Author: editor.udayarashmi@gmail.com

’ಜಯ್ ನುಡಿ’ (ವ್ಯಕ್ತಿತ್ವ ವಿಕಸನ ಮಾಲಿಕೆ)- ಜಯಶ್ರೀ.ಜೆ. ಅಬ್ಬಿಗೇರಿ, ಇಂಗ್ಲೀಷ ಉಪನ್ಯಾಸಕರು, ಬೆಳಗಾವಿ ಎಲ್ಲರಿಗೂ ತಿಳಿದಂತೆ ಒಬ್ಬೊಬ್ಬರಿಗೆ ಒಂದು ತೆರನಾದ ಭಯವಿರುತ್ತೆ. ಕೆಲವರಿಗೆ ಎತ್ತರದ ಭಯ ಕೆಲವರಿಗೆ ನೀರಿನ ಭಯ. ವಿದ್ಯಾರ್ಥಿಗಳಲ್ಲಿ ಕಂಡು ಬರುವ ಸಾಮಾನ್ಯ ಭಯವೇ ಪರೀಕ್ಷೆ ಭಯ. ಇದನ್ನೇ ಎಕ್ಷಾಮ್ ಫೋಬಿಯಾ ಅಂತಾರೆ ಮನಶಾಸ್ತçಜ್ಞರು. ಭಯ ಅನ್ನುವದು ಮಾನಸಿಕ ಕಾಯಿಲೆ. ಅದು ನಮ್ಮ ಭ್ರಮೆ ವಾಸ್ತವ ಅಲ್ಲ. ಮನಸ್ಸು ಏನು ದೃಢವಾಗಿ ನಂಬುತ್ತೋ ಅದೇ ನಡೆಯುತ್ತೆ ಎನ್ನುವದು ಈಗಾಗಲೇ ಸಾಬೀತಾಗಿದೆ. ಅದಕ್ಕೆ ನೀವು ಪರೀಕ್ಷೆಯ ಬಗ್ಗೆ ಭಯ ಬಿಟ್ಟು ಉತ್ತಮ ಭಾವ ಹೊಂದಿ ನಾನು ಪರೀಕ್ಷೆಯನ್ನು ಚೆನ್ನಾಗಿ ಎದುರಿಸಬಲ್ಲೆ. ಹೆದರಲು ಅದೇನು ದೆವ್ವ ಭೂತ ಅಲ್ಲ ಎಂದು ನೀವು ಗಟ್ಟಿಯಾಗಿ ಅಂದುಕೊಂಡು ನೋಡಿ ಫಲಿತಾಂಶ ಹೇಗಿರುತ್ತೆ ಅಂತ !ನನ್ನ ಮಗ/ಳು ಚೆನ್ನಾಗಿಯೆ ಓದುತ್ತಾಳೆ, ಮನೆಯಲ್ಲಿ ಯಾವ ಪ್ರಶ್ನೆ ಕೇಳಿದರೂ ಟಕ್ ಅಂತ ಉತ್ತರಿಸುತ್ತಾನೆ/ಳೆ, ಆದರೆ ಪರೀಕ್ಷೆಯಲ್ಲಿ ಅದೇ ಪ್ರಶ್ನೆಗಳಿಗೆ ಉತ್ತರಿಸಿರಲ್ಲ ಏಕೆ ಹೀಗೆ? ಎಂಬುದು ಹಲವು ಪಾಲಕರ ಪ್ರಶ್ನೆ.…

