Author: editor.udayarashmi@gmail.com

ಮುದ್ದೇಬಿಹಾಳ: ಪಟ್ಟಣದ ಅಂಬೇಡ್ಕರ ವೃತ್ತದಲ್ಲಿ ವಿವಿಧ ದಲಿಪರ ಸಂಘಟನೆಗಳ ನೇತೃತ್ವದಲ್ಲಿ ನಿವೃತ್ತ ಐಎಎಸ್ ಅಧಿಕಾರಿ ಕೆ.ಶಿವರಾಂ ಅವರಿಗೆ ಶೃದ್ಧಾಂಜಲಿ ಸಲ್ಲಿಸಲಾಯಿತು. ಈ ವೇಳೆ ಡಿಎಸ್‌ಎಸ್ ಮುಖಂಡರಾದ ಹರೀಶ ನಾಟೆಕಾರ, ಬಸವರಾಜ ಸಿದ್ದಾಪೂರ, ಪರಶುರಾಮ ಮುರಾಳ, ಪ್ರಶಾಂತ ಕಾಳೆ, ಪ್ರಕಾಶ ಸರೂರ ಸೇರಿದಂತೆ ಮತ್ತೀತರರು ಇದ್ದರು.

Read More

ಮುದ್ದೇಬಿಹಾಳ: ಪಟ್ಟಣದ ಬಸವೇಶ್ವರ ವೃತ್ತದಲ್ಲಿ ನಿವೃತ್ತ ಐಎಎಸ್ ಅಧಿಕಾರಿ ಕೆ.ಶಿವರಾಂ ಅವರಿಗೆ ಶೃದ್ಧಾಂಜಲಿ ಸಲ್ಲಿಸಲಾಯಿತು. ಈ ವೇಳೆ ಎಪಿಎಂಸಿ ನಿದೇಶಕ ವಾಯ್.ಎಚ್.ವಿಜಯಕರ, ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಸ್.ಎಸ್.ಮಾಲಗತ್ತಿ, ಕಾಂಗ್ರೇಸ್ ಮುಖಂಡ ಸಿ.ಜಿ.ವಿಜಯಕರ, ಮಾಜಿ ಸೈನಿಕ ರೇವಣಪ್ಪ ಅಜಮನಿ, ಪ್ರಮುಖರಾದ ಶರಣು ಚಲವಾದಿ, ಪ್ರಶಾಂತ ಕಾಳೆ, ಅನೀಲ ಅಜಮನಿ ಸೇರಿದಂತೆ ವಿವಿಧಪರ ಸಂಘಟನೆಗಳ ಮುಖಂಡರು ಇದ್ದರು.

Read More

ವಿಜಯಪುರ: ಜಿಲ್ಲೆಯಲ್ಲಿ ಇಂದು ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯ ಕನ್ನಡ ಭಾಷಾ ಪರೀಕ್ಷೆಯಲ್ಲಿ ೨೭೪೬೧ ವಿದ್ಯಾರ್ಥಿಗಳು ನೊಂದಾಯಿಸಿಕೊಂಡಿದ್ದು, ೨೬೨೭೫ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ ೧೧೮೬ ವಿದ್ಯಾರ್ಥಿಗಳು ಪರೀಕ್ಷೆಗೆ ಗೈರ ಹಾಜರಾಗಿದ್ದರು. ಅದರಂತೆ ಅರೇಬಿಕ್ ಭಾಷಾ ಪರೀಕ್ಷೆಗೆ ಜಿಲ್ಲೆಯಲ್ಲಿ ೧೧೬ ವಿದ್ಯಾರ್ಥಿಗಳು ನೊಂದಾಯಿಸಿಕೊಂಡು ೧೧೬ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ.ಕೆ.ಹೊಸಮನಿ ಅವರು ತಿಳಿಸಿದ್ದಾರೆ.

