನಂದ ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಗ್ರಾಮೀಣ ಪ್ರದೇಶಗಳ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಶುದ್ಧ ಕುಡಿಯುವ ನೀರಿನ ನಿರಂತರ ಪೂರೈಕೆಗೆ ಅಗತ್ಯ ಮುಂಜಾಗ್ರತೆ ವಹಿಸಬೇಕು. ಎಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರು ಅಧಿಕಾರಿಗಳಿಗೆ ಸೂಚಿಸಿದರು.ಸಿಂದಗಿ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಸೋಮವಾರ ಸಿಂದಗಿ ಮತ್ತು ಆಲಮೇಲ ತಾಲೂಕುಗಳ ಎಲ್ಲಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳೊಂದಿಗೆ ನಡೆದ ಕುಡಿಯುವ ನೀರಿನ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಸಭೆಯಲ್ಲಿ ಸಿಂದಗಿ ಹಾಗೂ ಆಲಮೇಲ ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಕುಡಿಯುವ ನೀರಿನ ಜಲಮೂಲಗಳು, ನೀರಿನ ಲಭ್ಯತೆ ಹಾಗೂ ಪ್ರಸ್ತುತ ಸ್ಥಿತಿ-ಗತಿ ಕುರಿತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ನೀರು ಪ್ರತಿಯೊಂದು ಜೀವಿಗೂ ಮೂಲಭೂತ ಅವಶ್ಯಕತೆಯಾಗಿದ್ದು, ಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಕೆಯಲ್ಲಿ ಯಾವುದೇ ರೀತಿಯ…
ಕಾರ್ಯಪಾಲಕ ಇಂಜಿನಿಯರ್ ರಂಗಯ್ಯ ಕಿಡಿಗೇಡಿಗಳಿಗೆ ಎಚ್ಚರಿಕೆ ಉದಯರಶ್ಮಿ ದಿನಪತ್ರಿಕೆ ಎಚ್ ಡಿ ಕೋಟೆ: ತಾಲೂಕಿನ ಬೀಚನಹಳ್ಳಿ ಗ್ರಾಮದಲ್ಲಿರುವ ಕಬಿನಿ ಜಲಾಶಯದ ಹಿನ್ನೀರಿಗೆ ಮಾನವ ಮಲ ಮತ್ತು ತ್ಯಾಜ್ಯ ನೀರು ಬಿಟ್ಟಿರುವ ಬಗ್ಗೆ ಅಂತರಸಂತೆ ಪೊಲೀಸ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಕಿಡಿಗೇಡಿಗಳ ವಿರುದ್ಧ ಸೂಕ್ತ ಕ್ರಮ ಜರಗಿಸುವಂತೆ ಒತ್ತಾಯ ಮಾಡಲಾಗಿದೆ ಎಂದು ಕಬಿನಿ ಜಲಾಶಯ ಉಪವಿಭಾಗದ ಕಾರ್ಯಪಾಲಕ ಇಂಜನಿಯರ್ ರಂಗಯ್ಯ ಹೇಳಿದರು.ಬೀಚನಹಳ್ಳಿ ಗ್ರಾ.