Read More

ವಿಜಯಪುರ: ಮಲ್ಲಿಕಾರ್ಜುನ ತಂ. ಗೋಲಪ್ಪ ನಾವಿ ಇವರು ೨೨ ವರ್ಷಗಳ ಸುದೀರ್ಘ ದೇಶಸೇವೆ ಮಾಡಿ ಸೇನೆಯಿಂದ ನಿವೃತ್ತಿಗೊಂಡ ಪ್ರಯುಕ್ತ ಇವರನ್ನು ತಿಕೋಟಾ ತಾಲೂಕಿನ ತೊರವಿ ಗ್ರಾಮದಲ್ಲಿ ಭಾರತ ಸೇನಾ ಅಭಿಮಾನಿ ಬಳಗ ಹಾಗೂ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಸನ್ಮಾನ ಸ್ವೀಕರಿಸಿ ಮಲ್ಲಿಕಾರ್ಜುನ ನಾವಿ ಮಾತನಾಡಿ, ನನಗೆ ದೇಶ ಸೇವೆ ಮಾಡುವ ಸುವರ್ಣ ಅವಕಾಶ ದೊರಕಿರುವದು ನನ್ನ ಸೌಭಾಗ್ಯ. ನಾವು ೨೨ ವರ್ಷಗಳ ಕಾಲ ದೇಶ ಸೇವೆ ಮಾಡಿದ್ದು, ಇನ್ನಷ್ಟು ದಿನಗಳ ಕಾಲ ನಾನು ಸೇವೆ ಮಾಡಬೇಕೆಂಬ ಅಭಿಲಾಷೆಯನ್ನು ಹೊಂದಿದೆ. ದೇಶಸೇವೆ ಎಷ್ಟು ವರ್ಷ ಮಾಡಿದರೂ ಕಡಿಮೆ ಹಾಗೂ ಭಾರತ ದೇಶವು ವಿವಿಧೆಡೆಯಲ್ಲಿ ಏಕತೆಯನ್ನು ಕಂಡುಕೊಂಡಿರುವ ದೇಶ. ಇಲ್ಲಿ ಎಲ್ಲ ಧರ್ಮದ ಜನರು ಇದ್ದು, ಸೌಹಾರ್ದತೆಯಿಂದ ಇರುವದರಿಂದ ನಾವು ನಿರ್ಭಯವಾಗಿ ದೇಶ ಸೇವೆ ಸಲ್ಲಿಸಿದ ಹೆಮ್ಮೆ ನನಗೆ ತೃಪ್ತಿಕರ ತಂದಿದೆ. ಆದ್ದರಿಂದ ದೇಶದ ಪ್ರತಿಯೊಬ್ಬ ಪ್ರಜೆಯು ದೇಶ ಸೇವೆ ಮಾಡುವಂತಾಗಲಿ ಎಂದು ಹಾರೈಸಿದರು.ಇದರೊಂದಿಗೆ ತಮ್ಮ…

Read More

ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರಿಗೆ ಭಾರತೀಯ ಕಿಸಾನ ಸಂಘ ಮನವಿ ವಿಜಯಪುರ : ಭಾರತೀಯ ಕಿಸಾನ ಸಂಘ ಕರ್ನಾಟಕ ಉತ್ತರ ಪ್ರಾಂತ್ಯದ ವತಿಯಿಂದ ಜಿಲ್ಲೆಯ ಎಲ್ಲಾ ಕೆರೆ ತುಂಬುವುದು. ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆ 2-3 ಹಂತದ ಕಾಮಗಾರಿ ಟೆಂಡರ್ ಕರೆಯುವುದು ಹಾಗೂ ಜಿಲ್ಲೆಯ ಶಾಶ್ವತ ನೀರಾವರಿಗಾಗಿ ಆಲಮಟ್ಟಿ 524.256 ಮಿಟ್ಟರಿಗೆ ಎತ್ತರಿಸಲು ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರಿಗೆ ಮನವಿ ಸಲ್ಲಿಸಿದರು.ಈ ವೇಳೆ ಭಾರತೀಯ ಕಿಸಾನ್ ಸಂಘ ಕರ್ನಾಟಕ ಉತ್ತರ ಪ್ರಾಂತದ ಜಿಲ್ಲಾಧ್ಯಕ್ಷ ಮಲ್ಲನಗೌಡ ಮಹಾದೇವಪ್ಪಗೌಡ ಪಾಟೀಲ ಮಾತನಾಡಿ, ಪ್ರಸ್ತುತ ಸಾಲಿನಲ್ಲಿ ಮಳೆಯ ಅಭಾವದಿಂದ ಹಾಗೂ ಬರಗಾಲ ಭವಣೆಯಿಂದ ಜಿಲ್ಲೆಯ ರೈತರು ತತ್ತರಿಸಿದ್ದು ಜಾನುವಾರಗಳಿಗೆ ಮೇವಿನ ಕೊರತೆ ಜಿಲ್ಲೆಯ ಜನರು ಗುಳ್ಳೆ ಹೋಗುತ್ತಿದ್ದಾರೆ. ಹಾಗೂ ಬಹು ವಾರ್ಷಿಕ ತೋಟಗಾರಿಕೆ ಬೆಳೆಗಳು ನೀರಿನ ಅಭಾವದಿಂದ ನಶಿಸುತ್ತೇವೆ. ಇದರಿಂದಾಗಿ ರೈತರಿಗೆ ದಿಕ್ಕೆ ತೋಚದಂತಾಗಿದೆ ಜಿಲ್ಲೆಯಲ್ಲಿ ದೊಡ್ಡ ಅಣೆಕಟ್ಟುಗಳಿದ್ದರೂ ಸಮಯಕ್ಕೆ ಸರಿಯಾಗಿ ಕೆರೆಗಳಿಗೆ ನೀರು ತುಂಬದಿರುವುದರಿಂದ ನೀರಿನ ಅಭಾವ ಉಂಟಾಗುತ್ತಿದೆ ಸರ್ಕಾರ ಕೂಡಲೇ ರೈತರ ಸಂಕಷ್ಟಕ್ಕೆ…