Read More

ಯಲಗೂರ: ವಿಶಾಲ ಪಾರ್ಕಿಂಗ್ ವ್ಯವಸ್ಥೆ, ದೇವಸ್ಥಾನ ಪ್ರವೇಶಕ್ಕೆ ಮತ್ತೊಂದು ಮಾರ್ಗ, ಹಳೆ ಕಟ್ಟಡಗಳ ತೆರವು, ಯಾತ್ರಿ ನಿವಾಸ ಪೂರ್ಣ, ಹೀಗೆ ಹತ್ತು ಹಲವು ಅಭಿವೃದ್ಧಿ ಕಾರ್ಯಗಳಿಗೆ ಹನುಮ ನೆಲೆಸಿದ ಸುಕ್ಷೇತ್ರ ಯಲಗೂರ ಗ್ರಾಮದಲ್ಲಿ ಕಾಣುತ್ತೇವೆ. ಕಳೆದ ವರ್ಷ ದೇವಸ್ಥಾನದ ಪರಿಸರವನ್ನೇ ಬದಲಾಯಿಸಿದ್ದ ಭಕ್ತ ಸಮೂಹ ಈ ಬಾರಿ ಈ ಬಾರಿ ಮೂಲಸೌಕರ್ಯ ವಿಸ್ತರಣೆಗೆ ಹೆಚ್ಚು ಒತ್ತು ನೀಡಿ ಕಾರ್ಯನಿರ್ವಹಿಸಿದೆ. ಶೌಚಾಲಯಗಳು, ಶುದ್ಧ ಕುಡಿಯುವ ನೀರು, ನದಿ ಬಳಿ ಸ್ನಾನಘಟ್ಟಗಳು, ಸಮುದಾಯ ಭವನ, ಒಂದಾ ಎರಡಾ…ನಾನಾ ಕಾಮಗಾರಿಗಳು ಗ್ರಾಮದ ತುಂಬಾ ಕಾಣುತ್ತಿವೆ. ಈ ಪ್ರಗತಿಗೆ ದೇವಸ್ಥಾನದ ಅನ್ನದಾಸೋಹ ಸಮಿತಿಯ ಅಧ್ಯಕ್ಷ ಶ್ಯಾಮ ಪಾತರದ ಮುಖಂಡತ್ವವೇ ಕಾರಣವಾದರೂ, ಇವರಿಗೆ ದೇವಾಲಯ ಸಮಿತಿಯ ಅಧ್ಯಕ್ಷ ಅನಂತ ಓಂಕಾರ ಹಾಗೂ ಗ್ರಾಮದ ಹಲವು ಮುಖಂಡರು ಒಕ್ಕೋರಲಿನಿಂದ ಇವರ ಅಭಿವೃದ್ಧಿ ಕಾರ್ಯಕ್ಕೆ ಸಾಥ್ ನೀಡಿದ್ದಾರೆ. ಕಾಮಗಾರಿಗೆ ತಕ್ಕಂತೆ ಶಾಸಕ ಸಿ.ಎಸ್. ನಾಡಗೌಡ ಅವರು ಭಕ್ತಾದಿಗಳ ಬೇಡಿಕೆಗೆ ಅಸ್ತು ಎಂದು ಕೋಟ್ಯಂತರ ಅನುದಾನ ಬಿಡುಗಡೆ ಮಾಡಿಸಿದ್ದಾರೆ.ವಿಶಾಲ ಪಾರ್ಕಿಂಗ್ ವ್ಯವಸ್ಥೆ:ಇಕ್ಕಟ್ಟಾದ ಪಾರ್ಕಿಂಗ್ ವ್ಯವಸ್ಥೆಗೆ ತಿಲಾಂಜಲಿ ಇಡಲು,…