ಪಂ. ವ್ಯಾಪ್ತಿಯ ಕಬಿನಿ ಹಿನ್ನೀರಿನಲ್ಲಿ ತ್ಯಾಜ್ಯ ಸುರಿದಿದ್ದ ಸ್ಥಳ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ರಂಗಯ್ಯ ಅವರು, ಮಾನವ ತ್ಯಾಜ್ಯ ಮತ್ತು ಇತರೆ ತ್ಯಾಜ್ಯವನ್ನ ಕಬಿನಿ ಹಿನ್ನೀರಿಗೆ ಸುರಿದಿರುವುದು ಸ್ಥಳ ಪರಿಶೀಲನೆ ವೇಳೆ ತಿಳಿದುಬಂದಿದೆ. ಕಬಿನಿ ಹಿನ್ನೀರಿಗೆ ತ್ಯಾಜ್ಯ ಸುರಿಯುವುದು, ನೀರು ಕಲುಷಿತಗೊಳಿಸುವುದು ಅಕ್ಷ್ಯಮ್ಯ ಅಪರಾಧ. ಇದೊಂದು ಗಂಭೀರ ಪ್ರಕರಣವಾಗಿದ್ದು, ಈ ಸಂಬಂಧ ಪೊಲೀಸ್ ಠಾಣೆ ಜೊತೆಗೆ ಪರಿಸರ ಇಲಾಖೆಗೆ ಪತ್ರ ಬರೆಯಲಾಗಿದ್ದು, ಶೀಘ್ರವೇ ಕಿಡಿಗೇಡಿಗಳ ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ. ಹೋಂ ಸ್ಟೇ ಮತ್ತು…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಕಲಚೇತನರ ಹಕ್ಕುಗಳ ಅಧಿನಿಯಮ–೨೦೧೬ರ ಕಲಂ ೭೨ರ ಅನ್ವಯ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ ಸಮಿತಿ ಸಭೆಯನ್ನು ಜೂನ್ ೨೪ಕ್ಕೆ ಮುಂದೂಡಲಾಗಿದೆ.ಈ ಮೊದಲು ಜೂನ್ ೨೩ರಂದು ನಿಗದಿಯಾಗಿದ್ದ ಸಭೆಯು, ಇದೀಗ ಜೂನ್ ೨೪ರಂದು ಬೆಳಿಗ್ಗೆ ೧೧:೩೦ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜರುಗಲಿದೆ.ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸ್ವಯಂ ಸೇವಾ ಸಂಸ್ಥೆಗಳ ಮುಖ್ಯಸ್ಥರು ಹಾಗೂ ವಿಕಲಚೇತನರು ಈ ಸಭೆಗ ಹಾಜರಾಗುವಂತೆಯೂ ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ ೦೮೩೫೨-೭೯೬೦೬೦ ಸಂಪರ್ಕಿಸುವಂತೆಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಮನುಷ್ಯನ ಪ್ರತಿದಿನದ ಒತ್ತಡದ ಬದುಕಿಗೆ ಯೋಗ ಅವಶ್ಯಕ ಪ್ರತಿಯೊಬ್ಬರು ಯೋಗ ಅಭ್ಯಾಸವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶ್ರೀ ಬನಶಂಕರಿ ಲಿಂಗಾಯತ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆ (ರಿ), ಶ್ರೀ ಬನಶಂಕರಿ ಸಿ.ಬಿ.ಎಸ್.ಸಿ ಸ್ಕೂಲನ ಕಾರ್ಯದರ್ಶಿ ಕುಮಾರಿ ಎಸ್ ಎಸ್ ಶೇಗುಣಸಿ ಹೇಳಿದರು.ತಾಲೂಕಿನ ಸಾವಳಗಿಯ ಶಾಲಾ ಆವರಣದಲ್ಲಿ ನಡೆದ ಯೋಗ ದಿನಾಚರಣೆಯ ಪ್ರಯುಕ್ತ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಮನಸ್ಸಿನ ತಳಮಳ ಅತಿಯಾದ ಕೋಪ ಗ್ಯಾಸ್ಟ್ರಿಕ್ ಅಲರ್ಜಿ ಅಂತಹ ಕಾಯಿಲೆಗಳಿಂದ ಮುಕ್ತಿಯಾಗಿ ಜೀವನ ನಡೆಸಲು ಯೋಗ ಒಂದು ಸರಳ ವಿಧಾನ. ನಿತ್ಯ ಜೀವನದಲ್ಲಿ ನಾವು ಯೋಗ ಅಳವಡಿಸಿಕೊಳ್ಳುವ ಮೂಲಕ ಸುಂದರವಾಗಿ ಜೀವನ ಸಾಗಿಸಬಹುದಾಗಿದೆ ಎಂದರು.