Read More

ವಿಜಯಪುರ: ಮುಂಬರುವ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಸ್ಥಾಪಿಸಲಾಗಿರುವ ಎಲ್ಲ ಮತಗಟ್ಟೆಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳ ಕುರಿತು ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಚುನಾವಣೆಗೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದರು.ಬುಧವಾರ ಜಿಲ್ಲಾಧಿಕಾರಿಗಳ ಕೇಸ್ವಾನ್ ಸಭಾಂಗಣದಲ್ಲಿ ಮುಂಬರುವ ಲೋಕಸಭಾ ಚುನಾವಣೆ-೨೦೨೪ಕ್ಕೆ ಸಂಬಂಧಿಸಿದ ಪೂರ್ವಭಾವಿ ಸಿದ್ಧತೆಗಳ ಕುರಿತು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜಿಲ್ಲೆಯಲ್ಲಿ ಸ್ಥಾಪಿಸಲಾಗಿರುವ ಮತಗಟ್ಟೆಗಳಲ್ಲಿ ಸೂಕ್ತ ಗಾಳಿ-ಬೆಳಕಿನ ವ್ಯವಸ್ಥೆ, ವಿಕಲಚೇತನ ಮತದಾರರಿಗೆ ರ‍್ಯಾಂಪ್ ವ್ಯವಸ್ಥೆ, ಬೇಸಿಗೆ ಇರುವುದರಿಂದ ಮತದಾರರಿಗೆ ಸೂಕ್ತ ಕುಡಿಯುವ ನೀರಿನ ವ್ಯವಸ್ಥೆ, ಮತಗಟ್ಟೆ ಕಟ್ಟಡ ಸ್ಥಿತಿಗತಿ, ವಿದ್ಯುತ್ ವ್ಯವಸ್ಥೆ ಸೇರಿದಂತೆ ಎಲ್ಲ ಮೂಲಭೂತ ಸೌಕರ್ಯಗಳು ಇರುವ ಕುರಿತು ಸಂಬಂಧಿಸಿದ ಅಧಿಕಾರಿಗಳು ಖಚಿತಪಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.ಚುನಾವಣೆಗೆ ಸಂಬಂಧಿಸಿದ ಮತಗಟ್ಟೆ ಅಧಿಕಾರಿಗಳು ಮತಗಟ್ಟೆಗಳಿಗೆ ಭೇಟಿ ನೀಡಿ ಕೂಲಂಕೂಷವಾಗಿ ಪರಿಶೀಲನೆ ನಡೆಸಿ ವರದಿ ನೀಡಬೇಕು. ಚುನಾವಣೆಗೆ ಸಂಬಂಧಿಸಿದ ಅಧಿಕಾರಿಗಳು ಜಿಲ್ಲೆಯ ಮತಗಟ್ಟೆಗಳಿಗೆ ಭೇಟಿ ನೀಡಿ ಪೂರ್ವಭಾವಿಯಾಗಿ ಪರಿಶೀಲನೆ ನಡೆಸಬೇಕು. ಮತಗಟ್ಟೆಗಳಲ್ಲಿ ಯಾವುದಾದರೂ ಸಣ್ಣ…