Read More

ವಿಜಯಪುರ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಾಗೂ ನೊಂದಣಿಯಾಗದೇ ಇರುವ ಮಕ್ಕಳ ಪಾಲನಾ ಸಂಸ್ಥೆಗಳು ಬಾಲನ್ಯಾಯ ಕಾಯ್ದೆಯನ್ವಯ ಮಾರ್ಚ್ ಅಂತ್ಯದೊಳಗಾಗಿ ನೋಂದಾಯಿಸಿಕೊಳ್ಳುವಂತೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ತಿಳಿಸಿದ್ದಾರೆ.ಬಾಲನ್ಯಾಯ ಕಾಯ್ದೆಯನ್ವಯ ಅರೆಕಾಲಿಕ ಅಥವಾ ಪೂರ್ಣವಾಗಿ ಪೋಷಣೆ ಮತ್ತು ರಕ್ಷಣೆ ಅವಶ್ಯಕತೆಯಿರುಜವ ಮಕ್ಕಳನ್ನು ನೋಡಿಕೊಳ್ಳಲು ಅಥವಾ ಕಾನೂನಿನ ಸಂಘರ್ಷದಲ್ಲಿರುವ ಮಕ್ಕಳ ಆರೈಕೆಗೆಂದು ರಾಜ್ಯ ಸರ್ಕಾರದಿಂದ ನಡೆಸಲ್ಪಡುವ ಅಥವಾ ಸ್ವಯಂ ಸೇವಾ ಸಂಘಟನೆಗಳಿಂದ ನಡೆಸುವ, ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಧನ ಸಹಾಯ ಪಡೆಯುವ ಹಾಗೂ ಪಡೆಯದಿರುವ ಎಲ್ಲ ಸಂಸ್ಥೆಗಳು ಆರು ತಿಂಗಳೊಳಗಾಗಿ ನೊಂದಾಯಿತವಾಗಬೇಕು.ನೊಂದಾಯಿಸಿಕೊಳ್ಳದ ಸಂಸ್ಥೆಗಳ ವಿರುದ್ಧ ಒಂದು ವರ್ಷದವರೆಗೆ ವಿಧಿಸಬಹುದಾದ ಕಾರಾಗೃಹವಾಸ ಅಥವಾ ಒಂದು ಲಕ್ಷಕ್ಕೆ ಕಡಿಮೆಯಿಲ್ಲದಂತೆ ದಂಡ ಅಥವಾ ಎರಡನ್ನೂ ವಿಧಿಸಬಹುದಾಗಿದ್ದು, ಜೊತೆಗೆ ಅರ್ಜಿ ಸಲ್ಲಿಸಲು ಪ್ರತಿ ೩೦ ದಿನಗಳ ಕಾಲದ ವಿಳಂಬವನ್ನು ಬೇರೆ ಅಪರಾಧ ಎಂದು ಪರಿಗಣಿಸಲಾಗುವುದರಿಂದ ಜಿಲ್ಲೆಯ ಮಕ್ಕಳ ಪಾಲನಾ ಸಂಸ್ಥೆಗಳು ಮಾರ್ಚ್-೨೦೨೪ಅಂತ್ಯದೊಳಗೆ ನೊಂದಾಯಿಸಿಕೊಳ್ಳಬೇಕು. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಬಿ೪/೩ ವಿವೇಕ ನಗರ ಪಶ್ಚಿಮ, ವಿಜಯಪುರ…