ಇದೇ ಸಂದರ್ಭದಲ್ಲಿ ಶಾಲೆಯ ಎಲ್ಲ ಸಿಬ್ಬಂದಿ ವರ್ಗದವರು, ಹಾಗೂ ಮಕ್ಕಳು ಸೇರಿದಂತೆ ಎಲ್ಲರೂ ಯೋಗಾಸನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಮಾದಕ ವ್ಯಸನಮುಕ್ತ ಸಮಾಜದ ನಿರ್ಮಾಣ ನಮ್ಮೇಲ್ಲರ ಜವಾಬ್ದಾರಿಯಾಗಿದೆ ಎಂದು ಪಿಎಸ್‌ಐ ಸಚೀನ ಆಲಮೇಲಕರ ಹೇಳಿದರು.ಪಟ್ಟಣದ ಬಿಎಲ್‌ಡಿಇ ಸಂಸ್ಥೆಯ ಎ.ಬಿ.ಸಾಲಕ್ಕಿ ಪದವಿಪೂರ್ವ ಕಾಲೇಜಿನಲ್ಲಿ ಸೋಮವಾರ ಮಾದಕ ದ್ರವ್ಯ ದುರ್ಬಳಕೆ ಮತ್ತು ಅಕ್ರಮ ಸಾಗಾಣಿಕೆ ವಿರೋಧಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.ಇಂದಿನ ಯುವಜನತೆ ತಾವು ಮಾದಕ ವಸ್ತುಗಳ ವ್ಯಸನಿಗಳಾಗಿ ಜೀವನ ಹಾಳು ಮಾಡಿಕೊಳ್ಳಬಾರದು. ಅದಕ್ಕಾಗಿ ಮಾದಕ ಪದಾರ್ಥಗಳ ಸೇವನೆಯ ಅಪಾಯಗಳ ಕುರಿತು ವಿಶೇಷ ಎಚ್ಚರಿಕೆ ವಹಿಸಿ ದೂರವಿರಬೇಕು. ಇಂದು ಮಾದಕ ಪದಾರ್ಥಗಳಾದ ಗಾಂಜಾ ಮಿಶ್ರಿತ ಮಾವಾ, ತಂಬಾಕು, ಗುಟುಕಾಗಳು ವ್ಯಕ್ತಿಯ ಮೆದುಳು ಮತ್ತು ನಡುವಳಿಕೆಯ ಮೇಲೆ ನೇರ ಪರಿಣಾಮ ಬೀರಿ ಅವನನ್ನು ಮಾನಸಿಕ ಅಸ್ವಸ್ಥನನ್ನಾಗಿ ಮಾಡುತ್ತವೆ. ಜೊತೆಗೆ ಕುಟುಂಬದ ಆರ್ಥಿಕ ನಷ್ಟಕ್ಕೆ ಕಾರಣವಾಗುತ್ತದೆ. ಆದ್ದರಿಂದ ಮನೆಯಲ್ಲಿ ತಂದೆ, ಸಹೋದರ ಯಾರೇ ಆಗಿರಲಿ ಅವರಿಗೆ ಮಾದಕ ಪದಾರ್ಥಗಳ ಬಳಕೆಯಿಂದಾಗುವ ಕೆಡುಕುಗಳ ಈ ಬಗ್ಗೆ ಮಾಹಿತಿ ನೀಡಿ ದೂರವಿರಿಸಲು ತಾವು ಪ್ರಯತ್ನಿಸಬೇಕು ಎಂದರು. ಇದೇ ಸಂದರ್ಭದಲ್ಲಿ ಮಾದಕ ದ್ರವ್ಯ ದುರ್ಬಳಕೆ ಮತ್ತು ಸಮಾಜದಲ್ಲಿ ಬಳಕೆಯಿಂದಾಗುವ…
ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಿ.ಎಲ್.ಡಿ.ಇ.ಸಂಸ್ಥೆಯ ಎಸ್.ಬಿ.ಕಲಾ ಹಾಗೂ ಕೆಸಿಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಐಕ್ಯೂಎಸಿ, ಐಐಸಿ, ಎನ್ ಎಸ್‌ಎಸ್ ಘಟಕದ ಸಂಯೋಜನೆಯಡಿಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.