Read More

ವಿಜಯಪುರ: ಜನ ಜಾನುವಾರಗಳಿಗೆ ಕುಡಿಯುವ ನೀರಿನ ತೊಂದರೆಯುಂಟಾಗದಂತೆ ಅಧಿಕಾರಿಗಳು ಜಾಗೃತಿ ವಹಿಸಬೇಕು. ಈಗಾಗಲೇ ಜಿಲ್ಲೆಯ ಕೆರೆಗಳನ್ನು ತುಂಬಿಸಲು ಕಾಲುವೆ ಜಾಲದ ಮೂಲಕ ನೀರನ್ನು ಹರಿಸಲಾಗುತ್ತಿದ್ದು, ಕಟ್ಟುನಿಟ್ಟಾಗಿ ನಿಗಾವಹಿಸಿ ಕೆರೆಗಳನ್ನು ತುಂಬಿಸುವ ಮೂಲಕ ಕುಡಿಯುವ ನೀರಿನ ಸಮರ್ಪಕ ಬಳಕೆಗೆ ಎಲ್ಲಾ ಅಧಿಕಾರಿಗಳು ಕಾರ್ಯನ್ಮೋಖರಾಗಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು.ಬುಧವಾರ ಜಿಲ್ಲಾಧಿಕಾರಿಗಳ ಕೆಸ್ವಾನ ಸಭಾಂಗಣದಲ್ಲಿ ನಡೆದ ಬರ ಪರಿಸ್ಥಿತಿ ನಿರ್ವಹಣೆ ಕುರಿತು ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜಿಲ್ಲೆಯಲ್ಲಿ ಈಗಾಗಲೇ ನೀರಿನ ಅವಶ್ಯಕತೆ ಇರುವ ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕ ನೀರನ್ನು ಒದಗಿಸಲಾಗುತ್ತಿದೆ. ಶಾಲೆ, ಆಸ್ಪತ್ರೆ ಸೇರಿದಂತೆ ಅಗತ್ಯವಿರುವ ಕಡೆ ಆದ್ಯತೆ ಮೇಲೆ ನೀರು ಪೂರೈಸಲು ಕ್ರಮ ವಹಿಸುವಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ಕುಡಿಯುವ ನೀರಿಗಾಗಿ ಖಾಸಗಿ ಬೊರವೆಲ್‌ಗಳು, ತೆರೆದ ಬಾವಿಗಳನ್ನು ಗುರುತಿಸಿ ನೀರಿನ ಲಭ್ಯತೆ ಪರಿಶೀಲಿಸಬೇಕು. ಕಾಲಕಾಲಕ್ಕೆ ಟಾಸ್ಕಪೋರ್ಸ್ ಸಮಿತಿ ಸಭೆ ನಡೆಸಿ ಕುಡಿಯುವ ನೀರಿನ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಟ್ಯಾಂಕರ್ ನೀರು ಅವಶ್ಯಕತೆವಿದ್ದ ಕಡೆ ಟಾಸ್ಕಪೋರ್ಸ್ ಸಮಿತಿ ಸಭೆಯಲ್ಲಿ…

Read More

ವಿಜಯಪುರ: ನಗರದ ವಿಮಾನ ನಿಲ್ಧಾಣ ನಿರ್ಮಾಣ ಕಾಮಗಾರಿಗಳ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿಗಳು, ಮಧಭಾವಿ, ಅಲಿಯಾಬಾದ ಹಾಗೂ ಬುರಣಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿ ಪಡಿಸಲು ಅಗತ್ಯ ಕ್ರಮ ವಹಿಸುವುದಾಗಿ ಜಿಲ್ಲಾಧಿಕಾರಿ ಟಿ.ಬೂಬಾಲನ್ ಹೇಳಿದರು.ಇಂದು ಬುರಣಾಪುರ ಹತ್ತಿರ ವಿಮಾನ ನಿಲ್ಧಾಣಕ್ಕೆ ಭೇಟಿ ನೀಡಿ ಈ ವ್ಯಾಪ್ತಿಯಲ್ಲಿ ಬರುವ ಸಾರ್ವಜನಿಕರೊಂದಿಗೆ ಪರಿಸರ ಅಭಿಯಾನ ಜಾಗೃತಿ ಕುರಿತು ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ತಾವು ಮಂಡಿಸಿರುವ ತಮ್ಮ ಅನಿಸಿಕೆಗಳನ್ನು ದೃಡೀಕರಿಸಿ ಭಾರತದ ಸರ್ಕಾರದ ಅರಣ್ಯ ಮಂತ್ರಾಲಯಕ್ಕೆ ವರದಿ ಸಲ್ಲಿಸಲಾಗುವುದು ಎಂದು ಅವರು ತಿಳಿಸಿದರು.ಈ ಸಂದರ್ಭದಲ್ಲಿ ಬೆಳಗಾವಿ ವಿಭಾಗದ ಹಿರಿಯ ಪರಿಸರ ಅಭಿಯಂತರರಾದ ಗೋಪಾಲಕೃಷ್ಣ ಸಣ್ಣತಂಗಿ, ಜಿಲ್ಲಾ ಪರಿಸರ ಅಧಿಕಾರಿಗಳಾಸ ಎಮ್.ಎ ಮಣಿಯಾರ, ಎಕ್ಸಿಕ್ಯೂಟಿವ ಇಂಜಿನಿಯರ್ ರಾಜು ಮಜುಮದಾರ, ಸಹಾಯರ ಅಭಿಯಂತರರಾದ ಎಮ್.ಎಮ್ ಪಾಟೀಲ, ರವಿ ಪಾಟೀಲ ಹಾಗೂ ಇತರರು ಉಪಸ್ಥಿತರಿದ್ದರು.