Read More

ವಿಜಯಪುರ: ಆರೋಗ್ಯ ದೃಷ್ಠಿಯಿಂದ ಮೀನು ಅಧಿಕ ಜನಪ್ರೀಯಗೊಳ್ಳುತ್ತಿರುವ ಆಹಾರ ದೇಶದ ಹೆಚ್ಚುತ್ತಿರುವ ಜನಸಂಖ್ಯೆಗೆ ಪೌಷ್ಠಿಕಾಂಶಭರಿತ ಹಾಗೂ ಕಡಿಮೆ ವೆಚ್ಚದ ಸಮತೋಲ ಆಹಾರವನ್ನು ದೊರೆಯುವಂತೆ ಮಾಡುವುದು ಸದ್ಯದ ಪರಿಸ್ಥಿತಿಯಲ್ಲಿ ದೊಡ್ಡ ಸವಾಲಾಗಿದೆ ಎಂದು ಬೀದರನ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಿಗಳ ವಿಶ್ವವಿದ್ಯಾನಿಲಯದ ವಿಸ್ತರಣಾ ನಿರ್ದೇಶಕರ ಡಾ.ಎನ್.ಎ.ಪಾಟೀಲ್ ಹೇಳಿದರು.ನಗರದ ಹೊರ ವಲಯದಲ್ಲಿರುವ ಮೀನುಗಾರಿಕೆ ಸಂಶೋಧನಾ ಮತ್ತು ಮಾಹಿತಿ ಕೇಂದ್ರ, ಭೂತನಾಳದಲ್ಲಿ ಜರುಗಿದ “ಜಲಕೃಷಿಯಲ್ಲಿ ಮುಂದುವರೆದ ತಂತ್ರಜ್ಞಾನ”ಎಂಬ ವಿಷಯದ ಮೇಲೆ ಎರಡು ದಿನದ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಭೂತನಾಳ ಮೀನುಗಾರಿಕೆ ಸಂಶೋಧನಾ ಕೇಂದ್ರದ ಸಹ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥ ಡಾ. ವಿಜಯಕುಮಾರ ಎಸ್. ಅವರು ಮಾತನಾಡಿ, ಪ್ರಸ್ತುತ ಮೀನುಗಾರಿಕೆಯಲ್ಲಿ ಸುಧಾರಿತ ತಂತ್ರಜ್ಞಾನಗಳು ಲಭ್ಯವಿದ್ದು ಕಡಿಮೆ ಖರ್ಚಿನಲ್ಲಿ ಹೆಚ್ಚಿನ ಲಾಭವನ್ನು ಗಳಿಸಬಹುದು ಇದಕ್ಕಾಗಿ ಕೇಂದ್ರ ಮತ್ತು ಸರ್ಕಾರದ ಯೋಜನೆಗಳಾದ ಪ್ರಧಾನಮಂತ್ರಿ ಮತ್ಸö್ಯ ಸಂಪದ ಯೋಜನೆ, ಮುದ್ರಾ ಯೋಜನೆ, ಪ್ರಧಾನಮಂತ್ರಿ ಮಂತ್ರಿ ಕಿಸಾನ- ಸಹ ಯೋಜನೆ, ಜಿಲ್ಲಾ ಪಂಚಾಯತ…

Read More

ಅಧಿಕಾರಿಗಳಿಗೆ ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯ ಎಸ್.ಕೆ.ವಂಟಿಗೋಡಿ ಸಲಹೆ ವಿಜಯಪುರ: ಸಾರ್ವಜನಿಕರ ಯಾವುದೇ ಸಮಸ್ಯೆಗಳಿಗೆ ಅಧಿಕಾರಿಗಳು ತುಂಬಾ ಜಾಗರೂಕತೆಯಿಂದ ಸಹಾನುಭೂತಿಯಿಂದ ಸಮಸ್ಯೆಗಳನ್ನು ಆಲಿಸಿ ನಿಮ್ಮ ಹಂತದಲ್ಲಿಯೇ ಪರಿಹರಿಸುವ ಮೂಲಕ ಮಾನವ ಹಕ್ಕುಗಳ ರಕ್ಷಣೆಗೆ ಮುಂದಾಗುವಂತೆ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯರಾದ ಎಸ್.ಕೆ.ವಂಟಿಗೋಡಿ ಅವರು ಅಧಿಕಾರಿಗಳಿಗೆ ಸಲಹೆ ನೀಡಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜರುಗಿದ ಮಾನವ ಹಕ್ಕುಗಳ ಕುರಿತ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರು, ಮಾನವ ಹಕ್ಕುಗಳ ಸಂರಕ್ಷಣೆ, ಉಲ್ಲಂಘಣೆ ತಡೆಗಟ್ಟುವುದು, ಪರಿಹಾರ ಒದಗಿಸುವುದೇ ಮಾನವ ಹಕ್ಕುಗಳ ಮೂಲ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ತಮ್ಮ ಹಂತದಲ್ಲಿ ಬರುವ ಸಾರ್ವಜನಿಕರ ಸಮಸ್ಯೆಗಳನ್ನು ಅತ್ಯಂತ ಜವಾಬ್ದಾರಿಯಿಂದ ಜಾಗರೂಕತೆಯಿಂದ ಆಲಿಸಿ, ಮಾನವೀಯ ನೆಲೆಗಟ್ಟಿನಲ್ಲಿ ಸಮಸ್ಯೆಗಳ ಮೂಲ ಗುರುತಿಸಿ ತಮ್ಮ ಹಂತದಲ್ಲಿಯೇ ಇತ್ಯರ್ಥಪಡಿಲು ಕ್ರಮ ವಹಿಸುವಂತೆ ಅವರು ಹೇಳಿದರು.ಸಾರ್ವಜನಿಕರ ಅಹವಾಲುಗಳಿಗೆ ಸಹಾನುಭೂತಿಯಿಂದ ಸ್ಪಂದಿಸಿ ಮಾನವ ಹಕ್ಕುಗಳ ಉಲ್ಲಂಘನೆಯಾಗದಂತೆ ಮುಂಜಾಗ್ರತೆ ವಹಿಸಬೇಕು. ಮಾನವ ಹಕ್ಕುಗಳ ಘನತೆ…