ಈ ಸಂದರ್ಭದಲ್ಲಿ ಉಷಾದೇವಿ ಹಿರೇಮಠ ಮಾತನಾಡಿ, ಯೋಗವು ಒಂದು ಸರ್ವ ಸಿದ್ದಿಸಾಧನವಾಗಿದೆ,ನಮ್ಮ ದೈಹಿಕ, ಮಾನಸಿಕ ಸದೃಡತೆಗೆ ಅಂತ್ಯಂತ ಅವಶ್ಯಕವಾಗಿದೆ. ಯೋಗವು ನಮ್ಮ ನಿತ್ಯದ ಬದುಕಿನಲ್ಲಿ ಸದಾ ಯೋಗಾಸನ ಮಾಡುವ ಮೂಲಕ ಉತ್ತಮ ಆರೋಗ್ಯವನ್ನು ಕಾಪಡಿಕೊಳ್ಳವಂತಾಗಬೇಕು ಎಂದು ಹೇಳಿದರು.ಈ ಸಂದರ್ಭದಲ್ಲಿ ದೈಹಿಕ ನಿರ್ದೇಶಕ ಎಸ್ ಕೆ ಪಾಟೀಲ್, ಡಾ.ಎಂ.ಬಿ.ಪಾಟೀಲ, ಎನ್‌ಎಸ್‌ಎಸ್ ಅಧಿಕಾರಿ ಪ್ರೊ.ಮಿಲನ್ ರಾಠೋಡ್, ಡಾ.ಕೆ.ಮಹೇಶಕುಮಾರ, ಎನ್ ಸಿಸಿ ಅಧಿಕಾರಿ ಡಾ.ರಾಮಚಂದ್ರ ನಾಯಕ ಮಹಾವಿದ್ಯಾಲಯದ ಇನ್ನಿತರ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಉದಯರಶ್ಮಿ ದಿನಪತ್ರಿಕೆ ಎಚ್ ಡಿ ಕೋಟೆ :ಬೂತ್ ಮಟ್ಟದಿಂದ ಪಕ್ಷವನ್ನು ಬಲಪಡಿಸಿ, ಮುಂಬರುವ ಸ್ಥಳೀಯ ಚುನಾವಣೆ ಹಾಗೂ 2028 ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತೇನೆ ಎಂದು ನೂತನ ಬಿಜೆಪಿ ಮಂಡಲ ತಾಲೂಕು ಅಧ್ಯಕ್ಷ ಟಿ ವೆಂಕಟೇಶ್ ತಿಳಿಸಿದರು.ಪಟ್ಟಣದ ಬಿಜೆಪಿ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಶಂಭೆಗೌಡರಿಂದ ಅಧಿಕಾರ ಸ್ವೀಕರಿಸಿ ಮಾತನಾಡಿದರು. ತಾಲ್ಲೂಕಿನಲ್ಲಿ ಭಾರತೀಯ ಜನತಾ ಪಕ್ಷವನ್ನು ಮತ್ತಷ್ಟು ಸದೃಢಗೊಳಿಸುವ ಉದ್ದೇಶದಿಂದ ಪಕ್ಷ ನನಗೆ ಅಧ್ಯಕ್ಷರ ಹುದ್ದೆ ನೀಡಿದೆ.ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಂಘಟನಾ ಕಾರ್ಯ ಮಾಡುತ್ತೇನೆ. ಕಾರ್ಯಕರ್ತರ ಸಮಸ್ಯೆಗಳಿಗೆ ಸ್ಪಂದಿಸಿ, ಗ್ರಾಮ ಮಟ್ಟದಿಂದಲೇ ಪಕ್ಷದ ಸಂಘಟನೆಯನ್ನು ಬಲಪಡಿಸುವ ಕೆಲಸಕ್ಕೆ ಆದ್ಯತೆ ನೀಡಲಾಗುವುದು. ಹಿರಿಯ ಮುಖಂಡರ ಮಾರ್ಗದರ್ಶನದೊಂದಿಗೆ ಪಕ್ಷವನ್ನು ಇನ್ನಷ್ಟು ಬಲಿಷ್ಠಗೊಳಿಸಲು ಪ್ರಯತ್ನಿಸಲಾಗುವುದು.ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ ತಾಲ್ಲೂಕಿನಲ್ಲಿ ದ್ವಿತೀಯ ಸ್ಥಾನ ಪಡೆದಿತ್ತು. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಯನ್ನು ವಿಧಾನಸೌಧಕ್ಕೆ ಕಳುಹಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು.ಜಿಲ್ಲಾ ಘಟಕದ…