Read More

ಪಂಚಮಿತ್ರ ಪೋರ್ಟಲ್ ಮತ್ತು ಪಂಚಮಿತ್ರ ವ್ಯಾಟ್ಸಪ್ ಚಾಟ್ ಲೋಕಾರ್ಪಣೆಗೊಳಿಸಿದ ಜಿ.ಪಂ.ಸಿಇಓ ರಿಷಿ ಆನಂದ ವಿಜಯಪುರ: ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯಡಿ ಬರುವ ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳ ವಿವಿಧ ಮಾಹಿತಿ ಮತ್ತು ವಿವರಗಳನ್ನು ಪಡೆಯುವ ಪಂಚಮಿತ್ರ ಪೋರ್ಟಲ್ ಮತ್ತು ವ್ಯಾಟ್ಸಪ್ ಚಾಟ್‌ಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಲೋಕಾರ್ಪಣೆಗೊಳಿಸಿದರು.ಸಾರ್ವಜನಿಕರಿಗೆ ಅನುಕೂಲವಾಗುವಂತೆ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯಡಿ ಬರುವ ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳ ವಿವಿಧ ಮಾಹಿತಿ ಮತ್ತು ವಿವರಗಳನ್ನು ಪಡೆಯಲು, ಗ್ರಾಮ ಪಂಚಾಯತಿಗಳಿಗೆ ಸಂಬಂಧಿಸಿದ ಸೇವೆಗಳಿಗೆ ಆನ್-ಲೈನ್ ನಲ್ಲಿ ಅರ್ಜಿ ಸಲ್ಲಿಸಲು, ಸಲ್ಲಿಸಿದ ಅರ್ಜಿಗಳ ಸ್ಥಿತಿಗತಿಯನ್ನು ಪರಿಶೀಲಿಸಲು ಹಾಗೂ ಗ್ರಾಮ ಪಂಚಾಯತಿಗಳಿಗೆ ಸಂಬಂಧಿಸಿದ ಕುಂದುಕೊರತೆಗಳನ್ನು ದಾಖಲಿಸಲು, “ಪಂಚಮಿತ್ರ” ಎಂಬ ಒಂದೇ ವೇದಿಕೆಯನ್ನು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಅಭಿವೃದ್ದಿ ಪಡಿಸಿ, ಅನುಷ್ಠಾನಗೊಳಿಸಲಾಗಿದೆ.ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿಕೊಡುವ ನಿಟ್ಟಿನಲ್ಲಿ ದೇಶದಲ್ಲೇ ಪ್ರಥಮ ಬಾರಿಗೆ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಅಭಿವೃದ್ದಿ ಪಡಿಸಿದ ಪಂಚಮಿತ್ರ ಪೋರ್ಟಲ್…