Read More

ಕೆಂಭಾವಿ: ಪಟ್ಟಣದಲ್ಲಿ ಹೇಮರೆಡ್ಡಿ ಮಲ್ಲಮ್ಮನ ಕಲ್ಯಾಣ ಮಂಟಪದಲ್ಲಿ ಮಾರ್ಚ್ 2 ರಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದಶನಾಪುರ್ ಅವರ ಅಧ್ಯಕ್ಷತೆಯಲ್ಲಿ ಸಾರ್ವಜನಿಕರ ಕುಂದು ಕೊರತೆಯ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದ ತಹಸಿಲ್ದಾರ ಕೆ ವಿಜಯ್ ಕುಮಾರ್ ತಿಳಿಸಿದ್ದಾರೆ.ಶುಕ್ರವಾರ ಸಭೆ ನಡೆಯುವ ಸ್ಥಳ ಪರಿಸಶೀಲನೆ ನಡೆಸಿದ ಅವರು ನಂತರ ಸುದ್ದಿಗಾರರ ಜೊತೆ ಮಾತನಾಡಿದರು.ಸಾರ್ವಜನಿಕರ ಕುಂದು ಕೊರತೆ ಸಭೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಕೆಂಭಾವಿ ವಲಯದಲ್ಲಿ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದ್ದಾರೆ.ತಾಲೂಕು ಪಂಚಾಯತಿ ಇಓ ಬಸವ ರಾಜ್ ಸಜ್ಜನ್, ಉಪ ತಹಸಿಲ್ದಾರ್ ಮಲ್ಲಿಕಾರ್ಜುನ್, ರಾಜಾಸಾಬ್ ಇದ್ದರು

Read More

ವಿಜಯಪುರ: ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು, ಮಾ.2 ರಂದು ಶನಿವಾರ ಮುಮ್ಮೆಟಿಗುಡ್ಡ ಶ್ರೀ ಅಮೋಘಸಿದ್ಧ ದೇವಸ್ಥಾನದ ಬಳಿ ಮತ್ತು ತಿಕೋಟಾ ಪಟ್ಟಣದಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಭೂಮಿಪೂಜೆ ನೆರವೇರಿಸಲಿದ್ದಾರೆ.ಶನಿವಾರ ಬೆಳಿಗ್ಗೆ 10.50ಕ್ಕೆ ತಿಕೋಟಾ ತಾಲೂಕಿನ ಮುಮ್ಮೆಟಿಗುಡ್ಡ ಶ್ರೀ ಅಮೋಘಸಿದ್ಧ ದೇವಸ್ಥಾನದ ಬಳಿ ಕರ್ನಾಟಕ ನೀರಾವರಿ ನಿಗಮದ ವಿಶೇಷ ಘಟಕ ಯೋಜನೆಯಡಿ ಭೂಸೇನಾ ನಿಗಮದಿಂದ ರೂ. 3.50 ಕೋ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಸಮುದಾಯ ಭವನ ಉದ್ಘಾಟಿಸಲಿದ್ದಾರೆ. ಅಲ್ಲದೇ, ಪ್ರವಾಸೋದ್ಯಮ ಇಲಾಖೆಯ ವತಿಯಿಂದ ರೂ. 25 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಯಾತ್ರಿ ನಿವಾಸ ಕಟ್ಟಡವನ್ನು ಸಚಿವರು ಉದ್ಘಾಟಿಸಲಿದ್ದಾರೆ.ಈ ಕಾರ್ಯಕ್ರಮದ ನಂತರ ಮಧ್ಯಾಹ್ನ 12 ಗಂಟೆಗೆ ತಿಕೋಟಾ ಪಟ್ಟಣಕ್ಕೆ ಆಗಮಿಸಲಿರುವ ಸಚಿವರು, ಅಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ಅಂದಾಜು ರೂ. 10 ಕೋ. ವೆಚ್ಚದಲ್ಲಿ ನಿರ್ಮಿಸಲಾಗಿರುವ ತಾಲೂಕು ಆಡಳಿತ ಸೌಧ(ಮಿನಿ ವಿಧಾನಸೌಧ)ವನ್ನು ಉದ್ಘಾಟಿಸಿಲಿದ್ದಾರೆ, ಅಲ್ಲದೇ, ತಾಲೂಕು ಪಂಚಾಯಿತಿ ಮತ್ತು…