Read More

ಬಸವನಬಾಗೇವಾಡಿ: ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷದಿಂದ ಸ್ಪರ್ಧೆ ಮಾಡುವ ಅಭ್ಯರ್ಥಿಯ ಗೆಲುವಿಗೆ ರೂಪರೇಷೆಗಳನ್ನು ರೂಪಿಸುವ ಕುರಿತಂತೆ ಮಾ. ೭ ರಂದು ಮುದ್ದೇಬಿಹಾಳ ರಸ್ತೆಯಲ್ಲಿರುವ ಪಂಚಾಚಾರ್ಯ ಜನಕಲ್ಯಾಣ ಮಂಟಪದಲ್ಲಿ ಸಂಜೆ 5 ಗಂಟೆಗೆ ಬಸವನಬಾಗೇವಾಡಿ ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಮುಖಂಡರ, ಜನಪ್ರತಿನಿಧಿಗಳ, ಕಾರ್ಯಕರ್ತರ ಪೂರ್ವಭಾವಿ ಸಭೆಯನ್ನು ಸಚಿವ ಶಿವಾನಂದ ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಕರೆಯಲಾಗಿದೆ ಎಂದು ಕಾಂಗ್ರೆಸ್ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಈರಣ್ಣ ಪಟ್ಟಣಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಹಾರಿವಾಳ ಹೇಳಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಸವನಬಾಗೇವಾಡಿ ಮತಕ್ಷೇತ್ರದಲ್ಲಿ ಸಚಿವ ಶಿವಾನಂದ ಪಾಟೀಲರು ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಕಾಂಗ್ರೆಸ್ ಪಕ್ಷ ಆಡಳಿತ ಬಂದ ಮೇಲೆ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಜಾರಿಯಾಗುವ ಮೂಲಕ ಜನರಿಗೆ ಸಾಕಷ್ಟು ಸದುಪಯೋಗವಾಗುತ್ತಿದೆ. ಅನೇಕ ಅಭಿವೃದ್ಧಿ ಕಾರ್ಯಗಳನ್ನು ಸರ್ಕಾರ ಹಮ್ಮಿಕೊಳ್ಳುತ್ತಿದೆ. ನಮ್ಮ ಸರ್ಕಾರದ ಸಾಧನೆಗಳನ್ನು ಜನರ ಮುಂದಿಟ್ಟುಕೊಂಡು ಲೋಕಸಭೆ ಚುನಾವಣೆಯಲ್ಲಿ ಪಕ್ಷದಿಂದ ಸ್ಪರ್ಧೆ ಮಾಡುವ ಅಭ್ಯರ್ಥಿಯ ಗೆಲುವಿಗೆ ನಾವೆಲ್ಲರೂ…

Read More

ಬಸವನಬಾಗೇವಾಡಿ: ಪುರಸಭೆಯಿಂದ ಇಂಗಳೇಶ್ವರ ರಸ್ತೆಯಲ್ಲಿ ನಿರ್ಮಾಣ ಮಾಡಿರುವ ಜಿ ಪ್ಲಸ್-೧ ಮಾದರಿ ಮನೆಗಳನ್ನು ಫಲಾನುಭವಿಗಳಿಗೆ ವಿತರಿಸುವ ಕಾರ್ಯ ಶೀಘ್ರದಲ್ಲಿ ನಡೆಯಲಿದೆ. ಫಲಾನುಭವಿಗಳಿಗೆ ವಿವಿಧ ಬ್ಯಾಂಕುಗಳು ಗೃಹಸಾಲ ಒದಗಿಸಲು ಮುಂದೆ ಬಂದಿವೆ. ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಪುರಸಭೆ ಮುಖ್ಯಾಧಿಕಾರಿ ಎಚ್.ಎಸ್.ಚಿತ್ತರಗಿ ಹೇಳಿದರು.ಪಟ್ಟಣದ ಪುರಸಭೆ ಸಭಾಭವನದಲ್ಲಿ ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತ, ಜಿಲ್ಲಾಡಳಿತ, ಪುರಸಭೆ ಸಹಯೋಗದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ(ನಗರ) ಜಿ ಪ್ಲಸ್-೧ ಹಾಗೂ ರಾಜ್ಯ ಪುರಸ್ಕ್ರತ ವಸತಿ ಯೋಜನೆಗಳ ಸಮನ್ವತೆಯೊಂದಿಗೆ ವಸತಿ ಯೋಜನೆಗಳ ಅನುಷ್ಠಾನದಡಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಫಲಾನುಭವಿಗಳಿಗೆ ಗೃಹಸಾಲ ಒದಗಿಸಲು ಬ್ಯಾಂಕುಗಳೊಂದಿಗೆ ಮೇಳದಲ್ಲಿ ಮಾತನಾಡಿದ ಅವರು, ಈಗಾಗಲೇ ಪುರಸಭೆಯಿಂದ ಜಿ ಪ್ಲಸ್-೧ ಮಾದರಿಯಲ್ಲಿ ೫೦೦ ಮನೆಗಳ ನಿರ್ಮಾಣವಾಗಿವೆ. ಈ ಮನೆಗಳ ಫಲಾನುಭವಿಗಳಿಗೆ ತಾತ್ಕಾಲಿಕ ಹಕ್ಕು ಪತ್ರ ಈಗಾಗಲೇ ವಿತರಿಸಲಾಗಿದೆ. ಮುಂಬರುವ ದಿನಗಳಲ್ಲಿ ಖಾಯಂ ಹಕ್ಕು ಪತ್ರ ವಿತರಣೆ ಕಾರ್ಯಕ್ರಮ ನಡೆಯಲಿದೆ. ೫೦೦ ಫಲಾನುಭವಿಗಳಲ್ಲಿ ಈಗಾಗಲೇ ೧೪೭ ಫಲಾನುಭವಿಗಳು ಸಾಲ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಿದ್ದು ಇದರಲ್ಲಿ ೧೪೩ ಫಲಾನುಭವಿಗಳು ಸಾಲ…

Read More

ಮುದ್ದೇಬಿಹಾಳ: ಕುಂಟೋಜಿ ಸಂಸ್ಥಾನ ಹಿರೇಮಠದ ಡಾ.ಚನ್ನವೀರ ದೇವರ ಪಟ್ಟಾಧಿಕಾರ ಮಹೋತ್ಸವ ಕೊನೆಯ ದಿನವಾದ ಮಾ.೭ ರಂದು ಬೆಳಿಗ್ಗೆ ೭ ರಿಂದ ಪಟ್ಟಾಧಿಕಾರದ ವಿಧಿ ವಿಧಾನಗಳು ಜರುಗುವವು.ಶ್ರೀ ರಂಭಾಪುರಿ ಜಗದ್ಗುರುಗಳ ಸನ್ನಿಧಿಯಲ್ಲಿ ಆಗಮಿಸಿದ ಶಿವಾಚಾರ್ಯರ ಸಮ್ಮುಖದಲ್ಲಿ ಕಂಕಣಧಾರಣೆ, ಹರಿದ್ರಾಲೇಪನ ಮಂಗಲದ್ರವ್ಯಯುಕ್ತ ಮಹಾಮಸ್ತಾಕಾಭಿಷೇಕ, ತಿಲಕದಾರಣೆ, ಮಂಗಲಾಕ್ಷತೆಗಳಿಂದೊಡಗೂಡಿ ಆಶೀರ್ವಾದ. ನಿಡಗುಂದಿಯ ಪರಮತಪಸ್ವಿ ರುದ್ರಮುನಿ ಶಿವಾಚಾರ್ಯ ಮಹಾಸ್ವಾಮಿಗಳು ಡಾ.ಚನ್ನವೀರ ದೇವರಿಗೆ ಷಟಸ್ಥಲ ಬ್ರಹ್ಮೋಪದೇಶ ಮಾಡಿ ಶಂಕ, ಗಿಳಿಲು, ಭಸ್ಮ, ಪಟ್ಟಭಂದನ, ದಂಡ, ಕಮಂಡಲ, ಪಂಚಮುದ್ರಾ ಪ್ರಧಾನ ಮಾಡಿ ಗುರು ಚನ್ನವೀರ ಶಿವಾಚಾರ್ಯ ಮಹಾಸ್ವಾಮಿಗಳು ಎಂಬ ನೂತನ ನಾಮ ಅನುಗ್ರಹಿಸುವರು.ನಂತರ ಮಹೋತ್ಸವ ಹಾಗೂ ಧರ್ಮ ಸಂದೇಶ ಕಾರ್ಯಕ್ರಮ ಜರುಗುವದು.ಸಂಜೆ ಸಮಾರಂಭಕ್ಕೆ ಸೇವೆ ಸಲ್ಲಿಸಿದ ಮಹನೀಯರಿಗೆ ಗೌರವ ಸನ್ಮಾನ ಜರುಗುವುದು.

Read More