Read More

ವಿಜಯಪುರ: ಬಿ.ಎಲ್.ಡಿ.ಇ ಶ್ರೀ ಬಿ. ಎಂ. ಪಾಟೀಲ್ ನರ್ಸಿಂಗ್ ಮಹಾವಿದ್ಯಾಲಯ ಸ್ನಾತಕೋತ್ತರ ಪದವಿ ವಿದ್ಯಾರ್ಥಿನಿ ಸರಕೂಲೆ ದಿಲೀಮಾ ಅಮೀರ್ ಸಾಹೇಬ್ ಅವರಿಗೆ ಪಿಡಿಯಾಟ್ರೀಕ್ ನರ್ಸಿಂಗ್ ವಿಭಾಗದಲ್ಲಿ ಬೆಂಗಳೂರಿನ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದಿಂದ ಚಿನ್ನದ ಪದಕ ಲಭಿಸಿದೆ.ಬೆಂಗಳೂರಿನ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಫೆ. 27 ರಂದು ನಡೆದ 26ನೇಯ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರಚಂದ ಗೆಹ್ಲೋಟ್, ವೈಧ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟಿಲ, ವಿಶ್ವ ವಿದ್ಯಾಲಯದ ಉಪಕುಲಪತಿ ಡಾ. ಕೆ. ರಮೇಶ ಅವರು ಚಿನ್ನದ ಪದಕ ಪ್ರಧಾನ ಮಾಡಿದರು.ಈ ಕಾರ್ಯಕ್ರಮದಲ್ಲಿ ಶ್ರೀ ಬಿ. ಎಂ. ಪಾಟೀಲ ಮೆಡಿಕಲ್ ಕಾಲೇಜಿನ ಪ್ರಾಚಾರ್ಯ ಡಾ. ಅರವಿಂದ ಪಾಟೀಲ, ನರ್ಸಿಂಗ್ ಕಾಲೇಜಿನ ಸಹಪ್ರಾದ್ಯಾಪಕರಾದ ಪ್ರವೀಣ ಬಗಲಿ ಉಪಸ್ಥಿತರಿದ್ದರು.ಸಾಧನೆಯ ಮೂಲಕ ಬಿ ಎಲ್ ಡಿ ಇ ಸಂಸ್ಥೆಗೆ ಮತ್ತು ಕಾಲೇಜಿಗೆ ಕೀರ್ತಿ ತಂದಿರುವ ಸರಕೂಲೆ ದಿಲೀಮಾ ಅಮೀರ್ ಸಾಹೇಬ್ ಅವರನ್ನು ಸಂಸ್ಥೆಯ ಅಧ್ಯಕ್ಷ ಎಂ. ಬಿ. ಪಾಟೀಲ ಸಂತಸ ವ್ಯಕ್ತಪಡಿಸಿದ್ದು, ವಿದ್ಯಾರ್ಥಿನಿಯನ್ನು ಅಭಿನಂದಿಸಿದ್ದಾರೆ.…

Read More